ಲೇಖಕ: admin

ಮಡಿಕೇರಿ, NEWS DESK ಅ.1: ಕೊಡಗು ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಸ್ಥಾನ ಕೈತಪ್ಪಿರುವ ಕುರಿತು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಕಲೀಲ್ ಬಾಷಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಾವು ಕೂಡ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ, ತಮ್ಮ ನಿರೀಕ್ಷೆ ಹುಸಿಯಾಗಿದೆ ಎಂದು ತಿಳಿಸಿದ್ದಾರೆ. ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದರೂ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿರುವ ಈ ಸಂದರ್ಭದಲ್ಲಿಯೂ ಸೂಕ್ತ ಸ್ಥಾನಮಾನ ದೊರೆಯದಿರುವುದು ಬೇಸರ ತಂದಿದೆ ಎಂದು ಹೇಳಿದ್ದಾರೆ. ಪಕ್ಷದ ಸಂಘಟನೆ ಹಾಗೂ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು, ಪಕ್ಷದ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಸಾಕಷ್ಟು ಶ್ರಮವಹಿಸಿ ಕಾರ್ಯನಿರ್ವಹಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ಸಂಘಟನೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಾರ್ಯಕರ್ತರು ಹಾಗೂ ಮುಖಂಡರು ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಅವರಿಗೆ…

Read More

ಮಡಿಕೇರಿ, NEWS DESK ಅ.1: ಕೊಡವಲ್ಯಾಂಡ್‌ನ್ನು ಕೊಡವರ ಪಾರಂಪರಿಕ, ಅಖಂಡ ಹಾಗೂ ಪವಿತ್ರ ಮಾತೃಭೂಮಿಯಾಗಿ ಪರಿಗಣಿಸಿ, ಭಾರತದ ಸಂವಿಧಾನದ ಅಡಿಯಲ್ಲಿ ಸಾಂವಿಧಾನಿಕ ರಕ್ಷಣೆ ಹಾಗೂ ಸ್ವಾಯತ್ತ ಆಡಳಿತದ ವ್ಯವಸ್ಥೆ ಕಲ್ಪಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಅಧ್ಯಕ್ಷ ಎನ್.ಯು. ನಾಚಪ್ಪ ಆಗ್ರಹಿಸಿದರು. ಸಿದ್ಧಾಪುರದಲ್ಲಿ ನಡೆದ ಸಿಎನ್‌ಸಿಯ 4ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಡವಲ್ಯಾಂಡ್‌ನ ಪ್ರಾಚೀನ ಭೂಮಿ, ಅರಣ್ಯ, ನದಿಗಳು ಹಾಗೂ ಜಮ್ಮ-ಬಾಣೆ ಹಿಡುವಳಿಗಳು ಕೊಡವರ ಪೂರ್ವಜರು ಮತ್ತು ವಂಶಪಾರಂಪರ್ಯಕ್ಕೆ ಸಂಬಂಧಿಸಿದವು ಎಂದು ಪ್ರತಿಪಾದಿಸಿದರು. ಕೊಡವ ಜನಾಂಗೀಯತೆ ಮತ್ತು ಕೊಡವಲ್ಯಾಂಡ್‌ನ ಸ್ವಾಯತ್ತತೆಯ ಸಂರಕ್ಷಣೆ ತಮ್ಮ ಕಾನೂನುಬದ್ಧ ಜನ್ಮಸಿದ್ಧ ಹಕ್ಕು ಎಂಬುದು ಸಿಎನ್‌ಸಿಯ ನಿಲುವಾಗಿದೆ ಎಂದು ಹೇಳಿದರು. ಸಂವಿಧಾನದಡಿ ರಕ್ಷಣೆಗೆ ಪ್ರತಿಪಾದನೆ ಸಂವಿಧಾನದ 29 ಮತ್ತು 30ನೇ ವಿಧಿಗಳಡಿ ವಿಶಿಷ್ಟ ಸಂಸ್ಕೃತಿ, ಭಾಷೆ ಹಾಗೂ ಪರಂಪರೆಯ ಸಂರಕ್ಷಣೆಯ ಹಕ್ಕು, 14ನೇ ವಿಧಿಯಡಿ ಸಮಂಜಸವಾದ ವರ್ಗೀಕರಣ, 5ನೇ ಮತ್ತು 6ನೇ ಅನುಸೂಚಿಗಳ ಆಶಯದಡಿ ಸಾಂಪ್ರದಾಯಿಕ ಭೂ ವ್ಯವಸ್ಥೆಗಳಿಗೆ ರಕ್ಷಣೆ ಹಾಗೂ…

Read More

ಸುಂಟಿಕೊಪ್ಪ, NEWS DESK ಅ.1: ಮಕ್ಕಳು ಕೇವಲ ವಿದ್ಯಾಭ್ಯಾಸ ಮಾಡುವುದಷ್ಟೇ ಅಲ್ಲದೆ, ಗುರು–ಹಿರಿಯರನ್ನು ಗೌರವಿಸುವ ಮೂಲಕ ಉತ್ತಮ ನಡವಳಿಕೆ ಹಾಗೂ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಶಿಕ್ಷಣ ಇಲಾಖೆಯ ನಿವೃತ್ತ ವಿಷಯ ಪರಿವೀಕ್ಷಕ ಎ.ಎಂ. ರವಿ ಚಂಗಪ್ಪ ಕರೆ ನೀಡಿದರು. ಗುರುವಾರ 7ನೇ ಹೊಸಕೋಟೆಯ ದೀಪ್ತಿ ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶಾಲಾ ವಿದ್ಯಾರ್ಥಿಗಳ ಅಜ್ಜ–ಅಜ್ಜಿಯರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಉತ್ತಮ ನಡವಳಿಕೆಯನ್ನು ರೂಢಿಸಿಕೊಂಡು ಉತ್ತಮ ವ್ಯಕ್ತಿತ್ವದವರಾಗಿ, ಸಮಾಜದ ಜವಾಬ್ದಾರಿಯುತ ನಾಗರಿಕರಾಗಿ ಬಾಳಬೇಕು. ಅಕ್ಟೋಬರ್ 1ರಂದು ವಿಶ್ವ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಸಂಸ್ಥೆಯಲ್ಲಿ ಹಿರಿಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿರುವುದು ಶ್ಲಾಘನೀಯ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ 7ನೇ ಹೊಸಕೋಟೆ ಸಂತ ಸೆಬಾಸ್ಟಿಯನ್ ದೇವಾಲಯದ ಧರ್ಮಗುರು ರೇ. ಫಾ. ಅಬ್ರಹಾಂ ಪಟೇಲ್ ಮಾತನಾಡಿ, ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸಂಸ್ಥೆಯಲ್ಲಿ ಅಜ್ಜ–ಅಜ್ಜಿಯರ ದಿನವನ್ನು ಆಯೋಜಿಸಲಾಗಿದೆ. ಮಕ್ಕಳು ತಮ್ಮ ಪೋಷಕರೊಂದಿಗೆ ಅಜ್ಜ–ಅಜ್ಜಿಯರನ್ನು ಶಾಲೆಗೆ ಕರೆತರುವ ಮೂಲಕ…

Read More

ಮಡಿಕೇರಿ, NEWS DESK ಅ.1: ಎಸ್‌ಐಆರ್ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ ತಳೂರು ಎ. ಕಿಶೋರ್ ಕುಮಾರ್, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರ ನೇರವಾಗಿ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಸಂವಿಧಾನದಡಿ ಚುನಾವಣಾ ಆಯೋಗ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಸಂಸ್ಥೆಯಾಗಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ಚುನಾವಣಾ ಪ್ರಕ್ರಿಯೆಯ ಭಾಗವಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇದ್ದರೂ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ಖಂಡನೀಯ ಎಂದು ಹೇಳಿದರು. ಎಸ್‌ಐಆರ್ ಕುರಿತು ಕಳೆದ ಹಲವು ತಿಂಗಳುಗಳಿಂದ ಮತದಾರರಿಗೆ ಮಾಹಿತಿ ಹಾಗೂ ಜಾಗೃತಿ ಮೂಡಿಸಲಾಗುತ್ತಿದೆ. ಅರ್ಹ ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ರಾಜಕೀಯ ಪಕ್ಷಗಳಿಗೂ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಲಾಗಿದೆ. ಚುನಾವಣಾ ಆಯೋಗವು ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಿ, ವಿವಿಧ ಹಂತಗಳಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ…

Read More

ಮಡಿಕೇರಿ, NEWS DESK ಅ.1: ನಗರದ ಹಿಂದೂ ಮಲಯಾಳಿ ಸಂಘದ ವತಿಯಿಂದ ಓಣಂ ಹಬ್ಬದ ಅಂಗವಾಗಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ ಅ.4ರಂದು ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಎಸ್. ರಮೇಶ್, ಅ.4ರಂದು ಬೆಳಿಗ್ಗೆ 7ರಿಂದ 9 ಗಂಟೆಯವರೆಗೆ ಪೂಕಳಂ ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ನಗರದ ಮಹದೇವಪೇಟೆಯ ಚೌಡೇಶ್ವರಿ ದೇವಾಲಯದಲ್ಲಿ ಓಣಾಘೋಷಂ ಮೆರವಣಿಗೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಮೆರವಣಿಗೆಯಲ್ಲಿ ಮಲಯಾಳಿ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಬಲಿಯ ಸ್ತಬ್ಧಚಿತ್ರ ಸೇರಿದಂತೆ ವಿವಿಧ ಕಲಾ ಪ್ರದರ್ಶನಗಳು ಇರಲಿವೆ. ಸಾಂಪ್ರದಾಯಿಕ ಉಡುಗೆಯಲ್ಲಿ ಸಮುದಾಯದ ಬಾಂಧವರು ಪಾಲ್ಗೊಳ್ಳಲಿರುವ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಾಗಲಿದ್ದು, ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಸಮಾಪನಗೊಳ್ಳಲಿದೆ. ಮೆರವಣಿಗೆಯ ಬಳಿಕ ಬೆಳಿಗ್ಗೆ 11 ಗಂಟೆಗೆ ತಿರುವಾದಿರ ನೃತ್ಯ ನಡೆಯಲಿದೆ. ನಂತರದ ಸಭಾ ಕಾರ್ಯಕ್ರಮವನ್ನು ಶ್ರೀ ತೋಂಟದಾರ್ಯ ಮಠ, ಬಸವಪಟ್ಟಣ, ಮುಳ್ಳೂರಿನ ಶ್ರೀ ಸ್ವತಂತ್ರ ಬಸವಲಿಂಗ ಶಿವಯೋಗಿ ಮಹಾಸ್ವಾಮಿಗಳು…

Read More

ಮಡಿಕೇರಿ, NEWS DESK ಅ.1: ಮಡಿಕೇರಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ, ವಿಸ್ತರಣಾ ಶಿಕ್ಷಣ ಘಟಕ, ಮಡಿಕೇರಿ ಹಾಗೂ ಅರಣ್ಯ ಮಹಾವಿದ್ಯಾಲಯ, ಪೊನ್ನಂಪೇಟೆ ಇವರ ಸಹಯೋಗದಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ ಅ.6ರಂದು ಬೆಳಿಗ್ಗೆ 10.30ಕ್ಕೆ ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಡ್ಯದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮಡಿಕೇರಿ ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥ ಡಾ. ಆರ್.ಎನ್. ಕೆಂಚರೆಡ್ಡಿ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯದ ಕುಲಪತಿ ಡಾ. ಕೆ.ಸಿ. ನಾರಾಯಣಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಸ್ತರಣಾ ನಿರ್ದೇಶಕ ಡಾ. ರಾಮಚಂದ್ರ ಸಿ. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಅರಣ್ಯ ವಿಭಾಗದ ಡೀನ್ ಹಾಗೂ ಸಂಶೋಧನಾ ನಿರ್ದೇಶಕ ಡಾ. ಜಿ.ಎಂ. ದೇವಗಿರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಭಾರತೀಯ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ, ಭಾರತ ಸರ್ಕಾರದ ರಾಜ್ಯ ನಿರ್ದೇಶಕ ಡಾ. ಮೋಹನ ರಾವ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. ಮಾಹಿತಿ ವಿನಿಮಯ: ರಾಜ್ಯ ಮಟ್ಟದ ಸಮಾವೇಶದಲ್ಲಿ ವಿವಿಧ…

Read More

ಚೆಟ್ಟಳ್ಳಿ, NEWS DESK ಅ.1: ಜಾಗತಿಕ ಆರ್ಥಿಕತೆಯಲ್ಲಿ ಮಹತ್ವದ ಸ್ಥಾನ ಪಡೆದಿರುವ ಕಾಫಿ, ವಿಶ್ವದಾದ್ಯಂತ ಲಕ್ಷಾಂತರ ಕುಟುಂಬಗಳ ಜೀವನೋಪಾಯದ ಪ್ರಮುಖ ಆಧಾರವಾಗಿದೆ. ಕಾಫಿಯ ಮಹತ್ವ ಹಾಗೂ ಕಾಫಿ ಬೆಳೆಗಾರರ ಕೊಡುಗೆಯನ್ನು ಸಾರ್ವಜನಿಕರಿಗೆ ಪರಿಚಯಿಸುವ ಉದ್ದೇಶದಿಂದ ಕಾಫಿ ಮಂಡಳಿಯ ಕಾಫಿ ಸಂಶೋಧನಾ ಉಪಕೇಂದ್ರ, ಚೆಟ್ಟಳ್ಳಿ ವತಿಯಿಂದ ಅಂತರರಾಷ್ಟ್ರೀಯ ಕಾಫಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಂತರರಾಷ್ಟ್ರೀಯ ಕಾಫಿ ದಿನದ ಅಂಗವಾಗಿ ಕಂಡಕೆರೆಯ ಸರ್ಕಾರಿ ಶಾಲೆಯ ಮಕ್ಕಳು, ಚೆಟ್ಟಳ್ಳಿ ಪಟ್ಟಣದ ಸಾರ್ವಜನಿಕರು ಹಾಗೂ ಕಾಫಿ ಸಂಶೋಧನಾ ಉಪಕೇಂದ್ರದ ಆವರಣದಲ್ಲಿದ್ದವರಿಗೆ ಕಾಫಿ ವಿತರಿಸಲಾಯಿತು. ಈ ಮೂಲಕ ಕಾಫಿಯ ಮಹತ್ವ ಹಾಗೂ ಕಾಫಿ ಬೆಳೆಗಾರರ ಕೊಡುಗೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಫಿ ಮಂಡಳಿಯ ಜಂಟಿ ನಿರ್ದೇಶಕರು ಹಾಗೂ ಕಾಫಿ ಸಂಶೋಧನಾ ಉಪಕೇಂದ್ರದ ಮುಖ್ಯಸ್ಥರಾದ ಡಾ. ಬಾಬು, ಕಾಫಿ ಕೇವಲ ಒಂದು ಪಾನೀಯವಲ್ಲ; ವಿಶ್ವದಾದ್ಯಂತ ಕೋಟ್ಯಂತರ ಕುಟುಂಬಗಳ ಜೀವನೋಪಾಯಕ್ಕೆ ಆಧಾರವಾಗಿರುವ ಪ್ರಮುಖ ವಾಣಿಜ್ಯ ಬೆಳೆಯಾಗಿದೆ ಎಂದು ಹೇಳಿದರು. ವಿಶ್ವದಲ್ಲಿ ಪೆಟ್ರೋಲಿಯಂ ನಂತರ ಅತಿ ಹೆಚ್ಚು…

Read More

ಮಡಿಕೇರಿ, NEWS DESK ಅ.1: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಆಶ್ರಯದಲ್ಲಿ ಮಡಿಕೇರಿಯ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಗುರುವಾರ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ (ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆ) ನಡೆಯಿತು. ಸ್ಪರ್ಧೆಯಲ್ಲಿ ತಾಲೂಕು ಮಟ್ಟದ ಸ್ಪರ್ಧೆಯಿಂದ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದ ಬುಲ್ಬುಲ್ಸ್, ಕಬ್ಸ್, ಸ್ಕೌಟ್ಸ್, ಗೈಡ್ಸ್, ರೇಂಜರ್ಸ್ ಹಾಗೂ ರೋವರ್ಸ್ ವಿಭಾಗದ ವಿದ್ಯಾರ್ಥಿಗಳು ಸುಶ್ರಾವ್ಯವಾಗಿ ದೇಶಭಕ್ತಿ ಗೀತೆಗಳನ್ನು ಹಾಡಿ ಪ್ರೇಕ್ಷಕರ ಗಮನ ಸೆಳೆದರು. ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ವೈದ್ಯಕೀಯ ಮತ್ತು ಸಂಶೋಧನಾ ಕಾಲೇಜಿನ ತುರ್ತು ಸೇವಾ ವಿಭಾಗದ ಮುಖ್ಯಸ್ಥ ಹಾಗೂ ಪ್ರಾಧ್ಯಾಪಕ ಕೊಲ್ಯಯಂಡ ಡಾ. ಮೋಹನ್ ಅಪ್ಪಾಜಿ, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಶಿಸ್ತು ಹಾಗೂ ಸಾಂಸ್ಕೃತಿಕ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಇವು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಸಹಕಾರಿಯಾಗಿವೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮೂಲಕ ವಿದ್ಯಾರ್ಥಿಗಳು ಉತ್ತಮ ತರಬೇತಿ ಪಡೆದು ಶಿಸ್ತು, ಸಂಯಮ ಹಾಗೂ ರಾಷ್ಟ್ರೀಯ…

Read More

ವಿರಾಜಪೇಟೆ ಸೆ.30 NEWS DESK : ಕೆದಮುಳ್ಳುರು, ತೋರ ಹಾಗೂ ಪಾಲಂಗಾಲ ಕಡೆಗೆ ಸಾಗುವ ಪ್ರಮುಖ ರಸ್ತೆಯು ಒತ್ತುವರಿ, ರಸ್ತೆಯಂಚಿನ ಕಳೆಗಿಡಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಧೋರಣೆಯನ್ನು ಖಂಡಿಸಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಎಂ.ಎಂ. ಪರಮೇಶ್ವರ, ಹಿಂದೆ ವರ್ಷಕ್ಕೆ ಎರಡು ಬಾರಿ ರಸ್ತೆಯಂಚಿನ ಕಾಡು ಕಡಿದು, ಚರಂಡಿಗಳನ್ನು ಸ್ವಚ್ಛಗೊಳಿಸಿ ರಸ್ತೆಯನ್ನು ಸುಸ್ಥಿತಿಯಲ್ಲಿಡಲಾಗುತ್ತಿತ್ತು. ಆದರೆ ಕಳೆದ ಎರಡು-ಮೂರು ವರ್ಷಗಳಿಂದ ವರ್ಷಕ್ಕೊಮ್ಮೆಯೂ ರಸ್ತೆ ಬದಿ ಕಾಡು ಕಡಿತ ಹಾಗೂ ಸ್ವಚ್ಛತಾ ಕಾರ್ಯ ನಡೆಯುತ್ತಿಲ್ಲ. ಪರಿಣಾಮವಾಗಿ ರಸ್ತೆಯಂಚಿನ ಮಣ್ಣು ಹಾಗೂ ಪೊದೆಗಳು ರಸ್ತೆಯನ್ನೇ ಆಕ್ರಮಿಸಿಕೊಂಡಿವೆ ಎಂದು ದೂರಿದರು. ಕಿರಿದಾಗಿರುವ ಈ ರಸ್ತೆಯಲ್ಲಿ ದೊಡ್ಡ ವಾಹನಗಳು ಎದುರಿಗೆ ಬಂದಾಗ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಬದಿಗೆ ಸರಿಯಲು ಸಹ ಜಾಗವಿಲ್ಲದಂತಾಗಿದೆ. ಇದರಿಂದ ಅಪಘಾತದ ಅಪಾಯ ಹೆಚ್ಚಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜೀವಗಳು…

Read More

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು, ತುರ್ತು ನಿರ್ವಹಣೆ ಕಾರ್ಯ ಕೈಗೊಳ್ಳಬೇಕೆಂದು ರೈತ ಬಾಂಧವರಲ್ಲಿ ಮನವಿ. ವಿಶೇಷವಾಗಿ ತಡವಾಗಿ ನಾಟಿ ಮಾಡಿದ ಹಾಗೂ ಅತಿ ಹೆಚ್ಚು ಯೂರಿಯಾ ರಸಗೊಬ್ಬರ ನೀಡಲಾದ ಭತ್ತದ ಗದ್ದೆಗಳಲ್ಲಿ ಬೆಂಕಿ ರೋಗದ ಬಾಧೆ ಹೆಚ್ಚಿಗೆ ಕಂಡು ಬಂದಿರುತ್ತದೆ. ಎಲೆಯ ಮೇಲ್ಭಾಗದಲ್ಲಿ ಕಂದು-ಬೂದು ಬಣ್ಣದ ಚುಕ್ಕೆಗಳು ಪ್ರಥಮ ಹಂತದಲ್ಲಿ ಕಂಡುಬರುತ್ತವೆ. ನಂತರ ರೋಗದ ತೀವ್ರತೆ ಹೆಚ್ಚಾದಾಗ ಚುಕ್ಕೆಗಳು ಒಂದಕ್ಕೊಂದು ಸೇರಿಕೊಂಡು ಎಲೆಯ ಪೂರ್ತಿ ಭಾಗಕ್ಕೆ ಹರಡಿಕೊಳ್ಳುತ್ತವೆ. ಈ ಬೆಂಕಿ ರೋಗವನ್ನು ಪ್ರಥಮ ಹಂತದಲ್ಲಿಯೇ ನಿಯಂತ್ರಿಸದಿದ್ದಲ್ಲಿ ನಂತರ ತೆನೆ ಕುತ್ತಿಗೆ ರೋಗ ಬಂದು ಬೆಳೆ ತೆನೆಗಳು ಜೊಳ್ಳು ಆಗುವ ಸಂಭವ ಹೆಚ್ಚಿರುತ್ತದೆ. ಈ ಹಿನ್ನೆಲೆ ರೈತರು ತುರ್ತಾಗಿ ತಮ್ಮ ಭತ್ತದ ಜಮೀನಿಗೆ ಭೇಟಿ ನೀಡಿ ಬೆಂಕಿ ರೋಗ ಲಕ್ಷಣಗಳು ಕಂಡುಬಂದಲ್ಲಿ ತುರ್ತಾಗಿ 0.6 ಗ್ರಾಂ ಟ್ರೈಸೈಕ್ಲೋಜೋಲ್ ಶಿಲೀಂಧ್ರ ನಾಶಕವನ್ನು ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.…

Read More