ಮಡಿಕೇರಿ NEWS DESK ಮಾ.18 : ಮಡಿಕೇರಿ ನಗರದ ಮಲ್ಲಿಕಾರ್ಜುನ ನಗರ ಬಡಾವಣೆಯ ಶ್ರೀಕೋದಂಡ ರಾಮ ದೇವಾಲಯದಲ್ಲಿ ಏ.5 ಮತ್ತು 6ರಂದು ರಾಮೋತ್ಸವ ಅದ್ದೂರಿಯಾಗಿ ನಡೆಯಲಿದೆ. ಶ್ರೀಕೋದಂಡ ರಾಮೋತ್ಸವ ಸಮಿತಿಯ ಕಳಶ ಸಮಿತಿಯ ಅಧ್ಯಕ್ಷರಾಗಿ ಲಿಖಿತ ಸುರೇಂದ್ರ ನೇಮಕಗೊಂಡಿದ್ದಾರೆ. ಎರಡು ದಿನಗಳ ಕಾಲ ವಿಜೃಂಭಣೆಯ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಲೇಖಕ: admin
ಗುಂಡ್ಲುಪೇಟೆ NEWS DESK ಮಾ.18 : ಮದವೇರಿದ ಸಾಕಾನೆಯೊಂದು ಮಾವುತನ ಮೇಲೆ ದಾಳಿ ಮಾಡಲು ಯತ್ನಿಸಿ, ನಡು ರಸ್ತೆಯಲ್ಲೇ ಅಡ್ಡಾಡಿ ವಾಹನ ಚಾಲಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ಬಂಡೀಪುರದಲ್ಲಿ ನಡೆದಿದೆ. ರಾಂಪುರ ಸಾಕಾನೆ ಶಿಬಿರದ ರೋಹಿತ್ ನನ್ನು ವಿಶೇಷ ತರಬೇತಿಗಾಗಿ ಬಂಡೀಪುರಕ್ಕೆ ಕರೆ ತರಲಾಗಿತ್ತು. ಈ ಸಂದರ್ಭ ಮದವೇರಿದ ರೋಹಿತ್ ಮಾವುತ ವೆಂಕಟೇಶ್ ಮೇಲೆ ಮೊದಲು ದಾಳಿ ಮಾಡಲು ಯತ್ನಿಸಿದೆ. ಈ ಸಂದರ್ಭ ಸಣ್ಣಪುಟ್ಟ ಗಾಯಕ್ಕೊಳಗಾದ ವೆಂಕಟೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಯಾರ ನಿಯಂತ್ರಣಕ್ಕೂ ಬಾರದ ಕಾಡಾನೆ ನಡುರಸ್ತೆಯಲ್ಲೇ ಅಡ್ಡಾಡಿ ಆತಂಕ ಸೃಷ್ಟಿಸಿತು. ದ್ವಿಚಕ್ರ ವಾಹನ ಚಾಲಕರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆಯೂ ನಡೆಯಿತು. ರೋಹಿತ್ ಅರಣ್ಯಕ್ಕೆ ನುಸುಳಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ನಿಗಾ ವಹಿಸಿದ್ದಾರೆ.
ವಿರಾಜಪೇಟೆ NEWS DESK ಮಾ.18 : ಧಾರವಾಡದ ಚೇತನ ಫೌಂಡೇಶನ್ ಕರ್ನಾಟಕದ ಆಶ್ರಯದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ.) ಕರ್ನಾಟಕ ಇವರ ಸಹಯೋಗದಲ್ಲಿ ಮೈಸೂರಿನ ವಿಜಯನಗರದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದ ಸಭಾಂಗಣದಲ್ಲಿ ನಡೆದ ಮೈಸೂರು ನುಡಿ ಸಡಗರ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಭರತನಾಟ್ಯ ಕಲಾವಿದೆ ದಿಥ್ಯ ಕೆ.ಪಿ ಅವರಿಗೆ ಕನ್ನಡ ಮಾಣಿಕ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿರಾಜಪೇಟೆಯ ವಿನಾಯಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ಓದುತ್ತಿರುವ ಕು. ದಿಥ್ಯ ಕೆ.ಪಿ. ಅವರು ನಾಟ್ಯಾಂಜಲಿ ನೃತ್ಯ ಶಾಲೆಯಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾಳೆ. ಈಕೆ ವಿರಾಜಪೇಟೆಯ ಚಿಕ್ಕಪೇಟೆಯ ನಿವಾಸಿಗಳಾಗಿರುವ ಕೆ.ಪಿ.ಪ್ರಥ್ವಿಕುಮಾರ್ ಹಾಗೂ ಭವ್ಯ ಅವರ ಪುತ್ರಿ. ಕೊಂಪುಳೀರ ಪಳಂಗಪ್ಪ ಹಾಗೂ ತಾರಾಮಣಿಯವರ ಮೊಮ್ಮಗಳು.
ಮಡಿಕೇರಿ NEWS DESK ಮಾ.18 : ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನವಾದ ಮಾ.21ರಂದು ಶಾಂತಿಯುತ ಸತ್ಯಾಗ್ರಹ ನಡೆಸಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಿರ್ಧರಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಶುಕ್ರವಾರ ಬೆಳಿಗ್ಗೆ 10.30 ಗಂಟೆಯಿಂದ 11.30 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸತ್ಯಾಗ್ರಹ ನಡೆಸಿ ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯವನ್ನು ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ. ಆದಿಮಸಂಜಾತ ಕೊಡವ ಜನಾಂಗವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಎಂದು ಗುರುತಿಸಬೇಕು. ಸಿಕ್ಕಿಂನಲ್ಲಿ ಬೌದ್ಧ ಸನ್ಯಾಸಿಗಳಿಗೆ ಮೀಸಲಾದ “ಸಂಘ” ಕ್ಷೇತ್ರದಂತೆಯೇ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರಾತಿನಿಧ್ಯ ನೀಡಬೇಕು. ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಕೊಡವರ ಹಕ್ಕುಗಳನ್ನು ಪರಿಗಣಿಸಬೇಕು. ಬ್ರಿಟಿಷರು, ಹೊರಗಿನ ರಾಜರು ಮತ್ತು ಆಡಳಿತ ವ್ಯವಸ್ಥೆ ವಶಪಡಿಸಿಕೊಂಡ ಅಥವಾ ಹೊರಗಿನವರಿಗೆ ಮಾರಾಟ ಮಾಡಿದ ಪೂರ್ವಜರ ಕೊಡವ ಭೂಮಿಯನ್ನು ಮರಳಿಸಬೇಕು. ಭಾರತೀಯ ಸಂವಿಧಾನದ 8ನೇ ಶೆಡ್ಯೂಲ್‌ನಲ್ಲಿ ಕೊಡವ ಭಾಷೆಯನ್ನು ಸೇರಿಸಬೇಕು. 4,500 ವರ್ಷಗಳ ಶ್ರೀಮಂತ…
ಕುಶಾಲನಗರ NEWS DESK ಮಾ.18 : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ಮತ್ತು ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ಅಪಪ್ರಚಾರ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಸತ್ಯಕ್ಕೆ ದೂರವಾದ ಆರೋಪಗಳ ಮೂಲಕ ಕೆಲವು ವ್ಯಕ್ತಿಗಳು ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯತೆಯನ್ನು ಕೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಿದ್ದಾರೆ. ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ನ ಕೊಡಗು ಜಿಲ್ಲಾ ಅಧ್ಯಕ್ಷ ಅಭಿಮನ್ಯು ಕುಮಾರ್, ಉಪಾಧ್ಯಕ್ಷ ರಂಗಸ್ವಾಮಿ ಮತ್ತಿತರರು ಹಾಜರಿದ್ದರು.
ಮಡಿಕೇರಿ ಮಾ.18 NEWS DESK : ಜಿಲ್ಲಾಡಳಿತ ಸೂಚಿಸಿದ ಸ್ಥಳವನ್ನು ಹೊರತುಪಡಿಸಿ ಪ್ರತ್ಯೇಕ ಸ್ಥಳದಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ನಿರ್ಮಿಸಲು ಕೆಲವರು ಮುಂದಾಗಿದ್ದು, ಇದು ಖಂಡನೀಯವೆಂದು ಡಾ.ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋರಾಟ ಸಮಿತಿಯ ಉಪಾಧ್ಯಕ್ಷ ಟಿ.ಎನ್.ಗೋವಿಂದಪ್ಪ ಅವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡುವ ಸಲುವಾಗಿ ಈಗಾಗಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಜಿಲ್ಲಾಡಳಿತ ಹಾಗೂ ನಗರಸಭೆಯ ಸೂಚನೆಗೆ ವಿರುದ್ಧವಾಗಿ ಪ್ರತ್ಯೇಕ ಸ್ಥಳದಲ್ಲಿ ಪ್ರತಿಮೆ ನಿರ್ಮಿಸಲು ಪ್ರಭಾವಿ ರಾಜಕರಣಿಯೊಬ್ಬರು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಡಾ.ಅಂಬೇಡ್ಕರ್ ಭವನದ ಗೊಂದಲ ಬಗೆಹರಿಯುವ ಮೊದಲೇ ಅದೇ ಸ್ಥಳದಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡಲು ಹೊರಟಿರುವುದು ಸರಿಯಲ್ಲ. ಡಾ.ಅಂಬೇಡ್ಕರ್ ಭವನದಲ್ಲಿ ವಿವಾಹ, ಸಮಾರಂಭ, ಸಭೆಗಳು ನಿರಂತರವಾಗಿ ನಡೆಯುತ್ತಿರುತ್ತವೆ. ಕಾರ್ಯಕ್ರಮದಲ್ಲಿ ಮದ್ಯ, ಮಾಂಸ ಬಳಕೆ ಮಾಡಲಾಗುತ್ತದೆ. ಭವನದ ಮುಂಭಾಗ ಪ್ರತಿಮೆ ನಿರ್ಮಾಣ ಮಾಡಿದರೆ ಡಾ.ಅಂಬೇಡ್ಕರ್ ಅಪಮಾನ ಮಾಡಿದಂತಾಗುತ್ತದೆ ಎಂದರು. ಜಿಲ್ಲೆಯ 37…
ಮಡಿಕೇರಿ ಮಾ.18 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಪ್ರಯತ್ನದಿಂದಾಗಿ ಭಾಗಮಂಡಲ-ಕರಿಕೆಗೆ ತೆರಳುವ ಮಾರ್ಗದ ಆಯ್ದ ಭಾಗಗಳಲ್ಲಿ S-ತಿರುವಿನಿಂದ ಆರಂಭಗೊಂಡು ಸುಮಾರು 7 ಕಿ.ಮೀ ನಷ್ಟು ರಸ್ತೆಯ ಪುನರ್ ನಿರ್ಮಾಣ ಕಾಮಗಾರಿಯನ್ನು, ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಕ್ರಮದ (SHDP) ಅಡಿಯಲ್ಲಿ ಕೈಗೊಳ್ಳಲಾಗಿದ್ದು, ಕಾಮಗಾರಿಯು ಈಗಾಗಲೇ ಆರಂಭಗೊಂಡಿದೆ. ಅತಿ ಶೀಘ್ರದಲ್ಲಿ ಮುಕ್ತಾಯವಾಗಿ ಈ ಭಾಗದಲ್ಲಿ ಓಡಾಡುವ ವಾಹನ ಸವಾರರಿಗೂ ಹಾಗೂ ಸಾರ್ವಜನಿಕರಿಗೂ ಅನುಕೂಲ ಆಗಲಿದೆ ಎಂದು ಸ್ಥಳೀಯರು ಪ್ರಸಂಶೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಮಾ.18 NEWS DESK : ಮಡಿಕೇರಿ ನಗರದ ಅಶೋಕಪುರದ ಡಾ.ಅಂಬೇಡ್ಕರ್ ಭವನದ ಸಮೀಪ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಡಾ.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸಮಿತಿ ಮುಂದಾಗಿದ್ದು, ಈ ಯೋಜನೆಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕೆಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಹಾಗೂ ಅಶೋಕಪುರ ಸಮಿತಿಯ ಸದಸ್ಯ ಹೆಚ್.ಎನ್.ಯೋಗೇಶ್ ಕುಮಾರ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಡಾ.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಯಾಗಿದೆ, ಆದರೆ ಕೊಡಗು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಪ್ರತಿಮೆ ನಿರ್ಮಿಸಿ ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸುವ ಕಾರ್ಯವನ್ನು ಯಾರೂ ಮಾಡಿರಲಿಲ್ಲ. ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರದಲ್ಲಿ ಡಾ.ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಲು ಪ್ರತಿಮೆ ನಿರ್ಮಾಣ ಸಮಿತಿ ಹಾಗೂ ಡಾ.ಅಂಬೇಡ್ಕರ್ ಭವನ ಸಮಿತಿಯ ಅಧ್ಯಕ್ಷ ಹೆಚ್.ಎಂ.ನಂದಕುಮಾರ್ ಅವರು ಮುಂದಾಗಿದ್ದು, ಇದು ಸ್ವಾಗತಾರ್ಹ ಕ್ರಮವಾಗಿದೆ ಎಂದು ತಿಳಿಸಿದ್ದಾರೆ. ದೇಶದ ಸಮಗ್ರತೆ ಮತ್ತು ಏಕತೆಗೆ ಕಾರಣಕರ್ತರಾದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು…
ಮಡಿಕೇರಿ ಮಾ.18 NEWS DESK : ಒಬ್ಬ ಮಹಿಳಾ ವಿದ್ಯಾವಂತಳಾದರೆ ಆಕೆಯ ಮನೆಯಲ್ಲಿ ಆರೋಗ್ಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವಾತಾವರಣ ನಿರ್ಮಾಣ ಆಗಿರುತ್ತದೆ ಎಂದು ಕೃಪಾ ದೇವರಾಜ್ ಅಭಿಪ್ರಾಯಪಟ್ಟರು. ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ನೆಹರು ಯುವ ಕೇಂದ್ರದ ಸಹಯೋಗದೊಂದಿಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತಾನಾಡಿದರು. ಸಮಾನತೆಯ ಪ್ರತಿಪಾದನೆಗಾಗಿ ಅಂತರಾಷ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇದಕ್ಕೆ ಮೊದಲ ರಾಜ್ಯಪಾಲರಾಗಿದ್ದ ಸರೋಜಿನಿ ನಾಯ್ದು ಜನ್ಮ ದಿನವಾದ ಫೆ.13ಕ್ಕೆ ಭಾರತದಲ್ಲಿ ಮಹಿಳಾ ದಿನ ಆಚರಿಸಲಾಗುತಿತ್ತು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಮಾತನಾಡಿ, ಮಹಿಳಾ ದಿನಾಚರಣೆ ಎಂದರೆ ಇದೊಂದು ಬರೀ ಸಂಭ್ರಮ ಎಂದು ಭಾವಿಸದೇ ಪ್ರಗತಿ, ಸಮೃದ್ಧಿಯ ಇನ್ನೊಂದು ಮುಖ ಎಂದು ಪರಿಗಣಿಸಬೇಕು ಎಂದರು. ನೆಹರು ಯುವ ಕೇಂದ್ರದ ರಂಜಿತಾ, ಕಾಲೇಜಿನ ವಾಣಿಜ್ಯ ಶಾಸ್ತ್ರ ಸಹ ಪ್ರಾಧ್ಯಾಪಕರಾದ ನಮಿತ…
ಮಡಿಕೇರಿ ಮಾ.18 NEWS DESK : ಜಿಲ್ಲೆಯಲ್ಲಿ ಮತದಾರರ ಪಟ್ಟಿ ಹಾಗೂ ಇತರೆ ಚುನಾವಣಾ ವಿಷಯಗಳ ಕುರಿತು ಚರ್ಚಿಸುವ ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸುದೀರ್ಘ ಚರ್ಚೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಮಾತನಾಡಿದ ಅವರು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ 2024 ರ ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ಮಾಹೆಯಲ್ಲಿ ಕೈಗೊಂಡು ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು 2025 ರ ಜ.6 ರಂದು ಪ್ರಕಟಿಸಲಾಗಿದೆ ಎಂದರು. ‘ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ ಒಟ್ಟು 552 ಮತಗಟ್ಟೆಗಳು ಇದ್ದು, ಜಿಲ್ಲೆಯಲ್ಲ್ಲಿ ಒಟ್ಟು 4,74,376 ಮಂದಿ ಮತದಾರರು ಇದ್ದಾರೆ. ಇದರಲ್ಲಿ 2,32,042 ಮಂದಿ ಪುರುಷ ಮತದಾರರು, 2,42,321 ಮಂದಿ ಮಹಿಳಾ ಮತದಾರರು ಮತ್ತು 13 ಇತರೆ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ವಿವರಿಸಿದರು. ಪ್ರಸ್ತುತ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ನಮೂನೆ-6…






