ಪುತ್ತೂರು ಮೇ 24 NEWS DESK : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಪುತ್ತೂರು, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು, ಇನ್ಸ್ಟಿಟ್ಯೂಷನ್ ಇನ್ನೋವೇಶನ್ ಸೆಲ್ ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಮೇ 26 ರಂದು ಜ್ಞಾನ ಸಂಗಮ-2025 ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ನಡೆಯಲಿದೆ. ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅವರ ಪ್ರಾಜೆಕ್ಟ್‍ಗೆ ಸಂಬಂದಿಸಿದಂತೆ ಪ್ರಬಂಧಗಳನ್ನು ಮಂಡಿಸಿ, ತಮ್ಮಲ್ಲಿರುವ ಹೊಸ ಹೊಸ ಆವಿಷ್ಕಾರಗಳನ್ನು ಇತರರೊಂದಿಗೆ ಹಂಚಿಕೊಳ್ಳುವುದುದಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ಸಲುವಾಗಿ ಮತ್ತು ವಿದ್ಯಾರ್ಥಿಗಳಿಗೆ ಸಂಶೋಧನಾ ವಿಭಾಗದಲ್ಲಿ ಹೆಚ್ಚು ಆಸಕ್ತಿಯನ್ನು ಮೂಡಿಸುವುದು ಮತ್ತು ಅವರನ್ನು ಉತ್ತಮ ತಂತ್ರಜ್ಞರನ್ನಾಗಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ವಿವಿಧ ಕಾಲೇಜುಗಳ ಇಂಜಿನಿಯರಿಂಗ್ ವಿಭಾಗದ ಸುಮಾರು 400 ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ವಿಭಾಗಗಳಲ್ಲಿ ಒಟ್ಟು 75 ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಅಲ್ಲದೆ ಪ್ರಾಜೆಕ್ಟ್‍ಗಳಿಗೆ ಸಂಬಂಧಪಟ್ಟ 50 ಕ್ಕೂ ಮಿಕ್ಕಿ ಪೋಸ್ಟರ್ ಗಳ…
ಲೇಖಕ: admin
ಸುಂಟಿಕೊಪ್ಪ ಮೇ 24 NEWS DESK : ಸುಂಟಿಕೊಪ್ಪ ವರ್ಕ್‍ಶಾಪ್ ಮಾಲೀಕರ ಸಂಘದ ಅಧ್ಯಕ್ಷರಾಗಿ ಬಿ.ಎಸ್. ರಮೇಶ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಣಿಕಂಠ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿ.ಎಸ್.ರಮೇಶ್ ಅಧ್ಯಕ್ಷತೆಯಲ್ಲಿ ಸುಂಟಿಕೊಪ್ಪದ ಸೌಮ್ಯ ಇಂಜಿನಿಯರಿಂಗ್ ವಕ್ರ್ಸ್‍ನ ಸಭಾಂಗಣದಲ್ಲಿ ನಡೆದ ಸಂಘದ 23ನೇ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ತಂಗವೇಲು, ಸಹ ಕಾರ್ಯದರ್ಶಿಯಾಗಿ ರಜಾಕ್ ಖಜಾಂಚಿಯಾಗಿ ಸಂದೀಪ್, ಸಂಘಟನಾ ಕಾರ್ಯದರ್ಶಿಯಾಗಿ ಪೆಲಿಕ್ಸ್ ಡಿಸೋಜ, ಗೌರವಾಧ್ಯಕ್ಷರಾಗಿ ವಿ.ಎ.ಸಂತೋಷ್, ಕೆ.ಪಿ.ವಿನೋದ್, ಪಿ.ಆರ್.ಸುಕುಮಾರ್ ಹಾಗೂ 11 ಮಂದಿ ನಿರ್ದೇಶಕರುಗಳನ್ನು ನೇಮಕ ಮಾಡಲಾಯಿತು.
ಮಡಿಕೇರಿ ಮೇ 24 NEWS DESK : ಉತ್ತಮ ಭವಿಷ್ಯಕ್ಕಾಗಿ ಪರಿಸರ ಕಾಳಜಿ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಹುಟ್ಟಬೇಕು. ಕಾನೂನಿನ ಹೊರತಾಗಿಯೂ ವೈಯಕ್ತಿಕವಾಗಿ ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಮಾಲಿನ್ಯಕಾರಿ ಪ್ಲಾಸ್ಟಿಕ್ ಬಳಕೆಗೆ ಪರ್ಯಾಯ ವಸ್ತುಗಳ ಬಳಕೆ ಬಗ್ಗೆ ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಹೇಳಿದರು. ಸೋಮವಾರಪೇಟೆ ಬಿ.ಟಿ.ಸಿ.ಜಿ.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವತಿಯಿಂದ ಕೊಡಗು ವಿಶ್ವವಿದ್ಯಾಲಯದ ಕುಶಾಲನಗರ ತಾಲ್ಲೂಕಿನ ಚಿಕ್ಕ ಅಳುವಾರ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) ವಾರ್ಷಿಕ ವಿಶೇಷ ಶಿಬಿರದಲ್ಲಿ “ಪರಿಸರ ಸಂರಕ್ಷಣೆ ಹಾಗೂ ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಕುರಿತ ಜಾಗೃತಿ ಆಂದೋಲನದಲ್ಲಿ ಪ್ಲಾಸ್ಟಿಕ್ ಮಾಲಿನ್ಯದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಪರಿಸರಕ್ಕೆ ತೀವ್ರ ಹಾನಿಯುಂಟು ಮಾಡುತ್ತಿರುವ ಪ್ಲಾಸ್ಟಿಕ್ ಮಾಲಿನ್ಯವನ್ನು ತಡೆಗಟ್ಟಲು ಉತ್ತಮ ಮಾರ್ಗವೆಂದರೆ ಅನಗತ್ಯ ಪ್ಲಾಸ್ಟಿಕ್…
ಮಡಿಕೇರಿ ಮೇ 24 NEWS DESK : ಅಪ್ಪಂಗಳ ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾದೇಶಿಕ ಕೇಂದ್ರಕ್ಕೆ ಕೃಷಿ, ಪಶುಸಂಗೋಪನೆ ಮತ್ತು ಆಹಾರ ಸಂಸ್ಕರಣೆ ಕುರಿತ ಸಂಸದೀಯ ಸ್ಥಾಯಿ ಸಮಿತಿ ಭೇಟಿ ನೀಡಿತು. ಲೋಕಸಭಾದ 12 ಸದಸ್ಯರು, ರಾಜ್ಯಸಭೆಯ 4 ಸದಸ್ಯರು ಮತ್ತು ಲೋಕಸಭಾ ಸಚಿವಾಲಯದ ಅಧಿಕಾರಿಗಳನ್ನು ಒಳಗೊಂಡ ನಿಯೋಗವು ಐಸಿಎಆರ್-ಐಐಎಸ್‍ಆರ್ ಅಭಿವೃದ್ಧಿಪಡಿಸಿದ ಸಂಬಾರ ಬೆಳೆಗಳ ತಳಿಗಳು ಮತ್ತು ತಂತ್ರಜ್ಞಾನಗಳ ವಸ್ತು ಪ್ರದರ್ಶನವನ್ನು ವೀಕ್ಷಿಸಿತು. ಲೋಕಸಭೆಯ ಸಂಸದ ಚರಣ್ ಜಿತ್ ಸಿಂಗ್ ಚನ್ನಿ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು. ನಂತರ ನಡೆದ ಸಭೆಯಲ್ಲಿ ಕೋಜಿಕೋಡ್ ಐಸಿಎಆರ್-ಐಐಎಸ್‍ಆರ್ ನಿರ್ದೇಶಕ ಡಾ. ಆರ್.ದಿನೇಶ್ ಸಂಸ್ಥೆಯ ಚಟುವಟಿಕೆಗಳು ಮತ್ತು ಸಾಧನೆಗಳ ಸಮಗ್ರ ಮಾಹಿತಿ ನೀಡಿದರು. ಸಮಿತಿಯು ವಿಜ್ಞಾನಿಗಳು ಮತ್ತು ಅಧಿಕಾರಿಗಳೊಂದಿಗೆ ಸಂವಾದದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ನವದೆಹಲಿ ಐಸಿಎಆರ್ ಸಹಾಯಕ ಮಹಾನಿರ್ದೇಶಕರಾದ ಡಾ. ಸುಧಾಕರ್ ಪಾಂಡೆ, ಅಪ್ಪಂಗಳ ಐಸಿಎಆರ್-ಐಐಎಸ್‍ಆರ್ ಪ್ರಾದೇಶಿಕ ಕೇಂದ್ರದ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಎಸ್.ಜೆ.ಅಂಕೇಗೌಡ ಹಾಗೂ ಕೇಂದ್ರದ ಹಿರಿಯ ಅಧಿಕಾರಿಗಳು ಮತ್ತು…
ಸೋಮವಾರಪೇಟೆ ಮೇ 24 NEWS DESK : ಡಾಲ್ಫಿನ್ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಿಂಥಟಿಕ್ ಹಾಕಿ ಟರ್ಫ್ ಮೈದಾನದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆದ ಬೇಸಿಗೆ ಹಾಕಿ ತರಬೇತಿ ಶಿಬಿರದ ಸಮಾರೋಪಗೊಂಡಿತು. ಡಾಲ್ಫಿನ್ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಎಂ.ಇ.ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಹಾಕಿ ಆಟಗಾರರಾದ ಸಿ.ಎಲ್.ಸುಬ್ಬಯ್ಯ, ಕುಶಾಲನಗರದ ಉದ್ಯಮಿ ಬಿ.ಆರ್.ವೇಣು, ಮಾಜಿ ಸೈನಿಕ ಮಹೇಶ್ ಹಾಗೂ ಹಾಕಿ ಕೋಚ್ ಬಿ.ಎಲ್. ಮಂಜುನಾಥ್ ಅವರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಆಟಗಾರರಾದ ಬಿ.ಕೆ. ಹಾಲಪ್ಪ, ಲಕ್ಷ್ಮೀಕಾಂತ್, ಬಿ.ಎಂ. ಸುರೇಶ್, ಶಶಿ, ಅಂತಾರಾಷ್ಟ್ರೀಯ ಆಟಗಾರ ಆಭರಣ್, ಡಾಲ್ಫಿನ್ಸ್ ಸ್ಪೋಟ್ರ್ಸ್ ಕ್ಲಬ್ ಗೌರವಾಧ್ಯಕ್ಷ ಹೆಚ್.ಎನ್. ಅಶೋಕ್, ಕಾರ್ಯದರ್ಶಿ ಬಿ.ಎನ್.ಮಂಜುನಾಥ್, ಸಹ ಕಾರ್ಯದರ್ಶಿ ಮಹೇಶ್, ಖಜಾಂಚಿ ಕೆ.ಜೆ. ಗಿರೀಶ್, ಜೇಸಿ ಮಾಜಿ ಅಧ್ಯಕ್ಷೆ ಮಾಯಾ ಗಿರೀಶ್ ಇದ್ದರು. ಶಿಬಿರಾರ್ಥಿಗಳಿಗೆ ಸರ್ಟಿಪಿಕೇಟ್ ವಿತರಿಸಲಾಯಿತು.
ಸೋಮವಾರಪೇಟೆ ಮೇ 24 NEWS DESK : ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಸೋಮವಾರಪೇಟೆ ಸ್ಥಳೀಯ ಸಂಸ್ಥೆಯ ಮಾಸಿಕ ಸಭೆ ಸಾಹಿತ್ಯ ಭವನದಲ್ಲಿ ನಡೆಯಿತು. ಅಧ್ಯಕ್ಷ ಎಸ್.ಡಿ.ವಿಜೇತ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೂ.5 ರಂದು ಪರಿಸರ ದಿನಾಚರಣೆಯನ್ನು ಆಚರಿಸುವ ಬಗ್ಗೆ ಚರ್ಚಿಸಲಾಯಿತು. ಜೂ.5 ರಂದು ಬೆಳಗ್ಗೆ ಸೋಮವಾರಪೇಟೆಯ ಆರ್.ಎಂ. ಸಿ ಯಲ್ಲಿ ಗಿಡ ನೆಡುವ ಕಾರ್ಯಕ್ರಮ, ಜೊತೆಗೆ ಸೋಮವಾರಪೇಟೆಯ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಗೆ ಪೂರಕವಾಗುವ ಅಂಶಗಳ ಬಗ್ಗೆ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಪರಿಸರ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ನಮ್ಮ ಜವಾಬ್ದಾರಿ’ ಕುರಿತು ಒಂದು ಗಂಟೆ ಕಾಲಾವಧಿಯಲ್ಲಿ ಪ್ರಬಂಧ ಬರೆಯುವುದು. ಈ ಸ್ಪರ್ಧೆಯನ್ನು ಸೋಮವಾರಪೇಟೆಯ ಚೆನ್ನಬಸಪ್ಪ ಹಾಲಿನಲ್ಲಿ ನಡೆಸಲು ತೀರ್ಮಾನಿಸಲಾಯಿತು. ನಂತರ ಸಮಾರೋಪ ಕಾರ್ಯಕ್ರಮದಲ್ಲಿ, ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಜ್ಯೋತಿ ಅರುಣ್, ಉಪಾಧ್ಯಕ್ಷ ಎಸ್.ಎಂ.ಡಿಸಿಲ್ವಾ, ಮಾಜಿ ಅಧ್ಯಕ್ಷ ಬಿ.ಎ.ಭಾಸ್ಕರ್, ಪದಾಧಿಕಾರಿಗಳಾದ ಜೋಕಿವಾಸ್,…
ಬೆಂಗಳೂರು ಮೇ 24 NEWS DESK : ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಸರ್ಕಾರ ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆ(ಅಇಖಿ) ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು ಫಲಿತಾಂಶ ಪ್ರಕಟಿಸಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಕೆಇಎ ಅಧಿಕೃತ ವೆಬ್ಸೈಟ್ಗಳಾದ cetonline.karnataka.gov.in ಮತ್ತು karresults.nic.in ನಲ್ಲಿ ಫಲಿತಾಂಶ ಲಭ್ಯವಿರಲಿದೆ. ಏಪ್ರಿಲ್ 16, 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು. ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು. :: ಎಂಜಿನಿಯರಿಂಗ್ :: ಸಿಇಟಿ ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತ್ಯನ್ಯ ಸಿಬಿಎಸ್ಇ ಶಾಲೆಯ ಭವೇಶ್ ಜಯಂತಿ ಮೊದಲ ರ್ಯಾಂಕ್ ಗಳಿಸಿದ್ದಾರೆ. ಚೈತನ್ಯ ಟೆಕ್ನೋ ಸ್ಕೂಲ್, ಕನಕಪುರ ರಸ್ತೆ ಉತ್ತರಹಳ್ಳಿ ವಿದ್ಯಾರ್ಥಿ ಸಾತ್ವಿಕ್ ಬಿರಾದರ್ ಎರಡನೇ ರ‍್ಯಾಂಕ್ ಗಳಿಸಿದ್ದಾರೆ. ದಿನೇಶ್ ಗೋಮತಿ ಶಂಕರ್ ಅರುಣಾಚಲಂ 3ನೇ ರ‍್ಯಾಂಕ್ ಗಳಿಸಿದ್ದಾರೆ. ಅಗ್ರಿಕಲ್ಚರ್ :: ಅಗ್ರಿಕಲ್ಚರ್…
ಮೈಸೂರು ಮೇ 24 NEWS DESK : ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒದಗಿಸುವುದು ಸರ್ಕಾರದ ಗುರಿ. ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯವನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ಜಿಲ್ಲಾ ಆಸ್ಪತ್ರೆ ಮೇಟಗಳ್ಳಿಯಲ್ಲಿ “ಡೇ ಕೇರ್ ಕಿಮೋಥೇರಪಿ” ಕೇಂದ್ರವನ್ನು ವಿಡಿಯೋ ಸಂವಾದದ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಈ ಮೊದಲು ಕೀಮೋಥೆರಪಿ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಬೇಕಾಗಿತ್ತು. ಇದು ರೋಗಿಗಳ ಪಾಲಿಗೆ ಕಷ್ಟಸಾಧ್ಯವಾಗಿತ್ತು. ರಾಜ್ಯದಲ್ಲಿ ಪ್ರತಿವರ್ಷ ಹೊಸ ಕ್ಯಾನ್ಸರ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಬಡ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ದೊರೆಯದ ಕಾರಣ, ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದರು. ಕ್ಯಾನ್ಸರ್ ರೋಗಕ್ಕೆ ತುತ್ತಾಗುವವರ ಸಂಖ್ಯೆಯಲ್ಲಿ ತಮಿಳುನಾಡಿನ ನಂತರದ ಸ್ಥಾನವನ್ನು ಕರ್ನಾಟಕ ಪಡೆದಿದೆ. ಈ ಕಾಯಿಲೆ ತಕ್ಷಣ ಪತ್ತೆಯಾದರೆ ಗುಣಪಡಿಸುವ ಸಾಧ್ಯತೆಯಿದ್ದು, ಪತ್ತೆಯಾಗದ ಸಂದರ್ಭದಲ್ಲಿ ಮಾರಣಾಂತಿಕವಾಗಿಯೂ ಪರಿಣಮಿಸಬಹುದು. ಆದರೆ ಆಧುನಿಕ ಔಷದೋಪಚಾರಗಳು ಲಭ್ಯವಿದ್ದರೂ ದುಬಾರಿಯಾಗಿದೆ ಎಂದರು. ಭಾರತದಲ್ಲಿ ಸುಮಾರು 100 ಕೋಟಿ ಜನರಿಗೆ ಬಡತನದಿಂದಾಗಿ ಚಿಕಿತ್ಸೆ ಪಡೆಯುವ ಶಕ್ತಿಯಿಲ್ಲದಾಗಿದೆ. 2013ರಲ್ಲಿ ನಾನು…
ಮೈಸೂರು ಮೇ 24 NEWS DESK : ಆಪರೇಷನ್ ಸಿಂಧೂರ ನಂತರ ನಮ್ಮ ಭಾರತೀಯ ಸೇನಾ ಪಡೆಗಳ ಮೇಲೆ ಎಲ್ಲೆಡೆ ಗೌರವ ಹೆಚ್ಚಾಗಿದೆ. ಆದರೆ ಬೆಂಗಳೂರಿನಲ್ಲಿ ಸೇನಾ ಸ್ಮಾರಕಗಳನ್ನು ಅತ್ಯಂತ ನಿರ್ಲಕ್ಷ್ಯ ಮಾಡಿರುವುದು, ಕಿಡಿಗೇಡಿಗಳು ಇದನ್ನು ವಿರೂಪಗೊಳಿಸುತ್ತಿರುವುದು ಆಕ್ಷೇಪಾರ್ಹ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಸ್ಮಾರಕ ವೀಕ್ಷಿಸಿದ ಕೂಡಲೇ ಸಂಬಂಧಪಟ್ಟವರಿಗೆ ಪತ್ರ ಬರೆದಿರುವ ಸಂಸದರು ಇದಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಮೊದಲನೇ ಮಹಾಯುದ್ಧದ ಸ್ಮಾರಕವಾಗಿ ಬೆಂಗಳೂರಿನ ಜೆ.ಸಿ. ನಗರದಲ್ಲಿ ಸುಮಾರು ನೂರು ವರ್ಷಗಳ ಹಿಂದೆ ಇದನ್ನು ಮೈಸೂರು ಮಹಾರಾಜರು ಸ್ಥಾಪಿಸಿದ್ದರು ಎಂದು ನೆನಪಿಸಿದ ಸಂಸದರು, ಭಾರತೀಯ ಸೇನಾ ಪಿಆರ್‌ಟಿಸಿ ಮುಂಬಾಗದಲ್ಲಿರುವ ಈ ಸ್ಮಾರಕವನ್ನು ಕೆಲವು ದುಷ್ಕರ್ಮಿಗಳು ಅಪವಿತ್ರಗೊಳಿಸಿದ್ದಾರೆ. ಇಡೀ ದೇಶದಲ್ಲಿ ಈಗ ಸೇನಾ ಯೋಧರ ಬಗ್ಗೆ, ಹುತಾತ್ಮರ ಬಗ್ಗೆ ವಿಶೇಷ ಗೌರವ ಇರುವಾಗ, ಸೈನಿಕರ ಸ್ಮಾರಕಗಳಿಗೆ ಅಗೌರವ ತೋರುವುದು ಸರಿಯಲ್ಲ ಎಂದು ಸಂಸದರು ತಿಳಿಸಿದರು. ಭಾರತೀಯ ಸೇನೆಯ ಶೌರ್ಯವನ್ನು ನಾವು ಶ್ಲಾಘಿಸುತ್ತಿರುವ…
ಮಡಿಕೇರಿ ಮೇ 24 NEWS DESK : ಕೊಡಗಿನಲ್ಲಿ ಭಾರೀ ಮಳೆಯಾಗುವ ಸೂಚನೆ ದೊರೆತ್ತಿದ್ದು, ಹವಮಾನ ಇಲಾಖೆ ಇಂದು (ಮೇ 24) ಮತ್ತು ಮೇ 25 ರಂದು ರೆಡ್ ಅಲರ್ಟ್ ಘೋಷಿಸಿದೆ.






