ಮಡಿಕೇರಿ NEWS DESK ಏ.29 : ಮ್ಯಾನ್ಸ್ ಕಾಂಪೌAಡ್ ಕ್ಲಬ್ ವತಿಯಿಂದ ಮೇ 1ರಿಂದ 20ರ ವರೆಗೆ ಫುಟ್ಬಾಲ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಕ್ಲಬ್ ನ ಅಧ್ಯಕ್ಷ ಎ.ಎಂ.ಕ್ರಿಷ್ಟೋಫರ್ ತಿಳಿಸಿದ್ದಾರೆ. ಕೊಡಗಿನ ಪ್ರಸಿದ್ಧ ಫುಟ್ಬಾಲ್ ಕ್ಲಬ್ ಎಂ.ಸಿ.ಸಿ ವತಿಯಿಂದ 2024 ರ ಕರ್ನಾಟಕ ಮಿನಿ ಒಲಂಪಿಕ್ಸ್ ನ 14 ರ ವಯೋಮಿತಿಯ ಬಾಲಕರ ಕೊಡಗು ತಂಡವನ್ನು ತರಬೇತುಗೊಳಿಸಿದ ನುರಿತ ತರಬೇತುದಾರರಾದ ಎ.ಎಂ.ಕ್ರಿಷ್ಟೋಫರ್ ಅವರು ತರಬೇತಿ ನೀಡಲಿದ್ದಾರೆ. ಭಾರತ ದೇಶ ಹಾಗೂ ಕರ್ನಾಟಕ ರಾಜ್ಯಕ್ಕೆ ಉತ್ತಮ ಆಟಗಾರರನ್ನು ಕೊಡುಗೆಯಾಗಿ ನೀಡಿದ ಹೆಗ್ಗಳಿಕೆ ಎಂ.ಸಿ.ಸಿಯದ್ದಾಗಿದೆ. 16 ವಯೋಮಿತಿಯೊಳಗಿನ ಬಾಲಕ ಹಾಗೂ ಬಾಲಕಿಯರಿಗೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ (ಮ್ಯಾನ್ಸ್ ಕಾಂಪೌಂಡ್) ಫುಟ್ಬಾಲ್ ಮೈದಾನದಲ್ಲಿ ಪ್ರತಿದಿನ ಬೆಳಿಗ್ಗೆ 6.30 ಗಂಟೆಯಿಂದ 8:30 ರವರೆಗೆ ಫುಟ್ಬಾಲ್ ತರಬೇತಿ ನೀಡಲಾಗುವುದು ಎಂದು ಎ.ಎಂ.ಕ್ರಿಷ್ಟೋಫರ್ ತಿಳಿಸಿದ್ದಾರೆ. ಪ್ರವೇಶ ಶುಲ್ಕ ಓರ್ವ ಶಿಬಿರಾರ್ಥಿಗೆ ರೂ.2 ಸಾವಿರ ಆಗಿದ್ದು, ಆಸಕ್ತರು 7019909495, 9448976406 ಕ್ಕೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳ ಬಹುದಾಗಿದೆ.
ಲೇಖಕ: admin
ಮಡಿಕೇರಿ ಏ.29 NEWS DESK : ಐರಿ ಕುಟುಂಬಗಳ ನಡುವೆ ಆಯೋಜಿಸಲಾಗಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯಲ್ಲಿ ವಿಕೆಎಫ್ ಕ್ರಿಕೆಟರ್ಸ್ ತಂಡ ಅಮ್ಮಣಂಡ ಕಪ್-2025 ನ್ನು ಮುಡಿಗೇರಿಸಿಕೊಂಡಿತು. ಮೂರ್ನಾಡಿನ ಬಾಚಿಟ್ಟಿರ ದಿ.ಲಾಲುಮುದ್ದಯ್ಯ ಕ್ರೀಡಾಂಗಣದಲ್ಲಿ ಹೊದ್ದೂರು ಅಮ್ಮಣಂಡ ಕುಟುಂಬದ ವತಿಯಿಂದ ಆಯೋಜಿಸಲಾಗಿದ್ದ ಮೂರು ದಿನಗಳ ಐರಿ ಕೌಟುಂಬಿಕ ಉತ್ಸವ-2025 ರ ಅಂತಿಮ ಪಂದ್ಯದಲ್ಲಿ ವಿಕೆಎಫ್ ಕ್ರಿಕೆಟರ್ಸ್ ತಂಡ ಇಬ್ನಿವಳವಾಡಿಯ ಮಾಲೇರ ಸ್ಟ್ರೈಕರ್ಸ್ ತಂಡದ ವಿರುದ್ಧ ಗೆಲುವು ಸಾಧಿಸಿತು. ಮಾಲೇರ ಸ್ಟ್ರೈಕರ್ಸ್ ತಂಡ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು. ಮೂರು ದಿನಗಳ ಕಾಲ ನಡೆದ ಐರಿ ಜನಾಂಗದವರ ಕ್ರಿಕೆಟ್ ಟೂರ್ನಿಯಲ್ಲಿ ವಿವಿಧ ಭಾಗಗಳ 10 ತಂಡಗಳು ಪಾಲ್ಗೊಂಡಿದ್ದವು. ಅಂತಿಮ ಪಂದ್ಯವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿ ಮಾತನಾಡಿ ಜಿಲ್ಲೆಯಲ್ಲಿ ವಿವಿಧ ಜನಾಂಗಗಳು ಕ್ರೀಡಾಕೂಟವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಯಾವುದೇ ಜಾತಿ, ಧರ್ಮದ ಸಂಸ್ಸ್ಕೃತಿ, ಸಾಹಿತ್ಯ, ಕ್ರೀಡೆಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು. ಕೊಡವ ಭಾಷಿಕ ಸಮುದಾಯಗಳ ಒಕ್ಕೂಟದ ಅಧ್ಯಕ್ಷ…
ಮಡಿಕೇರಿ ಏ.29 NEWS DESK : ಕೊಡಗು ಜಿಲ್ಲೆಯಾದ್ಯಂತ ಆಗಾಗ ಮಳೆ ಬೀಳುತ್ತಿದ್ದು, ಗಾಳಿಯೂ ಸಹ ಇದೆ. ಹೆಚ್ಚಿನ ಬಿರುಗಾಳಿಯಿಂದ ವಿದ್ಯುತ್ ಸರಬರಾಜಿನಲ್ಲಿ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿ ಸ್ಪರ್ಶಿಸದೇ) ತಕ್ಷಣ ಚಾ.ವಿ.ಸ.ನಿನಿ.ಯ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್‍ಅಪ್ ಮೂಲಕ ಪೋಟೋ ಸಂದೇಶ ನೀಡಬಹುದಾಗಿದೆ. ಕೊಡಗು ಜಿಲ್ಲೆಯ (24*7) ಸಹಾಯವಾಣಿ ಸಂಖ್ಯೆ ಸರ್ವೀಸ್ ಸೆಂಟರ್‍ನ ದೂರವಾಣಿ ಸಂಖ್ಯೆ 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 9449598665. ಮಡಿಕೇರಿ ತಾಲ್ಲೂಕಿನ ಮಡಿಕೇರಿ ತಾಳತ್‍ಮನೆ, ಮೂರ್ನಾಡು, ಸಂಪಾಜೆ, ಭಾಗಮಂಡಲ, ನಾಪೋಕ್ಲು ಹಾಗೂ ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯ ಕುಮಾರ್ 9449598602, ಸಹಾಯಕ/ ಜೂನಿಯರ್ ಎಂಜಿನಿಯರ್‍ಗಳು ಮಡಿಕೇರಿಗೆ ಚೈತ್ರ 9449598603, ತಾಳತ್‍ಮನೆ ಹೇಮಂತ್…
ಮಡಿಕೇರಿ NEWS DESK ಏ.29 : ಮಡಿಕೇರಿ ನಗರ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪ್ರಭು ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಡಿಕೇರಿ ತಾಲ್ಲೂಕು ಬಂಟರ ಸಂಘದ ನಿರ್ಗಮಿತ ಅಧ್ಯಕ್ಷ ರಮೇಶ್ ರೈ ಅವರ ಅಧ್ಯಕ್ಷತೆಯಲ್ಲಿ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಪ್ರಭು ರೈ ಅವರನ್ನು ಆಯ್ಕೆ ಮಾಡಲಾಯಿತು.
ಬೆಂಗಳೂರು ಏ.29 NEWS DESK : “2025 ನೇ ಸಾಲಿನ ಹಜ್ ಯಾತ್ರಿಕರ ವಿಮಾನಯಾನಕ್ಕೆ” ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿದ್ದ ಸಮಾರಂಭದಲ್ಲಿ 2025 ನೇ ಸಾಲಿನ ಹಜ್ ಯಾತ್ರಿಕರ ವಿಮಾನಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ ಎಂದು ಹಜ್ ಯಾತ್ರಿಕರಲ್ಲಿ ಮನವಿ ಮಾಡುತ್ತೇನೆ. ಎಲ್ಲ ಧರ್ಮದವರೂ ಒಂದೇ ತಾಯಿಯ ಮಕ್ಕಳಂತೆ ಬದುಕುವುದೇ ಸಮಾಜಕ್ಕೆ ನೀಡುವ ಉತ್ತಮ ಕೊಡುಗೆ ಎಂದರು. ಈ ವರ್ಷ ಸುಮಾರು 8,635 ಜನ ಯಾತ್ರಿಕರು ಹಜ್ ಯಾತ್ರೆಗೆ ಹೊರಟಿದ್ದು, ಮುಂದಿನ ತಿಂಗಳ 15ರವರೆಗೆ ಸುಮಾರು 27 ವಿಮಾನಗಳಲ್ಲಿ ಪ್ರಯಾಣ ಕೈಗೊಳ್ಳಲಿದ್ದಾರೆ. ಪ್ರತಿಯೊಬ್ಬ ಮುಸಲ್ಮಾನ ತಮ್ಮ ಜೀವತಾವಧಿಯಲ್ಲಿ ಒಮ್ಮೆಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕೆಂಬುದು ಅವರ ಪವಿತ್ರ ಆಚರಣೆಗಳಲ್ಲಿ ಒಂದಾಗಿದೆ. ಹಜ್ ಯಾತ್ರಿಕರೆಲ್ಲರಿಗೂ ಅವರ ಪ್ರಯಾಣ ಸುಖಕರವಾಗಿಲಿ ಎಂದು ಹಾರೈಸುತ್ತೇನೆ. ಪವಿತ್ರ ಮೆಕ್ಕಾದಲ್ಲಿ ದೇಶದ ಒಳಿತಿಗೆ, ಭಾರತೀಯರ ಅದರಲ್ಲಿಯೂ ಕನ್ನಡಿಗರ ಪರವಾಗಿ ಪ್ರಾರ್ಥನೆ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ. ನಮ್ಮ…
ನವದೆಹಲಿ ಏ.29 NEWS DESK : ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ನಡೆದ ದೇಶದ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 71 ಮಂದಿ ಗಣ್ಯ ವ್ಯಕ್ತಿಗಳಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿನ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಿ ನಾಲ್ಕು ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 57 ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲಾಗಿದೆ. ತಮಿಳು ನಟ ಅಜಿತ್ ಕುಮಾರ್, ದಿವಂಗತ ಮಲಯಾಳಂ ಬರಹಗಾರ ಎಂ.ಟಿ. ವಾಸುದೇವನ್ ನಾಯರ್, ನಟ-ಶಾಸಕ ಬಾಲಕೃಷ್ಣ, ನಲ್ಲಿ ಕುಪ್ಪುಸ್ವಾಮಿ ಚೆಟ್ಟಿ, ಹಿನ್ನೆಲೆ ಗಾಯಕ ಅರಿಜಿತ್ ಸಿಂಗ್ ಮತ್ತು ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂಆರ್‌ಪಿಎಸ್) ನಾಯಕ ಮಂದ ಕೃಷ್ಣ ಮಾದಿಗ ಸೇರಿದಂತೆ 71 ಮಂದಿ ಗಣ್ಯ ವ್ಯಕ್ತಿಗಳಿಗೆ ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲಾಗಿದೆ. ಆಟೋ ಉದ್ಯಮ ನಾಯಕಿ ಮತ್ತು ಸುಜುಕಿ ಮೋಟಾರ್ಸ್ ಸಂಸ್ಥಾಪಕ ಒಸಾಮು ಸುಜುಕಿ, ಬಿಹಾರ ಜಾನಪದ ಸಂಗೀತ ದಂತಕಥೆ ಶಾರದಾ ಸಿನ್ಹಾ, ರಾಜಕಾರಣಿ ಸುಶೀಲ್ ಕುಮಾರ್, ಗಜಲ್ ಮಾಂತ್ರಿಕ ಪಂಕಜ್…
ವಿರಾಜಪೇಟೆ ಏ.29 NEWS DESK : ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 1999-20 ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಸನ್ನಿ (ಅಜಿತ್ )ಅವರ ನೇತೃತ್ವದಲ್ಲಿ ಕ್ರೀಡಾಕೂಟ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಸಂತಸ ತಂದಿದೆ. ಇನ್ನು ಮುಂದೆಯೂ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ಈ ಸಂದರ್ಭ ಚಿತ್ರನಟ ಸನ್ನಿ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಕೃಷ್ಣ, ಛಾಯಾಚಿತ್ರಗಾರ ಸಿದ್ದರಾಜು, ವಿದ್ಯುತ್ ನಿಗಮದ ನೌಕರ ಗಣಪತಿ, ಸೌಕಾತಾಲಿ, ಮಮತ, ಶ್ರೀಜಾ, ಅನೀಶ್ ಹಾಗೂ ಹಲವು ವರ್ಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸ್ನೇಹಿತರು ಪಾಲ್ಗೊಂಡಿದ್ದರು.ನೆರೆದಿದ್ದ ಎಲ್ಲಾ ಹಳೆಯ ವಿದ್ಯಾರ್ಥಿಗಳು ಪುಹಾಲ್ಗಮ್ ದುರಂತದಲ್ಲಿ ಮಡಿದವರಿಗೆ ಶ್ರದ್ದಾಂಜಲಿ ಸಲ್ಲಿಸುವುದರ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
ಮಡಿಕೇರಿ ಏ.29 NEWS DESK : ಕೊಡಗಿನ ಇತಿಹಾಸ ಪ್ರಸಿದ್ಧ ಬೇತು ಶ್ರೀ ಮಕ್ಕಿ ಶಾಸ್ತಾವು ದೇವರ ಎಡಮ್ಯಾರು ಹಬ್ಬವು ಮೇ 2 ರಿಂದ 4ರ ವರೆಗೆ ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ನಡೆಯಲಿದೆ. ಮೇ 2 ರಂದು ರಾತ್ರಿ 9 ಗಂಟೆಗೆ ಶ್ರೀ ದೇವರನ್ನು ಕೊಟ್ಟಿ ಹಾಡುವುದು, 3 ರಂದು ಬೆಳಿಗ್ಗೆ 11.30 ಗಂಟೆಗೆ ಎತ್ತು ಪೋರಾಟ, ರಾತ್ರಿ 9.30 ಗಂಟೆಗೆ ಶ್ರೀ ಶಾಸ್ತಾವು ದೇವರ ಪ್ರಸಿದ್ದ ದೀಪಾರಾಧನೆ [ ಅಂದಿ ಬೊಳಕು] ನಡೆಯಲಿದೆ. ಮೇ 4 ರಂದು ಬೆಳಿಗ್ಗೆ 9.30 ಗಂಟೆಗೆ ಶ್ರೀ ಕಲ್ಯಾಟ ಅಜ್ಜಪ್ಪ ದೇವರ ಕೋಲ ನಡೆಯಲಿದೆ. ಅಪರಾಹ್ನ 12.30 ಗಂಟೆಗೆ ಮಹಾ ಅನ್ನದಾನ ನಡೆಯಲಿದೆ. 1 ಗಂಟೆಗೆ ಶ್ರೀ ವಿಷ್ಣ ಮೂರ್ತಿದೇವರ ಕೋಲ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ತಕ್ಕ ಮುಖುಸ್ಥರು ಹಾಗು ಆಡಳಿತ ಮಂಡಳಿ ಕೋರಿದೆ.
ಮಡಿಕೇರಿ ಏ.29 NEWS DESK : ಸಿಎಸ್‍ಐಆರ್ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇಲ್ಲಿ ಆಡಳಿತಾತ್ಮಕ ಸ್ಥಾನ (Admistrative positions) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 7 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ http://cftri.res.in or http://recruitment.cftri.res.in ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ನಾಪೋಕ್ಲು ಏ.29 NEWS DESK : ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಗೆ ಜಾಗೃತಿ ಕಿರಣ ಕನ್ನಡ ಪಾಕ್ಷಿಕ ಪತ್ರಿಕೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ರಾಜ್ಯಮಟ್ಟದ ಗ್ರಾಮ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ನಡೆದ ಪತ್ರಿಕೆಯ 11ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ಸ್ಥಳೀಯ ಶಾಸಕರಾದ ನಾಡ ಭರತ್ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಎಸ್.ಕುಶನ್ ರೈ, ಪಿಡಿಓ ಚಂದ್ರಮೌಳಿ ಹಾಗೂ ಉಪಾಧ್ಯಕ್ಷ ರೇಖಾ ಬಿ ಎಸ್ ಹಾಜರಿದು,್ದ ಪ್ರಶಸ್ತಿ ಸ್ವೀಕರಿಸಿದರು. ರಾಜ್ಯದ ನಾನ ಇಲಾಖೆಯ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳಿಗೆ ‘ಕಾಯಕ ರತ್ನ’ ಪ್ರಶಸ್ತಿ ಹಾಗೂ ಉತ್ತಮ ಆಡಳಿತ ನಿರ್ವಹಣೆಯ ಗ್ರಾಮ ಪಂಚಾಯಿತಿಗೆ ರಾಜ್ಯಮಟ್ಟದ ‘ಗ್ರಾಮ ಮಿತ್ರ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಜಾಗೃತಿ ಕಿರಣ ಪತ್ರಿಕೆಯ ಪ್ರಧಾನ ಸಂಪಾದಕರು ಯಾಲ್ಪಿ ವಾಲಿ ಭಾಷಾ ತಿಳಿಸಿದರು. ವರದಿ : ದುಗ್ಗಳ ಸದಾನಂದ.






