ಲೇಖಕ: admin

ಮಡಿಕೇರಿ NEWS DESK ಮಾ.14 : ಕೊಡಗು ಪತ್ರಕರ್ತರ ಸಂಘ(ರಿ) ದ ನೂತನ ಅಧ್ಯಕ್ಷರಾಗಿ ಅನಿಲ್ ಹೆಚ್.ಟಿ. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಬಿಳಿಗೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ನಗರದ ಪತ್ರಿಕಾ ಭವನದಲ್ಲಿ ಹಾಲಿ ಅಧ್ಯಕ್ಷ ಎಸ್.ಎ.ಮುರಳೀಧರ್ ಅಧ್ಯಕ್ಷತೆಯಲ್ಲಿ  ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಹಿರಿಯ ಸಲಹೆಗಾರ ಟಿ.ಪಿ.ರಮೇಶ್ ಅವರು ಸರ್ವ ಸದಸ್ಯರ ಒಪ್ಪಿಗೆ ಪಡೆದು ನೂತನ ಆಡಳಿತ ಮಂಡಳಿಗೆ ಪದಾಧಿಕಾರಿಗಳ ಹೆಸರನ್ನು ಪ್ರಕಟಿಸಿದರು. ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಅನಿಲ್ ಹೆಚ್.ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಬಿಳಿಗೇರಿ, ಉಪಾಧ್ಯಕ್ಷರಾಗಿ ತೇಲಪಂಡ ಕವನ್ ಕಾರ್ಯಪ್ಪ, ಕೋಶಾಧಿಕಾರಿ ಟಿ.ಕೆ.ಸಂತೋಶ್, ಕ್ಷೇಮನಿಧಿ ಅಧ್ಯಕ್ಷರಾಗಿ ಜಿ.ವಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಕೂರ್ಗ್, ಸಂಘದ ಸಹ ಕಾರ್ಯದರ್ಶಿಯಾಗಿ ಪ್ರಸಾದ್ ಸಂಪಿಗೆಕಟ್ಟೆ, ಖಾಯಂ ಆಹ್ವಾನಿತರಾಗಿ ಸಂಘದ ನಿಕಟಪೂರ್ವ ಅಧ್ಯಕ್ಷ ಎಸ್.ಎ.ಮುರಳೀಧರ್ ಅವರನ್ನು ಆಯ್ಕೆ ಮಾಡಲಾಯಿತು. *ಜಿಲ್ಲಾ ಸಮಿತಿ ನಿರ್ದೇಶಕರು*  ಉಜ್ವಲ್ ರಂಜಿತ್, ಟಿ.ಜಿ.ಸತೀಶ್, ಟಿ.ಜೆ.ಪ್ರವೀಣ್ ಕುಮಾರ್, ರಂಜಿತ್ ಕವಲಪಾರ,  ಸಯ್ಯದ್ ಇರ್ಫಾನ್, ಎಚ್.ಎನ್.ಲಕ್ಷ್ಮೀಶ್‌, ಗುರುದರ್ಶನ್, ಪಿ.ವಿ.ಪ್ರಭಾಕರ್, ಕುಡೆಕಲ್ ಸಂತೋಷ್, ಎಸ್.ಆರ್.ವತ್ಸಲ,…

Read More

ಸುಂಟಿಕೊಪ್ಪ NEWS DESK ಮಾ.14 : ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕೊಳವೆ ಬಾವಿಗಳ ಮೋಟಾರ್ ಗಳ ದುರಸ್ತಿ ಕಾರ್ಯ ಮತ್ತು ನೀರು ಸರಬರಾಜಿನ ಪೈಪ್ ಲೈನ್ ಗಳು ಹಾನಿಗೀಡಾದ ಕಾರಣ ಸಮಸ್ಯೆ ಉಲ್ಬಣಿಸಿದೆ. ಬಡಾವಣೆಗಳ ನಿವಾಸಿಗಳು ನೀರಿಗಾಗಿ ಪರದಾಡುತ್ತಿದ್ದ ಹಿನ್ನೆಲೆ ಸುಂಟಿಕೊಪ್ಪ ಗ್ರಾ.ಪಂ ಮೋಟಾರ್ ಗಳ ದುರಸ್ತಿ ಕಾರ್ಯ ಕೈಗೊಂಡಿತು. ಆದರೆ ಇದರ ನಡುವೆಯೇ ಪೈಪ್ ಗಳು ಹಾನಿಗೀಡಾದ ಹಿನ್ನೆಲೆ ಮತ್ತಷ್ಟು ದಿನಗಳು ನೀರು ಇಲ್ಲದಂತ್ತಾಯಿತು. ಪರಿಸ್ಥಿತಿ ಕೈಮೀರುವುದನ್ನು ಅರಿತ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ಹಾಗೂ ಆಡಳಿತ ಮಂಡಳಿಯ ಪ್ರಮುಖರು ತಕ್ಷಣ ಎಚ್ಚೆತ್ತುಕೊಂಡು ಖಾಸಗಿ ತೋಟಗಳಿಂದ ನೀರಿನ ಟ್ಯಾಂಕ್ ಪಡೆದು ಅಗತ್ಯವಿರುವ ಬಡಾವಣೆಗಳಿಗೆ ನೀರು ಸರಬರಾಜು ಮಾಡಿದರು. ಅಲ್ಲದೆ ಹಾನಿಗೀಡಾದ ಪೈಪ್ ಲೈನ್ ಗಳ ದುರಸ್ತಿ ಕಾರ್ಯವನ್ನು ಕೂಡ ಕೈಗೊಂಡರು. ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಗ್ರಾ.ಪಂ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗಕ್ಕೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.

Read More

ಮಡಿಕೇರಿ NEWS DESK ಮಾ.14 : ವಿದ್ಯಾರ್ಥಿ ಜೀವನದಲ್ಲಿ ನಾವು ಏನನ್ನು ಪಡೆಯುತ್ತೇವೆಯೋ ಅದನ್ನೇ ಬದುಕಿನಲ್ಲೂ ಅಳವಡಿಸಿಕೊಳ್ಳುತ್ತೇವೆ. ಆದ್ದರಿಂದ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಶಿಸ್ತು ಮತ್ತು ತಾಳ್ಮೆಯನ್ನು ಮೈಗೂಡಿಸಿಕೊಂಡು ಯಶಸ್ಸನ್ನು ಸಾಧಿಸಬೇಕೆಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಕರೆ ನೀಡಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮತ್ತು ಹಳೇ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಸಮಾಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಯಶಸ್ಸನ್ನು ಸಾಧಿಸಬೇಕಾದರೆ ಪೋಷಕರ ಹಾಗೂ ಶಿಕ್ಷಕರ ಆಶೀರ್ವಾದ ಮುಖ್ಯ, ಜೊತೆಯಲ್ಲಿ ಒಳ್ಳೆತನ ಮತ್ತು ತಾಳ್ಮೆ ಅಗತ್ಯ. ಪೋಷಕರು ಮಕ್ಕಳ ತಪ್ಪುಗಳನ್ನು ತಿದ್ದಿ ಅವರಲ್ಲಿ ಮೌಲ್ಯಗಳನ್ನು ತುಂಬುತ್ತಾರೆ, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಕೌಶಲ್ಯ ಹೆಚ್ಚಿಸುವ ಕಾರ್ಯವನ್ನು ಮಾಡುತ್ತಾರೆ. ಅಲ್ಲದೆ ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ದೇಶಕ್ಕೆ ಕೊಡುಗೆಯಾಗಿ ನೀಡುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದ ನಂತರವೂ ಶಿಕ್ಷಕರನ್ನು ಸದಾ ಸ್ಮರಿಸುವಂತಾಗಬೇಕು ಎಂದು…

Read More

ಬೆಂಗಳೂರು NEWS DESK ಮಾ.14 : ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ, ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಪ್ರಶ್ನಿಸಿದರು. ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಉತ್ತರಿಸಿದರು. ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ವಿಚಾರದ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಪ ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. ವರದಿ ಬರುವ ಮೊದಲೇ ವಿವಿಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂಥಾ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

Read More

ವಿರಾಜಪೇಟೆ NEWS DESK ಮಾ.14 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ನವರ ಕೋರಿಕೆ ಮೇರೆಗೆ ಕ್ಷೇತ್ರದ ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಸಲ್ಲಿಸಿದ 10 ಕೋಟಿ ರೂಗಳ ವಿಶೇಷ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯ ಸಹಮತಿಯೊಂದಿಗೆ ಸರ್ಕಾರದಿಂದ ಅನುಮೋದನೆ ದೊರಕಿದೆ. 2024-25 ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದ ಲೆಕ್ಕ ಶೀರ್ಷಿಕೆ 5054 ರಡಿ  ಎ.ಎಸ್.ಪೊನ್ನಣ್ಣ ಅವರು ಸಲ್ಲಿಸಿದ ಪ್ರಸ್ತಾನನೆಯ ಆಧಾರದಲ್ಲಿ  ಕಾಮಗಾರಿಗೆ ಅನುಮೋದನೆ ದೊರಕಿದ್ದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ 34 ಆಯ್ದ ಗ್ರಾಮೀಣ ರಸ್ತೆ ಮತ್ತು ಸೇತುವೆ ಕಾಮಗಾರಿಗಳಿಗೆ  ಒಟ್ಟು 12 ಪ್ಯಾಕೆಜ್ ಗಳಲ್ಲಿ  10 ಕೋಟಿ  ಮೊತ್ತದಲ್ಲಿ ಕಾಮಗಾರಿ ನಡೆಸುವಂತೆ  ಸರ್ಕಾರದ ಆದೇಶ ಸಂಖ್ಯೆ: ಗ್ರಾಅಪ:634-1:ಆರ್.ಆರ್.ಸಿ:2024(ಇ.1592182),ಬೆಂಗಳೂರು ದಿನಾಂಕ 12-2-2025  ರಲ್ಲಿ ಕರ್ನಾಟಕ ರಾಜ್ಯಪಾಲರ ಆದೇಶನುಸಾರ ಕರ್ನಾಟಕ ರಾಜ್ಯ ಸರ್ಕಾರದ ಪದನಿಮಿತ್ತ ಉಪ ಕಾರ್ಯದರ್ಶಿಗಳು ಉಲ್ಲೇಖಿಸಿದ್ದಾರೆ.

Read More

ನಾಪೋಕ್ಲು ಮಾ.14 NEWS DESK : ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರ್ ಕಲಾಡ್ಚ ವಾರ್ಷಿಕ ಉತ್ಸವ (ಹಬ್ಬ)ವನ್ನು ಊರಿನ ಪರವೂರಿನ ಭಕ್ತರು ಸೇರಿ ಸಾಂಪ್ರದಾಯಿಕವಾಗಿ ಶ್ರದ್ದಾಭಕ್ತಿಯಿಂದ ಆಚರಿಲಾಯಿತು. ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವತಕ್ಕರಾದ ಪರದಂಡ ಕುಟುಂಬಸ್ಥರ ಎತ್ತು ಪೋರಾಟ ಹಾಲು ಬಲಿವಾಡು .ಅದರೊಂದಿಗೆ ಇನ್ನಿತರ ತಕ್ಕಮುಖ್ಯಸ್ಥರ ಎತ್ತು ಪೋರಾಟ ಹಾಲು ಬಲಿವಾಡು ಸೇವೆಗಳೂ ಸಂಪ್ರದಾಯದಂತೆ ನಡೆದವು. ಈ ಸಂದರ್ಭ ಭಕ್ತಾದಿಗಳಿಂದ ತುಲಾಭಾರ ಸೇವೆ ಸೇರಿದಂತೆ ಹರಕೆ ಇನ್ನಿತರ ಪೂಜೆಗಳನ್ನು ನೆರವೇರಿಸಿದ ಬಳಿಕ ಮಹಾಪೂಜೆ ಜರುಗಿ ಭಕ್ತಾದಿಗಳಿಗೆ ತೀರ್ಥ ಪ್ರಸಾದ ಅನ್ನಸಂತರ್ಪಣೆ ನೆರವೇರಿತು. ನಂತರ ದೇವರ ಪ್ರಾರ್ಥನೆಯ ಬಳಿಕ ದೇವರ ಪ್ರದರ್ಶನ ಬಲಿ ಜರುಗಿ ಎತ್ತುಪೋರಾಟದೊಂದಿಗೆ ತಕ್ಕ ಮುಖ್ಯಸ್ಥರು ಭಕ್ತಾದಿಗಳು ದೇವರ ಆದಿ ನೆಲೆ ಮಲ್ಮ ಬೆಟ್ಟಕ್ಕೆ ಶ್ರದ್ದಾಭಕ್ತಿಯಿಂದ ತೆರಳಿದರು. ಇದೇ ಸಂದರ್ಭ ಪೇರೂರು ಹಾಗೂ ನೆಲಜಿ ಗ್ರಾಮದ ತಕ್ಕ ಮುಖ್ಯಸ್ಥರು ಎತ್ತುಪೋರಾಟದೊಂದಿಗೆ ಮಲ್ಮಕ್ಕೆ ಆಗಮಿಸಿದರು. ಅರ್ಚಕರು ಶುದ್ದಕಲಶ ಪೂಜಾಕಾರ್ಯಗಳನ್ನು ನೆರವೇರಿಸಿ ಎತ್ತುಪೋರಾಟ ದುಡಿಕೊಟ್ಟ್ ಪಾಟ್ ನೆರವೇರಿತು. ಬಳಿಕ ಎತ್ತುಪೋರಾಟದ ಅಕ್ಕಿಯನ್ನು ಮೂರು…

Read More

ಮಡಿಕೇರಿ NEWS DESK ಮಾ.13 : ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲ ಗ್ರಾಮದ ಕಾಫಿ ತೋಟವೊಂದರಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೋಟದ ರೈಟರ್ ವಿರುದ್ಧ ಅರಣ್ಯ ಇಲಾಖೆ ಕ್ರಮ ಕೈಗೊಂಡಿರುವುದನ್ನು ವಿರೋಧಿಸಿ ಮಾ.14ರಂದು ಬೃಹತ್ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸಂಘಟನೆಗಳು ನಿರ್ಧರಿಸಿವೆ. ಸಿದ್ದಾಪುರದ ಸ್ವರ್ಣಮಾಲ ಕಲ್ಯಾಣ ಮಂಟಪದಲ್ಲಿ ಇಂದು ಸಭೆ ನಡೆಸಿದ ರೈತ ಸಂಘ ಮತ್ತು ಕಾರ್ಮಿಕ ಸಂಘಟನೆಗಳ ಪ್ರಮುಖರು ಕಾಡಾನೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತೋಟದ ರೈಟರ್ ಜೋಸೆಫ್ ಅವರ ವಿರುದ್ಧ ಪ್ರಕರಣ ದಾಖಲು ಮಾಡಿರುವುದನ್ನು ಖಂಡಿಸಿದರು. ವಿನಾಕಾರಣ ಜೋಸೆಫ್ ಅವರನ್ನು ತನಿಖೆಗೆ ಒಳಪಡಿಸಿ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಕುಟುಂಬದ ಸದಸ್ಯರು ಆರೋಪಿಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಸಿದ್ದಾಪುರ ಘಟಕದ ಅದ್ಯಕ್ಷ ದೇವಣೀರ ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೋಸೆಫ್ ಅವರ ವಿರುದ್ಧ ಹೂಡಲಾಗಿರುವ ಪ್ರಕರಣವನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಮಾ.14 ರಂದು…

Read More

ಮಡಿಕೇರಿ ಮಾ.13 NEWS DESK : ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ಹುಳಗಳು ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ ಘಟನೆ ವಿರಾಜಪೇಟೆ ತಾಲೂಕಿನ ಹಾಲಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಂಬಾಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಹೆಜ್ಜೇನು ದಾಳಿಯಿಂದ 22 ವಿದ್ಯಾರ್ಥಿಗಳ ಪೈಕಿ 19 ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರು, ಓರ್ವ ಅಡಿಗೆ ಸಿಬ್ಬಂದಿಗೆ ಕಚ್ಚಿ ಗಾಯಗೊಳಿಸಿದೆ. ಮಧ್ಯಾಹ್ನ ವಿದ್ಯಾರ್ಥಿಗಳು ಕೊಠಡಿಗೆ ಆಗಮಿಸುವ ಸಂದರ್ಭದಲ್ಲಿ ಹೆಜ್ಜೇನು ಹುಳಗಳು ದಿಢೀರ್ ದಾಳಿ ನಡೆಸಿವೆ. ದಾಳಿಯಿಂದ ಭಯ ಭೀತರಾದ ವಿದ್ಯಾರ್ಥಿಗಳು ಕಿರುಚಾಡಿದ್ದಾರೆ. ಅಲ್ಲೇ ಇದ್ದ ಶಿಕ್ಷಕರುಗಳು ತಕ್ಷಣ ಮಕ್ಕಳನ್ನು ಕೊಠಡಿಯಲ್ಲಿ ಕೂಡಿ ಹಾಕಲು ಯತ್ನಿಸಿದ್ದಾರೆ. ಶಿಕ್ಷಕಿಯರ ಸಮಯಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿದ್ದಾದರೂ ಮುಖ್ಯ ಶಿಕ್ಷಕಿ ಪದ್ಮ, ಸಹ ಶಿಕ್ಷಕಿ ಪ್ರತಿಮಾ ಎಂಬವರ ಮೇಲೆ ಹೆಜ್ಜೆನು ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದೆ.ತಕ್ಷಣ ಗ್ರಾಮ ಪಂಚಾಯಿತಿ ಸದಸ್ಯ ಎಂ.ಎಸ್.ಪೂವಯ್ಯ ಹಾಗೂ ಅಧ್ಯಕ್ಷ ಪಂದಿಕಂಡ ದಿನೇಶ್ ಎಂಬವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿ…

Read More

ಮಡಿಕೇರಿ ಮಾ.13 NEWS DESK : ಅರೆಭಾಷಿಕ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಸುಳ್ಯ ಇದರ ಅಧ್ಯಕ್ಷರು ಹಾಗೂ ಹೆಸರಾಂತ ಶಸ್ತ್ರ್ತ ಚಿಕಿತ್ಸಕರಾದ ಡಾ.ಕೆ.ವಿ.ಚಿದಾನಂದ ಗೌಡ ಸುಳ್ಯ ತಮ್ಮ ತಾಯಿ ದಿ.ಜಾನಕಿ ವೆಂಕಟ್ರಮಣ ಗೌಡ ಅವರ ಸ್ಮರಣಾರ್ಥ ದತ್ತಿನಿಧಿ ಸ್ಥಾಪಿಸಿದ್ದಾರೆ. ದತ್ತಿನಿಧಿ ರೂ.1.50 ಲಕ್ಷವನ್ನು ಶಾಶ್ವತ ಠೇವಣಿ ಇರಿಸಿ ಅದರಲ್ಲಿ ಬರುವ ಬಡ್ಡಿಯ ಮೊತ್ತದಿಂದ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ರಾಜ್ಯ ಪಠ್ಯಕ್ರಮದ 10ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳಿಸುವ ಅರೆಭಾಷಿಕ ದಕ್ಷಿಣ ಕನ್ನಡ ಮತ್ತ್ತು ಕೊಡಗು ಜಿಲ್ಲೆಯ ತಲಾ ಒಬ್ಬರಿಗೆ ನಗದು ರೂಪದಲ್ಲಿ ಪ್ರೋತ್ಸಾಹಧನ ನೀಡಲಾಗುವುದು. ಈ ಪ್ರೋತ್ಸಾಹಧನವನ್ನು ವಿಶ್ವ ಮಹಿಳಾ ದಿನಾಚರಣೆಯಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಡೆಯುವ ಕಾರ್ಯಕ್ರಮ ಸಂದರ್ಭದಲ್ಲಿ ಪ್ರೋತ್ಸಾಹಧನ ವಿತರಿಸಲಾಗುವುದು. ಹಾಗೆಯೇ ವಿದ್ಯಾರ್ಥಿನಿಯರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದತ್ತಿನಿಧಿ ಸ್ಥಾಪಿಸಿರುವ ಡಾ.ಕೆ.ವಿ.ಚಿದಾನಂದ ಗೌಡ ಇವರನ್ನು ಗೌರವ ಪೂರ್ವಕವಾಗಿ ಅಭಿನಂದಿಸಲಾಗುತ್ತದೆ ಎಂದು ಕರ್ನಾಟಕ ಅರೆಭಾಷೆ…

Read More

ಮಡಿಕೇರಿ ಮಾ.13 NEWS DESK : ಕೊಡಗು ಕೇರಳ ಗಡಿಭಾಗದ ಕರಿಕೆ ಗ್ರಾ.ಪಂ ವ್ಯಾಪ್ತಿಯ ವಿವಿಧ ಕಾಲೋನಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಕುಟುಂಬಗಳು ಸೂಕ್ತ ಸೂರಿಲ್ಲದೆ ಸಂಕಷ್ಟದ ಜೀವನ ಸಾಗಿಸುತ್ತಿದ್ದಾರೆ. ಕರಿಕೆ ಗ್ರಾ.ಪಂ ವ್ಯಾಪ್ತಿಯ ಕುಂಡಡ್ಕ ಕಾಲೋನಿಯಲ್ಲಿ ಪರಿಶಿಷ್ಟರು ಇಂದಿಗೂ ಪ್ಲಾಸ್ಟಿಕ್ ಹೊದಿಕೆಯ ಗುಡಿಸಲುಗಳಲ್ಲೇ ಜೀವನ ಸಾಗಿಸುತ್ತಿದ್ದಾರೆ. ನಿವೇಶನವಿದ್ದರೂ ಮನೆ ನಿರ್ಮಿಸಿಕೊಳ್ಳಲಾಗದ ಪರಿಸ್ಥಿತಿಯಲ್ಲಿ ಬಡ ಕುಟುಂಬಗಳಿವೆ. ಇನ್ನೂ ಕೂಡ ನಿವೇಶನದ ಹಕ್ಕುಪತ್ರ ದೊರೆಯದೇ ಇರುವುದೇ ವಸತಿ ಭಾಗ್ಯದಿಂದ ಇವರುಗಳು ವಂಚಿತರಾಗಲು ಕಾರಣವಾಗಿದೆ.  ಸ್ವಂತ ಸೂರು ಹೊಂದಬೇಕೆಂದು ಕನಸು ಕಾಣುತ್ತಿರುವ ಬಡಕುಟುಂಬಗಳಿಗೆ ನಿತ್ಯ ಕಚೇರಿಯಿಂದ ಕಚೇರಿಗೆ ಅಲೆಯುವ ಅನಿವಾರ್ಯತೆ ಎದುರಾಗಿದೆ. ಹಕ್ಕುಪತ್ರವಿಲ್ಲದೆ ಮನೆ ಮಂಜೂರು ಮಾಡಲು ಅಥವಾ ನಿರ್ಮಿಸಲು ಸಾಧ್ಯವಿಲ್ಲ ಎನ್ನುವ ಉತ್ತರ ಅಧಿಕಾರಿಗಳಿಂದ ಕೇಳಿ ಬರುತ್ತಿದೆ. ತಕ್ಷಣ ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿ ಮನೆ ಮಂಜೂರು ಮಾಡಬೇಕೆಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ. ::: ತ್ವರಿತವಾಗಿ ಹಕ್ಕುಪತ್ರ ನೀಡಿ ::: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದಿದ್ದರೂ ಪರಿಶಿಷ್ಟರು…

Read More