ಲೇಖಕ: admin

ಮಡಿಕೇರಿ NEWS DESK ಮೇ 2 : ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಖಂಡಿಸಿ ಕೊಡಗು ಜಿಲ್ಲಾ ಹಿಂದೂ ಸುರಕ್ಷಾ ಸಮಿತಿ ಹಾಗೂ ಹಿಂದೂ ಪರ ಸಂಘಟನೆಗಳು ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಶುಕ್ರವಾರ ಸಂಜೆ ಏಕಕಾಲದಲ್ಲಿ ಪ್ರತಿಭಟನೆ ನಡೆಸಿದವು. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹಿಂದೂ ಸಂಘಟನೆಗಳ ಪ್ರಮುಖರು, ಸುಹಾಸ್ ಶೆಟ್ಟಿಯನ್ನು ಹತ್ಯೆಗೈದವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರದಿಂದ ಹಿಂದೂ ಕಾರ್ಯಕರ್ತರಿಗೆ ರಕ್ಷಣೆೆ ಇಲ್ಲದಂತಾಗಿದೆ ಎಂದು ಆರೋಪಿಸಿದರು. ಪ್ರಮುಖರಾದ ತಳೂರು ಕಿಶೋರ್ ಕುಮಾರ್, ಮನು ಮಂಜುನಾಥ್, ಅನಿತಾ ಪೂವಯ್ಯ, ಅರುಣ್ ಶೆಟ್ಟಿ, ಪಿ.ಎಂ.ರವಿ, ಮಹೇಶ್ ಜೈನಿ, ನಗರಸಭೆಯ ಬಿಜೆಪಿ ಸದಸ್ಯರುಗಳು, ವಿವಿಧ ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕುಶಾಲನಗರದ ಫೀ.ಮಾ.ಕಾರ್ಯಪ್ಪ ವೃತ್ತದಲ್ಲಿ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಹಿಂದೂಪರ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣವನ್ನು ಖಂಡಿಸಿ,…

Read More

ಮಡಿಕೇರಿ NEWS DESK ಮೇ 2 : ಕೊಡಗು ಜಿಲ್ಲೆಯಲ್ಲಿ ಈ ಬಾರಿಯ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶವನ್ನು ಒಟ್ಟು 26 ಶಾಲೆಗಳು ಪಡೆದುಕೊಂಡಿವೆ. ಅವುಗಳೆಂದರೆ, ಗಾಳಿಬೀಡು ಸರ್ಕಾರಿ ಪ್ರೌಢ ಶಾಲೆ, ಕಡಗದಾಳು ಸರ್ಕಾರಿ ಪ್ರೌಢ ಶಾಲೆ, ಮಕ್ಕಂದೂರು ಸರ್ಕಾರಿ ಪ್ರೌಢ ಶಾಲೆ, ಚೆಂಬು ಸರ್ಕಾರಿ ಪ್ರೌಢ ಶಾಲೆ, ಹಾಕತ್ತೂರು ಸರ್ಕಾರಿ ಪ್ರೌಢ ಶಾಲೆ, ಕಾನ್ ಬೈಲ್ ಸರ್ಕಾರಿ ಪ್ರೌಢ ಶಾಲೆ, ಕೊಂಡಂಗೇರಿ ಸರ್ಕಾರಿ ಪ್ರೌಢ ಶಾಲೆ, ನಾಪೋಕ್ಲುವಿನ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಚೌಡ್ಲುವಿನ ಡಾ. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ, ತಿತಿಮತಿ ಮೊರಾರ್ಜಿ ದೇಸಾಯಿ ವಸತಿ ಶಾಲೆ. ಅನುದಾನ ರಹಿತ ಶಾಲೆಗಳಾದ ಮಡಿಕೇರಿಯ ಬ್ಲಾಸಂ ಸರ್ಕಾರಿ ಪ್ರೌಢ ಶಾಲೆ, ನಾಲೋಕ್ಲುವಿನ ಎಕ್ಸೆಲ್ ಸ್ಕೂಲ್ ಆಫ್ ಎಜ್ಯುಕೇಷನ್, ಸಿದ್ದಾಪುರದ ಇಕ್ರಾ ಪಬ್ಲಿಕ್ ಶಾಲೆ, ಭಾಗಮಂಡಲದ ಕೋರಂಗಾಲದ ಜ್ಞಾನೋದಯ ಸರ್ಕಾರಿ ಪ್ರೌಢ ಶಾಲೆ, ಚೇರಂಬಾಣೆಯ ಕೊಟ್ಟೂರು ಗ್ರಾಮದ ಶ್ರೀ ರಾಜರಾಜೇಶ್ವರಿ ಸರ್ಕಾರಿ ಪ್ರೌಢ…

Read More

ಮಡಿಕೇರಿ NEWS DESK ಮೇ 2 : 2024-25ನೇ ಶೈಕ್ಷಣಿಕ ಸಾಲಿನ 10 ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಕೊಡಗು ಜಿಲ್ಲೆ ಶೇ.82.21 ಫಲಿತಾಂಶದೊಂದಿಗೆ ರಾಜ್ಯಕ್ಕೆ 5ನೇ ಸ್ಥಾನ ಪಡೆದುಕೊಂಡಿದೆ. ಜಿಲ್ಲಾ ವ್ಯಾಪ್ತಿಯ 171 ಪ್ರೌಢಶಾಲೆಗಳಿಂದ ಪರೀಕ್ಷೆಗೆ ಹಾಜರಾಗಿದ್ದ 6673 ವಿದ್ಯಾರ್ಥಿಗಳಲ್ಲಿ 5486 ಮಂದಿ ಉತ್ತೀರ್ಣರಾಗಿದ್ದಾರೆ. ಬಾಲಕಿಯರು ಮೇಲುಗೈ- ಎಂದಿನಂತೆ ಈ ಬಾರಿಯೂ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆಯಲ್ಲಿ 2723 ಬಾಲಕಿಯರು ಉತ್ತೀರ್ಣರಾಗಿದ್ದರೆ, 2420 ಬಾಲಕರು ತೇರ್ಗಡೆಯಾಗಿದ್ದಾರೆ. ಗ್ರಾಮೀಣ ಭಾಗದ 4172 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.80.72 ಫಲಿತಾಂಶ ಬಂದಿದ್ದರೆ, ನಗರಪ್ರದೇಶದ 970 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.85.61 ಫಲಿತಾಂಶ ಬಂದಿರುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಯ್ಯ ತಿಳಿಸಿದ್ದಾರೆ. 26 ಶಾಲೆಗಳಲ್ಲಿ ಪ್ರತಿಶತ ಫಲಿತಾಂಶ-ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು ಇಪ್ಪತ್ತಾರು ಶಾಲೆಗಳು ಶೇ.100 ಫಲಿತಾಂಶವನ್ನು ಪಡೆದುಕೊಂಡಿವೆ. ಇದರಲ್ಲಿ 11 ಸರ್ಕಾರಿ ಶಾಲೆಗಳು, 15 ಅನುದಾನ ರಹಿತ ಶಾಲೆಗಳಾಗಿವೆ. ಜಿಲ್ಲೆಗೆ ಪ್ರಥಮ-ವಿರಾಜಪೇಟೆಯ ಶ್ರೀ ಕಾವೇರಿ ಪ್ರೌಢಶಾಲೆಯ ಟಿ.ಎಂ.ಆಶ್ರಯ್ ಅಕ್ಕಮ್ಮ…

Read More

ಸೋಮವಾರಪೇಟೆ ಮೇ 2 NEWS DESK : ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಮೂವರು ವಿದ್ಯಾರ್ಥಿನಿಯರು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.  ವಿದ್ಯಾರ್ಥಿನಿ ಕೆ.ಸಿ.ಪಂಚಮಿ  625ಕ್ಕೆ 621 ಅಂಕಗಳನ್ನು ಪಡೆದು ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಇಂಗ್ಲೀಷ್, ಹಿಂದಿ, ವಿಜ್ಞಾನದಲ್ಲಿ ಶೇ.100ರಷ್ಟು ಅಂಕಗಳಿಸಿದ್ದಾರೆ. ಕನ್ನಡ 124, ಗಣಿತ 99, ಸಮಾಜ ವಿಜ್ಞಾನ 98 ಅಂಕ ಗಳಿಸಿದ್ದಾರೆ. ರೈತ ಕುಟುಂಬದ ಪಂಚಮಿ, ನೇರುಗಳಲೆ- ಅಬ್ಬೂರುಕಟ್ಟೆ ಗ್ರಾಮದ ತನ್ನ ಅಜ್ಜಿ ಮನೆಯಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡಿದ್ದಾರೆ. 5ನೇ ತರಗತಿಯಿಂದ ಕುವೆಂಪು ಶಾಲೆಯಲ್ಲಿ ಕಲಿತ್ತಿದ್ದರು. ತಂದೆ ಚಂದ್ರಕುಮಾರ್ ಹೆತ್ತೂರು ಗ್ರಾಮದಲ್ಲಿ ಕೃಷಿ ಕೆಲಸ ಮಾಡುತ್ತಾರೆ. ತಾಯಿ ಶಿಲ್ಪ ಬೆಂಗಳೂರಿನಲ್ಲಿ ನರ್ಸ್ ಕೆಲಸ ಮಾಡುತ್ತಿದ್ದಾರೆ.  ಪಂಚಮಿ ಮಾತನಾಡಿ, ಎರಡು ಹೆಚ್ಚಿನ ಅಂಕದ ನಿರೀಕ್ಷೆ ಇತ್ತು. ನಿದ್ದೆಗೆಟ್ಟು ಓದುತ್ತಿರಲಿಲ್ಲ. ಪರೀಕ್ಷೆ ಸಂದರ್ಭದಲ್ಲಿ ರಾತ್ರಿ 11 ತನಕ ಮತ್ತು ಬೆಳಿಗ್ಗೆ 4 ಗಂಟೆಂಗೆ ಎದ್ದು ಓದಿದ್ದೇನೆ. ಶಾಲೆಯಲ್ಲಿ ಶಿಕ್ಷಕರು ಮತ್ತು…

Read More

ಬೆಂಗಳೂರು ಮೇ 2 NEWS DESK : ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿರುವ ನರೇಂದ್ರ ಮೋದಿ ಅವರ ಆಶಯದಂತೆ “ವಿಕಸಿತ ಭಾರತ” ನಿರ್ಮಾಣಕ್ಕೆ ನಾವೆಲ್ಲರೂ ಸಂಕಲ್ಪ ತೊಟ್ಟಿದ್ದೇವೆ. ಇದರ ಭಾಗವಾಗಿ ಎಲ್ಲರಿಗೂ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಜಾತಿ ಗಣತಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ ಕ್ರಮ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಂಸದರು, ಜಾತಿ ಜನ ಗಣತಿ ಎಲ್ಲರಿಗೂ ಪೂರಕವಾಗಿರುತ್ತದೆ. ಇದು ಇಂದಿನ ಅತ್ಯಗತ್ಯ ಕಾರ್ಯಗಳಲ್ಲಿ ಒಂದಾಗಿದೆ ಎಂದು ತಿಳಿಸಿದರು. 1931ರಲ್ಲಿ ಅಂದಿನ ಬ್ರಿಟಿಷ್‌ ಆಡಳಿತ ಜಾತಿ ಗಣತಿ ನಡೆಸಿತ್ತು. ಹಲವು ದಶಕಗಳಾದರೂ ಇದನ್ನು ಮತ್ತೆ ನಡೆಸಿರಲಿಲ್ಲ. ಈಗ ಜಾತಿ ಗಣತಿಯನ್ನು ಅತ್ಯಂತ ವೈಜ್ಞಾನಿಕವಾಗಿ ಸಂವಿಧಾನದ ಆಧಾರದ ಮೇಲೆಯೇ ಇದನ್ನು ನಡೆಸಲು ನಮ್ಮ ಕೇಂದ್ರ ಬಿಜೆಪಿ ಸರ್ಕಾರ ಮುಂದಾಗಿರುವುದು ಅತ್ಯಂತ ಸ್ವಾಗತಾರ್ಹ ಎಂದು ಯದುವೀರ್‌ ಹೇಳಿದರು. ಬಿಜೆಪಿಯಿಂದ ಜನಪರ ಆಡಳಿತ ::  ಬಿಜೆಪಿ ಎಂದಿಗೂ…

Read More

ಮಡಿಕೇರಿ ಮೇ 2 NEWS DESK : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಕೊಡಗು ಜಿಲ್ಲಾ ಕ್ರೈಸ್ತರ ಸೇವಾ ಸಂಘ ತೀವ್ರವಾಗಿ ಖಂಡಿಸಿದೆ. ನಗರದಲ್ಲಿ ನಡೆದ ಸಂಘದ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ 26 ಪ್ರವಾಸಿಗರನ್ನು ಅಮಾನುಷವಾಗಿ ಹತ್ಯೆ ಮಾಡಿದ ಭಯೋತ್ಪಾದಕರನ್ನು ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಒತ್ತಾಯಿಸಲಾಯಿತು ಮತ್ತು ಮೃತರ ಆತ್ಮಕ್ಕೆ ಶಾಂತಿಕೋರಿ ಸಂತಾಪ ಸೂಚಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಕ್ರೈಸ್ತರ ಸೇವಾ ಸಂಘದ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯೂ ಅವರು, ಭಯೋತ್ಪಾದನೆಯನ್ನು ಭಾರತದಿಂದ ನಿರ್ನಾಮ ಮಾಡಲು ದೇಶದ ಆಡಳಿತ ವ್ಯವಸ್ಥೆಗೆ ಸಂಪೂರ್ಣ ಬೆಂಬಲವನ್ನು ನೀಡಬೇಕೆಂದು ಮನವಿ ಮಾಡಿದರು. ಅಮಾಯಕ ಪ್ರವಾಸಿಗರ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ ಅವರು, ಇದು ಕ್ಷಮೆ ಇಲ್ಲದ ಕ್ರೂರ ಕೃತ್ಯವೆಂದು ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಕ್ಯಾಥೋಲಿಕ್ ಧರ್ಮ ಸಭೆಯ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರ ಆತ್ಮಕ್ಕೆ ಶಾಂತಿಕೋರಿ ಮೌನಾಚರಣೆಯ ಮೂಲಕ ಪ್ರಾರ್ಥನೆ ಸಲ್ಲಿಸಲಾಯಿತು. ಸಂಘದ ಜಿಲ್ಲಾ ಪ್ರಧಾನ…

Read More

ಮಡಿಕೇರಿ ಮೇ 2 NEWS DESK : ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟ ಹಾಗೂ ಕೊಡಗು ಗೌಡ ಯುವ ವೇದಿಕೆಯ ಸಹಯೋಗದಲ್ಲಿ 2ನೇ ವರ್ಷದ ಗೌಡ ಮಹಿಳಾ ಕ್ರಿಕೆಟ್ ಪಂದ್ಯಾವಳಿ ಮೇ 3 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.  ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಮೂಟೇರ ಪುಷ್ಪಾವತಿ ರಮೇಶ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯುವ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವನ್ನು ಮರಗೋಡಿನ ಕೃಷಿ ಸಾಧಕರು ಹಾಗೂ ಕಾಫಿ ಬೆಳೆಗಾರರಾದ ಕಟ್ಟೆಮನೆ ಪ್ರೇಮಾ ಗಣೇಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಸ್ಥಾಪಕಾಧ್ಯಕ್ಷರಾದ ಪುದಿಯನೆರವನ ರೇವತಿ ರಮೇಶ್, ನಗರಸಭಾ ಸದಸ್ಯೆ ಕುಟ್ಟನ ಶ್ವೇತಾ ಪ್ರಶಾಂತ್, ಕಾಫಿ ಬೆಳೆಗಾರರಾದ ದಂಬೆಕೋಡಿ ಲೀಲಾ ಚಿಣ್ಣಪ್ಪ, ಮೂಟೇರ ಬೀನಾ…

Read More

ನಾಪೋಕ್ಲು ಮೇ 2 NEWS DESK : ರೈತರು ಉತ್ತಮ ಇಳುವರಿಯನ್ನು ಪಡೆಯಬೇಕಾದರೆ ಕೃಷಿ ಭೂಮಿ ಫಲವತ್ತತೆಯಿಂದ ಕೂಡಿರಬೇಕು ಎಂದು ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಮಣ್ಣುವಿಜ್ಞಾನಿ ಡಾ.ಕೆ.ಟಿ.ಮೋಹನ್ ಕುಮಾರ್ ಹೇಳಿದರು. ಕೂರ್ಗ್ ಟ್ರೆಡಿಂಗ್ ಕಂಪನಿ ಲಿಮಿಟೆಡ್ ಹಾಗೂ ಕೋರಮಂಡಲ್ ಇಂಟನ್ರ್ಯಾಷನಲ್ ಲಿಮಿಟೆಡ್ ಸಂಯುಕ್ತ ಆಶ್ರಯದಲ್ಲಿ ನಾಪೋಕ್ಲುವಿನಲ್ಲಿ ಬೆಳೆಗಾರರಿಗೆ ಆಯೋಜಿಸಲಾಗಿದ್ದ ಕಾಫಿ ಮತ್ತು ಕಾಳು ಮೆಣಸು ಕೃಷಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. ರೈತರು ಕೃಷಿ ಮಾಡುವ ಮುನ್ನ ಮಣ್ಣು ಪರೀಕ್ಷೆ ಅಗತ್ಯಕ್ಕೆ ತಕ್ಕಂತೆ ಉತ್ತಮ ಗುಣಮಟ್ಟದ ರಸ ಗೊಬ್ಬರಗಳನ್ನು ಬಳಸಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವುದರಿಂದ ಬೆಳೆಗಳ ಇಳುವರಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆಯಲು ಸಾಧ್ಯ ಎಂದರು. ನಾಪೋಕ್ಲು ಕೂರ್ಗ್ ಟ್ರೇಡಿಂಗ್ ಕಂಪನಿ ಲಿಮಿಟೆಡ್ ಮಾಲೀಕ ಮಹಮ್ಮದ್ ರಫಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರೈತರು ದೇಶದ ಬೆನ್ನೆಲುಬು ಎಂದ ಅವರು ರೈತರು ಕೃಷಿ ಚಟುವಟಿಕೆಗಳಲ್ಲಿ ಉತ್ತಮ ಇಳುವರಿಪಡೆಯಲು ಉತ್ತಮ ರಸ ಗೊಬ್ಬರಗಳ ಬಳಕೆ ಮಾಡಬೇಕಿದೆ ಎಂದರು. ವಕೀಲ ಅಬ್ದುಲ್ ರಿಯಾಜ್ ಕೋರಮಂಡಲ…

Read More

ಮಡಿಕೇರಿ ಮೇ 2 NEWS DESK : ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆಗೆಂದು ಅಧಿಕಾರಿಗಳು ಮನೆ ಮನೆಗೆ ಬರುವ ಸಂದರ್ಭ ಆದಿ ದ್ರಾವಿಡ ಜನಾಂಗದ ಮಂದಿ ಪರಿಶಿಷ್ಟ ಜಾತಿ “ಆದಿ ದ್ರಾವಿಡ” ಎಂದು ನಮೂದಿಸಬೇಕು. ಅಧಿಕಾರಿಗಳು ಕೂಡ ಇದನ್ನು ಅನುಮೋದಿಸಿ ಪರಿಶಿಷ್ಟ ಜಾತಿ “ಆದಿ ದ್ರಾವಿಡ” ಎಂದು ದಾಖಲಿಸಬೇಕು ಎಂದು ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಹೆಚ್.ಎಂ.ಸೋಮಪ್ಪ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ತುಳು ಭಾಷಿಕ ಆದಿ ದ್ರಾವಿಡ ಜಾತಿ ಬಾಂಧವರಿಗೆ 8 ವಿವಿಧ ರೀತಿಯ `ಪರಿಶಿಷ್ಟ ಜಾತಿ’ ಪ್ರಮಾಣ ಪತ್ರವನ್ನು ನೀಡಲಾಗುತ್ತಿದ್ದು, ಇದರಿಂದ ತೊಂದರೆ ಎದುರಾಗಿದೆ. ಆದ್ದರಿಂದ ಪರಿಶಿಷ್ಟ ಜಾತಿ “ಆದಿ ದ್ರಾವಿಡ” ಎಂದು ಜಾತಿ ಪ್ರಮಾಣಪತ್ರ ನೀಡಲು ಸರಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಪಟ್ಟಂತೆ ಪರಿಶಿಷ್ಟ ಜಾತಿ ಕುಟುಂಬಗಳ…

Read More

ಬೆಂಗಳೂರು ಮೇ 2 NEWS DESK : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) 2024-25ನೇ ಸಾಲಿನ SSಐಅ-1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಪ್ರಕಟಿಸಿದ್ದು, ಇಂದು ಮಧ್ಯಾಹ್ನ 12.30ರ ನಂತರ ಇಲಾಖೆಯ ವೆಬ್ ಸೈಟ್ ಗಳಲ್ಲಿ ಫಲಿತಾಂಶಗಳನ್ನು ವೀಕ್ಷಿಸಬಹುದು. ಈ ವರ್ಷ ಶೇ. 91.12ರಷ್ಟು ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಶೇ.89.96ರಷ್ಟು ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ದ್ವಿತೀಯ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಸ್ಥಾನ ಹಾಗೂ ಶೇ. 42.43 ಫಲಿತಾಂಶದೊಂದಿಗೆ ಕಲಬುರಗಿ ಕೊನೆಯ ಸ್ಥಾನದಲ್ಲಿದೆ. ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ SSಐಅ…

Read More