ಲೇಖಕ: admin

ಮಡಿಕೇರಿ, NEWS DESK ಆ.23 : ಕತ್ತಲೆಕಾಡು-ಜೇನುಕೊಲ್ಲಿ ಗ್ರಾಮದ ಶ್ರೀ ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ ವಿನಾಯಕ ಭಕ್ತ ವೃಂದ ಸಹಯೋಗದಲ್ಲಿ 20ನೇ ವರ್ಷದ ಸಂಭ್ರಮದ ಗೌರಿ ಗಣೇಶೋತ್ಸವ ಕಾರ್ಯಕ್ರಮ ಸೆಪ್ಟೆಂಬರ್‌ 14ರಿಂದ 18ರವರೆಗೆ ನಡೆಯಲಿದೆ. 14ರಂದು ಬೆಳಗ್ಗೆ 5 ಗಂಟೆಗೆ ಟ್ರಸ್ಟ್‌ನ ಆವರಣದಲ್ಲಿ ಗಣಹೋಮ, ಬಳಿಕ ಮೂರ್ತಿ ಪ್ರತಿಷ್ಠಾಪನೆ ನೆರವೇರಲಿದೆ. ಬಳಿಕ ಬೆಳಗ್ಗೆ 9:00 ಗಂಟೆಗೆ ಭಾರತ್ ಮಾತಾ ಪೂಜೆ, 10 ಗಂಟೆಗೆ ಸಭಾ ಕಾರ್ಯಕ್ರಮ, ಗ್ರಾಮದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ, 11 ಗಂಟೆಗೆ ಕ್ಲೋಸ್‌ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆಗೆ ಮಹಿಳೆಯರಿಗೆ ಆಟೋಟ ಸ್ಪರ್ಧೆ ಜರುಗಲಿದೆ. ಮ. 1 ಗಂಟೆಗೆ ಅನ್ನದಾನ, 2 ಗಂಟೆಗೆ ಮಕ್ಕಳಿಗೆ ಆಟೋಟ ಸ್ಪರ್ಧೆ, ಸಂಜೆ 07 ಗಂಟೆಗೆ ನಿತ್ಯ ಪೂಜೆ, ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ, ರಾತ್ರಿ 08:30ಕ್ಕೆ ಪ್ರಸಾದ ವಿತರಣೆ ಇರಲಿದೆ ಎಂದು ಟ್ರಸ್ಟ್‌ ಪ್ರಕಟಣೆ ತಿಳಿಸಿದೆ. 15ರಂದು ಸಂಜೆ 6 ರಿಂದ 8…

Read More

ಮಡಿಕೇರಿ NEWS DESK ಆ.23 : ಮೋಡ ಬಿತ್ತನೆಯಿಂದ ಕೊಡಗು ಜಿಲ್ಲೆಗೆ ಹಾಗೂ ಇಲ್ಲಿನ ಜನರಿಗೆ ಪ್ರಯೋಜನಗಿಂತ ನಷ್ಟವೇ ಹೆಚ್ಚು ಆಗುವುದರಿಂದ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡುವುದನ್ನು ಬಿಜೆಪಿ ವಿರೋಧಿಸುತ್ತದೆ. ಅಲ್ಲದೆ ಮೋಡ ಬಿತ್ತನೆಯಿಂದ ಆಗುವ ನಷ್ಟವನ್ನು ಸರಕಾರವೇ ತುಂಬಬೇಕು ಎಂದು ಒತ್ತಾಯಿಸುತ್ತದೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕರ್ನಾಟಕ ಸರ್ಕಾರವು ಮುಂಗಾರು ಮಳೆಯ ಕೊರತೆ ಹಾಗೂ ಬರ ಪರಿಸ್ಥಿತಿ ನೀಗಿಸಲು ಅಂದಾಜು ರೂ. 28.52 ಕೋಟಿ ವೆಚ್ಚದಲ್ಲಿ 60 ದಿನಗಳ ಕಾಲ 200 ಗಂಟೆಗಳ ವೈಮಾನಿಕ ಹಾರಾಟದ ‘ಕರ್ನಾಟಕ ತುರ್ತು ಮೋಡ ಬಿತ್ತನೆ ಕಾರ್ಯಕ್ರಮ-2026′ ಅನ್ನು ಘೋಷಿಸಿದೆ. ರಾಜ್ಯದ 27 ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರಕಾರ ಹೇಳಿದೆ. ಇಂದಿನ ಪರಿಸ್ಥಿತಿಯಲ್ಲಿ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಿದರೆ ರೈತರ ಬೆಳೆಗೆ ಹಾನಿಯಾಗಲಿದೆ, ಕೊಳೆ ರೋಗ ಕಾಡಲಿದೆ. ಅತಿಯಾದ ಮಳೆಯಿಂದ ಕೊಡಗಿನ…

Read More

ಮಡಿಕೇರಿ NEWS DESK ಆ.23 : ಹಿರಿಯ ನಾಗರಿಕರು ಸಮಾಜಕ್ಕೆ ನೀಡಿರುವ ಅಮೂಲ್ಯ ಸೇವೆ, ಅನುಭವ ಹಾಗೂ ಕೊಡುಗೆಗಳನ್ನು ಗೌರವಿಸುವ ನಿಟ್ಟಿನಲ್ಲಿ ರೋಟರಿ ಕ್ಲಬ್ ವತಿಯಿಂದ ಹಿರಿಯ ನಾಗರಿಕರ ಸನ್ಮಾನ ಕಾರ್ಯಕ್ರಮ ನಾಪೋಕ್ಲುವಿನಲ್ಲಿ ನಡೆಯಿತು. ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಾದ ಕಲ್ಲೇಂಗಡ ದೇವಯ್ಯ, ಪಾಡಿಯಮಂಡ ಎಂ.ಮುತ್ತಮ್ಮಯ್ಯ ಹಾಗೂ ಟಿ.ಎ.ಆನಂದ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳು ತಮ್ಮ ಜೀವನಾನುಭವ ಹಾಗೂ ಅಮೂಲ್ಯ ವಿಚಾರಗಳನ್ನು ವಿವರಿಸಿದರು. ರೋಟರಿ ಸಂಸ್ಥೆಯ ಪದಾಧಿಕಾರಿ ರೊ.ಕುಲ್ಲೇಟಿರ ಅಜಿತ್ ನಾಣಯ್ಯ ಅವರು ಸ್ಫೂರ್ತಿದಾಯಕ ಸಂದೇಶ ನೀಡಿದರು. ಎಕ್ಸೆಲ್ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯ ಚೋಕಿರ ತಿಮ್ಮಯ್ಯ ಅವರು ಮಾತನಾಡಿ ಹಿರಿಯ ನಾಗರಿಕರನ್ನು ಗೌರವಿಸುವ ಇಂತಹ ಕಾರ್ಯಕ್ರಮದ ಮಹತ್ವವನ್ನು ಶ್ಲಾಘಿಸಿದರು. 8ನೇ ತರಗತಿಯ ಸಫಾ ಫಾತಿಮಾ ಹಿರಿಯ ನಾಗರಿಕರ ಮಹತ್ವದ ಕುರಿತು ಮಾತನಾಡಿದರೆ, 8ನೇ ತರಗತಿಯ ಮಾನಸ ಬಿ.ವಿ. ತಮ್ಮ ಅಭಿಪ್ರಾಯ ಹಂಚಿಕೊ0ಡರು. ಪ್ರಿಯಾಂಕಾ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಮುಖ್ಯ ಅತಿಥಿಗಳಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ…

Read More

ಮಡಿಕೇರಿ NEWS DESK ಆ.23 : ಮಡಿಕೇರಿ ರೋಟರಿ ವತಿಯಿಂದ ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಶಾಲೆಯ ಕಾರ್ಯದರ್ಶಿ ಪಿ.ಹರೀಶ್ ದೇವಯ್ಯ ಅವರ ನೇತೃತ್ವದಲ್ಲಿ ಕಾವೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ನ ಚೇರ್ ಮನ್ ರೊ. ಈರಮಂಡ ಹರಿಣಿ ವಿಜಯ್ ಅವರು ಇಂಟರ್ಯಾಕ್ಟ್ ಕ್ಲಬ್ ನ ಉದ್ದೇಶ ಹಾಗೂ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಶಿಸ್ತು, ಜವಾಬ್ದಾರಿ ಹಾಗೂ ಆತ್ಮವಿಶ್ವಾಸ ಬೆಳೆಸುವಲ್ಲಿ ಕ್ಲಬ್ ಪ್ರಮುಖ ಪಾತ್ರ ವಹಿಸಲಿದೆ ಎಂದರು. ಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ್ ಎಸ್.ಡಿ. ಅವರು ಇಂಟರ್ಯಾಕ್ಟ್ ಕ್ಲಬ್ ಉದ್ಘಾಟಿಸಿ ಮಾತನಾಡಿ, ಕ್ಲಬ್ ನ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ, ತಂಡವಾಗಿ ಕೆಲಸ ಮಾಡುವ ಗುಣ, ಸಂವಹನ ಹಾಗೂ ನಿರ್ಧಾರ ಕೈಗೊಳ್ಳುವ ಕೌಶಲ್ಯಗಳು ವೃದ್ಧಿಯಾಗಲಿದೆ. ಸಮಾಜಸೇವೆ, ಪರಿಸರ ಸಂರಕ್ಷಣೆ ಹಾಗೂ ಮಾನವೀಯ ಮೌಲ್ಯಗಳ ಕುರಿತು ಅರಿವು ಮೂಡಲಿದೆ ಎಂದು ತಿಳಿಸಿದರು.…

Read More

ಮಡಿಕೇರಿ NEWS DESK ಆ.23 : ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು. ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಪ್ರೊ.ಇಟ್ಟಿರ ಕಮಲಾಕ್ಷಿ ಬಿದ್ದಪ್ಪ ಅವರ ಅಧ್ಯಕ್ಷತೆಯಲ್ಲಿ ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಹಾಗೂ ಗೌರವ ಕರ‍್ಯರ‍್ಶಿ ಕೋಟೆರ ಕಿಶನ್ ಉತ್ತಪ್ಪ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಕೊಡವ ಮಹಿಳಾ ಸಬಲೀಕರಣ, ಪೊಮ್ಮಕ್ಕಡ ಕೂಟದ ಅಭ್ಯುದಯ ಮತ್ತು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಿರುವ ವಿವಿಧ ಕರ‍್ಯಕ್ರಮಗಳ ಕುರಿತು ರ‍್ಚಿಸಲಾಯಿತು. ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಹಲವು ಸಲಹೆಗಳನ್ನು ನೀಡಿ ಕೂಟವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟಿಸಲು ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು. ಪೊಮ್ಮಕ್ಕಡ ಕೂಟದ ಉಪಾಧ್ಯಕ್ಷೆ ಮೀದೇರಿರ ಕವಿತಾ, ಕೊಡವ ಸಮಾಜದ ಉಪಾಧ್ಯಕ್ಷ ಚಿರಿಯಪಂಡ ಇಮ್ಮಿ ಉತ್ತಪ್ಪ, ಮೂಕಳೇರ ಕಾವ್ಯ ಮಧು, ಗುಮ್ಮಟ್ಟಿರ ಗಂಗಮ್ಮ, ಮೂಕಳೇರ ಪಟ್ಟು, ಮೂಕಳೇರ ಆಶಾ ಪೂಣಚ್ಚ, ಬಲ್ಯಮೀದೇರಿರ ಆಶಾ, ಚೆಕ್ಕೇರ ವಾಣಿ ಸಂಜು, ಕೋಣಿಯಂಡ ಕಾವ್ಯ ಮತ್ತಿತರರು ಉಪಸ್ಥಿತರಿದ್ದರು.

Read More

ಕುಶಾಲನಗರ, NEWS DESK ಆ. 22: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ (ಆ. 22ರಂದು) ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕಬ್, ಬುಲ್‌ಬುಲ್ ಮಕ್ಕಳಿಗೆ ದೇಶಭಕ್ತಿ ಗೀತೆಗಳ ತಾಲ್ಲೂಕು ಮಟ್ಟದ ಗೀತ ಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕುಶಾಲನಗರ ತಾಲ್ಲೂಕಿನ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಂದ ಆಗಮಿಸಿದ್ದ ಮಕ್ಕಳ ಗುಂಪು ಗಾಯನ ಸ್ಪರ್ಧೆ ಪ್ರೇಕ್ಷಕರ ಗಮನ ಸೆಳೆಯಿತು. ಮಕ್ಕಳು ವಿವಿಧ ದೇಶಭಕ್ತಿ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿ, ತಮ್ಮಲ್ಲಿರುವ ವಿಭಿನ್ನ ಗಾಯನ ಪ್ರತಿಭೆಯನ್ನು ಪ್ರದರ್ಶಿಸಿದರು. ಈ ಸ್ಪರ್ಧೆಯು ಮಕ್ಕಳಲ್ಲಿರುವ ಗಾಯನ ಪ್ರತಿಭೆಯನ್ನು ಗುರುತಿಸಲು ಉತ್ತಮ ವೇದಿಕೆಯಾಯಿತು. ಮಕ್ಕಳ ಗೀತ ಗಾಯನ ಸ್ಪರ್ಧೆಯ ಉದ್ದೇಶ ಕುರಿತು ಮಾತನಾಡಿದ ಜಿಲ್ಲಾ ಸಂಸ್ಥೆಯ ಸ್ಕೌಟ್ಸ್ ವಿಭಾಗದ ಆಯುಕ್ತ ಜಿಮ್ಮಿ ಸಿಕ್ವೇರಾ, ಮಕ್ಕಳು ದೇಶಭಕ್ತಿ ಗೀತೆಗಳನ್ನು ಹಾಡುವುದರಿಂದ ಅವರಲ್ಲಿ ರಾಷ್ಟ್ರೀಯ ಭಾವೈಕ್ಯತೆ ಹಾಗೂ ದೇಶಪ್ರೇಮ ಬೆಳೆಯುತ್ತದೆ. ಇದರಿಂದ…

Read More

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ ನೀರನ್ನು ಮಾತ್ರ ಬಳಸಿಕೊಂಡು, ಅಪಾರ ಪ್ರಮಾಣದ ಕಾವೇರಿ ನೀರನ್ನು ರಾಜ್ಯದ ಇತರ ಭಾಗಗಳಿಗೆ ಹಾಗೂ ಕೆಳಹರಿವಿನ ಪ್ರದೇಶಗಳಿಗೆ ನೀಡುತ್ತಿದೆ. ಆದರೆ ಇಂತಹ ಮಹತ್ವದ ಜಲಮೂಲ ಜಿಲ್ಲೆಗೆ ರಾಜ್ಯ ಸರ್ಕಾರದಿಂದ ಸಮರ್ಪಕವಾದ ಅಭಿವೃದ್ಧಿ, ರೈತರ ರಕ್ಷಣೆ ಹಾಗೂ ಮೂಲಸೌಕರ್ಯ ದೊರೆಯುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕೊಡಗಿನಲ್ಲಿ ಮೋಡ ಬಿತ್ತನೆ (Cloud Seeding) ನಡೆಸುವ ಚಿಂತನೆ ಎಷ್ಟು ಸಮಂಜಸ ಎಂದು ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ರಂಜಿ ಪೂಣಚ್ಚ ಪ್ರಶ್ನಿಸಿದ್ದಾರೆ. ಕಾವೇರಿ ನದಿ ನೀರಿನ ಸಾಮಾನ್ಯ ವರ್ಷದ ಒಟ್ಟು ಅವಲಂಬನೀಯ ಹರಿವನ್ನು ಸುಮಾರು 740 ಟಿಎಂಸಿ ಎಂದು ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ದಾಖಲೆಗಳಲ್ಲಿ ಪರಿಗಣಿಸಲಾಗಿದೆ. ಕೊಡಗು ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಮಳೆ ಹಾಗೂ ಜಲಸಂಗ್ರಹಣಾ ಪ್ರದೇಶವಾಗಿದ್ದು, ವಿವಿಧ ಅಧ್ಯಯನಗಳು ಕೊಡಗಿನ ಕೊಡುಗೆಯನ್ನು ಸುಮಾರು 180–200 ಟಿಎಂಸಿ ಮಟ್ಟದಲ್ಲಿ ಉಲ್ಲೇಖಿಸಿವೆ.“740…

Read More

ಮಡಿಕೇರಿ, NEWS DESK ಆ.22 : ರಾತ್ರಿ ವೇಳೆ ವಾಯು ವಿಹಾರದಲ್ಲಿ ತೊಡಗಿದ್ದ ಇಬ್ಬರು ಪಾದಚಾರಿಗಳಿಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾದ ಘಟನೆ ಕೂಡಿಗೆ ಕಾವೇರಿ ನದಿ ಸೇತುವೆ ಮೇಲೆ ಶುಕ್ರವಾರ ರಾತ್ರಿ ನಡೆದಿದೆ. ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೂರ್ಣಚಂದ್ರ ಬಡಾವಣೆ ನಿವಾಸಿ ಬಸವಯ್ಯ ಅವರ ಪುತ್ರ ರವಿ(38) ಮೃತ ದುರ್ದೈವಿಯಾಗಿದ್ದಾರೆ. ರಾಮಕೃಷ್ಣ ಹಾಗೂ ಶಾರದಾ ದಂಪತಿ ಪುತ್ರ ರೂಪೇಶ್(28) ಎಂಬುವವರಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು, ಕುಶಾಲನಗರ ಆರೋಗ್ಯ ಸಮುದಾಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸ್ಥಳಾಂತರಿಸಲಾಗಿದೆ. ಡಿಕ್ಕಿಪಡಿಸಿದ ಕಾರು ಚಾಲಕ ಕಾರು ಸಹಿತ ಪರಾರಿಯಾಗಿದ್ದಾನೆ. ಈ ಕುರಿತು ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸುತ್ತಮುತ್ತಲಿನ ಸಿ.ಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸಿ ಡಿಕ್ಕಿಪಡಿಸಿ ಪರಾರಿಯಾದ ಆರೋಪಿ ಸಹಿತ ವಾಹನವನ್ನು ವಶಕ್ಕೆ ಪಡೆಯಲು ತನಿಖೆ ಆರಂಭಿಸಿದ್ದಾರೆ. *ಗ್ರಾಮಸ್ಥರ ಪ್ರತಿಭಟನೆ* ಡಿಕ್ಕಿಪಡಿಸಿ ಪರಾರಿಯಾದ ವಾಹನ…

Read More

ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧವಾಗಿದ್ದು ದುಬಾರೆ ಶಿಬಿರದಿಂದ ಧನಂಜಯ, ಪ್ರಶಾಂತ, ಗೋಪಿ, ಶ್ರೀರಾಮ, ಕಾವೇರಿ ಸೇರಿದಂತೆ ವಿವಿಧ ಶಿಬಿರಗಳಿಂದ ಒಟ್ಟು 12 ಆನೆಗಳ ಪಟ್ಟಿ ಸಿದ್ಧಗೊಂಡಿದೆ. ದಸರೆಗೆ ಕಳುಹಿಸಲು ಸಿದ್ಧವಾದ ಆನೆಗಳ ಪಟ್ಟಿಯಲ್ಲಿ ಕುಶಾಲನಗರ ಸಮೀಪದ ದೊಡ್ಡ ಹರವೆ ಶಿಬಿರದ ರೂಪ, ನಾಗರಹೊಳೆ ಸಮೀಪದ ಬಳ್ಳೆ ಆನೆ ಶಿಬಿರದ ಮಹೇಂದ್ರ, ಲಕ್ಷ್ಮಿ ಮತ್ತಿಗೋಡು ಶಿಬಿರದ ಏಕಲವ್ಯ, ಶ್ರೀಕಂಠ ಮತ್ತು ರಾಮಪುರ ಶಿಬಿರದ ಚೈತ್ರ ಆನೆಗಳನ್ನು ದಸರೆಗೆ ಕಳುಹಿಸಲು ನಿರ್ಧರಿಸಲಾಗಿದೆ. ಕಳೆದ ಬಾರಿ 14 ಆನೆಗಳನ್ನು ದಸರಾ ಉತ್ಸವದಲ್ಲಿ ಪಾಲ್ಗೊಂಡಿತ್ತು.  ಪ್ರಥಮ ತಂಡದಲ್ಲಿ ದುಬಾರೆಯ ಆನೆಗಳು ಸೇರಿದಂತೆ  ಒಟ್ಟು 8 ಆನೆಗಳನ್ನು ಗಜ ಪಯಣದಲ್ಲಿ ಈ ತಿಂಗಳ 26 ರಂದು ಸಾಗಲಿದೆ. ಎರಡನೇ ತಂಡದಲ್ಲಿ ದೊಡ್ಡ ಹರವೆ ಶಿಬಿರದ ರೂಪ ಸೇರಿದಂತೆ ನಾಲ್ಕು ಆನೆಗಳನ್ನು ಕಳುಹಿಸಲು ನಿರ್ಧರಿಸಲಾಗಿದೆ. ಕಳೆದ ಆರು ವರ್ಷಗಳಿಂದ ದಸರಾ ಉತ್ಸವದಲ್ಲಿ ಅಂಬಾರಿ ಹೊತ್ತು ಗಜ ಪಡೆ ಮುನ್ನಡೆಸಿದ ಕ್ಯಾಪ್ಟನ್ ಅಭಿಮನ್ಯುಗೆ ವಯೋಮಿತಿ…

Read More

ಸುಂಟಿಕೊಪ್ಪ, NEWS DESK ಆ.22: ಮಕ್ಕಳು ನಿಮ್ಮ ಹಿರಿಯರನ್ನು ಗೌರವಿಸುವ ಸದ್ಗುಣಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ನೀವು ಹಿರಿಯರಾದಾಗ ನಿಮ್ಮ ಮಕ್ಕಳಿಂದ ನಿರೀಕ್ಷಿಸಲು ಸಾಧ್ಯವೆಂದು ರೋಟರಿ ಸಂಸ್ಥೆಯ ಎ.ಲೋಕೇಶ್ ಕುಮಾರ್ ಹೇಳಿದರು ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನದ ಅಂಗವಾಗಿ “ಹಿರಿಯ ಜೀವಿಗಳಿಗೆ ನಮನ” ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ರೋ. ಎ.ಲೋಕೇಶ್ ಕುಮಾರ್ ಮಾತನಾಡಿ ಹಿರಿಯರನ್ನೂ ಗೌರವಿಸುವುದು ನೈಸರ್ಗಿಕ ಧರ್ಮ. ಆದರೆ ಹಿರಿಯರನ್ನು ಗೌರವಿಸುವ ಮನೋಬಾವನ್ನು ಬೆಳೆಸಿಕೊಂಡಾಗ ಸಮಾಜದಲ್ಲಿ ತÀಮ್ಮ ವ್ಯಕ್ತಿತ್ವವನ್ನು ಗುರುತಿಸಲು ಸಹಾಯವಾಗುವುದು ಹಾಗೂ ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣಕರ್ತರಾಗಿರುತ್ತೀರಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸುಂಟಿಕೊಪ್ಪದ ಹಿರಿಯ ವರ್ತಕರು ಕ್ರೀಡಾಪಟು ಕೆ.ಪಿ.ಜಗನ್ನಾಥ್, ಸಮಾಜ ಸೇವಕ ಬಿ.ಎಸ್. ಈರಪ್ಪ ಹಾಗೂ ಬಿ.ಎಸ್.ಎಸ್.ಎಲ್ ಸಂಸ್ಥೆಯ ನಿವೃತ್ತ ಉದ್ಯೋಗಿ ರಶೀದ್ ಖಾನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಶೀದ್ ಖಾನ್ ಮಾತನಾಡಿ ನಾವು ಎಷ್ಟೇ ಉನ್ನತರಾಗಿ ಸಮಾಜದಲ್ಲಿ ಗುರುತಿಸಿಕೊಂಡರು ಪೋಷಕರು…

Read More