ಮೈಸೂರು NEWS DESK ಜು.19 : ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರಿಗೆ “ಯೋಗ ಕೌಸ್ತುಭ” ಪ್ರಶಸ್ತಿ ಲಭ್ಯವಾಗಿದೆ. ಸುಮಾರು 41 ಅಧ್ಯಯನ ಕೃತಿಗಳ ರಚಿಸಿರುವ ರಮೇಶ್ ಉತ್ತಪ್ಪ ಅವರು ಮೈಸೂರು ಯೋಗದ ಕುರಿತು “ಯೋಗ ಸಂಗೀತ-ಮೈಸೂರು ಪರಂಪರೆ” ಎಂಬ ಕೃತಿ ಬರೆದಿದ್ದಾರೆ. ಇದರಲ್ಲಿ ಯೋಗಕ್ಕೆ ಮೈಸೂರಿನ ಕೊಡುಗೆ, ಹಿನ್ನೆಲೆ, ಯೋಗಾಚಾರ್ಯರು, ಮೈಸೂರು ಸಂಗೀತ ಪರಂಪರೆಯ ಸಂಶೋಧನಾತ್ಮಕ ವಿವರಗಳಿವೆ. ಮೈಸೂರು ಯೋಗ ಸ್ಫೋರ್ಟ್ಸ್ ಫೌಂಡೇಶನ್ ಹಾಗೂ ಮೈಸೂರು ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಘಟಿಕೋತ್ಸವದಲ್ಲಿ ಶನಿವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕ ಶ್ರೀವತ್ಸ, “ರಮೇಶ್ ಉತ್ತಪ್ಪ ಅವರು ಮೈಸೂರಿನ ಗಲ್ಲಿ ಹಾಗೂ ವೃತ್ತಗಳ ಕುರಿತು ಬರೆದ ಅಧ್ಯಯನ ಕೃತಿ ಅತ್ಯಂತ ಮಹತ್ವದ್ದು. ಅದೇ ರೀತಿ ಯೋಗ ಪರಂಪರೆ ಹಾಗೂ ದಸರಾ ಆನೆಗಳ ಕೃತಿ ಕೂಡ ಜನರ ಮೆಚ್ಚುಗೆ ಪಾತ್ರವಾಗಿವೆ. ಈ ಕೃತಿಗಳನ್ನು ದಸರಾ ಉನ್ನತ ಸಮಿತಿ ಸಭೆಯಲ್ಲಿ ತಾವು ಮುಖ್ಯಮಂತ್ರಿಗಳಿಗೆ…
ಲೇಖಕ: admin
ಮಡಿಕೇರಿ NEWS DESK ಜು.19 : ಪಂದ್ಯಂಡ ಬೆಳ್ಯಪ್ಪನವರ ಬದುಕು ಇಂದಿನ ಪೀಳಿಗೆ ಆದರ್ಶಪ್ರಾಯ ವಾಗಲಿ ಎಂದು ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಕರೆ ನೀಡಿದ್ದಾರೆ. ಪಂದ್ಯಂಡ ಬೆಳ್ಯಪ್ಪನವರ ಬದುಕು ಇಂದಿನ ಪೀಳಿಗೆ ಆದರ್ಶಪ್ರಾಯ ವಾಗಲಿ ಎಂದು ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಕರೆ ನೀಡಿದ್ದಾರೆ. ಅವರು ಯುನೈಟೆಡ್ ಕೊಡವ ಆರ್ಗನೈಸೇಷನ್ – ಯುಕೊ ಸಂಸ್ಥೆ ಆಯೋಜಿಸಿದ್ದ, ಕೊಡಗಿನ ಗಾಂಧಿ ಎಂದೇ ಖ್ಯಾತರಾಗಿದ್ದ, ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಪಂದ್ಯಂಡ ಬೆಳ್ಯಪ್ಪನವರ 60ನೇ ಪುಣ್ಯ ತಿಥಿಯ ಅಂಗವಾಗಿ ಗೋಣಿಕೊಪ್ಪಲು ಕೊಳ್ಳಿಮಾಡ ಕರುಂಬಯ್ಯ ಬಸ್ ನಿಲ್ದಾಣದಲ್ಲಿರುವ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಪಂದ್ಯಂಡ ಬೆಳ್ಯಪ್ಪನವರು ಕೊಡಗಿನಾದ್ಯಂತ ಮಾತ್ರವಲ್ಲದೆ ರಾಜ್ಯ ಹಾಗು ರಾಷ್ಟ್ರಮಟ್ಟದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾಗಿ ಗುರ್ತಿಸಿಕೊಂಡಿದ್ದ ಧೀಮಂತ ನಾಯಕರಾಗಿದ್ದರು. ಇವರ ತ್ಯಾಗ, ಆದರ್ಶಗಳು ಇಂದಿನ ಹಾಗು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗ ಬೇಕು ಎಂದು ಹೇಳಿದರು. ಕೊಡಗಿನಿಂದ ಸುಮಾರು ಮುನ್ನೂರಕ್ಕೂ ಅಧಿಕ ಸ್ವಾತಂತ್ರ್ಯ ಹೋರಾಟಗಾರರು, ನೂರಕ್ಕೂ…
ಸೋಮವಾರಪೇಟೆ NEWS DESK ಜು.19 : ಅಂಬೇಡ್ಕರ್ ಸಮುದಾಯ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಸಾಮಾನ್ಯ ಸಭೆಯು ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾದ ಶ್ರೀ ಸಂತೋಷ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಸಂಘಟನೆಯ ತತ್ವ–ಸಿದ್ಧಾಂತಗಳು, ಶಿಸ್ತು, ಸಮಯಪಾಲನೆ, ನಾಡು-ನುಡಿ, ನೆಲ-ಜಲ, ಗಡಿ ರಕ್ಷಣೆ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡ ಶಾಲೆಗಳ ಉಳಿವಿನ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಜೊತೆಗೆ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದ ವಿಷಯವಾಗಿ ಮನವಿ ಸಲ್ಲಿಸಿ, ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು. ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಜಿಲ್ಲಾ, ತಾಲ್ಲೂಕು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳಿಗೆ ಆದೇಶ ಪ್ರತಿಗಳನ್ನು ವಿತರಿಸಲಾಯಿತು. *ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು* ರಾಜೇಶ್ – ಜಿಲ್ಲಾ ಉಪಾಧ್ಯಕ್ಷರು (ಕುಶಾಲನಗರ ವಿಭಾಗ), ಕೃಷ್ಣ – ಜಿಲ್ಲಾ ಟೈಲರ್ಸ್ ಘಟಕದ ಅಧ್ಯಕ್ಷರು, ಮಂಜಯ್ಯ – ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರು, ಸುಪ್ರಿತಾ ಕರುಣಾಕರ – ಜಿಲ್ಲಾ ಉಪಾಧ್ಯಕ್ಷರು (ಸೋಮವಾರಪೇಟೆ ವಿಭಾಗ), ಪೂರ್ಣಿಮಾ – ಜಿಲ್ಲಾ ಕಾರ್ಯದರ್ಶಿ (ಸೋಮವಾರಪೇಟೆ ವಿಭಾಗ), ನಾಗರಾಜ್ – ಜಿಲ್ಲಾ ಕಾರ್ಯದರ್ಶಿ (ಸೋಮವಾರಪೇಟೆ ವಿಭಾಗ), ಜಮೀರ್…
ಮಡಿಕೇರಿ NEWS DESK ಜು.19 : ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ, ಸೇವಾ ಮನೋಭಾವ ಮತ್ತು ರಾಷ್ಟ್ರಪ್ರೇಮ ಬೆಳೆಸುವಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಪ್ರತಿಯೊಂದು ಶಾಲೆ ಹಾಗೂ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ದಳಗಳ ನೋಂದಣಿ ಕಡ್ಡಾಯವಾಗಿ ನಡೆಯಬೇಕು ಎಂದು ಜಿಲ್ಲಾ ಆಯುಕ್ತೆ ಬೇಬಿ ಮ್ಯಾಥ್ಯೂ ಹೇಳಿದರು. ಅವರು ಮಡಿಕೇರಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅವರ ಅಧ್ಯಕ್ಷತೆಯಲ್ಲಿ ನಡೆದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಯಲ್ಲಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್ ಆರ್.ಪಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಮಹಾಸಭೆಯ ನಡವಳಿಕೆಯನ್ನು ಸಭೆಯ ಮುಂದಿಟ್ಟರು. ಬಳಿಕ ಉಪಾಧ್ಯಕ್ಷೆ ನೀಲಮ್ಮ ಅವರು 2025–26ನೇ ಸಾಲಿನಲ್ಲಿ ಹಮ್ಮಿಕೊಳ್ಳಲಾದ ವಿವಿಧ ಶೈಕ್ಷಣಿಕ, ಸಾಮಾಜಿಕ ಹಾಗೂ ಸೇವಾ ಕಾರ್ಯಕ್ರಮಗಳ ವರದಿಯನ್ನು ಮಂಡಿಸಿದರು. ನಂತರ ಖಜಾಂಚಿ ಶಾಂತಿ ಅವರು ವಾರ್ಷಿಕ ಆದಾಯ–ವೆಚ್ಚದ…
ಮಡಿಕೇರಿ NEWS DESK ಜು.19 : ದಕ್ಷಿಣ ಭಾರತದ ಜೀವನದಿ ಎಂದೇ ಖ್ಯಾತವಾಗಿರುವ ಕಾವೇರಿಯ ಸನ್ನಿಧಿ ಭಾಗಮಂಡಲದ ಮೇಲ್ಸೇತುವೆ ಹಾಗೂ ಸುತ್ತಮುತ್ತಲಿನ ಅಭಿವೃದ್ಧಿ ಕಾಮಗಾರಿಗೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಕೋರಿಕೆ ಮೇರೆಗೆ ಕಾವೇರಿ ನೀರಾವರಿ ನಿಗಮದಿಂದ 3 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕೃಯೆ ಪೂರ್ಣಗೊಂಡು ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದಿಂದ ಮಾಹಿತಿ ಲಭ್ಯವಾಗಿದೆ. ಮೇಲ್ಸೇತುವೆ ಆವರಣದ ಸುಧಾರಣೆಗಳು, ನೀರು ಹರಿಯುವ ಪೈಪ್ ಗಳ ಸುಧಾರಣೆ, ಮೇಲ್ಸೇತುವೆ ಕೆಳಗೆ ಕಾಂಕ್ರೀಟ್ ಕಾಮಗಾರಿ, ಕನ್ನಿಕೆ ನದಿಗೆ ಪಾದಚಾರಿ ಸೇತುವೆ, ಕಾವೇರಿ ನದಿಗೆ ಪಾದಚಾರಿ ಸೇತುವೆ ಕಾಮಗಾರಿಗಳು ಉಲ್ಲೇಖಿತ ಅನುದಾನದಲ್ಲಿ ನಡೆಯಲಿದ್ದು ಬೆಂಗಳೂರಿನ ಪ್ರಥಮ ದರ್ಜೆ ಗುತ್ತಿಗೆದಾರ ಕೆ.ರೋಹಿತ್ ರವರು ಗುತ್ತಿಗೆ ಪಡೆದಿದ್ದು 2026 ರ ಅಕ್ಟೋಬರ್ ಅಂತ್ಯದ ಒಳಗೆ ಕಾಮಗಾರಿ ಪೂರ್ಣಗೊಳಿಸಿ ಹಸ್ತಾಂತರ ಮಾಡುವಂತೆ ನಿಗಮದ ಆದೇಶದಲ್ಲಿ ಸೂಚಿಸಲಾಗಿದೆ.
ಮಡಿಕೇರಿ NEWS DESK ಜು.18 : ಸಮಾಜದಲ್ಲಿ ಆದಿವಾಸಿಗಳು ಇತರರಂತೆ ಬದುಕು ಕಟ್ಟಿಕೊಳ್ಳುವತ್ತ ಮನಸ್ಸು ಮಾಡಬೇಕು. ಆ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುವತ್ತ ಗಮನಹರಿಸಬೇಕು. ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸದಿಂದ ವಂಚಿತರಾಗಬಾರದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ಕರೆ ನೀಡಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ತೆರಾಲು, ಬಿರುನಾಣಿ, ಮರೆನಾಡು ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ಕಾರ್ಮಿಕರ ಹಕ್ಕುಗಳ ಸಂಬAಧ ಜಾಗೃತಿ ಮೂಡಿಸಿದ ಶುಭ ಅವರು ಮಕ್ಕಳನ್ನು ಕಡ್ಡಾಯವಾಗಿ ಹತ್ತಿರದ ಶಾಲೆಗಳಿಗೆ ಕಳುಹಿಸುವಂತಾಗಬೇಕು. ಜೊತೆಗೆ 5 ನೇ ಮತ್ತು 6ನೇ ತರಗತಿಯಿಂದ ವಿದ್ಯಾರ್ಥಿ ನಿಲಯ ಹಾಗೂ ವಸತಿ ನಿಲಯ ಸೌಲಭ್ಯವಿದ್ದು, ಇವುಗಳನ್ನು ಬಳಸಿಕೊಂಡು ಶಿಕ್ಷಣಕ್ಕೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದರು. ಕಾರ್ಮಿಕರಿಗಾಗಿ ಸರ್ಕಾರದಿಂದ ಹಲವು ಕಾರ್ಯಕ್ರಮಗಳಿದ್ದು, ಪ್ರಮುಖವಾಗಿ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ದನ್ ಯೋಜನೆ, ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ಯೋಜನೆ, ಅಸಂಘಟಿತ ವರ್ಗದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ…
ಮಡಿಕೇರಿ NEWS DESK ಜು.18 : ಕೇಂದ್ರ ಗೃಹ ಸಚಿವಾಲಯದ ವ್ಯಾಪ್ತಿಗೆ ಒಳಪಡುವ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ನಲ್ಲಿ ಇನ್ಸ್ ಪೆಕ್ಟರ್ ಆಗಿ ಕೊಡಗಿನ ಕೆ.ದೇವಮ್ಮ ಬಡ್ತಿ ಹೊಂದಿದ್ದಾರೆ. ದೇವಮ್ಮ ಅವರು 1992ರಲ್ಲಿ ಆರ್‌ಎಎಫ್‌ಗೆ ಆಯ್ಕೆಯಾಗಿದ್ದು, ಇವರು ಹೈದರಾಬಾದ್‌ನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪ್ರಸ್ತುತ ಭಾರತದ ಪಶ್ಚಿಮ ಗಡಿಯ ಮಣಿಪುರ ರಾಜ್ಯದ ಮೋರೆಯ ಮಯನ್ಮಾರ್ ಗಡಿಯಲ್ಲಿ ಕರ್ತವ್ಯದಲ್ಲಿದ್ದಾರೆ. ಮಡಿಕೇರಿ ತಾಲ್ಲೂಕು ಕಾಟಕೇರಿ ಗ್ರಾಮದ ಪೈಕೇರ ಮೇದಪ್ಪ, ನಂಜಮ್ಮ ದಂಪತಿಯ ಪುತ್ರಿ ದೇವಮ್ಮ ಅವರು ಕುಟ್ಟಮಣಿಯನ ಮೋಹನ್ ಅವರ ಪತ್ನಿಯಾಗಿದ್ದಾರೆ.
ಬೆಂಗಳೂರು NEWS DESK ಜು.18 : ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಅವರು ನಿಧನರಾದರು. ಕಳೆದ ಕೆಲವು ದಿನಗಳಿಂದ ಉಸಿರಾಟದ ತೊಂದರೆಯಿAದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಇಹಲೋಕ ತ್ಯಜಿಸಿದರು. ಹೆಚ್.ಡಿ.ದೇವೇಗೌಡ ಹಾಗೂ ಚೆನ್ನಮ್ಮ ಅವರು 1954ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆರು ಮಕ್ಕಳನ್ನು ಹೊಂದಿದ್ದ ಚೆನ್ನಮ್ಮ ಅವರು ಹೆಚ್.ಡಿ.ದೇವೇಗೌಡರ ಯಶಸ್ಸಿನ ಮೂಲಶಕ್ತಿಯಾಗಿದ್ದರು, ದೈವ ಭಕ್ತಿಗೂ ಹೆಸರಾಗಿದ್ದರು.
ಮಡಿಕೇರಿ NEWS DESK ಜು.17:-ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ ಮನೆ ದಾಖಲೆ ಪರಿಶೀಲನಾ ಕಾರ್ಯವು ಈಗಾಗಲೇ ಆರಂಭಗೊಂಡಿದೆ. ಸೆಸ್ಕ್ ವ್ಯಾಪ್ತಿಯ ನೌಕರರು ಗ್ರಾಹಕರ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದಾರೆ. ಗೃಹಜ್ಯೋತಿ ಯೋಜನೆಯ ಅರ್ಹತೆ ಮರುಪರಿಶೀಲಿಸುವ ಉದ್ದೇಶದಿಂದ ಇಂಧನ ಇಲಾಖೆ ಈ ಮಹತ್ವದ ಕಾರ್ಯಕ್ಕೆ ಮುಂದಾಗಿದೆ. ಗ್ರಾಹಕರ ಮೂಲ ದಾಖಲೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಬಳಿಕ ವಿಶೇಷ ಮೊಬೈಲ್ ಆಪ್ ಹಾಗೂ ಅಧಿಕೃತ ಘೋಷಣಾ ಪತ್ರದ ಮೂಲಕ ಹೊಸದಾಗಿ ಮಾಹಿತಿ ಸಂಗ್ರಹಿಸಿ ಅರ್ಜಿ ಭರ್ತಿ ಮಾಡುವ ಪ್ರಕ್ರಿಯೆಯನ್ನು ಸ್ಥಳದಲ್ಲಿಯೇ ಪೂರ್ಣಗೊಳಿಸುತ್ತಿದ್ದಾರೆ. ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲಿಯೇ ತಪಾಸಣೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಸಾರ್ವಜನಿಕರು ಸೆಸ್ಕ್ ಸಿಬ್ಬಂದಿಗೆ ಮಾಹಿತಿ ನೀಡುತ್ತಿದ್ದಾರೆ. ಮನೆ ಮನೆಗೆ ಭೇಟಿ ಸಂದರ್ಭದಲ್ಲಿ ಫಲಾನುಭವಿಗಳು ಆಧಾರ್ ಕಾರ್ಡ್ ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ ಪಾನ್ ಕಾರ್ಡ್, ರೇಷನ್ ಕಾರ್ಡ್, ಪಡಿತರ ಚೀಟಿ ಮತ್ತಿತರ ದಾಖಲೆಗಳನ್ನು ನೀಡಿ…
ಮಡಿಕೇರಿ NEWS DESK ಜು.17 : ಸಂಪಾಜೆ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡು ಕೋಣ ಬೇಟೆಯಾಡಿ ಅದರ ಮಾಂಸ ಸಾಗಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಜೀಪಿನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ಗುಂಡು ಹಾರಿಸಿದ ಸಂದರ್ಭ ಜೀಪಿನಲ್ಲಿದ್ದ ಇಬ್ಬರು ಆರೋಪಿಗಳು ಗಾಯಗೊಂಡ ಘಟನೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದ ಯಾಕೂಬ್ ಹಾಗೂ ಜುಬೇರ್ ಗಾಯಗೊಂಡ ಆರೋಪಿಗಳಾಗಿದ್ದಾರೆ. ಜೀಪನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ ಸಂದರ್ಭ 266 ಕೆ.ಜಿ ಕಾಡು ಕೋಣದ ಮಾಂಸ, ಕತ್ತಿ, 4 ಜೀವಂತ ಕಾಡತೂಸು ಮತ್ತು ಚಾಕುಗಳು ಪತ್ತೆಯಾಗಿವೆ. ಸಂಪಾಜೆ ವ್ಯಾಪ್ತಿಯಲ್ಲಿ ವನ್ಯಜೀವಿಯನ್ನು ಹತ್ಯೆ ಮಾಡಿ ಅದರ ಮಾಂಸವನ್ನು ವಾಹನದಲ್ಲಿ ಸಾಗಿಸುತ್ತಿರುವ ಬಗ್ಗೆ ಗುರುವಾರ ರಾತ್ರಿ ಮಡಿಕೇರಿ ವಲಯ ಅರಣ್ಯ ಇಲಾಖೆಗೆ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಮಡಿಕೇರಿ-ಬೆಟ್ಟತ್ತೂರು ರಸ್ತೆಯ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ರಾತ್ರಿ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾದು ಕುಳಿತಿದ್ದರು. ಈ ಸಂದರ್ಭ…






