ಲೇಖಕ: admin

ಮಡಿಕೇರಿ NEWS DESK ಮೇ 25 : ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ  ಭಾರೀ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತದೊಂದಿಗೆ ಸಮಾಲೋಚಿಸಿ  ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ ಸರ್ಕಾರಿ ಹಾಗೂ ಸಂಯೋಜಿತ  ಮಹಾವಿದ್ಯಾಲಯಗಳಿಗೆ  ದಿನಾಂಕ 26 ಹಾಗೂ 27 ರಂದು ಎರಡು ದಿನ ರಜೆ ಘೋಷಿಸಿ  ಕೊಡಗು  ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ರೆಡ್ ಅಲ್ಲೆರ್ಟ್ ಘೋಷಿಸಿರುವುದರಿಂದ ಹಾಗೂ ಹೆಚ್ಚಿನ ಗಾಳಿ-ಮಳೆ ಇರುವುದರಿಂದ, ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ದಿನಾಂಕ 26.05.2025 ಮತ್ತು 27.05.2025  ರಂದು 2 ದಿನಕ್ಕೆ ಸೀಮಿತವಾಗಿ (ಪೋಷಣ್ ಟ್ರಾಕರ್ ಕೆಲಸ ಹೊರತುಪಡಿಸಿ)ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಮೇ 25 : ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆಯಾಗುತ್ತಿದ್ದು, ಗ್ರಾಮೀಣ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿದೆ. 300 ಕ್ಕೂ ಅಧಿಕ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ, ಮರಗಳು ಬಿದ್ದ ಪರಿಣಾಮ ಹಲವು ಮನೆಗಳು ಹಾನಿಗೀಡಾಗಿವೆ. ಜಿಲ್ಲೆಯಲ್ಲಿ ಗಂಟೆ ಗಂಟೆಗೂ ಗಾಳಿ ಮಳೆಯ ಆರ್ಭಟ ಜೋರಾಗುತ್ತಿದೆ. ತಲಕಾವೇರಿ, ಭಾಗಮಂಡಲ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿ ನೀರು ರಸ್ತೆಗಳನ್ನು ಆವರಿಸಿದೆ. ಇತ್ತೀಚಿನ ವರ್ಷಗಳಲ್ಲಿ ಮೇ ತಿಂಗಳಿನಲ್ಲಿ ತ್ರಿವೇಣಿ ಸಂಗಮ ಭರ್ತಿಯಾಗಿರುವುದು ಇದೇ ಮೊದಲು. ನಾಪೋಕ್ಲು ಮತ್ತು ಮಡಿಕೇರಿ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪಿಂಡ ಪ್ರದಾನ ಮೊದಲಾದ ಪೂಜಾ ವಿಧಿ ವಿಧಾನಗಳಿಗೂ ಅಡ್ಡಿಯಾಗಿದೆ. ಮಡಿಕೇರಿ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದ್ದು, ಹತ್ತಾರು ಮರಗಳು ಹಾಗೂ ನೂರಾರು ವಿದ್ಯುತ್ ಕಂಬಗಳು ಬಿದ್ದಿವೆ. ಗ್ರಾಮೀಣ ಭಾಗದಲ್ಲಿ ನದಿ ತೊರೆಗಳು ತುಂಬಿ ಹರಿಯುತ್ತಿವೆ, ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಕಷ್ಟವಾಗಿದೆ. ಗಾಳಿ, ಮಹಾಮಳೆ ಹೀಗೇ ಮುಂದುವರಿದರೆ ಎತ್ತರ ಮತ್ತು…

Read More

ಮಡಿಕೇರಿ NEWS DESK ಮೇ 25 : ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಕರ್ನಾಟಕ ರಾಜ್ಯ ಹೊಟೇಲ್ ಗಳ ಸಂಘದಿಂದ ನೀಡಲಾಗುವ ‘ಆತಿಥ್ಯ ರತ್ನ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಿ.ಆರ್.ನಾಗೇಂದ್ರ ಪ್ರಸಾದ್ ಅವರ ಹೊಟೇಲ್ ಉದ್ಯಮ, ಸಾಮಾಜಿಕ ಕಳಕಳಿ, ಶೈಕ್ಷಣಿಕ ಹಾಗೂ ಧಾರ್ಮಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಮೇ 29 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

Read More

ಮಡಿಕೇರಿ NEWS DESK ಮೇ 25 : ಮಡಿಕೇರಿ ನಗರದ ದೇಚೂರು ಶ್ರೀರಾಮ-ವಿದ್ಯಾ ಗಣಪತಿ ದೇವಸ್ಥಾನದ 28ನೇ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಮೇ 27 ರಂದು ಹೆಚ್.ಆರ್.ಉದಯಕುಮಾರ್ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಮಂಗಳವಾರ ಬೆಳಗ್ಗೆಯಿಂದಲೇ ನಿರ್ಮಾಲ್ಯ, ಪುಣ್ಯಾಹ ವಾಚನ, ದೇವತಾ ಪ್ರಾರ್ಥನೆ, ಮಹಾಗಣಪತಿ ಮೂರ್ತಿಗೆ ಅಭಿಷೇಕ, ಬಯಲು ಆಂಜನೇಯ ಪೂಜೆ, ಅಷ್ಠದ್ರವ್ಯ ಮಹಾಗಣಪತಿ, ನವಗ್ರಹ ಹೋಮ, ನಾಗಪೂಜೆ, ಮಧ್ಯಾಹ್ನ ಮಹಾಪೂಜೆ ಶ್ರದ್ಧಾಭಕ್ತಿಯಿಂದ ಜರುಗಲಿದೆ. ಮಂಗಳಾರತಿಯ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆಯಾಗಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

Read More

ಮಡಿಕೇರಿ NEWS DESK ಮೇ 25 : ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಗಾಳಿ ರಭಸವಾಗಿ ಬೀಸಲಿದ್ದು, ಧಾರಾಕಾರ ಮಳೆಯಾಗಲಿದೆ. ಸಾರ್ವಜನಿಕರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವಮಧ್ಯ ಮತ್ತು ದಕ್ಷಿಣ ಅರಬ್ಬಿ ಸಮುದ್ರ, ಪಕ್ಕದ ಈಶಾನ್ಯ ಅರಬ್ಬಿ ಸಮುದ್ರ, ಲಕ್ಷದ್ವೀಪ, ಕೇರಳ, ಕರ್ನಾಟಕ, ಕೊಂಕಣ-ಗೋವಾ ಹಾಗೂ ಗುಜರಾತ್ ಕರಾವಳಿಗಳಲ್ಲಿ ಮೇ 25 ರಂದು ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಭಾರೀ ಮಳೆಯಾಗಲಿದೆ. ಮೇ 26-27ರ ಅವಧಿಯಲ್ಲಿ ಅದೇ ಪ್ರದೇಶದಲ್ಲಿ ಗಾಳಿಯು 40-50 ಕಿ.ಮೀ ಗೆ ಕಡಿಮೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ. ಮೇ 25 ರಿಂದ 27 ರವರೆಗೆ ಸಣ್ಣ ಹಡಗುಗಳು ಮತ್ತು ಹಡಗುಗಳ ಚಟುವಟಿಕೆ ಹಾಗೂ ಪ್ರವಾಸೋದ್ಯಮ ಮತ್ತು ಮನರಂಜನಾ ಚಟುವಟಿಕೆಗಳನ್ನು ನಿಯಂತ್ರಿಸುವಂತೆ ಸೂಚಿಸಿದೆ.

Read More

ಮಡಿಕೇರಿ NEWS DESK ಮೇ 24 : ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದೆ. ಭಾರೀ ಗಾಳಿಗೆ ಮರ ಬಿದ್ದು ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿ ನಡೆದಿದೆ. ಲೈನ್ ಮನೆಯಲ್ಲಿ ವಾಸವಿದ್ದ ಗಿರಿಜನ ಮಹಿಳೆ ಗೌರಿ (52) ಎಂಬುವವರೇ ಮೃತ ದುರ್ದೈವಿ. ಮನೆಯಿಂದ ಹೊರ ಬಂದಾಗ ಮರ ಬಿದ್ದಿದ್ದು, ಮರದಡಿ ಸಿಲುಕಿಕೊಂಡ ಗೌರಿ ಮೃತಪಟ್ಟರು, ಮನೆಗೂ ಹಾನಿಯಾಗಿದೆ. ::: ಭಾರೀ ಮಳೆ ::: ಜೀವನದಿ ಕಾವೇರಿಯ ಉಗಮಸ್ಥಾನ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಮುಂಗಾರು ಕೇರಳ ಪ್ರವೇಶಿಸುವ ಮೊದಲೇ ಗಡಿ ಜಿಲ್ಲೆ ಕೊಡಗಿನಲ್ಲಿ ಮಳೆಗಾಲದ ವಾತಾವರಣ ಮನೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ದಾಖಲೆಯ 4 ಇಂಚು ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜಿಲ್ಲಾ ವ್ಯಾಪಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು…

Read More

ಮಡಿಕೇರಿ ಮೇ 24 NEWS DESK : ಸುನ್ನಿ ಯುವಜನ ಸಂಘ (ಎಸ್‍ವೈಎಸ್), ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ ಮತ್ತು ಕೊಡಗು ಮುಸ್ಲಿಂ ಜಮಾಯತ್‍ನ ಸಂಯುಕ್ತಾಶ್ರಯದಲ್ಲಿ ಮೇ 26 ರಂದು ನೆಲ್ಲಿಹುದಿಕೇರಿಯಲ್ಲಿ ಅನಾರೋಗ್ಯ ಪೀಡಿತರ ನೆರವಿಗೆ ಪೂರಕವಾದ ‘ಸಾಂತ್ವನ ಕೇಂದ್ರ’ದ ಉದ್ಘಾಟನೆ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಎಸ್‍ವೈಎಸ್ ನೆಲ್ಲಿಹುದಿಕೇರಿ ಯೂನಿಟ್‍ನ ಪ್ರಧಾನ ಕಾರ್ಯದರ್ಶಿ ಎಂ.ಎ.ಜುನೈದ್ ಮಾತನಾಡಿ, ಜಾತಿ ಮತ ಭೇದವಿಲ್ಲದೆ ಸರ್ವ ಸಮುದಾಯದಲ್ಲಿರುವ ಅನಾರೋಗ್ಯ ಪೀಡಿತರ ನೆರವಿಗೆ ಸ್ಪಂದಿಸುವ ದಿಸೆಯಲ್ಲಿ ಸಾಂತ್ವನ ಕೇಂದ್ರವನ್ನು ತೆರೆಯಲಾಗುತ್ತಿದೆ. ಈ ಕೇಂದ್ರದ ಮೂಲಕ ಅಗತ್ಯವಿರುವವರಿಗೆ ವೀಲ್ ಚೇರ್, ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವ ಆಕ್ಸಿಜನ್ ಸೌಲಭ್ಯ, ಕಮೋಡ್ ಚೇರ್, ವಾಕರ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದರು. ನೆಲ್ಲಿಹುದಿಕೇರಿಯ ಸಹಕಾರ ಸಂಘದ ಕಛೇರಿಯ ಬಳಿಯಲ್ಲಿ ಆರಂಭಗೊಳ್ಳಲಿರುವ ‘ಸಾಂತ್ವನ ಕೇಂದ್ರ’ ಇಪ್ಪತ್ತನಾಲ್ಕು ಗಂಟೆಗಳ ಕಾಲವೂ ಅನಾರೋಗ್ಯ ಪೀಡಿತರ ನೆರವಿಗೆ ಸದಾ ಸಿದ್ಧವಿರುತ್ತದೆ. ನೆರವಿನ ಅಗತ್ಯವಿರುವವರು ಮೊ.9535532765, 9482944786ನ್ನು ಸಂಪರ್ಕಿಸಬಹುದೆಂದು ತಿಳಿಸಿದರು. ಮೇ 26 ರಂದು…

Read More

ವಿರಾಜಪೇಟೆ ಮೇ 24 NEWS DESK :  ಅಮ್ಮತ್ತಿಯ ಸಂತ ಅಂತೋಣಿ ದೇವಾಲಯದ ಪ್ರಧಾನ ಧರ್ಮಗುರುಗಳಾಗಿ ರೆ.ಫಾ. ಮದಲೈ ಮುತ್ತು ರೆ. ಫಾ. ರೈಮಂಡ್ ಅವರಿಂದ ಅಧಿಕಾರ  ಸ್ವೀಕರಿಸಿದರು. ವಿರಾಜಪೇಟೆ ವಲಯದ ಶ್ರೇಷ್ಠ ಗುರುಗಳು ಹಾಗೂ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳಾದ ರೆ.ಫಾ.ಜೇಮ್ಸ್ ಡೊಮಿನಿಕ್  ಅಧಿಕಾರ ಸ್ವೀಕಾರದ ಧಾರ್ಮಿಕ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ಅಮ್ಮತ್ತಿ ಚರ್ಚ್ ನ ಕನ್ಯಾ ಸ್ತ್ರೀಯರು, ಪಾಲನಾ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ಹಾಜರಿದ್ದರು. ರೆ.ಫಾ.ಮದಲೈ ಮುತ್ತು  ಕಳೆದ 22 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿಯೇ ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಜನಾನುರಾಗಿರುತ್ತಾರೆ. ಪ್ರಸ್ತುತ ಅಮ್ಮತ್ತಿ ಧರ್ಮ ಕೇಂದ್ರದ ಗುರುಗಳಾಗಿ, ವಿರಾಜಪೇಟೆ ಸಂತ ಅನ್ನಮ್ಮ ಪಿ.ಯು.ಕಾಲೇಜಿನ ಪ್ರಾಂಶುಪಾಲರಾಗಿ, ಸಂತ ಅನ್ನಮ್ಮ ಪದವಿ ಕಾಲೇಜಿನ ವ್ಯವಸ್ಥಾಪಕರಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ. ಇವರು ಈ ಹಿಂದೆ ಕೊಡಗು ವಲಯದ ಶ್ರೇಷ್ಠ ಗುರುಗಳಾಗಿ, ಎಂಡಿಇಎಸ್ ಶಿಕ್ಷಣ ಸಂಸ್ಥೆಗಳ ಖಜಾಂಚಿ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಾತ್ರವಲ್ಲದೆ ಬಡ ವಿದ್ಯಾರ್ಥಿಗಳ…

Read More

ಮಡಿಕೇರಿ ಮೇ 24 NEWS DESK : ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೇ 26 ರಂದು ಟಿ.ಶೆಟ್ಟಿಗೇರಿಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಟಿ.ಶೆಟ್ಟಿಗೇರಿ ಜಂಕ್ಷನ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಬೇಡಿಕೆಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ಹೇಳಿದ್ದಾರೆ. 2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‍ಟಿ…

Read More

ಮಡಿಕೇರಿ ಮೇ 24 NEWS DESK : ರಾಜ್ಯ ಸರ್ಕಾರದ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್  ಅವರ ತಾಯಿ ಇಂದು ನಿಧನರಾದರು. ವಿಷಯ ತಿಳಿದು ತನ್ನ ಪ್ರವಾಸವನ್ನು ಮೊಟಕುಗೊಳಿಸಿ ಬೆಂಗಳೂರಿನ ಭೈರತಿ ಸುರೇಶ್ ಅವರ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮೃತರ ಅಂತಿಮ ದರ್ಶನ ಪಡೆದರು.  ಸಚಿವರಿಗೆ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Read More