ಮಡಿಕೇರಿ ಮೇ 5 NEWS DESK : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಮೇ 6 ರಂದು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ. ಅಂದು ಬೆಳಿಗ್ಗೆ 6 ಗಂಟೆಗೆ ದೇವಾಲಯದಲ್ಲಿ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. 6.30 ಗಂಟೆಗೆ ಗಣಪತಿ ಹೋಮ, 7.30ಕ್ಕೆ ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥ ಸ್ನಾನ ನಡೆಯಲಿದೆ. ಬೆಳಿಗ್ಗೆ 9.20ಕ್ಕೆ ಕಳಶ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾರತಿ ನಡೆಯಲಿದೆ. 11.45ಕ್ಕೆ ದೇವಿಯ ರಥೋತ್ಸವ ದೇವಾಲಯದ ಆವರಣದ ಸುತ್ತ ಸಾಗಲಿದೆ. ನಂತರ ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಅನ್ನದಾನ, 12.30ಕ್ಕೆ ತಾಯಿಯ ದರ್ಶನ, ಸಂಜೆ 6 ಗಂಟೆಗೆ ದೇವಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ ಜರುಗಲಿದೆ. ರಾತ್ರಿ 9 ಗಂಟೆಗೆ ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ ವಿವಿಧ…
ಲೇಖಕ: admin
ನಾಪೋಕ್ಲು ಮೇ 5 NEWS DESK : ಮೇಯಲು ಬಿಟ್ಟ ಹಸುವೊಂದು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ನಾಪೋಕ್ಲುವಿನಲ್ಲಿ ನಡೆದಿದೆ. ಪಟ್ಟಣದ ನಿವಾಸಿ ಟಿ.ಎಂ.ಶ್ಯಾಮ್ ಎಂಬವರು ತಮ್ಮ ಗಬ್ಬದ ಹಸುವನ್ನು ಗದ್ದೆಯಲ್ಲಿ ಮೇಯಲು ಬಿಟ್ಟಿದ್ದರು. ಈ ಸಂದರ್ಭ ಗದ್ದೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಮೃತಪಟ್ಟಿದೆ ಎನ್ನಲಾಗಿದೆ. ಮಳೆ ಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಸಂಬಂಧಿಸಿದ (ಚೆಸ್ಕಾಂ) ಇಲಾಖೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಪುತ್ರ ಸಂದೇಶ್ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ನಿವಾಸಿ ಕಾಫಿ ಬೆಳೆಗಾರ ಕಂಗಂಡ ಜಾಲಿ ಪೂವಪ್ಪ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಪಶುವೈದ್ಯೆ ಶಿಲ್ಪ ಹಸುವನ್ನು ಪರಿಶೀಲಿಸಿ ಸಾವಿನ ಕಾರಣವನ್ನು ದೃಢಪಡಿಸಿದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಮೇ 5 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗೌಡ ಜನಾಂಗದ ನಡುವಿನ 3ನೇ ಆವೃತ್ತಿಯ ಟಿ-20 ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ (ಜಿಪಿಎಸ್) ಬಿಳಿಗೇರಿ ಪ್ಲಾಂಟರ್ಸ್ ಕ್ಲಬ್ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ದಿ ಎಲೈಟ್ ಕ್ರಿಕೆಟ್ ಕ್ಲಬ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಏ.20 ರಂದು ಆರಂಭಗೊಂಡ ಕ್ರಿಕೆಟ್ ಪಂದ್ಯಾವಳಿಯಲ್ಲಿ 10 ಫ್ರಾಂಚೈಸಿ ತಂಡಗಳು ಭಾಗವಹಿಸಿದ್ದವು. ಈ ಪೈಕಿ ಬಿಳಿಗೇರಿ ಪ್ಲಾಂಟರ್ಸ್ ಕ್ಲಬ್ ಹಾಗೂ ದಿ ಎಲೈಟ್ ಕ್ಲಬ್ ಫೈನಲ್ ಪಂದ್ಯಾವಳಿಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಯಿತು. ಅಂತಿಮ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಿ ಎಲೈಟ್ ಕ್ರಿಕೆಟ್ ಕ್ಲಬ್ ನಿಗದಿತ 20 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 142 ರನ್ ಕಲೆ ಹಾಕಿತು. ಆಟಗಾರ ಅಂಜನ್ 56 ಎಸೆತಗಳಲ್ಲಿ ಆಕರ್ಷಕ ಅರ್ಧ ಶತಕ ಸಿಡಿಸಿದರು. ಈ ಗುರಿಯನ್ನು ಬೆನ್ನತ್ತಿದ್ದ ಬಿಳಿಗೇರಿ ಪ್ಲಾಂಟರ್ಸ್ ಕ್ಲಬ್ 17 ಓವರ್…
ಮೈಸೂರು ಮೇ 5 NEWS DESK : ಮೈಸೂರು ಕೊಡವ ಸ್ಟುಡೆಂಟ್ ಅಸೋಸಿಯೇಷನ್ ವತಿಯಿಂದ ಆಯೋಜನೆಗೊಂಡಿದ್ದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ಶಾಸಕ ಎ.ಎಸ್ ಪೊನ್ನಣ್ಣ ಅವರ ಪತ್ನಿ ಕಾಂಚನ್ ಪೊನ್ನಣ್ಣ ಭಾಗವಹಿಸಿ ವಿಜೇತರಿಗೆ ಪ್ರಶಸ್ತಿ ವಿತರಣೆ ಮಾಡಿದರು. ಮೈಸೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿನ ಕೊಡವ ವಿದ್ಯಾರ್ಥಿಗಳ ಒಕ್ಕೂಟದ ಈ ಪಂದ್ಯಾವಳಿಯ ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದ ಕಾಂಚನ್ ಪೊನ್ನಣ್ಣ, ಸಮುದಾಯದ ಯುವಕ-ಯುವತಿಯರ ಕ್ರೀಡಾ ಪ್ರತಿಭೆ ಮುನ್ನಲೆಗೆ ತರಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಲಿದೆ ಎಂದು ಬಣ್ಣಿಸಿದರು. ಈ ಸಂದರ್ಭದಲ್ಲಿ, ಪ್ರಶಸ್ತಿ ಪ್ರದಾನ ವೇದಿಕೆಯಲ್ಲಿ ಆಹ್ವಾನಿತ ಗಣ್ಯರು ಉಪಸ್ಥಿತರಿದ್ದರು.
ನಾಪೋಕ್ಲು ಮೇ 5 NEWS DESK : ಪಾಡಿ ಇಗ್ಗುತ್ತಪ್ಪ ದೇವಾಲಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಭಕ್ತ ಜನಸಂಘವನ್ನು ಟ್ರಸ್ಟ್ ಎಂದು ಬದಲಾಯಿಸುವಂತೆ ಶ್ರೀ ಇಗ್ಗುತ್ತಪ್ಪ ಭಕ್ತ ಜನ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸಂಘದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ವಿವಿಧ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕ್ಷೇತ್ರ ವಾಸಕ್ಕೆ ಕಟ್ಟಡ ನಿರ್ಮಿಸುವ ಬಗ್ಗೆ ಹಾಗೂ ಇಗ್ಗು ತಪ್ಪದೇವರ ಮೂಲಸ್ಥಾನವಾದ ಮಲ್ಮ ಬೆಟ್ಟದಲ್ಲಿ ಕಾಡುಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಿ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸೋಲಾರ್ ತಂತಿ ಬೇಲಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಚರ್ಚಿಸಲಾಯಿತು. ದೇವಾಲಯದಲ್ಲಿ ನಾಮಕರಣ, ಲಗ್ನಪತ್ರಿಕೆ ಮಾಡಿಸಲು ಆಸಕ್ತಿ ಹೊಂದಿದ ಭಕ್ತರು ಹೆಚ್ಚಿನ ಆಡಂಬರ ಮಾಡದೆ ದೇವಸ್ಥಾನದ ಕಟ್ಟು ಪಾಡುಗಳಿಗೆ ಒಳಪಟ್ಟು ಸರಳತೆಗೆ ಒತ್ತುನೀಡಿ ಆಚರಣೆ ಮಾಡುವಂತೆ ಸಭೆಯಲ್ಲಿ ಚರ್ಚಿಸಲಾಯಿತು. ವೇದಿಕೆಯಲ್ಲಿ ಆಡಳಿತ ಮಂಡಳಿ ಪದಾಧಿಕಾರಿಗಳಾದ, ಕಲ್ಯಾಣಂಡ ಟಿ.ಅಪ್ಪಣ್ಣ, ಬಟ್ಟೀರ ಚೋಂದಮ್ಮ ಮೇದಪ್ಪ, ಅಂಜಪರವಂಡ ಎ.ಕುಶಾಲಪ್ಪ, ಪರದಂಡ ಕೆ.ನಾಣಯ್ಯ, ಅನ್ನಾಡಿಯಂಡ ಪಿ.ದಿಲೀಪ್, ಅಲ್ಲಾರಂಡ ಎಸ್.ಅಯ್ಯಪ್ಪ, ಕುಲ್ಲೇಟಿರ…
ಸೋಮವಾರಪೇಟೆ ಮೇ 5 NEWS DESK : ತಾಲೂಕಿನ ಶಿರಂಗಾಲ ವಿಭಾಗದ ನಲ್ಲೂರಮ್ಮ ಹಾಗೂ ಬಸವೇಶ್ವರ ದೇವಾಲಯದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ವತಿಯಿಂದ ಮಂಜೂರಾದ 2 ಲಕ್ಷ ರೂ,ಗಳ ಡಿ.ಡಿ.ಯ ಮಂಜೂರಾತಿ ಪತ್ರವನ್ನು ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಗ್ರಾಮಸ್ಥರಿಗೆ ವಿತರಿಸಿದರು. ನಂತರ ಅವರು ಮಾತನಾಡಿ, ಶ್ರೀ ಕ್ಷೇತ್ರದಿಂದ ಸಮಾಜಮುಖಿಯಾಗಿ ಕೈಗೊಂಡ ಕಾರ್ಯಕ್ರಮಗಳಾದ ಶಿಕ್ಷಣ ಕ್ಷೇತ್ರದಲ್ಲಿ ಶಾಲೆಗಳಿಗೆ ಪೀಠೋಪಕರಣ, ಜ್ಞಾನದೀಪ ಶಿಕ್ಷಕರ ನೇಮಕ ಮಾಡುವುದು, ಉನ್ನತ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ನೀಡುವುದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವಾಗುತ್ತಿದ್ದಾರೆ ಎಂದರು. ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ, ಗ್ರಾಮೀಣ ರೈತರಿಗೆ ಅನುಕೂಲವಾಗುವಂತೆ ಹಾಲು ಉತ್ಪಾದಕರ ಸಂಘಗಳಿಗೆ ಅನುದಾನ, ನಿರ್ಗತಿಕರಿಗೆ ಮಾಶಾಸನ, ವಿಶೇಷಚೇತನರಿಗೆ ಪರಿಕರಗಳ ವಿತರಣೆ ಸೇರಿದಂತೆ ಶ್ರೀ ಕ್ಷೇತ್ರದ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಈ ಸಂದರ್ಭ ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಂ.ಚೇತನ್, ಕಾರ್ಯದರ್ಶಿ ರವಿ, ಒಕ್ಕೂಟದ ಅಧ್ಯಕ್ಷೆ ಮಂಜುಳಾ, ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಮತ್ತಿತರರು ಇದ್ದರು.
ಸೋಮವಾರಪೇಟೆ ಮೇ 5 NEWS DESK : ನಾವು ಪ್ರತಿಷ್ಠಾನದ ವತಿಯಿಂದ ಮಹಿಳಾ ಸಮಾಜದಲ್ಲಿ ನಡೆಯುತ್ತಿರುವ ಮಕ್ಕಳ ಬೇಸಿಗೆ ಶಿಬಿರದ ಶಿಬಿರಾರ್ಥಿಗಳು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಪೊಲೀಸ್ ಇಲಾಖೆಯ ಆಡಳಿತ ಹಾಗೂ ಕರ್ತವ್ಯದ ಬಗ್ಗೆ ಇನ್ಸ್‍ಪೆಕ್ಟರ್ ಮುದ್ದು ಮಾದೇವ ಮಾಹಿತಿ ನೀಡಿದರು. ಮಕ್ಕಳ ವಿಶೇಷ ಪೊಲೀಸ್ ವೀಣಾ, ಪ್ರತಿಷ್ಠಾನದ ಸಂಸ್ಥಾಪಕ ಗೌತಮ್ ಕಿರಗಂದೂರು, ಕಾರ್ಯಕಾರಿ ನಿದೇಶಕಿ ಸುಮನ ಮ್ಯಾಥ್ಯು ಇದ್ದರು.
ನಾಪೋಕ್ಲು ಮೇ 5 NEWS DESK : ಕೊಡಗು ಜಿಲ್ಲಾ ಗೊಲ್ಲ ಸಮಾಜದ ವತಿಯಿಂದ ನಾಪೋಕ್ಲು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪೊನ್ನುಕಂಡ ತಂಡ ಪ್ರಥಮ ಸ್ಥಾನಗಳಿಸಿತು. ಪೊನ್ನಾಟಿಯಂಡ ತಂಡ ದ್ವಿತೀಯ ಸ್ಥಾನ ಗಳಿಸಿತು. ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಆಚೀರ ತಂಡ ಪ್ರಥಮ ಸ್ಥಾನ ಗಳಿಸಿದರೆ, ಪೊನ್ನುಕಂಡ ತಂಡ ದ್ವಿತೀಯಸ್ಥಾನಗಳಿಸಿತು. ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪೆÇಂಗೇರ ತಂಡ ಪ್ರಥಮ ಸ್ಥಾನವನ್ನು ಕೈಬಿಲಿರ ತಂಡ ದ್ವಿತೀಯ ಸ್ಥಾನವನ್ನುಗಳಿಸಿತು. ಕೊಡಗು ಜಿಲ್ಲಾ ಗೊಲ್ಲ ಸಮಾಜದ ಅಧ್ಯಕ್ಷ ಅರೆಯಂಡ ಎ.ಭೀಮಯ್ಯ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಫೈನಲ್ ಕ್ರೀಡಾಕೂಟದ ಉದ್ಘಾಟನೆಯನ್ನು ಕೊಡವ ಭಾಷಿಕ ಒಕ್ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿ, ಗೊಲ್ಲ ಸಮುದಾಯವು ಚಿಕ್ಕ ಸಮುದಾಯವಾದರೂ ದೊಡ್ಡ ಮಟ್ಟದಲ್ಲಿ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿರುವುದು ಸಂತಸ ತಂದಿದೆ. ಎಲ್ಲಾ ಸಮುದಾಯ ವರ್ಗದಲ್ಲೂ ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು ಮುಂದೆ ಬರಬೇಕೆಂದು ಆಶಿಸಿದರು. ಒಗ್ಗಟ್ಟು, ಶಿಸ್ತು, ಪ್ರೀತಿ, ವಿಶ್ವಾಸ…
ವಿರಾಜಪೇಟೆ ಮೇ 5 NEWS DESK : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯೆಯಾಗಿ ಬಿಜೆಪಿಯ ಹಿರಿಯ ಮುಖಂಡರಾದ ಮನೆಯಪಂಡ ಕಾಂತಿ ಸತೀಶ್ ಆಯ್ಕೆಯಾಗಿದ್ದಾರೆ. ವಿರಾಜಪೇಟೆಯ ಮನೆಯಪಂಡ ಕಾಂತಿ ಸತೀಶ್ ರವರು ಕೊಡಗು ಬಿಜೆಪಿ ಮಹಿಳಾ ಮೋಚಾ೯ದ ಅಧ್ಯಕ್ಷೆಯಾಗಿ ಕಾಯ೯ನಿವ೯ಹಿಸಿದ್ದರು. ಅಂತೆಯೇ, ಕೊಡಗು ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಪಂಚಾಯತ್ ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಾಗೂ ವೀರಾಜಪೇಟೆ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಇದೀಗ ಲೋಕಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಒಡೆಯರ್ ಅಧ್ಯಕ್ಷರಾಗಿರುವ ಕೇಂದ್ರ ಸಕಾ೯ರಗಳ ಯೋಜನೆಗಳ ಅನುಷ್ಟಾನ ಸಂಬಂಧಿತ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸದಸ್ಯೆಯಾಗಿ ನೇಮಕಗೊಂಡಿದ್ದಾರೆ.
ಸೋಮವಾರಪೇಟೆ NEWS DESK ಮೇ 4 : ಸೋಮವಾರಪೇಟೆ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಸೋಮವಾರಪೇಟೆ ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿ ಆರೋಪಿಸಿದೆ. ಭಾನುವಾರ ಸೋಮವಾರಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಅರುಣ್ ಕೊತ್ನಳ್ಳಿ ಅವರು ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ ಸೂಕ್ತ ತನಿಖೆ ನಡೆಸಿ ಆಡಳಿತಾಧಿಕಾರಿಯನ್ನು ನೇಮಿಸಬೇಕು. ತಪ್ಪಿದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಸರ್ಕಾರಿ ಆಸ್ಪತ್ರೆಯ ಉಸ್ತುವಾರಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಹಾಗೂ ಆಡಳಿತ ವೈದ್ಯಾಧಿಕಾರಿ ವಹಿಸಿಕೊಂಡಿದ್ದಾರೆ. ಆದರೆ ಇವರುಗಳ ನಡುವಿನ ಹೊಂದಾಣಿಕೆಯ ಕೊರತೆಯಿಂದ ರೋಗಿಗಳು ಸೂಕ್ತ ಚಿಕಿತ್ಸೆ ಸಿಗದೆ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು. ಆಸ್ಪತ್ರೆಗೆ ಬೇಕಾದ ಎಲ್ಲಾ ತರಹದ ಸೌಲಭ್ಯಗಳು ಹಾಗೂ ಅನುದಾನವನ್ನು ಸರ್ಕಾರ ಸಕಾಲದಲ್ಲಿ ಪೂರೈಕೆ ಮಾಡುತ್ತಿದೆ. ಆದರೂ ಸಮನ್ವಯತೆಯ ಕೊರತೆಯಿಂದ ಸದುಪಯೋಗವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸ್ಕಾö್ಯನಿಂಗ್ ಯಂತ್ರವಿದ್ದರೂ ತಜ್ಞ ವೈದ್ಯರಿಲ್ಲ, ಎಕ್ಸರೆ ಲ್ಯಾಬ್ ಕಾರ್ಯನಿರ್ವಹಿಸುತ್ತಿಲ್ಲ. ರಕ್ಷಾಸಮಿತಿಯಲ್ಲಿ ಹಣವಿದ್ದರೂ ಲೇಖನ ಸಾಮಾಗ್ರಿಗಳನ್ನು…






