ಲೇಖಕ: admin

ಕುಶಾಲನಗರ ಮೇ 8 NEWS DESK : ಕೇಂದ್ರ ಸರ್ಕಾರದ  ಕರಕುಶಲ ಮತ್ತು ಜವಳಿ ಮಂತ್ರಾಲಯ ಇಲಾಖೆಯ ಮೈಸೂರಿನ   ಕರಕುಶಲ    ವಿಸ್ತರಣಾ ಸೇವಾ ಕೇಂದ್ರದ ವತಿಯಿಂದ  ಕುಶಾಲನಗರ ಪಟ್ಟಣದ ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂರು ದಿನಗಳ ಕರಕುಶಲ ವಸ್ತುಗಳ ತಯಾರಿಕೆ ಶಿಬಿರಕ್ಕೆ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಲೀಡ್ ಬ್ಯಾಂಕ್ ನ ನಿವೃತ್ತ ಪ್ರಬಂಧಕ ಆರ್.ಕೆ.ಬಾಲಚಂದ್ರ, ವೈವಿಧ್ಯಮಯ ಸಾಂಪ್ರದಾಯಿಕ ಕಲೆ ಮತ್ತು ಸಂಸ್ಕೃತಿಯ ಸಮ್ಮಿಲನವಾಗಿರುವ ಭಾರತ ದೇಶವು ಶ್ರೀಮಂತ ಕಲೆಯಾದ ಕರಕುಶಲ ಕಲೆಗೆ ಪ್ರಸಿದ್ಧಿಯಾಗಿದೆ. ಭಾರತದ ಕರಕುಶಲ ವಸ್ತುಗಳು ಕರಕುಶಲವು ಕೈ ಉಪಕರಣಗಳೊಂದಿಗೆ ಕೈಯಿಂದ ವಸ್ತುಗಳನ್ನು ಸಂಸ್ಕರಿಸುವುದು ಪುರಾತನ ಕಾಲದಿಂದಲೂ ರೂಢಿಯಾಗಿ ಬಂದಿದೆ ಎಂದರು.  ಭಾರತೀಯ ಶ್ರೀಮಂತ ಕಲೆಯಾದ ಕರಕುಶಲ ಕಲೆಯು ತಲೆ ತಲೆಮಾರುಗಳಿಂದ ಬಂದಿದ್ದು,  ಭಾರತದ ಕರಕುಶಲ ವಸ್ತಗಳಿಗೆ ಪ್ರಪಂಚದಾದ್ಯಂತ ಹೆಚ್ಚಿನ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಇಂತಹ  ಕರಕುಶಲ ತರಬೇತಿ ಶಿಬಿರಗಳಿಗೆ ಇತ್ತಿಚಿನ ದಿನಗಳಲ್ಲಿ ಹೆಚ್ಚಿನ ಬೇಡಿಕೆ ಬಂದಿದೆ. ಕರಕುಶಲ ತರಬೇತಿಗಳನ್ನು…

Read More

ಮಡಿಕೇರಿ ಮೇ 8 NEWS DESK : ಕೊಡವ ಬಾಳೋಪಾಟ್ ಹಾಗೂ ಸಂಸ್ಕೃತಿ ವಿಚಾರವಾಗಿ ಆಳವಾದ ಅಧ್ಯಯನದಲ್ಲಿ ತೊಡಗಿರುವ ಆಸ್ಟ್ರೇಲಿಯ ದೇಶದ ಜನಾಂಗ ಶಾಸ್ತ್ರಜ್ಞ ಜಾನ್‍ಜೇಮ್ಸ್ ನೇಪಿಯರ್ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರನ್ನು ಇಂದು ಭೇಟಿಯಾಗಿ ಚರ್ಚಿಸಿದರು. ವಿರಾಜಪೇಟೆಯಲ್ಲಿರುವ ನಾಚಯ್ಯ ಸ್ವಗೃಹಕ್ಕೆ ಭೇಟಿ ನೀಡಿದ ನೇಪಿಯರ್, ಕೊಡವ ಸಂಸ್ಕೃತಿಯು ವಿಶ್ವದಲ್ಲಿಯೇ ವಿಶಿಷ್ಟವಾಗಿದ್ದು, ಇಂತಹ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಓರ್ವ ಪತ್ರಕರ್ತನಾಗಿ ಹಾಗೂ ಪ್ರಸ್ತುತ ಅಕಾಡೆಮಿ ಅಧ್ಯಕ್ಷರಾಗಿ ನಾಚಯ್ಯ ಅವರ ಸೇವೆಯನ್ನು ಶ್ಲಾಘಿಸಿದರು. ಆಸ್ಟ್ರೇಲಿಯಾ ದೇಶದ ಸಿಡ್ನಿ ಹ್ಯಾರೋಸಿಟಿಯ ಶಾಸಕರಾಗಿರುವ ಕೊಡಗು ಮೂಲದ ಚರಿಷ್ಮ ಕಲಿಯಂಡ ಅವರನ್ನು ಕಂಡು ಮಾತನ್ನಾಡುವುದಾಗಿ ಹೇಳಿದ ಅವರು, ತಾನು ಕೊಡವ ಬಾಳೋಪಾಟ್ ಹಾಗೂ ಕೊಡವ ಸಂಸ್ಕೃತಿಯ ವಿಚಾರವಾಗಿ ಆಸ್ಟ್ರೇಲಿಯಾದಲ್ಲಿ ಹಲವು ಲೇಖನಗಳನ್ನು ಬರೆದಿರುತ್ತೇನೆ. ಅಧ್ಯಯನ ನಿಮಿತ್ತ ಕೊಡಗಿಗೆ 2008 ರಿಂದ ಬರುತ್ತಿದ್ದು ಮುಂದಿನ ದಿನಗಳಲ್ಲಿ ಪುಸ್ತಕ ಹೊರತರಲಿದ್ದೇನೆ ಎಂದರು. ಈಗಾಗಲೇ ಹಲವರಿಂದ ಮಾಹಿತಿ ಸಂಗ್ರಹಿಸಿದ್ದು, ಬಾಳೋಪಾಟ್‍ನಲ್ಲಿ ಬರುವ ಶಬ್ದಾರ್ಥ, ಗೂಡಾರ್ಥಗಳನ್ನು…

Read More

ಪುತ್ತೂರು ಮೇ 8 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಯುವಕರ ಹಾಕಿ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ ಕಾಲೇಜು ಹಾಕಿ ಪಂದ್ಯಾಟದಲ್ಲಿ ಚಾಂಪಿಯನ್ ಪಟ್ಟವನ್ನು ಪಡೆದುಕೊಂಡಿದೆ.  ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ತಂಡವು ಉತ್ತಮ ಸಾಧನೆಯೊಂದಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮಂಗಳೂರು ವಿಭಾಗ ಮಟ್ಟದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು. ಈ ವಿಜಯದೊಂದಿಗೆ ಕಾಲೇಜಿನ ತಂಡವು ಮೇ 15 ರಿಂದ 17ರ ವರೆಗೆ ಬಳ್ಳಾರಿಯ ಬಿಐಟಿಎಂ ನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪಧೆಯಲ್ಲಿ ಭಾಗವಹಿಸುವ ಅರ್ಹತೆಯನ್ನು ಗಳಿಸಿಕೊಂಡಿದೆ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿವೇಕ್.ಕೆ.ವಿ, ಅಂತಿಮ ವರ್ಷದ ಎಐಎಂಎಲ್ ವಿಭಾಗದ ಅನ್ವಿತ್.ಬಿ.ಎನ್, ದ್ವಿತೀಯ ಡಾಟಾ ಸೈನ್ಸ್ ವಿಭಾಗದ ಭೀಮಯ್ಯ.ಎಂ.ಆರ್, ತೃತೀಯ ಸಿವಿಲ್ ವಿಭಾಗದ ಮೌನೇಶ್.ಡಿ.ಜೆ, ತೃತೀಯ ಕಂಪ್ಯೂಟರ್ ಸೈನ್ಸ್ ವಿಭಾಗದ ಕೌಶಲ್ ಗೌಡ.ಆರ್, ವೀಕ್ಷಿತ್…

Read More

ಮಡಿಕೇರಿ ಮೇ 8 NEWS DESK : ಕಾವೇರಿಯ ಕ್ಷೇತ್ರ ಭಾಗಮಂಡಲದ ಶ್ರೀ ಭಗಂಡೇಶ್ವರನ ಸನ್ನಿಧಿಯಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಸಂಕಲ್ಪ ಪೂಜೆ ಮಾಡಲಾಯಿತು. ಭಾರತೀಯ ಯೋಧರಿಗೆ ಒಳಿತಾಗಲಿ, ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಲೆಂದು ಪ್ರಾರ್ಥಿಸಲಾಯಿತು. ಈ ಸಂದರ್ಭ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಮೇ 8 NEWS DESK : ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್ ನಮ್ಮೆ ಮೇ 17 ಹಾಗೂ 18 ರಂದು ನಡೆಯಲಿದ್ದು, ಮೇ 10ರಿಂದ ಹಬ್ಬದ ಕಟ್ಟು ಬೀಳಲಿದೆ. ಕಟ್ಟುಪಾಡುಗಳನ್ನು ಗ್ರಾಮಸ್ಥರು  ಪಾಲಿಸಬೇಕು ಎಂದು ತಕ್ಕಮುಖ್ಯಸ್ಥರು ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ, ಶ್ರೀ ಭದ್ರಕಾಳಿ ಹಾಗೂ ಶ್ರೀ ಮಾರಮ್ಮ ದೇವರ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಪ್ರತಿಯೊಂದು ಊರಿನ ಹಬ್ಬಗಳಿಗೂ ಅದರದೇಯಾದ ಇತಿಹಾಸ ಹಾಗೂ ಕಟ್ಟುಪಾಡುಗಳಿರುತ್ತದೆ. ಮೇ 10ರ ಸಂಜೆ 5 ಗಂಟೆಯಿಂದ ಮೇ 18ರವರೆಗೆ ಹಳ್ಳಿಗಟ್ಟು ಗ್ರಾಮದ ವ್ಯಾಪ್ತಿಯೊಳಗೆ ಕಾಫಿ ಗಿಡಗಳ ಕಪಾತು ಸೇರಿದಂತೆ ಹಸಿರು ಮರ ಗಿಡಗಳನ್ನು ಕಡಿಯುವಂತಿಲ್ಲ ಹಾಗೂ ಊರಿನೊಳಗೆ ಪ್ರಾಣಿ ವಧೆ ಹಾಗೂ ಪ್ರಾಣಿ ಹಿಂಸೆ ಸೇರಿದಂತೆ ಊರಿನ ಇತರ ಯಾವುದೇ ಮನೆಗಳಲ್ಲಿ ಕೂಡ ಆಡಂಬರದ ಪೂಜಾವಿಧಿ ವಿಧಾನಗಳನ್ನು ಮಾಡುವಂತಿಲ್ಲ. ದೈವದ ಕೋಲ ಸೇರಿದಂತೆ…

Read More

ಮಡಿಕೇರಿ ಮೇ 8 NEWS DESK : ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ಟೋಳಿ ಗ್ರಾಮದ ಆಶ್ರಯ ಕಾಲೋನಿಯಿಂದ-ಮಂಜಮರ ಸಂಪರ್ಕಿಸುವ ರಸ್ತೆ ಹಾಗೂ ಕೊಟ್ಟೋಳಿ-ಮಂಜಮರ ಸಂಪರ್ಕ ರಸ್ತೆ, 2ನೇ ಆಶ್ರಯ ಕಾಲೋನಿ-ಗುಂಡಿಕೆರೆ ಸಂಪರ್ಕ ರಸ್ತೆಯು ಹಲವು ವರ್ಷಗಳಿಂದ ದುಸ್ಥಿತಿಯಲ್ಲಿದ್ದು, ಇದೀಗ ಕ್ಷೇತ್ರದ ನಿರಂತರ ಅಭಿವೃದ್ಧಿಯ ಭಾಗವಾಗಿ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಶಾಸಕರ ಅನುದಾನ  21 ಲಕ್ಷ ರೂಪಾಯಿಯ ವೆಚ್ಚದಲ್ಲಿ ಸುಸಜ್ಜಿತ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲಾಗಿದೆ. ಸುಸಜ್ಜಿತ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸಹಕರಿಸಿದ ಶಾಸಕ ಪೊನ್ನಣ್ಣ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಕೆದಮುಳ್ಳೂರು ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಡಿಕೇರಿಯಂಡ ಮಹೇಶ್,  ಕೆಡಿಪಿ ಸದಸ್ಯರಾದ ಮಾಳೆಟ್ಟಿರ ಪ್ರಶಾಂತ್ ಉತ್ತಪ್ಪ, ಗ್ರಾ.ಪಂ ಅಧ್ಯಕ್ಷ ಮಾಳೆಟ್ಟಿರ ಜಫ್ರಿ ಉತ್ತಪ್ಪ, ಕೊಟ್ಟೋಳಿ ಬೂತ್ ಸಮಿತಿ ಅಧ್ಯಕ್ಷ ಎಂ.ವೈ.ಅಲಿ ಹಾಗೂ ವಿಶೇಷವಾಗಿ ಮುತುವರ್ಜಿ…

Read More

ಮಡಿಕೇರಿ ಮೇ 8 NEWS DESK :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮವು ಮೇ 12 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂತರ್ ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಧನಂಜಯ ಸರ್ಜಿ, ಬೈಲುಕೊಪ್ಪ ಸೆರಾ ಜೆ ಮಾನ್‍ಸ್ಟ್ರೀ, ಬಿಕ್ಷು ಮಾಂಕ್‍ಗಳು ಜಂಪಾ ಚ್ಯೂಯಾಂಗ್, ಬೆಂಗಳೂರು ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿ ಕೆ.ಎಚ್.ಮುಸ್ತಾಫ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಇತರರು ಪಾಲ್ಗೊಳ್ಳಲಿದ್ದಾರೆ.

Read More

ಕುಶಾಲನಗರ, ಮೇ 8 NEWS DESK  : 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದ ಭಕ್ತಿ ಭಂಡಾರಿ, ಕಾಯಕಯೋಗಿ ಬಸವಣ್ಣನವರು ನುಡಿದಂತೆ ಹಾಗೂ ಪ್ರತಿಪಾದನೆ ಮಾಡಿದ ಸಮ ಸಮಾಜ ನಿರ್ಮಾಣ ಕಾರ್ಯವು ಪ್ರಸ್ತುತ ಸಂದರ್ಭದಲ್ಲಿ ಬಹಳ ಅವಶ್ಯಕತೆ ಇದೆ ಎಂದು ಕೊಡಗು ವಿಶ್ವವಿದ್ಯಾಲಯಯ ಕನ್ನಡ ಉಪನ್ಯಾಸಕ ಡಾ ಜಮೀರ್ ಅಹ್ಮದ್ ಅಭಿಪ್ರಾಯಪಟ್ಟರು. ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದಲ್ಲಿ ಬಸವ ಸೇವಾ ಸಮಿತಿಯ ವತಿಯಿಂದ  ಗ್ರಾಮದ ಸಂತೆಮಾಳದ ಮಾರುಕಟ್ಟೆ ಪ್ರಾಂಗಣದಲ್ಲಿ ಏರ್ಪಡಿಸಿದ್ದ ಗ್ರಾಮಾಂತರ ಬಸವ ಜಯಂತಿ ಕಾರ್ಯಕ್ರಮದಲ್ಲಿ ಶರಣರ ವಚನ ಚಳವಳಿ ಕುರಿತು ಉಪನ್ಯಾಸ ನೀಡುತ್ತಾ, ಸಮಾಜದಲ್ಲಿನ ಅಸಮಾನತೆ, ಅಸ್ಪೃಶ್ಯತೆ, ಮೌಢ್ಯ ನಿವಾರಣೆಗೆ ಬಸವಣ್ಣನವರು ಸಾಮಾಜಿಕ ಕ್ರಾಂತಿ ನಡೆಸಿದರು ಎಂದರು. 12ನೇ ಶತಮಾನದ ಎಂದಾಗ ಪ್ರತಿಯೊಬ್ಬರೂ ನೆನಪಿಸಿಕೊಳ್ಳುವುದು ಅಂದಿನ ವಚನ ಸಾಹಿತ್ಯ ಚಳವಳಿ. ಅಂದು ಅನುಭವ ಮಂಟಪದಲ್ಲಿ ಎಲ್ಲ ವರ್ಗದವರಿಗೂ ಅದರಲ್ಲೂ ಮಹಿಳೆಯರಿಗೆ ಸಮಾನ ಸ್ಥಾನಮಾನ ನೀಡುವ ಮೂಲಕ ಸ್ತ್ರೀ ಸಮಾನತೆ ನಾಂದಿ ಹಾಡಿದರು. ಸಮಾಜದಲ್ಲಿ ಭಾತೃತ್ವ, ಸಮಾನತೆ, ಶಾಂತಿ, ನೆಮ್ಮದಿಯ ಸಂದೇಶವನ್ನು…

Read More

ಮಡಿಕೇರಿ ಮೇ 8 NEWS DESK :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶಿವಶರಣೆ ಹೇಮಾರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವು ಮೇ, 10 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂತರ್ ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಧನಂಜಯ ಸರ್ಜಿ, ಸುಂಟಿಕೊಪ್ಪ ಕಾನ್‍ಬೈಲ್ ಸರ್ಕಾರಿ ಪ್ರೌಡ ಶಾಲೆ ಶಿಕ್ಷಕರಾದ ಎನ್.ಕೆ.ಮಾಲಾದೇವಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಮೇ 8 NEWS DESK : ಪ್ರಸಕ್ತ (2025-26ನೇ) ಸಾಲಿನ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಚರ್ ಅಸಿಸ್ಟೆಂಟ್‍ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್, ಅನುದಾನ ರಹಿತ ಕೋರ್ಸುಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಚನ್ ಎಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪೇರ್ಡ್) ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕ್ ವೆಹಿಕಲ್ ಟೆಕ್ನಾಲಜಿ,  ಕರ್ನಾಟಕ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹಾಗೂ ಮೂಳೆ ಮತ್ತು ಕೀಲು ಅಂಗವಿಕಲತೆ-ಶೇ.40 ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ-60 ಡಿಬಿ ಮತ್ತು  ಮೇಲ್ಪಟ್ಟು, ಅಂಧತ್ವ- 6/60 ಅಥವಾ 20/200 ಸ್ನೆಲೆನ್-ಕ್ರ.ಸಂ. 6 ರ ಕೋರ್ಸಿಗೆ  ಈ ಅಂಗವೈಕಲ್ಯತೆಯ ಲಕ್ಷಣಗಳನ್ನು ಹೊಂದಿರಬೇಕು:  ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ರಾಷ್ಟ್ರ ಮಟ್ಟದ ವಿದ್ಯಾರ್ಥಿ ವೇತನದ ಆರ್ಥಿಕ…

Read More