ಬೆಂಗಳೂರು NEWS DESK ಮಾ.15 : ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ. ಈ ಪ್ರಶಸ್ತಿಯು ಜನಪರ ಕಾರ್ಯದ ನಮ್ಮ ಉತ್ಸಾಹವನ್ನು ನೂರ್ಮಡಿಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಮಾ.15 NEWS DESK : ಇತಿಹಾಸ ಪ್ರಸಿದ್ಧ ಕಲ್ಲುಗುಂಡಿಯ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲಕ್ಕೆ ಮುಹೂರ್ತದ ಕೊಳ್ಳಿ ಕಡಿಯುವ ಮೂಲಕ ಚಾಲನೆ ನೀಡಲಾಯಿತು. ಪ್ರತಿವರ್ಷದಂತೆ ಈ ಬಾರಿ ಕೂಡ ಮಾ.28 ಮತ್ತು 29ರಂದು ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಮತ್ತು ಪಂಜುರ್ಲಿ, ಕಲ್ಲುರ್ಟಿ, ಗುಳಿಗ ಹಾಗೂ ರಕ್ತೇಶ್ವರಿ ದೈವಗಳ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. ವರದಿ : ಕೀಲಾರು ಶರತ್, ಸಂಪಾಜೆ
ಮಡಿಕೇರಿ ಮಾ.15 NEWS DESK : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ಯಶಸ್ವಿ ವರ್ಷಗಳನ್ನು ಪೂರೈಸಿದ ಸಲುವಾಗಿ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರು ಡಿ.ಕೆ ಶಿವಕುಮಾರ್ ಅವರನ್ನು ಅಭಿನಂದಿಸಿದರು. ಈ ಸಂದರ್ಭ ಸಚಿವ ಭೈರತಿ ಸುರೇಶ್ ಇದ್ದರು.
ನಾಪೋಕ್ಲು ಮಾ.15 NEWS DESK : ಮೂರ್ನಾಡಿನ ಮಾರುತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿಂಡರ್ ಗಾರ್ಟನ್ ಘಟಿಕೋತ್ಸವ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಂಡಂಡ ಅಪ್ಪಚ್ಚು, ಪದವೀಧರ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಆಗಬೇಕಾದರೆ ಪ್ರಾರಂಭದಲ್ಲಿ ಅವರ ತಳಹದಿ ಉತ್ತಮವಾಗಿರಬೇಕು. ಶಿಕ್ಷಕರು ಕಠಿಣ ಪರಿಶ್ರಮದಿಂದ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳನ್ನು ಉತ್ತಮರಾಗಿ ರೂಪಿಸುತ್ತಾರೆ. ಎಳೆಯ ವಯಸ್ಸಿನಲ್ಲಿಯೇ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು, ಸಾಮಾಜಿಕ, ಭಾವನಾತ್ಮಕ ಬೌದ್ಧಿಕ ಅಂಶಗಳ ಕುರಿತು ತರಬೇತಿ ನೀಡಬೇಕು ಎಂದರು. ಯುಕೆಜಿಯ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲಾ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಶಿಕ್ಷಕರಿಗೆ ಕೃತಜ್ಞತೆ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದರು. ಒಂದನೇ ತರಗತಿ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. ಯುಕೆಜಿಯ ಪ್ರತಿಭಾನ್ವಿತ ಪುಟ್ಟ ಮಕ್ಕಳು ಪದವಿ ನಿಲುವಂಗಿ ಮತ್ತು ಕ್ಯಾಪ್ ಧರಿಸಿ ಪದವಿ ಸ್ವೀಕರಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಮುಂಡಂಡ ಅಪ್ಪಚ್ಚು, ಉಪಾಧ್ಯಕ್ಷ ಚೇಂದ್ರಿಮಾಡ ಗಿಲ್ ಸೋಮಯ್ಯ,…
ಸೋಮವಾರಪೇಟೆ ಮಾ.15 NEWS DESK : ಬಳಗುಂದ ಕಾಂಚನಗಂಗಾ ಕ್ರೀಡಾ ಸಂಘ ಮತ್ತು ತಾಲ್ಲೂಕು ಒಕ್ಕಲಿಗರ ಸಂಘದ ಕುವೆಂಪು ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಬೇಸಿಗೆ ಹಾಕಿ ಶಿಬಿರ ಏ.1ರಿಂದ 20ರ ವರೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಸಿಂಥೆಟಿಕ್ ಹಾಕಿ ಟರ್ಫ್ ನಲ್ಲಿ ನಡೆಯಲಿದೆ ಎಂದು ಕ್ರೀಡಾ ಸಂಘದ ಉಪಾಧ್ಯಕ್ಷ ಅಂತೋಣಿ ಡಿಸೋಜ ಹೇಳಿದರು. ಗ್ರಾಮೀಣ ಮಕ್ಕಳ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿವರ್ಷ ಶಿಬಿರವನ್ನು ನಡೆಸಲಾಗುತ್ತದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರಪೇಟೆಯ ಅನೇಕ ಹಾಕಿ ಆಟಗಾರರು ಭಾರತ ತಂಡವನ್ನು ಪ್ರತಿನಿಧಿಸಿ ತಾಲ್ಲೂಕು ಮತ್ತು ದೇಶಕ್ಕೂ ಕೀರ್ತಿ ತಂದಿದ್ದಾರೆ ಎಂದು ಹೇಳಿದರು. ಬೆಳಿಗ್ಗೆ 6.30 ರಿಂದ 9ರ ತನಕ ತರಬೇತಿ ನಡೆಯಲಿದೆ. ಎನ್‍ಐಎಸ್ ತರಬೇತುದಾರರು ತರಬೇತಿ ನೀಡಲಿದ್ದಾರೆ. ಮಕ್ಕಳಿಗೆ ಹಾಲು, ಮೊಟ್ಟೆಯನ್ನು ವಿತರಿಸಲಾಗುತ್ತದೆ. ಶಿಬಿರದಲ್ಲಿ ತರಬೇತಿ ಪಡೆದ ಪ್ರತಿಭಾವಂತರನ್ನು ಗುರುತಿಸಿ ಕ್ರೀಡಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಸಲಹೆ ನೀಡಲಾಗುವುದು ಎಂದು ಹೇಳಿದರು. ಒಕ್ಕಲಿಗರ ಸಂಘದ ಅಧ್ಯಕ್ಷÀ ಎ.ಆರ್.ಮುತ್ತಣ್ಣ ಮಾತನಾಡಿ, ಪ್ರಾಥಮಿಕ ಹಾಗೂ…
ಕುಶಾಲನಗರ ಮಾ.15 NEWS DESK : ತಾಲ್ಲೂಕಿನ ಬಲಿಜ ಸಮಾಜದ ವತಿಯಿಂದ ಕುಲಗುರು ಕೈವಾರ ತಾತಯ್ಯನವರ 299 ನೇ ಜಯಂತಿಯನ್ನು ಕುಶಾಲನಗರ ಬಲಿಜ ಸಮಾಜದ ಕಚೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಯೋಗಿ ನಾರೇಯಣರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅವರ ಸೇವೆಯನ್ನು ಸ್ಮರಿಸಲಾಯಿತು. ಯೋಗಿ ನಾರೇಯಣರು ಈ ನಾಡು ಕಂಡ ಅಪ್ರತಿಮ ಶ್ರೇಷ್ಠ ಯತೀಂದ್ರರು. ಅವರು ತಮ್ಮ ಸಾಧನಾ ಶಕ್ತಿಯಿಂದ ಜಗತ್ತನ್ನು ಮುನ್ನಡೆಸುತ್ತಿರುವ ಪಾರ್ವತಿ ಪರಮೇಶ್ವರರೇ ಸ್ವತಃ ಲೇಖನಿ ಕೊಟ್ಟು ಬರೆಸಿದ ತ್ರಿಕಾಲ ಜ್ಞಾನವನ್ನು ಬರೆಸಿದ ಬಗ್ಗೆ ಪ್ರತೀತಿ ಇದ್ದು, ಇದು ಕೃತಯುಗ, ತ್ರೇತಾಯುಗ ಹಾಗೂ ದ್ವಾಪರ ಯುಗಗಳಿಗೂ ಅನ್ವಯವಾಗುವಂತಿತ್ತು. ಹಾಗಾಗಿ ನಾರೇಯಣರು ನಂತರ ಕೈವಾರ ತಾತಯ್ಯ ನಾಗಿ ಪ್ರಸಿದ್ದಿ ಪಡೆದರೆಂದು ಬಲಿಜ ಸಮಾಜದ ಅಧ್ಯಕ್ಷ ಆರ್.ಬಾಬಣ್ಣ ಹೇಳಿದರು. ಈ ಸಂದರ್ಭ ಸಮಾಜದ ಗೌರವಾಧ್ಯಕ್ಷ ಟಿ.ಎಸ್.ಬಾಲಕೃಷ್ಣ, ಉಪಾಧ್ಯಕ್ಷ ಎಂ.ಆರ್.ಗಣೇಶ್, ಕಾರ್ಯದರ್ಶಿ ಟಿ.ಎಸ್.ನಿರಂಜನ್, ಸಹಕಾರ್ಯದರ್ಶಿ ಟಿ.ಎನ್.ಜಯರಾಂ, ಖಜಾಂಚಿ ಟಿ.ಬಿ.ಸತೀಶ್, ಸಂಚಾಲಕ ಸಿ.ಎನ್.ಮದನ್, ಪ್ರಮುಖರಾದ ಟಿ.ಡಿ.ದಯಾನಂದ್, ಸವಿತಾ ದಯಾನಂದ, ಶಿಲ್ಪಾ ಸತೀಶ್, ಚಂದ್ರಕಲಾ, ಪುಷ್ಪಾವತಿ,…
ಮಡಿಕೇರಿ ಮಾ.14 NEWS DESK : ಜಗತ್ತು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅರಿವು ಮೂಡಬೇಕಾದರೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಮತ್ತು ಸಾಮಾಜಿಕ ಜಾಲತಾಣಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಖ್ಯಾತ ಮಕ್ಕಳ ತಜ್ಞ ಡಾ.ಬಿ.ಸಿ.ನವೀನ್ ಕುಮಾರ್ ಕರೆ ನೀಡಿದ್ದಾರೆ. 2023-24ನೇ ಸಾಲಿನಲ್ಲಿ ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತೀ ಹೆಚ್ಚು ಫಲಿತಾಂಶ ಬರಲು ಕಾರಣಕರ್ತರಾದ ಕಾಲೇಜಿನ ಉಪನ್ಯಾಸಕರು ಹಾಗೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಧಾನ ಭಾಷಣ ಮಾಡಿದ ಡಾ.ಬಿ.ಸಿ.ನವೀನ್ ಕುಮಾರ್, ಶಿಕ್ಷಣ ಮತ್ತು ಆರೋಗ್ಯ ದೇಶದ ಸಂಪತ್ತು, ವಿದ್ಯಾರ್ಥಿಗಳು ಓದಿನ ಜೊತೆಗೆ ದೇಶದ ಅಭಿವೃದ್ಧಿ ಹಾಗೂ ಆರ್ಥಿಕ ಪರಿಸ್ಥಿತಿಯ ಬಗ್ಗೆ ಚಿಂತಿಸಬೇಕು. ಸಾಮಾಜಿಕ ಜಾಲತಾಣಗಳು ವಿವಿಧ ಸ್ತರಗಳ ವ್ಯಕ್ತಿತ್ವ, ಪ್ರತಿಭೆ ಮತ್ತು ಸೃಜನ ಶೀಲತೆಯನ್ನು ಸಮಾಜಕ್ಕೆ ತೋರಿಸುತ್ತದೆ. ಇಡೀ ವಿಶ್ವ, ದೇಶದಲ್ಲಿ ಏನಾಗುತ್ತಿದೆ ಎಂಬುವುದರ ಕುರಿತು ಅರಿವು ಮೂಡಿಸುತ್ತದೆ. ಸಾಮಾಜಿಕ ಜಾಲತಾಣವನ್ನು…
ಮಡಿಕೇರಿ ಮಾ.14 NEWS DESK : ರಾಜ್ಯದಲ್ಲಿ ಬಲಿಜ ಸಮಾಜಕ್ಕೆ ಈ ಹಿಂದೆ 2ಎ ಹಿಂದುಳಿದ ವರ್ಗದಡಿ ಮೀಸಲಾತಿ ದೊರೆಯುತ್ತಿದ್ದು, ಈಗ 3ಬಿ ವ್ಯಾಪ್ತಿಗೆ ಸೇರಿಸಿ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕೆ ತೊಂದರೆಯಾಗಿದ್ದು, ಈ ಮೊದಲು ಇದ್ದಂತೆ ಬಲಿಜ ಸಮಾಜವನ್ನು 2ಎ ಗೆ ಸೇರಿಸುವಂತಾಗಬೇಕು ಎಂದು ನಿವೃತ್ತ ಅಧಿಕಾರಿ ಗಣೇಶ್ ನಾಯ್ಡು ಮನವಿ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆದ ಶ್ರೀ ಯೋಗಿ ನಾರಾಯಣ ಯತೀಂದ್ರರ ಜಯಂತಿ(ಕೈವಾರ ತಾತಯ್ಯ) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಲಿಜ ಸಮಾಜವು ಹಿಂದುಳಿದ ವರ್ಗಕ್ಕೆ ಬರಲಿದ್ದು, ಬಳೆ ಮಾರುವುದು ಪ್ರಮುಖ ಕಸುಬಾಗಿದೆ. ಹಿಂದೆ ಬಳೆ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು ಎಂದು ಗಣೇಶ್ ನಾಯ್ಡು ತಿಳಿಸಿದರು. ಕೈವಾರ ತಾತಯ್ಯ ಅವರ ತತ್ವಗಳು, ಸಂದೇಶಗಳನ್ನು ಯುವ ಜನರು ತಿಳಿದುಕೊಳ್ಳುವಂತಾಗಬೇಕು. ಬಳೆ ಮಾರುವುದು ಕನಿಷ್ಠ ಕೆಲಸವಲ್ಲ. ಸ್ವ ಉದ್ಯೋಗ ಮಾಡುವಲ್ಲಿ ಬಲಿಜರು ತಮ್ಮದೇ ಆದ ಸ್ಥಾನ…
ಮಡಿಕೇರಿ ಮಾ.14 NEWS DESK : ನಗರದ ಪ್ರಸಿದ್ಧ ಎಲೆಕ್ಟ್ರಾನಿಕ್ ಮತ್ತು ಫರ್ನಿಚರ್ ಶೋರೂಮ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕಾರ್ಯನಿರ್ವಹಿಸಲು ಉತ್ಸಾಹಿ ಹಾಗೂ ಪ್ರತಿಭಾವಂತ ಅಭ್ಯರ್ಥಿಗಳನ್ನು ನಾವು ಆಹ್ವಾನಿಸಲಾಗಿದೆ. ಸೇಲ್ಸ್ ಕ್ಷೇತ್ರದಲ್ಲಿ ಆಸಕ್ತಿ ಮತ್ತು ಗ್ರಾಹಕರೊಂದಿಗೆ ಸಂವಹಿಸಲು ಉತ್ತಮ ನೈಪುಣ್ಯ ಇರಬೇಕು. ಅನುಭವ ಇರುವವರಿಗೆ ಆದ್ಯತೆ, ಹೊಸದು ಕಲಿಯಲು ಮತ್ತು ತಂಡದೊಂದಿಗೆ ಕೆಲಸ ಮಾಡಲು ಸಿದ್ಧತೆ ಇರಬೇಕು. ಆಕರ್ಷಕ ಸಂಬಳ ಮತ್ತು ಇತರ ಸೌಲಭ್ಯಗಳು ಲಭ್ಯವಿದೆ. ಆಶಕ್ತರು 94481 25571 ತಮ್ಮ ಪ್ರೊಫೈಲ್ ಅನ್ನು ವಾಟ್ಸಪ್ ಮೂಲಕ ಕಳಿಸಬಹುದು.
ಕುಶಾಲನಗರ ಮಾ.14 NEWS DESK : ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜು, ಸಾಂಸ್ಕೃತಿಕ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರೀಡಾ ವಿಭಾಗದ ಆಶ್ರಯದಲ್ಲಿ ಆಯೋಜಿಸಿಲಾದ ಮೂರು ದಿನಗಳ ಜನಪದ ಉತ್ಸವಕ್ಕೆ ತೆರೆ ಬಿದ್ದಿತು. ಜನಪದ ಕಲಾತಂಡಗಳ ಮೆರವಣಿಗೆಗೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಚಾಲನೆ ನೀಡಿದರು. ಜನಪದ ಕಾರ್ಯಾಗಾರವನ್ನು ಮೈಸೂರಿನ ಉಮೇಶ್ ಉದ್ಘಾಟಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಸಿದ್ಧಪಡಿಸಿದ ದೇಶಿ ಆಹಾರ ಸಾಮಗ್ರಿಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು, ಕಾಲೇಜಿನ ಅಭಿವೃದ್ಧಿ ಸಮಿತಿಯ ಪ್ರಮುಖರು ಚಾಲನೆ ನೀಡಿದ್ದು ಕಾಲೇಜಿನ ಪ್ರಾಂಶುಪಾಲರಾದ ಬಿ.ಎಂ.ಪ್ರವೀಣ್ ಕುಮಾರ್ ಅಧ್ಯಕ್ಷತೆಯಲ್ಲಿ ವಿವಿಧ ಕಾರ್ಯಕ್ರಮಗಳು ಜರಗಿದವು. ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ನವನೀತ್ ಪೊನ್ನೆಟಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಉಪನ್ಯಾಸಕರು ಇದ್ದರು. ಕಾಲೇಜಿನ ವಿದ್ಯಾರ್ಥಿಗಳಿಂದ ಜನಪದ ಹಾಡುಗಳು ನೃತ್ಯ ಪ್ರದರ್ಶನ ಕಾರ್ಯಕ್ರಮ ಜರುಗಿತು. ಕರ್ನಾಟಕ ಜಾನಪದ ಪರಿಷತ್ ಕುಶಾಲನಗರ ತಾಲೂಕು ಅಧ್ಯಕ್ಷರಾದ ಎಂ.ಎನ್.ಚಂದ್ರಮೋಹನ್…






