ಲೇಖಕ: admin

ಮಡಿಕೇರಿ ಮೇ 7 NEWS DESK : ಪಾಕ್ ಉಗ್ರವಾದಿಗಳ ದಾಳಿಗೆ ಪ್ರತಿರೋಧವಾಗಿ ಭಾರತೀಯ ಸೇನೆ ಉಗ್ರರ ಅಡಗು ತಾಣಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪ್ರತಿಕಾರ ಪಡೆದಿದ್ದು, ಭಾರತೀಯ ಸೇನೆಗೆ ವಿಶೇಷ ಮನೋಸ್ಥೈರ್ಯ ತುಂಬುವ ಸಲುವಾಗಿ  ಮುಜರಾಯಿ ಇಲಾಖೆಗೆ ಸಂಬಂಧ ಪಟ್ಟ ದೇವಸ್ಥಾನಗಳಲ್ಲಿ ಪೂಜೆ ನಡೆಸಲು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದು, ಇದರನ್ವಯ ಓಂಕಾರೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿಯ ವತಿಯಿಂದ ಮೇ 8 ರಂದು ಓಂಕಾರೇಶ್ವರ ದೇವಾಲಯದಲ್ಲಿ ಬೆಳಿಗ್ಗೆ 9 ಗಂಟೆಗೆ ವಿಶೇಷ ಪೂಜೆ ನಡೆಯಲಿದೆ. ಮಡಿಕೇರಿಯ ಸರ್ವ ನಾಗರಿಕರು ಆಗಮಿಸಿ ಭಾರತೀಯ ಸೇನೆಗೆ ಆತ್ಮಸ್ಥೈರ್ಯ ತುಂಬುವುದರೊಂದಿಗೆ ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ ಎಂಬ ಸಂದೇಶವನ್ನು ಕಳುಹಿಸವ ಸಲುವಾಗಿ ಪೂಜೆಯಲ್ಲಿ ಭಾಗವಹಿಸಬೇಕೆಂದು ಅಧ್ಯಕ್ಷರು ಹಾಗೂ ಸದಸ್ಯರು ಕೋರಿದ್ದಾರೆ.

Read More

ಮಡಿಕೇರಿ ಮೇ 7 NEWS DESK : ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸದಸ್ಯರಾಗಿ ಕಿರುಗೂರು ಗ್ರಾ.ಪಂ ಅಧ್ಯಕ್ಷರು ಹಾಗೂ ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಆಯ್ಕೆಯಾಗಿದ್ದಾರೆ. ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ವಿರಾಜಪೇಟೆ ಕ್ಷೇತ್ರದಲ್ಲಿ ಪಕ್ಷದ ಬೆಳವಣಿಗೆಗೆ ಸಾಕಷ್ಟು ಶ್ರಮಿಸುತ್ತಿರುವ ರಾಕೇಶ್ ದೇವಯ್ಯ ಅವರು ಕಿರುಗೂರು ಗ್ರಾ.ಪಂ ಸದಸ್ಯರಾಗಿ, ಅಧ್ಯಕ್ಷರಾಗಿ, ಬಿಜೆಪಿಯ ವಿವಿಧ ಘಟಕಗಳ ಪದಾಧಿಕಾರಿಯಾಗಿ ಇದೀಗ ವಿರಾಜಪೇಟೆ ಮಂಡಲದ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಒಡೆಯರ್ ಅಧ್ಯಕ್ಷರಾಗಿರುವ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಸಂಬಂಧಿತ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾಗಿ ರಾಕೇಶ್ ದೇವಯ್ಯ ಅವರು ಕಾರ್ಯನಿರ್ವಹಿಸಲಿದ್ದಾರೆ. ಪಕ್ಷದ ನಿಷ್ಠಾವಂತ ಯುವ ಕಾರ್ಯಕರ್ತರಿಗೆ ಸಂಸದರು ಅವಕಾಶ ನೀಡಿರುವುದು ಸ್ವಾಗತಾರ್ಹವೆಂದು ರಾಕೇಶ್ ದೇವಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ಮೇ 7 NEWS DESK : ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್ರದ ಅಸೋಸಿಯೇಷನ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಸ್ಟೂಡೆಂಟ್ಸ್ ವತಿಯಿಂದ “ಉತ್ಕರ್ಷ್ 2025”ಎಂಬ ಫೆಸ್ಟ್ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ  ಬ್ರಹ್ಮಕುಮಾರಿ ಧನಲಕ್ಷ್ಮಿ ಉದ್ಘಾಟಿಸಿ ಮಾತನಾಡಿ, ಎಲ್ಲರಲ್ಲೂ ಪ್ರತಿಭೆ ಇರುತ್ತದೆ ಅದನ್ನು ಗುರುತಿಸಿ ಹೊರ ತರುವ ಕೆಲಸ ಆಗಬೇಕಿದೆ. “ಪರಮಾತ್ಮ ಜೊತೆಗಿದ್ದಾರೆ” ಎಂಬ ಭಾವದಿಂದ ಮುನ್ನಡೆದರೆ ಭಯವು ಕಾಡುವುದಿಲ್ಲ ಎಂದರು. ಕೆ.ಜಿ.ನೀರಜ್ ಮಾತನಾಡಿ, ಸ್ವ ಉದ್ಯೋಗದಲ್ಲಿರುವ ವಿಪುಲ ಅವಕಾಶಗಳ ಬಗ್ಗೆ ವಿವರಿಸಿದರು. ಕಾರ್ಯಕ್ರಮದ ಸಂಘಟಕರಾದ ಡಾ.ದೀಕ್ಷಿತಾ ವರ್ಕಾಡಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ  ಸಹಪ್ರಾಧ್ಯಾಪಕರಾದ ಪ್ರೊ.ವಸಂತಕುಮಾರಿ, ಡಾ.ನಿರ್ಮಲ ಕೆ.ಡಿ, ಡಾ.ಪ್ರಕಾಶ್ ಎಂ.ಎನ್ ಹಾಜರಿದ್ದರು. ಸುಫಾನ ಸ್ವಾಗತಿಸಿದರು. ವಿಷ್ಣುಪ್ರಿಯ ಪ್ರಾರ್ಥಿಸಿದರು.  ಪ್ರಿಯಾಂಕ ವಂದಿಸಿದರು. ವಿನಿತ ಕಾರ್ಯಕ್ರಮವನ್ನು ನಿರ್ವಹಿಸಿದರು. ಮಾರುಕಟ್ಟೆ ಕೌಶಲ್ಯಗಳು, ಮಾನವ ಸಂಪನ್ಮೂಲ, ಹಣಕಾಸು, ಅತ್ಯುತ್ತಮ ಉದ್ಯಮಿ ಹಾಗೂ ವ್ಯವಹಾರಿಕ ರಸಪ್ರಶ್ನೆ ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ಸಮಾರೋಪ ಭಾಷಣವನ್ನು ದೈಹಿಕ ಶಿಕ್ಷಣ ಸಂಚಾಲಕ…

Read More

ಮೈಸೂರು ಮೇ 7 NEWS DESK : ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರನ್ನು ಗುಂಡಿಟ್ಟು ಹತ್ಯೆ ಮಾಡಿದ ಪಾಕಿಸ್ತಾನದ ಉಗ್ರರಿಗೆ ನಮ್ಮ ಭಾರತೀಯ ಸೇನಾ ಪಡೆಗಳು ತಕ್ಕ ಉತ್ತರ ನೀಡಿದೆ. “ಆಪರೇಷನ್‌ ಸಿಂಧೂರ” ಮೂಲಕ ನಡೆಸಿರುವ ಸೇನಾ ಕಾರ್ಯಾಚರಣೆ ಅತ್ಯಂತ ನಿಖರ, ನಿರ್ದಿಷ್ಟ ಗಟ್ಟಿ ನಿರ್ಧಾರದ ಪ್ರತಿಫಲವಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ಭಯೋತ್ಪಾದನೆಯನ್ನು ನಿರ್ನಾಮ ಮಾಡಲು ಸಂಕಲ್ಪ ತೊಟ್ಟಿದೆ. ಅದು “ಆಪರೇಷನ್‌ ಸಿಂಧೂರ” ಮೂಲಕ ಕಾರ್ಯಾರಂಭವಾಗಿದೆ ಎಂದರು. ಪಹಲ್ಗಾಮ್‌ ದಾಳಿಯನ್ನು ನೋಡಿದ ಪ್ರತಿಯೊಬ್ಬರಿಗೂ ರಕ್ತ ಕುದಿಯುತ್ತಿತ್ತು. ಇಂಥ ಹೀನ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಅಮಾಯಕರನ್ನು ಕೊಂದು, ಹಲವಾರು ಮಹಿಳೆಯರ “ಸಿಂಧೂರ” ಕಸಿದ ಉಗ್ರರಿಗೆ ತಕ್ಕ ಉತ್ತರ ಕೊಡಬೇಕೆಂಬುದು ಭಾರತೀಯರ ನಿರೀಕ್ಷೆಯಾಗಿತ್ತು. ಅದರಂತೆ ಮೋದಿ ಸರ್ಕಾರ “ಆಪರೇಷನ್‌ ಸಿಂಧೂರ” ಹೆಸರಿನಲ್ಲೇ ದಾಳಿ ನಡೆಸಿ “ನ್ಯಾಯ” ಒದಗಿಸುತ್ತಿದೆ ಎಂದು…

Read More

ಮಡಿಕೇರಿ ಮೇ 7 NEWS DESK : ಕೊಡಗು ಜಿಲ್ಲಾ ಬಂಟರ ಸಂಘ ಹಾಗೂ ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಮೇ 10 ಮತ್ತು 11 ರಂದು ಮಡಿಕೇರಿಯಲ್ಲಿ “ಬಂಟೆರೆನ ವಾರ್ಷಿಕ ಸಮ್ಮಿಲನ-2025” ನಡೆಯಲಿದ್ದು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಯುವ ಬಂಟ್ಸ್ ಅಸೋಸಿಯೇಷನ್ ನಿರ್ದೇಶಕ ಕೆ.ಶರತ್ ಕುಮಾರ್ ಶೆಟ್ಟಿ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಮ್ಯಾನ್ಸ್ ಕಾಂಪೌಂಡ್ ನಲ್ಲಿ ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿ.ಕೆ.ಸದಾನಂದ ರೈ ಅವರ ಅಧ್ಯಕ್ಷತೆಯಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಸಮಾಜ ಬಾಂಧವರಿಗಾಗಿ ವಿವಿಧ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಮೇ 10 ರಂದು ಬೆಳಿಗ್ಗೆ 7.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಬಂಟರ ಭವನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಗಿರೀಶ್ ರೈ, ಗಾಳಿಬೀಡು ನಿವೃತ್ತ ಯೋಧ ಬಾಬು ಪ್ರಸಾದ್ ರೈ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಡಿಕೇರಿ…

Read More

ಕುಶಾಲನಗರ ಮೇ 7 NEWS DESK : ಒಳ ಮೀಸಲಾತಿ ಸಮೀಕ್ಷೆಗೆ ಆರಂಭಗೊಂಡಿದ್ದು, ಕುಶಾಲನಗರದಲ್ಲಿ ಗಣತಿದಾರರು ಮನೆ ಮನೆಗೆ ತೆರಳಿ ಗಣತಿ ಸಮೀಕ್ಷೆ ನಡೆಸಿದರು. ಕುಶಾಲನಗರ ಪಿ.ಎಂ.ಶ್ರೀ ಶಾಲೆಯ ಮುಖ್ಯ ಶಿಕ್ಷಕಿ ಭಾರತಿ, ಶಿಕ್ಷಕಿಯರಾದ ಕುಂಞಮ್ಮ, ಜಾನಕಿ ಸಮೀಕ್ಷೆ ನಡೆಸಿದರು.

Read More

ಮಡಿಕೇರಿ ಮೇ 7 NEWS DESK : ಸಿದ್ದಾಪುರ 33/11 ಕೆ.ವಿ ವಿದ್ಯುತ್ ಉಪ ಕೇಂದ್ರದಲ್ಲಿ ಹೆಚ್ಚುವರಿ ಶಕ್ತಿ ಪರಿವರ್ತಕವನ್ನು ಅಳವಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗದಲ್ಲಿ ಮೇ 9 ರಂದು ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.  ಆದ್ದರಿಂದ ಸಿದ್ದಾಪುರ ಶಾಖಾ ವ್ಯಾಪ್ತಿಯ, ಸಿದ್ದಾಪುರ, ಕರಡಿಗೋಡು, ಕೂಡುಗದ್ದೆ, ಗುಹ್ಯ, ಮೇಕೂರು, ಮಾಲ್ದಾರೆ, ಇಂಜಿಲಗೆರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಮೇ 7 NEWS DESK : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು  ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಮೇ 8 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಮೇ 7 NEWS DESK : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದಲ್ಲಿ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಗಣಪತಿ ಹೋಮ, ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥ ಸ್ನಾನ, ಕಳಶ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾರತಿ ನಡೆಯಿತು. ದೇವಿಯ ರಥೋತ್ಸವ ದೇವಾಲಯದ ಆವರಣದ ಸುತ್ತ ಸಾಗಿತು. ನಂತರ ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ, ಮಂಗಳಾರತಿ, ಅನ್ನದಾನ, ತಾಯಿಯ ದರ್ಶನ ಜರುಗಿತು. ಸಂಜೆ ದೇವಾಲಯದ ಆವರಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ ನಡೆಯಿತು. ರಾತ್ರಿ ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ಕೊಡಗು ಸೇರಿದಂತೆ ಹೊರ ಜಿಲ್ಲೆಯ 5 ಸಾವಿರಕ್ಕೂ ಅಧಿಕ ಭಕ್ತರು ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡಿದ್ದರು.     

Read More

ಮಡಿಕೇರಿ ಏ.7 NEWS DESK : ಪ್ರಸಕ್ತ(2025-26) ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶ ಪರೀಕ್ಷೆಯು ಮೇ 9 ರಂದು ನಡೆಯಲಿದೆ. ಪ್ರವೇಶ ಪರೀಕ್ಷೆ ಫಲಿತಾಂಶ ಮೇ, 13 ರಂದು ಪ್ರಕಟವಾಗಲಿದೆ. ಮೇ, 17 ರಂದು ಅರ್ಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡುವುದು. ಆಯ್ಕೆಯಾದ ಶಾಲೆಗೆ ದಾಖಲಾಗಲು ಮೇ, 31 ಕೊನೆಯ ದಿನವಾಗಿದೆ. ಅರ್ಜಿಯನ್ನು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://swd.karnataka.gov.in ಅನ್ನು ಬಳಸಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಟಿತ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ. ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕ…

Read More