ಮಡಿಕೇರಿ ಮೇ 3 NEWS DESK : ಸೋಮವಾರಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್2 ಶಾಂತಳ್ಳಿ ಫೀಡರ್ ಮಾರ್ಗದಲ್ಲಿ ಮೇ, 05 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಯಡೂರು, ತಲ್ತಾರೆಶೆಟ್ಟಳ್ಳಿ, ಕಿರಗಂದೂರು, ತಾಕೇರಿ, ಗಿಜಗನಮನೆ, ತೊಳೂರುಶೆಟ್ಟಳ್ಳಿ, ಕೂತಿ, ಹೊಸಬೀಡು, ಕಲ್ಕಂದೂರು, ಬಸವನಕಟ್ಟೆ, ನಗರಳ್ಳಿ, ಹೆಮನಗದ್ದೆ, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹೆಗ್ಗಡಮನೆ, ಹರಗ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಲೇಖಕ: admin
ಕೂಡಿಗೆ ಮೇ 3 NEWS DESK : ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಗೊಂಡ ಪ್ರಾಂಶುಪಾಲ ಡಾ.ಕೆ.ಬಿ.ಬಸಪ್ಪ ಅವರಿಗೆ ಕಾಲೇಜು ವತಿಯಿಂದ ಬೀಳ್ಕೊಡಲಾಯಿತು. ಸುದೀರ್ಘ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ , ಮೂರು ವರ್ಷ ಒಂಭತ್ತು ತಿಂಗಳು ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಗೊಂಡ ಪ್ರಾಂಶುಪಾಲ ಡಾ ಕೆ.ಬಿ. ಬಸಪ್ಪ ಅವರನ್ನು ಕಾಲೇಜಿನ ಉಪನ್ಯಾಸಕರು ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಸನ್ಮಾನಿಸಿ ಗೌರವಿಸಿದರು. ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಮಂಜುಳಾ ಮಾತನಾಡಿ, ಕಾಲೇಜಿನ ಪ್ರಾಂಶುಪಾಲ ಡಾ.ಬಸಪ್ಪ ಮತ್ತು ಉಪನ್ಯಾಸಕರ ಸಮನ್ವಯತೆಯಿಂದ ಕಾಲೇಜಿನಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ಬರುತ್ತಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. ಸೇವೆಯಲ್ಲಿ ಕರ್ತವ್ಯನಿಷ್ಠೆಯೊಂದಿಗೆ ಕಾರ್ಯನಿರ್ವಹಿಸಿ ಸರಳ ವ್ಯಕ್ತಿತ್ವದಲ್ಲಿ ಸಾರ್ಥಕತೆ ಕಂಡುಕೊಂಡು ನಿವೃತ್ತಿ ಹೊಂದುತ್ತಿರುವ ಬಸಪ್ಪ ಅವರ ಜೀವನ ಸುಖಮಯವಾಗಿರಲಿ ಎಂದು ಹಾರೈಸಿದರು. ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಪುಟ್ಟರಾಜು…
ಮಡಿಕೇರಿ ಮೇ 3 NEWS DESK : ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟ ಹಾಗೂ ಕೊಡಗು ಗೌಡ ಯುವ ವೇದಿಕೆಯ ಸಹಯೋಗದಲ್ಲಿ ನಗರದಲ್ಲಿ 2ನೇ ವರ್ಷದ ಗೌಡ ಮಹಿಳಾ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆಗೊಂಡಿತು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮರಗೋಡಿನ ಕೃಷಿ ಸಾಧಕರು ಹಾಗೂ ಕಾಫಿ ಬೆಳೆಗಾರರಾದ ಕಟ್ಟೆಮನೆ ಪ್ರೇಮಾ ಗಣೇಶ್ ಅವರು ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮೇಲುಗೈ ಸಾಧಿಸುತ್ತಿದ್ದಾರೆ. ಅಗತ್ಯ ಸಹಕಾರ ನೀಡಿದರೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಮೂಟೇರ ಪುಷ್ಪಾವತಿ ರಮೇಶ್, ಒಕ್ಕೂಟದ ಮೂಲಕ ಗೌಡ ಸಮುದಾಯದ ಮಕ್ಕಳಲ್ಲಿ ಗೌಡ ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯದ ಕುರಿತು ಅರಿವು ಮೂಡಿಸಿ ಗೌಡ ಪರಂಪರೆಯನ್ನು ಉಳಿಸಿ ಬೆಳೆಸಲಾಗುವುದು ಎಂದು ತಿಳಿಸಿದರು. 2023-24ನೇ ಸಾಲಿನಲ್ಲಿ ಕೊಡಗು ಗೌಡ…
ಮಡಿಕೇರಿ ಮೇ 3 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ 8ನೇ ವಾರ್ಷಿಕ ಮಹಾಸಭೆಯು ಮೇ 25 ರಂದು ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆಯ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಲೆಕ್ಕಪತ್ರವನ್ನು ಮಂಡಿಸಲಾಗುವುದು. ಸಭೆಯಲ್ಲಿ ಸಂಘದ ಪದಾಧಿಕಾರಿಗಳಾದ ಶಂಕರನಾರಾಯಣ ಹೆಬ್ಬಾರ್, ಕೊಂಡೀರ ಮೋಹನ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಸಭೆಗೆ ಸರ್ವ ಸದಸ್ಯರು ಹಾಜರಾಗುವಂತೆ ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿ ಕೋರಿದೆ.
ಸುಂಟಿಕೊಪ್ಪ ಮೇ 3 NEWS DESK : ಹತ್ತನೇ ತರಗತಿಯ ಫಲಿತಾಂಶದಲ್ಲಿ ಸುಂಟಿಕೊಪ್ಪ ಹೋಬಳಿಯ ಪ್ರೌಢಶಾಲೆಗಳು ಅತ್ಯುತ್ತಮ ಸಾಧನೆ ಮಾಡಿದೆ. ಕಾನ್‍ಬೈಲ್ ಸರಕಾರಿ ಪ್ರೌಢಶಾಲೆಯು ಶೇ.100 ಫಲಿತಾಂಶವನ್ನು ಪಡೆದುಕೊಂಡಿದೆ. ಕೊಡಗರಹಳ್ಳಿಯ ಶಾಂತಿನೀಕೇತನ ಪ್ರೌಢಶಾಲೆ ಶೇ.99 ಫಲಿತಾಂಶ ಪಡೆದಿವೆ. ಶಾಂತಿನಿಕೇತನ ಶಾಲೆಯ 95 ವಿದ್ಯಾರ್ಥಿಗಳಲ್ಲಿ 94 ಮಕ್ಕಳು ಉತ್ತೀರ್ಣಗೊಂಡಿದ್ದಾರೆ. ಅತ್ಯುನ್ನತ್ತ ಶ್ರೇಣಿಯಲ್ಲಿ 19 ಮಕ್ಕಳು ಮತ್ತು ಪ್ರಥಮ ದರ್ಜೆಯಲ್ಲಿ 66 ಹಾಗೂ ದ್ವಿತೀಯ ಶ್ರೇಣಿಯಲ್ಲಿ 09 ಮಕ್ಕಳು ಉತ್ತೀರ್ಣರಾಗಿದ್ದು, ಈ ಪೈಕಿ ಪ್ರೀತಿ ಕೆ. 601 ಅಂಕಗಳಿಸಿ ಶೇ. 96.16 ಅಂಕಗಳನ್ನು ಗಳಿಸಿದ್ದು ದ್ವಿತೀಯ ಸ್ಥಾನದಲ್ಲಿ ನಿಖಿಲ್ 599 ಅಂಕಗಳಿಸಿ ಶೇ. 95.52 ಅಂಕಗಳನ್ನು ಗಳಿಸಿದ್ದಾರೆ, ಅರ್ಜುನ್ ಆರವಿಂದ್ 598 ಶೇ.95.28 ಅಂಕಗಳೊಂದಿಗೆ 3ನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಸಂತಮೇರಿ 109 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, 99 ಮಕ್ಕಳು ಉತ್ತೀರ್ಣರಾಗುವ ಮೂಲಕ ಶೇ. 90.82 ಫಲಿತಾಂಶ ದಾಖಲಿಸಿದ್ದಾರೆ. ಅತ್ಯುನ್ನತ್ತ ಶ್ರೇಣಿಯಲ್ಲಿ ಒಟ್ಟು 15 ಮಂದಿ ತೇರ್ಗಡೆಗೊಂಡರೇ, ಪ್ರಥಮ ಶ್ರೇಣಿಯಲ್ಲಿ 63 ಮಂದಿ ಬಾಲಕರು, 25…
ನಾಪೋಕ್ಲು ಮೇ 3 NEWS DESK : ಶಿಬಿರಾರ್ಥಿಗಳು ಹಾಕಿ ಕ್ರೀಡೆಯಲ್ಲಿ ಪರಿಣತಿಯನ್ನು ಹೊಂದಿ ಉತ್ತಮ ಕ್ರೀಡಾಪಟುಗಳಾಗಬೇಕು ಎಂದು ಮುಖ್ಯ ಅತಿಥಿ ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹೇಳಿದರು. ನಾಪೋಕ್ಲು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಕೆಪಿಎಸ್ ಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಶಿಬಿರಾರ್ಥಿಗಳಿಂದ ಧ್ವಜ ವಂದನೆ ಸ್ವೀಕರಿಸಿ, ಬಳಿಕ ನಡೆದ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದಲ್ಲಿ ಹಾಕಿ ಕ್ರೀಡೆ ಪ್ರಸಿದ್ಧಿ ಹೊಂದಿದೆ. ಜಿಲ್ಲೆಯಲ್ಲೂ ಇರುವ ಉತ್ತಮ ಹಾಕಿಪಟುಗಳಿಂದಾಗಿ ಕೌಟುಂಬಿಕ ಹಾಕಿ ಉತ್ಸವ ಗಿನ್ನೆಸ್ ಬುಕ್‍ಆಫ್ ರೆಕಾಡ್ರ್ಸ್ ನಲ್ಲಿ ಸ್ಥಾನ ಪಡೆಯುವಂತಾಗಿದೆ. ಹಾಕಿ ಕ್ರೀಡೆಗೆ ಉತ್ತಮ ಅವಕಾಶಗಳು ಇರುವುದರಿಂದ ಶಿಬಿರಾರ್ಥಿಗಳು ಅದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು. ಉತ್ತಮವಾಗಿ ತರಬೇತಿ ಆಯೋಜಿಸುತ್ತಿರುವ ಅಕಾಡೆಮಿಯ ಮುಂದಿನ ವರ್ಷದ ತರಬೇತಿ ಶಿಬಿರಕ್ಕೆ ರೂ.50,000 ಗಳ ಕೊಡುಗೆ ನೀಡುವುದಾಗಿ ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಾನಿಗಳಾದ ಪಾಂಡಂಡ ಲೀಲಾ ಕುಟ್ಟಪ್ಪ, ವಿದ್ಯಾರ್ಥಿಗಳು ತಂದೆ-ತಾಯಿಯಂದಿರಿಗೆ ಗೌರವವನ್ನು ನೀಡಬೇಕು.…
ನಾಪೋಕ್ಲು ಮೇ 3 NEWS DESK : ತನ್ನದೇ ಆದ ಆಚಾರ, ವಿಚಾರ, ಸಂಸ್ಕೃತಿ, ಸಂಪ್ರದಾಯಗಳನ್ನು ರೂಡಿಸಿಕೊಂಡಿರುವ ಗೊಲ್ಲ ಜನಾಂಗದವರ ವಾರ್ಷಿಕ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಹೆಮ್ಮೆ ಅನಿಸಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಕೊಡಗು ಜಿಲ್ಲಾ ಗೊಲ್ಲ ಸಮಾಜದ ವತಿಯಿಂದ ನಾಪೋಕ್ಲು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಉದ್ಘಾಟಿಸಿ ಮಾತನಾಡಿದರು. ಇಂದು ಜಿಲ್ಲೆಯಲ್ಲಿ ಸಣ್ಣ ಸಣ್ಣ ಸಮುದಾಯದವರು ವ್ಯವಸ್ಥಿತವಾಗಿ ಕ್ರೀಡಾಕೂಟವನ್ನು ಸಂಘಟಿಸುತ್ತಿದ್ದಾರೆ. ಇದು ಸಂತಸದ ವಿಚಾರ. ಜಿಲ್ಲೆಯಲ್ಲಿ ಅಸ್ತಿತ್ವದಲ್ಲಿರುವ ಸಣ್ಣ ಸಣ್ಣ ಸಮುದಾಯದವರು ತಮ್ಮದೇ ಆದ ಸಂಸ್ಕೃತಿ, ಉಡುಪು, ಭಾಷೆ, ಆಚಾರ ವಿಚಾರಗಳನ್ನು ಹೊಂದಿದ್ದಾರೆ. ಅವುಗಳನ್ನು ಕಾಪಾಡುವ ಕೆಲಸ ಆಗಬೇಕಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ವಿವಿಧ ಸಮುದಾಯಗಳ ಕ್ರೀಡಾಕೂಟಗಳು ಜರುಗುತ್ತಿವೆ. ಕ್ರೀಡಾಕೂಟಗಳ ಮೂಲಕ ಸಂಘಟನೆ ಸಾಧ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯಯಲ್ಲಿ ಎಲ್ಲಾ ಜನಾಂಗದವರ ಕಾರ್ಯಕ್ರಮಗಳಿಗೆ ತಾನು ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ…
ಮಡಿಕೇರಿ ಮೇ 2 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವು ಮೇ 4 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಮೇ 3 NEWS DESK : ಆದಿ ಶಂಕರಾಚಾರ್ಯರು ಕೇರಳದ ಕಾಲಡಿಯ ಪೂರ್ಣ ನದಿ ತೀರದಲ್ಲಿ ಒಂದು ಸರಳವಾದ ಕುಟುಂಬದಲ್ಲಿ ಹುಟ್ಟಿದ ಸಾಮಾನ್ಯ ಶಿಶು ಹಾಗೂ ಅವರು ಸೌಂದರ್ಯ ಲಹರಿಯಲ್ಲಿ ದ್ರಾವಿಡ ಶಿಶು ಎಂದು ಕರೆದುಕೊಳ್ಳುತ್ತಾರೆ ಎಂದು ಆಧ್ಯಾತ್ಮಿಕ ಚಿಂತಕರಾದ ಯಸಳೂರು ಉದಯ್ ಕುಮಾರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶುಕ್ರವಾರ ನಗರದ ಗಾಂಧಿ ಭವನದಲ್ಲಿ ನಡೆದ ಶ್ರೀ ಆದಿ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಂಗಾರದ ಕ್ರಾಂತಿ ಹಾಗೂ ವರ್ಣವನ್ನು ನೀಗಿಸುವ ಪಾಷ ಅಂಕುಶ ಬಾಣ ಬಿಲ್ಲುಗಳನ್ನು ಧರಿಸಿದ್ದ ಕೆಂಪು ಹೂಮಾಲೆ ಧರಿಸಿದ್ದ ಕೆಂಪಡರಿದ ಕಣ್ಣುಗಳ ತಾಂಬೂಲಗಳಿಂದ ಕೆಂಪಾದ ವದನವುಳ್ಳ ತ್ರಿಪುರ ಸುಂದರಿ ಮಹಾದೇವಿಯನ್ನು ಭಕ್ತಿಯಿಂದ ನಮಿಸುವೆ ಎಂದು ಸೌಂದರ್ಯ ಲಹರಿಯಲ್ಲಿ ಶಂಕರಾಚಾರ್ಯರು ಹೇಳಿದ್ದಾರೆ. ಆದಿ ರಂಗ, ಮಧ್ಯ ರಂಗ, ಅಂತರಂಗ ಮೂರು ರಂಗನಾಥಗಳಿವೆ, ಕಾವೇರಿಯನ್ನು ಫಲವನ್ನು ಮತ್ತು ಬೆಳಕನ್ನು ಕೊಡುವ ಮಹಾತಾಯಿ ಎಂದು ಹೇಳುತ್ತಾರೆ. ಫಲ ಎಂದರೆ…
ಸೋಮವಾರಪೇಟೆ NEWS DESK ಮೇ 3 : ಐತಿಹಾಸಿಕ ಹಿನ್ನೆಲೆ ಹೊಂದಿರುವ ಸೋಮವಾರಪೇಟೆ ಆನೆಕೆರೆ ಆವರಣ ಗೋಡೆ ಕುಸಿದು ಬಿದ್ದಿದೆ. ಧಾರಾಕಾರ ಮಳೆಗೆ ಆವರಣ ಗೋಡೆ ಬಿದ್ದಿದ್ದು, ರಾಜ್ಯ ಹೆದ್ದಾರಿಯ ಬದಿಯಲ್ಲೇ ಕೆರೆ ಇರುವುದರಿಂದ ಅಪಾಯದ ಮುನ್ಸೂಚನೆ ಎದುರಾಗಿದೆ. ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವುದರಿಂದ ಸೋಮವಾರಪೇಟೆ ಪಟ್ಟಣ ಪಂಚಾಯ್ತಿ ಮತ್ತು ಲೋಕೋಪಯೋಗಿ ಇಲಾಖೆ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಆನೆಕೆರೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಮತ್ತು ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.






