ಲೇಖಕ: admin

ಮಡಿಕೇರಿ ಮೇ 5 NEWS DESK : ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಪ್ರಗತಿಯ ಯೋಜನೆಯ ವಿವರಗಳನ್ನು ಪರಿಶೀಲಿಸಲು ಕೇಂದ್ರ ಜಲಜೀವನ್ ನೀತಿ ಆಯೋಗದ DEMO ತಂಡದ ಪ್ರತಿನಿಧಿ ನಿತಿನ್ ಹಾಗೂ ಅವರ ನೇತೃತ್ವದ ತಂಡದವರು ಕೂಡುಮಂಗಳೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಯೋಜನೆಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಪಡೆದು ಪರಿಶೀಲನೆ ನಡೆಸಿದರು. ಕೂಡುಮಂಗಳೂರು ಗ್ರಾಮ ಪಂಚಾಯಿತಿಯಲ್ಲಿ ಸಮಗ್ರವಾಗಿ ಕಸ ವಿಲೇವಾರಿಯ ಬಗ್ಗೆ ಹಾಗೂ ಈ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಚರ್ಚಿಸಿದರು. ಅಲ್ಲದೆ ಗ್ರಾಮೀಣಾಭಿವೃದ್ಧಿ ಕುಡಿಯುವ ನೀರು ಸರಬರಾಜು ಯೋಜನೆ ಜಲಜೀವನ್ ಮಿಷನ್ ಯೋಜನೆಗೆ ಬಗ್ಗೆ ಕೇಂದ್ರ ನೀತಿ ಸಮಿತಿಯ ತಂಡದವರು ಅಧಿಕಾರಿಗಳಿಂದ, ಮತ್ತು ಗ್ರಾಮ ಪಂಚಾಯತಿ ಸದಸ್ಯರುಗಳಿಂದ ಯೋಜನೆಯು ಅನುಷ್ಠಾನದ ಬಗ್ಗೆ ಮಾಹಿತಿಯನ್ನು ಪಡೆದರು.ಅಲ್ಲದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡ್ ಮನೆಗಳಿಗೂ ನೀರು ಸರಬರಾಜು ಹಾಗೂ ಈ ಬಗ್ಗೆ…

Read More

ಮಡಿಕೇರಿ ಮೇ 5 NEWS DESK : ತಾಳತ್ತಮನೆಯ ನೇತಾಜಿ ಯುವಕ ಮಂಡಲ ಹಾಗೂ  ಹೊಟೇಲ್ ಆಕ್ಸಿರಿಚ್ ಸಂಯಕ್ತಾಶ್ರಯದಲ್ಲಿ  ಮೇ 10 ರಂದು ತಾಳತ್ತಮನೆಯಲ್ಲಿ “ಸೇನಾ ನೇಮಕಾತಿ”ಯ ಬಗ್ಗೆ ಅರಿವು ಕಾರ್ಯಾಗಾರ ನಡೆಯಲಿದೆ. ಅಂದು ಅಪರಾಹ್ನ 2.30 ಗಂಟೆಗೆ ತಾಳತ್ತಮನೆಯ ಹೊಟೇಲ್ ಆಕ್ಸಿರಿಚ್ ಸಭಾಂಗಣದಲ್ಲಿ ಭಾರತೀಯ ಸೇನೆಗೆ ನೇಮಕಾತಿ ಬಯಸುವ ಆಕಾಂಕ್ಷಿತ  15 ರಿಂದ 25 ವರ್ಷದ ಯುವಕ ಮತ್ತು ಯುವತಿಯರಿಗೆ ಕಾರ್ಯಾಗಾರ ನಡೆಯಲಿದ್ದು, ಸೇನೆಯಲ್ಲಿ “ಸೇನಾಧಿಕಾರಿ ಮತ್ತು ಅಗ್ನಿವೀರ್” ಹುದ್ದೆಗಳಿಗೆ ಆಯ್ಕೆಯಾಗಲು ಬೇಕಾದ ಉಪಯುಕ್ತ ಮಾಹಿತಿಗಳನ್ನು ನೀಡಲಾಗುವುದು.   ಸಂಪನ್ಮೂಲ  ವ್ಯಕ್ತಿಗಳಾಗಿ ಭಾರತೀಯ ನೌಕಾದಳದಲ್ಲಿ ಲೆಪ್ಟಿನೆಂಟ್ ಕಮಾಂಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯಂತ್ ಸುಬ್ಬಯ್ಯ, ಆಡಿಯೋ ವಿಶುವಲ್ ಪ್ರಾತ್ಯಕ್ಷಿಕೆ ಮುಖಾಂತರ ಮಾಹಿತಿ ನೀಡಲಿದ್ದಾರೆ. ಆಸಕ್ತ ಪ್ರೌಢ ಶಾಲೆ, ಕಾಲೇಜು ವಿದ್ಯಾರ್ಥಿಗಳು ಹಾಗೂ ಎನ್.ಸಿ.ಸಿ ಕೆಡೆಟ್‍ಗಳು ಕಾರ್ಯಾಗಾರದ ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9901677675, 9632007915,  7019716632, 9110862380 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಮೇ 5 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲವು ಮೇ 9 ರಿಂದ 11ರ ವರೆಗೆ ನಡೆಯಲಿದೆ.  ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನೆರವೇರಲಿದೆ.  ಮೇ 9 ರಂದು ಸಂಜೆ 6 ಗಂಟೆಗೆ ಆಚಾರ್ಯ ವರಣಂ, ಪುಣ್ಯಹ ಶುದ್ಧಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮಾರ್ಚನೆ ಹಾಗೂ ಪ್ರಸಾದ ವಿತರಣೆ ನೆರವೇರಲಿದೆ. ಮೇ 10 ರಂದು ಬೆಳಿಗ್ಗೆ 6 ಗಂಟೆಗೆ ಮಹಾಗಣಪತಿ ಹೋಮ, ನವಕ ಪಂಚಗವ್ಯ ಕಳಸ ಪೂಜೆ, ನವಕ ಪಂಚಗವ್ಯ ಕಳಸಾಭಿಷೇಕ, ಸರ್ವಾಲಂಕಾರ ಮಹಾಪೂಜೆ, ಶ್ರೀ ಪಾಷಾಣಮೂರ್ತಿ ದೈವದ ಕಳಸ ಪೂಜೆ, ಅಲಂಕಾರ ಪೂಜೆ ಹಾಗೂ ಮಂಗಳಾರತಿ ನಡೆಯಲಿದೆ.  ::: ನಾಗದರ್ಶನ ::: ನಾಗ…

Read More

ಸುಂಟಿಕೊಪ್ಪ ಮೇ 5 NEWS DESK : ಸುಂಟಿಕೊಪ್ಪ ಸಮೀಪದ ಹರದೂರಿನಲ್ಲಿ ವಿಷ್ಣುಮೂರ್ತಿ ದೈವದ ಒತ್ತೆಕೋಲವು ಶ್ರದ್ಧಾಭಕ್ತಿಯಿಂದ ಜರುಗಿತು. ಗುಂಟುಕುಟ್ಟಿ ಸಮೀಪದ ಮುತ್ತಿನತೋಟದಲ್ಲಿರುವ ವಿಷ್ಣುಮೂರ್ತಿ ದೇವಾಲಯದಲ್ಲಿದ್ದ ಬಂಡರವನ್ನ ಹರದೂರಿನ ಆಮೆಮನೆ ಸುಬ್ಬಯ್ಯನವರ ಗದ್ದೆಗೆ ತಂದಿರಿಸಿ ಪೂಜೆ ಸಲ್ಲಿಸಲಾಯಿತು. ಬಳಿಕ ಮೇಲೇರಿಗೆ ಅಗ್ನಿ ಸ್ಪರ್ಷ ಮಾಡಲಾಯಿತು. ವಿಷ್ಣುಮೂರ್ತಿ ದೈವದ ಒತ್ತೆಕೋಲದ ಅಂಗವಾಗಿ ಕುಲ್ಚಾಟ್ ದೈವದ ಕೋಲ, ವಿಷ್ಣು ಮೂರ್ತಿ ಅಗ್ನಿ ಪ್ರವೇಶ, ಗುಳಿಗ ಕೋಲ ಜೊತೆಗೆ ಹರಕೆ ಮತ್ತು ಪ್ರಸಾದ ವಿತರಣೆ ನೆರವೇರಿತು. ಮೂರು ವರ್ಷಗಳಿಗೊಮ್ಮೆ ನಡೆಯುವ  ಒತ್ತೆ ಕೋಲಕ್ಕೆ ಹರದೂರು, ಗರಂಗಂದೂರು, ಮಾದಪುರ, ಪನ್ಯ, ಸುಂಟಿಕೊಪ್ಪ ಸೇರಿದಂತೆ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Read More

ಮಡಿಕೇರಿ ಮೇ 5 NEWS DESK : ಇತ್ತೀಚೆಗೆ ನಡೆದ ಮಡಿಕೇರಿ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಆಯ್ಕೆ ಸಂದರ್ಭ ನನ್ನ ಪತ್ನಿ ಉಷಾ ಅವರಿಗೆ ಅನ್ಯಾಯವಾಗಿದ್ದು, ಅಧ್ಯಕ್ಷ ಸ್ಥಾನ ತಪ್ಪಲು ಬಿಜೆಪಿಯ ಮಾಜಿ ಶಾಸಕರೊಬ್ಬರು ಕಾರಣ ಎಂದು ನಗರಸಭಾ ಸದಸ್ಯೆ ಉಷಾ ಅವರ ಪತಿ ಎಂ.ಕೆ.ಕಾವೇರಪ್ಪ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನನ್ನ ಪತ್ನಿ ಉಷಾ ಅವರಿಗೆ ಅಧ್ಯಕ್ಷ ಸ್ಥಾನ ಸಿಗದಂತೆ ಷಡ್ಯಂತ್ರ ರೂಪಿಸಿ ಅನ್ಯಾಯ ಮಾಡಲಾಗಿದೆ. ಇದು ನನ್ನ ಪತ್ನಿಗೆ ಮಾತ್ರವಲ್ಲ ಭಾರತೀಯ ಜನತಾ ಪಾರ್ಟಿಯ ಸಿದ್ಧಾಂತಕ್ಕೆ ಮಾಡಿದ ಅನ್ಯಾಯವಾಗಿದೆ ಎಂದು ಆರೋಪಿಸಿದರು. ಉಷಾ ಅವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ, ಆದರೆ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯ ಆಂತರಿಕ ಚುನಾವಣೆಯಲ್ಲಿ ಉಷಾ ಅವರನ್ನು ಕೂಡ ಕಣದಲ್ಲಿರುವಂತೆ ನೋಡಿಕೊಳ್ಳಲಾಯಿತು. ಪಕ್ಷದ ವರಿಷ್ಠರಿಗೆ ಗೌರವ ನೀಡಿ ಉಷಾ ಅವರು ನಗರಸಭೆಯ ಅಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿಯ ಆಂತರಿಕ ಚುನಾವಣೆಯಲ್ಲಿ ಸ್ಪರ್ಧಿಸಿದರು. ಸ್ಪರ್ಧೆಯಲ್ಲಿ ಉಷಾ ಅವರು ಅತ್ಯಧಿಕ ಮತಗಳನ್ನು…

Read More

ಮಡಿಕೇರಿ ಮೇ 5 NEWS DESK : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಮೇ 6 ರಂದು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ. ಅಂದು ಬೆಳಿಗ್ಗೆ 6 ಗಂಟೆಗೆ ದೇವಾಲಯದಲ್ಲಿ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. 6.30 ಗಂಟೆಗೆ ಗಣಪತಿ ಹೋಮ, 7.30ಕ್ಕೆ ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥ ಸ್ನಾನ ನಡೆಯಲಿದೆ. ಬೆಳಿಗ್ಗೆ 9.20ಕ್ಕೆ ಕಳಶ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾರತಿ ನಡೆಯಲಿದೆ. 11.45ಕ್ಕೆ ದೇವಿಯ ರಥೋತ್ಸವ ದೇವಾಲಯದ ಆವರಣದ ಸುತ್ತ ಸಾಗಲಿದೆ. ನಂತರ ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಅನ್ನದಾನ, 12.30ಕ್ಕೆ ತಾಯಿಯ ದರ್ಶನ, ಸಂಜೆ 6 ಗಂಟೆಗೆ ದೇವಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ ಜರುಗಲಿದೆ. ರಾತ್ರಿ 9 ಗಂಟೆಗೆ ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ ವಿವಿಧ…

Read More

ನಾಪೋಕ್ಲು ಮೇ 5 NEWS DESK : ಮೇಯಲು ಬಿಟ್ಟ ಹಸುವೊಂದು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ನಾಪೋಕ್ಲುವಿನಲ್ಲಿ ನಡೆದಿದೆ. ಪಟ್ಟಣದ ನಿವಾಸಿ ಟಿ.ಎಂ.ಶ್ಯಾಮ್ ಎಂಬವರು ತಮ್ಮ ಗಬ್ಬದ ಹಸುವನ್ನು ಗದ್ದೆಯಲ್ಲಿ ಮೇಯಲು ಬಿಟ್ಟಿದ್ದರು. ಈ ಸಂದರ್ಭ ಗದ್ದೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಮೃತಪಟ್ಟಿದೆ ಎನ್ನಲಾಗಿದೆ. ಮಳೆ ಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಸಂಬಂಧಿಸಿದ (ಚೆಸ್ಕಾಂ) ಇಲಾಖೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಪುತ್ರ ಸಂದೇಶ್ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ನಿವಾಸಿ ಕಾಫಿ ಬೆಳೆಗಾರ ಕಂಗಂಡ ಜಾಲಿ ಪೂವಪ್ಪ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಪಶುವೈದ್ಯೆ ಶಿಲ್ಪ ಹಸುವನ್ನು ಪರಿಶೀಲಿಸಿ ಸಾವಿನ ಕಾರಣವನ್ನು ದೃಢಪಡಿಸಿದರು. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಮೇ 5 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗೌಡ ಜನಾಂಗದ ನಡುವಿನ 3ನೇ ಆವೃತ್ತಿಯ ಟಿ-20 ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ (ಜಿಪಿಎಸ್) ಬಿಳಿಗೇರಿ ಪ್ಲಾಂಟರ್ಸ್ ಕ್ಲಬ್ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ದಿ ಎಲೈಟ್ ಕ್ರಿಕೆಟ್ ಕ್ಲಬ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಏ.20 ರಂದು ಆರಂಭಗೊಂಡ ಕ್ರಿಕೆಟ್ ಪಂದ್ಯಾವಳಿಯಲ್ಲಿ 10 ಫ್ರಾಂಚೈಸಿ ತಂಡಗಳು ಭಾಗವಹಿಸಿದ್ದವು. ಈ ಪೈಕಿ ಬಿಳಿಗೇರಿ ಪ್ಲಾಂಟರ್ಸ್ ಕ್ಲಬ್ ಹಾಗೂ ದಿ ಎಲೈಟ್ ಕ್ಲಬ್ ಫೈನಲ್ ಪಂದ್ಯಾವಳಿಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಯಿತು. ಅಂತಿಮ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಿ ಎಲೈಟ್ ಕ್ರಿಕೆಟ್ ಕ್ಲಬ್ ನಿಗದಿತ 20 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 142 ರನ್ ಕಲೆ ಹಾಕಿತು. ಆಟಗಾರ ಅಂಜನ್ 56 ಎಸೆತಗಳಲ್ಲಿ ಆಕರ್ಷಕ ಅರ್ಧ ಶತಕ ಸಿಡಿಸಿದರು. ಈ ಗುರಿಯನ್ನು ಬೆನ್ನತ್ತಿದ್ದ ಬಿಳಿಗೇರಿ ಪ್ಲಾಂಟರ್ಸ್ ಕ್ಲಬ್ 17 ಓವರ್…

Read More

ಮೈಸೂರು ಮೇ 5 NEWS DESK : ಮೈಸೂರು ಕೊಡವ ಸ್ಟುಡೆಂಟ್ ಅಸೋಸಿಯೇಷನ್ ವತಿಯಿಂದ ಆಯೋಜನೆಗೊಂಡಿದ್ದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ಶಾಸಕ ಎ.ಎಸ್ ಪೊನ್ನಣ್ಣ ಅವರ ಪತ್ನಿ ಕಾಂಚನ್ ಪೊನ್ನಣ್ಣ  ಭಾಗವಹಿಸಿ ವಿಜೇತರಿಗೆ ಪ್ರಶಸ್ತಿ ವಿತರಣೆ ಮಾಡಿದರು. ಮೈಸೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿನ ಕೊಡವ ವಿದ್ಯಾರ್ಥಿಗಳ ಒಕ್ಕೂಟದ ಈ ಪಂದ್ಯಾವಳಿಯ ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದ ಕಾಂಚನ್ ಪೊನ್ನಣ್ಣ, ಸಮುದಾಯದ ಯುವಕ-ಯುವತಿಯರ ಕ್ರೀಡಾ ಪ್ರತಿಭೆ ಮುನ್ನಲೆಗೆ ತರಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಲಿದೆ ಎಂದು ಬಣ್ಣಿಸಿದರು. ಈ ಸಂದರ್ಭದಲ್ಲಿ, ಪ್ರಶಸ್ತಿ ಪ್ರದಾನ ವೇದಿಕೆಯಲ್ಲಿ ಆಹ್ವಾನಿತ ಗಣ್ಯರು ಉಪಸ್ಥಿತರಿದ್ದರು.

Read More

ನಾಪೋಕ್ಲು ಮೇ 5 NEWS DESK : ಪಾಡಿ ಇಗ್ಗುತ್ತಪ್ಪ ದೇವಾಲಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಭಕ್ತ ಜನಸಂಘವನ್ನು ಟ್ರಸ್ಟ್ ಎಂದು ಬದಲಾಯಿಸುವಂತೆ ಶ್ರೀ ಇಗ್ಗುತ್ತಪ್ಪ ಭಕ್ತ ಜನ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸಂಘದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ವಿವಿಧ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕ್ಷೇತ್ರ ವಾಸಕ್ಕೆ ಕಟ್ಟಡ ನಿರ್ಮಿಸುವ ಬಗ್ಗೆ ಹಾಗೂ ಇಗ್ಗು ತಪ್ಪದೇವರ ಮೂಲಸ್ಥಾನವಾದ ಮಲ್ಮ ಬೆಟ್ಟದಲ್ಲಿ ಕಾಡುಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಿ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸೋಲಾರ್ ತಂತಿ ಬೇಲಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಚರ್ಚಿಸಲಾಯಿತು. ದೇವಾಲಯದಲ್ಲಿ ನಾಮಕರಣ, ಲಗ್ನಪತ್ರಿಕೆ ಮಾಡಿಸಲು ಆಸಕ್ತಿ ಹೊಂದಿದ ಭಕ್ತರು ಹೆಚ್ಚಿನ ಆಡಂಬರ ಮಾಡದೆ ದೇವಸ್ಥಾನದ ಕಟ್ಟು ಪಾಡುಗಳಿಗೆ ಒಳಪಟ್ಟು ಸರಳತೆಗೆ ಒತ್ತುನೀಡಿ ಆಚರಣೆ ಮಾಡುವಂತೆ ಸಭೆಯಲ್ಲಿ ಚರ್ಚಿಸಲಾಯಿತು. ವೇದಿಕೆಯಲ್ಲಿ ಆಡಳಿತ ಮಂಡಳಿ ಪದಾಧಿಕಾರಿಗಳಾದ, ಕಲ್ಯಾಣಂಡ ಟಿ.ಅಪ್ಪಣ್ಣ, ಬಟ್ಟೀರ ಚೋಂದಮ್ಮ ಮೇದಪ್ಪ, ಅಂಜಪರವಂಡ ಎ.ಕುಶಾಲಪ್ಪ, ಪರದಂಡ ಕೆ.ನಾಣಯ್ಯ, ಅನ್ನಾಡಿಯಂಡ ಪಿ.ದಿಲೀಪ್, ಅಲ್ಲಾರಂಡ ಎಸ್.ಅಯ್ಯಪ್ಪ, ಕುಲ್ಲೇಟಿರ…

Read More