ಲೇಖಕ: admin

ಮಡಿಕೇರಿ ಮಾ.28 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿ.ಬಾಡಗ ಗ್ರಾಮದ ಕೊಕ್ಕ ಎಂಬಲ್ಲಿ ನೂತನವಾಗಿ ವಿದ್ಯುತ್ ಪರಿವರ್ತಕ ಘಟಕ ಉದ್ಘಾಟಿಸಿದರು. ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ವಿ.ಬಾಡಗದ ಮುಖ್ಯ ರಸ್ತೆಯಿಂದ ಪಡವಟ್ಟು-ಪೆಗ್ಗರೆಮಾಡು ಈಶ್ವರ ಅಂಬಾಲಕ್ಕಾಗಿ, ಕೋಲತಂಡ ಹಾಗೂ ಮುಲ್ಲೆಂಗಡ ಕುಟುಂಬಸ್ಥರ ಭಾಗಕ್ಕೆ ಹೋಗುವ ರಸ್ತೆಯ ಅಭಿವೃದ್ಧಿ ಕಾಮಗಾರಿ, ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯ ಪೆರುಂಬಾಡಿ-ಬಿಟ್ಟಂಗಾಲ ಭಾಗದ ಸುಮಾರು 3-80 ರಿಂದ 5-10ರ ಕಿಲೋಮೀಟರ್ ರಸ್ತೆಯ ಅಭಿವೃದ್ಧಿ ಕಾಮಗಾರಿ, ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನ್ವರುದ್ದ ಮಸೀದಿ ಹಾಗೂ ಚರ್ಚೆಗೆ ಸಂಬಂಧ ಪಟ್ಟ ಕೃಷಿ ಜಮೀನಿನ ಬಳಿ ಹರಿಯುತ್ತಿರುವ ನದಿಗೆ ಸಂರಕ್ಷಣೆ ಹಾಗು ಜಮೀನಿಗೆ ಹಾನಿಯಾಗದಂತೆ ತಡೆಗೋಡೆ ನಿರ್ಮಾಣ ಕಾಮಗಾರಿ, ಹೆಗ್ಗಳ ಹಾಗೂ ಬೇಟೋಳಿ ಗ್ರಾಮಗಳ ಹಲವು ಭಾಗಗಳಲ್ಲಿ, ಮಳೆಗಾಲದಲ್ಲಿ ನದಿಯಲ್ಲಿ ಹರಿಯುವ ರಭಸದ…

Read More

ಮಡಿಕೇರಿ ಮಾ.27 NEWS DESK : ಇದೇ ಏ.5 ರಂದು ಹಸಿರುಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 118 ನೇ ಮತ್ತು ಏ.14 ರಂದು ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ನಗರದ ಗಾಂಧಿ ಭವನದಲ್ಲಿ ಆಚರಿಸಲು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆಗೆ ಎಲ್ಲರೂ ತೊಡಗಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಕೋರಿದರು. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರು ಒಂದು ಸಮಾಜ ಅಥವಾ ಸಮುದಾಯಕ್ಕೆ ಸೀಮಿತವಲ್ಲ. ಅವರು ರಾಷ್ಟ್ರಕ್ಕೆ ನೀಡಿರುವ ಕೊಡುಗೆಯನ್ನು ಸದಾ ಸ್ಮರಿಸುವಂತಾಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತೀ…

Read More

ಮಡಿಕೇರಿ ಮಾ.27 NEWS DESK : ಸರ್ವಧರ್ಮ ಸೌಹಾರ್ದ ಇಫ್ತಾರ್ ಕೂಟಗಳಿಂದ ದೇಶದ ಭಾವೈಕ್ಯತೆಗೆ ಮತ್ತು ಸಮಾಜಕ್ಕೆ ಉತ್ತಮ ಸಂದೇಶ ದೊರೆಯಲಿದೆ ಎಂದು ಮರ್ಕಂಜದ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರ ಯೋಗೇಶ್ವರ ಸಿದ್ಧಪುರುಷಮಠದ ಧರ್ಮದರ್ಶಿ ಹಾಗೂ ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ಮುಖ್ಯ ಕಾರ್ಯದರ್ಶಿ ರಾಜೇಶ್‍ನಾಥ್ ಜಿ ಹೇಳಿದರು. ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ 20ನೇ ವರ್ಷದ ಸರ್ವಧರ್ಮ ಸೌಹಾರ್ದ ಇಫ್ತಾರ್ ಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಎಲ್ಲಾ ಧರ್ಮದ ಗುರುಗಳು ಒಟ್ಟಾಗಿದ್ದರೆ ಸಮಾಜವು ಒಟ್ಟುಗೂಡುತ್ತದೆ. ಎಲ್ಲಾ ಧರ್ಮದ ಧರ್ಮ ಗ್ರಂಥಗಳು ಒಳ್ಳೆದನ್ನು ಬೋಧಿಸುತ್ತದೆ. ಅಮಲು ಪದಾರ್ಥದಿಂದಾಗಿ ಎಷ್ಟೋ ಮನೆಗಳು ಹಾಳಾಗುತ್ತಿದೆ, ಇಸ್ಲಾಂ ಧರ್ಮದಲ್ಲಿ ಅಮಲು ಪದಾರ್ಥ ಸೇವನೆಯನ್ನು ನಿಷೇಧಿಸಲಾಗಿದೆ, ನಾವುಗಳು ವ್ಯಸನಿಗಳನ್ನು ವ್ಯಸನದಿಂದ ಮುಕ್ತಗೊಳಿಸಿ ಅವರ ಮನೆಗಳನ್ನು ಬೆಳಗಿಸಬೇಕೆಂದರು. ತಿಂಗಳಿಗೊಮ್ಮೆ ಎಲ್ಲಾ ಧರ್ಮಗುರುಗಳು ಒಟ್ಟಿಗೆ ಸೇರಿ ಸಮಾಜ ಸುಧಾರಣೆ, ಕೋಮು ಸೌಹಾರ್ದತೆ ಬಗ್ಗೆ ಬೈಠಕ್ ಮಾಡಬೇಕೆಂದು ವಿನಂತಿಸಿದರು. ಟಿ.ಎಂ.ಶಾಹಿದ್ ತೆಕ್ಕಿಲ್…

Read More

ಮಡಿಕೇರಿ ಮಾ.27 NEWS DESK : ತೂಚಮಕೇರಿ ಗ್ರಾಮದ ಆರಾಧ್ಯ ದೈವ ಶ್ರೀ ಮಹಾದೇವರ ಉತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಅರ್ಚಕರಾದ ಶ್ರೀಕಂಠ ಭಟ್ ನೇತೃತ್ವದಲ್ಲಿ ಬ್ರಹ್ಮವಾಹಕರಾದ ಜಯಚಂದ್ರ ಉತ್ಸವ ನೆರವೇರಿಸಿದರು. ಜಿಲ್ಲೆಯ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮ0ಡಳಿ ಸದ್ಯಸರು, ಊರಿನಾ ತಕ್ಕ ಮುಖ್ಯಸ್ಥರು ಹಾಜರಿದ್ದರು.

Read More

ಕುಶಾಲನಗರ ಮಾ.27 NEWS DESK :  ಕಾವೇರಿ ನದಿ ರಕ್ಷಣಾ ಸಮಿತಿಯ ವತಿಯಿಂದ ಬೆಂಗಳೂರಿನಲ್ಲಿ ಏ.5 ರಂದು ನ್ಯಾಯಯುತ ನೀರಿನ ಹಕ್ಕಿಗಾಗಿ ಒಂದು ದಿನದ ಕಾರ್ಯಗಾರ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಕೆ ಟಿ ಚಂದ್ರು ತಿಳಿಸಿದರು. ಅವರು ಕುಶಾಲನಗರದ ಗೌಡ ಯುವಕ ಸಂಘ ಸಭಾಂಗಣದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ವಿತರಿಸಿ ಮಾತನಾಡಿ ಏಪ್ರಿಲ್ 5 ರಂದು ಬೆಂಗಳೂರಿನ ಕೆ ಆರ್ ರಸ್ತೆಯ ಕುವೆಂಪು ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಗಾರವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಡಾ ನಿರ್ಮಲಾನಂದ ಮಹಾ ಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ.  ಸಿದ್ದಗಂಗಾ ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವುದರೊಂದಿಗೆ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ಸಮಿತಿಯ ಉಪಾಧ್ಯಕ್ಷರಾದ ಯಶೋಧ ರಾಜಣ್ಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸಮಿತಿಯ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ಒದಗಿಸಿದರು. ಈ ಸಂದರ್ಭ…

Read More

ಮೂರ್ನಾಡು ಮಾ.27 NEWS DESK : ಕೊಡಗು ಜಿಲ್ಲೆಯ ಐರಿ ಜನಾಂಗದ ನಡುವಿನ 11ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಈ ಬಾರಿ ಮೂರ್ನಾಡು ಹೋಬಳಿ, ಹೊದ್ದೂರು ಗ್ರಾಮದ ಅಮ್ಮಣಂಡ ಕುಟುಂಬಸ್ಥರು ಆತಿಥ್ಯವಹಿಸಲಿದ್ದು, ಏ.25, 26 ಮತ್ತು 27 ರಂದು ಮೂರ್ನಾಡುವಿನ ದಿ. ಬಾಚೆಟ್ಟಿರ ಲಾಲೂ ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅಮ್ಮಣಂಡ ಕಪ್ ಕ್ರಿಕೆಟ್ ಕ್ರೀಡಾಕೂಟದ ಸಂಚಾಲಕ ಅಮ್ಮಣಂಡ ದೀಪಕ್ ಮತ್ತು ಅಮ್ಮಣಂಡ ನಿಖಿಲ್, ಕ್ರಿಕೆಟ್ ಸ್ಪರ್ಧೆಯ ಜೊತೆಗೆ ಮಹಿಳೆಯರಿಗೆ ಹಗ್ಗಜಗ್ಗಾಟ, ಹಿರಿಯರಿಗೆ ಹಾಗೂ ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನೂ ಆಯೋಜಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಕ್ರಿಕೆಟ್ ಪಂದ್ಯಾವಳಿಯಲ್ಲಿ 20ಕ್ಕೂ ಅಧಿಕ ಕುಟುಂಬಗಳು ಭಾಗವಹಿಸುವ ನಿರೀಕ್ಷೆ ಇದೆ. ಐರಿ ಜನಾಂಗದಲ್ಲಿ 80ಕ್ಕು ಹೆಚ್ಚು ಮನೆತನಗಳಿದ್ದು, ಎಲ್ಲಾ ಕುಟುಂಬಗಳು ಕ್ರಿಕೆಟ್ ಹಾಗೂ ಹಗ್ಗ ಜಗ್ಗಾಟದಲ್ಲಿ ಪಾಲ್ಗೊಳ್ಳುವ ಮೂಲಕ ಜನಾಂಗ ಬಾಂಧವರು ಪರಸ್ಪರ ಅರಿಯಲು ನೆರವಾಗುವಂತೆ ಕರೆ ನೀಡಿದರು. ಕ್ರೀಡಾ ಹಬ್ಬದ ಸಂದರ್ಭ ಐರಿ ಜನಾಂಗದಲ್ಲಿ ಆಯ್ದ 10 ಮಂದಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಗುತ್ತದೆ.…

Read More

ಮಡಿಕೇರಿ ಮಾ.27 NEWS DESK : ಇತಿಹಾಸ ಪ್ರಸಿದ್ಧ ಕಲ್ಲುಗುಂಡಿಯ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲವು ಪ್ರತಿವರ್ಷದಂತೆ ಈ ಬಾರಿ ಕೂಡ ಮಾ.28 ಮತ್ತು 29ರಂದು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ. ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಮತ್ತು ಪಂಜುರ್ಲಿ, ಕಲ್ಲುರ್ಟಿ, ಗುಳಿಗ ಹಾಗೂ ರಕ್ತೇಶ್ವರಿ ದೈವಗಳ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯ ಸಮಿತಿ ಕೋರಿದೆ.

Read More

ಮಡಿಕೇರಿ ಮಾ.27 NEWS DESK : ಹೊದ್ದೂರು ಗ್ರಾಮದಲ್ಲಿ ರೈತರ ಪಿತ್ರಾರ್ಜಿತ ಆಸ್ತಿ ಮತ್ತು ಸರಕಾರಿ ಜಾಗದಲ್ಲಿ ಕೆಲವರು ಅಕ್ರಮವಾಗಿ ನಿರ್ಮಿಸಿಕೊಂಡಿರುವ ಶೆಡ್ ಗಳನ್ನು ತೆರವುಗೊಳಿಸಲು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಹೊದ್ದೂರಿನಿಂದ ಮಡಿಕೇರಿಯವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಹೊದ್ದೂರು ಘಟಕ ಎಚ್ಚರಿಕೆ ನೀಡಿದೆ.  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೊದ್ದೂರು ರೈತ ಸಂಘದ ಸದಸ್ಯ ಚೆಟ್ರುಮಾಡ ಎಂ.ಬಾಲಕೃಷ್ಣ, ಹೊದ್ದೂರು ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಬರುತ್ತಿರುವ ರೈತರ ಪಿತ್ರಾರ್ಜಿತ ಆಸ್ತಿ ಮತ್ತು ಸರಕಾರಿ ಜಾಗದಲ್ಲಿ ಹೊದ್ದೂರು ಗ್ರಾ.ಪಂ ಸದಸ್ಯರೊಬ್ಬರು ಅಕ್ರಮ ಶೆಡ್ ನಿರ್ಮಿಸಿ ಕಿರುಕುಳ ನೀಡುತ್ತಿದ್ದಾರೆ. ಅಕ್ರಮ ಶೆಡ್ ಗಳ ನಿರ್ಮಾಣದ ಕುರಿತು ಸಂಬಂಧಪಟ್ಟ ಇಲಾಖೆಗಳಿಗೆ ದೂರು  ಸಲ್ಲಿಸಿದರೂ ಇದುವರೆಗೆ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.  ಕಳೆದ ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ನ್ಯಾಯಯುತವಾಗಿ ಜೀವನ ಸಾಗಿಸುತ್ತಿರುವವರನ್ನು ಒಕ್ಕಲೆಬ್ಬಿಸಲು ನಡೆಸುತ್ತಿರುವ ಪ್ರಯತ್ನಗಳು ಖಂಡನೀಯ ಮತ್ತು ಈ ಪ್ರಕರಣವನ್ನು ಆಡಳಿತ…

Read More