ಮಡಿಕೇರಿ ಮೇ 27 NEWS DESK : ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ಜಿಲ್ಲಾಡಳಿತದಿಂದ ಸಹಾಯವಾಣಿ ಸಂಖ್ಯೆ 08272-221077 ಆರಂಭಿಸಿದೆ. ಜೊತೆಗೆ 8550001077 ವಾಟ್ಸ್‍ಆಪ್ ಸಂಖ್ಯೆಯನ್ನು ಸಹ ಆರಂಭಿಸಿದ್ದು, ಅತಿವೃಷ್ಟಿಯಿಂದ ಉಂಟಾಗುವ ವಿಪತ್ತಿನ ಬಗ್ಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ತಿಳಿಸಿದ್ದಾರೆ. ಮುಂಗಾರು ಆರಂಭ ಹಿನ್ನೆಲೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಮಡಿಕೇರಿ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ 08272-228396, ವಿರಾಜಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08274-257328, ಸೋಮವಾರಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08276-282045, ಕುಶಾಲನಗರ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08276-200198 ಹಾಗೂ ಪೊನ್ನಂಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08274-249700 ಸಹಾಯವಾಣಿ ಕೇಂದ್ರ ಆರಂಭಿಸಿಲಾಗಿದೆ ಎಂದರು. ಮಳೆಯಿಂದ ಉಂಟಾಗುವ ಹಾನಿ ಸಂಬಂಧ ಜಿಲ್ಲಾಡಳಿತದಿಂದ ಆರಂಭಿಸಿರುವ ವಾಟ್ಸ್‍ಆಪ್ ಗುಂಪಿಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಛಾಯಾಚಿತ್ರ ಹಾಗೂ ವಾಯ್ಸ್ ರೆಕಾರ್ಡ್…
ಲೇಖಕ: admin
ಮಡಿಕೇರಿ ಮೇ 27 NEWS DESK : ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿರುವ ಘಟನೆ ಭಾಗಮಂಡಲದ ಪದಕಲ್ಲು ಗ್ರಾಮದಲ್ಲಿ ನಡೆದಿದೆ. ಭಾಗಮಂಡಲ ಹೋಬಳಿ ಪದಕಲ್ಲು ಗ್ರಾಮದ ಭಾಸ್ಕರ ಎಂಬವರ ಮನೆಯ ಕುಸಿದು ತೀವ್ರ ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಡಿಕೇರಿ ಮೇ 27 NEWS DESK : ಯಾವುದೇ ಸಮುದಾಯಗಳು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಸಂಘಟನೆಗಳು ಕಾರ್ಯೋನ್ಮುಖವಾಗಬೇಕು ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ಅಧ್ಯಕ್ಷ ದುದ್ದಿಯಂಡ ಹೆಚ್.ಸೂಫಿ ಹಾಜಿ ಅಭಿಪ್ರಾಯಪಟ್ಟರು. ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ನ ಕಾರ್ಯಕಾರಿ ಸಮಿತಿ ವತಿಯಿಂದ ಆಡಳಿತ ಮಂಡಳಿ ಪದಾಧಿಕಾರಿಗಳಿಗಾಗಿ ಮತ್ತು ಅವರ ಕುಟುಂಬದವರಿಗಾಗಿ ವಿರಾಜಪೇಟೆ ಸಮೀಪದ ಕದನೂರಿನ ಖಾಸಗಿ ರೆಸಾರ್ಟ್ ನಲ್ಲಿ ಆಯೋಜಿಸಲಾಗಿದ್ದ ಕೆ.ಎಂ.ಎ. ಕೌಟುಂಬಿಕ ಸಂತೋಷಕೂಟ-2025 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಘಟನೆಗಳು ಹೆಚ್ಚು ಕ್ರಿಯಾಶೀಲತೆಯಿಂದ ಮುನ್ನಡೆಯಬೇಕಾದರೆ ಅದರ ಪದಾಧಿಕಾರಿಗಳ ಮತ್ತು ಸದಸ್ಯರ ಕೌಟುಂಬಿಕ ಸಹಕಾರ ಅತಿ ಮುಖ್ಯವಾಗುತ್ತದೆ. ಇದರಿಂದ ಸಂಘಟನೆಗಳು ಸಹಜವಾಗಿಯೇ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು. ಸಂಘಟನೆ ಸಮಾಜದ ಶಕ್ತಿಯಾಗಿ ರೂಪುಗೊಳ್ಳಲು ಆಡಳಿತ ಮಂಡಳಿ ಪದಾಧಿಕಾರಿಗಳ ನಿಷ್ಠೆ ಮತ್ತು ಪ್ರಾಮಾಣಿಕತೆ ಪ್ರಮುಖ ಪಾತ್ರ ವಹಿಸುತ್ತದೆ. ಯಾವುದೇ ಸಂಘಟನೆಗಳಲ್ಲಿ ಪದಾಧಿಕಾರಿಗಳು ಅವರನ್ನು ಪೂರ್ಣವಾಗಿ ತೊಡಗಿಸಿಕೊಳ್ಳಬೇಕಾದರೆ ಅವರ ಕುಟುಂಬ ಸದಸ್ಯರ ಸಹಕಾರವೂ ಅತಿ ಮುಖ್ಯ ಎಂದು ತಿಳಿಸಿದರು. ಆಡಳಿತ ಮಂಡಳಿ ಪದಾಧಿಕಾರಿಗಳು…
ಮಡಿಕೇರಿ NEWS DESK ಮೇ 27 : ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ಬಿದ್ದು ಹಾನಿ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ವಿದ್ಯುತ್ ಮಾರ್ಗದ ನಿರ್ವಹಣೆಗಾಗಿ ಹೆಚ್ಚುವರಿ ಲೈನ್ ಮೆನ್ ಗಳನ್ನು ನಿಯೋಜಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ 10 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ 600 ಕ್ಕೂ ಅಧಿಕ ವಿದ್ಯುತ್ ಕಂಬಗಳು ಬಿದ್ದು ಹಾನಿ ಉಂಟಾಗಿದೆ. ಅಲ್ಲದೆ ವಿದ್ಯುತ್ ಸಂಪರ್ಕ ಕಡಿತಗೊಂಡು ಸಾರ್ವಜನಿಕರಿಗೆ ತೊಂದರೆ ಎದುರಾಗಿದೆ. ಚೆಸ್ಕಾಂ ನಲ್ಲಿ ಸಿಬ್ಬಂದಿಗಳ ಕೊರತೆ ಇರುವುದನ್ನು ಮನಗಂಡ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಶಕರಾದ ಎ.ಎಸ್.ಪೊನ್ನಣ್ಣ ಅವರು ಲೈನ್ ಮೆನ್ ಗಳ ನಿಯೋಜನೆಗೆ ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಎರ್.ಮುನಿಗೋಪಾಲ ರಾಜು ಅವರ ಬಳಿ ಕೋರಿಕೊಂಡಿದ್ದರು. ಮನವಿಗೆ ಸ್ಪಂದಿಸಿದ ಚೆಸ್ಕಾಂ ಎಂಡಿ ಸುಮಾರು 74 ಹೆಚ್ಚುವರಿ ಲೈನ್ ಮೆನ್ ಗಳನ್ನು ಕೊಡಗು ಜಿಲ್ಲೆಗೆ ನಿಯೋಜನೆ ಮಾಡಿದ್ದಾರೆ. ಮಂಡ್ಯ, ಚಾಮರಾಜನಗರ, ಮೈಸೂರು ಮತ್ತು ಹಾಸನದ ಲೈನ್‌ಮೆನ್‌ಗಳನ್ನು ನಿಯೋಜಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ. ಗಾಳಿ,…
ಬೆಂಗಳೂರು ಮೇ 27 NEWS DESK : ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃಗಳು ಕೂಡ ಹೌದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ವಿಧಾನಸೌಧ ಆವರಣದಲ್ಲಿರುವ ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂರವರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮಾತನಾಡಿದ ಅವರು, ನೆಹರೂ ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ. ದೇಶದ ಬಡತನವನ್ನು ಹೋಗಲಾಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಅವರು ಮಾಡಿದ್ದರು. ಉದ್ಯೋಗ ಸೃಷ್ಟಿ, ಮಿಶ್ರ ಆರ್ಥಿಕತೆಯನ್ನು ದೇಶದಲ್ಲಿ ಪರಿಚಯಿಸಿದ್ದಲ್ಲದೆ ದೇಶದಲ್ಲಿ ಹಸಿರು ಕ್ರಾಂತಿಗೆ ಅಡಿಗಲ್ಲು ಹಾಕಿದರು. ಸಹಕಾರಿ ಚಳವಳಿ, ವಿಕೇಂದ್ರೀಕರಣಕ್ಕೆ ಬದ್ಧತೆಯಿಂದ ಕೆಲಸ ಮಾಡಿದರು. ನೆಹರೂ ಅವರು ಪ್ರಧಾನಿಗಳಾಗಿದ್ದ 17 ವರ್ಷಗಳ ಅವಧಿಯಲ್ಲಿ ಅನೇಕ ಅಣೆಕಟ್ಟು, ಸಾರ್ವಜನಿಕ ವಲಯದಲ್ಲಿ ಕೈಗಾರಿಕೆ, ಶಿಕ್ಷಣ ಸಂಸ್ಥೆಗಳನ್ನೂ ಸ್ಥಾಪಿಸಿದರು. ದೇಶ ಆರ್ಥಿಕವಾಗಿ ಸಬಲತೆಯನ್ನು ಕಂಡುಕೊಂಡಿದ್ದರೆ, ಆಹಾರದಲ್ಲಿ ಸ್ವಾವಲಂಬನೆಯನ್ನು ಕಂಡುಕೊಂಡಿದ್ದರೆ ನೆಹರೂ ಅವರು ಹಾಕಿದ ಅಡಿಪಾಯ ಕಾರಣ. ನೆಹರೂ ಅವರನ್ನು…
ಗೋಣಿಕೊಪ್ಪ ಮೇ 27 NEWS DESK : ಕೊಡವ ತಕ್ಕ್ ಎಳ್ತ್‌ಕಾರಡ ಕೂಟ ಹಾಗೂ ಗೋಣಿಕೊಪ್ಪ ಕಾವೇರಿ ಕಾಲೇಜಿನ ಜಂಟಿ ಆಶ್ರಯದಲ್ಲಿ ಮೇ 31 ರಂದು ಜನಪ್ರಿಯ ಕೊಡವ ಸಾಹಿತ್ಯ ಮಾಲೆ ಯೋಜನೆ’ಯಲ್ಲಿ ಲೇಖಕಿ ಉಳುವಂಗಡ ಕಾವೇರಿ ಉದಯ ಬರೆದ 190ನೇ ಹೆಜ್ಜೆ, 17 ಲೇಖಕರು ಬರೆದ 191ನೇ ಹೆಜ್ಜೆ ಹಾಗೂ ಲೇಖಕಿ ಕೊಟ್ಟಂಗಡ ಕವಿತ ವಾಸುದೇವ ಬರೆದ 192ನೇ ಹೆಜ್ಜೆ ಪುಸ್ತಕ ಬಿಡುಗಡೆ ಹಾಗೂ ಸಾಹಿತಿ ಮುದ್ದಿಯಡ ಕುಶ ಪೊನ್ನಪ್ಪ ದತ್ತಿನಿಧಿ ಕಥಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೊಡವ ಭಾಷೆಯ ಹಾಡುಗಾರಿಕೆ, ಓದುವುದು ಮತ್ತು ಹಾಸ್ಯ ಸ್ಪರ್ಧೆ ನಡೆಯಲಿದೆ. ಅಂದು ಪೂರ್ವಾಹ್ನ 10 ಗಂಟೆಗೆ ಗೋಣಿಕೊಪ್ಪ ಕಾವೇರಿ ಕಾಲೇಜಿನ ಸೆಮಿನಾರ್ ಹಾಲ್’ನಲ್ಲಿ ‘ಕೊಡವ ತಕ್ಕ್ ಎಳ್ತ್‌ಕಾರಡ ಕೂಟ’ದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಾವೇರಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಮಂಡೇಪಂಡ ಸುಗುಣ ಮುತ್ತಣ್ಣ, ಗೋಣಿಕೊಪ್ಪ ಕಾವೇರಿ ಪದವಿ ಕಾಲೇಜಿನ…
ಮಡಿಕೇರಿ ಮೇ 27 NEWS DESK : ಭಾಗಮಂಡಲ ಹೋಬಳಿಯ ಬೇಂಗೂರು ವ್ಯಾಪ್ತಿಯ ದೋಣಿಕಾಡು ಎಂಬಲ್ಲಿ ಮಳೆಯಿಂದಾಗಿ ರಸ್ತೆಯು ಜಲಾವೃತವಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ದೋಣಿಯನ್ನು ವ್ಯವಸ್ಥೆ ಕಲ್ಪಿಸಲಾಗಿದೆ.
ಕುಶಾಲನಗರ ಮೇ 27 NEWS DESK : ಸಿಇಟಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯದಲ್ಲಿ 875ನೇ ಸ್ಥಾನ ಗಳಿಸಿದ ಕುಶಾಲನಗರ ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿ ಕೌಶಿಕ್ ಅವರನ್ನು ವಿದ್ಯಾಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ವಿದ್ಯಾರ್ಥಿಯ ಪೋಷಕರೊಂದಿಗೆ ಸಾಧಕ ವಿದ್ಯಾರ್ಥಿಯನ್ನು ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎನ್.ಎನ್.ಶಂಭುಲಿಂಗಪ್ಪ ಮತ್ತು ವಿವೇಕಾನಂದ ಪಿಯು ಕಾಲೇಜಿನ ಪ್ರಾಂಶುಪಾಲ ಕ್ಲಾರಾ ರೇಷ್ಮಾ ಸಂಸ್ಥೆಯ ಪರವಾಗಿ ಸನ್ಮಾನಿಸಿ, ಗೌರವಿಸಿದರು. ವಿವೇಕಾನಂದ ಪಿಯು ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಈ ಸಾಲಿನ ಪರೀಕ್ಷೆಯಲ್ಲಿ ಶೇ.96 ಅಂಕ ಪಡೆದಿರುವ ಕೌಶಿಕ್ ಉತ್ತಮ ಸಾಧನೆ ಗಳಿಸಿರುವ ಬಗ್ಗೆ ಸಂಸ್ಥೆಯ ಅಧ್ಯಕ್ಷ ಶಂಭುಲಿಂಗಪ್ಪ ಸಂತಸ ವ್ಯಕ್ತಪಡಿಸಿ ಶುಭ ಕೋರಿದರು. ಉನ್ನತ ವ್ಯಾಸಂಗಕ್ಕೆ ಸಂಸ್ಥೆಯ ಮೂಲಕ ಸಹಾಯ ಹಸ್ತ ನೀಡುವ ಭರವಸೆ ವ್ಯಕ್ತಪಡಿಸಿದರು. ವಿದ್ಯಾರ್ಥಿ ಕೌಶಿಕ್ ಮಾತನಾಡಿ ತಾನು ಇಂಜಿನಿಯರಿಂಗ್ ವಿಭಾಗದಲ್ಲಿ ಉನ್ನತ ಮಟ್ಟದ ಶಿಕ್ಷಣ ಪಡೆಯುವ ಗುರಿ ಹೊಂದಿರುವುದಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭ ನಡೆದ ಸರಳ ಸಮಾರಂಭದಲ್ಲಿ ಸಂಸ್ಥೆಯ ಆಡಳಿತ…
ಸಿದ್ದಾಪುರ ಮೇ 27 NEWS DESK : ಸಮಸ್ತ ಕೇಂದ್ರಿಯ ಜಂಇಯ್ಯತುಲ್ ಮುಅಲ್ಲಿಮೀನ ಕೊಡಗು ಜಿಲ್ಲಾ ಸಮಿತಿಯ ವಾರ್ಷಿಕ ಮಹಾಸಭೆಯು ಕಲ್ಲುಬಾಣೆ ದಾರುಲ್ ಇಸ್ಲಾಂ ಮದರಸದಲ್ಲಿ ನಡೆಯಿತು. ಎಂ.ಅಬ್ದುಲ್ ರೆಹಮಾನ್ ಮುಸ್ಲಿಯಾರ್ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಭೆಯನ್ನು ಪಿ.ಬಿ.ಇಸ್ಮಾಯಿಲ್ ಮುಸ್ಲಿಯಾರ್ ಉದ್ಘಾಟಿಸಿದರು. ನಂತರ ನಡೆದ ಚರ್ಚೆಯಲ್ಲಿ ವಲಯ ಮಟ್ಟದ ಶಿಕ್ಷಕರ ಒಕ್ಕೂಟವಾದ ರೈಂಜ್ ಜಂಇಯ್ಯತುಲ್ ಮುಅಲ್ಲಿಮೀನ ಕಾರ್ಯಾಚರಣೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ನಿರ್ಧರಿಸಲಾಯಿತು. ಮದರಸಾ ಶಿಕ್ಷಕರು ಮತ್ತು ಸಂಘಟನಾ ಕಾರ್ಯಕರ್ತರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಮಾದಕ ವ್ಯಸನದ ವಿರುದ್ಧ ಅಭಿಯಾನವನ್ನು ನಡೆಸಲು ಮತ್ತು ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಸಹಿಗಳನ್ನು ಮುಖ್ಯಮಂತ್ರಿಗೆ ಸಲ್ಲಿಸಲು ತೀರ್ಮಾನಿಸಲಾಯಿತು. ಪ್ರಧಾನ ಕಾರ್ಯದರ್ಶಿ ಎಂ.ಆರಿಫ್ ಫೈಝಿ ಜಂಇಯ್ಯತುಲ್ ಮುಅಲ್ಲಿಮೀನ್ ವಾರ್ಷಿಕ ವರದಿ ಮತ್ತು ಆದಾಯವನ್ನು ಮಂಡಿಸಿದರು. :: ನೂತನ ಪದಾಧಿಕಾರಿಗಳ ಆಯ್ಕೆ :: ಸಭೆಯಲ್ಲಿ 2025-26ನೇ ಸಾಲಿನ ಜಂಇಯ್ಯತುಲ್ ಮುಅಲ್ಲಿಮೀನ್ ಕೊಡಗು ಜಿಲ್ಲಾ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಎಂ.ಅಬ್ದುಲ್ ರೆಹಮಾನ್ ಮುಸ್ಲಿಯಾರ್ ಗೋಣಿಕೊಪ್ಪ, ಉಪಾಧ್ಯಕ್ಷರಾಗಿ ಸಿ.ಕೆ.ಸೂಪಿ…
ಮಡಿಕೇರಿ ಮೇ 27 NEWS DESK : ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಹಾಗೂ ತಹಶೀಲ್ದಾರ್ ಕೃಷ್ಣಮೂರ್ತಿ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲಿನ ವೈದ್ಯಾಧಿಕಾರಿಗಳಿಂದ ಕುಂದುಕೊರತೆ ಬಗ್ಗೆ ಮಾಹಿತಿ ಪಡೆದರು.






