ಲೇಖಕ: admin

ಮಡಿಕೇರಿ ಏ.23 NEWS DESK :: ಪ್ರತಿ ವರ್ಷ ಜಗತ್ತಿನ ಎಲ್ಲ ದೇಶಗಳಲ್ಲಿ ಏಪ್ರಿಲ್ 22 ರಂದು ವಿಶ್ವ ಭೂ ದಿನ (ಅರ್ಥ್-ಡೇ) ವನ್ನು ಆಚರಿಸಲಾಗುತ್ತಿದೆ. ಅರ್ಥ್-ಡೇ ಅಂದರೆ ಭೂಮಿಯ ಬರ್ಥ್- ಡೇ ! ಅಂದರೆ ಭೂಮಿಯ ಹುಟ್ಟುಹಬ್ಬ. ಅಂದರೆ ಅಮ್ಮನ ಹುಟ್ಟುಹಬ್ಬದ ದಿನ ಅವಳು ತುಂಬ ಸುಂದರವಾಗಿ, ನಗುನಗುತ್ತ ಓಡಾಡುವ ಹಾಗೂ ಭೂಮಾತೆಯ ಮಡಿಲ್ಲಲ್ಲೂ ಈ ದಿನಗಳಲ್ಲಿ ಪರಿಸರದಲ್ಲಿ ಗಿಡಮರ, ಹೂ ಬಳ್ಳಿ, ಪಶು-ಪಕ್ಷಿಗಳಿಗೂ ಸಡಗರ -ಸಂಭ್ರಮ. ನಾವೀಗ ಬಾಹ್ಯಾಕಾಶ ಯುಗದಲ್ಲಿದ್ದೇವೆ. ಹಾಗೆಂದು ಭೂಮಿಯ ಯುಗವನ್ನು ಮರೆತುಬಿಟ್ಟರೆ ಹೇಗೆ ? ಮನುಕುಲ ಸೇರಿದಂತೆ ಸಕಲ ಜೀವಿಗಳ ಸಂರಕ್ಷಣೆಗೆ ಭೂಮಿಯ ಸಂರಕ್ಷಣೆ ಕೂಡ ಅಗತ್ಯವಲ್ಲವೇ ? ಆದ್ದರಿಂದ, ನಾವು ಈ ಭೂ ದಿನದ ಸಂದರ್ಭ ಭೂಮಿಯ ಸಂರಕ್ಷಣೆ ಮತ್ತು ಭೂ ಮಂಡಲದ ಎಲ್ಲಾ ಜೀವಿಗಳ ಸಂರಕ್ಷಣೆ, ನೀರು ಮತ್ತು ವಾಯುಮಂಡಲದ ರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವ ಮೂಲಕ ಭೂ ಸಂರಕ್ಷಣೆಗಾಗಿ ಈ ದಿನವನ್ನು ಆಚರಿಸಲೇಬೇಕಾಗಿದೆ. ಈಗಾಗಲೇ ಬೇಸಿಗೆ ಆರಂಭವಾಗಿದೆ. ಬೇಸಿಗೆಯ ವಸಂತ…

Read More

ಮಡಿಕೇರಿ NEWS DESK ಏ.23 : ಕಾವೇರಿ ಮಾತೆಯ ಉಗಮ ಸ್ಥಾನ ತಲಕಾವೇರಿಯಲ್ಲಿ ಪ್ರಪ್ರಥಮ ಬಾರಿಗೆ ಅತಿರುದ್ರ ಜಪಯಜ್ಞ ಹಮ್ಮಿಕೊಳ್ಳಲಾಗಿದೆ ಎಂದು ಜಪಯಜ್ಞ ಸಮಿತಿಯ ಕಾರ್ಯಾಧ್ಯಕ್ಷ ಕೆ.ಎಸ್.ರಮೇಶ್ ಹೊಳ್ಳ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೇ 11ರಿಂದ 21ರವರೆಗೆ ನಡೆಯುವ ಜಪಯಜ್ಞಕ್ಕೆ ರಾಜ್ಯಾದ್ಯಾಂತದಿಂದ 50ಕ್ಕೂ ಅಧಿಕ ಋತ್ವಿಜರು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಅವಧೂತರಾದ ಶ್ರೀ ಶ್ರೀ ಶ್ರೀ ಕಾಂತಾನಂದ ಸರಸ್ವತಿ ಮಹಾರಾಜರು ಸಂಕಲ್ಪಿಸಿರುವ ಕೋಟ್ಯಧಿಕ ಶ್ರೀ ರುದ್ರ ಜಪ ಕೈಂಕರ್ಯವು ಕಳೆದ ಐದು ವರ್ಷಗಳಿಂದ ರಾಜ್ಯದ ಎಲ್ಲೆಡೆ ನಡೆಯುತ್ತಿದ್ದು, 50ಲಕ್ಷ ರುದ್ರ ಜಪ ಪೂರ್ಣವಾಗಿದೆ. 2030ರ ಜನವರಿ 18ಕ್ಕೆ ಶಿವಮೊಗ್ಗದಲ್ಲಿ ಜಪಯಜ್ಞ ಸಾಂಗತವಾಗಲಿದೆ. ಲೋಕಕಲ್ಯಾಣಾರ್ಥವಾಗಿ ನಡೆಯುತ್ತಿರುವ ಈ ಜಪಯಜ್ಞಕ್ಕೆ ಜಿಲ್ಲೆಯ ಆಸ್ತಿಕ ಬಂಧುಗಳು ಮುಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಮೇ 11ರಿಂದ 19ರವರೆಗೆ ತಲಕಾವೇರಿ ಸನ್ನಿಧಿಯಲ್ಲಿ 9ದಿನಗಳು ಪ್ರತಿದಿನ ಮೂರು ಆವರ್ತ ಶ್ರೀ ರುದ್ರ ಜಪ ಜರುಗಲಿದೆ. ಋತ್ವಿಜರಿಗೆ ಊಟೋಪಹಾರ ಹಾಗೂ ಉಳಿದುಕೊಳ್ಳುವ ವ್ಯವಸ್ಥೆಯನ್ನು ಕೈಲಾಸಾಶ್ರಮದಲ್ಲಿ ಮಾಡಲಾಗಿದೆ. ಮೇ 20ರಂದು…

Read More

ಮಡಿಕೇರಿ NEWS DESK ಏ.23 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ತೀವ್ರವಾಗಿ ಖಂಡಿಸುತ್ತದೆ ಮತ್ತು ಭಯೋತ್ಪಾದಕರ ದಾಳಿಯಿಂದ ಅಸುನೀಗಿದ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತದೆ ಎಂದು ಸಂಘದ ತಾಲ್ಲೂಕು ಅಧ್ಯಕ್ಷ ವಿ.ಜಿ.ಮೋಹನ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಮ್ಮು ಕಾಶ್ಮೀರದಲ್ಲಿ ಮತ್ತೆ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿರುವ ಪಾಕ್ ಬೆಂಬಲಿತ ಭಯೋತ್ಪಾದಕರ ಹೆಡೆಮುರಿ ಕಟ್ಟಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಜಮ್ಮು ಕಾಶ್ಮೀರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಸರ್ಕಾರ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ದೇಶದ ರಕ್ಷಣೆಯ ಹೊಣೆ ಹೊತ್ತಿರುವ ಕೇಂದ್ರ ಸರ್ಕಾರ ಉಗ್ರರಿಗೆ ನೆರವು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಬೇಕು ಎಂದು ಆಗ್ರಹಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಉಗ್ರರು ನಡೆಸಿದ ಹೇಯ ಕೃತ್ಯವನ್ನು ಯಾರೂ ಕ್ಷಮಿಸಲು ಸಾಧ್ಯವಿಲ್ಲ. ಈ ದಾಳಿಯನ್ನು…

Read More

ಮಡಿಕೇರಿ NEWS DESK ಏ.23 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿ ಖಂಡನೀಯವಾಗಿದ್ದು, ದೇಶದ್ರೋಹಿಗಳನ್ನು ಮಟ್ಟ ಹಾಕುವ ಕಾಲ ಸನ್ನಿಹಿತವಾಗಿದೆ ಎಂದು ಮಡಿಕೇರಿ ನಗರ ಮಂಡಲ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ ಅವರು, ಪ್ರವಾಸಿಗರನ್ನು ಹತ್ಯೆ ಮಾಡಿ ಅಮಾನವೀಯವಾಗಿ ನಡೆದುಕೊಂಡ ಪಾಕಿಸ್ತಾನಿ ಬೆಂಬಲಿತ ಭಯೋತ್ಪಾದಕರನ್ನು ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ನಾಶ ಮಾಡಲಿದೆ ಎಂದು ತಿಳಿಸಿದ್ದಾರೆ. ಮೋದಿಯವರು ಪ್ರಧಾನಿಯಾದ ನಂತರ ಜಮ್ಮು ಕಾಶ್ಮೀರದಲ್ಲಿ ಉಗ್ರರನ್ನು ನಿಯಂತ್ರಿಸಿದ್ದಾರೆ. ಮೊದಲಿದ್ದ ಆತಂಕದ ವಾತಾವರಣ ದೂರವಾಗಿರುವುದರಿಂದ ಇಲ್ಲಿಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ. 370ನೇ ವಿಧಿ ರದ್ದುಪಡಿಸಿದ ಬಳಿಕ ಜಮ್ಮು ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ. ಜನರು ಶಾಂತಿಯುತ ಜೀವನವನ್ನು ನಡೆಸುತ್ತಿದ್ದಾರೆ ಮತ್ತು ಯಾವುದೇ ಭಯವಿಲ್ಲದೆ ಮುಕ್ತವಾಗಿ ಓಡಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆಯೂ ಶಾಂತಿಯುತವಾಗಿ ನಡೆದಿದೆ. ಇಲ್ಲಿನ ಎಲ್ಲಾ ವ್ಯವಸ್ಥೆಗಳು ಸುಧಾರಣೆಯ ಹಂತದಲ್ಲಿರುವುದನ್ನು ಸಹಿಸದ ಭಯೋತ್ಪಾದಕರು ಪೈಶಾಚಿಕ…

Read More

ಮಡಿಕೇರಿ ಏ.23 NEWS DESK : ಅನಿರ್ದಿಷ್ಟಾವಧಿಗೆ ಲಾರಿ ಮುಷ್ಕರ ನಡೆಯುತ್ತಿರುವುದರಿಂದ ಸಾರಿಗೆ ಇಲಾಖೆ ವತಿಯಿಂದ ಕಂಟ್ರೋಲ್ ರೂಂ ಸ್ಥಾಪನೆಯಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ 24*7 ಕಚೇರಿಯಲ್ಲಿ ಕಂಟ್ರೋಲ್ ರೂಂ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಕಚೇರಿ ದೂ.ಸಂ.08272-225785 ನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ.

Read More

ಮಡಿಕೇರಿ ಏ.24 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಹಕಾರದಲ್ಲಿ ಡಾ.ರಾಜ್ ಕುಮಾರ್ ಅವರ 97ನೇ ಜನ್ಮ ದಿನಾಚರಣೆಯು ಏಪ್ರಿಲ್, 24 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಏ.23 NEWS DESK : ದ್ವಿತೀಯ ಪಿಯುಸಿ ಪರೀಕ್ಷೆ-2 ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ನ್ನು ವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಪರೀಕ್ಷೆ-1 ನಡೆಸಿದಂತೆ ಪರೀಕ್ಷೆ-2 ನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಅವರು ಮಾತನಾಡಿ ಏ.24 ರಿಂದ ಮೇ 8 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಯು ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ಇಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 3470 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು. ವೆಬ್‍ಕಾಸ್ಟಿಂಗ್ ಸಹ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಪ್ರಾಂಶುಪಾಲರು ಇತರರು ಇದ್ದರು.

Read More

ಮಡಿಕೇರಿ NEWS DESK ಏ.22 : ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ-2025 ಅನ್ನು ವಿರೋಧಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಪಕ್ಷದ ಅಲ್ಪಸಂಖ್ಯಾತರ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಾಮೀಯ ಮಸೀದಿ ಮುಂಭಾಗದಿಂದ ಗಾಂಧಿ ಮೈದಾನದವರೆಗೆ ಘೋಷಣೆಗಳೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಕೇಂದ್ರದ ಧೋರಣೆಗಳ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಗಾಂಧಿ ಮೈದಾನದಲ್ಲಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು, ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಕಾನೂನಾತ್ಮಕ ಹೋರಾಟ ರೂಪಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ವಕ್ಫ್ಗೆ ಸಂಬಂಧಿಸಿದ ಸುಮಾರು 6.50 ಲಕ್ಷ ಏಕರೆ ಜಾಗವಿದ್ದರೆ, ದೇಶದಾದ್ಯಂತ ಸುಮಾರು 37 ಲಕ್ಷ ಏಕರೆ ಜಾಗವಿದೆ. ಇದರ ಒಟ್ಟು ಮೌಲ್ಯ 20 ಲಕ್ಷ ಕೋಟಿ…

Read More

*ಮೈದಾನ 2* ನಾಟೋಳಂಡ ಮತ್ತು ಮುದ್ದಂಡ ನಡುವಿನ ಪಂದ್ಯದಲ್ಲಿ ನಿಗಧಿತ ಅವಧಿಯಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 2-1 ಗೋಲುಗಳ ಅಂತರದಲ್ಲಿ ನಾಟೋಳಂಡ ಜಯ ಸಾಧಿಸಿತು. ಮುದ್ದಂಡ ಮಿಶಿಕಾ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಆದೇಂಗಡ ಮತ್ತು ಬೊಳ್ಳೇರ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಆದೇಂಗಡ ಗೆಲುವು ದಾಖಲಿಸಿತು. ಆದೇಂಗಡ ಪರ ತಶ್ವಿಕ 2 ಗೋಲು ದಾಖಲಿಸಿದರು. ಬೊಳ್ಳೇರ ಜ್ಯೋತಿ 1 ಗೋಲು ಬಾರಿಸಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಂಬೀರಂಡ ಮತ್ತು ಮಚ್ಚಮಾಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಕಂಬೀರಂಡ ತಂಡ ಜಯ ಸಾಧಿಸಿತು. ಕಂಬೀರಂಡ ಪರ ಮಿಲನಾ ಹಾಗೂ ಪೊನ್ನಮ್ಮ ತಲಾ 1 ಗೋಲು ದಾಖಲಿಸಿದರು. ಮಚ್ಚಮಾಡ ಪರ ಪಾಯಲ್ 1 ಗೋಲು ಬಾರಿಸಿದರು. ಮಚ್ಚಮಾಡ ವಿದ್ಯಾ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ತೀತಿರ ಮತ್ತು ಕೂತಂಡ ನಡುವಿನ ಪಂದ್ಯದಲ್ಲಿ 3-0…

Read More

*ಮೈದಾನ 2* ಬೆಳಿಗ್ಗೆ 9 ಗಂಟೆಗೆ ತೀತಿರ ಮತ್ತು ಚೆಯ್ಯಂಡ, 9.30 ಗಂಟೆಗೆ ಚೇನಂಡ ಮತ್ತು ಕಂಬೀರಂಡ, 10 ಗಂಟೆಗೆ ಆದೇಂಗಡ ಮತ್ತು ತೆಕ್ಕಡ, 10.30 ಗಂಟೆಗೆ ಅಚ್ಚಪಂಡ ಮತ್ತು ಕುಟ್ಟಂಡ (ಮಾದಾಪುರ), 11 ಗಂಟೆಗೆ ಚೌರೀರ (ಹೊದವಾಡ) ಮತ್ತು ಮೇವಡ, 11.30 ಗಂಟೆಗೆ ಚೇಂದಿರ ಮತ್ತು ಕುಪ್ಪಂಡ (ಕೈಕೇರಿ), ಮಧ್ಯಾಹ್ನ 12 ಗಂಟೆಗೆ ನಾಪಂಡ ಮತ್ತು ನಾಟೋಳಂಡ, 12.30 ಗಂಟೆಗೆ ಕೇಚೆಟ್ಟಿರ ಮತ್ತು ಚೋಯಮಾಡಂಡ, 1 ಗಂಟೆಗೆ ಚೆಪ್ಪುಡಿರ ಮತ್ತು ಮಾಳೇಟಿರ (ಕೆದಮುಳ್ಳೂರು), 1.30 ಗಂಟೆಗೆ ಪಾಂಡಿರ (ಹೆಬ್ಬೆಟ್ಟಿಗೇರಿ) ಮತ್ತು ಕಾಂಡಂಡ, 2 ಗಂಟೆಗೆ ಬಾಚಿನಾಡಂಡ ಮತ್ತು ಮುಕ್ಕಾಟಿರ (ದೊಡ್ಡಪುಲಿಕೋಟು), 2.30 ಗಂಟೆಗೆ ಶಿವಚಾಳಿಯಂಡ ಮತ್ತು ಕಲಿಯಂಡ, 3 ಗಂಟೆಗೆ ತೀತಿರ/ ಚೆಯ್ಯಂಡ ಮತ್ತು ಸಣ್ಣುವಂಡ, 3.20ಕ್ಕೆ ಚೇನಂಡ/ಕಂಬೀರಂಡ ಮತ್ತು ಆದೇಂಗ/ ತೆಕ್ಕಡ, 3.40ಕ್ಕೆ ಕುಪ್ಪಂಡ(ಕೈಕೇರಿ), ಚೇಂದಿರ ಮತ್ತು ಚೌರೀರ (ಹೊದವಾಡ)/ ಮೇವಡ, ಸಂಜೆ 4 ಗಂಟೆಗೆ ನಾಪಂಡ/ ನಾಟೋಳಂಡ ಮತ್ತು ಕೇಚೆಟ್ಟಿರ/ ಚೋಯಮಾಡಂಡ, 4.30 ಗಂಟೆಗೆ ಪಾಂಡಿರ (ಹೆಬೆಟ್ಟಿಗೇರಿ)…

Read More