ಲೇಖಕ: admin

ಮಡಿಕೇರಿ ಮಾ.25 NEWS DESK : ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಮಿತಿ ನೂತನ ಸದಸ್ಯರಾದ ಜೆ.ಎಲ್.ಜನಾರ್ಧನ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ವಾಸಿಸುವ ಪ್ರದೇಶದಲ್ಲಿ ಅಗತ್ಯ ಮೂಲಸೌಲಭ್ಯ ಕಲ್ಪಿಸುವಂತಾಗಬೇಕು. ಪಡಿತರ ಚೀಟಿಯನ್ನು ಆದ್ಯತೆ ಮೇಲೆ ವಿತರಿಸುವಂತಾಗಬೇಕು ಎಂದು ಕೋರಿದರು. ಪರಿಶಿಷ್ಟರ ಕಾಲೋನಿಗಳಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್, ವಸತಿ ಸೌಲಭ್ಯ ಹೀಗೆ ಹಲವು ಮೂಲ ಸೌಲಭ್ಯ ಒದಗಿಸಬೇಕು. ಜೊತೆಗೆ ಹಕ್ಕುಪತ್ರವನ್ನು ವಿತರಿಸುವಂತಾಗಬೇಕು ಎಂದು ಮನವಿ ಮಾಡಿದರು. ಮತ್ತೊಬ್ಬ ಸದಸ್ಯರಾದ ಜಾಯ್ಸ್ ಮೆನೇಜಸ್ ಅವರು ಮಾತನಾಡಿ ಮಹಿಳಾ ಎಸ್‍ಸಿಎಸ್‍ಟಿ ಗುಂಪುಗಳನ್ನು ಆರ್ಥಿಕವಾಗಿ ಬಲಪಡಿಸಲು ಮುಂದಾಗಬೇಕು. ಬಾಳೆಗುಂಡಿ, ಬಜೆಗುಂಡಿ, ವಾಲ್ನೂರು ಮತ್ತಿತರ ಕಾಲೋನಿಗಳಲ್ಲಿ ವಾಸಿಸುವ ಪರಿಶಿಷ್ಟ ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿ ನೀಡುವಂತಾಗಬೇಕು ಎಂದು ಕೋರಿದರು. ಈ ಸಂದರ್ಭ ಮಾತನಾಡಿದ…

Read More

ಮಡಿಕೇರಿ NEWS DESK ಮಾ.24 : ಮುಂದಿನ ದಿನಗಳಲ್ಲಿ ಒಂದೇ ವೇದಿಕೆಯಡಿಯಲ್ಲಿ ಭೂ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳ ಅಧಿಕಾರಿಗಳನ್ನು ಒಳಗೊಂಡ 3 ಸೇನೆಗಳಿಗೆ ಸಂಬಂಧಿಸಿದ ನಿವೃತ್ತ ಯೋಧರ ಕುಂದು ಕೊರತೆಗಳನ್ನು ಆಲಿಸಲು ಶಿಬಿರ ನಡೆಸಲಾಗುತ್ತದೆ ಎಂದು ಭಾರತೀಯ ಭೂ ಸೇನಾ ದಕ್ಷಿಣ ವಲಯದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಧೀರಜ್ ಸೇತ್ ಪಿವಿಎಸ್‌ಎಂ, ಎವಿಎಸ್‌ಎಂ ಭರವಸೆ ನೀಡಿದ್ದಾರೆ. ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ನಡೆದ ನಿವೃತ್ತ ಸೈನಿಕರ ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸುವ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಕುರಿತು ಸೇನೆಗಳ ಕಮಾಂಡರ್ ಮಟ್ಟದಲ್ಲಿ ನಡೆಯುವ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಯೋಜನೆ ರೂಪಿಸಲಾಗುತ್ತದೆ, ಅದು ನಮ್ಮ ಗುರಿಯೂ ಆಗಿದೆ ಎಂದರು. ಕೊಡಗು ಕೇವಲ ಭೌಗೋಳಿಕ ಭೂಮಿಯಲ್ಲ. ಇಲ್ಲಿನ ಪೂರ್ವಿಕರ ವೀರ ಶೌರ್ಯ ಪರಂಪರೆಯಿಂದ ಜನ್ಮ ಪಡೆದ ನಾಡು ಎಂದು ಬಣ್ಣಿಸಿದರು. ದೇಶದ ಬರ‍್ಯಾವ ಪ್ರದೇಶಗಳು ನೀಡದಂತಹ ಕೊಡುಗೆಯನ್ನು ಕೊಡಗು ಜಿಲ್ಲೆ ಭಾರತೀಯ ಸೇನೆಗೆ ನೀಡಿದೆ. ಫೀಲ್ಡ್ ಮಾರ್ಷಲ್ ಕಾರ್ಯಪ್ಪ,…

Read More

ಮಡಿಕೇರಿ NEWS DESK ಮಾ.24 : ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾಡಳಿತ ಭವನದ ಸಂಕೀರ್ಣಕ್ಕೆ ಆಧುನಿಕ ತಂತ್ರಜ್ಞಾನದ ನೂತನ ಲಿಫ್ಟ್ ಅಳವಡಿಕೆ ಆಗಲಿದೆ. ಸುಮಾರು 14 ಲಕ್ಷ ರೂ ವೆಚ್ಚದಲ್ಲಿ ಸಂಪೂರ್ಣ ರಸ್ಟ್ ಪ್ರೂಫ್ ಲಿಫ್ಟ್ ಇನ್ನು ಮೂರು ವಾರಗಳ ಒಳಗಾಗಿ ಅಳವಡಿಸಿ ಸಾರ್ವಜನಿಕ ಬಳಕೆಗೆ ಲಭ್ಯವಾಗಲಿದೆ ಎಂದು ನಿರ್ವಹಣೆ ಹೊತ್ತ ಸಂಸ್ಥೆ ‌ಮಾಹಿತಿ ನೀಡಿದೆ. ಜಿಲ್ಲಾಡಳಿತ ಭವನ  ಲೋಕಾರ್ಪಣೆ ಗೊಂಡು ಐದು ವರ್ಷಗಳಲ್ಲಿಯೇ ಪದೇ ಪದೇ ರಿಪೇರಿಯಾಗಲು ಆರಂಭಿಸಿತ್ತು. ಕಟ್ಟಡ ನಿರ್ಮಾಣ ಕಾಲದಲ್ಲಿ ಕಾಮಗಾರಿ ವಸ್ತುಗಳನ್ನು ಸಾಗಿಸಲು ಲಿಫ್ಟ್ ಬಳಕೆಯಾದ್ದರಿಂದ ಅದರ ಸಾಮರ್ಥ್ಯ ಕೂಡ ಕುಗ್ಗಿತ್ತು. ಕಳೆದ ಡಿಸೆಂಬರ್ ನಲ್ಲಿ ಸಂಪೂರ್ಣ ಬಂದ್ ಆಗಿತ್ತು. ಕೊಡಗು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರಿಂದ ಸಂಪೂರ್ಣ ‌ಮಾಹಿತಿ ಪಡೆದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಭೋಸರಾಜು ಅವರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಡಾ ಮಂತರ್ ಗೌಡ ಅವರು ಲಿಫ್ಟ್ ನ್ನು ರಿಪೇರಿ ಮಾಡುವ ಬದಲು ಹೊಸ ಲಿಫ್ಟ್ ಖರೀದಿಗೆ ಸೂಚನೆ ನೀಡಿದ ಮೇರೆಗೆ…

Read More

ಮಡಿಕೇರಿ NEWS DESK ಮಾ.24 : ಕೊಡವ ನರಮೇಧದ ದೇವಟ್ ಪರಂಬುವಿನ ಸ್ಮಾರಕ ಸಮಾಧಿಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಹಿರಿಯರಿಗೆ ಪುಷ್ಪ ನಮನದ ಮೂಲಕ ಗೌರವ ಅರ್ಪಿಸಿತು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳೊಂದಿಗೆ ಕೊಡವರ ಪರವಾದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ 35 ವರ್ಷಗಳಿಂದ ಸಿಎನ್‌ಸಿ ಸಂಘಟನೆ ಶಾಂತಿಯುತ ಹೋರಾಟ ನಡೆಸುತ್ತಿದೆ. ಈ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬುವಂತೆ ಹಿರಿಯರಲ್ಲಿ ಆಶೀರ್ವಾದ ಕೋರಿರುವುದಾಗಿ ತಿಳಿಸಿದರು. ಆದಿಮಸಂಜಾತ ಕೊಡವ ಬುಡಕಟ್ಟು ಜನರಿಗೆ ಎಸ್‌ಟಿ ಟ್ಯಾಗ್ ನೀಡಬೇಕು, ದೇವಟ್ ಪರಂಬುವಿನಲ್ಲಿ ಅಂತರಾಷ್ಟ್ರೀಯ ಕೊಡವ ಜನಾಂಗೀಯ ಹತ್ಯೆಯ ಸ್ಮಾರಕವನ್ನು ನಿರ್ಮಿಸಬೇಕು. ಕೊಡವ ಭೂಮಿ, ಭಾಷೆ, ಸಂಸ್ಕೃತಿ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ವಿಶೇಷ ಸಾಂವಿಧಾನಿಕ ಖಾತರಿಗಳನ್ನು ನೀಡಬೇಕು. ವಿಶ್ವರಾಷ್ಟç ಸಂಸ್ಥೆಯ ಆದಿಮಸಂಜಾತ ಹಕ್ಕುಗಳ ಚೌಕಟ್ಟಿನ ಅಡಿಯಲ್ಲಿ ಕೊಡವರಿಗೆ ಅಂತರರಾಷ್ಟ್ರೀಯ ಮನ್ನಣೆಯನ್ನು ಕಲ್ಪಿಸಬೇಕು. ದೇವಟ್ ಪರಂಬು ಮತ್ತು ನಾಲ್ನಾಡ್ ಅರಮನೆ-ಮಡಿಕೇರಿ…

Read More

ಮಡಿಕೇರಿ ಮಾ.24 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ಷಯ ರೋಗ ವಿಭಾಗ ಮಡಿಕೇರಿ ಕೊಡಗು ಜಿಲ್ಲೆ ವತಿಯಿಂದ ರಾಷ್ಟ್ರೀಯ ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮದಡಿ ಕ್ಷಯ ಮುಕ್ತ ಭಾರತ 2025 ರ ಅಭಿಯಾನ ಸಂಬಂಧ ವಿಶ್ವ ಕ್ಷಯ ರೋಗ ದಿನಾಚರಣೆಯು ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಹೌದು ನಾವು ಕ್ಷಯ ರೋಗವನ್ನು ಕೊನೆಗೊಳಿಸಬಹುದು” ಬದ್ಧರಾಗಿರಿ, ಹೂಡಿಕೆ, ಮಾಡಿ, ತಲುಪಿಸಿ”ಎಂಬ ಘೋಷ ವಾಕ್ಯದ ಮಾಹಿತಿ ನೀಡಲಾಯಿತು. ಕೊಡಗು ಜಿಲ್ಲೆಗೆ ದಾನವಾಗಿ “ಸಿಬಿನೆಟ್ ಮಿಷಿನ್ ಮಂಗಳೂರು ರಿಫೈನರಿ ಅಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್” ಮಂಗಳೂರು ನೀಡಿರುವ ಮಾಹಿತಿಯನ್ನು ಡಿಟಿಒ ಡಾ. ಬಿ.ಕೆ.ಸನತ್ ಕುಮಾರ್ ತಿಳಿಸಿದರು. ಕೊಡಗು ವೈದ್ಯಕೀಯ ವಿದ್ಯಾಸಂಸ್ಥೆಯ ಡಿನ್ ಹಾಗೂ ನಿರ್ದೇಶಕ ಡಾ.ಎ.ಜೆ.ಲೋಕೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಡಾ.ಆನಂದ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ, ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾದ…

Read More

ಮಡಿಕೇರಿ ಮಾ.24 NEWS DESK : ಪೊನ್ನಂಪೇಟೆ ತಾಲ್ಲೂಕಿನ ಹಳ್ಳಿಗಟ್ಟು ಭಾಗದಲ್ಲಿ ಕಸ ವಿಲೇವಾರಿ ಘಟಕಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಸಂಪೂರ್ಣ ಅಗ್ನಿಗಾಹುತಿಗೊಂಡಿದೆ. ಸ್ಥಳಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಈ ಸಂದರ್ಭ ಅಲ್ಲಿನ ಗ್ರಾಮಸ್ಥರು ಬೆಂಕಿ ಅವಘಡದ ಬಗ್ಗೆ ತಮ್ಮ ಸಂಶಯವನ್ನು ವ್ಯಕ್ತಪಡಿಸಿದಾಗ ಶಾಸಕರು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ತಕ್ಷಣವೆ ಬೆಂಕಿ ಅವಘಡಕ್ಕೆ ಕಾರಣರಾದವರನ್ನು ತನಿಖೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ  ಧರ್ಮದ ಉತ್ತಪ್ಪ , ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ನವೀನ್, ಅರಣ್ಯ ನಿಗಮದ ಮಾಜಿ ಸದಸ್ಯ ಎ.ಎಸ್.ನರೇನ್ ಕಾರ್ಯಪ್ಪ, ಕಾಂಗ್ರೆಸ್ ಮುಖಂಡರು, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಮಾ.24 NEWS DESK : ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿಶೇಷ ಕಾಳಜಿ ವಹಿಸಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕ್ಷೇತ್ರದ ಹಲವು ಶಾಲೆಗಳನ್ನು ಕೆಪಿಎಸ್ ಮಾದರಿಗೆ ಮೇಲ್ದರ್ಜೆಗೊಳಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಅದರ ಭಾಗವಾಗಿ ಇಂದು ಪೊನ್ನಂಪೇಟೆಯ ಸರಕಾರಿ ಶಾಲೆಯು ಕೆಪಿಎಸ್ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಬೇಕಾದ ಅಗತ್ಯ ಮೂಲಭೂತ ಸೌಲತ್ತುಗಳ ಅಭಿವೃದ್ಧಿಗೆ ಚಾಲನೆ ನೀಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ  ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ  ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹರೀಶ್, ಉಪಾಧ್ಯಕ್ಷ ಅಲಿರಾ ರಶೀದ್, ಪಂಚಾಯಿತಿ ಸದಸ್ಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಮಾ.24 : ಭಾರತೀಯ ಭೂ ಸೇನಾ ದಕ್ಷಿಣ ವಲಯದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಧೀರಜ್ ಸೇತ್ ಪಿವಿಎಸ್‌ಎಂ, ಎವಿಎಸ್‌ಎಂ ಅವರು ಮಡಿಕೇರಿಯಲ್ಲಿರುವ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿದರು. ಸ್ಮಾರಕಕ್ಕೆ ಗೌರವ ಅರ್ಪಿಸಿದ ಅವರು ಸ್ಮಾರಕ ಭವನದಲ್ಲಿರುವ ತಿಮ್ಮಯ್ಯ ಅವರ ನೆನಪಿನ ಕುರುಹುಗಳನ್ನು ವೀಕ್ಷಿಸಿದರು. ಮೇಜರ್ ಬಿ.ಎ.ನಂಜಪ್ಪ ಈ ಸಂದರ್ಭ ಹಾಜರಿದ್ದರು.

Read More

ಮಡಿಕೇರಿ ಮಾ.24 NEWS DESK : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿರುವ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ಮಾ.25 ಮತ್ತು 26 ರಂದು “ಜೀವವೈವಿದ್ಯತೆಯ ಸಂರಕ್ಷಣೆ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ಹವಾಮಾನ ಬದಲಾವಣೆಯ ತಗ್ಗಿಸುವಿಕೆ” ಕುರಿತಾದ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಅರಣ್ಯ ಮಹಾವಿದ್ಯಾಲಯದ ಡೀನ್ ಹಾಗೂ ಸಮ್ಮೇಳನ ಆಯೋಜ ಮಂಡಳಿಯ ಅಧ್ಯಕ್ಷ ಡಾ.ಜಿ.ಎಂ.ದೇವಗಿರಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಸಮ್ಮೇಳನದಲ್ಲಿ ದೇಶದ ವಿವಿಧ ವಿಶ್ವವಿದ್ಯಾಲಯಗಳು, ವೈಜ್ಞಾನಿಕ ಸಂಸ್ಥೆಗಳು ಮತ್ತು ಜೀವವೈವಿದ್ಯತೆಯ ಕುರಿತು ಸಂಶೋಧನೆ, ಅಕ್ಷಣದಲ್ಲಿ ತೊಡಗಿಕೊಂಡಿರುವ ವಿಜ್ಞಾನಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸಮ್ಮೇಳನದಲ್ಲಿ ಜೀವವೈವಿದ್ಯತೆ : ಪ್ರಸ್ತುತ ಸ್ಥಿತಿ, ಅಪಾಯಗಳು ಹಾಗೂ ಸಂರಕ್ಷಣೆ, ಜೈವಿಕ ಪರಿಶೋಧನೆ ಮತು ಜೈವಿಕ ಸಂಪನ್ಮೂಲಗಳ ಸುಸ್ತಿರ ಬಳಕೆ, ಹವಾಮಾನ ಬದಲಾವಣೆ : ಪ್ರಸ್ತುತ ಸ್ಥಿತಿ ಮತ್ತು ಭವಿಷ್ಯದ ಸವಾಲುಗಳು, ಹವಾಮಾನ ಬದಲಾವಣೆ ಎದುರಿಸಲು ಪರ್ಯಾಯ ಶಕ್ತಿ ಮೂಲಗಳು ಎಂಬ ವಿಷಯಗಳ ಬಗ್ಗೆ ಪ್ರಬಂಧ ಮಂಡನೆ, ವಿಚಾರ…

Read More

ಮಡಿಕೇರಿ ಮಾ.24 NEWS DESK : ಗೋಣಿಕೊಪ್ಪ ನಗರದಲ್ಲಿ ಹಾದುಹೋಗುವ ಬೈಪಾಸ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಚಾಲನೆ ನೀಡಿದರು. ಅಧಿಕ ವಾಹನ ದಟ್ಟಣೆಯಿಂದ ಕೂಡಿರುವ ಈ ರಸ್ತೆಯು, ಹಲವು ಸಮಯಗಳಿಂದ ಹದಗೆಟ್ಟಿದ್ದು, ಇದನ್ನು ಸರಿಪಡಿಸುವುದಾಗಿ ಶಾಸಕರು ಈ ಹಿಂದೆ ಭರವಸೆ ನೀಡಿದ್ದರು. ಅದರಂತೆ  ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಇಂದು ಶಾಸಕರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.   ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ,  ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಶಾಸಕರ ಸಹೋದರ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಗೋಣಿಕೊಪ್ಪ ಪಂಚಾಯಿತಿ ಉಪಾಧ್ಯಕ್ಷರಾದ ಮಂಜುಳ, ಕಾಂಗ್ರೆಸ್ ಮುಖಂಡರು ಹಾಗೂ ಮತ್ತಿತರ ಪ್ರಮುಖರು ಹಾಜರಿದ್ದರು.

Read More