ಮಡಿಕೇರಿ ಮೇ 26 NEWS DESK : ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಟಿ.ಶೆಟ್ಟಿಗೇರಿಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಸಿತು. ಧಾರಾಕಾರ ಮಳೆಯ ನಡುವೆ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಟಿ.ಶೆಟ್ಟಿಗೇರಿ ಜಂಕ್ಷನ್ ನಲ್ಲಿ ಮಾನವ ಸರಪಳಿ ನಿರ್ಮಿಸಿದ ಸದಸ್ಯರು ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಅಳವಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಹಕ್ಕೊತ್ತಾಯ ಮಂಡಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು ಪ್ರಸ್ತುತ ಜನಗಣತಿ ಸಂದರ್ಭ ಕೊಡವರಿಗೆ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಸೇರಿಸಿದರೆ ಕೊಡವ ಸಮುದಾಯದ ನಿಖರವಾದ ಪ್ರಾತಿನಿಧ್ಯವನ್ನು ಖಚಿತಪಡಿಸಬಹುದು. ಸರ್ಕಾರ ಕೊಡವ ಸಮುದಾಯದ ನಿರ್ದಿಷ್ಟ ಅಗತ್ಯಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಸೋಶಿಯಲ್ ಇಂಜಿನಿಯರಿಂಗ್ ಮೂಲಕ ಅವರ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಉದ್ದೇಶಿತ ನೀತಿಗಳನ್ನು…
ಲೇಖಕ: admin
ಮಡಿಕೇರಿ ಮೇ 26 NEWS DESK : ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಹಾರಂಗಿ ಜಲಾಶಯದ ಸ್ಥಿತಿಗತಿ, ಮುಂಜಾಗ್ರತಾ ಕ್ರಮಗಳ ಕುರಿತು ಶಾಸಕ ಡಾ.ಮಂತರ್ ಗೌಡ ಸಂಬಂಧಿಸಿದ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕುಶಾಲನಗರ ತಹಶೀಲ್ದಾರ್ ಕಿರಣ್ ಗೌರಯ್ಯ ಹಾಗೂ ಹಾರಂಗಿ ಜಲಾಶಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು, ಇಲಾಖೆಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ದೇಶನ ನೀಡಿದರು. ಮಳೆಯಿಂದ ಉಂಟಾಗುವ ತೊಂದರೆಗಳಿಗೆ ಅಗತ್ಯ ಕ್ರಮ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಡಿಕೇರಿ ಮೇ 26 NEWS DESK : ಭಾರೀ ಗಾಳಿ, ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲಿಸಿದರು. ಕುಶಾಲನಗರದ 7 ನೇ ಹೊಸಕೋಟೆ ಪಂಚಾಯತ್ ವ್ಯಾಪ್ತಿಗೆ ಸೇರಿದ ಉರುಗುಪ್ಪ, 3ನೆ ವಾರ್ಡ್ ನ ಮೊಹಮದ್ ಅವರ ಮನೆಯ ಮೇಲೆ ಮರ ಬಿದ್ದು ಹಾನಿಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು ಪರಿಹಾರಕ್ಕೆ ಸೂಚನೆ ನೀಡಿದರು. ಅಲ್ಲದೇ ವಾಲ್ನೂರು-ತ್ಯಾಗತೂರ್ ನ ಅತ್ತಿ ಮಂಗಲ ಜಂಕ್ಷನ್ ನಲ್ಲಿ ರಸ್ತೆಗೆ ಭಾರೀ ಗಾತ್ರದ ಮರ ಬಿದ್ದು ಹಾನಿಯಾದ ಹಾನಿಯಾಗಿರುವುದನ್ನು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟರಾಜಾ, ಕುಶಾಲನಗರ ಕಾಂಗ್ರೆಸ್ ಮುಖಂಡ ವಿ.ಪಿ.ಶಶಿಧರ್, ಕುಶಾಲನಗರ ತಹಶೀಲ್ದಾರ್ ಹಾಗೂ ಪಂಚಾಯಿತಿ ಪಿಡಿಒ, ಅರಣ್ಯ ಅಧಿಕಾರಿಗಳು, ಸ್ಥಳೀಯರು ಮುಖಂಡರು ಇದ್ದರು.
ಮಡಿಕೇರಿ ಮೇ 26 NEWS DESK : ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ ನೀಡಿದರು. ಕುಶಾಲನಗರ ತಾಲೂಕಿನ ವಾಲ್ನೂರು-ತ್ಯಾಗತೂರ್ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಳೀಯರಿಂದ ಮಾಹಿತಿ ಪಡೆದರು.
ಮಡಿಕೇರಿ ಮೇ 26 NEWS DESK : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 126.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 449.84 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 325.40 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 143.30 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 657.83 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 445.27 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 155.30 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 500.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 246.10 ಮಿ.ಮೀ. ಮಳೆಯಾಗಿತ್ತು. ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 120.28 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ…
ಮಡಿಕೇರಿ ಮೇ 26 NEWS DESK : ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ಜಲಪಾತ, ಝರಿ, ನದಿ, ತೊರೆ, ಸಾರ್ವಜನಿಕ ಕೆರೆಗಳು, ಅಣೆಕಟ್ಟು, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ನೀರಿಗಿಳಿಯದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರು ನದಿ ಮತ್ತು ಜಲಪಾತಗಳಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಡಳಿತ ಅಗತ್ಯ ಮುಂಜಾಗೃತಾ ಕ್ರಮ ಕೈಗೊಂಡಿದೆ.
ಮಡಿಕೇರಿ ಮೇ 26 NEWS DESK : ಗಾಳಿ ಮಳೆಗೆ ಸುಂಟಿಕೊಪ್ಪದ ಹೊರೂರು ಗ್ರಾಮದ ನಿವಾಸಿ ದೇವಿಪ್ರಸಾದ್ ಎಂಬುವವರಿಗೆ ಸೇರಿದ ಕೊಟ್ಟಿಗೆ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ.
ಮಡಿಕೇರಿ ಮೇ 26 NEWS DESK : ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆ ಭಾಗದ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ರಸ್ತೆ ಜಲಾವೃತವಾಗಿದೆ.
ನಾಪೋಕ್ಲು ಮೇ 26 NEWS DESK : ನಾಪೋಕ್ಲು ಹೋಬಳಿ ವ್ಯಾಪ್ತಿಯಲ್ಲಿ ಭಾರೀ ಗಾಳಿ ಮಳೆಗೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದೆ. ಸಮೀಪದ ಕಕ್ಕಬೆಯ-ನಾಲಾಡಿ ಗ್ರಾಮದ ಕೋಡಿಮನಿಯಂಡ ರಸ್ತೆಯಲ್ಲಿ ಮರ ಒಂದು ವಿದ್ಯುತ್ ತಂತಿಗಳ ಮೇಲೆ ಮುರಿದು ಬಿದ್ದ ಪರಿಣಾಮ ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಹೊದ್ದೂರು ಗ್ರಾಮದ ರಸ್ತೆಯ ಬದಿಯಲ್ಲಿರುವ ವಿದ್ಯುತ್ ಕಂಬಗಳ ಮೇಲೆ ಮಳೆ ಗಾಳಿಗೆ ಮರ ಮುರಿದು ಬಿದ್ದು ಕೆಲವು ವಿದ್ಯುತ್ ಕಂಬಗಳು ಮುರಿದು ವಿದ್ಯುತ್ ಸಂಪರ್ಕಕ್ಕೆ ತೊಡಕಾಗಿದೆ. ಕಕ್ಕಬ್ಬೆ ಪ್ರೌಢ ಶಾಲೆಯ ಮುಖ್ಯದ್ವಾರದ ಬಳಿ ಹೈ ಟೆನ್ಶನ್ ತಂತಿಗಳ ಮೇಲೆ ಗಾಲಿ ಮಳೆಗೆ ಮರ ಮುರಿದು ಬಿದ್ದುವಿದ್ಯುತ್ ಸಂಪರ್ಕ ಕಡಿತಗೊಂಡು ಅಪಾಯ ಮಟ್ಟದಲ್ಲಿದ್ದು ಆತಂಕಕ್ಕೆ ಕಾರಣವಾಗಿದೆ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಮೇ 26 NEWS DESK : ಪಾಲೂರು ಗ್ರಾಮದೇವತೆಯಾದ ಶ್ರೀ ಕಾಳಿಕಾಂಬ ಅಮನೂರು ತಾಯಿಯ ವಾರ್ಷಿಕೋತ್ಸವ ಶ್ರದ್ಧಾ ಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ ದೇವರ ಜಳಕ ನಡೆಯಿತು. ಬಳಿಕ ವಾದ್ಯಗೋಷ್ಠಿಯೊಂದಿಗೆ ದೇವರ ಅಲಂಕೃತ ಮೂರ್ತಿಯೊಂದಿಗೆ ತಿರುವಳಕಾರರು ಭಕ್ತರು ಮೆರವಣಿಗೆ ತೆರಳಿ ದೇವಾಲಯದಲ್ಲಿ ದೇವರಿಗೆ ಮಹಾಪೂಜೆ ನೆರವೇರಿತು. ನಂತರ ಪ್ರಸಾದ ವಿತರಣೆ ಮಾಡಲಾಯಿತು. ಈ ಸಂದರ್ಭ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಉತ್ಸವದಲ್ಲಿ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಚೆರುವಾಳಂಡ ರಮೇಶ್, ಕಾರ್ಯದರ್ಶಿ ಎಡಿಕೇರಿ ಪ್ರವೀಣ್ (ಪವಿ), ನಿರ್ದೇಶಕರು, ಸದಸ್ಯರು ಹಾಗೂ ತಕ್ಕ ಮುಖ್ಯಸ್ಥರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.






