ಲೇಖಕ: admin

ಮಡಿಕೇರಿ, ಮೇ 6 NEWS DESK : ಮನಸ್ಸಿಗೆ ಒತ್ತಡ ಉಂಟಾದಾಗ ಕ್ರೀಡೆ ಹಾಗೂ ಯೋಗಾಭ್ಯಾಸಗಳಿಂದ ನೆಮ್ಮದಿ ದೊರಕುತ್ತದೆ ಎಂದು ಒಲಂಪಿಯನ್ ಚೆಪ್ಪುಡಿರ ಪೂಣಚ್ಚ ಹೇಳಿದರು. ವಾಂಡರರ್ಸ್ ಸ್ಟೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ. ಶಂಕರ್ ಅವರ ಸ್ಮರಣಾರ್ಥ  ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ಒಂದು ತಿಂಗಳುಗಳ ಕಾಲ ನಡೆದ ಉಚಿತ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗು ಜಿಲ್ಲೆ ಸೇನೆ ಹಾಗೂ ಕ್ರೀಡೆಗೆ ಹೆಸರುವಾಸಿ, ಅದರಲ್ಲೂ ಹಾಕಿ ಜಿಲ್ಲೆಯಲ್ಲಿ ಹೆಸರುವಾಸಿಯಾಗಿದೆ. ತಾನು ಕೂಡ ಇದೇ ಮೈದಾನದಲ್ಲಿ ಆಡಿ ಬೆಳೆದು ಕ್ರೀಡಾ ಶಾಲೆಗೆ ಸೇರಿ ಈ ರೀತಿಯ ಸಾಧನೆ ಮಾಡಲು ಸಹಕಾರಿಯಾಗಿದೆ. ಗುರುಗಳಾದ ಸಿ.ವಿ. ಶಂಕರ್ ಅವರು ೧೨೦ಕ್ಕೂ ಅಧಿಕ ಮಂದಿ ಅಂತರರಾಷ್ಟ್ರೀಯ ಅಟಗಾರರನ್ನು ತಯಾರು ಮಾಡಿದ್ದು ಅವರಿಗೆ ನಾವೆಲ್ಲರೂ ಋಣಿಯಾಗಿರಬೇಕೆಂದರು. ಇದೀಗ ವಾಂಡರ‍್ಸ್ ಕ್ಲಬ್‌ನವರು, ಹಿರಿಯರು ಸೇರಿಕೊಂಡು ಸ್ವಯಂಪ್ರೇರಿತರಾಗಿ ಮಕ್ಕಳಿಗೆ ಯೋಗ, ಕ್ರೀಡಾ ತರಬೇತಿ ನೀಡುತ್ತಿರುವುದು ಶ್ಲಾಘನೀಯ. ಮಕ್ಕಳು ಸದುಪಯೋಗಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಒಲಂಪಿಕ್‌ಗೆ ಅಡಬೇಕು :: …

Read More

ಮಡಿಕೇರಿ ಮೇ 5 NEWS DESK : ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಲಭ್ಯವಿರುವ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಂಡು ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಮುಂದಾಗುವಂತೆ ರಾಜ್ಯ 5 ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ.ನಾರಾಯಣ ಸ್ವಾಮಿ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಾಂಸ್ಥಿಕ ರಚನೆ, ಕಾರ್ಯಚಟುವಟಿಕೆಗಳು, ಆರ್ಥಿಕ ಸ್ಥಿತಿಗತಿ, ಮೂಲ ಸೌಕರ್ಯ ಹಾಗೂ ಸೇವೆ ಒದಗಿಸುವಲ್ಲಿ ತಾಂತ್ರಿಕ ಕೌಶಲ್ಯ ಮತ್ತಿತರ ಅಧ್ಯಯನ ಸಂಬಂಧ ಇಂದು ನಡೆದ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಲಭ್ಯವಿರುವ ಸಂಪನ್ಮೂಲವನ್ನು ಕ್ರೋಢೀಕರಿಸಿ ಅಗತ್ಯ ಸೇವೆಗಳನ್ನು ಕಲ್ಪಿಸಬೇಕು ಎಂದು ಸಲಹೆ ನೀಡಿದರು. ಸ್ಥಳೀಯ ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಅಭಿವೃದ್ಧಿಯತ್ತ ಮುನ್ನಡೆಯಬೇಕು. ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಅತೀ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಆದಾಯ ತೆರಿಗೆ ಸಂಗ್ರಹ ಮೂಲ ಸೌಲಭ್ಯ ಸೌಕರ್ಯಕ್ಕೆ ಒತ್ತು ನೀಡುವುದು, ಕುಡಿಯುವ ನೀರು, ವಿದ್ಯುತ್ ಪೂರೈಕೆ,…

Read More

ವಿರಾಜಪೇಟೆ ಮೇ 5 NEWS DESK : ನಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಯಮ್ಮ ದೇಗುಲದ ವಾರ್ಷಿಕ ಕರಗ ಮಹೋತ್ಸವವು ಮೇ 6 ರಿಂದ ಆರಂಭವಾಗಲಿದೆ. ವಿರಾಜಪೇಟೆ ನಗರದ ಶಕ್ತಿ ದೇವತೆ ರಾಜ ಬೀದಿಯಾಗಿರುವ ತೆಲುಗರ ಬೀದಿಯಲ್ಲಿ ಸ್ಥಿತವಾಗಿರುವ ಶ್ರೀ ದಕ್ಷಿಣ ಮಾರಿಯಮ್ಮ ದೇವಾಲಯದ ವಾರ್ಷಿಕ ಕರಗ ಮಹೋತ್ಸವ ಮೇ.6 ರಿಂದ 10ರ ರಾತ್ರಿ ಕೊನೆಯಾಗಲಿದೆ. ಐದು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಉತ್ಸವದ ಆರಂಭ ಮೇ 6 ರಂದು ದೇವಿಯ ಕರಗ ಮೆರವಣಿಗೆಯೊಂದಿಗೆ ದೇವಾಲಯಕ್ಕೆ ಆಗಮನ, ರಾತ್ರಿ ದೇವಾಲಯದಲ್ಲಿ ಮಹಾಪೂಜೆ, ಪ್ರಸಾದ ವಿನಿಯೋಗ ನಡೆಯಲಿದೆ. ಮೇ 7 ರಂದು ರಾತ್ರಿ 7 ಗಂಟೆಗೆ ತಂಬಿಟ್ಟು ಆರತಿ ಸೇವೆ ಮತ್ತು ವಿಶೇಷ ಪೂಜೆ ಪ್ರಸಾದ ವಿನಿಯೋಗ, ಮೇ 8 ರಂದು ಮಧ್ಯಾಹ್ನ ಶ್ರೀ ದೇವಿಗೆ ವಿಶೇಷ ಅಲಂಕಾರ ಸೇವೆ, ಹರಿಕೆ ಸೇವೆಗಳು ಮತ್ತು ಮಾಹಾಪೂಜೆ, ಮಹಾ ಮಂಗಳಾರತಿ ನಂತರ ವಿಶೇಷ ಮಾಹಾ ಪ್ರಸಾದ ಜರುಗಲಿದೆ. ಮೇ 9 ರಂದು ರಾತ್ರಿ ದೇವಿಗೆ…

Read More

ಮಡಿಕೇರಿ ಮೇ 5 NEWS DESK : ಮಡಿಕೇರಿ 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್2 ಓಂಕಾರೇಶ್ವರ ಫೀಡರ್‍ನಲ್ಲಿ ಮೇ, 06 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗೃತಾ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಕನ್ನಂಡಬಾಣೆ, ಗೌಡಸಮಾಜ, ಜೂನಿಯರ್ ಕಾಲೇಜು ರಸ್ತೆ, ದಾಸವಾಳ ರಸ್ತೆ, ಗಣಪತಿ ಬೀದಿ, ಓಂಕಾರೇಶ್ವರ ದೇವಸ್ಥಾನ, ಓಂಕಾರೇಶ್ವರ ರಸ್ತೆ, ಬ್ರಾಹ್ಮಿನ್ಸ್ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ. ಸೋಮವೇಪೇಟೆ :: ಸೋಮವಾರಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಕೊಡ್ಲಿಪೇಟೆ ಶಾಖಾ ವ್ಯಾಪ್ತಿಯಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್2 ಕೊಡ್ಲಿಪೇಟೆ ಫೀಡರ್ ಮಾರ್ಗದಲ್ಲಿ ಮೇ, 06 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಅವರದಾಳು,…

Read More

ಮಡಿಕೇರಿ ಮೇ 5 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ( ಕಸಾಪ ) ವತಿಯಿಂದ ಮಡಿಕೇರಿ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಛೇರಿ ಆವರಣದಲ್ಲಿ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಕಸಾಪದ 111 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ “ಜನರಡೆಗೆ ಕನ್ನಡ ಸಾಹಿತ್ಯ ಪರಿಷತ್ತು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾಧ್ಯಕ್ಷರೂ ಆದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ , ಕನ್ನಡ ಭಾಷೆ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕಿದೆ. ಪತ್ರಿಕೆಗಳನ್ನು ಕೊಂಡು ಓದುವ, ಪುಸ್ತಕಗಳನ್ನು ಖರೀದಿಸುವ ಕಡೆಗೆ ಗಮನ ಹರಿಸಬೇಕು. ಆ ಮೂಲಕ ಕನ್ನಡ ಮತ್ತು ಕನ್ನಡ ಬರಹಗಾರರನ್ನು ಪ್ರೋತ್ಸಾಹಿಸಬೇಕಿದೆ ಎಂದರು. ಕನ್ನಡ ಭಾಷೆಯ ಅಸ್ಮಿತೆಯ ಪ್ರತೀಕವಾದ ನಾಡಿನ ಸರ್ಕಾರಿ ಕನ್ನಡ ಶಾಲೆಗಳನ್ನು ಮುಚ್ಚದಂತೆ ಅವುಗಳನ್ನು ಉಳಿಸಿ ಪುನಶ್ಚೇತನಗೊಳಿಸುವ ದಿಸೆಯಲ್ಲಿ ಜನಾಂದೋಲನ ನಡೆಸಲು ಶ್ರಮಿಸುವ ಅಗತ್ಯವಿದೆ. ಈ ದಿಸೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಕನ್ನಡ…

Read More

ಮಡಿಕೇರಿ ಮೇ 5 NEWS DESK : ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಪ್ರಗತಿಯ ಯೋಜನೆಯ ವಿವರಗಳನ್ನು ಪರಿಶೀಲಿಸಲು ಕೇಂದ್ರ ಜಲಜೀವನ್ ನೀತಿ ಆಯೋಗದ DEMO ತಂಡದ ಪ್ರತಿನಿಧಿ ನಿತಿನ್ ಹಾಗೂ ಅವರ ನೇತೃತ್ವದ ತಂಡದವರು ಕೂಡುಮಂಗಳೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಯೋಜನೆಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಪಡೆದು ಪರಿಶೀಲನೆ ನಡೆಸಿದರು. ಕೂಡುಮಂಗಳೂರು ಗ್ರಾಮ ಪಂಚಾಯಿತಿಯಲ್ಲಿ ಸಮಗ್ರವಾಗಿ ಕಸ ವಿಲೇವಾರಿಯ ಬಗ್ಗೆ ಹಾಗೂ ಈ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಚರ್ಚಿಸಿದರು. ಅಲ್ಲದೆ ಗ್ರಾಮೀಣಾಭಿವೃದ್ಧಿ ಕುಡಿಯುವ ನೀರು ಸರಬರಾಜು ಯೋಜನೆ ಜಲಜೀವನ್ ಮಿಷನ್ ಯೋಜನೆಗೆ ಬಗ್ಗೆ ಕೇಂದ್ರ ನೀತಿ ಸಮಿತಿಯ ತಂಡದವರು ಅಧಿಕಾರಿಗಳಿಂದ, ಮತ್ತು ಗ್ರಾಮ ಪಂಚಾಯತಿ ಸದಸ್ಯರುಗಳಿಂದ ಯೋಜನೆಯು ಅನುಷ್ಠಾನದ ಬಗ್ಗೆ ಮಾಹಿತಿಯನ್ನು ಪಡೆದರು.ಅಲ್ಲದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡ್ ಮನೆಗಳಿಗೂ ನೀರು ಸರಬರಾಜು ಹಾಗೂ ಈ ಬಗ್ಗೆ…

Read More

ಮಡಿಕೇರಿ ಮೇ 5 NEWS DESK : ತಾಳತ್ತಮನೆಯ ನೇತಾಜಿ ಯುವಕ ಮಂಡಲ ಹಾಗೂ  ಹೊಟೇಲ್ ಆಕ್ಸಿರಿಚ್ ಸಂಯಕ್ತಾಶ್ರಯದಲ್ಲಿ  ಮೇ 10 ರಂದು ತಾಳತ್ತಮನೆಯಲ್ಲಿ “ಸೇನಾ ನೇಮಕಾತಿ”ಯ ಬಗ್ಗೆ ಅರಿವು ಕಾರ್ಯಾಗಾರ ನಡೆಯಲಿದೆ. ಅಂದು ಅಪರಾಹ್ನ 2.30 ಗಂಟೆಗೆ ತಾಳತ್ತಮನೆಯ ಹೊಟೇಲ್ ಆಕ್ಸಿರಿಚ್ ಸಭಾಂಗಣದಲ್ಲಿ ಭಾರತೀಯ ಸೇನೆಗೆ ನೇಮಕಾತಿ ಬಯಸುವ ಆಕಾಂಕ್ಷಿತ  15 ರಿಂದ 25 ವರ್ಷದ ಯುವಕ ಮತ್ತು ಯುವತಿಯರಿಗೆ ಕಾರ್ಯಾಗಾರ ನಡೆಯಲಿದ್ದು, ಸೇನೆಯಲ್ಲಿ “ಸೇನಾಧಿಕಾರಿ ಮತ್ತು ಅಗ್ನಿವೀರ್” ಹುದ್ದೆಗಳಿಗೆ ಆಯ್ಕೆಯಾಗಲು ಬೇಕಾದ ಉಪಯುಕ್ತ ಮಾಹಿತಿಗಳನ್ನು ನೀಡಲಾಗುವುದು.   ಸಂಪನ್ಮೂಲ  ವ್ಯಕ್ತಿಗಳಾಗಿ ಭಾರತೀಯ ನೌಕಾದಳದಲ್ಲಿ ಲೆಪ್ಟಿನೆಂಟ್ ಕಮಾಂಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯಂತ್ ಸುಬ್ಬಯ್ಯ, ಆಡಿಯೋ ವಿಶುವಲ್ ಪ್ರಾತ್ಯಕ್ಷಿಕೆ ಮುಖಾಂತರ ಮಾಹಿತಿ ನೀಡಲಿದ್ದಾರೆ. ಆಸಕ್ತ ಪ್ರೌಢ ಶಾಲೆ, ಕಾಲೇಜು ವಿದ್ಯಾರ್ಥಿಗಳು ಹಾಗೂ ಎನ್.ಸಿ.ಸಿ ಕೆಡೆಟ್‍ಗಳು ಕಾರ್ಯಾಗಾರದ ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9901677675, 9632007915,  7019716632, 9110862380 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಮೇ 5 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲವು ಮೇ 9 ರಿಂದ 11ರ ವರೆಗೆ ನಡೆಯಲಿದೆ.  ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನೆರವೇರಲಿದೆ.  ಮೇ 9 ರಂದು ಸಂಜೆ 6 ಗಂಟೆಗೆ ಆಚಾರ್ಯ ವರಣಂ, ಪುಣ್ಯಹ ಶುದ್ಧಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮಾರ್ಚನೆ ಹಾಗೂ ಪ್ರಸಾದ ವಿತರಣೆ ನೆರವೇರಲಿದೆ. ಮೇ 10 ರಂದು ಬೆಳಿಗ್ಗೆ 6 ಗಂಟೆಗೆ ಮಹಾಗಣಪತಿ ಹೋಮ, ನವಕ ಪಂಚಗವ್ಯ ಕಳಸ ಪೂಜೆ, ನವಕ ಪಂಚಗವ್ಯ ಕಳಸಾಭಿಷೇಕ, ಸರ್ವಾಲಂಕಾರ ಮಹಾಪೂಜೆ, ಶ್ರೀ ಪಾಷಾಣಮೂರ್ತಿ ದೈವದ ಕಳಸ ಪೂಜೆ, ಅಲಂಕಾರ ಪೂಜೆ ಹಾಗೂ ಮಂಗಳಾರತಿ ನಡೆಯಲಿದೆ.  ::: ನಾಗದರ್ಶನ ::: ನಾಗ…

Read More

ಸುಂಟಿಕೊಪ್ಪ ಮೇ 5 NEWS DESK : ಸುಂಟಿಕೊಪ್ಪ ಸಮೀಪದ ಹರದೂರಿನಲ್ಲಿ ವಿಷ್ಣುಮೂರ್ತಿ ದೈವದ ಒತ್ತೆಕೋಲವು ಶ್ರದ್ಧಾಭಕ್ತಿಯಿಂದ ಜರುಗಿತು. ಗುಂಟುಕುಟ್ಟಿ ಸಮೀಪದ ಮುತ್ತಿನತೋಟದಲ್ಲಿರುವ ವಿಷ್ಣುಮೂರ್ತಿ ದೇವಾಲಯದಲ್ಲಿದ್ದ ಬಂಡರವನ್ನ ಹರದೂರಿನ ಆಮೆಮನೆ ಸುಬ್ಬಯ್ಯನವರ ಗದ್ದೆಗೆ ತಂದಿರಿಸಿ ಪೂಜೆ ಸಲ್ಲಿಸಲಾಯಿತು. ಬಳಿಕ ಮೇಲೇರಿಗೆ ಅಗ್ನಿ ಸ್ಪರ್ಷ ಮಾಡಲಾಯಿತು. ವಿಷ್ಣುಮೂರ್ತಿ ದೈವದ ಒತ್ತೆಕೋಲದ ಅಂಗವಾಗಿ ಕುಲ್ಚಾಟ್ ದೈವದ ಕೋಲ, ವಿಷ್ಣು ಮೂರ್ತಿ ಅಗ್ನಿ ಪ್ರವೇಶ, ಗುಳಿಗ ಕೋಲ ಜೊತೆಗೆ ಹರಕೆ ಮತ್ತು ಪ್ರಸಾದ ವಿತರಣೆ ನೆರವೇರಿತು. ಮೂರು ವರ್ಷಗಳಿಗೊಮ್ಮೆ ನಡೆಯುವ  ಒತ್ತೆ ಕೋಲಕ್ಕೆ ಹರದೂರು, ಗರಂಗಂದೂರು, ಮಾದಪುರ, ಪನ್ಯ, ಸುಂಟಿಕೊಪ್ಪ ಸೇರಿದಂತೆ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Read More

ಮಡಿಕೇರಿ ಮೇ 5 NEWS DESK : ಇತ್ತೀಚೆಗೆ ನಡೆದ ಮಡಿಕೇರಿ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಆಯ್ಕೆ ಸಂದರ್ಭ ನನ್ನ ಪತ್ನಿ ಉಷಾ ಅವರಿಗೆ ಅನ್ಯಾಯವಾಗಿದ್ದು, ಅಧ್ಯಕ್ಷ ಸ್ಥಾನ ತಪ್ಪಲು ಬಿಜೆಪಿಯ ಮಾಜಿ ಶಾಸಕರೊಬ್ಬರು ಕಾರಣ ಎಂದು ನಗರಸಭಾ ಸದಸ್ಯೆ ಉಷಾ ಅವರ ಪತಿ ಎಂ.ಕೆ.ಕಾವೇರಪ್ಪ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನನ್ನ ಪತ್ನಿ ಉಷಾ ಅವರಿಗೆ ಅಧ್ಯಕ್ಷ ಸ್ಥಾನ ಸಿಗದಂತೆ ಷಡ್ಯಂತ್ರ ರೂಪಿಸಿ ಅನ್ಯಾಯ ಮಾಡಲಾಗಿದೆ. ಇದು ನನ್ನ ಪತ್ನಿಗೆ ಮಾತ್ರವಲ್ಲ ಭಾರತೀಯ ಜನತಾ ಪಾರ್ಟಿಯ ಸಿದ್ಧಾಂತಕ್ಕೆ ಮಾಡಿದ ಅನ್ಯಾಯವಾಗಿದೆ ಎಂದು ಆರೋಪಿಸಿದರು. ಉಷಾ ಅವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ, ಆದರೆ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯ ಆಂತರಿಕ ಚುನಾವಣೆಯಲ್ಲಿ ಉಷಾ ಅವರನ್ನು ಕೂಡ ಕಣದಲ್ಲಿರುವಂತೆ ನೋಡಿಕೊಳ್ಳಲಾಯಿತು. ಪಕ್ಷದ ವರಿಷ್ಠರಿಗೆ ಗೌರವ ನೀಡಿ ಉಷಾ ಅವರು ನಗರಸಭೆಯ ಅಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿಯ ಆಂತರಿಕ ಚುನಾವಣೆಯಲ್ಲಿ ಸ್ಪರ್ಧಿಸಿದರು. ಸ್ಪರ್ಧೆಯಲ್ಲಿ ಉಷಾ ಅವರು ಅತ್ಯಧಿಕ ಮತಗಳನ್ನು…

Read More