ಲೇಖಕ: admin

ಮಡಿಕೇರಿ ಮೇ 7 NEWS DESK : ಸಿದ್ದಾಪುರ 33/11 ಕೆ.ವಿ ವಿದ್ಯುತ್ ಉಪ ಕೇಂದ್ರದಲ್ಲಿ ಹೆಚ್ಚುವರಿ ಶಕ್ತಿ ಪರಿವರ್ತಕವನ್ನು ಅಳವಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗದಲ್ಲಿ ಮೇ 9 ರಂದು ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.  ಆದ್ದರಿಂದ ಸಿದ್ದಾಪುರ ಶಾಖಾ ವ್ಯಾಪ್ತಿಯ, ಸಿದ್ದಾಪುರ, ಕರಡಿಗೋಡು, ಕೂಡುಗದ್ದೆ, ಗುಹ್ಯ, ಮೇಕೂರು, ಮಾಲ್ದಾರೆ, ಇಂಜಿಲಗೆರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಮೇ 7 NEWS DESK : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು  ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಮೇ 8 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಮೇ 7 NEWS DESK : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದಲ್ಲಿ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಗಣಪತಿ ಹೋಮ, ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥ ಸ್ನಾನ, ಕಳಶ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾರತಿ ನಡೆಯಿತು. ದೇವಿಯ ರಥೋತ್ಸವ ದೇವಾಲಯದ ಆವರಣದ ಸುತ್ತ ಸಾಗಿತು. ನಂತರ ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ, ಮಂಗಳಾರತಿ, ಅನ್ನದಾನ, ತಾಯಿಯ ದರ್ಶನ ಜರುಗಿತು. ಸಂಜೆ ದೇವಾಲಯದ ಆವರಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ ನಡೆಯಿತು. ರಾತ್ರಿ ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ಕೊಡಗು ಸೇರಿದಂತೆ ಹೊರ ಜಿಲ್ಲೆಯ 5 ಸಾವಿರಕ್ಕೂ ಅಧಿಕ ಭಕ್ತರು ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡಿದ್ದರು.     

Read More

ಮಡಿಕೇರಿ ಏ.7 NEWS DESK : ಪ್ರಸಕ್ತ(2025-26) ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶ ಪರೀಕ್ಷೆಯು ಮೇ 9 ರಂದು ನಡೆಯಲಿದೆ. ಪ್ರವೇಶ ಪರೀಕ್ಷೆ ಫಲಿತಾಂಶ ಮೇ, 13 ರಂದು ಪ್ರಕಟವಾಗಲಿದೆ. ಮೇ, 17 ರಂದು ಅರ್ಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡುವುದು. ಆಯ್ಕೆಯಾದ ಶಾಲೆಗೆ ದಾಖಲಾಗಲು ಮೇ, 31 ಕೊನೆಯ ದಿನವಾಗಿದೆ. ಅರ್ಜಿಯನ್ನು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://swd.karnataka.gov.in ಅನ್ನು ಬಳಸಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಟಿತ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ. ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕ…

Read More

ಮಡಿಕೇರಿ ಮೇ 7 NEWS DESK : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರ ನೋಂದಣಿ ಅಭಿಯಾನ ನಡೆಯಲಿದೆ. ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನದ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ. ಮೊದಲ ಮಗುವಿಗೆ ಎರಡು ಕಂತುಗಳಲ್ಲಿ ರೂ. 5 ಸಾವಿರ, ಎರಡನೇ ಮಗು(ಹೆಣ್ಣು ಮಗುವಾಗಿರುವುದಕ್ಕೆ) ರೂ.6 ಸಾವಿರ ನೀಡಲಾಗುವುದು. ಸರ್ಕಾರಿ ನೌಕರರು ಮತ್ತು ಸಾರ್ವಜನಿಕ ಉದ್ದಿಮೆಗಳ ನೌಕರರನ್ನು ಹೊರತು ಪಡಿಸಿ ಮೊದಲ ಪ್ರಸವದ ಗರ್ಭಿಣಿ ಮತ್ತು ಎರಡನೇ ಹೆಣ್ಣು ಮಗುವಿನ ಬಾಣಂತಿಯರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಈ ಬಗ್ಗೆ ಮಡಿಕೇರಿ, ಸೋಮವಾರಪೇಟೆ, ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಹಾಗೂ ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರಕ್ಕೆ…

Read More

ಮಡಿಕೇರಿ ಮೇ 6 NEWS DESK : ಪ್ರಸಕ್ತ (2025-26) ಸಾಲಿಗೆ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕಾಲೇಜು, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ ಇಲ್ಲಿಗೆ ವಿಜ್ಞಾನ ವಿಭಾಗದ ಭೌತಶಾಸ್ತ್ರ ಉಪನ್ಯಾಸಕರು(01 ಹುದ್ದೆ) ಮತ್ತು ಗಣಿತ ಉಪನ್ಯಾಸಕರು(01 ಹುದ್ದೆ) ಮತ್ತು ವಿಜ್ಞಾನ ಶಿಕ್ಷಕರು(01 ಹುದ್ದೆ) ಅತಿಥಿ ಶಿಕ್ಷಕರ/ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. (ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುವುದು). ವಿಜ್ಞಾನ ವಿಭಾಗದ ಭೌತಶಾಸ್ತ್ರ ಉಪನ್ಯಾಸಕರು ಮತ್ತು ಗಣಿತ ಉಪನ್ಯಾಸಕರ ಹುದ್ದೆಗೆ ವಿದ್ಯಾರ್ಹತೆ ಎಂಎಸ್ಸಿ/ಬಿ/ಇಡಿ ಮತ್ತು ವಿಜ್ಞಾನ ಶಿಕ್ಷಕರ ಹುದ್ದೆಗೆ ಬಿ.ಎಸ್ಸಿ, ಬಿ.ಇಡಿ(ಸಿಬಿಜೆಡ್) ವಿದ್ಯಾರ್ಹತೆ ಹೊಂದಿರಬೇಕು. ವೇತನ ಶ್ರೇಣಿ ರೂ.18,150. ಅರ್ಜಿ ಸಲ್ಲಿಸಲು ಮೇ, 17 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್‍ಎಂಸಿ ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂರವಾಣಿ ಸಂಖ್ಯೆ: 08272–225528, 9686138688 ಹಾಗೂ ಪ್ರಾಂಶುಪಾಲರು, ಡಾ||ಎಪಿಜೆ ಅಬ್ದುಲ್ ಕಲಾಂ ಪದವಿ ಪೂರ್ವ…

Read More

ಮಡಿಕೇರಿ ಮೇ 6 NEWS DESK : ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶನಿವಾರಸಂತೆ ಬಳಿ ನಡೆದಿದೆ. ಶನಿವಾರಸಂತೆ ಸಮೀಪದ ನಿಡ್ತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚೌಡೇನಹಳ್ಳಿ ಗ್ರಾಮದ ಚಂದನ್(25) ಎಂಬುವವರೇ ಸಾವನ್ನಪ್ಪಿರುವ ದುರ್ದೈವಿ. ಚಂದನ್ ತನ್ನ ಸ್ನೇಹಿತನೊಂದಿಗೆ ಬೈಕ್‍ನಲ್ಲಿ ಶನಿವಾರಸಂತೆಯಿಂದ ಚೌಡೇನಹಳ್ಳಿಯ ತನ್ನ ಮನೆಯತ್ತ ತೆರಳುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ. ಕಾರನ್ನು ನಿಲ್ಲಿಸದೆ ಅದರ ಚಾಲಕ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ಮೇ 6 NEWS DESK : ಹಿಂಬದಿಯಿಂದ ಗುಂಡು ಹೊಡೆದು ಕಾಫಿ ಬೆಳೆಗಾರನನ್ನು ಕೊಲೆ ಮಾಡಿರುವ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟಳ್ಳಿ ಸಮೀಪದ ಅಭ್ಯತ್ ಮಂಗಲ ಗ್ರಾಮದಲ್ಲಿ ನಡೆದಿದೆ. ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣದ ನಿವಾಸಿ ಕೊಳಂಬೆ ವಿನು(50) ಎಂಬುವವರೇ ಹತ್ಯೆಗೀಡಾದ ವ್ಯಕ್ತಿ.  ಕೊಳಂಬೆ ವಿನು ಅವರು ಇಂದು ಅಭ್ಯತ್ ಮಂಗಲ ಗ್ರಾಮದ ತೋಟದಲ್ಲಿದ್ದ ಪೈಪುಗಳನ್ನು ಇಬ್ಬರು ಕಾರ್ಮಿಕರ ಸಹಕಾರದಿಂದ ಗೋದಾಮಿಗೆ ಸಾಗಿಸಿ ದಾಸ್ತಾನು ಮಾಡುವ ಕೆಲಸದಲ್ಲಿ ನಿರತರಾಗಿದ್ದರು. ಈ ಸಂದರ್ಭ ಅಪರಿಚಿತರು ಹಿಂಬದಿಯಿಂದ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿದೆ. ಗುಂಡಿನ ಸದ್ದು ಕೇಳಿ ಕಾರ್ಮಿಕರು ಸ್ಥಳ್ಕಾಗಮಿಸಿದ ಸಂದರ್ಭ ಕೊಳಂಬೆ ವಿನು ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಈ ಕೃತ್ಯಕ್ಕೆ ಆಸ್ತಿ ವೈಷಮ್ಯ ಕಾರಣ ಎಂದು ಹೇಳಲಾಗುತ್ತಿದೆಯಾದರೂ ನಿಖರ ಕಾರಣ ತಿಳಿದುಬಂದಿಲ್ಲ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,…

Read More

ಮಡಿಕೇರಿ ಮೇ 6 NEWS DESK : ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಕೆ.ಬಾಡಗ, ನಾಲ್ಕೇರಿ ಹಾಗೂ ಪಾಲಿಬೆಟ್ಟ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ.ನಾರಾಯಣಸ್ವಾಮಿ ಭೇಟಿ ನೀಡಿ ಚುನಾಯಿತ ಸದಸ್ಯರುಗಳ ಸಮಾಲೋಚನೆ ಸಭೆ ನಡೆಸಿದರು. ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪವಾಗಿ ಬಳಸಿಕೊಂಡು ಗ್ರಾಮ ಪಂಚಾಯಿತಿಗಳ ಅಭಿವೃದ್ದಿಗೆ ಶ್ರಮಿಸಿ ಎಂದು ಡಾ.ಸಿ.ನಾರಾಯಣಸ್ವಾಮಿ ತಿಳಿಸಿದರು. ಕೆ.ಬಾಡಗ ಹಾಗೂ ನಾಲ್ಕೇರಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಾಡಿಗಳಿದ್ದು, ಇಲ್ಲಿನ ಜನರ ಜೀವನ ಮಟ್ಟ ಸುಧಾರಿಸುವಲ್ಲಿ ಕ್ರಮವಹಿಸಿ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಕೆ.ಬಾಡಗ ಗ್ರಾ.ಪಂ.ಅಧ್ಯಕ್ಷ ರಿತೇಶ್ ಬಿದ್ದಪ್ಪ ಮಾತನಾಡಿ, ಚಿಕ್ಕ ಗ್ರಾಮ ಪಂಚಾಯಿತಿಯಾದರೂ ಸಹ ಸರ್ಕಾರದ ವಿವಿಧ ಯೋಜನೆಗಳ ಅನುದಾನವನ್ನು ಉತ್ತಮವಾಗಿ ಬಳಸಿಕೊಂಡು ಅಭಿವೃದ್ಧಿಯನ್ನು ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು. ಸಹಾಯಕ ನಿರ್ದೇಶಕ (ಗ್ರಾ.ಉ) ಎಂ.ಡಿ.ಶ್ರೀನಿವಾಸ್ ಮಾತನಾಡಿ, ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ತೋಡು ಅಭಿವೃದ್ಧಿ ಕೆರೆ ಅಭಿವೃದ್ಧಿ ಕಾಂಕ್ರೀಟ್ ರಸ್ತೆ ಹಾಗೂ ಹಲವು ವೈಯಕ್ತಿಕ ಸೌಲಭ್ಯಗಳನ್ನು ನೀಡುವಲ್ಲಿ ಉತ್ತಮವಾಗಿ ಪ್ರಗತಿ ಸಾಧಿಸಿ,…

Read More

ಕುಶಾಲನಗರ ಮೇ 6 NEWS DESK : ಕೇಂದ್ರ ಸರ್ಕಾರದ‌ ಕರಕುಶಲ ಮತ್ತು ಜವಳಿ ಮಂತ್ರಾಲಯ ಇಲಾಖೆಯ ಮೈಸೂರಿನ ‌ ಕರಕುಶಲ ವಿಸ್ತರಣಾ ಸೇವಾ ಕೇಂದ್ರದ ವತಿಯಿಂದ ಕುಶಾಲನಗರ ಪಟ್ಟಣದ ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇ 8 ರಿಂದ ಮೂರು ದಿನಗಳ ಕಾಲ ಕರಕುಶಲ ವಸ್ತುಗಳ ತಯಾರಿಕೆ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಬಿದಿರು ಕಲೆ, ಮರ ಕೆತ್ತನೆ, ಮಣ್ಣಿನ ಕಲಾಕೃತಿಗಳ ತಯಾರಿಕೆ ಸೇರಿದಂತೆ ಇನ್ನಿತರ ಕರಕುಶಲ ಕಲೆಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ನಿರುದ್ಯೋಗಿಗಳಿಗೆ ತರಬೇತಿ ಹಾಗೂ ಕರಕುಶಲ ಕಲೆಗಳ ಕುರಿತು ಪ್ರಾತ್ಯಕ್ಷಿಕೆ ನೀಡಲಾಗುವುದು ಎಂದು ಮೈಸೂರು ಕರಕುಶಲ ವಿಸ್ತರಣಾ ಕೇಂದ್ರದ ಸಹಾಯಕ ನಿರ್ದೇಶಕ ಎಸ್.ವಿನೋತ್ ಕುಮಾರ್ ತಿಳಿಸಿದ್ದಾರೆ. ಕರಕುಶಲ ಕಲೆಯ ಚಟುವಟಿಕೆಗಳ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸುವ ದಿಸೆಯಲ್ಲಿ ಹಾಗೂ ಈ ಕಲೆಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರತಿ ಜಿಲ್ಲೆಗಳಲ್ಲಿ ಇಂತಹ ಶಿಬಿರಗಳನ್ನು ಸಂಘಟಿಸಲಾಗುತ್ತಿದೆ ಎಂದು ಶಿಬಿರದ ಜಿಲ್ಲಾ ಸಂಯೋಜಕರೂ ಆದ ರಾಜ್ಯ ಕರಕುಶಲ ಕುಶಲಕರ್ಮಿ ಪ್ರಶಸ್ತಿ ಪುರಸ್ಕೃತ ಜಿ.ಧರ್ಮಪ್ಪ ತಿಳಿಸಿದ್ದಾರೆ.…

Read More