ಲೇಖಕ: admin

ಕುಶಾಲನಗರ ಮಾ.24 NEWS DESK : ಕೊಡಗು ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ ಅಭಿಯಾನ ಯೋಜನೆಯ ಜಲ ಜೀವನ್‌ ಮಿಷನ್ , ಕಾಲೇಜು ಶಿಕ್ಷಣ ಇಲಾಖೆ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಕುಶಾಲನಗರ ಪಟ್ಟಣದ ಅನುಗ್ರಹ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋಟರಾಕ್ಟ್‌ ಕ್ಲಬ್, ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) ರಾಷ್ಟ್ರೀಯ ಹಸಿರು ಪಡೆ ( ಎನ್.ಜಿ.ಸಿ.), ಇಕೋ ಕ್ಲಬ್/ಭಾರತ್ ಸ್ಕೌಟ್ಸ್ ಮತ್ತು ಗೈಡ್‌ ನ ಸ್ಥಳೀಯ ಸಂಸ್ಥೆಯ ಸಹಯೋಗದಲ್ಲಿ  ವಿಶ್ವ ಜಲ ದಿನ: 2025 ವನ್ನು ಏರ್ಪಡಿಸಲಾಗಿತ್ತು. ಅನುಗ್ರಹ ಕಾಲೇಜಿನಲ್ಲಿ ನಡೆದ ವಿಶ್ವ ಜಲ ದಿನ ಹಾಗೂ ಜಲಜಾಗೃತಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಎಚ್.ಬಿ.ಲಿಂಗಮೂರ್ತಿ, ಪ್ರತಿಯೊಬ್ಬರೂ ನೀರನ್ನು ಮಿತವಾಗಿ ಬಳಕೆ ಮಾಡುವ ಮೂಲಕ ಜಲ ಸಂರಕ್ಷಣೆ ಮಾಡುವ ಅಗತ್ಯವಿದೆ ಎಂದರು.ಪ್ರಕೃತಿಯ ಅತ್ಯಮೂಲ್ಯ ಸಂಪತ್ತಾದ ನೀರನ್ನು ಅಪವ್ಯಯ ಮಾಡದೇ ಸಂರಕ್ಷಿಸುವ ಮೂಲಕ…

Read More

ಸೋಮವಾರಪೇಟೆ NEWS DESK ಮಾ.23 : ಸೋಮವಾರಪೇಟೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಲಾರಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಕಾಜೂರಿನಲ್ಲಿ ನಡೆದಿದೆ. ರಾಜ್ಯ ಹೆದ್ದಾರಿಯ ಕಾಜೂರು ಜಂಕ್ಷನ್‌ನ ಅರಣ್ಯ ಸಿಬ್ಬಂದಿಗಳ ವಸತಿ ಗೃಹದ ಮುಂಭಾಗದಲ್ಲಿ ಕಾಡಾನೆಗಳ ಹಿಂಡು ರಸ್ತೆ ದಾಟ್ಟುವ ಸಂದರ್ಭ ರಸ್ತೆಯಲ್ಲಿದ್ದ ಲಾರಿಯ ಸಮೀಪ ಮರಿಯಾನೆ ಓಡಿದ್ದು ಜೊತೆಯಲ್ಲೇ ಇದ್ದ ತಾಯಿ ಆನೆ ಏಕಾಏಕಿ ವಾಹನದ ಮೇಲೆ ದಾಳಿ ನಡೆಸಿದೆ. ಲಾರಿಯ ಮುಂಭಾಗದ ಗಾಜು ಸಂಪೂರ್ಣವಾಗಿ ಹಾನಿಯಾಗಿದ್ದು, ಲಾರಿ ಚಾಲಕ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಯಡವನಾಡು ಮೀಸಲು ಅರಣ್ಯದಲ್ಲಿ ನೀರು ಹಾಗು ಆಹಾರದ ಕೊರತೆಯಿಂದಾಗಿ ಹತ್ತಕ್ಕೂ ಹೆಚ್ಚು ಕಾಡಾನೆಗಳು ಐಗೂರು ಗ್ರಾಮದ ಚೋರನ ಹೊಳೆಯಲ್ಲಿ ನೀರು ಕುಡಿಯಲು ಹಾಗೂ ಸಮೀಪದ ಕಾಫಿ ತೋಟದಲ್ಲಿರುವ ಹಲಸಿನ ಹಣ್ಣಿಗಾಗಿ ಬರುತ್ತಿದೆ. ಪ್ರತಿನಿತ್ಯ ಈ ಮಾರ್ಗದಲ್ಲಿ ಕಾಡಾನೆಗಳು ಸಂಚರಿಸುತ್ತವೆ. ವಾಹನ ಸವಾರರು ಎಚ್ಚರವಹಿಸಬೇಕು. ಕಾಡಾನೆಗಳು ರಸ್ತೆ ದಾಟುವುದು ಕಂಡರೆ ದೂರದಲ್ಲೇ ವಾಹನ ನಿಲ್ಲಿಸಿಕೊಳ್ಳಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

Read More

ಸೋಮವಾರಪೇಟೆ NEWS DESK ಮಾ.23 : ಜೇಸಿಐ ಪುಷ್ಪಗಿರಿ ಮಹಿಳಾ ಜೇಸಿ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಐವರು ಸಾಧಕರಿಗೆ ಮಹಿಳಾ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚರತ್ನ ಪುರಸ್ಕಾರ ನೀಡಿ ಗೌರವಿಸಲಾಯಿತು. ಜೇಸಿ ವಲಯ ನಿರ್ದೇಶಕಿ ಮಾಯಾ ಗಿರೀಶ್ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಸೈನಿಕರಾದ ಚಿಕ್ಕತೋಳೂರು ಗ್ರಾಮದ ಶಕುಂತಲ ಅವರಿಗೆ ಜೇಸಿ ರಕ್ಷರತ್ನ, ಗೌಡಳ್ಳಿ ಗ್ರಾಮದ ಜಿ.ಕೆ.ಲತಾ ಅವರಿಗೆ ಜೇಸಿ ಕೃಷಿರತ್ನ, ಸರ್ಕಾರಿ ಆಸ್ಪತ್ರೆಯ ನರ್ಸಿಂಗ್ ಅಧಿಕಾರಿ ವಾಸಂತಿ ಅವರಿಗೆ ಆರೋಗ್ಯ ಸೇವಾ ರತ್ನ, ಬ್ಯಾಡಗೊಟ್ಟ ಸರ್ಕಾರಿ ಶಾಲೆಯ ಶಿಕ್ಷಕಿ ಎಂ.ಐ.ರಿಜ್ವಾನಾ ಭಾನು ಅವರಿಗೆ ವಿದ್ಯಾರತ್ನ, ರಾಷ್ಟ್ರಮಟ್ಟದ ಸೋಮವಾರಪೇಟೆಯ ಹಾಕಿ ಆಟಗಾರ್ತಿ ತಾನಿಯಾ ಅವರಿಗೆ ಜೇಸಿ ಖೇಲ್ ರತ್ನ ಪುರಸ್ಕಾರ ನೀಡಿ ಗೌರವಿಸಲಾಯಿತು. ಮಹಿಳಾ ಘಟಕದ ಅಧ್ಯಕ್ಷೆ ಜ್ಯೊತಿ ರಾಜೇಶ್,  ಶನಿವಾರಸಂತೆಯ ಸುಪ್ರಜ ಗುರುಕುಲ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಸುಜಲಾ ದೇವಿ, ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ್ ಹಾಗು ಜೇಸಿ ಸಂಸ್ಥೆಯ ಅಧ್ಯಕ್ಷೆ ಜಗದಾಂಬ ಗುರುಪ್ರಸಾದ್,…

Read More

ಮಡಿಕೇರಿ NEWS DESK ಮಾ.23 : ಇಸ್ರೇಲ್ ದೇಶವು ಕದನ ವಿರಾಮವನ್ನು ಉಲ್ಲಂಘಿಸಿ ಫಾಲೆಸ್ತೀನಿನ ಯುದ್ಧ ಪೀಡಿತ ಗಾಝಾ ಪಟ್ಟಿಯ ಮೇಲೆ ನಿರಂತರ ಆಕ್ರಮಣ ನಡೆಸಿ ಪುಟ್ಟ ಮಕ್ಕಳು ಸೇರಿದಂತೆ 600 ಜನರ ಮಾರಣಹೋಮ ನಡೆಸಿದೆ ಎಂದು ಆರೋಪಿಸಿ ಮತ್ತು ಘಟನೆಯನ್ನು ತೀವ್ರವಾಗಿ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಮಡಿಕೇರಿ ನಗರ ಘಟಕ ಮಾರುಕಟ್ಟೆ ಬಳಿ ಪ್ರತಿಭಟನೆ ನಡೆಸಿತು. ಭಾರತ ಸರ್ಕಾರವು ತಕ್ಷಣ ಮಧ್ಯ ಪ್ರವೇಶ ಮಾಡಿ ಶಾಂತಿ ಸ್ಥಾಪನೆಗಾಗಿ ಪ್ರಯತ್ನಿಸಬೇಕು, ಇಸ್ರೇಲ್ ದೇಶದೊಂದಿಗಿನ ಎಲ್ಲಾ ವಿಧದ ರಾಜತಾಂತ್ರಿಕ ಸಂಭಂದಗಳನ್ನು ಮೊಟಕುಗೊಳಿಸಬೇಕು, ಇಸ್ರೇಲ್ ನ ಉತ್ಪನ್ನಗಳನ್ನು ಬಹಿಷ್ಕರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್, ನಗರ ಸಮಿತಿ ಉಪಾಧ್ಯಕ್ಷ ಮೈಕಲ್ ವೇಗಸ್, ಪಕ್ಷದ ನಗರಸಭಾ ಸದಸ್ಯರುಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ NEWS DESK ಮಾ.23 : ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕ ಉದ್ಘಾಟನೆಗೊಂಡಿತು. ನಗರದ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಭವನದ ಸ್ಥಾಪಕ ಸಂಚಾಲಕ ಡಾ.ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಅವರು ಕನ್ನಡ ಭವನದ ಜಿಲ್ಲಾಧ್ಯಕ್ಷರು ಹಾಗೂ ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರೂ ಆಗಿರುವ ಬೊಳ್ಳಜಿರ ಬಿ.ಅಯ್ಯಪ್ಪ, ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷೆ ಎಂ.ಎ.ರುಬೀನಾ, ಕನ್ನಡ ಭವನದ ಉಪಾಧ್ಯಕ್ಷೆ ತೆನ್ನಿರ ಟೀನಾ ಚಂಗಪ್ಪ, ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಅವರಿಗೆ ಕನ್ನಡ ಬಾವುಟ ಹಸ್ತಾಂತರಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಕನ್ನಡ ಭವನದ ಸ್ಥಾಪಕ ಸಂಚಾಲಕ ಡಾ.ವಾಮನ್ ರಾವ್ ಬೇಕಲ್, ಚುಟುಕು ಪರಿಷತ್ತಿನ ಬೆಳವಣಿಗೆ ಹೇಗೆ ಎಂಬುದು ಪ್ರಶ್ನಾರ್ಥಕವಾಗಿತ್ತು. ಈ ಸಂದರ್ಭದಲ್ಲಿ ಕನ್ನಡವನ್ನು ಉಳಿಸಿ, ಬೆಳೆಸಬೇಕು ಎಂಬ ನಿಟ್ಟಿನಲ್ಲಿ…

Read More

ಮಡಿಕೇರಿ NEWS DESK ಮಾ.23 : ಸಮಾಜದಲ್ಲಿ ಒಡೆದ ಮನಸ್ಸುಗಳನ್ನು ಬೆಸೆಯುವ ಶಕ್ತಿ ಪತ್ರಕರ್ತರ ಹರಿತವಾದ ಲೇಖನಿಗಿದೆ. ಪತ್ರಕರ್ತರು ಸತ್ಯನಿಷ್ಠ ವರದಿಗಳನ್ನು ಪ್ರಕಟಿಸುವಾಗ ಯಾವುದೇ ಹಿಂಜರಿಕೆ ಇರಬಾರದು ಎಂದು ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಕರೆ ನೀಡಿದ್ದಾರೆ. ಕೊಡಗು ಪತ್ರಕರ್ತರ ಸಂಘ(ರಿ)ದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಮತ್ತು ಪತ್ರಕರ್ತರ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು. ನ್ಯಾಯಾಂಗದ ತೀರ್ಪಿನ ಬಗ್ಗೆ ವಿಶ್ಲೇಷಣಾತ್ಮಕವಾಗಿ ಪ್ರಶ್ನಿಸುವ ಹಕ್ಕು ಪತ್ರಕರ್ತರಿಗೆ ಸದಾ ಇರುತ್ತದೆ. ಹೀಗಾಗಿ ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಎಂದಿಗೂ ಧಕ್ಕೆಯಾಗುವುದಿಲ್ಲ. ಹೀಗಿದ್ದರೂ ಇಂದಿನ ದಿನಗಳಲ್ಲಿ ತನಿಖಾ ವರದಿಗಳು ಕಡಿಮೆಯಾಗುತ್ತಿರುವುದು ವಿಷಾಧನೀಯ. ಈ ನಿಟ್ಟಿನಲ್ಲಿ ಕೊಡಗಿನ ಪತ್ರಕರ್ತರು ಗಮನಹರಿಸುವಂತೆ ಸಲಹೆ ನೀಡಿದರು. ಇಂದು ಪತ್ರಿಕೆಗಳನ್ನು ಓದುವವರ ಸಂಖ್ಯೆ ಕಡಿಮೆಯಾಗಿದೆ. ಪತ್ರಕರ್ತರು ಚಿಂತನಾಶೀಲ ಬರವಣಿಗೆಯ ಕಡೆ ಹೆಚ್ಚಿನ ಆದ್ಯತೆ ನೀಡಬೇಕು. ಹಿರಿಯರ ಗರಡಿಯಲ್ಲಿ ಮುನ್ನುಗ್ಗುವ ಪ್ರಯತ್ನ ಮಾಡಬೇಕು. ನಿಖರತೆ ಇದ್ದರೆ ಯಾವ ವಿಚಾರದಲ್ಲೂ ಎದರುವಂತಿಲ್ಲ. ಪತ್ರಕರ್ತರು ಜವಾಬ್ದಾರಿ ಅರಿತು…

Read More

ಮಡಿಕೇರಿ NEWS DESK ಮಾ.23 : ಸಮಾಜದ ಏಕತೆ ಮತ್ತು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕ್ರೀಡೆ ಸಹಕಾರಿಯಾಗಿದ್ದು, ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಹಾಗೂ ಫಿಟ್ ಇಂಡಿಯಾ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮೈಸೂರು, ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಕರೆ ನೀಡಿದ್ದಾರೆ. ಗೋಣಿಕೊಪ್ಪ ಕಾವೇರಿ ಕಾಲೇಜು ಮೈದಾನದಲ್ಲಿ ನಡೆದ ನೆಸ್‌ಕಫೆ ಕೊಡಗು ಕಪ್ ಹಾಕಿ ಫೈನಲ್ಸ್ ನ್ನು ಉದ್ಘಾಟಿಸಿ ಮಾತನಾಡಿದ ಅವರು ಹಾಕಿ, ಕ್ರಿಕೆಟ್, ಫುಟ್‌ಬಾಲ್ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಕೊಡಗು ಇತರ ಜಿಲ್ಲೆಗಳಿಗೆ ಮಾದರಿಯಾಗಿದೆ ಎಂದರು. ಜಾತಿ, ಧರ್ಮದ ವ್ಯತ್ಯಾಸವಿಲ್ಲದೆ ಒಗ್ಗಟ್ಟಾಗಿ ಪಾಲ್ಗೊಳ್ಳಬಹುದಾದ ಕ್ರೀಡೆ ಸಮಾಜದ ಒಳಿತು ಮತ್ತು ಏಕತೆಯನ್ನು ಕಾಪಾಡುವ ಅಸ್ತçವಾಗಿದೆ. ಅಲ್ಲದೆ ಆರೋಗ್ಯಕರ ಸಮಾಜದ ನಿರ್ಮಾಣವೂ ಇದರಿಂದ ಸಾಧ್ಯವಾಗಿದೆ. ಭಾರತೀಯ ಹಾಕಿ ತಂಡಕ್ಕೆ ಕೊಡಗು ಜಿಲ್ಲೆ ಅನೇಕ ಕ್ರೀಡಾ ಪ್ರತಿಭೆಗಳನ್ನು ಕೊಡುಗೆಯಾಗಿ ನೀಡಿದೆ. ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸ್ವಯಂಪ್ರೇರಿತರಾಗಿ ಆಯೋಜಕರು ಕ್ರೀಡಾಕೂಟಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಹಾಕಿ ಸೇರಿದಂತೆ…

Read More

ಮಡಿಕೇರಿ NEWS DESK ಮಾ.23 : ಕೊಡಗು ಪತ್ರಕರ್ತರ ಸಂಘ(ರಿ)ದ ನೂತನ ಆಡಳಿತ ಮಂಡಳಿಯ ಪದಗ್ರಹಣ ಮತ್ತು ಪತ್ರಕರ್ತರ ಸಾಂಸ್ಕೃತಿಕ ಸಂಭ್ರಮ ಸಮಾರಂಭ ಮಡಿಕೇರಿಯಲ್ಲಿ ಸಂಭ್ರಮದಿಂದ ನಡೆಯಿತು. ಮಡಿಕೇರಿ ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಉದ್ಘಾಟಿಸಿದರು. ಸಂಘದ ಸ್ಟಿಕರ್ ನ್ನು ಕೂರ್ಗ್ ಹೊಟೇಲ್ಸ್ ಮತ್ತೆ ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಅನಾವರಣಗೊಳಿಸಿದರು. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಅವರು ಪ್ರಧಾನ ಭಾಷಣ ಮಾಡಿದರು. ಸಂಘದ ನಿಕಟಪೂರ್ವ ಅಧ್ಯಕ್ಷ ಎಸ್.ಎ.ಮುರಳೀಧರ್ ಅವರು ನೂತನ ಅಧ್ಯಕ್ಷ ಅನಿಲ್ ಹೆಚ್.ಟಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಸಂಘದ ಗೌರವ ಸಲಹೆಗಾರರಾದ ಟಿ.ಪಿ.ರಮೇಶ್, ಬಿ.ಜಿ.ಅನಂತಶಯನ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ.ರವಿಕುಮಾರ್, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಉಜ್ವಲ್ ರಂಜಿತ್, ಸಂಘದ ನೂತನ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಉಪಸ್ಥಿತರಿದ್ದರು. ವಿಶ್ವದಾಖಲೆ…

Read More

ಮಡಿಕೇರಿ NEWS DESK ಮಾ.23 : ಕಾಸರಗೋಡು ಕನ್ನಡ ಭವನದಿಂದ ಕೊಡಮಾಡುವ 2025 ನೇ ಸಾಲಿನ ಪ್ರತಿಷ್ಠಿತ ಅಂತರಾಜ್ಯ ಪ್ರಶಸ್ತಿಯಾದ ಕನ್ನಡ ಪಯಸ್ವಿನಿ ಪ್ರಶಸ್ತಿಗೆ ಕೊಡಗಿನ ಯುವ ಪ್ರತಿಭೆ, ಪತ್ರಕರ್ತ, ಸಮಾಜಸೇವಕ ಚಂದನ್ ನಂದರಬೆಟ್ಟು ಆಯ್ಕೆಯಾಗಿದ್ದಾರೆ. ಸಮಾಜಸೇವೆ ಹಾಗು ಸಾಹಿತ್ಯ ಕ್ಷೇತ್ರದಲ್ಲಿನ ಕಾರ್ಯವೈಖರಿಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಗಾಳಿಬೀಡು ಗ್ರಾಮದ. ನಿವೃತ್ತ ಸಬ್ ಇನ್ಸ್ಪೆಕ್ಟರ್ ಕೃಷ್ಣ ಎನ್ ಎಂ ಹಾಗು ಜಯಲಕ್ಷ್ಮಿ ಎನ್ ಕೆ ಇವರ ಪುತ್ರರಾಗಿರುವ ಚಂದನ್ ನಂದರಬೆಟ್ಟು ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಗಾಳಿಬೀಡು ಗ್ರಾಮದ ಸರಕಾರಿ ಶಾಲೆಗಳಲ್ಲಿ ಮುಗಿಸಿ ಬಳಿಕ ಮಡಿಕೇರಿಯ ಸರಕಾರಿ ಕಾಲೇಜಿನಲ್ಲಿ ಪದವಿಪೂರ್ವ ವ್ಯಾಸಂಗ ಹಾಗು ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಮಡಿಕೇರಿಯಲ್ಲಿ ಬಿ ಕಾಂ ಪದವಿಯನ್ನು ಓದಿ ಆನಂತರ ತಮ್ಮದೇ ಶೈಲಿಯಲ್ಲಿ ಬರವಣಿಗೆಯನ್ನು ಆರಂಭಿಸಿ ಲೇಖನ, ಕಥೆ, ಕವನ, ವಿಮರ್ಶೆಗಳ ಮುಖಾಂತರ ಜನಮನಗೆದ್ದವರು. ಸಮಾಜಮುಖಿ ಚಿಂತನೆಗಳತ್ತ ಹೆಚ್ಚು ಒಲವು ತೋರುವ ಇವರ ಪತ್ರಿಕಾ ವರದಿಗಳು ಬಹಳಷ್ಟು ಸರಕಾರದ…

Read More

ವಿರಾಜಪೇಟೆ NEWS DESK ಮಾ.23 : ವಿರಾಜಪೇಟೆಯ ಶ್ರೀ ಮುತ್ತಪ್ಪನ್ ದೇವಸ್ಥಾನ ಸಮಿತಿ ಆದಿ ಪುರಾತನ ಘಟ್ಟದಿಂದ ನಡೆದುಕೊಂಡು ಬಂದ ಪದ್ದತಿಯಂತೆ ಒಂದೇ ದೇಗುಲದಲ್ಲಿ  ಸುಧೀರ್ಘ ಕಾಲ ದೈವ ಸೇವೆ ಮಾಡುವ ಪೂಜಾಕರ್ಮಿಗಳಿಗೆ ನೀಡಲಾಗುವ ಗೌರವ ಸೂಚಕವಾದ ಪಣಿಕರ್ ಪಟ್ಟ ಎಡಯನ್ನೂರು ನಿವಾಸಿ ಶ್ರೀ ರಾಜನ್ ಅವರಿಗೆ ನೀಡಿ ಗೌರವಿಸಿತು. ವಿರಾಜಪೇಟೆ ನಗರದ ಮೀನುಪೇಟೆಯ ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಾಲಯದ ವತಿಯಿಂದ 81 ನೇ ವಾರ್ಷಿಕ ತೆರೆ ಮಹೋತ್ಸವ ನಡೆಯಿತು. ಈ ಸಂಧರ್ಭ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಕಾನಾಡ್ ಎಡಯನ್ನೂರು ನಿವಾಸಿ  ನೆಲ್ಲಿತರಸ್ಸಿಯಿಲ್ ಚಂದು ಪಣಿಕರ್ ಎಂಬುವವರ ಪುತ್ರ ರಾಜನ್ (64) ಅವರಿಗೆ ದೇಗುಲದಲ್ಲಿ ಸಲ್ಲಿಸಿದ ಸುದೀರ್ಘ ದೈವ ಕೋಲ ಸೇವೆಯನ್ನು ಪರಿಗಣಿಸಿ ಪಣಿಕರ್ ಪಟ್ಟ ನೀಡಲಾಯಿತು. ಕೇರಳ ರಾಜ್ಯದ ಸಾಂಪ್ರದಾಯಿಕ ಪುರಾತನ ದೇವಾಲಯಗಳಲ್ಲಿ  ಸೇವೆ ಮಾಡುವ ವಿಶೇಷ ವ್ಯಕ್ತಿಗಳನ್ನು ಗುರುತಿಸುವುದು ವಾಡಿಕೆಯಾಗಿದೆ. ದೇವಾಲಯಗಳಲ್ಲಿ ನಡೆಯುವ ವಿಶೇಷ ಪೂಜೆಗಳು, ವಾರ್ಷಿಕ ಉತ್ಸವಗಳು ಹಾಗೂ ಇತರ ಸೇವೆಗಳಲ್ಲಿ ಸಕ್ರೀಯರಾಗಿ ತಮ್ಮ ಸೇವೆಯನ್ನು ಮುಡಿಪಾಗಿಟ್ಟ…

Read More