ಮಡಿಕೇರಿ NEWS DESK ಜೂ.5 : ಖ್ಯಾತ ನಟ ಅನಿರುದ್ಧ್ ನಿರ್ಮಾಣದ, ಸಿಂಹಾದ್ರಿ ಪ್ರೊಡಕ್ಷನ್ಸ್ ನ, ಕೊಡಗಿನ ಪತ್ರಕರ್ತ ಪ್ರಶಾಂತ್ ಟಿ.ಆರ್ ನಿರ್ದೇಶನದ ‘ಅವಳ ಕಣ್ಣಲಿ’ ಕನ್ನಡ ಸಿನಿಮಾದ ಚಿತ್ರೀಕರಣ ಇಂದು ನಗರದಲ್ಲಿ ಆರಂಭಗೊಂಡಿತು. ನಗರದ ‘ಶಕ್ತಿ’ ದಿನಪತ್ರಿಕೆಯ ಕಚೇರಿ ಆವರಣದಲ್ಲಿ ಶಕ್ತಿಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಅವರು ಕ್ಲಾಪ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭ ಮಾತನಾಡಿದ ನಿರ್ದೇಶಕ ಪ್ರಶಾಂತ್ ಟಿ.ಆರ್, ಮಡಿಕೇರಿಯ ಬರಹಗಾರ್ತಿ ಸುನಿತಾ ಟಿ.ಆರ್ ಅವರು ರಚಿಸಿರುವ ‘ಸೌಪರ್ಣಿಕ’ ಕಾದಂಬರಿ ಆಧಾರಿತ ಚಿತ್ರ ಇದಾಗಿದೆ. ಮಹಿಳಾ ಪ್ರಧಾನ ಕಥೆಯನ್ನು ಹೊಂದಿರುವ ಚಿತ್ರದ ಚಿತ್ರೀಕರಣ ಕೊಡಗು, ಮೈಸೂರು ಮತ್ತು ಮಂಗಳೂರಿನಲ್ಲಿ ನಡೆಯಲಿದೆ ಎಂದರು. ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಅವರು ಚಿತ್ರದಲ್ಲಿ ಸಂಪಾದಕನ ಪಾತ್ರ ನಿರ್ವಹಿಸಿದ್ದು, ಇಂದು ಅವರ ಪಾತ್ರವನ್ನು ಚಿತ್ರೀಕರಿಸಲಾಯಿತು. ಶಕ್ತಿಯ ಉಪ ಸಂಪಾದಕರುಗಳಾದ ಕಾಯಪಂಡ ಶಶಿ ಸೋಮಯ್ಯ, ಜಿ.ಆರ್.ಪ್ರಜ್ವಲ್, ಹಿರಿಯ ಪತ್ರಕರ್ತ ಶ್ರೀಧರ್ ಹೂವಲ್ಲಿ, ನ್ಯೂಸ್ ಡೆಸ್ಕ್ ಸಂಪಾದಕ ಎಸ್.ಕೆ.ಲಕ್ಷ್ಮೀಶ್ ಮತ್ತಿತರ ಪ್ರಮುಖರು…
ಲೇಖಕ: admin
ಮಡಿಕೇರಿ NEWS DESK ಜೂ.5 : ಪೊನ್ನಂಪೇಟೆಯ ಕೂರ್ಗ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2021–2025 ಬ್ಯಾಚ್ ನ ಪದವಿ ಪ್ರದಾನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಬೆಂಗಳೂರಿನ ಆರ್‌ವಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಎನ್.ಸುಬ್ರಹ್ಮಣ್ಯ ಅವರು ಹೊಸ ತಂತ್ರಜ್ಞಾನದೊಂದಿಗೆ ನವೀಕರಿಸಿಕೊಳ್ಳುವುದು ಹಾಗೂ ತಮ್ಮ ಕೌಶಲ್ಯವನ್ನು ಸದಾ ಮೆರುಗು ಪಡಿಸಿಕೊಳ್ಳುವುದು ಅತ್ಯಗತ್ಯ. ಜೊತೆಯಲ್ಲಿ ಪಾಲಕರ ತ್ಯಾಗವನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡವ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಸಿ.ಪಿ.ಬೆಳ್ಳಿಯಪ್ಪ ಹಾಗೂ ನಿರ್ದೇಶಕ ಡಾ.ಪೊನ್ನಮ್ಮ ಮಾಚಯ್ಯ ಅವರುಗಳು ವಿದ್ಯಾರ್ಥಿಗಳು ಜೀವನಪೂರ್ತಿ ಕಲಿಕೆಯ ಮಹತ್ವವನ್ನು ಅರಿತುಕೊಳ್ಳಬೇಕು ಮತ್ತು ಬದಲಾಗುತ್ತಿರುವ ಜಗತ್ತಿಗೆ ತಕ್ಕಂತೆ ಬದುಕನ್ನು ಬದಲಾಯಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕೊಡವ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಕೆ.ಎ.ಚಿಣ್ಣಪ್ಪ, ಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಹಾಗೂ ಕೌಶಲ್ಯ ನೀಡುತ್ತಿರುವುದನ್ನು ಪ್ರಶಂಸಿಸಿದರು. ಮಹಾವಿದ್ಯಾಲಯವು ತನ್ನ ಶ್ರೇಷ್ಠತೆಯನ್ನೆರೆಯಿತು,…
ಮಡಿಕೇರಿ NEWS DESK ಜೂ.5 : ಕಳೆದ ಒಂದು ವರ್ಷದಲ್ಲಿ ಕೊಡಗು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಮತ್ತು ಸಮಸ್ಯೆಗಳಿಗೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ನಿರೀಕ್ಷೆಗೂ ಮೀರಿ ಸ್ಪಂದಿಸಿದ್ದಾರೆ ಎಂದು ವಿರಾಜಪೇಟೆ ಮಂಡಲ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಶ್ಲಾಘಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 11 ವರ್ಷಗಳನ್ನು ಪೂರೈಸಿದೆ. ಯದುವೀರ್ ಒಡೆಯರ್ ಅವರು ಸಂಸದರಾಗಿ ಒಂದು ವರ್ಷ ಪೂರೈಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಸಂಸದರು ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸಂಸದ ಯದುವೀರ್ ಅವರು ಕೊಡಗಿನ ಬಗ್ಗೆ ಕಾಳಜಿ ವಹಿಸದೆ ಮೈಸೂರಿಗೆ ಸೀಮಿತವಾಗಿದ್ದಾರೆ ಎಂದು ಕೆಲವರು ನೀಡಿರುವ ಹೇಳಿಕೆ ಖಂಡನೀಯ. ಮುಂಬರುವ ಜಿ.ಪಂ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಹಾಗೂ ಪತ್ರಕರ್ತರ ಸೋಗಿನ ರಾಜಕಾರಣಿಗಳು ಕಾಂಗ್ರೆಸ್ ನಾಯಕರನ್ನು ಮೆಚ್ಚಿಸುವುದಕ್ಕಾಗಿ ಸಂಸದರ ಕುರಿತು ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಂಸದರು ಕೊಡಗು…
ಮಡಿಕೇರಿ ಜೂ.4 NEWS DESK : ಪಿಂಚಣಿ ಅದಾಲತ್‍ನ ಮುಂದಿನ ಸಭೆಯು ಜೂ.9 ರಂದು ಮಧ್ಯಾಹ್ನ 12 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆ ಅಶೋಕ್ ಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಪೋಸ್ಟಲ್ ಪಿಂಚಣಿ ಸಂಬಂಧಿಸಿದ ಎಲ್ಲಾ ತರಹದ ಅಹವಾಲುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ಅಹವಾಲುಗಳಿದ್ದಲ್ಲಿ ‘ಪಿಂಚಣಿ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಜೂನ್, 06 ರೊಳಗೆ ತಲುಪುವಂತೆ ಕಳುಹಿಸಲು ಕೋರಿದೆ. ನಂತರ ಜೂ.9 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಜೂ.4 NEWS DESK : ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ನೀರಾವರಿ, ಕೈಗಾರಿಕೆ, ವಿದ್ಯುತ್, ಆರ್ಥಿಕ, ಹೀಗೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದರು ಎಂದು ಸಾಹಿತಿ ಹಾಗೂ ಆಕಾಶವಾಣಿ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಸ್ಮರಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಬುಧವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ‘ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141 ನೇ ಜನ್ಮದಿನೋತ್ಸವ ಹಾಗೂ ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಶ್ರೇಷ್ಠ ರಾಜರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಮೇಲ್ಪಂಕ್ತಿಯಿಂದ ಕೂಡಿತ್ತು, ಆಡಳಿತದಲ್ಲಿ ಜನರು ಪಾಲ್ಗೊಳ್ಳುವಂತೆ ಮಾಡಿದ್ದರು ಎಂದು ನುಡಿದರು.…
ಮಡಿಕೇರಿ ಜೂ.4 NEWS DESK : ವಿರಾಜಪೇಟೆ ಹೋಬಳಿಯ ಆರ್ಜಿ ಗ್ರಾಮದ ಮನೆ ಹಾನಿ ಪ್ರದೇಶಕ್ಕೆ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಡಿಕೇರಿ ಜೂ.4 NEWS DESK : ಕೊಡಗು ಪ್ರೆಸ್ ಕ್ಲಬ್ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜೂ.8 ರಂದು ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ ಎಂದು ಕೊಡಗು ಪ್ರೆಸ್ ಕ್ಲಬ್‍ನ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ನಂತರ 11.30 ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಅಂದಿನ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ(ಪರೀಕ್ಷಾಂಗ) ಮೇಚಿರ ರವಿಶಂಕರ್ ನಾಣಯ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್.ಸವಿತಾ ರೈ, ಮಡಿಕೇರಿ ತಾಲೂಕಿನ…
ಮಡಿಕೇರಿ ಜೂ.4 NEWS DESK : ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಹೆಚ್ಚು ಅಂಕ ಗಳಿಸಿದರೆ ಮಾತ್ರ ಸಾಲದು, ಉತ್ತಮ ಸಂಸ್ಕೃತಿಯನ್ನು ಕೂಡ ಮೈಗೂಡಿಸಿಕೊಳ್ಳಬೇಕು ಎಂದು ಹಿಂದೂ ಮಲಯಾಳಿ ಸಂಘದ ಸ್ಥಾಪಕಾಧ್ಯಕ್ಷ ಕೆ.ಎಸ್.ರಮೇಶ್ ಅವರು ಕರೆ ನೀಡಿದ್ದಾರೆ. ಮಡಿಕೇರಿ ಹಿಂದೂ ಮಲಯಾಳಿ ಸಂಘದ ವತಿಯಿಂದ ನಗರದಲ್ಲಿ ನಡೆದ 1 ರಿಂದ 10ನೇ ತರಗತಿಯವರೆಗಿನ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಣ ಎಲ್ಲರಿಗೂ ಅಗತ್ಯವಿದೆ, ಶಿಕ್ಷಣದೊಂದಿಗೆ ಮಕ್ಕಳು ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳಿಗೆ 10ನೇ ತರಗತಿಯಿಂದಲೇ ಮನೆ ಕೆಲಸದಿಂದ ಆರಂಭಗೊಂಡು ಎಲ್ಲಾ ಚಟುವಟಿಕೆಗಳನ್ನು ಮನವರಿಕೆ ಮಾಡಿಕೊಡಬೇಕು. ದೈಹಿಕ ಮತ್ತು ಮಾನಸಿಕವಾಗಿ ವಿಕಸನ ಹೊಂದಲು ಮಾರ್ಗದರ್ಶನ ಮಾಡಬೇಕೆಂದು ಕೆ.ಎಸ್.ರಮೇಶ್ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ವಿ.ಧರ್ಮೇಂದ್ರ ಅವರು ಪೋಷಕರು ತಮ್ಮ ಆಸೆ ಆಕಾಂಕ್ಷೆಗಳನ್ನು ಮನವರಿಕೆ ಮಾಡುವ ಭರದಲ್ಲಿ ಮಕ್ಕಳಿಗೆ ಮಾನಸಿಕ ಒತ್ತಡ…
ಬೆಂಗಳೂರು ಜೂ.4 NEWS DESK : ಮೊದಲ ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಬೆಂಗಳೂರಿಗೆ ಆಗಮಿಸಿದ ಬೆಂಗಳೂರು ರಾಯಲ್ ಚಾಲೆಂಜರ್ಸ್ (RCB) ತಂಡವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸರ್ಕಾರದ ಪರವಾಗಿ ಸ್ವಾಗತಿಸಿದರು. ಆರ್‌ಸಿಬಿ ತಂಡಕ್ಕೆ ರಾಜ್ಯ ಸರ್ಕಾರ ಇಂದು ವಿಧಾಸೌಧದ ಮುಂದೆ ಭವ್ಯವಾದ ಅಭಿನಂದನಾ ಸಮಾರಂಭ ಆಯೋಜಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರು ಮತ್ತು ಶಾಸಕರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಜತ್ ಪಟಿದಾರ್ ನೇತೃತ್ವದ ತಂಡವನ್ನು ಸನ್ಮಾನಿಸಲಿದ್ದಾರೆ. ಐಪಿಎಲ್ ಕಪ್ ಜಯಿಸಿ ತವರಿಗೆ ಮರಳಿರುವ RCB ತಂಡಕ್ಕೆ ಬೆಂಗಳೂರಿನಲ್ಲಿ ಅಭಿಮಾನಿಗಳಿಂದಲೂ ಅದ್ದೂರಿ ಸ್ವಾಗತ ದೊರೆತಿದೆ.
ಮಡಿಕೇರಿ ಜೂ.4 NEWS DESK : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ, ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ, ಹೀಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್‍ಸೈಟ್ ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ www.kaad.karnataka.gov.in, ಸವಿತಾ ಸಮಾಜ ಅಭಿವೃದ್ಧಿ ನಿಗಮ www.kssd.karnataka.gov.in, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ www.dbcdc.karnataka.gov.in, ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ https://kvldcl.karnataka.gov.in, ಕರ್ನಾಟಕ ಮಡಿವಾಳ…






