ಲೇಖಕ: admin

ಮಡಿಕೇರಿ ಮಾ.19 NEWS DESK : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೋಟಗೋಡಿ ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಎಂಬ ಹೆಸರಿನಲ್ಲಿ 3 ದಿನಗಳ ಕಮ್ಮಟವನ್ನು ಏ.21 ರಿಂದ ಮೂರು ದಿನಗಳ ಕಾಲ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿ ಜಿಲ್ಲೆಯಲ್ಲಿ ನಡೆಯಲಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 45 ವರ್ಷ ವಯಸ್ಸುಳ್ಳ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏ.5 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ಸೈಟ್ http://karnatakasahithyaacademy.org ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಎನ್.ಕರಿಯಪ್ಪ ತಿಳಿಸಿದ್ದಾರೆ.

Read More

ಮಡಿಕೇರಿ NEWS DESK  ಮಾ.20 :  ಕೊಡಗು ಪತ್ರಕತ೯ರ ಸಂಘ (ರಿ)ದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಮತ್ತು ಪತ್ರಕತ೯ರ ಸಾಂಸ್ಕೖತಿಕ ಸಂಭ್ರಮವು ಮಾಚ್೯ 22 ರಂದು ಶನಿವಾರ ಮಡಿಕೇರಿಯಲ್ಲಿ ಆಯೋಜಿತವಾಗಿದೆ. ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಾಚ್೯ 22 ರಂದು ಶನಿವಾರ ಸಂಜೆ 6 ಗಂಟೆಗೆ  ಆಯೋಜಿತ ಸಮಾರಂಭವನ್ನು ಜಿಲ್ಲಾ ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಉದ್ಘಾಟಿಸಲಿದ್ದು, ಸಂಘದ  ಸ್ಕಿಕ್ಕರ್ ಗಳನ್ನು ಕೂಗ್೯ ಹೋಟೇಲ್ಸ್ , ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ಬಿಡುಗಡೆಗೊಳಿಸಲಿದ್ದಾರೆ. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಮುಖ್ಯ ಭಾಷಣ ಮಾಡಲಿದ್ದಾರೆ. ಸಂಘದ ನಿಕಟಪೂವ೯ ಅಧ್ಯಕ್ಷ ಎಸ್.ವಿ.ಮುರಳೀಧರ್, ಸಂಘದ ಗೌರವ ಸಲಹೆಗಾರರಾದ ಟಿ.ಪಿ.ರಮೇಶ್, ಬಿ.ಜಿ.ಅನಂತಶಯನ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಸಂಘದ ಕ್ಷೇಮಾಭಿವೖದ್ದಿ ಸಮಿತಿ ಅಧ್ಯಕ್ಷ ಜಿ.ವಿ.ರವಿಕುಮಾರ್, ಸಾಂಸ್ಕೖತಿಕ ಸಮಿತಿ  ಸಂಚಾಲಕ  ಉಜ್ವಲ್ ರಂಜಿತ್, ಸಂಘದ ನೂತನ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ…

Read More

ಮಡಿಕೇರಿ NEWS DESK ಮಾ.20 : ಮಡಿಕೇರಿ ನಗರದ ಮಲ್ಲಿಕಾರ್ಜುನ ನಗರ ಬಡಾವಣೆಯ ಶ್ರೀ ಕೋದಂಡ ರಾಮೋತ್ಸವದ ಭಜನಾ ಸಮಿತಿಯ ವಿಶಾಲಾಕ್ಷಿ ಸುಕುಮಾರ್ ಕಾರ್ಯನಿರ್ವಹಿಸಲಿದ್ದಾರೆ. ಏ.5 ರಂದು ನಗರದಲ್ಲಿ ನಡೆಯುವ ಶ್ರೀರಾಮನ ಮೆರವಣಿಗೆಯಲ್ಲಿ ಸುಮಾರು 12 ಕ್ಕೂ ಅಧಿಕ ಭಜನಾ ತಂಡಗಳ ಭಜನೆ ಪ್ರಮುಖ ಆಕರ್ಷಣೆಯಾಗಲಿದೆ. ಏ.5 ಮತ್ತು 6ರಂದು ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ರಾಮೋತ್ಸವ ಜರುಗಲಿದೆ.

Read More

ನಾಪೋಕ್ಲು ಮಾ.19 NEWS DESK : ಕೊಳಕೇರಿ ಗ್ರಾಮದಲ್ಲಿರುವ ಬೊಮ್ಮಂಜಿಕೇರಿ ಶ್ರೀ ಭದ್ರಕಾಳಿ ದೇವಿಯ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದ ಅಂಗವಾಗಿ ಪೋದ ಹಾಗೂ ಭದ್ರಕಾಳಿ ಮುಡಿ ಕೋಳ ನೆರವೇರಿತು. ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಹಾಗೂ ಹರಕೆ ಕಾಣಿಕೆಗಳನ್ನು ಒಪ್ಪಿಸಿದರು. ಈ ಸಂದರ್ಭ ಉತ್ಸವದಲ್ಲಿ ದೇವಾಲಯದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿಯ ಪದಾಧಿಕಾರಿಗಳು, ವಿವಿಧ ಗ್ರಾಮದ ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ NEWS DESK ಮಾ.20 : ಮಡಿಕೇರಿ ನಗರದ ಮಲ್ಲಿಕಾರ್ಜುನ ನಗರ ಬಡಾವಣೆಯ ಶ್ರೀ ಕೋದಂಡ ರಾಮೋತ್ಸವದ ಭಜನಾ ಸಮಿತಿಯ ಅಧ್ಯಕ್ಷರಾಗಿ ಕೆ.ಕೆ.ಮಹೇಶ್ ಕುಮಾರ್ ಕಾರ್ಯನಿರ್ವಹಿಸಲಿದ್ದಾರೆ. ಏ.5 ಮತ್ತು 6ರಂದು ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ರಾಮೋತ್ಸವ ಜರುಗಲಿದೆ. ಏ.5 ರಂದು ನಗರದಲ್ಲಿ ನಡೆಯುವ ಶ್ರೀರಾಮನ ಮೆರವಣಿಗೆಯಲ್ಲಿ ಸುಮಾರು 12 ಕ್ಕೂ ಅಧಿಕ ಭಜನಾ ತಂಡಗಳ ಭಜನೆ ಪ್ರಮುಖ ಆಕರ್ಷಣೆಯಾಗಲಿದೆ.

Read More

ನಾಪೋಕ್ಲು ಮಾ.19 NEWS DESK : ನಾಡು ಶ್ರೀ ಭಗವತಿ ದೇವರ ವಾರ್ಷಿಕ ಉತ್ಸವವು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಮಾ.17 ರಂದು ಆರಂಭಗೊಂಡು ಶ್ರೀ ಭಗವತಿ ದೇವರ ಹಬ್ಬವು ಪಟ್ಟಣಿ ಆಚರಣೆಯೊಂದಿಗೆ ಸಾಂಪ್ರದಾಯಕವಾಗಿ ಸಂಪನ್ನಗೊಂಡಿತ್ತು. ಆರಂಭದಲ್ಲಿ ತಕ್ಕರ ಮನೆಯಿಂದ ದೇವರ ಬಂಡಾರವನ್ನು ದೇವಾಲಯಕ್ಕೆ ತರಲಾಯಿತು. ನಂತರ ಅಂದಿಬೊಳಕು, ರಾತ್ರಿ ಶ್ರೀ ಭದ್ರಕಾಳಿ ದೇವರ ಕೋಲ, ದೇವರ ಊರ ಪ್ರದಕ್ಷಿಣೆನೆರವೇರಿತು. ಬುಧವಾರ ಪಟ್ಟಣಿ ಹಬ್ಬದ ವಿಶೇಷ ಪೂಜಾ ಕಾರ್ಯಗಳು ಜರುಗಿದವು. ಬೆಳಿಗ್ಗೆ ದೇವರ ದರ್ಶನ ಅನಂತರ ಎತ್ತುಪೋರಾಟ, ವಿಶೇಷ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಬಳಿಕ ನೆರೆದಿದ್ದ ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ಜರುಗಿತು. ಮಧ್ಯಾಹ್ನದ ಬಳಿಕ ಗ್ರಾಮಸ್ಥರಿಂದ ಬೋಳಕಾಟ್, ದೇವರ ಪ್ರದರ್ಶನ ನೃತ್ಯ ಮಹೋತ್ಸವ ಸಾಂಗವಾಗಿ ನೆರವೇರಿತು. ಉತ್ಸವದ ಧಾರ್ಮಿಕ ಪೂಜಾ ವಿಧಿ ವಿಧಾನವನ್ನು ಹರೀಶ್ ತಂತ್ರಿ ದೇವಾಲಯದ ಮುಖ್ಯ ಅರ್ಚಕ ಹರೀಶ್ ಕೆಕುಣ್ಣಾಯ, ಸುರೇಶ್ ಹಾಗೂ ದೇವರ ನೃತ್ಯ ಮಹೋತ್ಸವವನ್ನು ಜಯಚಂದ್ರ (ಪುಂಡ) ನೆರವೇರಿಸಿಕೊಟ್ಟರು. ಈ ಸಂದರ್ಭ…

Read More

ಮಡಿಕೇರಿ ಮಾ.19 NEWS DESK : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ತರ ಯೋಜನೆ ಎಂದರೆ ಅದು “ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ”. ಗ್ರಾಮೀಣ ಭಾಗದ ಜನರ ಬದುಕಿಗೆ  ಆಸರೆಯಾಗುವ ನಿಟ್ಟಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆ ಕಾರ್ಯನಿರ್ವಹಿಸುತ್ತ ಬಂದಿದೆ. ಕೊಡಗು ಜಿಲ್ಲೆಯಲ್ಲಿಯೂ ಸಹ ನರೇಗಾ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ನಿರಂತರ ಕೂಲಿ ಒದಗಿಸುವ ಜೊತೆಗೆ, ಗ್ರಾಮೀಣ ಜನರಿಗೆ ನೆರವಾಗಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಹೇಳಿದ್ದಾರೆ. ‘ಉದ್ಯೋಗ ಖಾತ್ರಿ’ ಹೆಸರು ಸೂಚಿಸುವಂತೆ ಈ ಯೋಜನೆ ಗ್ರಾಮೀಣ ಭಾಗದ ಕುಟುಂಬಕ್ಕೆ ಕನಿಷ್ಠ 100 ದಿನಗಳ ಉದ್ಯೋಗವನ್ನು ಖಾತರಿ ಪಡಿಸುತ್ತದೆ. ಜೊತೆಗೆ ದಿನಕ್ಕೆ ರೂ. 349 ಕೂಲಿಯನ್ನು ನೀಡುತ್ತಿದೆ. ಗ್ರಾಮಗಳ ಅಭಿವೃದ್ಧಿಗೆ ಯೋಜನೆಯು ಪೂರಕವಾಗುವಂತೆ ಕಾರ್ಯನಿರ್ವಹಿಸುತ್ತಿದ್ದು ಪ್ರಮುಖವಾಗಿ ರೈತರಿಗೆ ಉದ್ಯೋಗ ಖಾತ್ರಿ ಯೋಜನೆಯು ಸಹಕಾರಿಯಾಗಿದೆ. ಪ್ರಸ್ತುತ ಬೇಸಿಗೆ ಪ್ರಾರಂಭವಾಗಿದ್ದು ಗ್ರಾಮೀಣ ಜನರಿಗೆ ನಿರಂತರ ಉದ್ಯೋಗ ಕೊಡವ ನಿಟ್ಟಿನಲ್ಲಿ ಯೋಜನೆಯು ಸಹಕಾರಿಯಾಗಿದ್ದು, ಕೆಲಸಕ್ಕಾಗಿ ಹತ್ತಿರದ ಗ್ರಾಮ ಪಂಚಾಯಿತಿ…

Read More

ಮಡಿಕೇರಿ ಮಾ.19 NEWS DESK : ಬೆಳ್ಳಿ ಮಹೋತ್ಸವದ ಹೊಸ್ತಿಲಲ್ಲಿರುವ ಕೊಡವ ಕೌಟುಂಬಿಕ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಪಾಲ್ಗೊಳ್ಳಲು ದಾಖಲೆಯ 396 ಕೊಡವ ಕುಟುಂಬ ತಂಡಗಳು ಹೆಸರು ನೋಂದಾಯಿಸಿಕೊAಡಿದ್ದು, ಇದೊಂದು ನೂತನ ದಾಖಲೆಯಾಗಿದೆ. ಈ ಬಾರಿ ಕೊಡವ ಕೌಟುಂಬುಕ ಹಾಕಿ ಉತ್ಸವದ ಜವಾಬ್ದಾರಿಯನ್ನು ಮುದ್ದಂಡ ಕುಟುಂಬ ವಹಿಸಿಕೊಂಡಿದ್ದು, ಪಂದ್ಯಾವಳಿ ಇದೇ ಮಾ.28 ರಿಂದ ಒಂದು ತಿಂಗಳ ಕಾಲ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎರಡು ಮೈದಾನ ಮತ್ತು ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ. ಕೌÀಟುಂಬಿಕ ಹಾಕಿ ಪಂದ್ಯಾವಳಿ ಸಮೀಪಿಸುತ್ತಿದ್ದು, ಇದಕ್ಕಾಗಿ ಭರದ ಸಿದ್ಧತೆಗಳು ನಡೆದಿದೆ. ಕಳೆದ ಸಾಲಿನ ಕುಂಡ್ಯೋಳ0ಡ ಕೊಡವ ಹಾಕಿ ಉತ್ಸವದಲ್ಲಿ 360 ತಂಡಗಳು ಪಾಲ್ಗೊಂಡಿದ್ದವು. ಈ ಬಾರಿ ಇದಕ್ಕೂ ಮಿಗಿಲಾಗಿ 36 ಹೆಚ್ಚುವರಿ ತಂಡಗಳು ಪಾಲ್ಗೊಳ್ಳುವ ಮೂಲಕ ಹಾಕಿ ಉತ್ಸವದ ಕಳೆ ಹೆಚ್ಚಿಸಲಿವೆ. ಕೊಡವ ಹಾಕಿ ಅಕಾಡೆಮಿಯ ಸಹಭಾಗಿತ್ವದಲ್ಲಿ ಮುದ್ದಂಡ ಕುಟುಂಬಸ್ಥರಿ0ದ ಆಯೋಜನೆಯಾಗುತ್ತಿರುವ ಹಾಕಿ ಪಂದ್ಯಾವಳಿಯ ‘ಕ್ರೀಡಾ ಜ್ಯೋತಿ’ಯ ಮೆರಥಾನ್ ಇದೇ ಮಾ.24 ರಿಂದ ಪಾಂಡAಡ…

Read More

ಮಡಿಕೇರಿ ಮಾ.19 NEWS DESK : ಡಾ.ಅಂಬೇಡ್ಕರ್ ಭವನದ ಆವರಣದಲ್ಲಿ ಪ್ರತಿಮೆ ಸ್ಥಾಪಿಸಬಾರದೆಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ನಗರಸಭಾ ಸದಸ್ಯ ಹೆಚ್.ಸಿ.ಸತೀಶ್, ಪ್ರಮುಖರಾದ ಪ್ರೇಂ ಕುಮಾರ್, ಎನ್.ವೀರಭದ್ರಯ್ಯ, ಡಿ.ಜೆ.ಈರಪ್ಪ, ಟಿ.ಎನ್.ಗೋವಿಂದಪ್ಪ, ಹೆಚ್.ಕೆ.ಪ್ರೇಮ ಕೃಷ್ಣಪ್ಪ, ನಾಗೇಂದ್ರ, ದಿಲೀಪ್ ಮತ್ತಿತರರು ಪ್ರತಿಭಟನೆಗೆ ಮುಂದಾದರು. ಈ ಸಂದರ್ಭ ಪೊಲೀಸ್ ಅಧಿಕಾರಿಗಳು ಮಧ್ಯ ಪ್ರವೇಶಿಸಿ ಭವನದ ಸುತ್ತ ನಿಷೇಧಾಜ್ಞೆ ವಿಧಿಸಿರುವುದರಿಂದ ಪ್ರತಿಭಟನೆಗೆ ಅವಕಾಶವಿಲ್ಲ ಎಂದರು. ಒಂದು ಹಂತದಲ್ಲಿ ಹೆಚ್.ಎಂ.ನಂದಕುಮಾರ್ ಹಾಗೂ ಹೆಚ್.ಸಿ.ಸತೀಶ್ ನಡುವೆ ಏಕವಚನದಲ್ಲಿ ಮಾತಿನ ಚಕಮಕಿ ನಡೆಯಿತು. ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಎಲ್.ದಿವಾಕರ್ ಹಾಗೂ ದಲಿತ ಸಂಘಟನೆಗಳ ಮುಖಂಡ ಟಿ.ಈ.ಸುರೇಶ್ ಅವರು ಡಾ.ಅಂಬೇಡ್ಕರ್ ಭವನದ ಎದುರು ಪ್ರತಿಮೆ ಸ್ಥಾಪನೆಗೆ ನಮ್ಮ ವಿರೋಧವಿದೆ. ಜಿಲ್ಲಾಡಳಿತ ಹಾಗೂ ನಗರಸಭೆ ಸೂಚಿಸುವ ಸ್ಥಳದಲ್ಲಿ ಪ್ರತಿಮೆ ನಿರ್ಮಾಣವಾಗಲಿ ಎಂದರು.

Read More

ಮಡಿಕೇರಿ ಮಾ.19 NEWS DESK : ಮಡಿಕೇರಿ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯ ಡಾ.ಅಂಬೇಡ್ಕರ್ ಭವನದ ಎದುರು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಇಂದು ಭೂಮಿಪೂಜೆ ನೆರವೇರಿತು. ಡಾ.ಅಂಬೇಡ್ಕರ್ ಭವನ ಸಮಿತಿಯ ಅಧ್ಯಕ್ಷ ಹೆಚ್.ಎಂ.ನಂದಕುಮಾರ್ ಅವರ ಅಧ್ಯಕ್ಷತೆಯಲ್ಲಿ ಭೂಮಿಪೂಜೆ ನೆರವೇರಿಸಿ ಯೋಜನೆಗೆ ಚಾಲನೆ ನೀಡಲಾಯಿತು. ಡಾ.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಗೊಳ್ಳಲಿದೆ. ಭೂಮಿಪೂಜೆ ನೆರವೇರಿಸಿ ಮಾತನಾಡಿದ ಹೆಚ್.ಎಂ.ನಂದಕುಮಾರ್, ಮುಂಬರುವ ಡಾ.ಅಂಬೇಡ್ಕರ್ ಜಯಂತಿಯೊಳಗೆ 15 ಅಡಿ ಎತ್ತರದ ಪೀಠದ ಮೇಲೆ 18 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದರು. ಕೆಲವು ಕಿಡಿಗೇಡಿಗಳು ಮಡಿಕೇರಿಯಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣವಾಗಬಾರದು ಎನ್ನುವ ದುರುದ್ದೇಶದಿಂದ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾನೂನು ಚೌಕಟ್ಟಿನಡಿ ಅವಲೋಕಿಸಿದರೆ ಪ್ರತಿಮೆ ನಿರ್ಮಾಣಕ್ಕೆ ಅಂಬೇಡ್ಕರ್ ಭವನದ ಜಾಗವೇ ಸೂಕ್ತವಾಗಿದೆ. ಸೌಹಾರ್ದತೆಯಿಂದ ಎಲ್ಲರೂ ಸೇರಿ ಪ್ರತಿಮೆ ನಿರ್ಮಿಸಬೇಕೆನ್ನುವುದು ನಮ್ಮ ಉದ್ದೇಶವಾಗಿದೆ. ಆದರೆ ಇದಕ್ಕೆ ಕೆಲವರು ಒಪ್ಪಿಗೆ ಸೂಚಿಸದೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ಅಡ್ಡಿ ಎದುರಾದರೂ…

Read More