ನಾಪೋಕ್ಲು ಏ.22 NEWS DESK : ಮೇರಿಮಾತೆಯ ದೇವಾಲಯದಲ್ಲಿ ಯೇಸು ಕ್ರಿಸ್ತನ ಪುನರುತ್ಥಾನವನ್ನು ಸಾರುವ ಈಸ್ಟರ್ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ದೇವಾಲಯದ ಧರ್ಮ ಗುರುಗಳಾದ ಜ್ಞಾನಪ್ರಕಾಶ್ ಆಶೀರ್ವದಿಸಿ, ಮೇಣದ ಬತ್ತಿಯನ್ನು (ಉರಿಸಿ)ಪ್ರಜ್ವಲಿಸಿದರು. ಗುರುಗಳು ಮೇಣದಬತ್ತಿಯನ್ನು ಹಿಡಿದುಕೊಂಡು ಭಕ್ತರ ನಡುವೆ ತೆರಳಿ ಇದು ಕ್ರಿಸ್ತರ ಜ್ಯೋತಿ ಎಂದು ಉದ್ಗರಿಸಿದಾಗ ಎಲ್ಲ ಭಕ್ತಾದಿಗಳು ದೇವರಿಗೆ ಮಹಿಮೆ ಸಲ್ಲಲಿ ಎಂದು ಜೈಕಾರವನ್ನು ಕೂಗುತ್ತಾ ತಮ್ಮಲ್ಲಿರುವ ಮೇಣದ ಬತ್ತಿಯನ್ನು ಪ್ರಜ್ವಲಿಸಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬಲಿ ಪೂಜೆಯನ್ನು ಅರ್ಪಿಸಲಾಯಿತು. ನಂತರ ಪುನರುತ್ಥಾನದ ಯೇಸುವಿನ ಪ್ರತಿಮೆಯನ್ನು ಧರ್ಮ ಗುರುಗಳು ಅನಾವರಣಗೊಳಿಸಿದರು. ಈ ಸಂದರ್ಭ ಪಾಲನಾ ಸಮಿತಿಯ ಸದಸ್ಯರುಗಳು, ಕ್ರೈಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ಲೇಖಕ: admin
ಮಡಿಕೇರಿ ಏ.22 NEWS DESK : ನಗರದಲ್ಲಿರುವ ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ಏ.25 ರಂದು ಜರುಗುವ “ವಾರ್ಷಿಕೋತ್ಸವ” ಪೂಜೆ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮ ಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಏ.25 ರಂದು ಬೆಳಗ್ಗೆ 9 ಗಂಟೆಯಿಂದ ಅಪರಾಹ್ನ 12 ಗಂಟೆವರೆಗೆ ಗಣಪತಿ ಹೋಮ ಮತ್ತು ಕಲಶಾಭಿಷೇಕ ಪೂಜೆಗಳು ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಂತರ ಪ್ರಸಾದ ವಿತರಣೆ ನಡೆಯಲಿದೆ. ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಭಾಜನರಾಗುವಂತೆ ದೇವಾಲಯದ ವ್ಯವಸ್ಥಾಪನ ಸಮಿತಿಯಿಂದ ಕೋರಿದೆ. ಪ್ರಸಾದ ಸೇವೆಯನ್ನು ಮಾಡಲಿಚ್ಚಿಸುವ ಸೇವಾಕರ್ತರು ದೇವಾಲಯದ ವ್ಯವಸ್ಥಾಪನಾ ಸಮಿತಿಯವರ ದೂರವಾಣಿ ಸಂಖ್ಯೆ 9448899567/ 9448798558 ನ್ನು ಸಂಪರ್ಕಿಸಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜು ತಿಳಿಸಿದ್ದಾರೆ.
ಸೋಮವಾರಪೇಟೆ ಏ.22 NEWS DESK : ಕೂಗೇಕೋಡಿ ಗ್ರಾಮದ ಶ್ರೀ ಕನ್ನಂಬಾಡಿ ಅಮ್ಮ ದೇವಸ್ಥಾನದ ವಾರ್ಷಿಕ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಎರಡು ದಿನಗಳ ಕಾಲ ನಡೆಯಿತು. ಗ್ರಾಮದೇವತೆ ಎಂದು ಕರೆಯಲ್ಪಡುವ ಅಮ್ಮನಿಗೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಅಮ್ಮನ ಉತ್ಸವ ಮೂರ್ತಿಗೆ ಗಂಗೆ ಪೂಜೆ ನೆರವೇರಿಸಿ, ಕಳಶ ಹೊತ್ತ ಮಹಿಳೆಯರು ಹಾಗು ವಾದ್ಯವೃಂದದೊಂದಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ತರಲಾಯಿತು. ಕೆಂಡ ಹಾಯುವ ಮೂಲಕ ಹಲವು ತಮ್ಮ ಹರಕೆ ಒಪ್ಪಿಸಿದರು. ನಂತರ ಗ್ರಾಮಸ್ಥರು ಗ್ರಾಮದ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೂಗೇಕೋಡಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಪಿ.ಆದರ್ಶ್, ಕಾರ್ಯದರ್ಶಿ ಕೆ.ಡಿ.ನಿರಂಜನ್, ದೇವಾಲಯದ ಅರ್ಚಕರಾದ ರಾಜು ಕಾರ್ಯಕ್ರಮ ನಿರ್ವಹಿಸಿದರು.
ಮಡಿಕೇರಿ ಏ.22 NEWS DESK : ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಸುತ್ತಮುತ್ತ ತೆಂಗಿನ ಚಿಪ್ಪು, ಟೈರು, ಹೂಕುಂದಗಳಲ್ಲಿ ನೀರು ನಿಲ್ಲದಂತೆ ಗಮನಹರಿಸಬೇಕು. ಪರಿಸರ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ `ಜಿಲ್ಲಾ ಆರೋಗ್ಯ ಅಭಿಯಾನ’ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಯ ಸುತ್ತಮುತ್ತ ಪರಿಸರ ಶುಚಿತ್ವವಾಗಿದ್ದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಸೊಳ್ಳೆಗಳು ಹರಡದಂತೆ ಗಮನಹರಿಸುವುದು ಅತ್ಯಗತ್ಯವಾಗಿದೆ. ನಿಂತ ನೀರಿನಿಂದ ಲಾರ್ವ ಕಂಡುಬಂದಲ್ಲಿ ಅದನ್ನು ನಾಶ ಪಡಿಸುವಂತಾಗಬೇಕು. ಆ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಅಗತ್ಯ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು. ಶಿಶು ಮತ್ತು ತಾಯಂದಿರ ಆರೋಗ್ಯ ಕ್ಷೇಮ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಶಿಶು ಆರೋಗ್ಯ…
ಮಡಿಕೇರಿ ಏ.22 NEWS DESK : ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರನ್ನು 2023ನೇ ಸಾಲಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ”ಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಪ್ರಶಸ್ತಿಯನ್ನು ಸನ್ಮಾನ್ಯ ಮುಖ್ಯ ಮಂತ್ರಿಗಳು ವಿಧಾನಸೌಧದ ಬ್ಯಾಂಕ್ಟೆಟ್ ಹಾಲ್ ನಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಅನಿತಾ ಭಾಸ್ಕರ್ ಅವರು ಪ್ರವಾಸೋದ್ಯಮ ಕೇಂದ್ರ ಕಚೇರಿಯಲ್ಲಿ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸಿದ ಅವಧಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಾದ “ಸ್ವದೇಶ್ ದರ್ಶನ, ಪ್ರಸಾದ್ ಹಾಗೂ “ಸ್ವದೇಶ್ ದರ್ಶನ 2.0 ಯೋಜನೆಗಳು ಕರ್ನಾಟಕಕ್ಕೆ ದೊರಕುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ. ಕರ್ನಾಟಕ ಕರಾವಳಿ ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗಾಗಿ `ಕೋಸ್ಟರ್ ಮಾಸ್ಟರ್ ಪ್ಲಾನ್’ ಅನುಮೋದನೆ ಹಾಗೂ ಪಡುಬಿದ್ರೆ ಸಮುದ್ರ ತೀರದಲ್ಲಿ (ಉಡುಪಿ ಜಿಲ್ಲೆ) “ಬ್ಲೂ ಪ್ಲಾಗ್ ಬೀಚ್” ಯೋಜನೆ ಅನುಷ್ಠಾನಗೊಳಿಸಿ ಅತ್ಯುತ್ತಮ ಬೀಚ್ ನ್ನು ಅಭಿವೃದ್ಧಿ ಪಡಿಸಿರುತ್ತಾರೆ. ಸೈಂಟ್ ಮೇರಿ ದ್ವೀಪವನ್ನು ಅಭಿವೃದ್ಧಿ, “ಮಲ್ಪೆ ಬೀಚ್ ಸೀ-ವಾಕ್” ಯೋಜನೆಯನ್ನು ಅನುಷ್ಠಾನಗೊಳಿಸುವುದರಲ್ಲಿ ಪ್ರಮುಖ ಪಾತ್ರಧಾರಿಗಳಾಗಿದ್ದಾರೆ. ಉಡುಪಿ ಜಿಲ್ಲೆಯ…
*ಮೈದಾನ 2* ತಾತಂಡ ಮತ್ತು ಪಾಂಡಿರ (ಹೆಬ್ಬೆಟ್ಟಗೇರಿ) ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಪಾಂಡಿರ ತಂಡ ಗೆಲುವು ಸಾಧಿಸಿತು. ಪಾಂಡಿರ ಪರ ಕವಿತಾ ಮಂಜು ಹ್ಯಾಟ್ರಿಕ್ ಗೋಲು ದಾಖಲಿಸಿ, ಗಮನ ಸೆಳೆದರು. ತಾತಂಡ ಅನೂರ ಸೋಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಾಂಡಂಡ ಮತ್ತು ಬೊವ್ವೇರಿಯಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕಾಂಡಂಡ ಜಯ ಸಾಧಿಸಿತು. ಕಾಂಡಂಡ ಪರ ಕೀರ್ತನ 1 ಗೋಲು ದಾಖಲಿಸಿದರು. ಬೊವ್ವೇರಿಯಂಡ ರಿಯಾ ಮುತ್ತಮ್ಮ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೆಪ್ಪುಡಿರ ಮತ್ತು ಪಳೆಯಂಡ ನಡುವಿನ ಪಂದ್ಯದಲ್ಲಿ 4-1 ಗೋಲುಗಳ ಅಂತರದಲ್ಲಿ ಚೆಪ್ಪುಡಿರ ಗೆಲುವು ದಾಖಲಿಸಿತು. ಚೆಪ್ಪುಡಿರ ಪರ ಸಿಂಚಲ್ ಎಲ್ಲಾ 4 ಗೋಲು ಬಾರಿಸಿ ಗಮನ ಸೆಳೆದರು. ಪಳೆಯಂಡ ರೇಖಾ 1 ಗೋಲು ದಾಖಲಿಸಿದರು. ಪಳೆಯಂಡ ರೇಖಾ ದೇಚಮ್ಮ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಾಳೇಟಿರ (ಕೆದಮುಳ್ಳೂರು) ಮತ್ತು ಅಮ್ಮಾಟಂಡ ನಡುವಿನ ಪಂದ್ಯದಲ್ಲಿ ವಾಕ್…
ಮಡಿಕೇರಿ NEWS DESK ಏ.21 : ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕ್ರೈಸ್ತರ ಸೇವಾ ಸಂಘ ತೀವ್ರ ಸಂತಾಪ ಸೂಚಿಸಿದೆ. ಶಾಂತಿಧೂತ, ಜಗದ್ಗುರು ಪೋಪ್ ಅವರ ನಿಧನ ಕ್ರೈಸ್ತ ಜನಾಂಗಕ್ಕೆ ಅಪಾರ ದು:ಖವನ್ನುಂಟುಮಾಡಿದೆ. ಕೊಡಗಿನ ಜನತೆಯ ಪರವಾಗಿ ಕ್ರೈಸ್ತರ ಸೇವಾ ಸಂಘ ಶ್ರದ್ಧಾಂಜಲಿ ಸಮರ್ಪಿಸುತ್ತದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯು ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.
ಮಡಿಕೇರಿ ಏ.21 NEWS DESK : ಬೆಳ್ಳಿಹಬ್ಬದ ಸಂಭ್ರಮದೊಂದಿಗೆ ನಡೆಯುತ್ತಿರುವ ಕೊಡವ ಕೌಟುಂಬಿಕ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಇದೇ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನದ ವಿಡಿಯೋ ರೆಫರಲ್ ಅನ್ನು ಪರಿಚಯಿಸಲಾಗುತ್ತಿದ್ದು, ಬೃಹತ್ ಪರದೆಗಳನ್ನು ಅಳವಡಿಸಲಾಗುವುದು ಎಂದು ಮುದ್ದಂಡ ಹಾಕಿ ಉತ್ಸವದ ಪ್ರಮುಖರು ತಿಳಿಸಿದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುದ್ದಂಡ ಹಾಕಿ ಉತ್ಸವದ ಕ್ರೀಡಾ ಪ್ರವರ್ತಕ ಅಜ್ಜೆಟ್ಟಿರ ವಿಕ್ರಮ್ ಉತ್ತಪ್ಪ ಹಾಗೂ ಲೈವ್ ಸ್ಟ್ರೀಮಿಂಗ್ ಮತ್ತು ರೆಫರಲ್ ಸಲಹೆಗಾರ ಐಚೆಟ್ಟಿರ ತನೀಶ್ ಅಯ್ಯಣ್ಣ, ಮುದ್ದಂಡ ಕುಟುಂಬಸ್ಥರು ಹಾಗೂ ಕೊಡವ ಹಾಕಿ ಅಕಾಡೆಮಿಯ ಸಹಯೋಗದಲ್ಲಿ ಇದೇ ಪ್ರಥಮ ಬಾರಿಗೆ ವಿನೂತನ ಪ್ರಯತ್ನ ಮಾಡಲಾಗಿದ್ದು, ಪಂದ್ಯಾವಳಿಯ ಕ್ವಾಟರ್ ಫೆನಾಲೆಯ ದಿನದಿಂದ ವಿಡಿಯೋ ರೆಫರಲ್ ಗಳನ್ನು ಪರಿಚಯಿಸಲಾಗುತ್ತಿದ್ದು, ಅದಕ್ಕಾಗಿ ಬೃಹತ್ ಗಾತ್ರದ 5 ಎಲ್‍ಇಡಿ ಪರದೆಯನ್ನು ಅಳವಡಿಸಲಾಗುವುದು ಎಂದರು. ಕ್ವಾಟರ್ ಫೆನಾಲೆಯಂದು 8 ತಂಡಗಳ ನಡುವೆ 4 ಪಂದ್ಯಗಳು ನಡೆಯಲಿದ್ದು, 1 ತಂಡಕ್ಕೆ 2 ರೆಫರೆಲ್ ಇರಲಿದೆ.…
*ಮೈದಾನ 1* ಮಡಿಕೇರಿ ಏ.21 : ನಾಳಿಯಂಡ ಮತ್ತು ಕೊಂಗೇಟಿರ ತಂಡಗಳ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ನಿಗಧಿತ ಅವಧಿಯಲ್ಲಿ ಶೂನ್ಯ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಟೈ ಬ್ರೇಕರ್ ನಲ್ಲಿ 4-3 ಗೋಲುಗಳ ಅಂತರದಲ್ಲಿ ನಾಳಿಯಂಡ ತಂಡ ಗೆಲುವು ಸಾಧಿಸಿತು. ಕೊಂಗೇಟಿರ ರೋಹನ್ ತಿಮ್ಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೋಟೇರ ಮತ್ತು ಪುದಿಯೊಕ್ಕಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಪುದಿಯೊಕ್ಕಡ ತಂಡ ಜಯ ಸಾಧಿಸಿತು. ಪುದಿಯೊಕ್ಕಡ ಪರ ಪ್ರಧಾನ್ ಸೋಮಣ್ಣ ಹಾಗೂ ಮಿಥನ್ ಪೊನ್ನಪ್ಪ ತಲಾ ಒಂದು ಗೋಲು ದಾಖಲಿಸಿದರು. ಕೋಟೇರ ಪರ ಲೋಕೇಶ್ ಒಂದು ಗೋಲು ಬಾರಿಸಿದರು. ಕೋಟೇರ ಕೌಶಿಕ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೆಪ್ಪುಡಿರ ಮತ್ತು ಅಟ್ರಂಗಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಚೆಪ್ಪುಡಿರ ತಂಡ ಗೆಲುವು ದಾಖಲಿಸಿತು. ಚೆಪ್ಪುಡಿರ ಪರ ಚೇತನ್ ಚಿಣ್ಣಪ್ಪ 2, ನರೇನ್ ಕಾರ್ಯಪ್ಪ, ಗಗನ್ ತಿಮ್ಮಯ್ಯ ಹಾಗೂ ಸಿ.ಕೆ.ಸೋಮಣ್ಣ ತಲಾ ಒಂದು…
ಮಡಿಕೇರಿ ಏ.21 NEWS DESK : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯ ಪೈಪೋಟಿ ಆರಂಭಗೊಂಡಿದೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಮಹಿಳೆಯರ 5ಎ ಸೈಡ್ ಹಾಕಿ ಪಂದ್ಯಾವಳಿಗೆ ಅರ್ಜುನ ಪ್ರಶಸ್ತಿ ವಿಜೇತ, ಮಾಜಿ ಒಲಂಪಿಯನ್ ಎಂ.ಎಂ.ಸೋಮಯ್ಯ ಅವರು ಚಾಲನೆ ನೀಡಿದರು. ಪದ್ಮಶ್ರೀ ಪ್ರಶಸ್ತಿ ವಿಜೇತ ಹಿರಿಯ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಹಾಗೂ ರಾಷ್ಟ್ರೀಯ ಬಾಸ್ಕೆಟ್‍ಬಾಲ್ ಆಟಗಾರ್ತಿ ಮಂಡೇಪಂಡ ಪುಷ್ಪ ಕುಟ್ಟಣ್ಣ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಐಮುಡಿಯಂಡ ರಾಣಿ ಮಾಚಯ್ಯ ಅವರು ಮಾತನಾಡಿ, ಜಿಲ್ಲೆಯಲ್ಲಿ ನಡೆಯುತ್ತಿರುವ ಈ ರೀತಿಯ ಕ್ರೀಡಾಕೂಟಗಳು ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಹಾಕಿ ಒಲಂಪಿಯನ್‍ಗಳನ್ನು ಕೊಡುಗೆಯಾಗಿ ನೀಡಿದ ಹೆಗ್ಗಳಿಕ್ಕೆ ಕೊಡಗಿಗೆ ಇದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳಾ ಕ್ರೀಡಾಪಟಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಲಿ ಎಂದು ಶುಭಹಾರೈಸಿದರು. ಮುದ್ದಂಡ ಕಪ್…






