ಲೇಖಕ: admin

ಕುಶಾಲನಗರ ಮೇ 8 NEWS DESK : ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದಲ್ಲಿ ಬಸವ ಸೇವಾ ಸಮಿತಿಯ ವತಿಯಿಂದ  ಗ್ರಾಮಾಂತರ ಬಸವ ಜಯಂತಿ ಅಂಗವಾಗಿ ಆಕರ್ಷಕ ಮೆರವಣಿಗೆ ನಡೆಸಲಾಯಿತು. ಗ್ರಾಮದಲ್ಲಿ ಸಂಜೆ ವೇಳೆಗೆ ಅಲಂಕೃತ ಬೆಳ್ಳಿ ರಥದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನಿಟ್ಟು ಮೆರವಣಿಗೆ ಮೂಲಕ ಶೋಭಾಯಾತ್ರೆ ನಡೆಸಲಾಯಿತು. ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, 12 ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರು ವಚನಗಳ ಮೂಲಕ ಸಮಾಜದಲ್ಲಿ ಅಸಮಾನತೆ, ಅಸ್ಪೃಶ್ಯತೆ, ಕಂದಾಚಾರ, ಮೂಢನಂಬಿಕೆಗಳ ವಿರುದ್ಧ ಜನಜಾಗೃತಿ ಮೂಡಿಸಿದರು.ಪ್ರತಿಯೊಬ್ಬರೂ ಬಸವಣ್ಣನವರ ತತ್ವ,ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದರು. ಶಿರಂಗಾಲ ಗ್ರಾಮ ದೇವಾಲಯ ಸಮಿತಿಯ ಕಾರ್ಯದರ್ಶಿ ಎಂಎಸ್.ಗಣೇಶ್ , ಶೋಭಾಯಾತ್ರೆಗೆ ಚಾಲನೆ ನೀಡಿದರು. ಗ್ರಾಮ ದೇವಾಲಯ ಸಮಿತಿಯ ಅಧ್ಯಕ್ಷ ಎಸ್.ಎಸ್.ಚಂದ್ರಶೇಖರ್, ಗ್ರಾಮ ಬಸವ ಸಮಿತಿಯ ಅಧ್ಯಕ್ಷ ಎಸ್.ಜೆ.ಉಮೇಶ್ , ಕಾರ್ಯದರ್ಶಿ ಎನ್.ಎಸ್.ಜಯಣ್ಣ, ಪ್ರಮುಖರಾದ ಎಸ್.ಎಚ್. ರಾಜಪ್ಪ, ಎಂ.ಎಸ್.ಶಿವಾನಂದ, ಎಸ್.ಪಿ.ಪರಮೇಶ್, ಎಸ್.ಆರ್.ಶಿವಲಿಂಗ, ಸಿದ್ದಲಿಂಗಪ್ಪ ಮತ್ತಿತರರು ಇದ್ದರು. ಮೆರವಣಿಗೆಯಲ್ಲಿ ಅಲಂಕೃತಗೊಳಿಸಲಾಗಿದ್ದ ಹೋರಿಯ ಮೆರವಣಿಗೆ ಗಮನ ಸೆಳೆಯಿತು.

Read More

ಮಡಿಕೇರಿ ಮೇ 7 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಗೆ ಕೋವಿಡ್-19 ಸಂಧರ್ಭದಲ್ಲಿ “ಆಕ್ಸಿಜನ್ ಫಾರ್ ಇಂಡಿಯಾ” ಕಾರ್ಯಕ್ರಮದಡಿಯಲ್ಲಿ ಅಮೇರಿಕಾದ ಮೀರಾ ವೆಲ್ಸ್, ಡಾ.ಶುಭಾ ವರ್ಮಾ ಮತ್ತು ತಂಡದವರು ಆಕ್ಸಿಜನ್ ಕಾನ್ಸಂಟ್ರೇಟರ್‍ಗಳನ್ನು ಕೊಡುಗೆಯಾಗಿ ನೀಡಲಾಗಿದ್ದು, ಈ ಸಂಬಂಧ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಗೆ ಡಾ.ಮೀರಾ ವೆಲ್ಸ್ ಅವರ ಪತಿ ಕೋರ್ಟ್‍ಲ್ಯಾಂಡ್ (ನಿರ್ದೇಶಕರು ಐಬಿಎಂ ಸಂಸ್ಥೆ)ನಿವೃತ ಐಎಎಸ್ ಅಧಿಕಾರಿಯಾದ ಎ.ಕೆ.ಮೊಣ್ಣಪ್ಪ ಮತ್ತು ಸ್ಥಳೀಯ ವೈದ್ಯರಾದ ಡಾ ಸಣ್ಣುವಂಡ ಕಾವೇರಪ್ಪ ಭೇಟಿ ನೀಡಿದರು. ಈ ಸಮಯದಲ್ಲಿ 2021 ರ ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ, ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ 1984 ರ ಬ್ಯಾಚ್‍ನ ಹಳೆಯ ವಿದ್ಯಾರ್ಥಿಗಳು, ದೇಶಾದ್ಯಂತ ಕೋವಿಡ್ ಪೀಡಿತ ಜನರನ್ನು ಬೆಂಬಲಿಸಲು ಆಕ್ಸಿಜನ್ ಫಾರ್ ಇಂಡಿಯಾ ಎಂಬ ಗುಂಪನ್ನು ರಚಿಸಿದರು. ಡಾ.ಶೋಭಾ ಚೊಟ್ಟೇರಾ, ಮಾಜಿ ಐಎಎಸ್ ಅಧಿಕಾರಿ ಎ.ಕೆ.ಮೊಣ್ಣಪ್ಪ, ನಾಪೋಕ್ಲುವಿನಿಂದ ಡಾ.ಸಣ್ಣುವಂಡ ಎಂ.ಕಾವೇರಪ್ಪ ಅವರನ್ನು ಸಂಪರ್ಕಿಸಿ ಕೊಡಗಿನಲ್ಲಿ ಆಮ್ಲಜನಕದ ಸಾಂದ್ರೀಕರಣದ ಅಗತ್ಯವಿದೆಯೇ ಎಂದು ವಿಚಾರಿಸಿದರು. ಇದರ…

Read More

ಮಡಿಕೇರಿ ಮೇ 7 NEWS DESK : ಕರ್ಣಂಗೇರಿ ಗ್ರಾಮದ ಚಂದ್ರಗಿರಿ ನಗರದಲ್ಲಿ ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವತಿಯಿಂದ ಮರು ನಿರ್ಮಿಸಲಾಗಿರುವ ಅಂಗನವಾಡಿ ಮತ್ತು ಸಾರ್ವಜನಿಕ ಗ್ರಂಥಾಲಯದ ಕಟ್ಟಡವನ್ನು ಇಂದು ಪೂಜೆಯ ಮೂಲಕ ಉದ್ಘಾಟಿಸಲಾಯಿತು. ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ, ಸಿ.ಡಿ.ಪಿ.ಒ ಸವಿತಾ, ಅಭಿವೃದ್ಧಿ ಅಧಿಕಾರಿ ಅನಿತಾ, ಬಿಲ್ ಕಲೆಕ್ಟರ್ ಪ್ರಜೀವಿತ್, ಅಂಗನವಾಡಿ ಕಾರ್ಯಕರ್ತೆ ಸುಮಿತ್ರ, ಆಶಾ ಕಾರ್ಯಕರ್ತೆ ಅನಿತಾ ರೈ, ಗುತ್ತಿಗೆದಾರ ಕವನ್, ಗ್ರಾಮಸ್ಥರು, ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಇದೇ ಸಂದರ್ಭ ಕಣರ್ಂಗೇರಿ ಗ್ರಾಮದಲ್ಲಿ ಅಳವಡಿಸಲಾಗಿರುವ ಹೈಮಾಸ್ಟ್ ಬೀದಿ ದೀಪವನ್ನು ಸಾಂಕೇತಿಕವಾಗಿ ಉದ್ಘಾಟಿಸಲಾಯಿತು.

Read More

ಮಡಿಕೇರಿ ಮೇ 7 NEWS DESK : ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್‍ನಲ್ಲಿ ಮೇ, 8 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗ್ರತಾ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿ ಬೀದಿ, ಪೆನ್ಸನ್ ಲೇನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್, ಹಳೆ ಪ್ರೈವೆಟ್ ಬಸ್ ಸ್ಟ್ಯಾಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ. ಆಲೂರು ಸಿದ್ದಾಪುರ :: ಆಲೂರು ಸಿದ್ದಾಪುರ 66/11 ಕೆ.ವಿ ಮತ್ತು ಸೋಮವಾರಪೇಟೆ 66/11ಕೆ.ವಿ ಹಾಗೂ ಸೋಮವಾರಪೇಟೆ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಪ್ರಸ್ತುತ ಸಾಲಿನ ಮೊದಲ ತ್ರೈಮಾಸಿಕ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗದಲ್ಲಿ…

Read More

ಮಡಿಕೇರಿ ಮೇ 7 NEWS DESK : ಮುಂಬರುವ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯ ಸಂದರ್ಭ ಆದಿಮಸಂಜಾತ ಬುಡಕಟ್ಟು ಜನಾಂಗ ಕೊಡವರಿಗಾಗಿ ಪ್ರತ್ಯೇಕ “ಕಾಲಮ್ ಮತ್ತು ಕೋಡ್” ಸೇರಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೇ 9 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಲಾಗುವುದೆಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುಕ್ರವಾರ ಬೆಳಿಗ್ಗೆ 10.30 ರಿಂದ 11.30 ಗಂಟೆಯವರೆಗೆ ಸತ್ಯಾಗ್ರಹ ನಡೆಯಲಿದ್ದು, ಜಿಲ್ಲಾಡಳಿತದ ಮೂಲಕ ಕೇಂದ್ರ ಗೃಹ ಮಂತ್ರಿಗಳು ಹಾಗೂ ಅದರ ಅಧೀನದಲ್ಲಿ ಬರುವ ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರಿಗೆ (ಆರ್‌ಜಿಸಿಸಿಐ) ವಿವರವಾದ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದರು. ಜನಗಣತಿಯಲ್ಲಿ ಕೊಡವ ಸಮುದಾಯದ ವಿಶಿಷ್ಟ ಸಾಂಸ್ಕೃತಿಕ ಗುರುತನ್ನು ನಿಖರವಾಗಿ ಪ್ರತಿನಿಧಿಸಲು ಮತ್ತು ಕೊಡವ ಜನಸಂಖ್ಯಾ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಪ್ರತ್ಯೇಕ ಕಾಲಮ್ ಮತ್ತು ಕೋಡ್ ನ್ನು ಸೇರಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯಕ್ಕೆ ನೀಡಿದ “ಸಂಘ” ಕ್ಷೇತ್ರದಂತೆ,…

Read More

ಮಡಿಕೇರಿ ಮೇ 7 NEWS DESK : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಮೇ 5 ರಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಗರದ ಉಕ್ಕುಡ ಬಳಿಯ ರಾಜರಾಜೇಶ್ವರಿ ಬಡಾವಣೆಗೆ ತೆರಳಿ ವೀಕ್ಷಿಸಿದರು. ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‍ದಾಸ ಅವರ ಏಕಸದಸ್ಯ ವಿಚಾರಣಾ ಆಯೋಗ ವತಿಯಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಬಗ್ಗೆ ಖುದ್ದು ಪರಿಶೀಲಿಸಿದರು. ಸಮೀಕ್ಷೆದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಸಮೀಕ್ಷೆ ಅಪ್ಲಿಕೇಷನ್‍ಗೆ ಲಾಗಿನ್ ಆಗುವುದು. ಸಮೀಕ್ಷೆದಾರರ ಮೊಬೈಲ್ ಸಂಖ್ಯೆಗೆ ಒಟಿಪಿ ನಮೂದಿಸಿ ಲಾಗಿನ್ ಆಗುವುದು, ಸಮೀಕ್ಷೆ ಪ್ರಾರಂಭಿಸಿ ಎಂಬ ಟ್ಯಾಗ್‍ನ್ನು ಒಳಗೊಂಡು ಸಮೀಕ್ಷೆಗೆ ಕ್ಲಿಕ್ ಮಾಡುವುದು, ಹಾಗೆಯೇ ಮತದಾರರ ಪಟ್ಟಿಯಲ್ಲಿರುವ ಮನೆಗಳ ಆಧಾರದ ಮೇಲೆ ಸಮೀಕ್ಷೆ ಪ್ರಾರಂಭಿಸುವುದು. ಮನೆಯ ಮುಖ್ಯಸ್ಥರ ಮತದಾರರ ಪಟ್ಟಿಯಲ್ಲಿನ ಕ್ರಮಸಂಖ್ಯೆಯನ್ನು ನಮೂದು ಮಾಡುವುದು, ಪರಿಶಿಷ್ಟ ಜಾತಿಗೆ ಸೇರಿದವರೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳುವುದು, ನಂತರ ಪರಿಶಿಷ್ಟ ಜಾತಿ ಕುಟುಂಬದವರ ಪಡಿತರ ಚೀಟಿ ಅಥವಾ ಆಧಾರ್ ಸಂಖ್ಯೆ ನಮೂದಿಸಿ…

Read More

ಮಡಿಕೇರಿ ಮೇ 7 NEWS DESK : ಕಾಂಗ್ರೆಸ್ ಸೇವಾದಳದ ಸಂಸ್ಥಾಪಕ ಎನ್.ಎಸ್.ಹರ್ಡೀಕರ್ ಅವರ 136ನೇ ಜನ್ಮದಿನವನ್ನು ನಗರದ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಸೇವಾದಳದ ಜಿಲ್ಲಾಧ್ಯಕ್ಷ ಕಾನೇಹಿತ್ಲು ಮೊಣ್ಣಪ್ಪ ಅವರು ಮಾತನಾಡಿ ಕಾಂಗ್ರೆಸ್ ಸೇವಾದಳದ ಸ್ಥಾಪನೆ ಮತ್ತು ಅದು ಬೆಳೆದು ಬಂದ ರೀತಿಯನ್ನು ವಿವರಿಸಿದರು.  ಸೇವಾದಳದ ಮಾಜಿ ರಾಜ್ಯಾಧ್ಯಕ್ಷೆ ಜಯಂತಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಮದಲ್ಲಿ ಡಿಸಿಸಿ ಉಪಾಧ್ಯಕ್ಷ ಕೊಕ್ಕಲೇರ ಸುಜು ತಿಮ್ಮಯ್ಯ ಹಾಗೂ ಭಾರತ್ ಸೇವಾದಳದ ಮುಖ್ಯ ಸಂಚಾಲಕಿ ರೇವತಿ ರಮೇಶ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ, ಉಪಾಧ್ಯಕ್ಷ ವಿ.ಜಿ.ಮೋಹನ್, ರಾಜ್ಯ ಸೇವಾದಳದ ಪ್ರಧಾನ ಕಾರ್ಯದರ್ಶಿ ತೆರೇಸ ವಿಕ್ಟರ್, ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷರಾದ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಮಡಿಕೇರಿ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್, ಮಡಿಕೇರಿ ಗ್ಯಾರಂಟಿ ಯೋಜನೆಯ ಸದಸ್ಯ ಹರಿಪ್ರಸಾದ್ ಕೋಚನ, ನಗರಸಭಾ ನಾಮ ನಿರ್ದೇಶಿತ ಸದಸ್ಯ ಯಾಕುಬ್, ನಗರ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ,…

Read More

ಬೆಂಗಳೂರು ಮೇ 7 NEWS DESK : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಕೈಗೊಂಡ ‘ಆಪರೇಷನ್ ಸಿಂಧೂರ್’ ಅನ್ನು ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ದೇಶದ ರಕ್ಷಣಾ ಪಡೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದಿದ್ದಾರೆ. ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್. ಭಾರತದ ಸೈನ್ಯ ಸಿಂಧೂರ್ ಆಪರೇಷನ್ ಮುಖಾಂತರ ಸುಮಾರು 9 ಉಗ್ರಗಾಮಿಗಳ ನೆಲೆಯನ್ನು ನಾಶಪಡಿಸಿದ್ದಾರೆ. ಭಾರತದ ನಡೆಯನ್ನು ಬೆಂಬಲಿಸುತ್ತೇನೆ. ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ ಎಂದರು. ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಸುರೇಶ್, ಪ್ರಿಯಾಂಕ ಖರ್ಗೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ…

Read More

ಮಡಿಕೇರಿ ಮೇ 7 NEWS DESK : ಮಡಿಕೇರಿ ನಗರಸಭೆಯ ನೂತನ ಅಧ್ಯಕ್ಷರಾದ ಕಲಾವತಿ ಹಾಗೂ ಉಪಾಧ್ಯಕ್ಷರಾದ ಮಹೇಶ್ ಜೈನಿ ಅವರನ್ನು ಭೇಟಿಯಾಗಿ ಅಭಿನಂದಿಸಿದ ನಗರಸಭಾ ಮಾಜಿ ಸದಸ್ಯ ಮತ್ತು ನಗರ ಕಾಂಗ್ರೆಸ್ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ಅವರು ನಗರದ ಅಭಿವೃದ್ಧಿಯ ದೃಷ್ಟಿಯಿಂದ ಕೆಲವು ಬೇಡಿಕೆಗಳನ್ನು ಮಂಡಿಸಿದರು. ಮಳೆಗಾಲ ಸಮೀಪಿಸುತ್ತಿರುವುದರಿಂದ ನಗರದ ಎಲ್ಲಾ ತೋಡು ಮತ್ತು ಚರಂಡಿಗಳ ತ್ಯಾಜ್ಯವನ್ನು ವಿಲೇವಾರಿಗೊಳೀಸಬೇಕು. ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳಬೇಕು. ರಸ್ತೆಗಳ ಬದಿಯ ಕಾಡು ಕಡಿಯಬೇಕು. ರಸ್ತೆ ಅಭಿವೃದ್ಧಿಗಾಗಿ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಮಳೆಗಾಲದೊಳಗೆ ವಿನಿಯೋಗ ಮಾಡಿ ಎಲ್ಲಾ ವಾರ್ಡ್ ಗಳ ರಸ್ತೆ ದುರಸ್ತಿ ಮಾಡಬೇಕು. ಸ್ಟೋನ್ ಹಿಲ್ ಪ್ರದೇಶದಲ್ಲಿ ಟನ್ ಗಟ್ಟಲೆ ತ್ಯಾಜ್ಯ ಇರುವುದರಿಂದ ಮಳೆಗಾಲದಲ್ಲಿ ಅಪಾಯ ಎದುರಾಗಬಹುದಾದ ಸಾಧ್ಯತೆಗಳಿದೆ. ಆದ್ದರಿಂದ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಮತ್ತು ನಗರದ ತ್ಯಾಜ್ಯವನ್ನು ವೈಜ್ಞಾನಿಕ ರೂಪದಲ್ಲಿ ವಿಲೇವಾರಿ ಮಾಡುವ ತ್ಯಾಜ್ಯ ಘಟಕದ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಳ್ಳಬೇಕು. ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಯಿಂದ ಕೆಲವು…

Read More

ನಾಪೋಕ್ಲು ಮೇ 7 NEWS DESK : ಕಕ್ಕಬ್ಬೆ ಸಮೀಪದ ನೆಟ್ಟುಮಾಡು ಶ್ರೀ ಭಗವತಿ ದೇವಾಲಯದ ಜೀರ್ಣೋದ್ಧಾರಕ್ಕೆ ಜೀರ್ಣೋದ್ಧಾರ ಸಮಿತಿ ಮುಂದಾಗಿದೆ. ಸುಮಾರು 700 ವರ್ಷಗಳ ಹಿಂದೆ ಜಿಲ್ಲೆಯ ಕೊಡವರು ಸಮೀಪದ ಕೇರಳ ರಾಜ್ಯಕ್ಕೆ ತೆರಳಿ ಧಾರ್ಮಿಕ ಕಾರ್ಯಗಳನ್ನು ಕೈಗೊಳ್ಳುತ್ತಿದ್ದರು. ಈ ಸಂದರ್ಭದಲ್ಲಿ ಯವಕಪಾಡಿಯ ನಾಟೋಳಂಡ ಕುಟುಂಬಸ್ಥರು ಎತ್ತು ಪೋರಾಟದೊಂದಿಗೆ ಬೈತೂರು ದೇವಸ್ಥಾನಕ್ಕೆ ತೆರಳಿದ್ದು ಅಲ್ಲಿಂದ ಹಿಂತಿರುಗುವ ಸಂದರ್ಭದಲ್ಲಿ ದೇವಿಯು ಯವಕಪಾಡಿ ಗ್ರಾಮಕ್ಕೆ ಆಗಮಿಸಿ ನಾಟೋಳಂಡ ಕುಟುಂಬಸ್ಥರ ಅರಣ್ಯದಲ್ಲಿ ನೆಲೆಸಿದ್ದರು ಎನ್ನುವ ಪ್ರತೀತಿಯಿದೆ. ಬಳಿಕ ನೆಟ್ಟುಮಾಡುವಿನಲ್ಲಿ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದಿಂದ ಐದು ಕಿಲೋಮೀಟರ್ ದೂರದಲ್ಲಿ ದೇವಿಗೆ ದೇವಾಲಯವನ್ನು ನಿರ್ಮಿಸಲಾಯಿತು. ಈ ತಾಣದಲ್ಲಿ ಭಗವತಿ ನೆಲೆ ಸೇರಿದಂತೆ ಶಾಸ್ತಾವು ಅಯ್ಯಪ್ಪ, ಕರಿಮೂರ್ತಿ, ವಿಷ್ಣುಮೂರ್ತಿ ನಾಗದೇವತೆ, ಗುಳಿಗ, ಅಜ್ಜಪ್ಪ ಸೇರಿದಂತೆ ವಿವಿಧ ನೆಲೆಗಳನ್ನು ಸ್ಥಾಪಿಸಿ ಗ್ರಾಮ ಸುರಕ್ಷೆಗಾಗಿ, ಊರಿನ ಸುರಕ್ಷಗಾಗಿ ಕಟ್ಟುಪಾಡುಗಳನ್ನು ವಿಧಿಸಲಾಯಿತು. ಇಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ವಿಜೃಂಭಣೆಯಿಂದ ನಡೆಯುತ್ತಿತ್ತು. ಈಚಿನ ದಿನಗಳಲ್ಲಿ ದೇವಾಲಯವನ್ನು ನವೀಕರಿಸಬೇಕಾಗಿ ಕಂಡುಬಂದುದರಿಂದ ಊರಿನ ತಕ್ಕ ಮುಖ್ಯಸ್ಥರು,…

Read More