ಮಡಿಕೇರಿ ಮೇ 27 NEWS DESK : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 76.82 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.45 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 526.66 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 325.85 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 82.55 ಮಿ.ಮೀ. ಕಳೆದ ವರ್ಷ ಇದೇ ದಿನ 2.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 740.38 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 447.52 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 78.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 579.50 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 246.10 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 99.11 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ…
ಲೇಖಕ: admin
ಮಡಿಕೇರಿ ಮೇ 27 NEWS DESK : ಮಳೆ ಗಾಳಿಯಿಂದಾಗಿ ಶನಿವಾರಸಂತೆ ಹೋಬಳಿ ಕೋರಲಳ್ಳಿ ಗ್ರಾಮದ ಲಲಿತ ಎಂಬುವವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಅರಣ್ಯ ಇಲಾಖಾ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮರವನ್ನು ತೆರವುಗೊಳಿಸಿದರು.
ಮಡಿಕೇರಿ ಮೇ 27 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2025-26ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA Via/CET/NEET ಮುಖಾಂತರ) ಎಂಬಿಬಿಎಸ್, ಬಿಡಿಎಸ್, ಬಿಇ/ಬಿಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ಸಿಇಟಿ, ನೀಟ್ ಮುಖೇನ ಪ್ರವೇಶ ಪಡೆಯ ಬಯಸುವ ವಿದ್ಯಾರ್ಥಿಗಳಿಗೆ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್‍ಸೈಟ್ https://kmdconline.karnataka.gov.in/ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್…
ಮಡಿಕೇರಿ ಮೇ 27 NEWS DESK : ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ವಿದ್ಯಾರ್ಥಿ ಜೀವನದಲ್ಲಿ ಕಲಿಯುವ ಅನೇಕ ಅವಕಾಶಗಳು ದೊರಕುತ್ತದೆ. ಅದನ್ನು ಸದುಪಯೋಗಪಡಿಸಿಕೊಳ್ಳುವ ಗುಣ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ ಪ್ರೊ.ಪಟ್ಟಡ ಪೂವಣ್ಣ ಸಲಹೆ ನೀಡಿದರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ಕಾಲೇಜಿನ ಕೌಸ್ತುಭ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ಸೃಷ್ಟಿಕರ್ತನು ಎಲ್ಲಾ ವ್ಯಕ್ತಿಗಳಿಗೂ ಅಘೋಚರ ಶಕ್ತಿ ನೀಡಿರುತ್ತಾನೆ. ಅದನ್ನು ಕಂಡುಕೊಳ್ಳುವ ಪ್ರಯತ್ನ ಮಾಡಬೇಕು. ಇದರೊಂದಿಗೆ ಜೀವನದಲ್ಲಿ ಋಣಾತ್ಮಕ ವಿಚಾರಗಳನ್ನು ತೆಗೆದು ಹಾಕಿದಾಗ ಮೇಲೇರಲು ಸಾಧ್ಯ. ಸಿಕ್ಕ ಅವಕಾಶವನ್ನು ಸಾಧ್ಯ ಪಡಿಸಿಕೊಳ್ಳುವ ಕೆಲಸ ವಿದ್ಯಾರ್ಥಿ ಜೀವನದಲ್ಲಿ ಮಾಡಬೇಕೆಂದರು. ಜೀವನದ ಮೌಲ್ಯಗಳೊಂದಿಗೆ ಮುಂದಿನ ಭವಿಷ್ಯ ನಿರ್ಧಾರದ ಗುರಿಹೊಂದಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಹೇಳಿದರು. ಭೂ ದಾಖಲೆಗಳ ಸಹಾಯಕ ನಿರ್ದೇಶಕ ಬಾನಂಗಡ ಅರುಣ ಮಾತನಾಡಿ ವಿದ್ಯಾರ್ಥಿ ಜೀವನದಿಂದಲೇ ಸ್ವಾಸ್ತ್ಯ ಸಮಾಜ ನಿರ್ಮಾಣ ಮಾಡಲು ಯುವಜನರು ಮುಂದಾಗಬೇಕು. ಮದ್ಯಪಾನ, ಮಾದಕ ದ್ರವ್ಯಗಳಿಗೆ ದಾಸರಾಗದೆ…
ನಾಪೋಕ್ಲು ಮೇ 27 NEWS DESK : ನಾಪೋಕ್ಲು ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯ ಆರ್ಭಟ ಕಳೆದ ಮೂರು ದಿನಗಳಿಂದ ಮುಂದುವರೆದಿದ್ದು, ಅಲ್ಲಲ್ಲಿ ರಸ್ತೆ ಸಂಚಾರಕ್ಕೆ ಅಡ್ಡಿ ಒಂದು ಕಡೆಯಾದರೆ ಕೆಲವು ಕಡೆ ಮನೆ ಹಾಗೂ ತಡೆ ಗೋಡೆಗಳಿಗೆ ಹಾನಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಲ್ಲು ಮೊಟ್ಟೆಯಲ್ಲಿ ಮಳೆ ಗಾಳಿಯಿಂದಾಗಿ ಮನೆಯ ತಡೆಗೋಡೆ ಕುಸಿದು ಬಿದ್ದು ನಷ್ಟ ಸಂಭವಿಸಿದೆ. ಕಲ್ಲು ಮೊಟ್ಟೆನಿವಾಸಿ ಕೆ.ಕೆ.ಪುಷ್ಪ ಎಂಬವರ ನೂತನ ಮನೆಯ ತಡೆಗೋಡೆ ಅಧಿಕ ಮಳೆ ಗಾಳಿಯಿಂದ ಸಂಪೂರ್ಣ ದಾರಶಾಹಿಯಾಗಿದೆ. ಎಮ್ಮೆಮಾಡು ಕೂರುಳಿ ಗ್ರಾಮಕ್ಕೆ ತೆರಳುವ ಸುಭಾಷ್ ನಗರ ಪೈಸಾರಿ ಬಳಿಯ ರಸ್ತೆಗೆ ಮರ ಅಡ್ಡಲಾಗಿ ಬಿದ್ದು ಸಂಚಾರಕ್ಕೆ ತೊಡಕುಂಟಾಗಿತ್ತು. ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಕ್ಕೆ ಹಾನಿಯಾಗಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ. ನಾಪೋಕ್ಲುವಿನಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಬೇತು ರಸ್ತೆಯಲ್ಲಿರುವ ಹಂಸ ಎಂಬವರ ಹಳೇ ಕಟ್ಟಡದ ಮೇಲ್ಚಾವಣಿ ಕುಸಿತವಾಗಿದೆ. ನಾಪೋಕ್ಲು-ಕೈಕಾಡು-ಪಾರಾಣೆ ಮಾರ್ಗವಾಗಿ ವಿರಾಜಪೇಟೆಗೆ ತೆರಳುವ ಮುಖ್ಯ ರಸ್ತೆಗೆ ಮರ ಬುಡ ಸಮೇತ ಬಿದ್ದಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ.…
ಮಡಿಕೇರಿ ಮೇ 27 NEWS DESK : ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಗಾಳಿ-ಮಳೆಯಿಂದಾಗಿ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಾದಾಪುರ ಐಗೂರು ಹೊಳೆ ತುಂಬಿ ಹರಿಯುತ್ತಿದ್ದು, ಎಲ್ಲೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮಾದಾಪುರದ ಸುಂಟಿಕೊಪ್ಪ ವೃತ್ತದ ಬಳಿಯಲ್ಲಿ ಲಯನ್ಸ್ ಕ್ಲಬ್ ವತಿಯಿಂದ ನಿರ್ಮಿಸಲಾಗಿದ್ದ ತಂಗುದಾಣದ ಮೇಲೆ ಬೃಹತ್ ಗಾತ್ರದ ಮರ ಕುಸಿದು ಬಿದ್ದ ಪರಿಣಾಮ ತಂಗುದಾಣ ನೆಲಸಮಗೊಂಡಿದೆ. ಮರ ಕುಸಿದು ಬಿದ್ದ ಪರಿಣಾಮ ವಿದ್ಯುತ್ ಕಂಬಕ್ಕೆ ರಂಬೆಗಳು ಅಪ್ಪಳಿಸಿದ್ದು, ಕಂಬಗಳು ಹಾನಿಗೊಂಡಿದೆ. ಕುಂಬೂರು ಸೇರಿದ ಈ ಮರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದು ಬಾರಿ ಗಾಳಿ ಮಳೆಯಿಂದ ಬುಡಸಮೇತ ಕುಸಿದು ಬಿದ್ದಿದೆ. ಈ ಸಂಬಂಧ ಮರವನ್ನು ತೆರವುಗೊಳಿಸಲು ಮಾದಾಪುರ ಗ್ರಾ.ಪಂ ಸದಸ್ಯ ಕೆ.ಎ.ಲತೀಫ್, ಚೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಹಾಗೂ ಕುಂಬೂರು ತೋಟದ ಕಾರ್ಮಿಕರು ಬಿದ್ದ ಮರದ ಅವೇಶಗಳನ್ನು ತೆರವುಗೊಳಿಸಿದ್ದಾರೆ. ಮೇ 25 ರಂದು ರೋಯಿ ನಕ್ಷತ್ರದ ಕುಂಬದ್ರೋಣ ಮಳೆ ನಾಡಿನಾದ್ಯಂತ ಸುರಿಯುತ್ತಿದ್ದು, ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ. ಸುಂಟಿಕೊಪ್ಪ ಜಂಕ್ಷನ್ ಬಳಿ ಬಿದ್ದ ತೆರವುಗೊಳಿಸುವ ಸಂದರ್ಭದಲ್ಲಿ…
ಮಡಿಕೇರಿ NEWS DESK ಮೇ 27 : ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆಯಾಗುತ್ತಿದ್ದು, ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅಮ್ಮತ್ತಿ ಹೋಬಳಿ ಬಾಡಗ ಬಾಣಂಗಾಲ ಗ್ರಾಮದ ಜನತಾ ಕಾಲೋನಿಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಪಿ.ಸಿ.ವಿಷ್ಣು ಬೆಳ್ಳಿಯಪ್ಪ (65) ಎಂಬುವವರೇ ಮೃತ ದುರ್ದೈವಿ. ಇಂದು ಬೆಳಿಗ್ಗೆ 7.30 ಗಂಟೆ ಸುಮಾರಿಗೆ ವಿಷ್ಣು ಬೆಳ್ಳಿಯಪ್ಪ ಅವರ ಮೇಲೆ ಮಾವಿನ ಮರ ಬಿದ್ದಿದೆ. ತಕ್ಷಣ ಇವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮರಣ ಹೊಂದಿದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಗ್ರೇಡ್ 2 ತಹಶೀಲ್ದಾರರು, ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಮಡಿಕೇರಿ NEWS DESK ಮೇ 26 : ಕೊಡಗು ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆ ಮುಂದುವರೆದಿದ್ದು, ನೂರಾರು ಮರಗಳು ಧರೆಗುರುಳಿವೆ. ಸಾರ್ವಜನಿಕ ಆಸ್ತಿಪಾಸ್ತಿಗೆ ಅಪಾರ ಹಾನಿ ಉಂಟಾಗಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಾದ್ಯಂತ 5 ಇಂಚು ಮತ್ತು ಭಾಗಮಂಡಲದಲ್ಲಿ ದಾಖಲೆಯ 10 ಇಂಚು ಮಳೆಯಾಗಿದೆ. ಮುಂಜಾಗೃತಾ ಕ್ರಮವಾಗಿ ಕೊಡಗು ಜಿಲ್ಲೆಯಾದ್ಯಂತ ಇರುವ ಜಲಪಾತಗಳು, ಝರಿ, ನದಿ, ತೊರೆ, ಸಾರ್ವಜನಿಕ ಕೆರೆಗಳು, ಅಣೆಕಟ್ಟು, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ಅನಧಿಕೃತವಾಗಿ ನೀರಿನಲ್ಲಿ ಇಳಿಯುವುದು, ಮುಳುಗುವುದು, ಸಾಹಸ ಚಟುವಟಿಕೆ ನಡೆಸುವುದು ಮತ್ತು ಈಜುವುದನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ::: ಭಾರೀ ವಾಹನಗಳಿಗೆ ನಿರ್ಬಂಧ ::: ಕೊಡಗು ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿದೆ. ಪ್ರಸ್ತುತ ಮುಂಗಾರು ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗುತ್ತಿದೆ. ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ ಉಂಟಾಗಿ ಅನಾಹುತಗಳಾಗುವ ಸಂಭವಿಸುವ ಸಾಧ್ಯತೆ ಹೆಚ್ಚಿದೆ.…
ಮಡಿಕೇರಿ ಮೇ 26 NEWS DESK : ವಿಶ್ವ ಪರಿಸರ ದಿನಾಚರಣೆ-2025 ರ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ, ಕೊಡಗು ವತಿಯಿಂದ ಪರಿಸರ ಸಂರಕ್ಷಣೆ ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಾಲಾಮಕ್ಕಳಿಗಾಗಿ ಮೇ, 31 ರಂದು ಬೆಳಗ್ಗೆ 9.30 ಗಂಟೆಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ, ಕೊಡವ ಸಮಾಜದ ಅಂಗ ಸಂಸ್ಥೆ, ಮಡಿಕೇರಿ ಇಲ್ಲಿ ಏರ್ಪಡಿಸಲಾಗಿದೆ. (ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುವುದು. ಚಿತ್ರಕಲೆಗೆ ಬೇಕಾಗುವ ಬಣ್ಣ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು). ಈ ವರ್ಷದ ಘೋಷ ವಾಕ್ಯವು “ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು” “Ending Plastic Pollution Globally” ಆಗಿರುತ್ತದೆ. ಸ್ಫರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ಸ್ಥಳದಲ್ಲಿಯೇ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ, ಆಸ್ಟಿನ್ ಕೆ.ಎ.ಯೋಜನಾ ಸಹಾಯಕರನ್ನು 7760738447, ರೇವತಿ ಟಿ.ಸಿ. ಡಾಟ ಎಂಟ್ರಿ ಆಪರೇಟರ್ 9741318237, ಆರ್ವಿನ್ ಆರ್. ಕ್ಷೇತ್ರ ಸಹಾಯಕ 6361713238 (ಕಚೇರಿ 08272-221855) ಹಾಗೂ ಕ್ಷೇತ್ರ…
ಮಡಿಕೇರಿ ಮೇ 26 NEWS DESK : ಕೊಡಗು ಜಿಲ್ಲೆಯಲ್ಲಿ ಕಳೆದ 4-5 ವರ್ಷಗಳ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ. ಕೊಡಗು ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿರುತ್ತದೆ. ಪ್ರಸ್ತುತ ಮುಂಗಾರು ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿಗಳ ರಕ್ಷಣೆ ಹಾಗೂ ಪ್ರಯಾಣಿಕರ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜೂ.6 ರಿಂದ ಜು.5 ರವರೆಗೆ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ನಿರ್ಭಂಧಿತ ವಾಹನಗಳು: ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ…






