ಮಡಿಕೇರಿ ಮೇ 22 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಕಾರದಲ್ಲಿ ಜಿಲ್ಲಾ ಹಾಪ್‍ಕಾಮ್ಸ್ ವತಿಯಿಂದ ನಗರದ ಹಾಪ್ ಕಾಮ್ಸ್ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯುವ 6 ನೇ ವರ್ಷದ ಮಾವು ಮತ್ತು ಹಲಸು ಮೇಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಮಾವು ಸವಿಯುವ ಮೂಲಕ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಮಡಿಕೇರಿ ಹಾಪ್ ಕಾಮ್ಸ್ ಅಧ್ಯಕ್ಷರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ಉಪಾಧ್ಯಕ್ಷರಾದ ಮಲ್ಲಂಡ ಮಧು ದೇವಯ್ಯ, ನಿರ್ದೇಶಕರಾದ ನಾಗೇಶ್ ಕುಂದಲ್ಪಾಡಿ, ಎಸ್.ಪಿ.ಪೊನ್ನಪ್ಪ, ಬೇಬಿ ಪೂವಯ್ಯ, ಚಟ್ರಂಡ ಲೀಲಾ ಮೇದಪ್ಪ, ಕೆ.ಎಂ.ಮನೋಹರ್, ಸುವಿನ್ ಗಣಪತಿ, ಮನು ಮಹೇಶ್, ಪೂವಪ್ಪ ನಾಯ್ಕ, ಉಮೇಶ್ ರಾಜಾ ಅರಸ್, ಸುದೀರ್, ಕಾಂಗೀರ ಸತೀಶ್, ಬಿ.ಎ.ಹರೀಶ್, ನಗರಸಭಾ ಸದಸ್ಯರಾದ ಸತೀಶ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಶಶಿಧರ, ಹಾಪ್ ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕರಾದ ಮುತ್ತಪ್ಪ, ತೋಟಗಾರಿಕೆ ಇಲಾಖೆ…
ಲೇಖಕ: admin
ಮಡಿಕೇರಿ ಮೇ 22 NEWS DESK : ಪ್ರಸಿದ್ಧ ಪ್ರವಾಸಿತಾಣ ದುಬಾರೆ ಸಾಕಾನೆ ಶಿಬಿರ ವ್ಯಾಪ್ತಿಯಲ್ಲಿ ಮೇ 18ರಂದು ನಡೆದ ದುರ್ಘಟನೆಯಲ್ಲಿ ತಮಿಳುನಾಡು ಮೂಲದ ಪ್ರವಾಸಿ ಮಹಿಳೆ ಮೃತಪಟ್ಟ ಘಟನೆಯ ಕುರಿತು ರಾಜ್ಯ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿರುವ ಘಟನೆ ಹಾಗೂ ಓರ್ವ ಮಹಿಳೆ ಮೃತಪಟ್ಟಿರುವುದು ಸಂಬಂಧಪಟ್ಟ ಅಧಿಕಾರಿಗಳ ನಿಷ್ಕ್ರೀಯತೆ, ವೈಫಲ್ಯತೆಗಳನ್ನು ಸೂಚಿಸುತ್ತದೆ. ಘರ್ಷಣೆಯಲ್ಲಿ ಗಾಯಗೊಂಡ ಮಾರ್ತಾಂಡ ಆನೆಯೂ ಮೃತಪಟ್ಟಿದೆ. ಇದು ಕೂಡ ಅರಣ್ಯ ಇಲಾಖೆ ಅಧಿಕಾರಿಗಳ ನಿಷ್ಕ್ರೀಯತೆ, ವೈಫಲ್ಯತೆಗಳನ್ನು ಸೂಚಿಸುತ್ತದೆ. ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ಸಾರ್ವಜನಿಕರ ಕುಂದುಕೊರತೆ ಪರಿಹಾರಕ್ಕಾಗಿ ಕಲಂ 12(1)ರ ಅಡಿಯಲ್ಲಿ ಲೋಕಾಯುಕ್ತ, ಉಪ ಲೋಕಾಯುಕ್ತರ ಮೇಲೆ ಬಾಧ್ಯತೆಯನ್ನು ವಿಧಿಸುತ್ತದೆ ಮತ್ತು ಕಲಂ2(10)ರ ಅಡಿಯಲ್ಲಿ ಸಾರ್ವಜನಿಕ ಅಧಿಕಾರಿಗಳಿಂದ ಆಗುವ ದುರಾಡಳಿತವನ್ನು ತಡೆ ಹಿಡಿಯಲು ಬಾಧ್ಯತೆಯನ್ನು ನೀಡುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ಕಲಂ(7(2) ಮತ್ತು ಕಲಂ 9(3)(ಎ) ಪ್ರಕಾರ ಅಧಿಕಾರ ಚಲಾಯಿಸಿ ಸ್ವಯಂ…
ಮಡಿಕೇರಿ ಮೇ 22 NEWS DESK : ಸಾಮಾಜಿಕ ಜಾಲತಾಣದ ಗುಂಪೊಂದರ ಪ್ರಮುಖರೊಬ್ಬರು ಜನಪ್ರತಿನಿಧಿಗಳ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಅಶಾಂತಿ ಸೃಷ್ಟಿಗೆ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಮಡಿಕೆರಿ ನಗರಸಭೆಯ ಸರ್ವ ಪಕ್ಷಗಳ ಸದಸ್ಯರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಎಸ್‍ಪಿ ಆರ್.ಎನ್.ಬಿಂದುಮಣಿ ಅವರನ್ನು ಇಂದು ಭೇಟಿಯಾದ ನಗರಸಭಾ ಸದಸ್ಯರು ಕೊಡಗು ಅಭಿವೃದ್ಧಿ ಸಮಿತಿ ಹೆಸರಿನ ಗ್ರೂಪ್ ನ ಪ್ರಸನ್ನ ಭಟ್ ಎಂಬುವವರ ವಿರುದ್ಧ ದೂರು ನೀಡಿದರು. ಸುಳ್ಳು ವಿಚಾರಗಳನ್ನು ಸತ್ಯ ಎಂಬಂತೆ ಬಿಂಬಿಸಲಾಗುತ್ತಿದೆ. ನಗರಸಭಾ ಸದಸ್ಯರುಗಳ ಅಧ್ಯಯನ ಪ್ರವಾಸವನ್ನು ಮೋಜು ಮಸ್ತಿಯ ಪ್ರವಾಸ ಎಂಬಂತೆ ವಾಟ್ಸಪ್ ಗ್ರೂಪ್ ಗಳಲ್ಲಿ ಪ್ರತಿಬಿಂಬಿಸಿ ಸಾರ್ವಜನಿಕವಾಗಿ ನಿಂದಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಸನ್ನ ಭಟ್ ಅವರು ತಮ್ಮ ಸ್ವಂತ ಜೀಪ್‍ಗೆ ಅಭಿವೃದ್ಧಿ ಸಮಿತಿಯ ಬೋರ್ಡ್‍ನ್ನು ಅಳವಡಿಸಿಕೊಂಡು, ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳ ಮಧ್ಯೆ ನಿಂತು ಟ್ರಾಫಿಕ್ ಕಂಟ್ರೋಲ್ ಮಾಡುವ ಸೋಗಿನಲ್ಲಿ ಸ್ಥಳೀಯ ವಾಹನ ಸವಾರರಿಗೆ ತೊಂದರೆ ಕೊಡುವುದು ಮತ್ತು ಅದೆಷ್ಟೋ ಬಾರಿ ತನ್ನ…
ಮಡಿಕೇರಿ ಮೇ 21 NEWS DESK : ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಸಹಕಾರದಲ್ಲಿ ಪ್ರಸಕ್ತ ಸಾಲಿನ ಮಾವು ಮತ್ತು ಹಲಸು ಮೇಳವು ಮೇ, 22 ರಿಂದ 24 ರವರೆಗೆ ಹಾಪ್‍ಕಾಮ್ಸ್ ಆವರಣದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ಆವರಣದಲ್ಲಿ ಮೇ, 22 ರಂದು ಬೆಳಗ್ಗೆ 10.30 ಗಂಟಗೆ ಮಾವು ಮತ್ತು ಹಲಸು ಮೇಳಕ್ಕೆ ಗಣ್ಯರಿಂದ ಚಾಲನೆ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮಡಿಕೇರಿ ಮೇ 21 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ, 22 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ “ನೇರ ಸಂದರ್ಶನ” ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಜೆಕೆ ಟೈರ್ಸ್ ಮೈಸೂರು ಅವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ‘ಜೆಕೆ ಟೈಯರ್ಸ್ ಮೈಸೂರು’ ಇವರು ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೇರವು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ಅವರನ್ನು ಸಂಪರ್ಕಿಸಬಹುದು.
ಮಡಿಕೇರಿ ಮೇ 21 NEWS DESK : ನವದೆಹಲಿಯಲ್ಲಿ ಮೇ 24 ರಂದು ನಡೆಯಲಿರುವ ಅಖಿಲ ಭಾರತ ಬುಡಕಟ್ಟು ಜನಾಂಗದ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ಕೊಡಗಿನಿಂದ ಹೊರಟ 110 ಗಿರಿಜನ ಪ್ರತಿನಿಧಿಗಳ ಸಭೆಯು ಗೊಣಿಕೊಪ್ಪ ದುರ್ಗಾ ಭೋಜಿ ಹಾಲ್ ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗಿರಿಜನ ಸುರಕ್ಷಾ ವೇದಿಕೆ ಕೊಡಗು ಜಿಲ್ಲಾ ಘಟಕದ ಸಂಚಾಲಕರಾದ ಪಣಿಯರವರ ಭಾಗ್ಯ ಮೋಹನ್, ಮಹಾನ್ ಜನನಾಯಕ ಬಿರ್ಸಾ ಮುಂಡಾರವರ 150ನೇ ಜನ್ಮ ಜಯಂತಿ ಅಂಗವಾಗಿ ದೆಹಲಿಯಲ್ಲಿ ಆಯೋಜಿಸಲಾಗುತ್ತಿರುವ ಈ ಮಹಾ ಸಂಗಮದಲ್ಲಿ ದೇಶದ ಐದು ನೂರಕ್ಕೂ ಹೆಚ್ಚು ಗಿರಿಜನ ಸಮುದಾಯಗಳಿಂದ ಮೂರು ಲಕ್ಷಕ್ಕೂ ಅಧಿಕ ಗಿರಿಜನ ಪ್ರತಿನಿಧಿಗಳು ಭಾಗವಹಿಸುತ್ತಿದ್ದು, ಕೊಡಗು ಜಿಲ್ಲೆಯ 6 ಗಿರಿಜನ ಜನಜಾತಿಯ 110 ಪ್ರತಿನಿಧಿಗಳು ಸೇರಿದಂತೆ ರಾಜ್ಯದ 1250 ಪ್ರತಿನಿಧಿಗಳು ವಿಶೇಷ ರೈಲಿನ ಮೂಲಕ ದೆಹಲಿಗೆ ತೆರಳುತ್ತಿದ್ದಾರೆ ಎಂದರು. ಗಿರಿಜನ ಸಮುದಾಯಗಳ ಸಾಂಸ್ಕೃತಿಕ ಅಸ್ತಿತ್ವ, ಧಾರ್ಮಿಕ ಪರಂಪರೆ ಹಾಗೂ ಸಾಮಾಜಿಕ ಮಾಲ್ಯಗಳನ್ನು ರಾಷ್ಟ್ರೀಯ ವೇದಿಕೆಯಲ್ಲಿ ಪರಿಚಯಿಸುವ ಅಪರೂಪದ ಅವಕಾಶ…
ವಿರಾಜಪೇಟೆ ಮೇ 21 NEWS DESK : ಜಿಲ್ಲಾ ಕೇಂದ್ರಗಳಲ್ಲಿ ಸಿಐಟಿಯು ಸಂಘಟನೆಯನ್ನು ಬಲಪಡಿಸುವ ಹಾಗೂ ಕಾರ್ಮಿಕರ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ, ಕೊಡಗು ಜಿಲ್ಲಾ ಸಿಐಟಿಯು ವತಿಯಿಂದ ನೆಲ್ಲಿಹುದಿಕೇರಿಯಲ್ಲಿ ಒಂದು ದಿನದ ಹಿರಿಯ ಮುಖಂಡರ ಹಾಗೂ ಕಾರ್ಯಕರ್ತರ ಜಿಲ್ಲಾ ಮಟ್ಟದ ಸಂಘಟನಾ ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಸಿಐಟಿಯು ರಾಜ್ಯ ಉಪಾಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಧರ್ಮೇಶ್ ಅವರು, ಕಾರ್ಮಿಕರ ಕನಿಷ್ಠ ವೇತನವನ್ನು ರೂ.36,000 ಕ್ಕೆ ಹೆಚ್ಚಿಸಬೇಕು ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ಮೇ 30 ರಂದು ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದೆಂದರು. ದೇಶದ ಆರ್ಥಿಕ ಕುಸಿತ ಹಾಗೂ ಹೆಚ್ಚುತ್ತಿರುವ ಅಸಮಾನತೆ ಕುರಿತು ದಿಕ್ಸೂಚಿ ಭಾಷಣ ಮಾಡಿದ ಧರ್ಮೇಶ್ ಅವರು, ಪ್ರಸ್ತುತ ದೇಶವು ತೀವ್ರ ಸಾಮಾಜಿಕ ಮತ್ತು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಕೇಂದ್ರ ಸರ್ಕಾರದ ತಪ್ಪು ನೀತಿಗಳಿಂದಾಗಿ ದೇಶದಲ್ಲಿ ಉತ್ಪಾದನಾ ವಲಯ ಸಂಪೂರ್ಣವಾಗಿ ಕುಸಿದಿದ್ದು, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ…
ಮಡಿಕೇರಿ ಮೇ 21 NEWS DESK : ಕೊಡಗು ಜಿಲ್ಲೆಯ ವಿವಿಧ ವಯೋಮಾನದ ಪ್ರತಿಭಾನ್ವಿತ ಫುಟ್ಬಾಲ್ ಆಟಗಾರರಿಗೆ ಮೇ 25 ರಂದು ಅಮ್ಮತ್ತಿ ಪ್ರೌಢ ಶಾಲಾಮೈದಾನದಲ್ಲಿ ಆಯ್ಕೆ ಟ್ರಯಲ್ಸ್ ನಡೆಯಲಿದೆ. ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆ ಹಾಗೂ ಮಂಗಳೂರಿನ ಯೆನಪೋಯ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಆಯ್ಕೆ ನಡೆಯಲಿದೆ. ಯೆನಪೋಯ ವಿಶ್ವಿದ್ಯಾನಿಲಯದ ಹಿರಿಯ ಕೋಚ್ ಬಿಬಿ ಥೋಮಸ್ ನೇತೃತ್ವದ ಪರಿಣಿತರ ತಂಡ ಆಟಗಾರರನ್ನು ಆಯ್ಕೆ ಮಾಡುತ್ತಿದ್ದು, ಆಯ್ಕೆಯಾದವರಿಗೆ ವಿದ್ಯಾರ್ಥಿವೇತನ ಜೊತೆ ಯೆನಪೋಯ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣವನ್ನೂ ನೀಡಲಾಗುತ್ತದೆ. ಅಂಡರ್ 14, ಅಂಡರ್ 16, ಅಂಡರ್ 18 ಮತ್ತು 24 ವರ್ಷದೊಳಗಿನ ಹಿರಿಯರ ತಂಡಕ್ಕೂ ಆಯ್ಕೆ ನಡೆಯಲಿದೆ. ಟ್ರಯಲ್ಸ್ ನಲ್ಲಿ ಭಾಗವಹಿಸುವವರು ಮೇ 25 ರ ಸೋಮವಾರದಂದು ತಮ್ಮ ಪಾಸ್ ಪೋರ್ಟ್ ಅಳತೆಯ ಫೋಟೋ, ಆಧಾರ್ ಕಾರ್ಡ್ ಜೊತೆ ಕಡ್ಡಾಯವಾಗಿ ಬೆಳಗ್ಗೆ 8 ಗಂಟೆಗೆ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಆಟಗಾರರು ಶಾರ್ಟ್ಸ್, ಜೆರ್ಸಿ, ಸ್ಟಡ್ಸ್, ಸ್ಟಾಕಿನ್ಸ್, ಶಿನ್ ಗಾರ್ಡ್ ಕಡ್ಡಾಯವಾಗಿ ತರಬೇಕು. ಯೆನಪೋಯ ಕ್ರೀಡಾ ಅಕಾಡೆಮಿಗೆ…
ಮಡಿಕೇರಿ ಮೇ 21 NEWS DESK : ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ನಡೆದ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ರಾಜಭವನ ಚಲೋ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪಾಲ್ಗೊಂಡಿದ್ದರು. ಪ್ರತಿಭಟನೆಯಲ್ಲಿ ಸಚಿವರಾದ ಈಶ್ವರ್ ಖಂಡ್ರೆ, ಸುಧಾಕರ್, ಬೈರತಿ ಸುರೇಶ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಬಾನು ಚಿಬ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಗೌಡ ಮತ್ತಿತರ ನಾಯಕರು ಉಪಸ್ಥಿತರಿದ್ದರು.
ಮಡಿಕೇರಿ ಮೇ 21 NEWS DESK : ಸರ್ಕಾರವು ಘನತ್ಯಾಜ್ಯ ನಿರ್ವಹಣೆ ನಿಯಮಗಳ 2026ರ ಪ್ರಕಾರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ತ್ಯಾಜ್ಯ ವಿಲೇವಾರಿ ಮಾಡುವ ವಾಹನಕ್ಕೆ ಕೇಂದ್ರ ಸರ್ಕಾರದ ಸುತ್ತೋಲೆಯಂತೆ ಮೂಲದಲ್ಲಿಯೇ ನಾಲ್ಕು ವಿದಧ ತ್ಯಾಜ್ಯ ವಿಂಗಡಣೆ ಮಾಡಿ ಕಡ್ಡಾಯವಾಗಿ ನೀಡಬೇಕು ಎಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್ ಅವರು ಕೋರಿದ್ದಾರೆ. ಹಸಿತ್ಯಾಜ್ಯ: ಅಡಿಗೆ ಮನೆಯ ತ್ಯಾಜ್ಯ, ಆಹಾರ ತ್ಯಾಜ್ಯ, ತರಕಾರಿ ತ್ಯಾಜ್ಯ, ಮಾಂಸದ ತ್ಯಾಜ್ಯ, ಹಣ್ಣಿನ ತ್ಯಾಜ್ಯ, ಹೂವಿನ ತ್ಯಾಜ್ಯ, ಗಾರ್ಡನ್ ವೇಸ್ಟ್ ಮತ್ತು ಇತರೆ ಕರಗುವ ತ್ಯಾಜ್ಯ ವಸ್ತುಗಳು. ಒಣತ್ಯಾಜ್ಯ: ಎಲ್ಲಾ ರೀತಿಯ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳು, ಬಟ್ಟೆಯ ತ್ಯಾಜ್ಯ ವಸ್ತುಗಳು, ಕಬ್ಬಿಣ, ರಬ್ಬರ್ ಮರದ ತ್ಯಾಜ್ಯ ಮತ್ತಿತರ. ಸ್ಯಾನಿಟರಿ ತ್ಯಾಜ್ಯ: ಡೈಪರ್ಸ್, ಸ್ಯಾನಿಟರಿ ನ್ಯಾಫ್‍ಕಿನ್ಸ್, ಕಾಂಡೂಮ್ಸ್ ಮತ್ತಿತರ. ಸ್ಪೆಷಲ್ ಕೇ ವೇಸ್ಟ್: ಪೈಂಟ್ ಡ್ರಮ್ಸ್/ಕಂಟೈನರ್ಸ್ ಔಷಧಿ ಕ್ಯಾನ್‍ಗಳು/ಡ್ರಮ್ ಗಳು/ಬಾಟಲ್‍ಗಳು ಬಲ್ಬ್/ ಟ್ಯೂಬ್ ಲೈಟ್ಸ್, ಅವಧಿ ಮೀರಿದ ಔಷದಿಗಳು, ಒಡೆದ ಮಕ್ರ್ಯೂರಿ ಥರ್ಮೋಮೀಟರ್ಸ್ ಹಳೆಯ…






