ನವದೆಹಲಿ ಜೂ.24 NEWS DESK : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ಸಂದರ್ಭ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಜೇವರ್ಗಿ ಶಾಸಕರು ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಬಾಲ ಭವನ ಸೊಸೈಟಿ ಅಧ್ಯಕ್ಷ ಬಿ.ಆರ್.ನಾಯ್ಡು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಲೇಖಕ: admin
ನವದೆಹಲಿ ಜೂ.24 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ಅನುಮೋದನೆಗೆ ಬಾಕಿ ಇರುವ ವಿಧೇಯಕಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈ ವೇಳೆ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಮೈಸೂರು ಪೇಟ ಹಾಗೂ ಶ್ರೀಗಂಧದ ಸ್ಮರಣಿಕೆ ನೀಡಿ ಗೌರವಿಸಿದರು. ಸಚಿವರಾದ ಕೆ.ಜೆ.ಜಾರ್ಜ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿರಜನೀಶ್ ಉಪಸ್ಥಿತರಿದ್ದರು.
ಮಡಿಕೇರಿ ಜೂ.24 NEWS DESK : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವತಿಯಿಂದ ಜೂನ್, 28 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ಕುಶಾಲನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ‘ಸಿಇಟಿ’ ಸೀಟು ಹಂಚಿಕೆ ಕುರಿತು ಮಾರ್ಗದರ್ಶನ (ನ್ಯೂ ಸೀಟ್ ಸೆಲೆಕ್ಷನ್ ಪ್ರೋಸೆಸ್) ಕಾರ್ಯಾಗಾರ ನಡೆಯಲಿದೆ. ಆದ್ದರಿಂದ ಎಲ್ಲಾ ಯುಜಿ ಸಿಇಟಿ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಹಾಜರಾಗಿ ಸೀಟು ಹಂಚಿಕೆಯ ಮಾರ್ಗದರ್ಶನದ ಕಾರ್ಯಗಾರ ಸದುಪಯೋಗ ಪಡೆಯಲು ಕೋರಿದೆ. ಜಿಲ್ಲೆಯ ಮತ್ತು ನೆರೆ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ವಿವಿಧ ಕಾಲೇಜುಗಳಲ್ಲಿ ಪಿಯುಸಿ, ವಿಜ್ಞಾನ ವಿಭಾಗದಲ್ಲಿ ಅಭ್ಯಾಸ ಮಾಡಿದ್ದು, ಸಿಇಟಿ ಪರೀಕ್ಷೆ ಬರೆದಿರುವ ತಮ್ಮ ಕಾಲೇಜಿನ ವಿದ್ಯಾರ್ಥಿಗಳ ಗಮನಕ್ಕೆ ತರಲು ಪಿಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಸಹಕರಿಸುವಂತೆ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಕೆ.ಐ.ಪರಶಿವಮೂರ್ತಿ ತಿಳಿಸಿದ್ದಾರೆ.
ಮಡಿಕೇರಿ ಜೂ.24 NEWS DESK : 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಜೂ.27 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.
ಮಡಿಕೇರಿ ಜೂ.24 NEWS DESK : ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ(ಆತ್ಮ) ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ 2025-26 ನೇ ಸಾಲಿನ ಸೀಮಿತ ಅವಧಿಗೆ ವಿರಾಜಪೇಟೆ ತಾಲ್ಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಎಂಎಸ್ಸಿ(ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಅರಣ್ಯ, ರೇಷ್ಮೆ) ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಟ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂಎಸ್ ಆಫೀಸ್‍ನಲ್ಲಿ ಪರಿಣತಿ ಹೊಂದಿರಬೇಕು. ಗರಿಷ್ಠ 45 ವರ್ಷದೊಳಗಿರಬೇಕು. ಮಾಸಿಕ ರೂ.30 ಸಾವಿರ ಗೌರವ ಧನ ನೀಡಲಾಗುವುದು. ಈ ಹುದ್ದೆಗೆ ಅರ್ಹರಿರುವ ಆಭ್ಯರ್ಥಿಗಳು ಜುಲೈ, 05 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ತಿಳಿಸಿದೆ, ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಆತ್ಮ ವಿಭಾಗ, ಕೊಡಗು…
ಮಡಿಕೇರಿ ಜೂ.24 NEWS DESK : ಕೇಂದ್ರ ಸರ್ಕಾರದಿಂದ ‘ಮಿಷನ್ ಶಕ್ತಿ’ ಯೋಜನೆಯಡಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೊಡಗು ಜಿಲ್ಲೆ ಇವರ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿರುವ “ಜಿಲ್ಲಾ ಮಹಿಳಾ ಸಬಲೀಕರಣ ಘಟಕ” ಹಾಗೂ “ಸಖಿ ಒನ್ ಸ್ಟಾಫ್ ಸೆಂಟರ್” ನಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಖಾಲಿ ಇರುವ ಹುದ್ದೆಗಳಿಗೆ ವಿದ್ಯಾರ್ಹತೆ ನಿಗದಿಪಡಿಸಿ ಅರ್ಹ ಅಭ್ಯರ್ಥಿಗಳಿಂದ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ಡಿಇಒ ಮತ್ತು ಪ್ರೋಗ್ರಾಮ್ ಅಸಿಸ್ಟೆಂಟ್ ಫಾರ್ ಪಿಎಂಎಂವಿವೈ (1 ಹುದ್ದೆ), ಐಟಿ/ಕಂಪ್ಯೂಟರ್ ಜ್ಞಾನ ಹೊಂದಿರಬೇಕು. 3 ವರ್ಷದ ಡಾಟಾ ಮ್ಯಾನೇಜ್‍ಮೆಂಟ್, ಟೈಪಿಂಗ್ ತಿಳಿದಿರಬೇಕು. ಸ್ವೀಪರ್/ಗಾರ್ಡ್ ಫಾರ್ ಸಖಿ ಒನ್ ಸ್ಟಾಪ್ ಸೆಂಟರ್(1 ಹುದ್ದೆ) ಮಡಿಕೇರಿ 24/7(ಹಗಲು ಮತ್ತು ರಾತ್ರಿ ಸಿಪ್ಟ್), ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಹೊಂದಿರಬೇಕು. 2 ವರ್ಷದ ಅನುಭವ ಹೊಂದಿರಬೇಕು. ಪಾರಾಲೀಗಲ್ ಪರ್ಸನಲ್/ಲಾಯರ್(1 ಹುದ್ದೆ) ಕಾನೂನು ಪದವಿ ಪಡೆದಿರಬೇಕು(2-3 ವರ್ಷದ ಅನುಭವ). ಅರ್ಜಿ ಸಲ್ಲಿಸಲು ಜುಲೈ, 07 ಕೊನೆಯ ದಿನವಾಗಿದೆ. ಸಂದರ್ಶನದ ದಿನಾಂಕ ನಂತರ ತಿಳಿಸಲಾಗುವುದು.…
ಮಡಿಕೇರಿ ಜೂ.24 NEWS DESK : ನಾಪೋಕ್ಲು ಹೋಬಳಿಯ ಕೊಳಕೇರಿ ಗ್ರಾಮದ ತಟ್ಟಂಡ ವಿಮಲಾ ಎಂಬುವವರ ವಾಸದ ಮನೆಯ ಮೇಲ್ಛಾವಣಿ ಗಾಳಿ ಮಳೆಗೆ ಹಾನಿಯಾಗಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮಲೆಕ್ಕಿಗರು, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಡಿಕೇರಿ ಜೂ.24 NEWS DESK : ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಗ್ರಾಮ ಸಭೆ ಪಂಚಾಯಿತಿ ಅಧ್ಯಕ್ದರಾದ ಚೆಟ್ಟಡ್ಕ ಎಲ್. ವಿಶ್ವ ಅವರ ಅಧ್ಯಕ್ಷತೆಯಲ್ಲಿ ಹೊಸಪಟ್ಟಣದ ಸಮುದಾಯ ಭವನದಲ್ಲಿ ನಡೆಯಿತು. ಸಭೆಯಲ್ಲಿ ಉಪಸ್ಥಿತರಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖೆಯಲ್ಲಿನ ವಿಚಾರಗಳು ಹಾಗೂ ಸಾರ್ವಜನಿಕರಿಗೆ ದೊರಕುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಹೊಸಪಟ್ಟಣ, ವಿರೂಪಾಕ್ಷ ಪುರ ವ್ಯಾಪ್ತಿಯಲ್ಲಿ ಹುಲಿಗಳೆರಡು ಕಾಣಿಸಿಕೊಂಡು ಕಾಡಂಚಿನ ನಿವಾಸಿಗಳಲ್ಲಿ ಆತಂಕ ಮೂಡಿಸಿದ್ದು ಈ ಬಗ್ಗೆ ಅರಣ್ಯಾಧಿಕಾರಿಗಳು ನಿಗಾವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ಜೀವಹಾನಿ ಆಗದಂತೆ ತುರ್ತು ಕ್ರಮ ವಹಿಸುವಂತೆ ಗ್ರಾ.ಪಂ ಸದಸ್ಯ ಆರ್.ಕೆ.ಚಂದ್ರು ಒತ್ತಾಯಿಸಿದರು. ದಾಸವಾಳ ಗ್ರಾಮದಲ್ಲಿ ಕಾಡಾನೆ ಹಾವಳಿಗೆ ಅಳವಡಿಸಿರುವ ರೈಲ್ವೆ ಬ್ಯಾರಿಕೇಡ್ ಹಾಳಾಗಿದ್ದು, ಸರಿಪಡಿಸಬೇಕೆಂದು ಗ್ರಾಮಸ್ಥರಾದ ಸಚಿನ್ ಆಗ್ರಹಿಸಿದರು. ಮೀನುಕೊಲ್ಲಿ, ಆನೆಕಾಡು ಅರಣ್ಯ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದಲ್ಲಿ ಕಾಡು ಮರಗಳ ಹನನವಾಗುತ್ತಿದೆ. ಇಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಕುಮ್ಮಕ್ಕಿನಿಂದಲೇ ನಡೆಯುತ್ತಿದೆ ಎಂದು ಮಾವಾಜಿ ರವಿ ನೇರವಾಗಿ ಆರೋಪಿಸಿದರು. ಈ ಬಗ್ಗೆ ಜಂಟಿ ಕಾರ್ಯಾಚರಣೆ ಮಾಡಿ ಮರಗಳ್ಳರನ್ನು…
ಮಡಿಕೇರಿ ಜೂ.24 NEWS DESK : ವಿರಾಜಪೇಟೆ ಹೋಬಳಿ ಪೊದಕೋಟೆ ಗ್ರಾಮದಲ್ಲಿ ಮಳೆಯಿಂದ ಮನೆಗೆ ಹಾನಿಯಾಗಿದೆ. ಗ್ರಾಮದ ನಿವಾಸಿ ಹೆಚ್.ಕೆ.ಬಾಬು ವಾಸದ ಮನೆಯು ಮಳೆಯಿಂದಾಗಿ ಭಾಗಶಃ ಹಾನಿಯಾಗಿದ್ದು, ಕಂದಾಯ ಪರಿವೀಕ್ಷಕರು, ಸಹಾಯಕ ಅಭಿಯಂತರರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಸದಸ್ಯರೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
ವಿರಾಜಪೇಟೆ ಜೂ.24 NEWS DESK : ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ನೂತನ ಪ್ರಭಾರ ಉಪನಿರ್ದೇಶಕರಾಗಿ ತಾತಂಡ ಜ್ಯೋತಿ ಪ್ರಕಾಶ್ ನೇಮಕಗೊಂಡಿದ್ದಾರೆ. ಉಪನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುಳಾ ಅವರು ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಸೇವೆಯಲ್ಲಿ ಹಿರಿತನ ಹೊಂದಿರುವ, ಪ್ರಸ್ತುತ ವಿರಾಜಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿರುವ ಜ್ಯೋತಿ ಅವರು ಪ್ರಭಾರಿ ಉಪನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು.






