ಲೇಖಕ: admin

ಮಡಿಕೇರಿ ಮೇ 6 NEWS DESK : ಜಮ್ಮು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಪಾಕಿಸ್ತಾನಿ ಪ್ರಚೋದಿತ ಉಗ್ರಗಾಮಿಗಳಿಂದ ದಾಳಿಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಇದರ ಜೊತೆಯಲ್ಲೆ ಕೊಡಗು ಜಿಲ್ಲೆಯಲ್ಲಿ ನಕಲಿ ದಾಖಲೆಗಳೊಂದಿಗೆ ಇರಬಹುದಾದ ಪಾಕಿಸ್ತಾನಿಗಳು ಹಾಗೂ ಬಾಂಗ್ಲಾದೇಶಿಗರನ್ನು ಗುರುತಿಸಿ ತಕ್ಷಣ ಹೊರಗಟ್ಟಬೇಕೆಂದು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಕೊಡಗು ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಈಗಾಗಲೆ ಭಾರತ ಬಿಟ್ಟು ಹಿಂತೆರಳುವಂತೆ ಕೇಂದ್ರ ಸರ್ಕಾರ ಸ್ಪಷ್ಟ ಸೂಚನೆಗಳನ್ನು ನೀಡಿದೆ. ಅದರಂತೆಯೆ ಜಿಲ್ಲೆಯಲ್ಲಿ ಇರಬಹುದಾದ ಪಾಕಿಸ್ತಾನಿಗಳು ಹಾಗೂ ಬಾಂಗ್ಲಾದೇಶಿಗರ ದಾಖಲೆ ಪತ್ರಗಳನ್ನು ತೀವ್ರ ಪರಿಶೀಲನೆಗೆ ಒಳಪಡಿಬೇಕು. ನಿಯಮ ಉಲ್ಲಂಘಿಸಿ ನಕಲಿ ದಾಖಲೆಯೊಂದಿಗೆ ತಂಗಿದ್ದರೆ ಹೊರ ಕಳಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಬೇಕೆಂದರು. ನಿರಂತರವಾಗಿ ಭಯೋತ್ಪಾದಕರಿಗೆ ನೆರವು ನೀಡುತ್ತಾ ಭಾರತದ ನೆಲದಲ್ಲಿ ಕ್ಷೋಭೆಯನ್ನು ಉಂಟು ಮಾಡುತ್ತಿರುವ ಪಾಕಿಸ್ತಾನವನ್ನು ಭೂಪಟದಲ್ಲೆ ಇಲ್ಲದಂತೆ ಮಾಡಬೇಕೆಂದು ಅಪ್ಪಚ್ಚು ರಂಜನ್ ಅಸಮಾಧಾನ ವ್ಯಕ್ತಪಡಿಸಿದರು.…

Read More

ಮಡಿಕೇರಿ ಮೇ 6 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮಹಿಳಾ ಸಾಹಿತಿಗಳಿಗೆ ಮೀಸಲಾಗಿ ಇಟ್ಟಿರುವ “ಶ್ರೀಮತಿ ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿ” ಗೆ ಜಿಲ್ಲೆಯ ಹಿರಿಯ ಸಾಹಿತಿ ಸ್ಮಿತಾ ಅಮೃತರಾಜ್ ರಚಿಸಿದ ಕಥಾ ಸಂಕಲನ “ಹಾಯ್ ಮೆಟಾಯ್” ಕೃತಿಯು ಪುರಸ್ಕೃತ ಗೊಂಡಿದೆ. ಜಿಲ್ಲೆಯ ಹಿರಿಯ ಸಾಹಿತಿಗಳಾದ ವಿಜಯ ವಿಷ್ಣುಭಟ್ ಸ್ಥಾಪಿಸಿರುವ ಈ ದತ್ತಿಯ ಮೊದಲ ಪ್ರಶಸ್ತಿ ಇದಾಗಿದ್ದು, ಈ ದತ್ತಿ ಪ್ರಶಸ್ತಿಯ ಆಯ್ಕೆಗಾಗಿ ಜಿಲ್ಲೆಯ ಬರಹಗಾರರ ಕೃತಿಗಳನ್ನು ಆಹ್ವಾನಿಸಿದಾಗ ಹತ್ತು ಸಾಹಿತಿಗಳು ತಮ್ಮ ಕೃತಿಗಳನ್ನು ಪ್ರಸ್ತುತಪಡಿಸಿದ್ದರು. ಜಿಲ್ಲೆಯ ಹಿರಿಯ ಮೂರು ಸಾಹಿತಿಗಳು ಪ್ರತ್ಯೇಕವಾಗಿ ಈ ಪುಸ್ತಕಗಳನ್ನು ಪರಿಶೀಲಿಸಿ ನೀಡಿದ ಅಂಕಗಳನ್ನು ಜಿಲ್ಲಾ ಸಮಿತಿ ಒಟ್ಟುಗೂಡಿಸಿ ಹತ್ತು ಜನ ಲೇಖಕರಲ್ಲಿ ಅತಿ ಹೆಚ್ಚು ಅಂಕ ಪಡೆದ “ಹಾಯ್ ಮೆಟಾಯ್” ಕೃತಿಯ ಲೇಖಕಿ ಸ್ಮಿತಾ ಅಮೃತ್ ರಾಜ್ ಸಂಪಾಜೆ ಪ್ರಶಸ್ತಿಗೆ ಪುರಸ್ತೃತಗೊಂಡಿದ್ದಾರೆ. ಮುಂದೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೊಡಗು ಜಿಲ್ಲಾ ಕನ್ನಡ…

Read More

ಬೆಂಗಳೂರು ಮೇ 6 NEWS DESK : ಶುದ್ದ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು ಎಂದು ಜಿಲ್ಲಾಧಿಕಾರಿಗಳಿಗೆ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಈ ಸೂಚನೆ ನೀಡಿದರು. ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು:: • ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು. ಕುಡಿಯುವ ನೀರಿನ ನಿರ್ವಹಣೆಗೆ ಯಾವುದೇ ಹಣಕಾಸಿನ ಕೊರತೆ ಇರುವುದಿಲ್ಲ. ಪಂಚಾಯತ್ ರಾಜ್ ಇಲಾಖೆಗೆ 60 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ. • ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್ ಫೋರ್ಸ್ ನಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಬೇಕು. • ಪ್ರತಿ ವರ್ಷ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಲು ಯೋಜನೆ ರೂಪಿಸಬೇಕು. • ಅಗತ್ಯಬಿದ್ದರೆ…

Read More

ಮಡಿಕೇರಿ ಮೇ 6 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ಸುಂಟಿಕೊಪ್ಪ ಸಂತ ಅಂತೋಣಿಯವರ ದೇವಾಲಯದ ಸಂಯುಕ್ತಾಶ್ರಯದಲ್ಲಿ ಮೇ 9 ರಿಂದ 11ರ ವರೆಗೆ ಸುಂಟಿಕೊಪ್ಪದಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ, ವಿವಿಧ ಕ್ರೀಡಾಕೂಟ ಹಾಗೂ ಸಾಧಕರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸ್‍ನ್ ಪಿಂಟೋ ಮಾತನಾಡಿ, ಸುಂಟಿಕೊಪ್ಪದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 14ನೇ ವರ್ಷದ ಪಂದ್ಯಾವಳಿಗೆ ಮೇ 9 ರಂದು ಚಾಲನೆ ದೊರೆಯಲಿದೆ ಎಂದರು. ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದು, ಮೈಸೂರು ಧರ್ಮಪ್ರಾಂತ್ಯದ ಆಡಳಿತಾಧಿಕಾರಿ, ಬೆಂಗಳೂರು ಮಹಾ ಧರ್ಮಪ್ರಾಂತ್ಯದ ವಿಶ್ರಾಂತ ಮಹಾಧರ್ಮಧ್ಯಕ್ಷರಾದ ಅತೀ ವಂದನೇಯ ಡಾ.ಬರ್ನಾಡ್ ಮೋರಾಸ್ ಆರ್ಶೀವಚನ ನೀಡಲಿದ್ದಾರೆ. ಧ್ವಜಾರೋಹಣವನ್ನು ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಧರ್ಮಗುರು ಫಾ.ವಿಜಯ್ ಕುಮಾರ್ ನೆರವೇರಿಸಲಿದ್ದಾರೆ. ಕ್ರಿಕೆಟ್…

Read More

ಕೊಡ್ಲಿಪೇಟೆ ಮೇ 6 NEWS DESK : ಧಾರ್ಮಿಕ ಸೇವಾ ಮಠ ಪರಂಪರೆಯಲ್ಲಿ ಕೊಡಗಿನ ರಾಜರ ಕೊಡುಗೆ ಅಪಾರವಾಗಿದ್ದು, ಕೊಡಗಿನ ರಾಜಾಳ್ವಿಕೆ ಕಾಲದಲ್ಲಿ 108 ಮಠಗಳು ಅಸ್ಥಿತ್ವದಲ್ಲಿದೆ. ಈ ಪೈಕಿ ಕಲ್ಲುಮಠವು ಅಸ್ಥಿತ್ವವನ್ನು ಉಳಿಸಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತುಮಕೂರು ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಶ್ರೀ ಸಿದ್ದಲಿಂಗಸ್ವಾಮೀಜಿ ಹೇಳಿದರು. ಕೊಡ್ಲಿಪೇಟೆ ಸಮಿಪದ ಶ್ರೀ ಕಲ್ಲುಮಠದ ಮಠಾದೀಶ ಶ್ರೀ ಮಹಂತಸ್ವಾಮೀಗಳು ಮಠದ ಪೀಠಾಧ್ಯಕ್ಷರಾಗಿ 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸ್ವಾಗತ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಶ್ರೀಗಳ ಪೀಠೋಹಣದ ಸುವರ್ಣ ಮಹೋತ್ಸವ, ಶ್ರೀ ಬಸವೇಶ್ವರ ಜಯಂತಿ, ಡಾ.ಶಿವಕುಮಾರ ಸ್ವಾಮಿ ಜಯಂತಿ, ಶ್ರೀ ನಂಜುಂಡ ಸ್ವಾಮೀಜಿ ಸಂಸ್ಮರಣೋತ್ಸವ ಹಾಗೂ ಮಠದ ಶ್ರೀ ನಂಜುಂಡೇಶ್ವರ ವಿದ್ಯಾಸ್ಥೆಯ ೨೫ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮ ಧಾರ್ಮಿಕ ಸಮಾರಂಭದಲ್ಲಿ ಅವರು ಮಾತನಾಡಿದರು.  ಮಠ ಮಾನ್ಯಗಳು ಧಾರ್ಮಿಕ, ಆದ್ಯಾತ್ಮಿಕ, ಸಾಮಾಜಿಕ ಸೇವಾ ಪರಂಪರೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಹಿಂದೆ ಅಸ್ತಿತ್ವದಲ್ಲಿದ್ದ ಮಠಗಳು ಇಂದಿನ ಕಾಲಘಟ್ಟದಲ್ಲಿ ಕಡಿಮೆಯಾಗುತ್ತಿವೆ ಕೊಡಗಿನ ರಾಜಾಳ್ವಿಕೆ ಕಾಲದಲ್ಲಿ ನೂರಾರು ಮಠ ಪರಂಪರೆ…

Read More

ಕುಶಾಲನಗರ ಮೇ 6 NEWS DESK : ದೇಶದ ಎಲ್ಲೆಡೆ ಹಿಂದುಗಳ ರಕ್ಷಣೆ ಸಂಬಂಧ ಶಕ್ತಿಯುತ ಜಾಗೃತ ಸಮಾಜ ನಿರ್ಮಾಣದ ಅಗತ್ಯತೆ ಇದೆ ಎಂದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಕರೆ ನೀಡಿದ್ದಾರೆ. ಕುಶಾಲನಗರದಲ್ಲಿ ನಡೆದ ಮಿಷನ್ ಮೋದಿ ಡೆಮಾಕ್ರಸಿ ಡೆವಲಪ್ಮೆಂಟ್ ಟ್ರಸ್ಟ್ ಆಶ್ರಯದಲ್ಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದುಗಳ ಹತ್ಯೆ ಹಾಗೂ ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ನಡೆದ ಮೌನ ಮೆರವಣಿಗೆ ಮತ್ತು ಪ್ರತಿಭಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಶ್ಮೀರದಲ್ಲಿ ನಡೆದ ಉಗ್ರರ ಕೃತ್ಯವನ್ನು ಖಂಡಿಸಿದ ಬೋಪಯ್ಯ ಅಮಾಯಕ ಯುವಕ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಕಾರಣಕರ್ತರಾದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಒಂದು ತಿಂಗಳು ಕಳೆದರೂ ಇನ್ನೂ ಆರೋಪಿಗಳನ್ನು ಬಂಧಿಸಿಲ್ಲ ಎಂದ ಅವರು, ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹಿಸಿದರು. ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಒತ್ತಾಯಿಸಿದರು. ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹಿಂದುಗಳ ಹತ್ಯೆಗಳು…

Read More

ಮಡಿಕೇರಿ, ಮೇ 6 NEWS DESK : ನಗರದ ಅಶೋಕಪುರದ ಶ್ರೀ ವೀರಭದ್ರ, ಪಾಷಾಣ ಮೂರ್ತಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೇಮೋತ್ಸವ ನಡೆಯಿತು. ಪಂಜುರ್ಲಿ, ಕಲ್ಕುಡ, ಪಾಷಾಣ ಮೂರ್ತಿ, ಗುಳಿಗ, ಕೊರ್ತಿ, ಕಲ್ಲುರ್ಟಿ ಹಾಗೂ ಕೊರಗಜ್ಜ ದೈವಗಳ ಕೋಲಗಳು ನಡೆದವು. ನಗರ ಸೇರಿದಂತೆ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತರು ದೈವಗಳ ದರ್ಶನ ಪಡೆದರು. ಇದೇ ಸಂದರ್ಭ ಭಕ್ತರಿಗೆ ಅನ್ನಸಂತರ್ಪಣೆ ನಡೆಸಲಾಯಿತು. ದೇವಾಲಯ ಅರ್ಚಕ ರಾಜೇಶ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯ ನಡೆಯಿತು.

Read More

ನಾಪೋಕ್ಲು ಮೇ 6 NEWS DESK : ಈಸ್ಟ್‍ಕೋಳಕೇರಿಯ ಶ್ರೀ ಮಹಾದೇವ ಕೋಟ ಈಶ್ವರ ದೇವಾಲಯದ ವಾರ್ಷಿಕೋತ್ಸವವು ಮೇ 10 ರಂದು ನಡೆಸಲು ತೀರ್ಮಾನಿಸಲಾಗಿದೆ. ವಾರ್ಷಿಕೋತ್ಸವ ಪ್ರಯುಕ್ತ ಬೆಳಿಗ್ಗೆ 7 ಗಂಟೆಯಿಂದ 8 ಗಂಟೆಯ ವರೆಗೆ ಗಣ ಹೋಮ, 9ಗಂಟೆ ಯಿಂದ 12.00 ಗಂಟೆ ವರೆಗೆ ಶತ ರುದ್ರಾಭಿಷೇಕ, ಹಾಗೂ ರುದ್ರಾಭಿಷೇಕ ಪೂಜೆ ಮಧ್ಯಾಹ್ನ 12 ಗಂಟೆಟೆಗೆ ಮಹಾಪೂಜೆ ನಡೆಯಲಿದೆ. ನಂತರ ಭಕ್ತಾದಿಗಳಿಗೆ ತೀರ್ಥ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯ ಅಧ್ಯಕ್ಷರು ಹಾಗೂ ಸಮಿತಿ ಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ನಾಪೋಕ್ಲು ಮೇ 6 NEWS DESK : ಕಕ್ಕಬೆಯ ನೆಟ್ಟುಮಾಡಿನಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪೊನ್ನಿರ ಸ್ನೇಕ್ ಗಗನ್ ರಕ್ಷಿಸಿದ್ದಾರೆ. ಗ್ರಾಮದ ನಿವಾಸಿ ವೈಕೋಲ್ ಉಸ್ಮಾನ್ ಅವರ ಮನೆಯ ಸಮೀಪದಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳಾದ ಪಾಂಡ ನರೇಶ ಹಾಗೂ ರಘು ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ಪೊನ್ನಿರ ಸ್ನೇಕ್ ಗಗನ್ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಅರಣ್ಯಕ್ಕೆ ಬಿಟ್ಟರು. ವರದಿ : ದುಗ್ಗಳ ಸದಾನಂದ.

Read More

ಸುಂಟಿಕೊಪ್ಪ ಮೇ 6 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಪಾಲಕ ಸಂತ ಅಂತೋಣಿಯವರ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಬಳ್ಳಾರಿ ಧರ್ಮಕ್ಷೇತ್ರದ ಹಟ್ಟಿ ಪವಿತ್ರ ದೇವಾಲಯದ ಧರ್ಮಗುರುಗಳಾದ ಗುರುಗಳಾದ ರೇ.ಫಾ.ವಿಜಯಕುಮಾರ್, ಆರಾಧನೆಯನ್ನು ಬಳ್ಳಾರಿ ಧರ್ಮಕ್ಷೇತ್ರದ ವಂ.ಗುರುಗಳಾದ ರೇ.ಫಾ.ವಿಜಯಕುಮಾರ್, ಆನಂದ್ ಪ್ರಸಾದ್, ಅನಿಲ್ ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ವಿಜಯಕುಮಾರ್ ನೇರವೇರಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬೆಂಗಳೂರು ಹೋಲಿ ಘೋಸ್ಟ್ ದೇವಾಲಯದ ಧರ್ಮಗರುಗಳಾದ ಸಿಲುವೈ ಮುತ್ತು ವಿಶೇಷ ಪೂಜೆ ಪ್ರಭೋದನೆಯನ್ನು ನೀಡಿದರು. ಮೈಸೂರಿನ ಪುಷ್ಪಗಿರಿ ಬಾಲಯೇಸುವಿನ ದೇವಾಲಯದ ಧರ್ಮಗುರುಗಳಾದ ಮರಿಯ ಕ್ಷೇವಿಯರ್ ಹಾಗೂ ಸಂತ ಸೆಬಾಸ್ಟಿನ್ ದೇವಾಲಯದ ಧರ್ಮಗುರುಗಳಾದ ಜೆರಾಲ್ಡ್ ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ವಿಜಯಕುಮಾರ್ ಆಡಂಬರ ದಿವ್ಯ ಬಲಿಪೂಜೆ ಪ್ರಭೋದನೆ ಮತ್ತು ಮಕ್ಕಳಿಗೆ ಪ್ರಥಮ ಪರಮ ಪ್ರಸಾದ ಸಂಸ್ಕಾರ ವಿತರಿಸಿದರು. ಮಧ್ಯಾಹ್ನ ಅಂಬು ಕಾಣಿಕೆಯ ಹರಕೆಯನ್ನು ಭಕ್ತಾಧಿಗಳು ಸಲ್ಲಿಸಿದರು. ಮರುದಿನ ಸಂತ ಅಂತೋಣಿಯವರ ದೇವಾಲಯದ ಧರ್ಮಗುರುಗಳು ಹಾಗೂ ಕ್ರೈಸ್ತ ಭಕ್ತಾಧಿಗಳು…

Read More