ಕುಶಾಲನಗರ ಮೇ 2 NEWS DESK : ಕುಶಾಲನಗರದ ಸಾಯಿ ಬಡಾವಣೆ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಶ್ರೀ ಗಣಪತಿ, ಶ್ರೀ ದತ್ತಾತ್ರೇಯ, ಶ್ರೀ ನಾಗದೇವತಾ ಮೂರ್ತಿಗಳ ಪ್ರತಿಷ್ಠಾಪನೆ ಕಾರ್ಯಕ್ರಮವು ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. ಎರಡು ದಿನಗಳ ಕಾಲ ವಾಸ್ತು ಹೋಮ, ವಾಸ್ತು ಬಲಿ, ರಕ್ಷೋಘ್ನ ಹೋಮ, ಪ್ರಕಾರ ಬಲಿ, ಬಿಂಬಶುದ್ದಿ, ಆದಿವಾಸೆ ಪೂಜೆ ಕಾರ್ಯಕ್ರಮಗಳು ನಡೆದವು. ಗುರುವಾರ ಬೆಳಗಿನಿಂದ ನಡೆದ, ವಿಗ್ರಹ ಪ್ರತಿಷ್ಠಾಪನ ಪೂಜಾ ಕಾರ್ಯಕ್ರಮಗಳಲ್ಲಿ, ಸಾಯಿಬಾಬಾ ವಿಗ್ರಹದ ಎರಡು ಬದಿಗಳಲ್ಲಿ ಗಣಪತಿ ಮತ್ತು ದತ್ತಾತ್ರೇಯರ ಅಮೃತ ಶಿಲಾ ಮೂರ್ತಿಗಳ ಪ್ರತಿಷ್ಠಾಪನೆ, ಅಮೃತಶಿಲಾ ಕಟಾಂಜನ, ಪಾದುಕೆ ಪ್ರತಿಷ್ಠಾಪನೆ, ಕೂರ್ಮ ಪ್ರತಿಷ್ಠಾಪನೆ, ಬಾಬಾ ಉತ್ಸವ ಮೂರ್ತಿಯ ಡೋಲಿ ಅನಾವರಣ, ಕಾರ್ಯಗಳು ನಡೆದವು. ಬಾಬಾ ದೇವಾಲಯದ ಹೊರ ಆವರಣದಲ್ಲಿ, ನಾಗ ಪ್ರತಿಷ್ಠೆ, ಬೇವಿನ ವೃಕ್ಷದ ಅಡಿಯಲ್ಲಿ ಮೂಲ ಬಾಬಾ ಪ್ರತಿಷ್ಠಾಪನೆ, ಹಾಗೂ ಮೂಲ ಶಿರಡಿ ಸಾಯಿಬಾಬಾ ಕ್ಷೇತ್ರದಲ್ಲಿ ಇರುವಂತೆ ವರ್ಷದ 365 ದಿನಗಳು ನಿರಂತರವಾಗಿ ಇರುವ ಬೆಂಕಿ ಕೊಂಡ ಪ್ರತಿಷ್ಠಾಪನ ಅನಾವರಣ…
ಲೇಖಕ: admin
ಮಡಿಕೇರಿ ಮೇ 2 NEWS DESK : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಫಾಕ್ ಪ್ರಚೋದಿತ ಭಯೋತ್ಪಾದಕ ದಾಳಿಯನ್ನು ಉಗ್ರವಾಗಿ ಖಂಡಿಸಿ, ಇದಕ್ಕೆ ದಿಟ್ಟ ಉತ್ತರವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ನಗರದಲ್ಲಿ ಕ್ಯಾಂಡಲ್ ಲೈಟ್ ಮೆರವಣಿಗೆ ನಡೆಯಿತು. ಮಡಿಕೇರಿಯ ಶ್ರೀ ಕೋದಂಡ ರಾಮ ದೇವಸ್ಥಾನದ ರಾಮೋತ್ಸವ ಸಮಿತಿ, ನ್ಯಾಷನಲ್ ಮೆಡಿಕೋಸ್ ಅಸೊಸಿಯೇಷನ್, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ನೀಮಾ ಸೇರಿದಂತೆ ವಿವಿಧ ಸಂಘಟನೆಗಳು ಸಂಜೆ ನಗರದ ಇಂದಿರಾ ಗಾಂಧಿ ವೃತ್ತದಿಂದ ನಗರದ ಮುಖ್ಯ ಬೀದಿಯಲ್ಲಿ ಮೊಂಬತ್ತಿ ಮೆರವಣಿಗೆ ನಡೆಸಿ, ಮಾನವ ಸರಪಳಿಯನ್ನು ರಚಿಸಿ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ಪ್ರತಿಭಟನೆಯಲ್ಲಿ ಶ್ರೀ ಕೋದಂಡ ರಾಮ ದೇವಸ್ಥಾನದ ರಾಮೋತ್ಸವ ಸಮಿತಿ ಅಧ್ಯಕ್ಷರಾದ ಕೆ.ಎಂ.ಬಿ.ಗಣೇಶ್, ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ನೀಮಾ)ನ ಕೊಡಗು ಘಟಕದ ಅಧ್ಯಕ್ಷ ಡಾ.ರಾಜಾರಾಂ, ನ್ಯಾಷನಲ್ ಮೆಡಿಕೋ ಆರ್ಗನೈಸೇಷನ್(ಎನ್ ಎಂಬ)ನ ಯುವ ಘಟಕದ ಪ್ರಮುಖರಾದ ವಿಕ್ರಂ ಶೆಟ್ಟಿ, ಶ್ರೀ…
ಮಡಿಕೇರಿ ಮೇ 2 NEWS DESK : ‘ಬೇಕಲ ರಾಮ ನಾಯಕರದ್ದು, ಸಾಹಿತ್ಯ ಸರಸ್ವತಿಯ ಮನಸ್ಸು. ಅವರ ನಿಸ್ವಾರ್ಥ ಸಾಹಿತ್ಯ ಸೇವೆಯು ಸಾರ್ವಕಾಲಿಕ ಆದರ್ಶ, ಸರ್ವರೂ ಒಂದಾಗಿ, ಸಹಬಾಳ್ವೆ ನಡೆಸಬೇಕೆಂಬ ಅರ್ಪಣಾ ಮನೋಭಾವ ಅವರ ಕೃತಿಗಳಲ್ಲಿವೆ. ಈ ಎಲ್ಲಾ ಕೃತಿಗಳೂ ಕೂಡಾ ಸಾಹಿತ್ಯ ಕ್ಷೇತ್ರಕ್ಕೆ ಮಹತ್ವದ ವರದಾನ’ ಎಂದು ಸಾಹಿತಿ ಚಂದ್ರಹಾಸ ಎಂ.ಬಿ.ಚಿತ್ತಾರಿ ಹೇಳಿದರು. ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಬಯಲು ರಂಗ ಮಂದಿರದಲ್ಲಿ ಡಾ.ವಾಮನ್ ಬೇಕಲ್ ಸ್ಥಾಪಕ ಸಂಚಾಲಕತ್ವದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡಿನ ಜಿಲ್ಲಾ ಘಟಕದ ನೇತೃತ್ವದಲ್ಲಿ ಕೊಡಗು ಜಿಲ್ಲಾ ಕನ್ನಡ ಭವನ, ಕೊಡಗು ಜಿಲ್ಲಾ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಕಾಸರಗೋಡಿನ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ನಡೆದ ಅಗ್ರಗಣ್ಯ ಸಾಹಿತಿ, ಇತಿಹಾಸ ಶಿಕ್ಷಕ ಮತ್ತು ಸಂಶೋಧಕರಾದ ಬೇಕಲ ರಾಮ ನಾಯಕರ ಬದುಕು – ಬರಹದ ಕುರಿತ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಮಾಜಿಕ…
ಮಡಿಕೇರಿ NEWS DESK ಮೇ 1 : ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ಕಾಂಗ್ರೆಸ್ ಪ್ರಮುಖನನ್ನು ತಕ್ಷಣ ಪೊಲೀಸರು ಬಂಧಿಸಬೇಕೆಂದು ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗದಿದ್ದಲ್ಲಿ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸರು ದಕ್ಷತೆಗೆ ಹೆಸರುವಾಸಿಯಾಗಿದ್ದು, ದೇಶದಲ್ಲಿಯೇ ಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದಾರೆ. ಯಾವುದೇ ಕ್ಲಿಷ್ಟಕರ ಪ್ರಕರಣಗಳನ್ನು ಬೇಧಿಸಿ ಸೈ ಎನಿಸಿಕೊಂಡಿದ್ದಾರೆ. ಆದರೆ ವಿನಯ್ ಆತ್ಮಹತ್ಯೆ ಮಾಡಿಕೊಂಡು ತಿಂಗಳಾದರೂ ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ವ್ಯಕ್ತಿಯ ಬಂಧನವಾಗಿಲ್ಲ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿರುವ ವ್ಯಕ್ತಿ ಪೊಲೀಸರ ಕಣ್ಣಿಗೆ ಯಾಕೆ ಬೀಳುತ್ತಿಲ್ಲವೆಂದು ಪ್ರಶ್ನಿಸಿದ್ದಾರೆ. ವಿನಯ್ ಪ್ರಕರಣದಲ್ಲಿ ಪೊಲೀಸರ ಮೇಲೆ ಒತ್ತಡ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ರಾಜಕೀಯ ಪ್ರಭಾವವಿಲ್ಲದೆ ಪೊಲೀಸರು ಸ್ವತಂತ್ರವಾಗಿ ಕಾರ್ಯನಿರ್ವಹಿಸಿದ್ದರೆ ಇಷ್ಟೊತ್ತಿಗಾಗಲೇ ಬಂಧನವಾಗುತ್ತಿತ್ತು. ಪೊಲೀಸರು ಅಸಹಾಯಕ ಸ್ಥಿತಿಯಲ್ಲಿರುವುದು ಸ್ಪಷ್ಟವಾಗುತ್ತಿದ್ದು, ಅನುಮತಿ ನೀಡಿದರೆ ಸಾರ್ವಜನಿಕರೇ ವ್ಯಕ್ತಿಯನ್ನು ಪತ್ತೆ…
ಮಡಿಕೇರಿ ಮೇ 1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀ ಆದಿ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮವು ಮೇ 2 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಮೇ 1 NEWS DESK : ಇಂದಿರಾನಗರದ ಕುಂದುರುಮೊಟ್ಟೆ ಶ್ರೀ ಮಾರಿಯಮ್ಮ ದೇವಾಲಯದ 135ನೇ ವಾರ್ಷಿಕೋತ್ಸವವು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ವಾರ್ಷಿಕೋತ್ಸವದ ಅಂಗವಾಗಿ ನಗರದ ಮುಖ್ಯ ಬೀದಿಗಳಲ್ಲಿ ದೇವಿಯ ಮೆರವಣಿಗೆ ನಡೆಯಿತು. ನಂತರ ಮನೆ ಮನೆಯಿಂದ ಪೂಜೆಯನ್ನು ದೇವಾಲಯಕ್ಕೆ ತಂದೊಪ್ಪಿಸಲಾಯಿತು. ರಾತ್ರಿ ಹೂವಿನ ವರ ಬೇಡುವುದು, ಮಹಿಳೆಯರು ಮನೆ, ಮನೆಯಿಂದ ಆರತಿಯನ್ನು ದೇವಾಲಯಕ್ಕೆ ತಂದೊಪ್ಪಿಸಿದರು. ದೇವಿಗೆ ಮಹಾ ಮಂಗಳಾರತಿ ಮತ್ತು ಮಹಾಪೂಜೆಯ ನಂತರ ಪ್ರಸಾದ ವಿತರಣೆ ನೆರವೇರಿತು. ಬಳಿಕ ಶ್ರೀ ದೇವಿಗೆ ಹರಕೆ ಮತ್ತು ಕಾಣಿಕೆ ಒಪ್ಪಿಸಲಾಯಿತು. ಇದೇ ಸಂದರ್ಭ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಮಡಿಕೇರಿ ಮೇ 1 NEWS DESK : ಕೊಡಗು ಜಿಲ್ಲಾ ಎಐಟಿಯುಸಿ ಕಾರ್ಮಿಕ ಸಂಘಟನೆ ವತಿಯಿಂದ ಬಿಳಿಗೇರಿ ಗ್ರಾಮದಲ್ಲಿ ವಿಶ್ವ ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಟಾಟಾ ಸಂಸ್ಥೆಯ ಜಂಬೂರು ತೋಟದ ಕಾರ್ಮಿಕರ ಸಮ್ಮುಖದಲ್ಲಿ ಎಐಟಿಯುಸಿ ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಕಾರ್ಮಿಕ ವರ್ಗದಿಂದ ದೇಶದ ಪ್ರಗತಿ ಸಾಧ್ಯವಾಗಿದೆ. ಶ್ರಮಿಕ ವರ್ಗದ ಬೇಡಿಕೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈಡೇರಿಸಬೇಕು ಎಂದರು. ನೆರೆದಿದ್ದ ಕಾರ್ಮಿಕರು ಶ್ರಮಿಕ ವರ್ಗ ಕಾರ್ಮಿಕರ ಪರ ಘೋಷಣೆಗಳನ್ನು ಕೂಗಿದರು. ಎಐಟಿಯುಸಿಯ ಕಾರ್ಮಿಕ ನಾಯಕರಾದ ಸಂಜೀವ, ಸೂರಜ್, ಪ್ರಕಾಶ್, ರಾಚಯ್ಯ, ಶಾರದ, ಗಿರಿಜಾ ಮತ್ತಿತರರು ಹಾಜರಿದ್ದರು.
ಮಡಿಕೇರಿ ಮೇ 1 NEWS DESK : ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಯ ಯೋಜನೆ ಇದೇ ಏಪ್ರಿಲ್ ನಲ್ಲಿ ಆರಂಭವಾಗಿದ್ದು, ಕಾಮಗಾರಿ ಭರದಿಂದ ಸಾಗಿದೆ. ಒಟ್ಟು 92 ಕಿಮೀ ಹೆದ್ದಾರಿ ನಿರ್ಮಾಣ ಕಾಮಗಾರಿಯಲ್ಲಿ 4 ಪ್ಯಾಕೇಜ್ ಗಳಿದ್ದು, ಪ್ಯಾಕೇಜ್ -5 ಅಂದರೆ ಬಿ ಅಗ್ರಹಾರ( ಶ್ರೀರಂಗಪಟ್ಟಣ) ದಿಂದ ಯಲಚನಹಳ್ಳಿ (ಮೈಸೂರು ತಾಲೂಕು) 19 ಕಿಮೀ ಮತ್ತು ಪ್ಯಾಕೇಜ್-3 (ಹುಣಸೂರು ತಾಲೂಕಿನ ಬೆಳತ್ತೂರುನಿಂದ ಪಿರಿಯಾಪಟ್ಟಣ ತಾಲೂಕಿನ ಹರವೆಮಲ್ಲಿರಾಜಪಟ್ಟಣ ವರೆಗಿನ 24.10 ಕಿಮೀ) ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಪ್ಯಾಕೇಜ್-4 ಸದ್ಯದಲ್ಲೇ ಆರಂಭವಾಗಲಿದ್ದು, ಪ್ಯಾಕೇಜ್-2 ಅರಣ್ಯ ಇಲಾಖೆಯ ಕೃಪೆಗಾಗಿ ಕಾದಿದೆ. ಕುಶಾಲನಗರದಿಂದ ಮಡಿಕೇರಿ ಕಡೆಗೆ ಆರಂಭವಾಗಬೇಕಿರುವ 22 ಕಿಮೀ ಉದ್ಧದ ಪ್ಯಾಕೇಜ್-1 ಅನ್ನು ಪರಿಸರವಾದಿಗಳ ತಕರಾರು ಮತ್ತು ಹೈಕೋರ್ಟ್ ಕೇಸಿನಿಂದಾಗಿ ಕೈಬಿಟ್ಟು ಕುಶಾಲನಗರದವರೆಗೂ ಮಾತ್ರ ಯೋಜನೆ ಕೈಗೆತ್ತಿಕೊಂಡಿದ್ದೆವು. ನೀವೆಲ್ಲ ಯೆಸ್ ಎಂದರೆ ಪ್ಯಾಕೇಜ್-1 ಗೆ ಅನುಮೋದನೆ ಪಡೆಯುವ ಪ್ರಯತ್ನ ಆರಂಭಿಸುತ್ತೇನೆ. ಕೆಲವು ಕೆಲಸ ಮಾಡಲು ಅಧಿಕಾರವೇ ಬೇಕೆಂದಿಲ್ಲ, ನಿಮ್ಮ ಆಶೀರ್ವಾದವೂ ಸಾಕಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್…
ಮಡಿಕೇರಿ ಮೇ 1 NEWS DESK : ಕೊಡಗು ಜಿಲ್ಲಾ ಬುಡಕಟ್ಟು ಕಾರ್ಮಿಕರ ಸಂಘ ಹಾಗೂ ಗೋಣಿಕೊಪ್ಪ ಕಾಫಿ ತೋಟಗಳ ಕಾರ್ಮಿಕರ ಯೂನಿಯನ್ ಸಹಯೋಗದಲ್ಲಿ ಗೋಣಿಕೊಪ್ಪಲಿನಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು. ಗೋಣಿಕೊಪ್ಪಲುವಿನ ಹೋಟೆಲ್ ಪ್ರಕಾಶ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಾರ್ಮಿಕರೇ ದೇಶದ ಶಕ್ತಿ. ಒಂದು ದೇಶವು ಯಶಸ್ಸು ಸಾಧಿಸಬೇಕೆಂದರೆ ಅದರಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ನಮ್ಮ ಸರಕಾರ ಕಾರ್ಮಿಕರ ಏಳಿಗೆಗೆ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದರ ಸದುಪಯೋಗವನ್ನು ಎಲ್ಲಾ ಕಾರ್ಮಿಕರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಮಿಕರ ಯಾವುದೇ ಸಮಸ್ಯೆ ಇದ್ದರೂ ತನ್ನ ಬಳಿಗೆ ಬಂದು ತಿಳಿಸಬೇಕೆಂದು ಹೇಳಿದರು.
ಮಡಿಕೇರಿ ಮೇ 1 NEWS DESK : ಕೊಡಗಿನಾದ್ಯಂತ ಕ್ರೀಡಾ ಪರ್ವವಾಗಿದ್ದು, ಕ್ರೀಡಾಕೂಟ ಒಗ್ಗಟ್ಟು ಮತ್ತು ಏಳಿಗೆಗೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ವಿರಾಜಪೇಟೆ ತಾಲ್ಲೂಕು ಅರಮೇರಿಯಲ್ಲಿ, ಬಾಳೆಕುಟ್ಟಿರ ಕುಟುಂಬಸ್ಥರು ಆಯೋಜಿಸಿರುವ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಕೊಡಗು ಜಿಲ್ಲೆ ಹಲವಾರು ವಿಶೇಷತೆಗಳಿಗೆ ಹೆಸರುವಾಸಿಯಾಗಿದ್ದು, ಅದರಲ್ಲಿ ಕ್ರೀಡೆಯೂ ಪ್ರಮುಖವಾಗಿದೆ. ಕ್ರೀಡೆ ಕೇವಲ ದೈಹಿಕವಾಗಿ ಮಾತ್ರ ಅಲ್ಲ ಮಾನಸಿಕವಾಗಿಯೂ ಸದೃಢವಾಗಲು ಸಹಕಾರಿಯಾಗಿದ್ದು, ಎಲ್ಲರೂ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ನಾಡಿನ ಒಗ್ಗಟ್ಟಿಗಾಗಿ ಶ್ರಮಿಸಬೇಕೆಂದು ಕರೆ ನೀಡಿದರು. ಬಳಿಕ ಆಯೋಜಕರು ನೀಡಿದ ಸನ್ಮಾನವನ್ನು ಸ್ವೀಕರಿಸಿ ಎಲ್ಲರಿಗೂ ಶುಭ ಕೋರಿದರು. ಈ ಸಂದರ್ಭ ಕಾರ್ಯಕ್ರಮ ಆಯೋಜಕರು ಹಾಗೂ ಪ್ರಮುಖರು ಇದ್ದರು.






