ಲೇಖಕ: admin

ಮಡಿಕೇರಿ ಮಾ.17 NEWS DESK : ವಿವಿಧ ಬೇಡಿಕೆಗಳನ್ನು ಈಡೇಸುವಂತೆ  ವಿರಾಜಪೇಟೆ ಪುರಸಭೆಯ ಗುತ್ತಿಗೆ ನೌಕರರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪುರಸಭೆ ಸದಸ್ಯ ಪಟ್ಟಡ ರಂಜಿ ಪೂಣ್ಣಚ್ಚ ಅವರ ನೇತೃತ್ವದಲ್ಲಿ, ಶಾಸಕರ ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿದ ಪುರಸಭೆ ಪೌರಕಾರ್ಮಿಕರು, ಪುರಸಭೆ ಪೌರಕಾರ್ಮಿಕರ ಹಲವು ಬೇಡಿಕೆಗಳ ಮನವಿ ಪತ್ರವನ್ನು ಶಾಸಕರಿಗೆ ಸಲ್ಲಿಸಿ, ತಮ್ಮ ಬೇಡಿಕೆಗಳನ್ನು ಶೀಘ್ರ ಬಗೆಹರಿಸುವಂತೆ ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಶಾಸಕರು, ಕಾರ್ಮಿಕರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ  ಭರವಸೆ ನೀಡಿದರು.

Read More

ಮಡಿಕೇರಿ ಮಾ.17 NEWS DESK : ಸ್ಮಶಾನದ ಜಾಗದಲ್ಲಿ ಗಾಂಜಾ ಬೆಳೆಸಿದ್ದ ಆರೋಪಿಯನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. 1 ಕೆ.ಜಿ 730 ಗ್ರಾಂ ತೂಕದ 19 ಹಸಿ ಗಾಂಜಾ ಗಿಡಗಳೊಂದಿಗೆ ಹೇರೂರು ಗ್ರಾಮದ ನಿವಾಸಿ ಪ್ರಶಾಂತ್ (29) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಕುಶಾಲನಗರದ ಶೈಲಜಾ ಬಡವಾಣೆಯಲ್ಲಿರುವ ಸ್ಮಶಾನದ ಜಾಗದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದರು. ಸೋಮವಾರಪೇಟೆ ಡಿವೈಎಸ್‍ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ಪಿಐ ಪ್ರಕಾಶ್.ಬಿ.ಜಿ, ಪಿಎಸ್‍ಐ ಗೀತಾ ಸಿಬ್ಬಂದಿಗಳು ಹಾಗೂ ಡಿಸಿಆರ್‍ಬಿ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು. ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ಮಾದಕ ವಸ್ತು ಮಾರಾಟ ಮತ್ತು ಸೇವನೆಯ ಕುರಿತು ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Read More

ಸೋಮವಾರಪೇಟೆ ಮಾ.17 NEWS DESK : ಕುಮಾರಳ್ಳಿ ಶ್ರೀ ಸಬ್ಬಮ್ಮ ಭದ್ರಕಾಳಿ ದೇವಿಯ ಪ್ರಧಾನ ಶಿಲಾ ಪ್ರತಿಮೆ ಪ್ರತಿಷ್ಠಾಪನೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಹೆದ್ದೇವರ ಗುಡಿಯಲ್ಲಿ ಗಣಪತಿ ಪ್ರಾರ್ಥನೆ ನೆರವೇರಿಸಿ, ಶ್ರೀ ಸಬ್ಬಮ್ಮ ಬನದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ನಂತರ ಪ್ರಸಾದ ವಿತರಿಸಲಾಯಿತು. ಮರುದಿನ ಹೆದ್ದೇವರ ಗುಡಿಯಿಂದ ಸಬ್ಬಮ್ಮ ಸುಗ್ಗಿ ಬನದ ವರೆಗೆ 160 ಕಳಸಗಳನ್ನು ಹೊತ್ತ ಗ್ರಾಮದ ಮಹಿಳೆಯರು ಮೆರವಣಿಗೆ ನಡೆಸಿದರು. ಶ್ರೀ ಸಬ್ಬಮ್ಮ ದೇವಿ ಶಿಲೆಗೆ ಕ್ಷೀರ, ಪಂಚಾಮೃತ, ಎಳೆನೀರು ಅಭಿಷೇಕ ಮಾಡಲಾಯಿತು. ಗ್ರಾಮದ ಸಮೃದ್ಧಿ, ಮಳೆಗಾಗಿ ಗ್ರಾಮಸ್ಥರು ಸಾಮೂಹಿಕ ಪೂಜೆ ನಡೆಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕುಮಾರಳ್ಳಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಯು.ಕೆ.ದೇಶರಾಜು, ಹಗ್ಗಡಮನೆ ಶಾಂತಮಲ್ಲಿಕಾರ್ಜುನ ದೇವಾಲಯ ಸಮಿತಿ ಅಧ್ಯಕ್ಷ ಟಿ.ಪಿ.ಚಂಗಪ್ಪ, ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ.ತಮ್ಮಯ್ಯ, ಶಾಂತಳ್ಳಿ ಶ್ರೀಕುಮಾರಲಿಂಗೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಂ.ಲೋಕೇಶ್, ಉದ್ಯಮಿ ಹರಪಳ್ಳಿ ರವೀಂದ್ರ, ನಿವೃತ್ತ ಇಂಜಿನಿಯರ್ ಜಯರಾಮ್ ಇದ್ದರು.

Read More

ಮಡಿಕೇರಿ ಮಾ.17 NEWS DESK : ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ ನ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಮಾ.23 ರಂದು ಮಡಿಕೇರಿಯಲ್ಲಿ ನಡೆಯಲಿದೆ. ನಗರದ ಪತ್ರಿಕಾ ಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕನ್ನಡ ಭವನದ ಸ್ಥಾಪಕ ಸಂಚಾಲಕ ಡಾ.ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಉದ್ಘಾಟಿಸಲಿದ್ದು, ಕನ್ನಡ ಭವನದ ಕೊಡಗು ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ, ಹಿರಿಯ ಸಾಹಿತಿ ಭಾರಧ್ವಜ್ ಕೆ.ಆನಂದತೀರ್ಥ, ಕನ್ನಡ ಭವನ ಕೇಂದ್ರ ಸಮಿತಿಯ ಉಪಾಧ್ಯಕ್ಷ ಕೆ.ಪಿ.ರಾಜೇಶ್ ಚಂದ್ರ ಪಾಲ್ಗೊಳ್ಳಲಿದ್ದಾರೆ. ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾಧ್ಯಕ್ಷ ವಿರಾಜ್ ಅಡೂರು ಪ್ರಾಸ್ತಾವಿಕ ನುಡಿಯಾಡಲಿದ್ದಾರೆ. ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷೆ ಎಂ.ಎ.ರುಬೀನಾ, ಜಿಲ್ಲಾ ಕೋಶಾಧಿಕಾರಿ…

Read More

ಮಡಿಕೇರಿ ಮಾ.17 NEWS DESK : ನಾಪೋಕ್ಲು ವ್ಯಾಪ್ತಿಯ ಬಲ್ಲಮಾವಟಿ ಪಂಚಾಯ್ತಿ ಕಚೇರಿಯಲ್ಲಿ ನಾಪೋಕ್ಲು ಠಾಣಾ ಪಿಎಸ್‌ಐ ಸಮುದಾಯ ಆರೋಗ್ಯ ಅಧಿಕಾರಿಗಳ ಸಭೆ ನಡೆಸಿದರು. ಬಲ್ಲಮಾವಟಿ ಮತ್ತು ಸುತ್ತಲಗ್ರಾಮಗಳ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯ ಅಧಿಕಾರಿಗಳ ಸಭೆ ನಡೆಸಿ, ಹೆಣ್ಣು ಮಕ್ಕಳ ಸುರಕ್ಷತೆ ಹಾಗೂ ಹೆಣ್ಣು ಮಕ್ಕಳಿಗೆ ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಲಾಯಿತು.

Read More

ಮಡಿಕೇರಿ ಮಾ.17 NEWS DESK : ಕೊಡಗು ವಿಶ್ವವಿದ್ಯಾಲಯವನ್ನು ಸ್ವತಂತ್ರವಾಗಿ ಉಳಿಸಿ ಅಭಿವೃದ್ಧಿಗೊಳಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಕ್ತ ಸಲಹೆ ಸೂಚನೆ ನೀಡುವ ಸಂಬಂಧ ಕೊಡಗು ಜಿಲ್ಲಾ ಸಂಘ, ಸಂಸ್ಥೆಗಳ ಒಕ್ಕೂಟ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಿಗೆ ಮನವಿ ಪತ್ರ ಸಲ್ಲಿಸಿತು.  ಈ ಸಂದರ್ಭ ಪ್ರತಿಕ್ರಿಯಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯೆ ವಿಜಯ ಭಾರತಿ ಸಯಾನಿ ಮತ್ತು ಮಾಜಿ ಸದಸ್ಯರಾದ ರಾಜೀವ್ ಜೈನ್ ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ವ್ಯಕ್ತಪಡಿಸಿದರು.  ವಿವಿ ಹಿತರಕ್ಷಣಾ ಸಮಿತಿ, ಪ್ರಮುಖ ಸಂಘ ಸಂಸ್ಥೆಗಳಾದ ಕರ್ನಾಟಕ ರಕ್ಷಣಾ ವೇದಿಕೆ, ಕುಶಾಲನಗರ ಗೌಡ ಸಮಾಜ, ಕಾವೇರಿ ಮೀಡಿಯಾ ನೆಟ್ವರ್ಕ್, ಕಾವೇರಿ ಆರತಿ ಬಳಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಶಾಲನಗರ ತಾಲ್ಲೂಕು ಸೌಂದರ್ಯ ತಜ್ಞರ ವೇದಿಕೆ, ರಾಷ್ಟ್ರೀಯ ಮಕ್ಕಳ ಸಾಹಿತ್ಯ ವೇದಿಕೆ, ವಿವಿ ಬೋಧಕ ಬೋಧಕೇತರ ಸಿಬ್ಬಂದಿಗಳು, ಸ್ಥಳೀಯ ಪ್ರಮುಖರು ಹಾಜರಿದ್ದರು.

Read More

ಸಿದ್ದಾಪುರ ಮಾ.17 NEWS DESK : ರಂಜಾನ್ ಉಪವಾಸ ಆಚರಣೆಯ ಅಂಗವಾಗಿ ನೈಮ ಸಂಘಟನೆ ವತಿಯಿಂದ ನೆಲ್ಲಿಹುದಿಕೇರಿಯಲ್ಲಿ ಬೃಹತ್ ಇಫ್ತಾರ್  ಸೌಹಾರ್ದ ಸಂಗಮ ನಡೆಯಿತು. ನೆಲ್ಲಿಹುದಿಕೇರಿಯ ಶಾದಿ ಮಹಲ್ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಲ್ ಖತೀಬ್ ರೌವೂಪ್ ಹುದವಿ ಮಾತನಾಡಿ, ದುಶ್ಚಟಗಳಿಂದ ದೂರವಿದ್ದು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಧಾರ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಮುನ್ನಡೆದಲ್ಲಿ ಸೌಹಾರ್ದ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದರು. ಜಿ.ಪಂ ಮಾಜಿ ಸದಸ್ಯ ಸುಂಟಿಕೊಪ್ಪದ ಪಿ.ಎಂ.ಅಬ್ದುಲ್ ಲತೀಫ್ ಮಾತನಾಡಿ, ಸೌಹಾರ್ದತೆಗೆ ಹೆಸರುವಾಸಿಯಾದ ಗ್ರಾಮದಲ್ಲಿ ನೈಮ ಸಂಘಟನೆ ಇಫ್ತಾರ್ ಕೂಟವನ್ನು ಆಯೋಜನೆ ಮಾಡುವುದರ ಮೂಲಕ ಬಾಂಧವರನ್ನ ಒಗ್ಗೂಡಿಸಿ ಸೌಹಾರ್ದ ಸಂಗಮ ನಿರ್ಮಾಣ ಮಾಡಿದ್ದಾರೆ.  ಶಾಂತಿ ಸಹ ಬಾಳ್ವೆಯ ಸೌಹಾರ್ದ ಸಂಕೇತದ ಆಚರಣೆಗಳನ್ನು ಮಾಡುವುದರ ಮೂಲಕ ಸಹೋದರತ್ವದೊಂದಿಗೆ ಸಹಬಾಳ್ವೆಯ ಜೀವನ ನಡೆಸುವಂತಾಗಲಿ ಎಂದು ಹಾರೈಸಿದರು. ಸಾಮಾಜಿಕ ಕಾರ್ಯಕರ್ತ ನಿಯಾಜ್ ಮಾತನಾಡಿ, ನೆಲ್ಲಿಹುದಿಕೇರಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಆರೋಗ್ಯ, ಶೈಕ್ಷಣಿಕ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಯುವ ಸಮೂಹವನ್ನ ಒಗ್ಗೂಡಿಕೆಯೊಂದಿಗೆ ಸೇವಾ…

Read More

ಮಡಿಕೇರಿ ಮಾ.17 NEWS DESK : ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಹೋಟೆಲ್, ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲೀಕರುಗಳ ಸಭೆ ನಡೆಯಿತು. ಸಭೆಯಲ್ಲಿ ಠಾಣಾಧಿಕಾರಿಗಳು ವಿದೇಶಿ ಪ್ರವಾಸಿಗರ ಭೇಟಿ ಸಂದರ್ಭ ಕಾನೂನು ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಪ್ರವಾಸಿಗರಿಂದ ಪಡೆದುಕೊಳ್ಳಬೇಕಾದ ದಾಖಲೆಗಳು, ನಿರ್ವಹಿಸಬೇಕಾದ ದಾಖಲೆಗಳು ಹಾಗೂ ವಿದೇಶಿ ಪ್ರವಾಸಿಗರ ಭೇಟಿಯ ಸಮಯದಲ್ಲಿ ಕಾನೂನು ಪ್ರಕಾರ ನಡೆಸಬೇಕಾದ ನೋಂದಣಿ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡಲಾಯಿತು.

Read More

ಮಡಿಕೇರಿ ಮಾ.17 NEWS DESK : ವಿರಾಜಪೇಟೆ ನಗರ ಮತ್ತು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಬಸ್ ಮಾಲೀಕರು, ಚಾಲಕರು, ಏಜೆಂಟರು ಹಾಗೂ ನಗರದ ಆಟೋ ಮಾಲೀಕರು, ಚಾಲಕರುಗಳ ಸಭೆ ನಡೆಯಿತು. ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಾಹನ ಮಾಲೀಕರು ಮತ್ತು ಚಾಲಕರಿಗೆ ಸಂಚಾರ ಸುರಕ್ಷತೆ, ಸುರಕ್ಷಿತ ವಾಹನ ಚಾಲನೆ ಮತ್ತು ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದರು.

Read More

*ಸದನದಲ್ಲಿ ಮುಖ್ಯಮಂತ್ರಿಗಳ ಉತ್ತರ*  ಬೆಂಗಳೂರು NEWS DESK ಮಾ.17 : *NDA-BJP ಸರ್ಕಾರದ ಸಚಿವರುಗಳು, ಅಧಿಕಾರಿಗಳು ನನ್ನಲ್ಲಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದು ಏಕೆ: ಬಿಜೆಪಿಯವರಿಗೆ ನೇರ ಪ್ರಶ್ನೆ ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ*  *ಕೇಂದ್ರ ಸರ್ಕಾರದ Indian institute of Public Administration ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ  ಜಿತೇಂದ್ರ ಸಿಂಗ್  ಪ್ರಶಂಸೆಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕೊಟ್ಟಿದ್ದಾರೆ: ಇಲ್ಲಿ ನೀವು ವಿರೋಧಿಸುತ್ತಿದ್ದೀರಿ, ಏನಿದು: ಸಿ.ಎಂ ಪ್ರಶ್ನೆ* ಗ್ಯಾರಂಟಿ ಯೋಜನೆಗಳನ್ನು ನೀವು ಬಿಜೆಪಿ ಆಡಳಿತವಿರುವ  ರಾಜ್ಯಗಳಲ್ಲಿ ನಕಲು ಮಾಡಿದ್ದೀರಿ. ವಿರೋಧ ಮಾಡುವುದಾದರೆ  ನಕಲು ಏಕೆ ಮಾಡಬೇಕಿತ್ತು. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ನಾವು ವಾಸ್ತವವನ್ನು ಹೇಳುತ್ತಿದ್ದೇವೆ. ದಿನಾಂಕ 3-1-2025 ರಂದು ಚಂದ್ರ ಬಾಬು ನಾಯ್ದು ಅವರ ಸರ್ಕಾರದ ಮಂತ್ರಿಗಳು ಹಾಗೂ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಕುರಿತು ಅಧ್ಯಯನ ಮಾಡಿ ಹೋಗಿದ್ದಾರೆ. ಸಚಿವ  ರಾಮಲಿಂಗಾರೆಡ್ಡಿ ಹಾಗೂ ನನ್ನನ್ನು ಭೇಟಿಯಾಗಿ ಚರ್ಚಿಸಿದ್ದಾರೆ.  2-2-2025 ರಂದು ಮಹಾರಾಷ್ಟ್ರದ ಸಾರಿಗೆ ಸಚಿವರಾದ ಪ್ರತಾಪ್ ಸರ್ನಾಯಕ್ ಶಕ್ತಿ ಯೋಜನೆ ಬಗ್ಗೆ ಚರ್ಚಿಸಿ…

Read More