ಲೇಖಕ: admin

ಮಡಿಕೇರಿ ಮೇ 2 NEWS DESK : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಕೊಡಗು ಜಿಲ್ಲಾ ಕ್ರೈಸ್ತರ ಸೇವಾ ಸಂಘ ತೀವ್ರವಾಗಿ ಖಂಡಿಸಿದೆ. ನಗರದಲ್ಲಿ ನಡೆದ ಸಂಘದ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ 26 ಪ್ರವಾಸಿಗರನ್ನು ಅಮಾನುಷವಾಗಿ ಹತ್ಯೆ ಮಾಡಿದ ಭಯೋತ್ಪಾದಕರನ್ನು ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಒತ್ತಾಯಿಸಲಾಯಿತು ಮತ್ತು ಮೃತರ ಆತ್ಮಕ್ಕೆ ಶಾಂತಿಕೋರಿ ಸಂತಾಪ ಸೂಚಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಕ್ರೈಸ್ತರ ಸೇವಾ ಸಂಘದ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯೂ ಅವರು, ಭಯೋತ್ಪಾದನೆಯನ್ನು ಭಾರತದಿಂದ ನಿರ್ನಾಮ ಮಾಡಲು ದೇಶದ ಆಡಳಿತ ವ್ಯವಸ್ಥೆಗೆ ಸಂಪೂರ್ಣ ಬೆಂಬಲವನ್ನು ನೀಡಬೇಕೆಂದು ಮನವಿ ಮಾಡಿದರು. ಅಮಾಯಕ ಪ್ರವಾಸಿಗರ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ ಅವರು, ಇದು ಕ್ಷಮೆ ಇಲ್ಲದ ಕ್ರೂರ ಕೃತ್ಯವೆಂದು ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಕ್ಯಾಥೋಲಿಕ್ ಧರ್ಮ ಸಭೆಯ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರ ಆತ್ಮಕ್ಕೆ ಶಾಂತಿಕೋರಿ ಮೌನಾಚರಣೆಯ ಮೂಲಕ ಪ್ರಾರ್ಥನೆ ಸಲ್ಲಿಸಲಾಯಿತು. ಸಂಘದ ಜಿಲ್ಲಾ ಪ್ರಧಾನ…

Read More

ಮಡಿಕೇರಿ ಮೇ 2 NEWS DESK : ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟ ಹಾಗೂ ಕೊಡಗು ಗೌಡ ಯುವ ವೇದಿಕೆಯ ಸಹಯೋಗದಲ್ಲಿ 2ನೇ ವರ್ಷದ ಗೌಡ ಮಹಿಳಾ ಕ್ರಿಕೆಟ್ ಪಂದ್ಯಾವಳಿ ಮೇ 3 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.  ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಮೂಟೇರ ಪುಷ್ಪಾವತಿ ರಮೇಶ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯುವ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವನ್ನು ಮರಗೋಡಿನ ಕೃಷಿ ಸಾಧಕರು ಹಾಗೂ ಕಾಫಿ ಬೆಳೆಗಾರರಾದ ಕಟ್ಟೆಮನೆ ಪ್ರೇಮಾ ಗಣೇಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಸ್ಥಾಪಕಾಧ್ಯಕ್ಷರಾದ ಪುದಿಯನೆರವನ ರೇವತಿ ರಮೇಶ್, ನಗರಸಭಾ ಸದಸ್ಯೆ ಕುಟ್ಟನ ಶ್ವೇತಾ ಪ್ರಶಾಂತ್, ಕಾಫಿ ಬೆಳೆಗಾರರಾದ ದಂಬೆಕೋಡಿ ಲೀಲಾ ಚಿಣ್ಣಪ್ಪ, ಮೂಟೇರ ಬೀನಾ…

Read More

ನಾಪೋಕ್ಲು ಮೇ 2 NEWS DESK : ರೈತರು ಉತ್ತಮ ಇಳುವರಿಯನ್ನು ಪಡೆಯಬೇಕಾದರೆ ಕೃಷಿ ಭೂಮಿ ಫಲವತ್ತತೆಯಿಂದ ಕೂಡಿರಬೇಕು ಎಂದು ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಮಣ್ಣುವಿಜ್ಞಾನಿ ಡಾ.ಕೆ.ಟಿ.ಮೋಹನ್ ಕುಮಾರ್ ಹೇಳಿದರು. ಕೂರ್ಗ್ ಟ್ರೆಡಿಂಗ್ ಕಂಪನಿ ಲಿಮಿಟೆಡ್ ಹಾಗೂ ಕೋರಮಂಡಲ್ ಇಂಟನ್ರ್ಯಾಷನಲ್ ಲಿಮಿಟೆಡ್ ಸಂಯುಕ್ತ ಆಶ್ರಯದಲ್ಲಿ ನಾಪೋಕ್ಲುವಿನಲ್ಲಿ ಬೆಳೆಗಾರರಿಗೆ ಆಯೋಜಿಸಲಾಗಿದ್ದ ಕಾಫಿ ಮತ್ತು ಕಾಳು ಮೆಣಸು ಕೃಷಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. ರೈತರು ಕೃಷಿ ಮಾಡುವ ಮುನ್ನ ಮಣ್ಣು ಪರೀಕ್ಷೆ ಅಗತ್ಯಕ್ಕೆ ತಕ್ಕಂತೆ ಉತ್ತಮ ಗುಣಮಟ್ಟದ ರಸ ಗೊಬ್ಬರಗಳನ್ನು ಬಳಸಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವುದರಿಂದ ಬೆಳೆಗಳ ಇಳುವರಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆಯಲು ಸಾಧ್ಯ ಎಂದರು. ನಾಪೋಕ್ಲು ಕೂರ್ಗ್ ಟ್ರೇಡಿಂಗ್ ಕಂಪನಿ ಲಿಮಿಟೆಡ್ ಮಾಲೀಕ ಮಹಮ್ಮದ್ ರಫಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರೈತರು ದೇಶದ ಬೆನ್ನೆಲುಬು ಎಂದ ಅವರು ರೈತರು ಕೃಷಿ ಚಟುವಟಿಕೆಗಳಲ್ಲಿ ಉತ್ತಮ ಇಳುವರಿಪಡೆಯಲು ಉತ್ತಮ ರಸ ಗೊಬ್ಬರಗಳ ಬಳಕೆ ಮಾಡಬೇಕಿದೆ ಎಂದರು. ವಕೀಲ ಅಬ್ದುಲ್ ರಿಯಾಜ್ ಕೋರಮಂಡಲ…

Read More

ಮಡಿಕೇರಿ ಮೇ 2 NEWS DESK : ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆಗೆಂದು ಅಧಿಕಾರಿಗಳು ಮನೆ ಮನೆಗೆ ಬರುವ ಸಂದರ್ಭ ಆದಿ ದ್ರಾವಿಡ ಜನಾಂಗದ ಮಂದಿ ಪರಿಶಿಷ್ಟ ಜಾತಿ “ಆದಿ ದ್ರಾವಿಡ” ಎಂದು ನಮೂದಿಸಬೇಕು. ಅಧಿಕಾರಿಗಳು ಕೂಡ ಇದನ್ನು ಅನುಮೋದಿಸಿ ಪರಿಶಿಷ್ಟ ಜಾತಿ “ಆದಿ ದ್ರಾವಿಡ” ಎಂದು ದಾಖಲಿಸಬೇಕು ಎಂದು ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಹೆಚ್.ಎಂ.ಸೋಮಪ್ಪ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ತುಳು ಭಾಷಿಕ ಆದಿ ದ್ರಾವಿಡ ಜಾತಿ ಬಾಂಧವರಿಗೆ 8 ವಿವಿಧ ರೀತಿಯ `ಪರಿಶಿಷ್ಟ ಜಾತಿ’ ಪ್ರಮಾಣ ಪತ್ರವನ್ನು ನೀಡಲಾಗುತ್ತಿದ್ದು, ಇದರಿಂದ ತೊಂದರೆ ಎದುರಾಗಿದೆ. ಆದ್ದರಿಂದ ಪರಿಶಿಷ್ಟ ಜಾತಿ “ಆದಿ ದ್ರಾವಿಡ” ಎಂದು ಜಾತಿ ಪ್ರಮಾಣಪತ್ರ ನೀಡಲು ಸರಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಪಟ್ಟಂತೆ ಪರಿಶಿಷ್ಟ ಜಾತಿ ಕುಟುಂಬಗಳ…

Read More

ಬೆಂಗಳೂರು ಮೇ 2 NEWS DESK : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) 2024-25ನೇ ಸಾಲಿನ SSಐಅ-1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಪ್ರಕಟಿಸಿದ್ದು, ಇಂದು ಮಧ್ಯಾಹ್ನ 12.30ರ ನಂತರ ಇಲಾಖೆಯ ವೆಬ್ ಸೈಟ್ ಗಳಲ್ಲಿ ಫಲಿತಾಂಶಗಳನ್ನು ವೀಕ್ಷಿಸಬಹುದು. ಈ ವರ್ಷ ಶೇ. 91.12ರಷ್ಟು ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಶೇ.89.96ರಷ್ಟು ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ದ್ವಿತೀಯ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಸ್ಥಾನ ಹಾಗೂ ಶೇ. 42.43 ಫಲಿತಾಂಶದೊಂದಿಗೆ ಕಲಬುರಗಿ ಕೊನೆಯ ಸ್ಥಾನದಲ್ಲಿದೆ. ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ SSಐಅ…

Read More

ಕುಶಾಲನಗರ ಮೇ 2 NEWS DESK :  ಕುಶಾಲನಗರದ ಸಾಯಿ ಬಡಾವಣೆ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಶ್ರೀ ಗಣಪತಿ, ಶ್ರೀ ದತ್ತಾತ್ರೇಯ, ಶ್ರೀ ನಾಗದೇವತಾ ಮೂರ್ತಿಗಳ ಪ್ರತಿಷ್ಠಾಪನೆ ಕಾರ್ಯಕ್ರಮವು ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. ಎರಡು ದಿನಗಳ ಕಾಲ ವಾಸ್ತು ಹೋಮ, ವಾಸ್ತು ಬಲಿ, ರಕ್ಷೋಘ್ನ ಹೋಮ, ಪ್ರಕಾರ ಬಲಿ, ಬಿಂಬಶುದ್ದಿ, ಆದಿವಾಸೆ ಪೂಜೆ ಕಾರ್ಯಕ್ರಮಗಳು ನಡೆದವು. ಗುರುವಾರ ಬೆಳಗಿನಿಂದ ನಡೆದ, ವಿಗ್ರಹ ಪ್ರತಿಷ್ಠಾಪನ ಪೂಜಾ ಕಾರ್ಯಕ್ರಮಗಳಲ್ಲಿ, ಸಾಯಿಬಾಬಾ ವಿಗ್ರಹದ ಎರಡು ಬದಿಗಳಲ್ಲಿ ಗಣಪತಿ ಮತ್ತು ದತ್ತಾತ್ರೇಯರ ಅಮೃತ ಶಿಲಾ ಮೂರ್ತಿಗಳ ಪ್ರತಿಷ್ಠಾಪನೆ, ಅಮೃತಶಿಲಾ ಕಟಾಂಜನ, ಪಾದುಕೆ ಪ್ರತಿಷ್ಠಾಪನೆ, ಕೂರ್ಮ ಪ್ರತಿಷ್ಠಾಪನೆ, ಬಾಬಾ ಉತ್ಸವ ಮೂರ್ತಿಯ ಡೋಲಿ ಅನಾವರಣ, ಕಾರ್ಯಗಳು ನಡೆದವು. ಬಾಬಾ ದೇವಾಲಯದ ಹೊರ ಆವರಣದಲ್ಲಿ, ನಾಗ ಪ್ರತಿಷ್ಠೆ, ಬೇವಿನ ವೃಕ್ಷದ ಅಡಿಯಲ್ಲಿ ಮೂಲ ಬಾಬಾ ಪ್ರತಿಷ್ಠಾಪನೆ, ಹಾಗೂ ಮೂಲ ಶಿರಡಿ ಸಾಯಿಬಾಬಾ ಕ್ಷೇತ್ರದಲ್ಲಿ ಇರುವಂತೆ ವರ್ಷದ 365 ದಿನಗಳು ನಿರಂತರವಾಗಿ ಇರುವ ಬೆಂಕಿ ಕೊಂಡ ಪ್ರತಿಷ್ಠಾಪನ ಅನಾವರಣ…

Read More

ಮಡಿಕೇರಿ ಮೇ 2 NEWS DESK : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಫಾಕ್ ಪ್ರಚೋದಿತ ಭಯೋತ್ಪಾದಕ ದಾಳಿಯನ್ನು ಉಗ್ರವಾಗಿ ಖಂಡಿಸಿ, ಇದಕ್ಕೆ ದಿಟ್ಟ ಉತ್ತರವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ನಗರದಲ್ಲಿ ಕ್ಯಾಂಡಲ್ ಲೈಟ್ ಮೆರವಣಿಗೆ ನಡೆಯಿತು. ಮಡಿಕೇರಿಯ ಶ್ರೀ ಕೋದಂಡ ರಾಮ ದೇವಸ್ಥಾನದ ರಾಮೋತ್ಸವ ಸಮಿತಿ, ನ್ಯಾಷನಲ್ ಮೆಡಿಕೋಸ್ ಅಸೊಸಿಯೇಷನ್, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ನೀಮಾ ಸೇರಿದಂತೆ ವಿವಿಧ ಸಂಘಟನೆಗಳು ಸಂಜೆ ನಗರದ ಇಂದಿರಾ ಗಾಂಧಿ ವೃತ್ತದಿಂದ ನಗರದ ಮುಖ್ಯ ಬೀದಿಯಲ್ಲಿ ಮೊಂಬತ್ತಿ ಮೆರವಣಿಗೆ ನಡೆಸಿ, ಮಾನವ ಸರಪಳಿಯನ್ನು ರಚಿಸಿ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ಪ್ರತಿಭಟನೆಯಲ್ಲಿ ಶ್ರೀ ಕೋದಂಡ ರಾಮ ದೇವಸ್ಥಾನದ ರಾಮೋತ್ಸವ ಸಮಿತಿ ಅಧ್ಯಕ್ಷರಾದ ಕೆ.ಎಂ.ಬಿ.ಗಣೇಶ್, ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್‌ ಅಸೋಸಿಯೇಷನ್ (ನೀಮಾ)ನ ಕೊಡಗು ಘಟಕದ ಅಧ್ಯಕ್ಷ ಡಾ.ರಾಜಾರಾಂ, ನ್ಯಾಷನಲ್ ಮೆಡಿಕೋ ಆರ್ಗನೈಸೇಷನ್(ಎನ್ ಎಂಬ)ನ ಯುವ ಘಟಕದ ಪ್ರಮುಖರಾದ ವಿಕ್ರಂ ಶೆಟ್ಟಿ, ಶ್ರೀ…

Read More

ಮಡಿಕೇರಿ ಮೇ 2 NEWS DESK : ‘ಬೇಕಲ ರಾಮ ನಾಯಕರದ್ದು, ಸಾಹಿತ್ಯ ಸರಸ್ವತಿಯ ಮನಸ್ಸು. ಅವರ ನಿಸ್ವಾರ್ಥ ಸಾಹಿತ್ಯ ಸೇವೆಯು ಸಾರ್ವಕಾಲಿಕ ಆದರ್ಶ, ಸರ್ವರೂ ಒಂದಾಗಿ, ಸಹಬಾಳ್ವೆ ನಡೆಸಬೇಕೆಂಬ ಅರ್ಪಣಾ ಮನೋಭಾವ ಅವರ ಕೃತಿಗಳಲ್ಲಿವೆ. ಈ ಎಲ್ಲಾ ಕೃತಿಗಳೂ ಕೂಡಾ ಸಾಹಿತ್ಯ ಕ್ಷೇತ್ರಕ್ಕೆ ಮಹತ್ವದ ವರದಾನ’ ಎಂದು ಸಾಹಿತಿ ಚಂದ್ರಹಾಸ ಎಂ.ಬಿ.ಚಿತ್ತಾರಿ ಹೇಳಿದರು. ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಬಯಲು ರಂಗ ಮಂದಿರದಲ್ಲಿ ಡಾ.ವಾಮನ್ ಬೇಕಲ್ ಸ್ಥಾಪಕ ಸಂಚಾಲಕತ್ವದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡಿನ ಜಿಲ್ಲಾ ಘಟಕದ ನೇತೃತ್ವದಲ್ಲಿ ಕೊಡಗು ಜಿಲ್ಲಾ ಕನ್ನಡ ಭವನ, ಕೊಡಗು ಜಿಲ್ಲಾ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಕಾಸರಗೋಡಿನ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ನಡೆದ ಅಗ್ರಗಣ್ಯ ಸಾಹಿತಿ, ಇತಿಹಾಸ ಶಿಕ್ಷಕ ಮತ್ತು ಸಂಶೋಧಕರಾದ ಬೇಕಲ ರಾಮ ನಾಯಕರ ಬದುಕು – ಬರಹದ ಕುರಿತ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಮಾಜಿಕ…

Read More

ಮಡಿಕೇರಿ NEWS DESK ಮೇ 1 : ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ಕಾಂಗ್ರೆಸ್ ಪ್ರಮುಖನನ್ನು ತಕ್ಷಣ ಪೊಲೀಸರು ಬಂಧಿಸಬೇಕೆಂದು ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗದಿದ್ದಲ್ಲಿ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸರು ದಕ್ಷತೆಗೆ ಹೆಸರುವಾಸಿಯಾಗಿದ್ದು, ದೇಶದಲ್ಲಿಯೇ ಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದಾರೆ. ಯಾವುದೇ ಕ್ಲಿಷ್ಟಕರ ಪ್ರಕರಣಗಳನ್ನು ಬೇಧಿಸಿ ಸೈ ಎನಿಸಿಕೊಂಡಿದ್ದಾರೆ. ಆದರೆ ವಿನಯ್ ಆತ್ಮಹತ್ಯೆ ಮಾಡಿಕೊಂಡು ತಿಂಗಳಾದರೂ ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ವ್ಯಕ್ತಿಯ ಬಂಧನವಾಗಿಲ್ಲ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿರುವ ವ್ಯಕ್ತಿ ಪೊಲೀಸರ ಕಣ್ಣಿಗೆ ಯಾಕೆ ಬೀಳುತ್ತಿಲ್ಲವೆಂದು ಪ್ರಶ್ನಿಸಿದ್ದಾರೆ. ವಿನಯ್ ಪ್ರಕರಣದಲ್ಲಿ ಪೊಲೀಸರ ಮೇಲೆ ಒತ್ತಡ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ರಾಜಕೀಯ ಪ್ರಭಾವವಿಲ್ಲದೆ ಪೊಲೀಸರು ಸ್ವತಂತ್ರವಾಗಿ ಕಾರ್ಯನಿರ್ವಹಿಸಿದ್ದರೆ ಇಷ್ಟೊತ್ತಿಗಾಗಲೇ ಬಂಧನವಾಗುತ್ತಿತ್ತು. ಪೊಲೀಸರು ಅಸಹಾಯಕ ಸ್ಥಿತಿಯಲ್ಲಿರುವುದು ಸ್ಪಷ್ಟವಾಗುತ್ತಿದ್ದು, ಅನುಮತಿ ನೀಡಿದರೆ ಸಾರ್ವಜನಿಕರೇ ವ್ಯಕ್ತಿಯನ್ನು ಪತ್ತೆ…

Read More

ಮಡಿಕೇರಿ ಮೇ 1 NEWS DESK :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀ ಆದಿ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮವು ಮೇ 2 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.

Read More