ಲೇಖಕ: admin

ವಿರಾಜಪೇಟೆ ಏ.22 NEWS DESK :  ಬೆಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಪ್ರತಿಷ್ಠಾ ವರ್ಧಂತಿ ಮಹೋತ್ಸವ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಹಾ ಚಂಡಿಕಾ ಹೋಮವು ಶ್ರದ್ಧಾಭಕ್ತಿಯಿಂದ ಜರುಗಿತು. ಪ್ರತಿಷ್ಠಾ ಮಹೋತ್ಸವದ ಹಿಂದಿನ ದಿವಸ ಪುರೋಹಿತರು ಪಾರಾಯಣವನ್ನು ಮಾಡಿದರು. ಮುಂಜಾನೆ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ನಾಗ, ಶ್ರೀ ವನದುರ್ಗಾ ದೇವರುಗಳಿಗೆ ಪ್ರಾರ್ಥನೆಯನ್ನು ಸಲ್ಲಿಸುವುದರ ಮೂಲಕ ಧಾರ್ಮಿಕ ಕಾರ್ಯಗಳನ್ನು ಆರಂಭಿಸಲಾಯಿತು. ಮಹಾಗಣಪತಿ ಹೋಮದ ನಂತರ ಪುರೋಹಿತರು ಸಂಕಲ್ಪ ಮಾಡಿದರು. ಶ್ರೀ ಲಕ್ಷ್ಮಿ ಸತ್ಯನಾರಾಯಣ ಪೂಜೆಯು ಶಾಸ್ತ್ರೋಕ್ತವಾಗಿ ನಡೆಯಿತು. ಅರ್ಚಕರು ಮಹಾ ಚಂಡಿಕಾ ಹವನದ ಪ್ರಯುಕ್ತ ಸಂಕಲ್ಪ ಪೂಜೆಯನ್ನು ಮಾಡಿ ಪ್ರಾರ್ಥಿಸಿದರು. ಶ್ರೀ ಲಕ್ಷ್ಮಿ ಸತ್ಯನಾರಾಯಣ ಸ್ವಾಮಿಗೆ ಹಾಗೂ ಶ್ರೀ ದೇವಿಗೆ ಅಲಂಕಾರ ಸೇವೆ, ಅಷ್ಟೋತ್ತರ ಪಠಣ, ಕುಂಕುಮಾರ್ಚನೆ, ನೈವೇದ್ಯ ಅಭಿಷೇಕ ಸೇವೆಗಳು ನಡೆದವು. ಮಹಾ ಚಂಡಿಕಾ ಯಾಗದ ಸಂದರ್ಭ  ಅಷ್ಟಾ ವದನ ಸೇವೆ ನಡೆದು ಚಂಡೆ ಬಳಗದವರಿಂದ ಚಂಡೆ ಸೇವೆ, ಭರತನಾಟ್ಯ, ಭಜನೆ,…

Read More

ಮಡಿಕೇರಿ ಏ.22 NEWS DESK : ವನ್ಯಜೀವಿ-ಮಾನವ ಸಂಘರ್ಷ ಶಾಶ್ವತವಾಗಿ ತಡೆಗಟ್ಟುವ ಹಿನ್ನೆಲೆಯಲ್ಲಿ ಅತ್ಯಂತ ಗಂಭೀರವಾಗಿ ಕಾರ್ಯಸೂಚಿಗಳನ್ನು ರೂಪಿಸುತ್ತಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಇಂದು ಅರಣ್ಯ ಇಲಾಖೆ ವತಿಯಿಂದ ನಡೆಯುತ್ತಿರುವ ಹುಲಿ ಸೆರೆ ಕಾರ್ಯಾಚರಣೆಯ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಯನ್ನು ಪರಿಶೀಲಿಸಿದರು. ಪೊನ್ನಂಪೇಟೆ ತಾಲೂಕು ಬಿರುನಾಣಿ ಗ್ರಾಮದ, ತೆರಾಲು ಭಾಗದಲ್ಲಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಸೆರೆ ಕಾರ್ಯಾಚರಣೆಯ ನೇತೃತ್ವ ವಹಿಸಿದ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನವನ್ನು ಬಳಸಿ ಅತ್ಯಂತ ಶೀಘ್ರದಲ್ಲಿ ಕಾರ್ಯಾಚರಣೆಯನ್ನು ಮುಗಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಪೊನ್ನಂಪೇಟೆ ತಾಲ್ಲೂಕು ಅಧ್ಯಕ್ಷ ಪ್ರಶಾಂತ್, ಬಿರುನಾಣಿ ವಲಯ ಅಧ್ಯಕ್ಷ ಪ್ರೀತಮ್, ಕಾಂಗ್ರೆಸ್…

Read More

ಮಡಿಕೇರಿ ಏ.22 NEWS DESK : ಪೊನ್ನಂಪೇಟೆ ತಾಲ್ಲೂಕಿನ, ತಿತಿಮತಿ ಭಾಗದಲ್ಲಿರುವ ಚಿನಿಹಾಡ್ಲು ಹಾಡಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ.ಎಸ್ ಪೊನ್ನಣ್ಣ  ಭೇಟಿ ನೀಡಿ ಪ್ರತಿಯೊಬ್ಬರ ಅಹವಾಲುಗಳನ್ನು ಆಲಿಸಿದರು. ಹಾಡಿಯ ಜನರಿಗೆ ರಸ್ತೆ, ವಿದ್ಯುಚ್ಛಕ್ತಿ ಹಾಗೂ ನೀರಿನ ಸಮಸ್ಯೆ ಇದ್ದು, ಇದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಅನುಮತಿ ನೀಡದೆ ತೊಡಕು ಮಾಡುತ್ತಿದ್ದಾರೆ ಎಂದು ನಿವಾಸಿಗಳು ತಮ್ಮ ನೋವನ್ನು ಶಾಸಕರಲ್ಲಿ ಹೇಳಿಕೊಂಡರು.  ಈ ಸಂದರ್ಭ ಮಾತನಾಡಿದ ಶಾಸಕರು,  ಹಾಡಿಯ ಜನರ ಬೇಡಿಕೆಗೆ ಪೂರಕವಾಗಿ ಸ್ಪಂದಿಸುವುದರೊಂದಿಗೆ ಹಾಡಿಯ ಜನರ ಅಭಿವೃದ್ಧಿಗೆ ಬೇಕಾದ ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದರು.  ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ವಿಧಾನಪರಿಷತ್ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಲಯ ಅಧ್ಯಕ್ಷ  ನವೀನ್, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Read More

ಮಡಿಕೇರಿ ಏ.22 NEWS DESK : ರಾಜ್ಯ ವಕೀಲರ ಪರಿಷತ್ತಿನ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಸದಾಶಿವ ರೆಡ್ಡಿಯವರ ಮೇಲಿನ ಹಲ್ಲೆಯನ್ನು ಖಂಡಿಸಿ ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು. ನಗರದ ನ್ಯಾಯಾಲಯದ ಮುಂಭಾಗದಲ್ಲಿ ಜಮಾಯಿಸಿ ವಕೀಲರು ಮೌನ ಪ್ರತಿಭಟನೆ ನಡೆಸಿದರು. ಕೃತ್ಯ ನಡೆಸಿದ ಆರೋಪಿಯನ್ನು ಶೀಘ್ರವೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ವಕೀಲರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕೆಂದು ಆಗ್ರಹಿಸಿದರು. ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್, ಕಾರ್ಯದರ್ಶಿ ಡಿ.ಎಂ.ಕೇಶವ್, ಸಂಘದ ಪದಾಧಿಕಾರಿಗಳು ಮತ್ತು ವಕೀಲರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Read More

ಸೋಮವಾರಪೇಟೆ ಏ.22 NEWS DESK : ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಸಹಕಾರಿಯಾಗಲಿವೆ ಎಂದು ಸಾಂದೀಪನಿ ಶಾಲೆಯ ವ್ಯವಸ್ಥಾಪ ನಿರ್ದೇಶಕ ಲಿಖಿತ್ ತಿಳಿಸಿದರು.  ಯಶೋದೆ ರಂಗಶಿಕ್ಷಣ ಟ್ರಸ್ಟ್, ಸಾಂದೀಪನಿ ಶಾಲೆಯ ಆಶ್ರಯದಲ್ಲಿ ಶಾಲೆಯ ಆವರಣದಲ್ಲಿ ಕಳೆದ ಇಪ್ಪತ್ತು ದಿನಗಳಿಂದ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.  ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯು ಅವಶ್ಯಕವೆಂದರು,ಇದರಿಂದಾಗಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ, ಸಾಂಸ್ಕೃತಿಕ ಚಟುವಟಿಕೆಗಳನ್ನು ಕಲಿಸುವ ಶಿಬಿರಗಳು ಇತೀಚೆಗೆ ನಡೆಯುತಿಲ್ಲವೆಂದು ವಿಷಾದಿಸಿದರು.  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ವಕೀಲ ಶ್ರೀನಿಧಿ ಮಾತನಾಡಿ ವರ್ಷವಿಡೀ ತರಗತಿಯಲ್ಲಿ ಪಾಠಪ್ರವಚನ ಕೇಳಿದ ಮಕ್ಕಳಿಗೆ ಇಂತಹ ಶಿಬಿರಗಳು ಮಕ್ಕಳ ಚಟುವಟಿಕೆಗಳಲ್ಲಿ ಬದಲಾವಣೆ ತರಲಿವೆ ಆದ್ದರಿಂದ ಇಂತಹ ಶಿಬಿರಗಳು ಆಯೋಜನೆಗೊಳ್ಳಬೇಕು ಎಂದು ತಿಳಿಸಿದರು. ಸಾಂಸ್ಕೃತಿಕ ಚಟುವಟಿಕೆಗಳೊಡನೆ ನಮ್ಮ ಸಂಸ್ಕೃತಿಯನ್ನು ಮಕ್ಕಳಿಗೆ ತಿಳಿಸುವ ಹಾಗೂ ಕಲಿಸುವ ಕಾರ್ಯವಾಗಬೇಕೆಂದರು. ಪತ್ರಕರ್ತ ಎಸ್.ಮಹೇಶ್, ವೈದ್ಯರಾದ ರಾಕೇಶ್ ಪಟೇಲ್, ಕಾಫಿ ಬೆಳೆಗಾರ ಸಜನ್ ಪೂವಯ್ಯ, ಶಿಕ್ಷಕಿ ವಾಸಂತಿ ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಬಿರದಲ್ಲಿ ಯಶೋಧೆ…

Read More

ನಾಪೋಕ್ಲು ಏ.22 NEWS DESK : ಮೇರಿಮಾತೆಯ ದೇವಾಲಯದಲ್ಲಿ ಯೇಸು ಕ್ರಿಸ್ತನ ಪುನರುತ್ಥಾನವನ್ನು ಸಾರುವ ಈಸ್ಟರ್ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ದೇವಾಲಯದ ಧರ್ಮ ಗುರುಗಳಾದ ಜ್ಞಾನಪ್ರಕಾಶ್ ಆಶೀರ್ವದಿಸಿ, ಮೇಣದ ಬತ್ತಿಯನ್ನು (ಉರಿಸಿ)ಪ್ರಜ್ವಲಿಸಿದರು. ಗುರುಗಳು ಮೇಣದಬತ್ತಿಯನ್ನು ಹಿಡಿದುಕೊಂಡು ಭಕ್ತರ ನಡುವೆ ತೆರಳಿ ಇದು ಕ್ರಿಸ್ತರ ಜ್ಯೋತಿ ಎಂದು ಉದ್ಗರಿಸಿದಾಗ ಎಲ್ಲ ಭಕ್ತಾದಿಗಳು ದೇವರಿಗೆ ಮಹಿಮೆ ಸಲ್ಲಲಿ ಎಂದು ಜೈಕಾರವನ್ನು ಕೂಗುತ್ತಾ ತಮ್ಮಲ್ಲಿರುವ ಮೇಣದ ಬತ್ತಿಯನ್ನು ಪ್ರಜ್ವಲಿಸಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬಲಿ ಪೂಜೆಯನ್ನು ಅರ್ಪಿಸಲಾಯಿತು. ನಂತರ ಪುನರುತ್ಥಾನದ ಯೇಸುವಿನ ಪ್ರತಿಮೆಯನ್ನು ಧರ್ಮ ಗುರುಗಳು ಅನಾವರಣಗೊಳಿಸಿದರು. ಈ ಸಂದರ್ಭ ಪಾಲನಾ ಸಮಿತಿಯ ಸದಸ್ಯರುಗಳು, ಕ್ರೈಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಏ.22 NEWS DESK : ನಗರದಲ್ಲಿರುವ ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ಏ.25 ರಂದು ಜರುಗುವ “ವಾರ್ಷಿಕೋತ್ಸವ” ಪೂಜೆ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮ ಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಏ.25 ರಂದು ಬೆಳಗ್ಗೆ 9 ಗಂಟೆಯಿಂದ ಅಪರಾಹ್ನ 12 ಗಂಟೆವರೆಗೆ ಗಣಪತಿ ಹೋಮ ಮತ್ತು ಕಲಶಾಭಿಷೇಕ ಪೂಜೆಗಳು ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಂತರ ಪ್ರಸಾದ ವಿತರಣೆ ನಡೆಯಲಿದೆ. ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಭಾಜನರಾಗುವಂತೆ ದೇವಾಲಯದ ವ್ಯವಸ್ಥಾಪನ ಸಮಿತಿಯಿಂದ ಕೋರಿದೆ. ಪ್ರಸಾದ ಸೇವೆಯನ್ನು ಮಾಡಲಿಚ್ಚಿಸುವ ಸೇವಾಕರ್ತರು ದೇವಾಲಯದ ವ್ಯವಸ್ಥಾಪನಾ ಸಮಿತಿಯವರ ದೂರವಾಣಿ ಸಂಖ್ಯೆ 9448899567/ 9448798558 ನ್ನು ಸಂಪರ್ಕಿಸಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜು ತಿಳಿಸಿದ್ದಾರೆ.

Read More

ಸೋಮವಾರಪೇಟೆ ಏ.22 NEWS DESK : ಕೂಗೇಕೋಡಿ ಗ್ರಾಮದ ಶ್ರೀ ಕನ್ನಂಬಾಡಿ ಅಮ್ಮ ದೇವಸ್ಥಾನದ ವಾರ್ಷಿಕ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಎರಡು ದಿನಗಳ ಕಾಲ ನಡೆಯಿತು. ಗ್ರಾಮದೇವತೆ ಎಂದು ಕರೆಯಲ್ಪಡುವ ಅಮ್ಮನಿಗೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಅಮ್ಮನ ಉತ್ಸವ ಮೂರ್ತಿಗೆ ಗಂಗೆ ಪೂಜೆ ನೆರವೇರಿಸಿ, ಕಳಶ ಹೊತ್ತ ಮಹಿಳೆಯರು ಹಾಗು ವಾದ್ಯವೃಂದದೊಂದಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ತರಲಾಯಿತು. ಕೆಂಡ ಹಾಯುವ ಮೂಲಕ ಹಲವು ತಮ್ಮ ಹರಕೆ ಒಪ್ಪಿಸಿದರು. ನಂತರ ಗ್ರಾಮಸ್ಥರು ಗ್ರಾಮದ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೂಗೇಕೋಡಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಪಿ.ಆದರ್ಶ್, ಕಾರ್ಯದರ್ಶಿ ಕೆ.ಡಿ.ನಿರಂಜನ್, ದೇವಾಲಯದ ಅರ್ಚಕರಾದ ರಾಜು ಕಾರ್ಯಕ್ರಮ ನಿರ್ವಹಿಸಿದರು.

Read More

ಮಡಿಕೇರಿ ಏ.22 NEWS DESK : ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಸುತ್ತಮುತ್ತ ತೆಂಗಿನ ಚಿಪ್ಪು, ಟೈರು, ಹೂಕುಂದಗಳಲ್ಲಿ ನೀರು ನಿಲ್ಲದಂತೆ ಗಮನಹರಿಸಬೇಕು. ಪರಿಸರ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ `ಜಿಲ್ಲಾ ಆರೋಗ್ಯ ಅಭಿಯಾನ’ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಯ ಸುತ್ತಮುತ್ತ ಪರಿಸರ ಶುಚಿತ್ವವಾಗಿದ್ದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಸೊಳ್ಳೆಗಳು ಹರಡದಂತೆ ಗಮನಹರಿಸುವುದು ಅತ್ಯಗತ್ಯವಾಗಿದೆ. ನಿಂತ ನೀರಿನಿಂದ ಲಾರ್ವ ಕಂಡುಬಂದಲ್ಲಿ ಅದನ್ನು ನಾಶ ಪಡಿಸುವಂತಾಗಬೇಕು. ಆ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಅಗತ್ಯ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು. ಶಿಶು ಮತ್ತು ತಾಯಂದಿರ ಆರೋಗ್ಯ ಕ್ಷೇಮ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಶಿಶು ಆರೋಗ್ಯ…

Read More

ಮಡಿಕೇರಿ ಏ.22 NEWS DESK : ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರನ್ನು 2023ನೇ ಸಾಲಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ”ಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಪ್ರಶಸ್ತಿಯನ್ನು ಸನ್ಮಾನ್ಯ ಮುಖ್ಯ ಮಂತ್ರಿಗಳು ವಿಧಾನಸೌಧದ ಬ್ಯಾಂಕ್ಟೆಟ್ ಹಾಲ್ ನಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಅನಿತಾ ಭಾಸ್ಕರ್ ಅವರು ಪ್ರವಾಸೋದ್ಯಮ ಕೇಂದ್ರ ಕಚೇರಿಯಲ್ಲಿ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸಿದ ಅವಧಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಾದ “ಸ್ವದೇಶ್ ದರ್ಶನ, ಪ್ರಸಾದ್ ಹಾಗೂ “ಸ್ವದೇಶ್ ದರ್ಶನ 2.0 ಯೋಜನೆಗಳು ಕರ್ನಾಟಕಕ್ಕೆ ದೊರಕುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ. ಕರ್ನಾಟಕ ಕರಾವಳಿ ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗಾಗಿ `ಕೋಸ್ಟರ್ ಮಾಸ್ಟರ್ ಪ್ಲಾನ್’ ಅನುಮೋದನೆ ಹಾಗೂ ಪಡುಬಿದ್ರೆ ಸಮುದ್ರ ತೀರದಲ್ಲಿ (ಉಡುಪಿ ಜಿಲ್ಲೆ) “ಬ್ಲೂ ಪ್ಲಾಗ್ ಬೀಚ್” ಯೋಜನೆ ಅನುಷ್ಠಾನಗೊಳಿಸಿ ಅತ್ಯುತ್ತಮ ಬೀಚ್ ನ್ನು ಅಭಿವೃದ್ಧಿ ಪಡಿಸಿರುತ್ತಾರೆ. ಸೈಂಟ್ ಮೇರಿ ದ್ವೀಪವನ್ನು ಅಭಿವೃದ್ಧಿ, “ಮಲ್ಪೆ ಬೀಚ್ ಸೀ-ವಾಕ್” ಯೋಜನೆಯನ್ನು ಅನುಷ್ಠಾನಗೊಳಿಸುವುದರಲ್ಲಿ ಪ್ರಮುಖ ಪಾತ್ರಧಾರಿಗಳಾಗಿದ್ದಾರೆ. ಉಡುಪಿ ಜಿಲ್ಲೆಯ…

Read More