ಕುಶಾಲನಗರ ಮೇ 6 NEWS DESK : ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ 44ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಗುಡ್ಡೆ ಹೊಸೂರಿನ ಐಮುಡಿಯಂಡ ಶೈಲಾ ಕುಶಾಲಪ್ಪ ಎರಡು ಚಿನ್ನ ಮತ್ತು ಬೆಳ್ಳಿ ಪದಕ ಪಡೆಯುವ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಅರ್ಹತೆ ಗಳಿಸಿದ್ದಾರೆ. 400 ಮೀಟರ್ ಓಟ 400 ಮೀಟರ್ ರಿಲೇ ಮತ್ತು 100 ಮೀಟರ್ ರಿಲೇ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗಿರುವ ಶೈಲಾ ಅವರು ಸಿಂಗಾಪುರದಲ್ಲಿ ನಡೆಯುವ ಅಂತರರಾಷ್ಟ್ರೀಯ ಪಂದ್ಯದಲ್ಲಿ ಭಾಗವಹಿಸುವ ಅರ್ಹತೆ ಗಳಿಸಿದ್ದಾರೆ. ಶೈಲ ಕುಶಾಲಪ್ಪ ಕಾಲೂರು ಗ್ರಾಮದ ಚನ್ನಪಂಡ ಗಣಪತಿ ಮತ್ತು ಮುತ್ತಕಿ ದಂಪತಿಗಳ ಪುತ್ರಿಯಾಗಿದ್ದಾರೆ.
ಲೇಖಕ: admin
ಮಡಿಕೇರಿ ಮೇ 6 NEWS DESK : ಸಾಹಿತ್ಯ ಮತ್ತು ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳು. ಒಂದರ ಅಂತಃಸ್ವರೂಪ ಇನ್ನೊಂದರಲ್ಲಿ ವ್ಯಕ್ತವಾಗುವುದರಿಂದ ಒಂದು ಇನ್ನೊಂದಕ್ಕೆ ಪೂರಕ ವಾಗಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಹೇಳಿದ್ದಾರೆ. ನಗರದ ರೆಡ್ ಬ್ರಿಕ್ಸ್ ಸಭಾಂಗಣದಲ್ಲಿ ನಡೆದ ಸಮರ್ಥ ಕನ್ನಡಿಗರು ಕೊಡಗು ಮತ್ತು ದಿ.ಚಂದ್ರಶೇಖರ ರಾವ್ ಮೆಮೋರಿಯಲ್ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ ಕನ್ನಡ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವದ ನಾನಾ ದೇಶಗಳಲ್ಲಿ ಭಾರತ ಇಂದು ವಿಜೃಂಭಿಸಲು ಪ್ರಮುಖ ಕಾರಣವೇ ನಮ್ಮ ಸಂಸ್ಕೃತಿಯಾಗಿದೆ. ಲಿಪಿಯ ಮೂಲಕ ಭಾವನೆಗಳನ್ನು ಅಭಿವ್ಯಕ್ತಿಗೊಳಿಸುವ ಕಲೆಯನ್ನು ಮನುಷ್ಯ ರೂಢಿಸಿಕೊಂಡದ್ದು ಸಂಸ್ಕೃತಿಯ ವಿಕಾಸದಲ್ಲಿ ಬಹು ದೊಡ್ಡ ಹೆಜ್ಜೆಯಾಗಿದೆ. ನಮ್ಮ ಭಾಷೆ ಸಂಸ್ಕೃತಿ ಬೆಳೆಯಲು ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದೂ ಅವರು ಹೇಳಿದರು. ಈ ನಿಟ್ಟಿನಲ್ಲಿ ಕೊಡಗಿನ ಸಮರ್ಥ ಕನ್ನಡಿಗರು ಸಂಸ್ಥೆಯ ಮಹಿಳಾ ಮಣಿಗಳ ಕಾರ್ಯವನ್ನು ರಮೇಶ್ ಶ್ಲಾಘಿಸಿದರು. ಎರಡು ಕೃತಿಗಳನ್ನು ಲೋಕಾರ್ಪಣೆ ಮಾಡಿದ ಮಡಿಕೇರಿ ಆಕಾಶವಾಣಿಯ ಹಿರಿಯ…
ವಿರಾಜಪೇಟೆ ಮೇ 6 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ,ಸಿ ಟ್ರಸ್ಟ್(ರಿ)ವಿರಾಜಪೇಟೆ ತಾಲೂಕು, ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಶ್ರೀ ಮಹಾದೇವರ ಪೆಗ್ಗೆರೆ ಕೆರೆ ಕಾಮಗಾರಿಯ ಪೂರ್ವಭಾವಿ ಸಭೆ ನಡೆಯಿತು. ತಾಲೂಕಿನ ಯೋಜನಾಧಿಕಾರಿಗಳಾದ ಹರೀಶ್ ಪಿ. ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸಿ ಕೆರೆ ಕಾಮಗಾರಿ ಹೂಳು ಎತ್ತುವುದು, ಕೆರೆ ಹೂಳು ತೆಗೆಯುವುದರಿಂದ ಆಗುವ ಪ್ರಯೋಜನ, ಕುಡಿಯುವ ನೀರು ಮತ್ತು ಕೃಷಿ ಭೂಮಿಗಳಿಗೆ ಪೂರಕವಾಗುತ್ತದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಜನ ಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಅರುಣ್ ಬಾನಂಗಡ ಗ್ರಾಮ ಅಭಿವೃದ್ಧಿ ಯೋಜನೆಯ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಇದೇ ಸಂದರ್ಭ ಕೆರೆ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಕಾರ್ಯುಕ್ರಮದಲ್ಲಿ ಈ ಮಹಾದೇವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸಿ.ಜಿ ಕರುಂಬಯ್ಯ, ಊರಿನ ತಕ್ಕ ಮುಖ್ಯಸ್ಥ ಪೃಥ್ವಿ ಸುಬ್ಬಯ್ಯ, ಹುದಿಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷ ನಿವ್ಯ ಕಾವೇರಮ್ಮ, ಪಂಚಾಯತ್ ಸದಸ್ಯ ಮಿಲನ್, ಹುದಿಕೇರಿ ಒಕ್ಕೂಟದ ಅಧ್ಯಕ್ಷ…
ಮಡಿಕೇರಿ ಮೇ 6 NEWS DESK : ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ಕೂರನ ಇಂಚರ ಕಿಶೋರ್ 619 ಅಂಕ ಪಡೆದು ಮಡಿಕೇರಿ ತಾಲ್ಲೂಕಿಗೆ ದ್ವಿತೀಯ ಸ್ಥಾನ ಹಾಗೂ ಶಾಲೆಗೆ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ. ಕೇಕಡ ಮೋಕ್ಷ ಬೋಪಣ್ಣ 613 ಅಂಕ ಪಡೆದು ದ್ವಿತೀಯ ಸ್ಥಾನ, ಚಕ್ಷ ಕಾವೇರಮ್ಮ 597 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ. ಶಾಲೆಯ ಒಟ್ಟು 50 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 26 ಉನ್ನತ ಶ್ರೇಣಿ 23 ಪ್ರಥಮ ಶ್ರೇಣಿ, 1 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಶೇ 100 ಫಲಿತಾಂಶ ದೊರಕಿದೆ ಎಂದು ಶಾಲಾ ಮುಖ್ಯ ಶಿಕ್ಷಕರಾದ ಕುದುಪಜೆ ಕವನ್ ಕುಮಾರ್ ತಿಳಿಸಿದ್ದಾರೆ.
ಮಡಿಕೇರಿ ಮೇ 6 NEWS DESK : ಶ್ರೀ ದಂಡಿನಮ್ಮ ಮತ್ತು ಶ್ರೀ ಬಸವೇಶ್ವರ, ಶ್ರೀ ಮುತ್ತತ್ ರಾಯ ದೇವಸ್ಥಾನ ಮತ್ತು ಗ್ರಾಮಗಳ ಸೇವಾ ಸಮಿತಿ ಹಾಗೂ ಕೂಡಿಗೆ- ಕೊಪ್ಪಲು, ಹೆಗಡ್ಡಳ್ಳಿ ಗ್ರಾಮಸ್ಥರ ವತಿಯಿಂದ ದಂಡಿನಮ್ಮ ಗ್ರಾಮ ದೇವತೆಯ ಜಾತ್ರಾ ಮಹೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಹಬ್ಬದ ಅಂಗವಾಗಿ ಗಣಪತಿ ಹೋಮ, ನವಗ್ರಹ ಹೋಮ, ರುದ್ರ ಹೋಮ, ಮೃತ್ಯುಂಜಯ ಹೋಮ, ಗಾಯಿತ್ರಿ ಹೋಮ , ನಂತರ ದೇವಿಗೆ ಪಂಚಾಮೃತ ಅಭಿಷೇಕ, ರುದ್ರ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದು ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ರಾತ್ರಿ ಅಗ್ನಿ ಸ್ಧಾಪನೆ, ನಂತರ ಶ್ರೀ ಬಸವೇಶ್ವರ ದೇವಾಲಯದಿಂದ ಗ್ರಾಮಸ್ಥರು ಮತ್ತು ಹರಕೆ ಹೊತ್ತ ನೂರಾರು ಭಕ್ತರು ಕಾವೇರಿ ನದಿಗೆ ತೆರಳಿ ಗಂಗಾ ಪೂಜೆ, ಕಳಸ ಪೂಜೆ, ಹಣ್ಣಾಡಗೆ ಉತ್ಸವದ ಮೂಲಕ ಮಂಗಳವಾದ್ಯ, ನಾಡವಾದ್ಯದ ಮೂಲಕ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಸಾಗಿ ದಂಡಿನಮ್ಮ ದೇವಾಲಯ ಮುಂಭಾಗದಲ್ಲಿ ಹಾಕಲಾಗಿದ್ದ ಬೆಂಕಿ ಕೊಂಡದಲ್ಲಿ…
ಮಡಿಕೇರಿ, ಮೇ 6 NEWS DESK : ಮನಸ್ಸಿಗೆ ಒತ್ತಡ ಉಂಟಾದಾಗ ಕ್ರೀಡೆ ಹಾಗೂ ಯೋಗಾಭ್ಯಾಸಗಳಿಂದ ನೆಮ್ಮದಿ ದೊರಕುತ್ತದೆ ಎಂದು ಒಲಂಪಿಯನ್ ಚೆಪ್ಪುಡಿರ ಪೂಣಚ್ಚ ಹೇಳಿದರು. ವಾಂಡರರ್ಸ್ ಸ್ಟೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ. ಶಂಕರ್ ಅವರ ಸ್ಮರಣಾರ್ಥ ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ಒಂದು ತಿಂಗಳುಗಳ ಕಾಲ ನಡೆದ ಉಚಿತ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗು ಜಿಲ್ಲೆ ಸೇನೆ ಹಾಗೂ ಕ್ರೀಡೆಗೆ ಹೆಸರುವಾಸಿ, ಅದರಲ್ಲೂ ಹಾಕಿ ಜಿಲ್ಲೆಯಲ್ಲಿ ಹೆಸರುವಾಸಿಯಾಗಿದೆ. ತಾನು ಕೂಡ ಇದೇ ಮೈದಾನದಲ್ಲಿ ಆಡಿ ಬೆಳೆದು ಕ್ರೀಡಾ ಶಾಲೆಗೆ ಸೇರಿ ಈ ರೀತಿಯ ಸಾಧನೆ ಮಾಡಲು ಸಹಕಾರಿಯಾಗಿದೆ. ಗುರುಗಳಾದ ಸಿ.ವಿ. ಶಂಕರ್ ಅವರು ೧೨೦ಕ್ಕೂ ಅಧಿಕ ಮಂದಿ ಅಂತರರಾಷ್ಟ್ರೀಯ ಅಟಗಾರರನ್ನು ತಯಾರು ಮಾಡಿದ್ದು ಅವರಿಗೆ ನಾವೆಲ್ಲರೂ ಋಣಿಯಾಗಿರಬೇಕೆಂದರು. ಇದೀಗ ವಾಂಡರ‍್ಸ್ ಕ್ಲಬ್‌ನವರು, ಹಿರಿಯರು ಸೇರಿಕೊಂಡು ಸ್ವಯಂಪ್ರೇರಿತರಾಗಿ ಮಕ್ಕಳಿಗೆ ಯೋಗ, ಕ್ರೀಡಾ ತರಬೇತಿ ನೀಡುತ್ತಿರುವುದು ಶ್ಲಾಘನೀಯ. ಮಕ್ಕಳು ಸದುಪಯೋಗಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಒಲಂಪಿಕ್‌ಗೆ ಅಡಬೇಕು :: …
ಮಡಿಕೇರಿ ಮೇ 5 NEWS DESK : ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಲಭ್ಯವಿರುವ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಂಡು ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಮುಂದಾಗುವಂತೆ ರಾಜ್ಯ 5 ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ.ನಾರಾಯಣ ಸ್ವಾಮಿ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಾಂಸ್ಥಿಕ ರಚನೆ, ಕಾರ್ಯಚಟುವಟಿಕೆಗಳು, ಆರ್ಥಿಕ ಸ್ಥಿತಿಗತಿ, ಮೂಲ ಸೌಕರ್ಯ ಹಾಗೂ ಸೇವೆ ಒದಗಿಸುವಲ್ಲಿ ತಾಂತ್ರಿಕ ಕೌಶಲ್ಯ ಮತ್ತಿತರ ಅಧ್ಯಯನ ಸಂಬಂಧ ಇಂದು ನಡೆದ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಲಭ್ಯವಿರುವ ಸಂಪನ್ಮೂಲವನ್ನು ಕ್ರೋಢೀಕರಿಸಿ ಅಗತ್ಯ ಸೇವೆಗಳನ್ನು ಕಲ್ಪಿಸಬೇಕು ಎಂದು ಸಲಹೆ ನೀಡಿದರು. ಸ್ಥಳೀಯ ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಅಭಿವೃದ್ಧಿಯತ್ತ ಮುನ್ನಡೆಯಬೇಕು. ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಅತೀ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಆದಾಯ ತೆರಿಗೆ ಸಂಗ್ರಹ ಮೂಲ ಸೌಲಭ್ಯ ಸೌಕರ್ಯಕ್ಕೆ ಒತ್ತು ನೀಡುವುದು, ಕುಡಿಯುವ ನೀರು, ವಿದ್ಯುತ್ ಪೂರೈಕೆ,…
ವಿರಾಜಪೇಟೆ ಮೇ 5 NEWS DESK : ನಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಯಮ್ಮ ದೇಗುಲದ ವಾರ್ಷಿಕ ಕರಗ ಮಹೋತ್ಸವವು ಮೇ 6 ರಿಂದ ಆರಂಭವಾಗಲಿದೆ. ವಿರಾಜಪೇಟೆ ನಗರದ ಶಕ್ತಿ ದೇವತೆ ರಾಜ ಬೀದಿಯಾಗಿರುವ ತೆಲುಗರ ಬೀದಿಯಲ್ಲಿ ಸ್ಥಿತವಾಗಿರುವ ಶ್ರೀ ದಕ್ಷಿಣ ಮಾರಿಯಮ್ಮ ದೇವಾಲಯದ ವಾರ್ಷಿಕ ಕರಗ ಮಹೋತ್ಸವ ಮೇ.6 ರಿಂದ 10ರ ರಾತ್ರಿ ಕೊನೆಯಾಗಲಿದೆ. ಐದು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಉತ್ಸವದ ಆರಂಭ ಮೇ 6 ರಂದು ದೇವಿಯ ಕರಗ ಮೆರವಣಿಗೆಯೊಂದಿಗೆ ದೇವಾಲಯಕ್ಕೆ ಆಗಮನ, ರಾತ್ರಿ ದೇವಾಲಯದಲ್ಲಿ ಮಹಾಪೂಜೆ, ಪ್ರಸಾದ ವಿನಿಯೋಗ ನಡೆಯಲಿದೆ. ಮೇ 7 ರಂದು ರಾತ್ರಿ 7 ಗಂಟೆಗೆ ತಂಬಿಟ್ಟು ಆರತಿ ಸೇವೆ ಮತ್ತು ವಿಶೇಷ ಪೂಜೆ ಪ್ರಸಾದ ವಿನಿಯೋಗ, ಮೇ 8 ರಂದು ಮಧ್ಯಾಹ್ನ ಶ್ರೀ ದೇವಿಗೆ ವಿಶೇಷ ಅಲಂಕಾರ ಸೇವೆ, ಹರಿಕೆ ಸೇವೆಗಳು ಮತ್ತು ಮಾಹಾಪೂಜೆ, ಮಹಾ ಮಂಗಳಾರತಿ ನಂತರ ವಿಶೇಷ ಮಾಹಾ ಪ್ರಸಾದ ಜರುಗಲಿದೆ. ಮೇ 9 ರಂದು ರಾತ್ರಿ ದೇವಿಗೆ…
ಮಡಿಕೇರಿ ಮೇ 5 NEWS DESK : ಮಡಿಕೇರಿ 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್2 ಓಂಕಾರೇಶ್ವರ ಫೀಡರ್‍ನಲ್ಲಿ ಮೇ, 06 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗೃತಾ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಕನ್ನಂಡಬಾಣೆ, ಗೌಡಸಮಾಜ, ಜೂನಿಯರ್ ಕಾಲೇಜು ರಸ್ತೆ, ದಾಸವಾಳ ರಸ್ತೆ, ಗಣಪತಿ ಬೀದಿ, ಓಂಕಾರೇಶ್ವರ ದೇವಸ್ಥಾನ, ಓಂಕಾರೇಶ್ವರ ರಸ್ತೆ, ಬ್ರಾಹ್ಮಿನ್ಸ್ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ. ಸೋಮವೇಪೇಟೆ :: ಸೋಮವಾರಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಕೊಡ್ಲಿಪೇಟೆ ಶಾಖಾ ವ್ಯಾಪ್ತಿಯಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್2 ಕೊಡ್ಲಿಪೇಟೆ ಫೀಡರ್ ಮಾರ್ಗದಲ್ಲಿ ಮೇ, 06 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಅವರದಾಳು,…
ಮಡಿಕೇರಿ ಮೇ 5 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ( ಕಸಾಪ ) ವತಿಯಿಂದ ಮಡಿಕೇರಿ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಛೇರಿ ಆವರಣದಲ್ಲಿ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಕಸಾಪದ 111 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ “ಜನರಡೆಗೆ ಕನ್ನಡ ಸಾಹಿತ್ಯ ಪರಿಷತ್ತು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾಧ್ಯಕ್ಷರೂ ಆದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ , ಕನ್ನಡ ಭಾಷೆ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕಿದೆ. ಪತ್ರಿಕೆಗಳನ್ನು ಕೊಂಡು ಓದುವ, ಪುಸ್ತಕಗಳನ್ನು ಖರೀದಿಸುವ ಕಡೆಗೆ ಗಮನ ಹರಿಸಬೇಕು. ಆ ಮೂಲಕ ಕನ್ನಡ ಮತ್ತು ಕನ್ನಡ ಬರಹಗಾರರನ್ನು ಪ್ರೋತ್ಸಾಹಿಸಬೇಕಿದೆ ಎಂದರು. ಕನ್ನಡ ಭಾಷೆಯ ಅಸ್ಮಿತೆಯ ಪ್ರತೀಕವಾದ ನಾಡಿನ ಸರ್ಕಾರಿ ಕನ್ನಡ ಶಾಲೆಗಳನ್ನು ಮುಚ್ಚದಂತೆ ಅವುಗಳನ್ನು ಉಳಿಸಿ ಪುನಶ್ಚೇತನಗೊಳಿಸುವ ದಿಸೆಯಲ್ಲಿ ಜನಾಂದೋಲನ ನಡೆಸಲು ಶ್ರಮಿಸುವ ಅಗತ್ಯವಿದೆ. ಈ ದಿಸೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಕನ್ನಡ…






