ಲೇಖಕ: admin

ಕುಶಾಲನಗರ ಏ.14: NEWS DESK :  ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡ್ಲೂರು ನವಗ್ರಾಮದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ರೂ. 50 ಲಕ್ಷ ಹಣ ಮಂಜೂರುಗೊಳಿಸಲಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ‌ ಕೂಡ್ಲೂರು ಗ್ರಾಮದಲ್ಲಿ ತಿಳಿಸಿದರು. ಕುಶಾಲನಗರ ತಾಲ್ಲೂಕಿನ ಕೂಡ್ಲೂರು ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಬಸವೇಶ್ವರ ಯುವಕ ಸಂಘದ ವತಿಯಿಂದ ಏರ್ಪಡಿಸಿದ್ದ ಮೂರನೇ ವರ್ಷದ ಹೊನಲು ಬೆಳಕಿನ  ಕಬಡ್ಡಿ ಟೂರ್ನಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಕೂಡ್ಲೂರು ನವಗ್ರಾಮದ ಗ್ರಾಮಸ್ಥರ ಮನವಿ ಸ್ಪಂದಿಸಿರುವ ಶಾಸಕರು, ನವಗ್ರಾಮದಲ್ಲಿ ಸೂಕ್ತ ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಗ್ರಾಮದ ಮೂಲ ಸೌಕರ್ಯಗಳ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದೆ . ಇದು ಈ ಗ್ರಾಮಸ್ಥರಿಗೆ ಸಂತಸದ ಸಂಗತಿಯಾಗಿದೆ ಎಂದು ವಿ.ಪಿ.ಶಶಿಧರ್ ಪ್ರತಿಕ್ರಿಯೆ ನೀಡಿದರು. ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಈರಪ್ಪ, ಯುವಕ ಸಂಘದ ಅಧ್ಯಕ್ಷ ಕೆ.ವಿ.ನಿಶಾಂತ್, ಸಂಘದ ಪದಾಧಿಕಾರಿಗಳು ಇದ್ದರು.

Read More

ನಾಪೋಕ್ಲು ಏ.14 NEWS DESK : ಶ್ರೀ ಮಹಾವಿಷ್ಣು ದೇವಾಲಯ(ಕೋಟ)ದಲ್ಲಿ ನವ ಕಳಸ ಪೂಜೆ ಹಾಗೂ ಹೋಮ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ಕೆಲವು ವರ್ಷಗಳ ಹಿಂದೆ ಈ ದೇವಾಲಯದ ಜೀರ್ಣೋದ್ಧಾರ ಕಾರ್ಯನಡೆದು ಸ್ಥಗಿತಗೊಂಡಿದ್ದ ನಿತ್ಯಪೂಜೆಯನ್ನು ಪುನರಾರಂಭಿಸಲು ನಾಪೋಕ್ಲು (ನಾಪದೊಕ್ಕ), ಊರಿನ ಆಡಳಿತ ಮಂಡಳಿ ಹಾಗೂ ತಕ್ಕ ಮುಖ್ಯಸ್ಥರು ವಿಶೇಷ ಪೂಜೆ ನಡೆಸಿದರು. ಬಿಸು ಶುಭ ದಿನವಾದ ಇಂದಿನಿಂದ (ಸೋಮವಾರ) ದೇವಾಲಯದಲ್ಲಿ ಶ್ರೀ ಮಹಾವಿಷ್ಣು ವಿಗೆ ನಿತ್ಯ ಪೂಜೆ ಪುನರಾರಂಭಗೊಂಡಿದ್ದು, ದಿನಪ್ರತಿ ಬೆಳಿಗ್ಗೆ 8-30 ಗಂಟೆಯಿಂದ 9-30 ಗಂಟೆ ಒಳಗೆ ಭಗವತಿ ದೇವಾಲಯದ ಅರ್ಚಕ ಹರೀಶ್ ಭಟ್ ನಿತ್ಯ ಪೂಜೆ ನಡೆಸಿಕೊಡಲಿದ್ದಾರೆ ಎಂದು ಆಡಳಿತ ಮಂಡಳಿ ಪದಾದಿಕಾರಿಗಳು ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಏ.14 NEWS DESK : ಹಳೆ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಪೊರುಕುವಂಡ ಭಾಗ್ಯವತಿ (ಕಾಂತಿ) ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ವಿರಾಜಪೇಟೆಯ ಶಾಸಕ ಎ.ಎಸ್.ಪೊನ್ನಣ್ಣ ಸನ್ಮಾನಿಸಿ ಶುಭ ಹಾರೈಸಿದರು. ನಾಪೋಕ್ಲು ಭಾಗಕ್ಕೆ ಭೇಟಿ ನೀಡಿದ ಶಾಸಕರು, ರಾಜ್ಯ ಪ್ರಶಸ್ತಿ ವಿಜೇತರಾದ ಭಾಗ್ಯವತಿ (ಕಾಂತಿ) ಅವರನ್ನು ಸನ್ಮಾನಿಸಿ, ತಮ್ಮ ವೃತ್ತಿಯಲ್ಲಿ ಮತ್ತಷ್ಟು ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದರು. ಭಾಗ್ಯವತಿ ಅವರಿಗೆ ಇತ್ತೀಚೆಗೆ ರಾಜ್ಯ ಸರಕಾರದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ನಾಪೋಕ್ಲು ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್, ಕೆಡಿಪಿ ಸದಸ್ಯ ಎಂ.ಹೆಚ್.ಅಬ್ದುಲ್ ರೆಹಮಾನ್, ಗ್ರಾಮ ಪಂಚಾಯತಿ ಸದಸ್ಯ ಕುಲ್ಲೇಟಿರ ಹೇಮಾ ಅರುಣ್ ಹಾಗೂ ನಾಯಕಂಡ ಮುತ್ತಪ್ಪ, ಅಪ್ಪಚೆಟ್ಟೋಳಂಡ ಮಿಥುನ್ ಮಾಚಯ್ಯ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಏ.14 NEWS DESK : ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಏ.16 ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಸಮಿತಿಯ ಉಪಾಧ್ಯಕ್ಷ ಕೆ.ಎ.ಯಾಕುಬ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಸ್ಲಿಮರ ಬೇಡಿಕೆಗಳನ್ನು ಸರ್ಕಾರದ ಮುಂದಿಡಲು ಒಗ್ಗಟ್ಟಿನ ಹೋರಾಟ ನಡೆಸುವುದಕ್ಕಾಗಿ ಇಬ್ಬರು ಖಾಝಿಗಳ ನೇತೃತ್ವದಲ್ಲಿ ಜಿಲ್ಲಾ ಸುನ್ನಿ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ನೇತೃತ್ವದಲ್ಲಿ ಬುಧವಾರ ಬೆಳಿಗ್ಗೆ 10 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಮೆರವಣಿಗೆ ಸಾಗಲಿದೆ. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಸ್ವಾತಂತ್ರ್ಯ ಪೂರ್ವದಿಂದಲೇ ರಾಜರು, ಬ್ರಿಟಿಷರು ಹಾಗೂ ದಾನಿಗಳು ಮಸೀದಿಗೆ ದಾನವಾಗಿ ಜಾಗವನ್ನು ನೀಡಿದ್ದಾರೆ. ಅಂದಿನಿಂದ ಇಂದಿನವರೆಗೆ ಈ ಆಸ್ತಿಯನ್ನು ಬಳಸಿಕೊಂಡು ವಿದ್ಯಾರ್ಥಿಗಳ ಶಿಕ್ಷಣ, ಸಿಬ್ಬಂದಿಗಳ ವೇತನ ಮತ್ತಿತರ…

Read More

ಭಾರತದ ನಂಬರ್ 1 ಪ್ರೆವೇಟ್ ಲೈಪ್ ಇನ್ಸೂರೆನ್ಸ್ ಕಂಪೆನಿಯಲ್ಲಿ “ಲೈಪ್ ಮಿತ್ರ” (ಇನ್ಸೂರೆನ್ಸ್ ಅಡ್ವೆಸರ್) ಆಗಿ ಕೆಲಸ ಮಾಡಲು ಉತ್ತಮ ಅವಕಾಶ. *ಆಕರ್ಷಕ ಕಮಿಷನ್ ಹಾಗೂ ಇನ್ನಿತರ ಅನೇಕ ಸೌಲಭ್ಯಗಳಿರುತ್ತದೆ. ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ/ಪಿಯುಸಿ/ಗ್ರಾಜುವೇಷನ್ ವಯೋಮಿತಿ : 18 ವರ್ಷದಿಂದ 70 ವರ್ಷ ಈ ಅವಕಾಶಕ್ಕಾಗಿ ಸಂಪರ್ಕಿಸಬೆಕಾದ ಮೊ.ಸಂ : 8660826838, 9343370328 ಹಾಗೂ ಇಮೇಲ್ :: vpmanoharv@gmail.com

Read More

ಸುಂಟಿಕೊಪ್ಪ ಮಾ.14 NEWS DESK : ಹರದೂರು ಗ್ರಾಮದ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಸಮಿತಿ ವತಿಯಿಂದ ಆದಿನಾಗಬ್ರಹ್ಮ ಮೊಗೇರ ದೈವಗಳ ಹಾಗೂ ಕೊರಗ ತನಿಯ ದೈವ ಮತ್ತು ಮಂತ್ರವಾದಿ ಗುಳಿನಗ 85ನೇ ನೇಮೋತ್ಸವವು ಎರಡುದಿನಗಳ ಕಾಲ ಶ್ರದ್ಧಾಭಕ್ತಿಯಿಂದ ನಡೆಯಿತು. ಆಯುಧಾ ಪೂಜೆ, ಸಂಜೆ ನಿತ್ಯ ಪೂಜೆ ಮತ್ತು ಭಂಡಾರ ಹೊರಡುವುದರ ಮೂಲಕ ನೇಮೋತ್ಸವಕ್ಕೆ ಚಾಲನೆ ದೊರೆಯಿತು. ಸಂಜೆ ಮಂತ್ರವಾದಿ ಗುಳಿಗನ ನೇಮ ನಡೆಯಿತು. ರಾತ್ರಿ ಆದಿನಾಗಬ್ರಹ್ಮ ಮೊಗೇರ ದೈವಗಳ ಆದಿಮಾಯೆ ತನ್ನಿ ಮಾನಿಗ ಗರಡಿ ಇಳಿಯಿತು. ಮರುದಿನ ಮುಂಜಾನೆ ದೈವಗಳಿಗೆ ಹರಕೆ ಮತ್ತು ಕಾಣಿಕೆ ಅರ್ಪಿಸಿದರು. ನಂತರ 2 ಕೊರಗ ತನಿಯ ದೈವದ ಕಾರಣಿಕ ನೇಮೋತ್ಸವ ನಡೆಯಿತು. ರಾತ್ರಿ ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಸುಂಟಿಕೊಪ್ಪ, ಹರದೂರು, ಮಾದಾಪುರ, ಮಡಿಕೇರಿ, ಕುಶಾಲನಗರ, ಮೈಸೂರು, ಮಂಗಳೂರು ಸೂಳ್ಯ, ಪುತ್ತೂರು, ಸಕಲೇಶಪುರ ಸೇರಿದಂತೆ ಗ್ರಾಮದ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳ ಹಾಜರಿದ್ದರು.

Read More

ಬೆಂಗಳೂರು ಏ.14 NEWS DESK : ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನಮ್ಮ ಸರ್ಕಾರವತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು.  ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು. ಮಹಾನ್ ಮೇಧಾವಿಯಾಗಿದ್ದ ಅಂಬೇಡ್ಕರ್, ಅವರ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವವ ಜನರಿಗೆ ವಿಮೋಚನೆ…

Read More

ಸುಂಟಿಕೊಪ್ಪ ಏ.14 NEWS DESK : ಸಂತ ಅಂತೋಣಿ ದೇವಾಲಯದಲ್ಲಿ ಕ್ರೈಸ್ತ ಭಾಂದವರು ಗರಿಗಳ ಭಾನುವಾರವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು. ದೇವಾಲಯದ ಧರ್ಮಗುರು ವಿಜಯಕುಮಾರ್, ಸಂತ ಮೇರಿ ಶಾಲಾ ಶಾಲಾವರಣದಲ್ಲಿ ತೆಂಗಿನ ಗರಿಗಳನ್ನು ಆರ್ಶಿವಚಿಸಿ, ಕ್ರೈಸ್ತ ಬಾಂಧವರಿಗೆ ವಿತರಿಸಿದರು. ನಂತರ ಶಾಲಾ ಆವರಣದಿಂದ ದೇವಾಲಯದವರೆಗೆ ಮೆರವಣಿಗೆಯನ್ನು ನಡೆಸಿ ದೇವಾಲಯದಲ್ಲಿ ವಿಶೇಷ ಗಾಯನ, ಬಲಿಪೂಜೆ, ಪ್ರಭೋದನೆಯನ್ನು ಅರ್ಪಿಸಿ ಪವಿತ್ರ ವಾರಕ್ಕೆ ಮುನ್ನುಡಿ ಇಡಲಾಯಿತು. ಈ ಸಂದರ್ಭ ಸಂತ ಕ್ಲಾರ ಕನ್ಯಾಸ್ತ್ರೀ ಮಠದ ಕನ್ಯಾಸ್ತ್ರೀಯರು ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಬಲಿಪೂಜೆ, ಪ್ರಬೋದನೆ ಮತ್ತು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಏ.14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ಮಡಿಕೇರಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ನಗರದ ಕಾವೇರಿ ಕಲಾಕ್ಷೇತ್ರದಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದವರೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳ ಹೊತ್ತ ರಥವು ವಿವಿಧ ಕಲಾತಂಡದೊಂದಿಗೆ ಮೆರವಣಿಗೆ ಸಾಗಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಪ್ರಧಾನ ಆಯುಕ್ತ ಬೇಬಿಮ್ಯಾಥ್ಯು, ನಗರಸಭೆ ಸದಸ್ಯರು, ಇಲಾಖಾಧಿಕಾರಿಗಳು, ದಲಿತ ಮುಖಂಡರು ಪಾಲ್ಗೊಂಡು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.  

Read More

ಕುಶಾಲನಗರ ಏ.14 NEWS DESK : ಕೂಡ್ಲೂರು ಸರ್ಕಾರಿ ಪ್ರೌಢಶಾಲಾ ಮೈದಾನಕ್ಕೆ ಪ್ರಸಕ್ತ ಸಾಲಿನಲ್ಲಿ ರೂ.3 ಲಕ್ಷ ಅನುದಾನ ಒದಗಿಸುವುದಾಗಿ ಶಾಸಕ ಡಾ.ಮಂತರ್ ಗೌಡ ತಿಳಿಸಿದರು. ಕೂಡ್ಲೂರು ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಹೆಚ್ಚು ಕ್ರೀಡಾ ಚಟುವಟಿಕೆಗಳು ನಡೆಯುವುದರಿಂದ ಮತ್ತು ಶಾಲಾ ಮಕ್ಕಳ ಕ್ರೀಡೆಗಳಿಗೆ ಸುಸಜ್ಜಿತ ಮೈದಾನದ ಕೊರತೆ ಇರುವುದರಿಂದ ಈ ಮೈದಾನವನ್ನು ಸಮತಟ್ಟುಗೊಳಿಸಲು ಸೂಕ್ತ ಅನುದಾನವನ್ನು ಒದಗಿಸುವಂತೆ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಪ್ರೇಮಕುಮಾರ್, ಶಾಸಕರಿಗೆ ಮನವಿ ಮಾಡಿದ ಸಂದರ್ಭದಲ್ಲಿ ಶಾಸಕ ಡಾ.ಮಂತರ್ ಗೌಡ ಪ್ರತಿಕ್ರಿಯಿಸಿ ಈ ಭರವಸೆ ನೀಡಿದರು.

Read More