ಲೇಖಕ: admin

ಮಡಿಕೇರಿ ಏ.29 NEWS DESK : ಇತಿಹಾಸ ನೆನಪುಗಳನ್ನು ಜೀವಂತವಾಗಿರಿಸುತ್ತದೆ. ಇತಿಹಾಸ ಅರಿಯದವನು ಬದುಕಲಿರುವ ಹಕ್ಕನ್ನು ಕಳೆದುಕೊಳ್ಳುತ್ತಾನೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅಭಿಪ್ರಾಯಪಟ್ಟಿದ್ದಾರೆ. ಕುಶಾಲನಗರ ಸಮೀಪದ ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಹಾರಂಗಿ ದಲಿತ ಸಾಹಿತ್ಯ ಪರಿಷತ್ತು, ಕೊಡಗು ವಿಶ್ವವಿದ್ಯಾಲಯ, ಮಾನವ ಬಂಧುತ್ವ ವೇದಿಕೆ, ಸಹಮತ ವೇದಿಕೆ ಹಾಗೂ ಅಹಿಂದ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಸಮಗ್ರ-ಸಮತೆಯೆಡೆಗೆ ಸಾಹಿತ್ಯ ಎಂಬ ವಿಷಯದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಸಾಹಿತಿ ಅರ್ಜುನ್ ಮೌರ್ಯ ಅವರ ‘ಬೆಂದೊಡಲ ಕುಣಿತ” ಎಂಬ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.”ವಿಜ್ಞಾನ-ತಂತ್ರಜ್ಞಾನ ರಂಗದಲ್ಲಿ ಮುಂದುವರಿದಿದ್ದೇವೆ ಎಂದು ಹೇಳಿಕೊಳ್ಳುವ ನಾವೇ ಶಿಕ್ಷಣ ರಂಗದಲ್ಲಿ ಕಳೆದ 75ವರ್ಷಗಳಲ್ಲಿ ಹಿಂದುಳಿದವರಾಗಿಯೇ ಉಳಿದಿದ್ದೇವೆ. ಶಿಕ್ಷಣದಿಂದ ಮಾತ್ರ ಸಮಾಜದ ಬದಲಾವಣೆ ಸಾಧ್ಯ ಎಂದು ಮಹಾನಾಯಕ ಡಾ||.ಬಿ.ಆರ್.ಅಂಬೇಡ್ಕರ್ ಪ್ರತಿಪಾದಿಸಿದ್ದರು. ಮಹಿಳೆಯರ ಸುರಕ್ಷಿತತೆ ಮತ್ತು ಸಮಾನತೆಯ ದೃಷ್ಟಿಯಲ್ಲಿ ನಮ್ಮ ರಾಷ್ಟ್ರ ಇನ್ನೂ ಹಿಂದುಳಿದ ರಾಷ್ಟ್ರಗಳ ಪಟ್ಟಿಯಲ್ಲೇ ಉಳಿದಿದೆ. ಶಿಕ್ಷಣ ಎಂಬುದು ಶೋಷಣೆಯನ್ನು ಪ್ರಶ್ನಿಸಲು ಕಲಿಸುತ್ತದೆ. ಆದರೆ, ಇಂದು ನಾವು ಪ್ರಶ್ನಿಸಲು…

Read More

ಮಡಿಕೇರಿ NEWS DESK ಏ.28 : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಸಂದರ್ಭ ವಿದ್ಯುತ್ ಸ್ಪರ್ಷಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರದ ಬೈಚನಹಳ್ಳಿಯ ರೈತ ಸಹಕಾರ ಭವನದ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಬಿ.ಬಿ.ಮೋಹನ್ (63)ಮೃತ ದುರ್ದೈವಿಯಾಗಿದ್ದಾರೆ. ರಸ್ತೆಯಲ್ಲಿ ಬಿದ್ದಿದ್ದ 11 ಕೆವಿ ವಿದ್ಯುತ್ ತಂತಿ ತುಳಿದಾಗ ವಿದ್ಯುತ್ ಸ್ಪರ್ಷಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಚೆಸ್ಕಾಂ ಅಭಿಯಂತರರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ NEWS DESK ಏ.28 : ಮಡಿಕೇರಿ ನಗರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಕಲಾವತಿ ಪಿ. ಹಾಗೂ ಉಪಾಧ್ಯಕ್ಷರಾಗಿ ಮಹೇಶ್ ಜೈನಿ ಅವರು ಆಯ್ಕೆಯಾಗಿದ್ದಾರೆ. ಸುದೀರ್ಘ ಅವಧಿಯಿಂದ ಖಾಲಿ ಇದ್ದ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನ ಭರ್ತಿಯಾಗುವ ಮೂಲಕ ಮತ್ತೆ ನಗರಸಭೆಯಲ್ಲಿ ಜನಪ್ರತಿನಿಧಿಗಳ ಆಡಳಿತ ಆರಂಭಗೊಂಡಿದೆ. ಕಳೆದ ಎರಡು ವರ್ಷಗಳಿಂದ ನಗರಸಭೆಯಲ್ಲಿ ತಲೆದೋರಿದ್ದ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಗೊಂದಲ ಬಗೆಹರಿದ ಬೆನ್ನಲ್ಲೆ, ಇಂದು ಚುನಾವಣಾಧಿಕಾರಿಗಳಾದ ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಾಡೆ ಅವರ ನೇತೃತ್ವದಲ್ಲಿ ಚುನಾವಣಾ ಪ್ರಕಿಯೆ ನಡೆಯಿತು. ನಾಮಪತ್ರ ಸಲ್ಲಿಕೆ, ಪರಿಶೀಲನೆ, ಉಮೇದುವಾರಿಕೆ ಹಿಂದಕ್ಕೆ ಪಡೆಯುವ ಪ್ರಕ್ರಿಯೆಗಳು ಮುಗಿದ ಬಳಿಕ ಮಧ್ಯಾಹ್ನ 3 ಗಂಟೆಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕಿಯೆ ಕೈ ಎತ್ತುವ ಮೂಲಕ ನಡೆಯಿತು. ಅಧ್ಯಕ್ಷರಾಗಿ ಆಯ್ಕೆಯಾದ ಬಿಜೆಪಿಯ ಕಲಾವತಿ ಅವರು ನಗರಸಭೆೆಯಲ್ಲಿರುವ 16 ಬಿಜೆಪಿ ಸದಸ್ಯರು ಹಾಗೂ ಸಂಸದ ಯದುವೀರ್ ಒಡೆಯರ್ ಅವರ ಮತ ಸೇರಿದಂತೆ ಒಟ್ಟು 17 ಮತಗಳನ್ನು ಪಡೆದರು. ಇಷ್ಟೇ ಸಂಖ್ಯೆಯ ಮತಗಳನ್ನು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿಯ…

Read More

ಮಡಿಕೇರಿ ಏ.28 : ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯವು ಮೇರಾ ಯುವ್ ಭಾರತ್ (MY Bharat) ಪ್ಲಾಟ್‌ಫಾರ್ಮ್ ಮೂಲಕ ಯುವಕರಿಗಾಗಿ ಒಂದು ವಿಶಿಷ್ಟ ದೇಶ ನಿರ್ಮಾಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. “ವಿಕಸಿತ್ ಭಾರತ್ ವೈಬ್ರಂಟ್ ವಿಲೇಜಸ್” ಎಂಬ ಹೆಸರಿನಲ್ಲಿ ಪರಿಚಿತವಾಗಿರುವ ಈ ಕಾರ್ಯಕ್ರಮವು ಮೇ 15 ರಿಂದ ಮೇ 30 ರವರೆಗೆ ಲೇಹ್ ಲಡಾಖ್, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಗಡಿಭಾಗದ ಗ್ರಾಮಗಳಲ್ಲಿ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ದೇಶದ ವಿವಿಧ ಭಾಗಗಳಿಂದ ಆಯ್ಕೆಗೊಂಡ ಯುವಕರು ಈ ಗ್ರಾಮಗಳಲ್ಲಿ 10 ದಿನಗಳು ವಾಸವಿದ್ದು, ಸ್ಥಳೀಯ ಸಂಸ್ಕöÈತಿ, ಸಮುದಾಯಗಳೊಂದಿಗೆ ಸಂವಹನ ಮಾಡಿ, ಗ್ರಾಮೀಣಾಭಿವೃದ್ಧಿಯನ್ನು ಅಧ್ಯಯನ ಮಾಡಿ, ಸೇವಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದಿಂದ 15 ಯುವಕರನ್ನು ಆಯ್ಕೆ ಮಾಡಲಿದ್ದು, 21 ರಿಂದ 29 ವರ್ಷದೊಳಿನ ಆಸಕ್ತ ಯುವಕರು ಮೇ 3 ರ ಒಳಗಾಗಿ https://mybharat.gov.in ಲಿಂಕ್‌ನಲ್ಲಿ ಅರ್ಜಿ ಸಲ್ಲಿಸಬಹುದು.…

Read More

ಮಡಿಕೇರಿ ಏ.28 NEWS DESK : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಕುರಿತು ಮೇ 5 ರಿಂದ ನಡೆಯುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬಂಧ ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ಸುಗಮ ಹಾಗೂ ಸುಲಲಿತವಾಗಿ ಸಮೀಕ್ಷೆ ಕೈಗೊಳ್ಳುವಂತೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ನಿರ್ದೇಶನ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ಸಂಬಂಧ ಮಾಸ್ಟರ್ ತರಬೇತಿದಾರರಿಗೆ ಸೋಮವಾರ ನಡೆದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಎಚ್.ಎನ್.ನಾಗಮೋಹನ್‍ದಾಸ್ ಏಕಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದ್ದು, ಈ ಸಂಬಂಧ ಮಾಸ್ಟರ್ ಟ್ರೈನರ್‍ಗಳು ಪರಿಶಿಷ್ಟ ಜಾತಿಯ ಕುಟುಂಬಗಳು ಹೇಳುವ ಮಾಹಿತಿ ಮೊಬೈಲ್ ಆಪ್ ಮೂಲಕ ಭರ್ತಿ ಮಾಡಬೇಕು. ಈ ಸಂಬಂಧ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ಕಾರ್ಯನಿರ್ವಹಿಸಲಿದೆ…

Read More

ಮಡಿಕೇರಿ ಏ.28 NEWS DESK : ಮ್ಯಾನ್ಯುವಲ್ ಸ್ಕ್ಯಾವೆಂಜರ್ ವೃತ್ತಿಯಲ್ಲಿ ತೊಡಗಿರುವ ಕುಟುಂಬಗಳ ಸದಸ್ಯರ ಸಂಖ್ಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಮೀಕ್ಷೆ ಆರಂಭವಾಗಿದ್ದು, ರಾಷ್ಟ್ರೀಯ ಸಪಾಯಿ ಕರ್ಮಚಾರಿಗಳ ನಾಯಕ ಐ.ಪಿ.ಡಿ ಸಾಲಪ್ಪ ಅವರ ಕುಲ ಬಾಂಧವರು ಸ್ವಾಭಿಮಾನಕ್ಕಾಗಿ ಅರುಂಧತಿಯಾರ್ ಜಾತಿಗೆ ಸೇರಿದವರೆಂದು ಸಮೀಕ್ಷೆ ಸಂದರ್ಭ ತಿಳಿಸುವಂತೆ ಅಖಿಲ ಕರ್ನಾಟಕ ಅರುಂಧತಿಯಾರ್ ಮಹಾಸಭಾದ ರಾಜ್ಯಾಧ್ಯಕ್ಷ ಆರ್.ಕೃಷ್ಣ ಮನವಿ ಮಾಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಹಾಗೂ ಆದಿ ದ್ರಾವಿಡ ಸಮುದಾಯ ಅರುಂಧತಿಯಾರ್ ಜಾತಿಗೆ ಸೇರಿದೆ. ಇವರು ಮ್ಯಾನ್ಯುವಲ್ ಸ್ಕ್ಯಾವೆಂಜರ್ ವೃತ್ತಿಯಲ್ಲಿ ತೊಡಗಿದ್ದು, ಜೀವನ ನಿರ್ವಹಣೆಯೇ ಕಷ್ಟವಾಗಿದೆ. ಈ ಹಿಂದೆ ಮಾಡಿದ ಸಮೀಕ್ಷೆ ಕಾರ್ಯದ ಮಾಹಿತಿ ಸರಿಯಾಗಿ ಗೊತ್ತಿಲ್ಲದೆ ಅವಕಾಶ ವಂಚಿತರಾಗಿರುವುದರಿಂದ ಹಲವು ಯೋಜನೆಗಳನ್ನು ಕೈತಪ್ಪಿವೆ. ಶಿಕ್ಷಣ ಮತ್ತು ಆರೋಗ್ಯ ಸೇವೆಯು ಸಮರ್ಪಕವಾಗಿ ನಮಗೆ ಸಿಗುತ್ತಿಲ್ಲ. ಎಲ್ಲದರಿಂದಲೂ ನಾವು ವಂಚಿತರಾಗುತ್ತಿದ್ದೇವೆ. ಆದ್ದರಿಂದ ಈಗಾಗಲೇ ಆರಂಭವಾಗಿರುವ ಸಮೀಕ್ಷೆಯಲ್ಲಿ ಅರುಂಧತಿಯಾರ್ ಜಾರಿಗೆ ಸೇರಿದವರೆಂದು ಬರೆಸುವಂತಾಗಬೇಕು ಎಂದು ಹೇಳಿದರು. ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕುಟುಂಬದವರೆಂದು ಪರಿಗಣಿಸುವ ಮೂಲಕ ನಮಗೆ…

Read More

ಸೋಮವಾರಪೇಟೆ ಏ.28 NEWS DESK : ಕೊಡಗು ವಿಶ್ವವಿದ್ಯಾಲಯಯವನ್ನು ರದ್ದುಪಡಿಸುವುದು ಅಥವಾ ವಿಲೀನಗೊಳಿಸುವುದಕ್ಕೆ ಮುಂದಾದರೆ ಅದರ ದುಷ್ಪರಿಣಾಮವನ್ನು ಸರ್ಕಾರವೇ ಎದುರಿಸಬೇಕಾಗುತ್ತದೆ ಎಂದು ರಾಜ್ಯ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕೆ.ಎನ್.ದೀಪಕ್ ಎಚ್ಚರಿಸಿದರು. ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಜೇಸಿ ವೇದಿಕೆಯಲ್ಲಿ ನಡೆದ ಕೊಡಗು ವಿಶ್ವವಿದ್ಯಾಲಯವನ್ನು ಉಳಿಸಿಬೇಕೆಂಬ ಹಕ್ಕೊತ್ತಾಯವನ್ನು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೊಡಗು ವಿಶ್ವವಿದ್ಯಾಲಯವನ್ನು ವಿಲೀನ ಮಾಡುವುದಿಲ್ಲ ಎಂದು ಇದೂವರೆಗೆ ಸರ್ಕಾರ ಅಧಿಕೃತ ಹೇಳಿಕೆ ನೀಡಿಲ್ಲ. ಇದರಿಂದ ವಿದ್ಯಾರ್ಥಿಗಳು ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ವಿಶ್ವವಿದ್ಯಾಲಯಕ್ಕೆ ಸೇರಲು ಭಯಪಡುತ್ತಿದ್ದಾರೆ ಎಂದರು. ಜನಪ್ರತಿನಿಧಿಗಳು, ಅಧಿಕಾರಿಗಳು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿದೆ. ಜಿಲ್ಲೆಯ ಶಾಸಕರುಗಳು ಕೂಡ ಇದರ ಕುರಿತು ಸ್ಪಷ್ಟ ನಿಲುವು ವ್ಯಕ್ತಪಡಿಸುತ್ತಿಲ್ಲ ಎಂದರು. ಸಭೆಯಲ್ಲಿ ಪಾಲ್ಗೊಂಡಿದ್ದ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಅರುಣ್ ಕೊತ್ನಳ್ಳಿ ಮಾತನಾಡಿ, ಜಿಲ್ಲೆಯ ಇಬ್ಬರು ಶಾಸಕರುಗಳು ವಿಶ್ವವಿದ್ಯಾಲಯವನ್ನು ಉಳಿಸಲು ಹೆಚ್ಚಿನ ಪ್ರಯತ್ನ ಮಾಡಬೇಕು. ರೈತರು, ಬಡವರು, ಕೂಲಿ ಕಾರ್ಮಿಕರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ-ಪಂಗಡದವರು ವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿದ್ದಾರೆ. ಕೊಡಗಿನಲ್ಲಿ…

Read More

ಸೋಮವಾರಪೇಟೆ ಏ.28 NEWS DESK : ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದು ಕೊರತೆ ಸಭೆ ಇನ್ಸ್‍ಪೆಕ್ಟರ್ ಮುದ್ದುಮಾದೇವ ಅವರ ಅಧ್ಯಕ್ಷತೆಯಲ್ಲಿ ಪೊಲೀಸ್ ಠಾಣೆಯಲ್ಲಿ ನಡೆಯಿತು. ಕಳೆದ ತಿಂಗಳ ಸಭೆಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಕಳ್ಳಬಟ್ಟಿ ಸಾರಾಯಿ ತಯಾರಿಕೆಯ ಬಗ್ಗೆ ಚರ್ಚೆ ನಡೆದಿತ್ತು. ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಬಕಾರಿ ಮತ್ತು ಪೊಲೀಸ್ ಇಲಾಖೆಯ ಜಂಟಿ ಕಾರ್ಯಚರಣೆ ನಡೆಸಲಾಯಿತು. 8 ಲೀಟರ್ ಬಟ್ಟಿ ಸರಾಯಿ, ಒಂದು ಬ್ಯಾರಲ್ ಪುಳಿಗಂಜಿ ಪತ್ತೆಹಚ್ಚಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಇನ್ಸ್‍ಪೆಕ್ಟರ್ ತಿಳಿಸಿದರು. ಸಭೆಯಲ್ಲಿ ರಾಜಪ್ಪ ಮಾತನಾಡಿ, ಅಬ್ಬಿಮಠ ಗ್ರಾಮದ ಬಸ್ ನಿಲ್ದಾಣ ಮತ್ತು ಯಡೂರು ಬಸ್ ನಿಲ್ದಾಣದಲ್ಲಿ ಬಿಡಿ ಸಿಗರೇಟು ಮತ್ತು ಮದ್ಯದ ಬಾಟಲ್‍ಗಳು ತುಂಬಿವೆ. ಪ್ರಯಾಣಿಕರು ನಿಲ್ದಾಣದಲ್ಲಿ ಕುಳಿತುಕೊಳ್ಳಲು ಅಸಹ್ಯ ಪಟ್ಟುಕೊಳ್ಳುತ್ತಿದ್ದಾರೆ. ಕೆಲ ಸಂದರ್ಭ ಪುಂಡರ ಹಾವಳಿಯೂ ಜಾಸ್ತಿಯಾಗಿದೆ. ಪೊಲೀಸರು ಕಾನೂನು ಕ್ರಮ ಜರುಗಿಸಬೇಕು ಎಂದು ಹೇಳಿದರು. ದಲಿತಪರ ಹೋರಾಟಗಾರ ಎಸ್.ಎ.ಪ್ರತಾಪ್ ಮಾತನಾಡಿ, ನಗರದಲ್ಲಿ ಪಾಕಿರ್ಂಗ್…

Read More

ಮಡಿಕೇರಿ ಏ.28 NEWS DESK : ನಿವೇಶನ ರಹಿತರಿಗೆ ನಿವೇಶ ನೀಡುವಂತೆ ಒತ್ತಾಯಿಸಿ ಚೆಟ್ಟಳ್ಳಿಯಲ್ಲಿ ನಿವೇಶನ ರಹಿತ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು. ಚೆಟ್ಟಳ್ಳಿ ಗ್ರಾ.ಪಂ ಮುಂಭಾಗದಲ್ಲಿ ಜಮಾಯಿಸಿದ ನಿವೇಶನ ರಹಿತರು ಹಾಗೂ ವಿವಿಧ ಸಂಘಟನೆಯ ಪ್ರಮುಖರು ಘೋಷಣೆಗಳನ್ನು ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತವಾಗಿ ವಾಸಿಸಲು ಮನೆಯಿಲ್ಲದ ಸುಮಾರು 700ಕ್ಕಿಂತಲೂ ಹೆಚ್ಚು ಕುಟುಂಬಗಳು ತೋಟದ ಲೈನ್‍ಮನೆಗಳಲ್ಲಿ, ಅಪಾಯಕಾರಿ ಪ್ರದೇಶಗಳಲ್ಲಿಯೂ ಬದುಕು ನಡೆಸುತ್ತಿದ್ದು, ಹುಟ್ಟಿನಿಂದಲೂ ಈ ರೀತಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಗಾಂಧಿಜೀಯವರ ರಾಮರಾಜ್ಯದ ಕನಸು ಈಡೇರಲಿಲ್ಲ. ಸಂವಿಧಾನ ಆಶಯಗಳು ಜಾರಿ ಮಾಡಲು ಸಾಧ್ಯವಾಗದ ಕಾರಣಕ್ಕಾಗಿ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆದಿವಾಸಿ, ದಲಿತ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಇನ್ನೂ ಅನೇಕ ಸಮುದಾಯಗಳು ಬದುಕುವ ನೈಜ ಸ್ವಾತಂತ್ರ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗವು…

Read More

ಮಡಿಕೇರಿ ಏ.28 NEWS DESK : ಮಡಿಕೇರಿ ತಾಲ್ಲೂಕಿನ ಮುಕ್ಕೋಡ್ಲು, ಮಕ್ಕಂದೂರು, ಕಾಲೂರು, ಮುಟ್ಲು, ಹಮ್ಮಿಯಾಲ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಬಿಎಸ್‍ಎನ್‍ಎಲ್ ನೆಟ್‍ವರ್ಕ್ ಸಮಸ್ಯೆ ಕಾಡುತ್ತಿದ್ದು, ನಿತ್ಯ ಕೆಲಸ, ಕಾರ್ಯಗಳಿಗೆ ಅಡಚಣೆಯಾಗಿದೆ. ತಕ್ಷಣ ಅಧಿಕಾರಿಗಳು ನೆಟ್‍ವರ್ಕ್ ಸಮಸ್ಯೆಗೆ ಸ್ಪಂದಿಸದೆ ಇದ್ದಲ್ಲಿ ಬಿಎಸ್‍ಎನ್‍ಎಲ್ ಕಚೇರಿಗೆ ಮುತ್ತಿಗೆ ಹಾಕಲು ಗ್ರಾಮಸ್ಥರು ನಿರ್ಧರಿಸಿದ್ದಾರೆ ಎಂದು ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ನ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚಿನ ದಿನಗಳಲ್ಲಿ ಬಿಎಸ್‍ಎನ್‍ಎಲ್ ನೆಟ್‍ವರ್ಕ್ ಹೀನಾಯ ಸ್ಥಿತಿಯಲ್ಲಿದ್ದು, ವಿದ್ಯಾರ್ಥಿಗಳು, ಯುವ ಪೀಳಿಗೆ, ಉದ್ಯೋಗಸ್ಥರು ಹಾಗೂ ಸರ್ಕಾರಿ ಕಚೇರಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಸ್ಥರಿಗೆ ಕರೆಗಳು ದೊರೆಯದೆ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತಿಲ್ಲ. ನೆಟ್‍ವರ್ಕ್ ಸಮಸ್ಯೆಯಿಂದಾಗಿ ಸಾರ್ವಜನಿಕ ಸೇವೆಗೆ ಅಡಚಣೆಯಾಗಿದೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕ್ಷೀಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಒಂದು ತಿಂಗಳು ಕಳೆದರೆ ಮಳೆಗಾಲವೂ ಆರಂಭವಾಗುತ್ತದೆ, ಪ್ರಾಕೃತಿಕ ವಿಕೋಪಗಳು ಸಂಭವಿಸುವಾಗ ಅಥವಾ ಸಂಕಷ್ಟದ ಸಂದರ್ಭಗಳಲ್ಲಿ ಸಂಪರ್ಕ ಸಾಧಿಸಲು ಬಿಎಸ್‍ಎನ್‍ಎಲ್ ನೆಟ್‍ವರ್ಕ್…

Read More