*ಮೈದಾನ 1* ತೆಕ್ಕಡ ಮತ್ತು ಮಾಳೇಟಿರ (ಕುಕ್ಲೂರು) ನಡುವಿನ ಪಂದ್ಯದಲ್ಲಿ ತಲಾ 1 ಗೋಲು ಸಮಬಲವಾದ ಕಾರಣ ಟೈ ಬ್ರೇಕರ್‍ನಲ್ಲಿ 4-2 ಗೋಲುಗಳ ಅಂತರದಲ್ಲಿ ಮಾಳೇಟಿರ ತಂಡ ಜಯ ದಾಖಲಿಸಿತು. ಮಾಳೇಟಿರ ತಂಡದ ಪರ ಸೋಮಣ್ಣ ಹಾಗೂ ತೆಕ್ಕಡ ತಂಡದ ಪರ ಸೋಮಣ್ಣ ತಲಾ 1 ಗೋಲು ದಾಖಲಿಸಿದರು. ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ತೆಕ್ಕಡ ಸೋಮಣ್ಣ ಪಡೆದರು. ಬಲ್ಲಚಂಡ ಮತ್ತು ಕಾವಾಡಿಚಂಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಬಲ್ಲಚಂಡ ತಂಡ ಗೆಲುವು ಸಾಧಿಸಿತು. ಬಲ್ಲಚಂಡ ಪರ ನಾಣಯ್ಯ ಹಾಗೂ ಸಜನ್ ತಲಾ 2 ಗೋಲು ಅದ್ವಯಿತ್ 1 ಗೋಲು ದಾಖಲಿಸಿದರು. ಕಾವಾಡಿಚಂಡ ಕುಶಾಲಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮೇಕೇರಿರ ಮತ್ತು ಕಡೇಮಾಡ ನಡುವಿನ ಪಂದ್ಯದಲ್ಲಿ 5-2 ಗೋಲುಗಳ ಅಂತರದಲ್ಲಿ ಮೇಕೇರಿರ ತಂಡ ಗೆಲುವು ದಾಖಲಿಸಿತು. ಮೇಕೇರಿರ ಪರ ನಿತಿನ್ ತಿಮ್ಮಯ್ಯ ಹಾಗೂ ಶೈನಾ ತಂಗಮ್ಮ ತಲಾ 2 ಹಾಗೂ ಅಭಿನ ಗಣಪತಿ 1…
ಲೇಖಕ: admin
ವಿರಾಜಪೇಟೆ ಏ.8 NEWS DESK : ವಿರಾಜಪೇಟೆ ನಗರದ ಚಿಕ್ಕಪೇಟೆ ಛತ್ರಕೆರೆಯ ಸಮೀಪದ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಏ.12 ರಂದು ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನಡೆಯಲಿದೆ. ಅಂದು ಪ್ರಾ:ಥಕಾಲ ಅಭಿಷೇಕ ಪೂಜೆ ಆರಂಭವಾಗಿ ಮಧ್ಯಾಹ್ನ ಶ್ರೀ ಸ್ವಾಮಿಗೆ ಮಾಹಾಪೂಜೆ ನೆರವೇರಲಿದೆ. ನಂತರ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಮಡಿಕೇರಿ ಏ.8 NEWS DESK : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಸಾವಿಗೆ ಕಾರಣರಾದವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರಿ, ಮೃತನ ಸಹೋದರ ಜೀವನ್ ಅವರು ಇಂದು ಮಾಜಿ ಸಂಸದರು, ಶಾಸಕರು, ಜಿಲ್ಲಾ ಬಿಜೆಪಿ ಪ್ರಮುಖರೊಂದಿಗೆ ತೆರಳಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದರು. ದೂರಿನಲ್ಲಿ ಪ್ರಮುಖವಾಗಿ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಡಿಕೊಳ್ಳುವುದಕ್ಕೂ ಮೊದಲು ತಮ್ಮ ಮೊಬೈಲ್ ನಿಂದ ಮರಣ ಪತ್ರವನ್ನು ರವಾನಿಸಿದ್ದು, ಅದರಲ್ಲಿ ತಮ್ಮ ಸಾವಿಗೆ ಕಾರಣರಾದವರು ಹಾಗೂ ಮಾನಸಿಕ ಒತ್ತಡ ಹೇರಿದವರ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಪೊಲೀಸ್ ಇಲಾಖಾ ಸಿಬ್ಬಂದಿಯೊಬ್ಬರು ವಿನಯ್ ಸೋಮಯ್ಯ ಅವರಿಗೆ ಕರೆ ಮಾಡಿ ತಹಶೀಲ್ದಾರ್ ಕಚೇರಿಗೆ ಬಂದು ಸಹಿ ಮಾಡುವಂತೆ ಹಾಗೂ ನಿಮ್ಮನ್ನು ರೌಡಿಶೀಟ್‍ಗೆ ಸೇರಿಸುವುದಾಗಿ ಒತ್ತಡ ಹೇರಿರುವುದು ಅವರ ಆತ್ಮಹತ್ಯೆಗೆ ಕಾರಣವಾಗಿರುವುದು ಸ್ಪಷ್ಟವಾಗಿದೆ ಎಂದು ಜೀವನ್ ಕೆ.ಎಸ್. ವಿವರಿಸಿದ್ದಾರೆ. ಇದರೊಂದಿಗೆ ವ್ಯಕ್ತಿಯೊಬ್ಬರು ವಿವಿಧ ಸಾಮಾಜಿಕ ಜಾಲತಾಣದ ವಿವಿಧ ಗ್ರೂಪ್‍ಗಳಲ್ಲಿ ವಿನಯ್ ಸೋಮಯ್ಯ ಅವರ ಫೋಟೋ…
ವಿರಾಜಪೇಟೆ ಏ.8 NEWS DESK : ಕೆದಮುಳ್ಳೂರು ಗ್ರಾಮದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಏ.3ರಂದು ಹಬ್ಬಕ್ಕೆ ಚಾಲನೆ ನೀಡಲಾಯಿತು. ಏ.4ರ ರಾತ್ರಿ ನಾನಾ ತೆರೆ (ಕೋಲ)ಗಳು ನಡೆದವು. ಏ.5ರಂದು ಬೆಳಗ್ಗೆ ಪ್ರಮುಖವಾದ ವಿಷ್ಣುಮೂರ್ತಿ ಕೋಲವು ದೇವಾಲಯದ ಮುಂದೆ ಸಿದ್ಧಪಡಿಸಿದ್ದ ಬೆಂಕಿ ಕೆಂಡದ ಮೇಲೆ 101 ಬಾರಿ ಬೀಳುವ ತೆರೆ ನಡೆಯಿತು. ಇದಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾದರು. ಮಧ್ಯಾಹ್ನ ಚಾಮುಂಡಿ ದೇವಿಯ ಕೋಲ ನಡೆಯಿತು. ಉತ್ಸವದ ಕೊನೆಯ ತೆರೆಯಾದ ಚಾಮುಂಡಿ ದೇವಿ ಕೆಂಪು ವಸ್ತ್ರದಲ್ಲಿ ಕಂಗೋಳಿಸುತ್ತಿತ್ತು. ಸಂಜೆ ದೇವರು ಬನಕ್ಕೆ ತೆರಳಿ ಅಲ್ಲಿ ಪೂಜಾ ವಿಧಿ ವಿಧಾನಗಳನ್ನು ಪೂರೈಸಿದ ಬಳಿಕ ವಾರ್ಷಿಕ ತೆರೆ ಮಹೋತ್ಸವಕ್ಕೆ ತೆರೆ ಎಳೆಯಲಾಯಿತು. ವಾರ್ಷಿಕ ತೆರೆ ಮಹೋತ್ಸವದಲ್ಲಿ ವಿರಾಜಪೇಟೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.
ಮಡಿಕೇರಿ ಏ.8 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆಯು ಏ.27 ರಂದು ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆಯ ರೋಟರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ನಡೆಯಲಿರುವ ಸಭೆಗೆ ಸರ್ವ ಸದಸ್ಯರು ಹಾಜರಾಗುವಂತೆ ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.
ಮಡಿಕೇರಿ ಏ.8 NEWS DESK : ಮಾದಾಪುರದ ಹಾಡಗೇರಿ ಶ್ರೀ ಭದ್ರಕಾಳಿ ದೇವರ ವಾರ್ಷಿಕ ಉತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಮೂರು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ವಿರಾಜಪೇಟೆ ಏ.8 NEWS DESK : ದಾನಗಳನ್ನು ಮಾಡುವುದರಿಂದ ಮಾನವನ ಜೀವನ ಸಾರ್ಥಕವಾಗುತ್ತದೆ ಎಂದು ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳಾದ ರೆ.ಫಾ. ಜೇಮ್ಸ್ ಡೊಮಿನಿಕ್ ಅಭಿಪ್ರಾಯಪಟ್ಟರು. ವಿರಾಜಪೇಟೆ ಮದರ್ ತೆರೇಸಾ ಸೇವಾ ಕೇಂದ್ರದ ವತಿಯಿಂದ ಸಂತ ಅನ್ನಮ್ಮ ದ್ವಿಶತಮಾನೋತ್ಸವ ಸಭಾಂಗಣದಲ್ಲಿ ಜರುಗಿದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯನು ದಾನ ಧರ್ಮಗಳನ್ನು ಹೆಚ್ಚು ಮಾಡುವುದು ಸತ್ಕಾರ್ಯವಾಗಿದ್ದು. ದೇವರ ಆಶೀರ್ವಾದವು ಲಭಿಸುತ್ತದೆ. ಸಮಾಜಮುಖಿ ಚಿಂತನೆಗಳಿಂದ ವ್ಯಕ್ತಿಯ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಆ ನಿಟ್ಟಿನಲ್ಲಿ ಮದರ್ ತೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿಯು ಶ್ಲಾಘನೀಯವಾಗಿದೆ ಎಂದರು. ಇನ್ನು ಮುಂದೆಯೂ ಸಮಾಜಮುಖಿ ಕಾರ್ಯಗಳು ನಡೆಯುವಂತಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮದರ್ ತೆರೇಸಾ ಸೇವಾ ಕೇಂದ್ರದ ಅಧ್ಯಕ್ಷ ಹಾಗೂ ಶಿಕ್ಷಣ ಇಲಾಖೆಯ ನಿವೃತ್ತ ಡಿಡಿಪಿಐ ಪೆರಿಗ್ರೀನ್ ಎಸ್ ಮಚ್ಚಾಡೋ, ಕಳೆದ ಮೂರು ವರ್ಷಗಳಿಂದ ನಮ್ಮ ಸೇವಾ ಕೇಂದ್ರದ ವತಿಯಿಂದ ಪುಸ್ತಕಗಳನ್ನು ವಿತರಣೆ ಮಾಡುತ್ತ ಬಂದಿದ್ದು, ಮೊದಲನೇ ವರ್ಷ 85…
ಮಡಿಕೇರಿ ಏ.8 NEWS DESK : ಕೊಡವ ಕುಟುಂಬ ತಂಡಗಳ ನಡುವಿನ ಹಾಕಿ ಪಂದ್ಯಾವಳಿಯ ಬೆಳ್ಳಿಹಬ್ಬದ ಸಂಭ್ರಮದ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಪರಿಸರ ಜಾಗೃತಿಗೆ ಮೊದಲ ಆದ್ಯತೆ ನೀಡಲಾಗಿದೆ. ಹಾಕಿ ಉತ್ಸವ ನಡೆಯುತ್ತಿರುವ ಪ್ರದೇಶದಲ್ಲಿ ಕಳೆದ 10 ದಿನಗಳಲ್ಲಿ 2 ಟನ್ ನಷ್ಟು ತ್ಯಾಜ್ಯ ಸಂಗ್ರಹಿಸಲಾಗಿದೆ. ಶೂನ್ಯ ತ್ಯಾಜ್ಯ ನಿರ್ವಹಣೆಗೆ ಬೆಂಗಳೂರಿನ ವೇದನ್ ಟ್ರಸ್ಟ್ ಕೈಜೋಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಹಾಕಿ ಉತ್ಸವದಲ್ಲಿ ಶೂನ್ಯ ತ್ಯಾಜ್ಯ ನಿರ್ವಹಣೆಯ ನಮ್ಮ ವಿನೂತನ ಪ್ರಯತ್ನ ಇಡೀ ಜಿಲ್ಲೆಗೆ ಮಾದರಿಯಾಗಲಿದೆ. ಜನರಲ್ಲಿ ಪರಿಸರದ ಕುರಿತು ಕಾಳಜಿ ಮೂಡಿಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದರು. ಮುದ್ದಂಡ ಹಾಕಿ ಉತ್ಸವ ಆರಂಭಗೊಂಡು 10 ದಿನಗಳೇ ಕಳೆದಿದ್ದು, ಈ ಅವಧಿಯಲ್ಲಿ ವೇದನ್ ಟ್ರಸ್ಟ್ ನ ಸ್ವಯಂ ಸೇವಕರ ಮೂಲಕ 2 ಟನ್ ತ್ಯಾಜ್ಯ ಸಂಗ್ರಹಿಸಲಾಗಿದೆ. ಇದರಿಂದ ಪ್ರಕೃತಿಗೆ ನಾಲ್ಕು ಮರಗಳನ್ನು ಉಳಿಸಿದಷ್ಟು ಲಾಭವಾಗಿದೆ. ಹಾಕಿ ಉತ್ಸವ…
ಬೆಂಗಳೂರು ಏ.8 NEWS DESK : 2024-25ನೇ ಸಾಲಿನ ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಶೇ. 73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪಉಡುಪಿ ಮೊದಲ ಸ್ಥಾನ ಪಡೆದಿದ್ದು, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. 6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ ಎಂದು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ. 93.90 ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (ಶೇ. 93.57), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(ಶೇ. 85.36) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (ಶೇ.73.45) ಪಡೆದುಕೊಂಡಿದೆ. ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಉನ್ನತ ಶ್ರೇಣಿ- 1,00,571, ಪ್ರಥಮ ದರ್ಜೆ- 2,78,054,…
ಸುಂಟಿಕೊಪ್ಪ ಏ.8 NEWS DESK : ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ 47ನೇ ವಾರ್ಷಿಕ ಮಹೋತ್ಸವವು ಏ.21 ರಿಂದ 23 ರವರೆಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಏ.21 ರಂದು ಪೂರ್ವಾಹ್ನ ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಪೂಜಾ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಸಂಜೆ 7 ಗಂಟೆಯಿಂದ ದೀಪರಾಧನೆ, ಏಳು ಸುತ್ತಿನ ಪ್ರದಕ್ಷಣೆ ಹಾಗೂ ಶ್ರೀ ಚಾಮುಂಡಿ ತಂಡದಿಂದ ಚಂಡೆ ಮೇಳ ಜರುಗಲಿದೆ. ಏ.22 ರಂದು ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ ಪೂಜೆ ನಡೆಯಲಿದ್ದು, ರಾತ್ರಿಯಿಂದ ವಿವಿಧ ದೈವಗಳ ಕೋಲ ಜರುಗಲಿದೆ. ಏ.23 ರಂದು ಪೂರ್ವಾಹ್ನ ಅಜ್ಜಪ್ಪ ಕೋಲ ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಕೋಲ ನಡೆಯಲಿದ್ದು, ರಾತ್ರಿ 8 ಗಂಟೆಗೆ ಶ್ರೀ ದೇವಿ ನೇವೈದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ ಎಂದು ಶ್ರೀಕುಂದುರುಮೊಟ್ಟೆ ಚಾಮುಂಡೇಶ್ವರಿ…






