ಮಡಿಕೇರಿ ಜೂ.27 NEWS DESK : ಬಾಳೆಲೆ ಹೋಬಳಿಯ ಕೊಟ್ಟಗೇರಿ ಗ್ರಾಮದ ರಸ್ತೆಯು ಮಳೆಯಿಂದಾಗಿ ಜಲಾವೃತಗೊಂಡಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬ್ಯಾರಿಕೇಡ್ ಅಳವಡಿಸಲಾಗಿದೆ. ಗ್ರಾಮಕ್ಕೆ ತೆರಳಲು ಬದಲಿ ಸಂಪರ್ಕ ರಸ್ತೆ ಇದೆ.
ಲೇಖಕ: admin
ಮಡಿಕೇರಿ ಜೂ.27 NEWS DESK : ನಗರದ ಪೇಟೆ ಶ್ರೀ ರಾಮ ಮಂದಿರ ದಸರಾ ಸಮಿತಿಯ 2025ನೇ ಸಾಲಿನ ಅಧ್ಯಕ್ಷರಾಗಿ ಶಿವಮೂರ್ತಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಿತೇಶ್ ಭೋಜಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಅಡ್ವೋಕೇಟ್ ಸಚಿತ್, ಸಂಘಟನಾ ಕಾರ್ಯದರ್ಶಿಯಾಗಿ ಗಣೇಶ್, ಖಜಾಂಚಿಯಾಗಿ ತೀರ್ಥ ಕುಮಾರ್ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಹೋಟೆಲ್ ಗೌರಿ ಸಭಾಂಗಣದಲ್ಲಿ ಸಮಿತಿ ಮಾಜಿ ಅಧ್ಯಕ್ಷ ಚೇತನ್ ಅಧ್ಯಕ್ಷತೆಯಲ್ಲಿ ಹಾಗೂ ಸದಸ್ಯರುಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಮಡಿಕೇರಿ ಜೂ.27 NEWS DESK : ಮಡಿಕೇರಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತಾಲ್ಲೂಕು ಆಡಳಿತ ಸೌಧ ಕಟ್ಟಡವನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಸತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ತಾಲ್ಲೂಕು ದಂಡಾಧಿಕಾರಿ ಪ್ರವೀಣ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸರಕಾರಿ ನಾಮನಿರ್ದೇಶಕ ಅಧ್ಯಕ್ಷರುಗಳು, ಸದಸ್ಯರುಗಳು ಹಾಗೂ ಪ್ರಮುಖ ಉಪಸಿತರಿದ್ದರು.
ಮಡಿಕೇರಿ ಜೂ.27 NEWS DESK : ನಗರದ ಸುದರ್ಶನ ವೃತ್ತದ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ತಾಲ್ಲೂಕು ಪಂಚಾಯಿತಿ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್ ಬೋಸರಾಜ್ ಉದ್ಘಾಟಿಸಿದರು. ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶೇಖರ್ ಅತಿಥಿಗಳಿಗೆ ನೂತನ ಕಟ್ಟಡದಲ್ಲಿರುವ ಕಚೇರಿಗಳ ಬಗ್ಗೆ ಮಾಹಿತಿ ಒದಗಿಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟರಾಜ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಇಲಾಖೆಯ ಅಧಿಕಾರಿಗಳು, ಸರಕಾರಿ ನಾಮ ನಿರ್ದೇಶಿತ ಅಧ್ಯಕ್ಷರುಗಳು,ಸದಸ್ಯರುಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ನಾಪೋಕ್ಲು ಜೂ.27 NEWS DESK : ಕೊಡಗಿನಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು, ನಾಪೋಕ್ಲು ವ್ಯಾಪ್ತಿಯ ಹಲವೆಡೆ ರಸ್ತೆಗಳು ಜಲಾವೃತವಾಗಿ ರಸ್ತೆ ಸಂಪರ್ಕ ಕಡಿತಗೊಂಡಿವೆ. ಇಂತಹ ಬಿರುಸಿನ ಮಳೆಯ ನಡುವೆ ಚೆರಿಯಪರಂಬುವಿನ ವರ ಹಾಗೂ ಮಡಿಕೇರಿಯ ವಧು ವಿನ ವಿವಾಹ ಸಮಾರಂಭ ಜರುಗಿದೆ. ಕಳೆದ ವಾರ ಮಡಿಕೇರಿಯಲ್ಲಿ ಮದುವೆ ಕಾರ್ಯಕ್ರಮ ಜರುಗಿದ ಬಳಿಕ ವಧುವನ್ನು ಚೆರಿಯಪರಂಬುವಿನ ವರನ ಮನೆಗೆ ಕಳುಹಿಸಿಕೊಡಲಾಗಿತ್ತು. ಹಿಂತಿರುಗಿ ತವರು ಮನೆಗೆ ಕರೆದುಕೊಂಡು ಹೋಗುವ ಸಂಪ್ರದಾಯದಂತೆ ವಧುವಿನ ಮನೆಯವರು ವಧುವನ್ನು ಕರೆದುಕೊಂಡು ಹೋಗಲು ವರನ ಮನೆಗೆ ಆಗಮಿಸುವಾಗ ಮಳೆ ಪ್ರವಾಹದಿಂದಾಗಿ ನಾಪೋಕ್ಲು – ಚೆರಿಯಪರಂಬು ರಸ್ತೆ ಸಂಪರ್ಕ ಕಡಿತಗೊಂಡಿದೆ. ಬಂದವರು ಪರ್ಯಾಯ ಮಾರ್ಗವಾಗಿ ತೆಪ್ಪ ತರಿಸಿ ತೆಪ್ಪದ ಮೂಲಕ ಪ್ರವಾಹದ ನೀರಿನಲ್ಲಿ ಸಾಗಿ ಚೆರಿಯಪರಂಬುವಿನಲ್ಲಿರುವ ವರನ ಮನೆ ತಲುಪಿದ್ದಾರೆ. ವಧುವನ್ನು ತವರು ಮನೆಗೆ ಕರೆದುಕೊಂಡು ಹೋಗುವ ಸಂಪ್ರದಾಯ ಪಾಲಿಸಲು ಮಹಿಳೆಯರು, ಮಕ್ಕಳು ತೆಪ್ಪದಲ್ಲಿ ಸಾಗುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಯಿತು. ವರದಿ : ದುಗ್ಗಳ ಸದಾನಂದ.
ಪೊನ್ನಂಪೇಟೆ ಜೂ.27 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ಅಧೀನದ ‘ಕೆ.ಎಂ.ಎ. ದಫ್ ರಾತೀಬ್’ ತಂಡದ ವತಿಯಿಂದ ಅದರ ಖಲ್ಫರಾದ ಕೂತಂಬಟ್ಟೀರ ಹುಸೈನ್ ಅವರ ನೇತೃತ್ವದಲ್ಲಿ ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ಜೂ.10ರಂದು ಪ್ರಸ್ತುತಪಡಿಸಿದ ‘ದಫ್ ಮುಟ್ಟ್’ ಪ್ರದರ್ಶನವು ಜೂ.28 ರಂದು ಚಂದನ ವಾಹಿನಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಪ್ರಸಾರವಾಗಲಿದೆ. ಅಲ್ಲದೆ ಇದೇ ಕಾರ್ಯಕ್ರಮ ಜು.5ರ0ದು ಮಧ್ಯಾಹ್ನ 2 ಗಂಟೆಗೆ ಮರು ಪ್ರಸಾರವಾಗಲಿದೆ ಎಂದು ಕೆ.ಎಂ.ಎ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ನಾಪೋಕ್ಲು ಜೂ.27 NEWS DESK : ನಾಪೋಕ್ಲು ಹೋಬಳಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗಿದ್ದು, ಕಾವೇರಿ ನದಿ ತುಂಬಿ ಹರಿಯುತ್ತಿದೆ. ನಾಪೋಕ್ಲು ವಿಭಾಗದಲ್ಲಿ ಆರಿದ್ರ ಮಳೆ ಬಿರುಸುಕೊಂಡಿದ್ದು, ವಿವಿಧೆಡೆ ರಸ್ತೆಗಳು. ಜಲಾವೃತವಾಗಿವೆ. ನಾಪೋಕ್ಲು -ಮೂರ್ನಾಡು ಸಂಪರ್ಕ ರಸ್ತೆಗೆ ಪ್ರವಾಹ ಬಂದಿದ್ದು, ಬುಧವಾರ ಸಂಜೆಯಿಂದಲೇ. ಮೂರ್ನಾಡು ರಸ್ತೆಯ ಬೊಳಿಬಾಣೆ ರಸ್ತೆಗೆ ಆವರಿಸಿದ ಕಾವೇರಿ ನದಿ ಪ್ರವಾಹದಿಂದಾಗಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ನಾಪೋಕ್ಲು – ಕೈಕಾಡು -ಪಾರಾಣೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲೂ ಪ್ರವಾಹ ಉಂಟಾಗಿದೆ.ಕೈಕಾಡು ರಸ್ತೆಯಲ್ಲಿರುವ ಎತ್ತು ಕಡವು ಹೊಳೆ ರಸ್ತೆಯಲ್ಲಿ ಮೈದುಂಬಿ ಹರಿದು ಸಂಚಾರ ಸ್ಥಗಿತ ಗೊಂಡಿದೆ. ನಾಪೋಕ್ಲು ಬೇತು ಗ್ರಾಮದ ಮೂಲಕ ಬಲಮುರಿ ಗ್ರಾಮಕ್ಕೆ ಸಂಪರ್ಕಿಸುವ ಮಕ್ಕಿ ಕಡವು ಎಂಬಲ್ಲಿ ರಸ್ತೆ ಹಾಗೂ ಸೇತುವೆ ಪ್ರವಾಹ ಆವರಿಸಿ ಸಂಚಾರ ದುಸ್ತರವಾಗಿದೆ. ಚರಿಯಪರಂಬು ಕಲ್ಲುಮೊಟ್ಟೆ ಸಂಪರ್ಕ ರಸ್ತೆಯ ಚರಿಯಪಂಬುವಿನಲ್ಲಿ ರಸ್ತೆಯ ಮೇಲೆ ಪ್ರವಾಹದ ನಿರು ಹರಿಯುತ್ತಿದ್ದು, ಸಂಪರ್ಕ ಕಳೆದೆರಡು ದಿನಗಳಿಂದ ಸಂಪೂರ್ಣ ಸ್ಥಗಿತಗೊಂಡಿದೆ. ಸದ್ಯಕ್ಕೆ ನಾಪೋಕ್ಲು -ಬೆಟ್ಟಗೇರಿ ಸಂಪರ್ಕಿಸುವ ರಸ್ತೆ ಸಂಚಾರಕ್ಕೆ ಮುಕ್ತವಾಗಿದ್ದು ಮಳೆ…
ಮಡಿಕೇರಿ ಜೂ.27 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜೂ.29 ರಂದು ಮಡಿಕೇರಿ ಪತ್ರಿಕಾಭವನದಲ್ಲಿ ನಡೆಯಲ್ಲಿದೆ. ಬೆಳಿಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷರಾದ ಬಿ.ಆರ್ ಸವಿತಾ ರೈ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲ್ಲಿದೆ. ಬಳಿಕ 12 ಗಂಟೆಗೆ ಅಧ್ಯಕ್ಷರಾದ ಬಿ.ಆರ್.ಸವಿತಾರೈ ಅಧ್ಯಕ್ಷತೆಯಲ್ಲಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲ್ಲಿದೆ.ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಸಚಿವರಾದ ಮಹಾದೇವಪ್ಪ ,ಮಡಿಕೇರಿ ಶಾಸಕರಾದ ಡಾ.ಮಂತರ್ ಗೌಡ, ವಿಧಾನಪರಿಷತ್ ಸದಸ್ಯ ಧನಂಜಯ ಸರ್ಜಿ(ನೈರುತ್ಯ ಕ್ಷೇತ್ರ), ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ ನಿರ್ದೇಶಕರಾದ ಟಿ.ಎನ್.ಮಂಜುನಾಥ್,ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಬೊಳ್ಳಜಿರ ಅಯ್ಯಪ್ಪ ಪಾಲ್ಗೊಳ್ಳಲ್ಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನುಕಾರ್ಯಪ್ಪ ತಿಳಿಸಿದ್ದಾರೆ.
ಮಡಿಕೇರಿ ಜೂ.27 NEWS DESK : ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯ ಕಟ್ಟಡಗಳ ಸುಸ್ಥಿತಿ ಬಗ್ಗೆ 10 ದಿನದೊಳಗೆ ಲಿಖಿತ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಮಳೆ ಹಾನಿ ಬಗ್ಗೆ ಮಾಹಿತಿ ಪಡೆದು ಸಚಿವರು ಮಾತನಾಡಿದರು. ಜಿಲ್ಲೆಯಲ್ಲಿ ಇನ್ನೂ 40 ದಿನಗಳ ಕಾಲ ಹೆಚ್ಚಿನ ಎಚ್ಚರ ವಹಿಸಬೇಕಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು. ಅಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯ ಸ್ಥಳಕ್ಕೆ ಹಾಗಾಗ ಭೇಟಿ ನೀಡಬೇಕು. ಇದರಿಂದ ಸಮಸ್ಯೆ ಇದ್ದಲ್ಲಿ ಪರಿಹರಿಸಲು ಸಾಧ್ಯ ಎಂದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕು. ಸಾರ್ವಜನಿಕರಿಗೆ ತೊಂದರೆ ಆಗದಂತೆ ಗಮನಹರಿಸಬೇಕು. ದೂರು ಬಾರದಂತೆ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ ಎಂದು ಎನ್.ಎಸ್.ಭೋಸರಾಜು ಹೇಳಿದರು. ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 37 ಕೋಟಿ ಹಣವಿದೆ. ಹಾಗೆಯೇ ತಹಶಿಲ್ದಾರರ ಬಳಿ 2 ಕೋಟಿ…
ಮಡಿಕೇರಿ ಜೂ.27 NEWS DESK : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 40.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 92.22 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1367.96 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 737.17 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 71.28 ಮಿ.ಮೀ. ಕಳೆದ ವರ್ಷ ಇದೇ ದಿನ 160.07 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1950.48 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1083 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 103.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1388.50 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 726.45 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 31.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…






