ಮಡಿಕೇರಿ ಮೇ 31 NEWS DESK : ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಭಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜೂ.2 ರಂದು ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಮತ್ತು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಚಿನ್ನಸ್ವಾಮಿ ನಗರದ ದೀಪಾ ಭಾಸ್ತಿ ಅವರ ನಿವಾಸಕ್ಕೆ ತೆರಳಿ ಸರ್ಕಾರದ ಪರವಾಗಿ ಜಿಲ್ಲಾಡಳಿತ ವತಿಯಿಂದ ಆಮಂತ್ರಣ ಪತ್ರ ನೀಡಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೋರಿದರು. ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರ ಹಾಗೂ ಇಲಾಖೆಯ ನಿರ್ದೇಶಕರ ಪತ್ರವನ್ನು ಇದೇ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಭಾಸ್ತಿ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಚೆಟ್ಟಿರ ನಾಣಯ್ಯ ಹಾಗೂ ಸುಬೇದಾರ್ ಗೌಡಂಡ ತಿಮ್ಮಯ್ಯ ಇದ್ದರು.
ಲೇಖಕ: admin
ಮಡಿಕೇರಿ ಮೇ 31 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಳೆಹಾನಿ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರ ಸುರಕ್ಷತೆ ಮತ್ತು ರಕ್ಷಣೆ ಮಾಡುವ ನಿಟ್ಟಿನಲ್ಲಿ ಕುಟುಂಬಗಳ ಸ್ಥಳಾಂತರ ಜೊತೆಗೆ ಶಾಶ್ವತ ಪರಿಹಾರ ಕಲ್ಪಿಸುವಂತಾಗಬೇಕು ಎಂದು ನಿರ್ದೇಶನ ನೀಡಿದರು. ಪ್ರವಾಹ ಪೀಡಿತ ಪ್ರದೇಶದ ಕುಟುಂಬಗಳಿಗೆ ಪ್ರತೀ ವರ್ಷ ನೋಟೀಸು ನೀಡುವುದು ಸರಿಯಲ್ಲ. ಆದ್ದರಿಂದ ಪ್ರವಾಹ ಪೀಡಿತ ಕುಟುಂಬಗಳಿಗೆ ಹತ್ತಿರದಲ್ಲಿ ನಿವೇಶನ ಒದಗಿಸಿ ಮನೆ ನಿರ್ಮಿಸುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಕುಟುಂಬಗಳ ಪಟ್ಟಿ ಮಾಡುವಂತೆ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಈ ಬಾರಿ ಮುಂಗಾರು ಮೇ ತಿಂಗಳಲ್ಲಿಯೇ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಎಚ್ಚರ…
ಮಡಿಕೇರಿ NEWS DESK ಮೇ 30 : ಗುಂಡು ಹೊಡೆದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ. ನಗರದ ಕನ್ನಿಕಾ ಲೇಔಟ್ ನಿವಾಸಿ ದೇವಜನ ಜಗದೀಶ್ (56) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಮಡಿಕೇರಿ ಕೋಟೆ ಸಮೀಪದ ಮಹಿಳಾ ಸಮಾಜದ ಆವರಣದಲ್ಲಿರುವ ಪಾಳುಬಿದ್ದ ಶೆಡ್ ನಲ್ಲಿ ಜಗದೀಶ್ ಗುಂಡು ಹೊಡೆದುಕೊಂಡು ಸಾವಿಗೆ ಶರಣಾಗಿದ್ದಾರೆ. ಆರ್ಥಿಕ ಮುಗ್ಗಟ್ಟಿನ ಕುರಿತು ಡೆತ್ ನೋಟ್ ನಲ್ಲಿ ಬರೆದಿಟ್ಟಿರುವುದಾಗಿ ತಿಳಿದು ಬಂದಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಮೈಸೂರು NEWS DESK ಮೇ 30: ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾಗಿರುವ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಿ ಈಗಾಗಲೇ 17 ವರ್ಷಗಳಾಗಿದೆ. ಮೈಸೂರಿನಲ್ಲಿ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತ ಸ್ಥಾನಮಾನ ನೀಡಿ, ಅಭಿವೃದ್ಧಿಗೆ ಹೆಚ್ಚಿನ ಅನುದಾನ ಹಾಗೂ ಸವಲತ್ತುಗಳನ್ನು ಕಲ್ಪಿಸಬೇಕು ಎಂದು ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ *ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್* ಮನವಿ ಮಾಡಿದ್ದಾರೆ. ಈ ಸಂಬಂಧ ಸಚಿವಾಲಯಕ್ಕೆ ವಿವರವಾದ ಪತ್ರ ಬರೆದಿರುವ ಸಂಸದರು, ಭಾಷೆಯ ವಿಸ್ತಾರಕ್ಕೆ ಹಾಗೂ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೆರವು ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ. ಮೈಸೂರಿನಲ್ಲಿರುವ ಭಾರತೀಯ ಭಾಷಾ ಸಂಸ್ಥಾನದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರದಲ್ಲಿ ಓರ್ವ ಯೋಜನಾ ನಿರ್ದೇಶಕರು, 11 ಶೈಕ್ಷಣಿಕ ಸಿಬ್ಬಂದಿ, 8 ಜನ ಆಡಳಿತ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಕೇಂದ್ರದ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಹಲವಾರು ಪುಸ್ತಕ, ಕೃತಿಗಳನ್ನು ಪ್ರಕಟಿಸಲಾಗಿದೆ ಎಂದು ಸಂಸದರು ವಿವರಿಸಿದ್ದಾರೆ. ಈ ಚಟುವಟಿಕೆ ಹೆಚ್ಚಬೇಕಾದರೆ ಸ್ವಾಯತ್ತತೆ ಹೊಂದುವುದು ಅತ್ಯವಶ್ಯ. ತಮಿಳು ಭಾಷೆಗೆ 2004ರಲ್ಲಿ…
ವಿರಾಜಪೇಟೆ ಮೇ 30 NEWS DESK : ಕನ್ನಡದ ಪ್ರಖ್ಯಾತ ಕವಿ ಹೆಚ್.ಎಸ್.ವೆಂಕಟೇಶಮೂರ್ತಿ ನಿಧನರಾಗಿರುವುದು ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ ಎಂದು ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಸಂತಾಪ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರಾಜೇಶ್ ಪದ್ಮನಾಭ, ಕನ್ನಡಕ್ಕೆ ಅನೇಕ ಕವಿತೆಗಳನ್ನು, ನಾಟಕಗಳನ್ನು, ಸಾಹಿತ್ಯಗಳನ್ನು ಕೊಡುಗೆ ನೀಡಿದ್ದಾರೆ. ಹೆಚ್‍ಎಸ್‍ವಿಯೆಂದೇ ಇವರು ಚಿರಪರಿಚಿತರಾಗಿದ್ದಾರೆ. ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಅವರು ಸಾಹಿತ್ಯಕ್ಕೆ ನೀಡಿದ ಕೊಡುಗೆ ಅನನ್ಯ. ಅವರ ಅಗಲಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ನೋವನ್ನುಂಟುಮಾಡಿದೆ ಎಂದು ರಾಜೇಶ್ ತಿಳಿಸಿದರು.
ಮಡಿಕೇರಿ ಮೇ 30 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಅಣಬೆ ಬೇಸಾಯ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಜೂನ್ 17 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‍ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಜೂನ್, 12 ಕೊನೆಯ ದಿನವಾಗಿದೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ…
ಮಡಿಕೇರಿ ಮೇ 30 NEWS DESK : ಪೋಷಕರು ದೇಶಭಕ್ತಿ ಮತ್ತು ಭ್ರಷ್ಟ ವ್ಯವಸ್ಥೆಯ ವಿರುದ್ಧ ಬಾಲ್ಯದಿಂದಲೇ ಮಕ್ಕಳಲ್ಲಿ ಜಾಗೃತಿ ಮೂಡಿಸಿದರೆ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬಹುದು ಹಾಗೂ ದೇಶದ ಪರಂಪರೆಯನ್ನು ಉಳಿಸಬಹುದು ಎಂದು ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಹೊಟೇಲ್ ಮಯೂರ ವ್ಯಾಲಿ ವ್ಯೂ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಕಾರ್ಯಾಚರಣೆ ಸಮಿತಿ, ಇಂಡಿಯಾದ ಕೊಡಗು ಜಿಲ್ಲಾ ಘಟಕವನ್ನು ಮತ್ತು ಪದಾಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದಲ್ಲಿ ಯುವಕರ ಸಂಖ್ಯೆ ಅತ್ಯಂತ ಪ್ರಭಾವಶಾಲಿಯಾಗಿದ್ದು, ಪ್ರತಿಯೊಬ್ಬರು ಭ್ರಷ್ಟಾಚಾರದ ನಿರ್ಮೂಲನೆಗೆ ಮುಂದಾದರೆ ಮಾತ್ರ 2047ಕ್ಕೆ ಭಾರತ ಸರ್ವಾಂಗೀಣ ಅಭಿವೃದ್ಧಿ ಹೊಂದಿದ ದೇಶವಾಗಿ ಕಾಣಲು ಸಾಧ್ಯವಾಗುತ್ತದೆ ಮತ್ತು ಆರ್ಥಿಕವಾಗಿ ಸದೃಢವಾಗುತ್ತದೆ ಎಂದರು. ಹುಟ್ಟಿದ ಮಕ್ಕಳಲ್ಲಿ ಡಾಕ್ಟರ್, ಇಂಜಿನಿಯರ್ ಗಳಾಗುವಂತೆ ಸ್ಫೂರ್ತಿ ತುಂಬುವ ಬದಲು ಜೀವನದ ಮೌಲ್ಯಗಳನ್ನು ನೀಡುವ ಕೆಲಸವನ್ನು ಮಾಡಬೇಕು. ಇಡೀ ಜಗತ್ತಿಗೆ ಮೌಲ್ಯಗಳನ್ನು ನೀಡುವ ನಾವು ನಮ್ಮೊಳಗಿನ ಸಾಮಾಜಿಕ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಬೇಕು, ನಮ್ಮೊಳಗೆ…
ಮಡಿಕೇರಿ ಮೇ 30 NEWS DESK : ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್ 01 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿರುತ್ತದೆ. ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತಿಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಪೀಳಿಗೆಗೆ ತಮ್ಮ ಸಂತತಿಯನ್ನು ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು ಹಾಗೂ ಮೀನುಗಾರರು ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ, ಮೀನುಗಳನ್ನು ಜೂನ್ ಮತ್ತು ಜುಲೈ ಈ ಎರಡು ತಿಂಗಳು ಹಿಡಿಯದೇ ಅವುಗಳ ಸಂತಾನ ಅಭಿವೃದ್ದಿಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟು ಮೀನಿನ ಸ್ಥಳೀಯ ತಳಿಗಳ ಸಂರಕ್ಷಣಿಯಲ್ಲಿ ಇಲಾಖೆಯೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಮೇ 30 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ವತಿಯಿಂದ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಬೇಸಿಗೆ ಶಿಬಿರದ ಶಿಬಿರಾರ್ಥಿಗಳ ಏಕಾಗ್ರತೆ ಉತ್ತಮವಾಗಿದ್ದು, ತಮ್ಮ ಎಲ್ಲಾ ಚಟುವಟಿಕೆಗಳಲ್ಲಿ ಇದನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು. ಪದ್ಮಶ್ರೀ ಪುರಸ್ಕøತರಾದ ರಾಣಿ ಮಾಚಯ್ಯ ಮಾತನಾಡಿ, ಮಕ್ಕಳು ವೇದಿಕೆಯನ್ನು ಉತ್ತಮವಾಗಿ ಸದುಪಯೋಗಪಡಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿಯೂ ಆಸಕ್ತಿಯನ್ನು ಅನುಪಾಲನೆ ಮಾಡುವಂತೆ ಸಲಹೆ ನೀಡಿದರು. ನಗರ ಪ್ರಾಧಿಕಾರ ಯೋಜನೆಯ ಸದಸ್ಯರಾದ ಮಿನಾಜ್ ಪ್ರವೀಣ್ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭಾ ಪ್ರದರ್ಶನಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆಯಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿದೇಶಕ ತಿಪ್ಪಣ್ಣ ಸಿರಸಗಿ, ಬೇಸಿಗೆ ಶಿಬಿರದಲ್ಲಿ ಮಕ್ಕಳು ಉತ್ತಮವಾಗಿ ಭಾಗವಹಿಸಿ ಶಿಬಿರದಲ್ಲಿ…
ಮಡಿಕೇರಿ ಮೇ 30 NEWS DESK : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಣಿವೆ ಬಳಿ ಕಾವೇರಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದೆ. ಸುಮಾರು 25ರಿಂದ 30 ವರ್ಷದ ಟಿಬೆಟಿಯನ್ ಪುರುಷ ವ್ಯಕ್ತಿ ಎಂದು ಸಂಶಯ ವ್ಯಕ್ತವಾಗಿದ್ದು, ಕೈಯಲ್ಲಿ ಬುದ್ಧನ ಚಿತ್ರ ಹಚ್ಚೆ ಹಾಕಿಸಿಕೊಂಡಿರುವುದು ಕಂಡು ಬಂದಿದೆ. ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾರಸುದಾರರು ಪತ್ತೆ ಆದಲ್ಲಿ ತಕ್ಷಣ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.






