ಕುಶಾಲನಗರ ಜು.22 NEWS DESK : ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2025-26ನೇ ಶೈಕ್ಷಣಿಕ ಸಾಲಿನ ಬಿಕಾಂ, ಬಿ.ಸಿ.ಎ, ಬಿಬಿಎ ಮತ್ತು ಬಿಎಸ್ಸಿ ಪದವಿಗಳ ತೃತೀಯ ವರ್ಷದ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ ಕೇವಲ ಐದು ದಿನಗಳಲ್ಲಿ ಫಲಿತಾಂಶವನ್ನು ಪ್ರಕಟಿಸಿದೆ. ಇದೇ ಜೂನ್/ಜುಲೈ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ಕೊಡಗಿನ 24 ಕಾಲೇಜುಗಳ ಸುಮಾರು 6500 ವಿದ್ಯಾರ್ಥಿಗಳು ಹಾಜರಾಗಿದ್ದರು. ಕೊಡಗು ವಿಶ್ವವಿದ್ಯಾಲಯದ ಸ್ನಾತಕ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷೆಗಳ ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕೇಂದ್ರವನ್ನು ಸಿದ್ಧಪಡಿಸಿಕೊಂಡು, ಜಿಲ್ಲೆಯ ವಿವಿಧ ಸ್ನಾತಕ ಪದವಿ ಕಾಲೇಜುಗಳ ವಿಷಯವಾರು ಮೌಲ್ಯಮಾಪಕರು ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ…
ಲೇಖಕ: admin
ಮಡಿಕೇರಿ NEWS DESK ಜು.22 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಯು.ಟಿ.ಖಾದರ್ ಅವರನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಮಂಗಳೂರಿನಲ್ಲಿ ಭೇಟಿಯಾದರು . ಕುಶಾಲನಗರ ತಾಲ್ಲೂಕು ಆಸ್ಪತ್ರೆ ಮತ್ತು ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ಕೋರಿದರು.
ಮಡಿಕೇರಿ NEWS DESK ಜು.22 -ಕಾನೂನು ಸೇವಾ ಪ್ರಾಧಿಕಾರವು ದುರ್ಬಲರಿಗೆ ಅಗತ್ಯ ನೆರವು ನೀಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬ ದ್ಯೇಯದಂತೆ ಪ್ರಾಧಿಕಾರವು ಕಾರ್ಯನಿರ್ವಹಿಸುತ್ತಾ ಬಂದಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಡಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಹೇಳಿದ್ದಾರೆ. ನಗರದ ಲಯನ್ಸ್ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಮಡಿಕೇರಿ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಆಯೋಜಿತ ಸ್ನೇಹಾಶ್ರಯ ಸಮಿತಿ ಮತ್ತು ಓಡಿಪಿ ಸಂಸ್ಥೆಗಳ 18 ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಎಚ್.ಐ.ವಿ. ಪೀಡಿತ ಮಕ್ಕಳ ಆರೋಗ್ಯ ಸಂರಕ್ಷಣೆ ನಿಟ್ಟಿನಲ್ಲಿ ಉಭಯ ಸಂಸ್ಥೆಗಳು ಮಹತ್ತರ ಪಾತ್ರ ವಹಿಸಿರುವುದನ್ನು ಶ್ಲಾಘಿಸಿದ ಶುಭ ಅವರು, ಸಮಾಜದ ವಿವಿಧ ಸೇವಾ ಸಂಸ್ಥೆಗಳು ಇಂತಹ ಕಾರ್ಯಕ್ಕೆ ಕೈಜೋಡಿಸಿ ಸಹಕಾರ ನೀಡಬೇಕೆಂದು ಕರೆ ನೀಡಿದರು. ಎಚ್.ಐ.ವಿ. ಪೀಡಿತರಿಗೆ ಕಾನೂನು ಸೇವೆಯ ನೆರವು ನೀಡಲು ಪ್ರಾಧಿಕಾರ ಸದಾ ಸಿದ್ಧವಿದೆ ಎಂದು ಹೇಳಿದ ನ್ಯಾಯಾಧೀಶರಾದ ಶುಭ,…
ಮಡಿಕೇರಿ NEWS DESK ಜು. 22- ರೋಟರಿ ವುಡ್ಸ್ ಸಂಸ್ಥೆಯ ವತಿಯಿಂದ ಜುಲೈ 26 ರಂದು ಕಾಗಿ೯ಲ್ ವಿಜಯ್ ದಿವಸ್ ಅಂಗವಾಗಿ ಯೋಧನಮನ ಕಾಯ೯ಕ್ರಮ ಆಯೋಜಿಸಲಾಗಿದೆ. ನಗರದ ರೋಟರಿ ಸಭಾಂಗಣದಲ್ಲಿ ಜು. 26 ರಂದು ಭಾನುವಾರ ಬೆಳಗ್ಗೆ 10.30 ಗಂಟೆಗೆ ಆಯೋಜಿತ ಕಾಗಿ೯ಲ್ ವಿಜಯ್ ದಿವಸ್ ಕಾಯ೯ಕ್ರಮವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಆರ್.ಎಸ್. ಬಿಂದುಮಣಿ ಅವರು ಉದ್ಘಾಟಿಸಲಿದ್ದಾರೆ. ಕಾಯ೯ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲೆ 3181 ನ ಕ್ಲಬ್ನಿ ವಿಸ್ತರಣಾ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ, ರೋಟರಿ ವಲಯ 6 ರ ಸಹಾಯಕ ಗವನ೯ರ್ ಎಂ.ಡಿ. ರಂಗಸ್ವಾಮಿ, ವಲಯ ಸೇನಾನಿ ಕೆ.ವಸಂತ್ ಕುಮಾರ್ , ರೋಟರಿ ವುಡ್ಸ್ ಕಾಯ೯ದಶಿ೯ ಸ್ಮಿತಾಚಂಗಪ್ಪ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮ ದಲ್ಲಿ ಸೈನಿಕ ದಂಪತಿಗೆ ಸನ್ಮಾನ ನೆರವೇರಲಿದೆ ಎಂದು ರೋಟರಿ ವುಡ್ಸ್ ಅಧ್ಯಕ್ಷೆ ಪ್ರಮೀಳಾ ಕೆ.ಶೆಟ್ಟಿ ತಿಳಿಸಿದ್ದಾರೆ.
ಕುಶಾಲನಗರ NEWS DESK ಜು.22 : ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರನಗರ ಸ್ಮಶಾನ ಅಭಿವೃದ್ಧಿಗೆ ಅನುದಾನ ನೀಡುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರು ಶಾಸಕರಿಗೆ ಮನವಿ ಪತ್ರ ಸಲ್ಲಿಸಿದರು. ಕುಶಾಲನಗರದ ಶಾಸಕರ ಕಚೇರಿಯಲ್ಲಿ ಮನವಿ ಸಲ್ಲಿಸಿದ ಕೆ.ಬಿ.ಶಂಶುದ್ಧೀನ್, ಸುಂದರನಗರ ಸ್ಮಶಾನದ ಅಭಿವೃದ್ಧಿಗೆ ಶಾಸಕರ ಅನುದಾನ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು, ಸ್ಮಶಾನ ಅಭಿವೃದ್ಧಿಗೆ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಮಾತನಾಡಿದ ಗ್ರಾ.ಪಂ ಮಾಜಿ ಸದಸ್ಯ ಕೆ.ಬಿ.ಶಂಶುದ್ಧೀನ್, ಸುಂದರನಗರ ಸ್ಮಶಾನ ಅಭಿವೃದ್ಧಿಗಾಗಿ ಶಾಸಕರ ಬಳಿ ಮನವಿ ಮಾಡಲಾಗಿದೆ. ಶಾಸಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಬೇಗನೇ ಅನುದಾನ ನೀಡುವುದಾಗಿ ತಿಳಿಸಿದರು. ಹಾಗೆಯೇ ಸುಂದರನಗರ ಸರ್ಕಲ್ ನಲ್ಲಿ ದಿ.ಗುಂಡೂರಾವ್ ಅವರ ಪ್ರತಿಮೆ ನಿರ್ಮಾಣದ ಕೆಲಸವೂ ಆಗಲಿದೆ ಎಂದು ಭರವಸೆ ನೀಡಿದ್ದಾರೆ ಎಂದರು.
ಮಡಿಕೇರಿ NEWS DESK ಜು.22 : ಮಡಿಕೇರಿ ನಗರದಂಚಿನ ಕೆ.ನಿಡುಗಣೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪರಿಸರ ನಾಶ ಪಡಿಸಿ ಬಡಾವಣೆ ನಿರ್ಮಿಸುವ ಯೋಜನೆಯನ್ನು ತಕ್ಷಣ ಕೈಬಿಡಬೇಕೆಂದು ಒತ್ತಾಯಿಸಿ ಕೊಡಗು ಹಾಗೂ ಕಾವೇರಿ ಸಂರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ವೇದಿಕೆಯ ಅಧ್ಯಕ್ಷರು ಹಾಗೂ ಪರಿಸರವಾದಿ ನಿವೃತ್ತ ಕರ್ನಲ್ ಸಿ.ಪಿ.ಮುತ್ತಣ್ಣ ಅವರು ಮಾತನಾಡಿ ಸುಮಾರು 94 ಏಕರೆ ಪ್ರದೇಶದಲ್ಲಿ ಬಡಾವಣೆೆ ನಿರ್ಮಾಣ ಯೋಜನೆ ರೂಪಿಸಲಾಗಿದೆ. ಭೂ ಕಂದಾಯ ಕಾಯ್ದೆಯನ್ವಯ ಕೊಡಗಿನ ಗದ್ದೆ ಬಯಲು, ಹಸಿರ ಪರಿಸರಗಳಲ್ಲಿ ಭೂ ಪರಿವರ್ತನೆಗೆ ಅವಕಾಶವಿಲ್ಲವಾದರು, ಇಲ್ಲಿ ಭೂ ಪರಿವರ್ತನೆ ಮಾಡುವ ಮೂಲಕ ನಿಯಮ ಉಲ್ಲಂಘಿಸಲಾಗಿದೆ. ಬಡಾವಣೆಯ ನಿರ್ಮಾಣಕ್ಕಾಗಿ 1500ಕ್ಕೂ ಹೆಚ್ಚಿನ ಮರಗಳನ್ನು ಧರೆಗುರುಳಿಸಲಾಗಿದೆ ಎಂದು ಆರೋಪಿಸಿದರು. ಒಂದೊಮ್ಮೆ ಇಲ್ಲಿ ಬಡಾವಣೆ ನಿರ್ಮಾಣವಾದಲ್ಲಿ, ಇಲ್ಲಿನ ಕಲುಷಿತ ನೀರು ನೇರವಾಗಿ ಮಡಿಕೇರಿಯ ಕುಡಿಯವ ನೀರಿನ ಪ್ರಮುಖ ಮೂಲವಾದ ಕೂಟುಹೊಳೆಗೆ ಸೇರಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಈಗಾಗಲೇ ಬಡಾವಣೆ ನಿರ್ಮಾಣಕ್ಕೆ ಸಂಬ0ಧಿಸಿದ0ತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ದೂರನ್ನು…
ಮಡಿಕೇರಿ NEWS DESK ಜು.22 : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ಬಂಧನವನ್ನು ಖಂಡಿಸಿ ಮತ್ತು ನೀಟ್ ಪ್ರಶ್ನೆ ಸೋರಿಕೆ ಹಗರಣಕ್ಕೆ ಸಂಬ0ಧಿಸಿದ0ತೆ ಕೇಂದ್ರ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ಸಂದರ್ಭ ರಸ್ತೆ ತಡೆ ಮಾಡಲು ಮುಂದಾದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು. ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವರು ಹಾಗೂ ಶಿಕ್ಷಣ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ರಾಹುಲ್ ಗಾಂಧಿ ಬಂಧನವನ್ನು ತೀವ್ರವಾಗಿ ಖಂಡಿಸಿದರು. ಕೇ0ದ್ರದ ಎನ್‌ಡಿಎ ನೇತೃತ್ವದ ಸರಕಾರ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದು, ನ್ಯಾಯ ಕೇಳಿದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಮಾಡುವ ಮೂಲಕ ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದೆ ಎಂದು ಆರೋಪಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ…
ಮಡಿಕೇರಿ NEWS DESK ಜು.21 : ಇದೇ ಜು.29 ರಿಂದ 31 ರ ವರೆಗೆ ನೇಪಾಳದ ಕಾಟ್ಮಂಡ್ ನಲ್ಲಿ ನಡೆಯುವ ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಭಾರತ ತಂಡಕ್ಕೆ ಕರ್ನಾಟಕ ರಾಜ್ಯದಿಂದ 21 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಮಿಕ್ಸ್ ಬಾಕ್ಸಿಂಗ್ ಅಸೋಸಿಯೇಷನ್ ನ ಪ್ರಧಾನÀ ಕಾರ್ಯದರ್ಶಿ ಎನ್.ಸಿ.ಸುದರ್ಶನ್ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಿಂದ ಮಿಥಶ್ ಜೆ., ರೀತನ್ ಡಿ.ಎಸ್,, ಅಜಯ್ ಎನ್.ಎಸ್., ಶ್ರಿಯಾನ್ ಗೌಡ, ಯಾಸಿನ್, ಹಫೀಸ್, ಕೌಶಿಕ್ ಕುಮಾರ್ ಯು.ಸಿ., ಮನ್ಸಿತ್ ಮೋಹನ್ ಹಾಗೂ ಸ್ವಾತಿಕ್ ಬಿ.ಎಸ್ ಆಯ್ಕೆಯಾಗಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಕುಶಾಲನಗರ NEWS DESK ಜು.21 : ಕುಶಾಲನಗರದ ಪ್ರಸಿದ್ಧ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಜುಲೈ 22 ರಿಂದ ವಿಶೇಷ ಆಟಿ ಸೇಲ್ ಆರಂಭವಾಗಲಿದೆ. ಪುತ್ತೂರು, ಸುಳ್ಯ, ಮೂಡಬಿದ್ರೆ,ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಈ ಸೇಲ್ ನಡೆಯಲಿದೆ. ಈ ವಿಶೇಷ ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ (VA) ಶುಲ್ಕದ ಮೇಲೆ ಪ್ರತೀ ಗ್ರಾಂಗೆ ರೂ.500/- ವರೆಗೆ ರಿಯಾಯಿತಿ, ಬೆಳ್ಳಿಯ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ಫ್ಲಾಟ್ ರೂ.6000/- ರಿಯಾಯಿತಿ ಹಾಗೂ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್ ಗೆ ರೂ.7000/-ವರೆಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಅಷ್ಟೇ ಅಲ್ಲದೆ ಮೊದಲೇ ಖರೀದಿ ಮಾಡಿದ ಹಳೆಯ ಗ್ಲೋ ಡೈಮಂಡ್ಸ್ ಗಳಿಗೆ 90% ಬೈಬ್ಯಾಕ್ (Buy Back) ಅನ್ನು ನಿಮ್ಮ ಹೊಸ ಗ್ಲೋ ಡೈಮಂಡ್ಸ್ ಗಳೊಂದಿಗೆ ವಿನಿಮಯ ಮಾಡಿಕೊಳ್ಳಬಹುದು. ಚಿನ್ನದ ದರವು ಈ ಹಿಂದೆ ಅಂದರೆ ಫೆಬ್ರವರಿ ತಿಂಗಳಿನಲ್ಲಿ ಸುಮಾರು ರೂ.16,500 ವರೆಗೆ ಇದ್ದರೆ,ಇದೀಗ ಸುಮಾರು ರೂ.13,000/- ರ ಮಟ್ಟಕ್ಕೆ ಇಳಿಕೆಯಾಗಿದೆ. ಈ ಬೆಲೆ ಇಳಿಕೆಯಿಂದ…
ಮಡಿಕೇರಿ NEWS DESK ಜು.21 : ವಿರಾಜಪೇಟೆ ಕ್ಷೇತ್ರದ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಬಿಜೆಪಿ ದುರಸ್ತಿ ಹಂತದ ರಸ್ತೆಗಳಲ್ಲಿ ಬಾಳೆಗಿಡ ನೆಟ್ಟು ರಾಜಕೀಯ ಪ್ರೇರಿತ ಪ್ರತಿಭಟನೆ ನಡೆಸಿದೆ ಎಂದು ಭಾಗಮಂಡಲ ವಲಯ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಲಯ ಕಾಂಗ್ರೆಸ್ ಅಧ್ಯಕ್ಷ ಕೋಳಿಬೈಲು ವೆಂಕಟೇಶ್ ಅವರು ಅಭಿವೃದ್ಧಿ ಕಾರ್ಯಗಳ ಮೂಲಕವೇ ಜನಪ್ರಿಯತೆಯನ್ನು ಗಳಿಸುತ್ತಿರುವ ಶಾಸಕರ ಹೆಸರಿಗೆ ಮಸಿ ಬಳಿಯುವ ಪ್ರಯತ್ನವಾಗಿ ಭಾಗಮಂಡಲದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ ಎಂದು ಟೀಕಿಸಿದರು. ಕಳೆದ 20 ವರ್ಷಗಳಲ್ಲಿ ನಡೆಯದ ಅಭಿವೃದ್ಧಿ ಕಾರ್ಯಗಳು ಕೇವಲ 3 ವರ್ಷಗಳಲ್ಲಿ ನಡೆದಿದೆ. ಅಪೂರ್ಣಗೊಂಡು ನೆನೆಗುದಿಗೆ ಬಿದ್ದಿದ್ದ ಮೇಲು ಸೇತುವೆ ಯೋಜನೆ ಎ.ಎಸ್.ಪೊನ್ನಣ್ಣ ಅವರು ಶಾಸಕರಾದ ನಂತರ ಪೂರ್ಣಗೊಂಡು ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿದೆ. ಭಾಗಮಂಡಲ ಸುತ್ತಮುತ್ತಲ ಗ್ರಾಮಗಳಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ರಸ್ತೆಗಳು ಅಭಿವೃದ್ಧಿಯಾಗಿವೆ, ತಡೆಗೋಡೆ ಮತ್ತು ಕಾಂಕ್ರೀಟ್ ರಸ್ತೆಗಳು ನಿರ್ಮಾಣಗೊಂಡಿವೆ. ಬಿಜೆಪಿ ಪ್ರತಿಭಟನೆ ನಡೆಸಿದ ರಸ್ತೆಗಳ ಅಭಿವೃದ್ಧಿ ಕಾರ್ಯಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ದುರಸ್ತಿಯ…






