ಮಡಿಕೇರಿ ಮೇ 9 NEWS DESK : ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯಗಳ ಜಾತಿ ಜನಗಣತಿಯ ಸಮೀಕ್ಷೆ ಆರಂಭಗೊಂಡಿದ್ದು, ಪರಿಶಿಷ್ಟ ಜಾತಿ ಸಮುದಾಯಗಳ ಜನರು ತಮ್ಮ ತಮ್ಮ ಮೂಲ, ಉಪಜಾತಿ ಹೆಸರು ಹಾಗೂ ಇತರ ಮಾಹಿತಿಯನ್ನು ಸಮರ್ಪಕವಾಗಿ ನೀಡುವಂತೆ ದೌರ್ಜನ್ಯ ಪ್ರತಿಬಂಧದ ಕೊಡಗು ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರು ಹಾಗೂ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕರಾದ ಜೆ.ಎಲ್.ಜನಾರ್ಧನ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯಗಳ ಜಾತಿ ಜನಗಣತಿಯ ಸಮೀಕ್ಷೆ ಮೇ 5 ರಿಂದ ಆರಂಭವಾಗಿದೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಮಾದಿಗ, ಕೊರಮ, ಕೊರಚ, ಭೋವಿ, ಲಂಬಾಣಿ, ಅರುಂಧತಿಯಾರ್ ಮುಂತಾದ ಪರಿಶಿಷ್ಟ ಜಾತಿ-ಸಮುದಾಯಗಳ ಜನರು ತಮ್ಮ ತಮ್ಮ ಮೂಲ ಉಪಜಾತಿಗಳ ಹೆಸರನ್ನು ಯಾವುದೇ ಅಳುಕು ಅಥವಾ ಹಿಂಜರಿಕೆ ಇಲ್ಲದೆ ಸಮೀಕ್ಷೆದಾರರಿಗೆ ನೀಡುವಂತೆ ಕೋರಿದ್ದಾರೆ. ಮುಖ್ಯವಾಗಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂದು ಜಾತಿ ಪ್ರಮಾಣ ಪತ್ರ…
ಲೇಖಕ: admin
ಮಡಿಕೇರಿ ಮೇ 8 NEWS DESK : ಮೈಸೂರು ಜಿಲ್ಲೆ ಯಾದವಗಿರಿಯ ಕೆಆರ್‌ಎಸ್ ರಸ್ತೆಯಲ್ಲಿರುವ ದಿ ಮೈಸೂರು ಕಾಫಿ ಸಂಸ್ಕರಣ ಸಹಕಾರ ಸಂಘದ ವಾರ್ಷಿಕ ವಿಶೇಷ ಸರ್ವ ಸದಸ್ಯರ ಸಭೆಯು ಸಂಘದ ಕಚೇರಿ ಆವರಣದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಫಿ ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮೈಸೂರು ಕಾಫಿ ಸಂಸ್ಕಾರಣ ಸಹಕಾರ ಸಂಘವು ಈ ಭಾಗದ ಹಾಗೂ ಸುತ್ತಮುತ್ತಲಿನ ಕಾಫಿ ಬೆಳೆಯುವ ಪ್ರದೇಶಗಳ ರೈತರಿಗೆ ಬಹುದೊಡ್ಡ ವರದಾನವಾಗಿದ್ದು, ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಸಂಘದ ಕಾರ್ಯ ಚಟುವಟಿಕೆಗಳನ್ನು, ಕಳೆದ ಒಂದು ವರ್ಷದಿಂದ ವಿಶೇಷ ಆಸಕ್ತಿ ಹಾಗೂ ಪ್ರಯತ್ನದಿಂದ ಮತ್ತೆ ಕಾರ್ಯ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳುವಂತಾಗಲು ಸಂಘದ ಎಲ್ಲಾ ಸದಸ್ಯರು ಅತ್ಯಂತ ನಿಷ್ಠೆಯಿಂದ ತಮ್ಮ ಕಾರ್ಯಗಳನ್ನು ಮಾಡುವುದಲ್ಲದೆ ಸಂಘದ ಬಲವರ್ಧನೆಗೆ ಶ್ರಮಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಮೈಸೂರು ಕಾಫಿ ಸಂಸ್ಕರಣ…
ಕುಶಾಲನಗರ ಮೇ 8 NEWS DESK : ಕೊಡಗು ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆ ವತಿಯಿಂದ ಕುಶಾಲನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕ್ರೀಡಾಂಗಣದಲ್ಲಿ” ಬಿ.ಜಿ.ಎಸ್- ಕಪ್” ಹೊನಲು ಬೆಳಕಿನ ರಾಜ್ಯ ಮಟ್ಟದ ಕಬಡ್ಡಿ ಹಬ್ಬವನ್ನು ಮೇ 13 ರಿಂದ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ವೇದಿಕೆಯ ಅಧ್ಯಕ್ಷರಾದ ಎಂ ಡಿ ಕೃಷ್ಣಪ್ಪ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮತ್ತು ಕೊಡಗು ಜಿಲ್ಲಾ ಅಮೆಚೂರ ಕಬಡ್ಡಿ ಅಸೋಸಿಯೇಷನ್ ಕುಶಾಲನಗರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಸಂಸ್ಥೆ ವತಿಯಿಂದ ಕರ್ನಾಟಕ ರಾಜ್ಯ ಮಟ್ಟದ ಸೀನಿಯರ್ಸ್ ಚಾಂಪಿಯನ್ ಶಿಪ್ ರಾಜ್ಯಮಟ್ಟದ ಪ್ರೊ, ಕಬಡ್ಡಿ ಪಂದ್ಯಾಟವನ್ನು ಮೊದಲ ಬಾರಿಗೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಕ್ರೀಡಾಕೂಟದ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಶಾಖ ಮಠಾಧೀಶರಾದ ಶ್ರೀ ಶಂಭುನಾಥ ಸ್ವಾಮೀಜಿ, ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಡಿಕೇರಿ…
ಮಡಿಕೇರಿ ಮೇ 9 NEWS DESK : ಕುಶಾಲನಗರ ಪುರಸಭೆ ವ್ಯಾಪ್ತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್‍ನ್ನು ಮೇ 10 ರಂದು ಬೆಳಗ್ಗೆ 11.30 ಗಂಟೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲಾ ಜನಪ್ರತಿನಿಧಿಗಳು ಹಾಗೂ ಸಮಸ್ತ ನಾಗರಿಕರು ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕುಶಾಲನಗರ ಪುರಸಭೆ ಅಧ್ಯಕ್ಷರು ಕೋರಿದ್ದಾರೆ.
ಮಡಿಕೇರಿ ಮೇ 9 NEWS DESK : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್‍ಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್(4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು. ಪ್ರವೇಶ ಅರ್ಹತೆ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್‍ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. (ಪ.ಜಾ./ಪ.ಪಂ./ಪ್ರವರ್ಗ-1ರವರುಗಳಿಗೆ ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು). 2025 ರ ಜೂನ್, 6 ರಂದು ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ. ಅಧಿಸೂಚನೆ, ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು…
ಮಡಿಕೇರಿ ಮೇ 9 NEWS DESK : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಮೇ, 14 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಪೊನ್ನಂಪೇಟೆ ಮೇ 9 NEWS DESK : ಪ್ರಪಂಚದಾದ್ಯಂತದ ವೈವಿಧ್ಯಮಯ ಭಾಷೆಗಳ, ವಿವಿಧ ವರ್ಣಗಳ ಮತ್ತು ವಿವಿಧ ಆರ್ಥಿಕ ವರ್ಗಗಳ ಜನರು ಒಟ್ಟು ಸೇರುವ ಪವಿತ್ರ ಹಜ್ ಯಾತ್ರೆಯು ಯಾತ್ರಾರ್ಥಿಗಳಲ್ಲಿ ಏಕತೆ ಮತ್ತು ಸಮಾನತೆಯ ಭಾವನೆ ಮೂಡಿಸುತ್ತದೆ. ಒಂದೇ ಸಮಯದಲ್ಲಿ ಮತ್ತು ಒಂದೇ ಸ್ಥಳದಲ್ಲಿ ಒಬ್ಬನೇ ಸರ್ವಶಕ್ತನನ್ನು ಆರಾಧಿಸುವ ಈ ಹಜ್ಜ್ ನಿರ್ವಹಣೆ ವಿಶ್ವಾಸಿಗಳ ಜೀವನದ ಬಹುದೊಡ್ಡ ಆಧ್ಯಾತ್ಮಿಕ ಅನುಭವವಾಗಿದೆ. ಆಧ್ಯಾತ್ಮಿಕ ಉತ್ಕರ್ಷ, ಸಮಾನತೆ, ಸಹೋದರತೆಗಳನ್ನು ಬೆಳೆಸಿ ಮುಂದಿನ ಕೆಡುಕು ರಹಿತ ಬದುಕು ಮತ್ತು ಆತ್ಮ ಪರಿಶುದ್ಧತೆಯನ್ನು ಏಕೀಕರಿಸುವುದರಲ್ಲಿ ಹಜ್ಜ್ ಬಹು ದೊಡ್ಡ ಪಾತ್ರ ವಹಿಸುತ್ತದೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಹೇಳಿದರು. ಕೆ.ಎಂ.ಎ ನಿರ್ದೇಶಕರಾದ ಕೊಂಡಂಗೇರಿಯ ಕುಪ್ಪಂದಿರ ಕೆ. ಯೂಸುಫ್ ಹಾಜಿ ಅವರು ಈ ವರ್ಷದ ಹಜ್ಜ್ ನಿರ್ವಹಿಸಲು ತೆರಳುತ್ತಿರುವ ಹಿನ್ನೆಲೆಯಲ್ಲಿ ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಕೊಂಡಗೇರಿಯಲ್ಲಿ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಜ್ಜ್ ಪೂರೈಸಲು…
ಮಡಿಕೇರಿ ಮೇ 8 NEWS DESK : ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಯನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗೆ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಾಕೀತು ಮಾಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ `ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಇದರ ಗಂಭೀರತೆ ಅರ್ಥ ಮಾಡಿಕೊಂಡು ಬಾಕಿ ಇರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಲೋಕಸಭಾ ಸದಸ್ಯರು ನಿರ್ದೇಶನ ನೀಡಿದರು. ಜಲಜೀವನ್ ಮಿಷನ್ ಯೋಜನೆಯು ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷೆ ಯೋಜನೆಯಾಗಿದ್ದು, ಪ್ರತೀ ಕುಟುಂಬಕ್ಕೂ ಶುದ್ದ ಕುಡಿಯುವ ನೀರು ಒದಗಿಸುವಲ್ಲಿ ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದರು. ಜಲಜೀವನ್ ಮಿಷನ್ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಆಗಾಗ ಭೇಟಿ ನೀಡಿ ಸ್ಥಳ ಪರಿಶೀಲಿಸುವಂತಾಗಬೇಕು ಎಂದು ಸಂಸದರು ಸಲಹೆ ನೀಡಿದರು. ಈ ಬಗ್ಗೆ…
ಕೊಡ್ಲಿಪೇಟೆ ಮೇ 8 NEWS DESK : ಕಲ್ಲು ಮಠದಲ್ಲಿ ನಿರ್ಮಿಸಿರುವ ನೂತನ ಗದ್ದುಗೆಯನ್ನು ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಜಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಗಾವುಡಗೆರೆ ಮಠದ ಶ್ರೀ ನಟರಾಜ ಸ್ವಾಮೀಜಿ, ಹಾಸನ ತಣ್ಣೀರುಹಳ್ಳ ಮಠದ ವಿಜಯ ಕುಮಾರ ಸ್ವಾಮೀಜಿ, ಶೀದಿಗಳಲೇ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ತೊರೆನೂರು ಮಠದ ಮಲ್ಲೇಶ ಸ್ವಾಮೀಜಿ, ಕಲ್ಲಹಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಶನಿವಾರಸಂತೆ ಮೇ 8 NEWS DESK : ಕೊಡ್ಲಿಪೇಟೆ ಕಲ್ಲು ಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಸತಿಗೃಹವನ್ನು ಮೈಸೂರಿನ ಸೂತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಉದ್ಘಾಟಿಸಿ ಆಶೀರ್ವದಿಸಿದರು. ಈ ಸಂದರ್ಭ ಕಲ್ಲು ಮಠದ ಶ್ರೀ ಮಹಾಂತ ಸ್ವಾಮೀಜಿ, ಆರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಿರಿಕೋದ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಸೇರಿದಂತೆ ವಿವಿಧ ಮಠದೀಶರು ಉಪಸ್ಥಿತರಿದ್ದರು.






