ಲೇಖಕ: admin

ಮಡಿಕೇರಿ ಮೇ 16 NEWS DESK : ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಬೇಸಿಗೆ ಅವಧಿಯಲ್ಲಿನ ಶಿಬಿರದ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗದಾಮಪ್ಪ ಹೇಳಿದರು. ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕೊಡಗು ಇವರ ಸಹಯೋಗದಲ್ಲಿ 2025-26 ನೇ ಸಾಲಿನ ಉಚಿತ ಬೇಸಿಗೆ ಶಿಬರ ಉದ್ಘಾಟಿಸಿ ಮಾತನಾಡಿದರು.  ಬಾಲ್ಯದಲ್ಲಿಯೇ ಮಕ್ಕಳಲ್ಲಿರುವ ಸೃಜನಾತ್ಮಕ ಕಲೆಯನ್ನು ವೃದ್ಧಿಸಲು ಇಂತಹ ಶಿಬಿರಗಳು ಸಹಾಯವಾಗಲಿದೆ. ಮಕ್ಕಳಿಗೆ ಆಟ-ಪಾಠಗಳ ಜೊತೆಗೆ ನೃತ್ಯ, ಸಾಂಸ್ಕøತಿಕ ಕಲೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಇಂತಹ ಶಿಬಿರಗಳು ಮೂಲ ಪ್ರೇರಣೆಯಾಗುತ್ತವೆ. ಮಕ್ಕಳ ಬೌದ್ಧಿಕ ವಿಕಾಸದೊಂದಿಗೆ ಭವಿಷ್ಯದ ಜೀವನಕ್ಕೆ ಮಾದರಿಯಾಗುತ್ತದೆ. ಮಕ್ಕಳು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ…

Read More

ಮಡಿಕೇರಿ ಮೇ 16 NEWS DESK : ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಸಂಬಂಧ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆಯನ್ನು ಕೈಗೊಳ್ಳಲು ಮೇ, 25 ರವರೆಗೆ ವಿಸ್ತರಿಸಲಾಗಿದ್ದು, ಮೇ, 20 ರೊಳಗೆ ಶೇ.100 ರಷ್ಟು ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‍ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗವು ಮೇ, 25 ರವರೆಗೆ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯ ಕೈಗೊಳ್ಳಲು ಅವಕಾಶ ಮಾಡಿದೆ. ಆದರೂ ಸಹ ಮೇ, 20 ರೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಸಮೀಕ್ಷೆ ಬ್ಲಾಕ್ ವ್ಯಾಪ್ತಿಯಲ್ಲಿ ಮೇ 26 ರಿಂದ 28 ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರ ನಿಗದಿಪಡಿಸಲಾಗಿದೆ. ಹಾಗೆಯೇ ಮೇ 19 ರಿಂದ 28 ರವರೆಗೆ ಆನ್‍ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಮೇ 26 ರಿಂದ 28 ರವರೆಗೆ ನಡೆಯುವ ವಿಶೇಷ ಶಿಬಿರದಲ್ಲಿ ಸಮೀಕ್ಷೆಯಲ್ಲಿ ಗಣತಿದಾರರು ಘೋಷಿತ ಮತಗಟ್ಟೆಗಳಲ್ಲಿ ಖುದ್ದಾಗಿ…

Read More

ಮಡಿಕೇರಿ ಮೇ 16 NEWS DESK : ತಲಕಾವೇರಿಯಲ್ಲಿ ಕಳೆದ 5 ದಿನಗಳಿಂದ ನಡೆಯುತ್ತಿರುವ ಕೋಟಿ ರುದ್ರ ಜಪಯಜ್ಞದಲ್ಲಿ ಕಾವೇರಮ್ಮ ಕೊಡವ ಮತ್ತು ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಮುದ್ದಂಡ.ಬಿ.ದೇವಯ್ಯ ಭಾಗಿಯಾದರು. ಶ್ರೀ ಶ್ರೀ ಕಾಂತಾನಂದ ಸರಸ್ವತಿ ಮಹಾರಾಜ್ ಸ್ವಾಮೀಜಿ ಅವರ ಸಂಕಲ್ಪದಂತೆ ಲೋಕ ಕಲ್ಯಾಣಕ್ಕಾಗಿ ಜೀವನದಿ ಕಾವೇರಿಯ ಉಗಮಸ್ಥಾನದಲ್ಲಿ ನಡೆಯುತ್ತಿರುವ ಕೋಟ್ಯಾಧಿಕ ರುದ್ರ ಜಪಯಜ್ಞ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಂ.ಬಿ.ದೇವಯ್ಯ ಅವರು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಜಿಲ್ಲೆ ಹಾಗೂ ನಾಡಿನ ಸಮಸ್ತರಿಗೂ ಒಳಿತಾಗಲಿ, ಕಾವೇರಿ ಮಾತೆ ಉತ್ತರೋತ್ತರ ಶ್ರೇಯಸನ್ನು ನೀಡಲಿ, ಭಾರತ ಮತ್ತು ಪಾಕಿಸ್ತಾನ ಯುದ್ಧದಲ್ಲಿ ಭಾರತಕ್ಕೆ ಯಶಸ್ಸು ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.  ಈ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ಕಾವೇರಿ ಕ್ಷೇತ್ರದಲ್ಲಿ ನಡೆಯುತ್ತಿರಲಿ ಎಂದು ಆಶಿಸಿದರು.  ಮೇ 11 ರಿಂದ ತಲಕಾವೇರಿಯಲ್ಲಿ ಕೋಟಿ ರುದ್ರ ಜಪಯಜ್ಞ ನಡೆಯುತ್ತಿದ್ದು, ಸುಮಾರು 25 ವೈಧಿಕರಿಂದ ದಿನ ಪೂರ್ತಿ ಮಂತ್ರಪಠಣವಾಗುತ್ತಿದೆ. ಕಳೆದ 4-5 ದಿನಗಳಿಂದಲೂ…

Read More

ಮಡಿಕೇರಿ ಮೇ 16 NEWS DESK : ಶ್ರೀಮಂಗಲ 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಫೀಡರ್‍ಗಳಲ್ಲಿ ಮೇ 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರದ ನಿರ್ವಾಹಣೆ ಹಾಗೂ ಇತರೆ ಅಭಿವೃದ್ದಿ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.  ಆದ್ದರಿಂದ ಕಾಯಿಮನೆ, ಮಂಚಳ್ಳಿ, ಪೂಜೆಕಲ್ಲು, ನಲ್ಲೂರು, ನಾತಂಗಾಲ, ತೈಲ, ಕುಟ್ಟ, ಸಿಂಕೋನ, ಕೆ.ಎಂ.ಕೊಡ್ಲಿ, ಶ್ರೀಮಂಗಲ, ಹರಿಹರ, ನಾಲ್ಕೇರಿ, ಚೀಪೆಕೊಲ್ಲಿ, ಗುಡ್ಡಮಾಡು, ಬಿರುಗ, ಕೆ ಬಾಡಗ, ಶೆಟ್ಟಿಗೇರಿ, ಕುರ್ಚಿ, ಬಿರುನಾಣಿ, ವೆಸ್ಟ್ ನೆಮ್ಮಲೆ, ತೆರಾಲು, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್  ಕೋರಿದ್ದಾರೆ.

Read More

ಮಡಿಕೇರಿ ಮೇ.16 NEWS DESK : ಹವಾಮಾನ ವೈಪರಿತ್ಯಗಳಿಂದಾಗಿ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೊಡಗು ಜಿ.ಪಂ.ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ತಿಳಿಸಿದರು. ನಗರದ ಜಿ.ಪಂ. ಕಚೇರಿಯಲ್ಲಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆ ಕ್ರಿಯಾ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಪರಿಸರವನ್ನು ಸ್ವಚ್ಛ ಮತ್ತು ಸುಸ್ಥಿರವಾಗಿಡುವುದು ನಮ್ಮಲ್ಲೆರ ಆದ್ಯ ಕರ್ತವ್ಯವಾಗಿದೆ. ನಮ್ಮ ಪೂರ್ವಜರು ಸುಂದರವಾದ ಪರಿಸರವನ್ನು ನಮಗೆ ನೀಡಿದ್ದು, ಅದನ್ನು ಉಳಿಸಿಕೊಳ್ಳಬೇಕು. ಪರಿಸರ ಸಂರಕ್ಷರಣೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒತ್ತು ನೀಡಬೇಕು ಎಂದು ಅವರು ತಿಳಿಸಿದರು. ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ಹಿರಿಯ ಸಮಾಲೋಚಕರಾದ ಡಾ.ಬಿ.ಸರಿತಾ ಅವರು ಮಾತನಾಡಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಈ ತರಬೇತಿ ಕಾರ್ಯಕ್ರಮವನ್ನು…

Read More

ಮಡಿಕೇರಿ ಮೇ 16 NEWS DESK : ಕೊಡವರ ನರಮೇಧದ ದೇವಟ್ ಪರಂಬುವಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಸದಸ್ಯರು ದೇವಟ್ ಪರಂಬುವಿನ ಸ್ಮಾರಕ ಸ್ಥಳದಲ್ಲಿ ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಪರ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು 1785 ಡಿ.12 ರಂದು ಟಿಪ್ಪು ಸುಲ್ತಾನನ ನೇತೃತ್ವದ ಮೈಸೂರು ಸುಲ್ತಾನರು ಹಾಗೂ ಫ್ರೆಂಚ್ ಈಸ್ಟ್ ಇಂಡಿಯಾ ಕಂಪನಿ ರೂಪಿಸಿದ ಸಂಚಿನಿಂದ ದುರಂತ ಅಂತ್ಯ ಕಂಡ ಹಿರಿಯ ಕೊಡವ ಯೋಧರನ್ನು ಸ್ಮರಿಸುವ ಮೂಲಕ ಸಿಎನ್‍ಸಿ ತನ್ನ ಹೋರಾಟದ ಬಲವನ್ನು ಹೆಚ್ಚಿಸಿಕೊಂಡಿದೆ ಎಂದರು. “ಕೆಳದಿ/ಪಾಲೇರಿ ರಾಜ ಪರಿವಾರದ ಅಧೀನದಲ್ಲಿದ್ದ ಕೊಡಗು ರಾಜ್ಯವನ್ನು ಪರಾಕ್ರಮಿ ಕೊಡವರು ಹೈದರ್ ಮತ್ತು ಟಿಪ್ಪುವಿನ ಆಕ್ರಮಣದಿಂದ 31 ಕ್ಕೂ ಹೆಚ್ಚು ಬಾರಿ ಕಾಪಾಡಿದರು. ಈ ಸೋಲಿನ ಸೇಡು ತೀರಿಸಿಕೊಳ್ಳಲು, ಟಿಪ್ಪು ಕೊಡವ ಬುಡಕಟ್ಟು ಜನಾಂಗವನ್ನು…

Read More

ನಾಪೋಕ್ಲು ಮೇ 16 NEWS DESK : ಕುಂಡ್ಯೋಳಂಡ ಕುಟುಂಬಸ್ಥರು ಯಶಸ್ವಿಯಾಗಿ 24ನೇ ಕೌಟುಂಬಿಕ ಹಾಕಿ ಉತ್ಸವವನ್ನು 2024ರಲ್ಲಿ ಆಯೋಜಿಸಿದ್ದು, ಅದರ ಸವಿನೆನಪಿಗಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೂತನ ಹಾಕಿ ಮೈದಾನವನ್ನು ನಿರ್ಮಿಸಲಾಗುತ್ತಿದೆ ಎಂದು ಹಾಕಿ ಹಬ್ಬದ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಹೇಳಿದರು. ನಾಪೋಕ್ಲುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಆಟದ ಮೈದಾನ ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿಯು, ಕಾಲೇಜು ಪ್ರಾಂಶುಪಾಲರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಕುಂಡ್ಯೋಳಂಡ ಕುಟುಂಬಸ್ಥರು ಈ ಕಾರ್ಯಕ್ಕೆ ಮುಂದಾಗಿದ್ದೇವೆ. 2024 ರಲ್ಲಿ ನಾಪೋಕ್ಲುವಿನಲ್ಲಿ ನಡೆಸಲಾದ ಕೊಡವ ಕೌಟುಂಬಿಕ ಹಾಕಿ ಹಬ್ಬದ ಸ್ಮರಣಾರ್ಥವಾಗಿ ಕಾಲೇಜಿನಲ್ಲಿ ಸುಮಾರು 110 ಮೀಟರ್ ಉದ್ದ, 65 ಮೀಟರ್ ಅಗಲದ ನೂತನ ಆಟದ ಮೈದಾನ ನಿರ್ಮಿಸಲು ಶಂಕು ಸ್ಥಾಪನೆಯನ್ನು ನೆರವೇರಿಸಲಾಗಿದೆ ಎಂದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಕುಂಡ್ಯೋಳಂಡ ಕುಟುಂಬದ ಹಾಕಿ ಹಬ್ಬದ ಖಜಾಂಚಿ ವಿಶು ಪೂವಯ್ಯ, ಕಾರ್ಯದರ್ಶಿ ಬಿಪಿನ್ ಬೆಳ್ಳಿಯಪ್ಪ, ಕುಟುಂಬಸ್ಥರಾದ ಪ್ರಫುಲ್…

Read More

ಪುತ್ತೂರು ಮೇ 16 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಈ ವಿಜಯದೊಂದಿಗೆ ತಂಡವು ತಿಪಟೂರಿನ ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆಯನ್ನು ಗಳಿಸಿಕೊಂಡಿದೆ. ವರ್ಷಿತಾ. ಪಿ. ಆಳ್ವ, ರಶ್ಮಿ. ಎ, ಅನೂಶಾ. ಎ, ಸಿಂಚನ. ವಿ. ಎಸ್, ಅರ್ಪಿತಾ. ಎ, ಪೂರ್ವಿಕಾ. ಎ. ಎಸ್, ಶ್ರಾವ್ಯ. ಎ, ರಚನ. ಕೆ.ಡಿ, ಪ್ರಜ್ಞಾ.ಕೆ, ಸ್ರುಜನಾ. ಎಸ್, ಶ್ರಾವ್ಯ .ಎಲ್. ಕೆ ಮತ್ತು ತೇಜಸ್ವಿನಿ .ಯು ಚಾಂಪಿಯನ್ ತಂಡದ ಸದಸ್ಯರಾಗಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ…

Read More

ಮಡಿಕೇರಿ ಮೇ 16 NEWS DESK  :  ಅಭಿವೃದ್ಧಿ ಕಾಯ೯ಗಳ ಜತೆಗೇ ಪರಿಸರ ಸಂರಕ್ಷಣೆಯ ಕಾಳಜಿ ಕೂಡ ಇದ್ದಾಗ ಪ್ರಕೃತಿ ಮತ್ತು ಪ್ರಗತಿ ಜತೆಯಲ್ಲಿ ಸಾಗಲು ಸಾಧ್ಯವಿದೆ ಎಂದು ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಭಾಜನರಾದ ಹಿರಿಯ ಸಾಹಿತಿ ನಾಗೇಶ್ ಕಾಲೂರು ಅಭಿಪ್ರಾಯಪಟ್ಟಿದ್ದಾರೆ. ನಗರದ ಪತ್ರಿಕಾಭವನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೊಡಗು ಪತ್ರಕತ೯ರ ಸಂಘದ ಸಹಯೋಗದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಪ್ರಕೃತಿಯನ್ನು ಉಳಿಸಿಕೊಳ್ಳದೇ ಹೋದಲ್ಲಿ ಮಾನವನ ಅಂತ್ಯ ಖಂಡಿತ ಎಂದು ಎಚ್ಚರಿಸಿದ ನಾಗೇಶ್ ಕಾಲೂರು. ಪ್ರಗತಿ ನೆಪದಲ್ಲಿ ಪರಿಸರ ನಾಶ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರಕೃತಿ ಸಂರಕ್ಷಣೆ ಮತ್ತು ಪ್ರಗತಿ ಯೋಜನೆ ಜತೆಯಾಗಿ ಸಾಗುವಂಥ ಚಿಂತನೆ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು. ಗಂಗೆ ಕೂಡ ತಲಕಾವೇರಿ ಬಂದು ವಷ೯ಕ್ಕೊಮ್ಮೆ ಕಾವೇರಿಯಲ್ಲಿ ಮಿಂದು ಪುನೀತಳಾಗುತ್ತಾಳೆ ಎಂದು ಪುರಾಣದಲ್ಲಿ ಉಲ್ಲೇಖವಿದೆ. ಇಂಥ ಪವಿತ್ರ ಕಾವೇರಿಯ ತೀಥ೯ರೂಪದ ನೀರನ್ನು ಸಂರಕ್ಷಿಸುವ ನಿಟ್ಟಿನಲ್ಲಿ…

Read More

ಮಡಿಕೇರಿ ಮೇ 16 NEWS DESK : ಹೆಬ್ಬಾಲೆ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಸಂಭ್ರಮದಿಂದ ನಡೆಯಿತು. ಭೀಮ ರಥೋತ್ಸವವನ್ನು ರಾಜ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಗಳನ್ನು ಜನರಿಗೆ ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶ ಕಂಡ ಅಪ್ರತಿಮ ನಾಯಕ. ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿಗೆ ಸೀಮಿತವಾದ ವ್ಯಕ್ತಿಯಲ್ಲ ಎಲ್ಲಾ ಜಾತಿಯ ಜನರು ಗೌರವಿಸುವಂತಾಗಬೇಕು ಎಂದರು. ಮುಖ್ಯ ಭಾಷಣಕಾರರಾಗಿ ಮಾತನಾಡಿದ ಡಾ. ಜೆ.ಸೋಮಣ್ಣ, ಬಹುಜನರ ನಾಯಕ ಡಾ. ಬಿ.ಆರ್.ಅಂಬೇಡ್ಕರ್ ಅವರು ಬಾಲ್ಯದಿಂದಲೂ ಅನೇಕ ಕಷ್ಟಗಳನ್ನು ಅನುಭವಿಸುವ ಮೂಲಕ ತಮ್ಮ ಜನಕ್ಕೆ ಆಗುತ್ತಿದ್ದ ದೌರ್ಜನ್ಯ ದಬ್ಬಾಳಿಕೆ ಕಣ್ಣಿಂದಲೇ ನೋಡಿದರು. ತಾನು ಕೂಡ ಅನುಭವಿಸಿದರು ಶಾಲೆಯಲ್ಲಿ ಓದುವಾಗ ಹೊರಗಡೆ ಕೂತು ಪಾಠ ಕೇಳುತ್ತಿದ್ದರು ಈ ತಾರತಮ್ಯವನ್ನು ಪಣತೊಟ್ಟು ಪೋಷಿತ ಸಮುದಾಯಗಳಿಗೆ ಸಮಾನ ಹಕ್ಕುಗಳನ್ನು ಕೊಡಿಸುವ ಮೂಲಕ ಸಮಾಜದಲ್ಲಿ ಎಲ್ಲರಂತೆ ಸಮಾನವಾಗಿ ಬದುಕಲು ಭಾರತದ…

Read More