ಲೇಖಕ: admin

ಮಡಿಕೇರಿ NEWS DESK ಏ.25 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿರುವ ದಾಳಿ ಅಮಾನವೀಯವಾಗಿದ್ದು, ಭಯೋತ್ಪಾದಕರನ್ನು ಸದೆಬಡಿಯಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಾತ್ಯತೀತ ಜನತಾದಳದ ಮಡಿಕೇರಿ ತಾಲ್ಲೂಕು ಅಧ್ಯಕ್ಷ ರವಿಕಿರಣ್ ಶೆಟ್ಟಿ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪಾಕಿಸ್ತಾನ ಬೆಂಬಲಿತ ಉಗ್ರರ ದಾಳಿ ಖಂಡನೀಯ, ಅಮಾಯಕ ಪ್ರವಾಸಿಗರ ಸಾವಿಗೆ ಜೆಡಿಎಸ್ ಸಂತಾಪ ಸೂಚಿಸುತ್ತದೆ ಎಂದು ತಿಳಿಸಿದ್ದಾರೆ. ಭಾರತವನ್ನು ಭಯೋತ್ಪಾದಕ ಮುಕ್ತ ದೇಶವನ್ನಾಗಿ ಮಾಡಲು ಅಗತ್ಯವಿರುವ ಕಠಿಣ ಕಾನೂನು ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು. ಅಮಾಯಕ ನಾಗರೀಕರ ಹಾಗೂ ಯೋಧರ ಹತ್ಯೆಯಾಗುವುದನ್ನು ತಪ್ಪಿಸಬೇಕು. ಇನ್ನು ಮುಂದೆ ಭದ್ರತಾ ವ್ಯವಸ್ಥೆ ವೈಫಲ್ಯವಾಗದಂತೆ ಮತ್ತು ಗುಪ್ತಚರ ಇಲಾಖೆ ಸಕ್ರಿಯವಾಗುವಂತೆ ಕ್ರಮ ಕೈಗೊಳ್ಳಬೇಕು. ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಮಾಡುವುದು ಅಧರ್ಮದ ಕಾರ್ಯವಾಗಿದ್ದು, ದೇಶದ್ರೋಹಿಗಳಿಗೆ ಯಾರೂ ಬೆಂಬಲ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ದೇಶದ ಭದ್ರತೆಗಾಗಿ ಎಲ್ಲರೂ ಒಗ್ಗಟ್ಟನ್ನು ಪ್ರದರ್ಶಿಸಬೇಕು ಮತ್ತು ಉಗ್ರರ ನಿಗ್ರಹಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳಿಗೆ ಬೆಂಬಲ ಸೂಚಿಸಬೇಕು ಎಂದು ರವಿಕಿರಣ್ ಶೆಟ್ಟಿ ತಿಳಿಸಿದ್ದಾರೆ.

Read More

ಕುಶಾಲನಗರ ಏ.25 NEWS DESK : ವಿಶ್ವ ಸಾಕು ಪ್ರಾಣಿಗಳ ಅಂಗವಾಗಿ ಕುಶಾಲನಗರ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಮೇ 4 ರಂದು ಸಾಕು ನಾಯಿ ಮತ್ತು ಬೆಕ್ಕು ಗಳ ಪ್ರದರ್ಶನ ಸ್ಪರ್ಧೆ ಆಯೋಜಿಸಲಾಗಿದೆ.  ಕುಶಾಲನಗರ ಗಾಯತ್ರಿ ಕಲ್ಯಾಣ ಮಂಟಪದ ಆವರಣದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ  ಣಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು. ಕೊಡಗು ಜಿಲ್ಲೆಯ ಎಲ್ಲರೂ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಭಾಗವಹಿಸುವ ಎಲ್ಲ ನಾಯಿ, ಬೆಕ್ಕಿಗೆ ಆಕರ್ಷಕ ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ  ಚಿತ್ರ ರಮೇಶ್ 9342202405 ಮತ್ತು ನೇಹಾ ಜಗದೀಶ್ 9845044645 ಸಂಪರ್ಕಿಸಬಹದಾಗಿದೆ. ಮೊದಲು ಬಂದ 50 ಸ್ಪರ್ಧಿಗಳಿಗೆ ಮಾತ್ರ ಅವಕಾಶವಿರುತ್ತದೆ. 3 ವಿವಿಧ ರೀತಿಯಲ್ಲಿ ಆಯ್ಕೆ ಮಾಡಿ ನಾಯಿ ಮತ್ತು ಬೆಕ್ಕು ವಿಭಾಗದಲ್ಲಿ ಬಹುಮಾನಗಳನ್ನು ವಿತರಿಸಲಾಗುತ್ತದೆ ಎಂದು ಕ್ಲಬ್ ನ ಅಧ್ಯಕ್ಷೆ ಚಿತ್ರ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಏ.25 NEWS DESK  : ಎಸ್‌ಎನ್‌ಆರ್ ಗ್ರಾಮೀಣ ಶಿಕ್ಷಣ ಟ್ರಸ್ಟ್ ಪುತ್ತೂರಿನ ಸವಣೂರು ವಿದ್ಯಾರಶ್ಮಿ ವಿದ್ಯಾಲಯ ಸಂಸ್ಥೆಯಲ್ಲಿ 2025-26ನೇ ಸಾಲಿನ ಪ್ರವೇಶಾತಿ ಪ್ರಾರಂಭಗೊಂಡಿದೆ. ಈ ಶಿಕ್ಷಣ ಸಂಸ್ಥೆಯು ಶಾಂತ, ಮಾಲಿನ್ಯ ಮುಕ್ತ, ಹಸಿರು ಮತ್ತು ವಿಶಾಲವಾದ ಕ್ಯಾಂಪಸ್‌ನಲ್ಲಿ ಎಲ್ಲಾ ರೀತಿಯ ಆಧುನಿಕ ಶೈಕ್ಷಣಿಕ ಸೌಲಭ್ಯಗಳನ್ನು ಹೊಂದಿದೆ ಎಂದು ವಿದ್ಯಾಸಂಸ್ಥೆಯ ಸಂಚಾಲಕರಾಗಿರುವ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕಲ್ಕರ್ ಹಾಗೂ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಪಠ್ಯಕ್ರಮದ ಇಂಗ್ಲಿಷ್ ಮಾಧ್ಯಮ ಶಿಕ್ಷಣವನ್ನು  ಕಿಂಡರ್‌ಗಾರ್ಟನ್ ಪ್ರಿ ಕೆಜಿ, ಎಲ್‌ಕೆಜಿ ಮತ್ತು ಯುಕೆಜಿ ಹೊಂದಿದ್ದು, ಶಾಲಾ ಶಿಕ್ಷಣ 1 ರಿಂದ 10 ನೇ ತರಗತಿಗಳು,  ಪಿಯುಸಿ ವಿಭಾಗದಲ್ಲಿವಿಜ್ಞಾನ (ಪಿಸಿಎಂಬಿ/ಪಿಸಿಎಂಸಿಎಸ್) ಮತ್ತು ವಾಣಿಜ್ಯ (ಇಬಿಎಎಸ್ / ಇಬಿಎಸಿ) ಕೋರ್ಸುಗಳು ಲಭ್ಯವಿದ್ದು,  -(ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಸಿ.ಎ., ಬಿ.ಕಾಂ. ಮತ್ತು ಬಿ.ಎ. ಕೋರ್ಸ್ ಗಳನ್ನು ಸಹ ನಾವು ಹೊಂದಿದ್ದೇವೆ) ಸಂಸ್ಥೆಯ ಯಶಸ್ಸಿಗೆ ಸಂಸ್ಥೆಯು  ಹೊಂದಿರುವ ಶಿಕ್ಷಣ ವ್ಯವಸ್ಥೆಯೇ ಪ್ರಮುಖ ಕಾರಣ.…

Read More

ಮಡಿಕೇರಿ ಏ.25 NEWS DESK :  ಸಮರ್ಥ ಕನ್ನಡಿಗರು ಕೊಡಗು ಜಿಲ್ಲಾ ಘಟಕ ಮತ್ತು ಮುಂಬೈ ನ ಚಂದ್ರಶೇಖರ್ ರಾವ್ ಮೆಮೋರಿಯಲ್ ಟ್ರಸ್ಟ್ ಮುಂಬೈ, ಇವುಗಳ ಜಂಟಿ ಆಶ್ರಯದಲ್ಲಿ ಮೇ 3 ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ನ ಸತ್ಕಾರ್ ಭವನದಲ್ಲಿ ರಾಜ್ಯ ಮಟ್ಟದ ಸಾಹಿತ್ಯ -ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್ ಟಿ ಈ ಸಮಾರಂಭದ ಆಶಯ ನುಡಿಗಳನ್ನಾಡುವರು. ಮುಂಬೈಯ ದಿ. ಚಂದ್ರಶೇಖರ್ ರಾವ್ ಮೆಮೋರಿಯಲ್ ಟ್ರಸ್ಟ್ ನ ಸಂಸ್ಥಾಪಕ ಶ್ರೀದೇವಿ ಚಂದ್ರಶೇಖರ್ ರಾವ್ ಅಧ್ಯಕ್ಷತೆ ವಹಿಸಲಿರುವ ಈ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ ಪಿ ರಮೇಶ್ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಂಬೈ ಯ ಸಾಹಿತಿ ಗೋಪಾಲ್ ತ್ರಾಸಿ ಅವರ ‘ ನುಡಿ ತೇರು ‘ ಹಾಗೂ ದಿ. ಚಂದ್ರಶೇಖರ್ ರಾವ್ ಅವರ ‘ ಹರಟೆ ‘ ಗಳು…

Read More

ಕುಶಾಲನಗರ ಏ.25 NEWS DESK : ತೊರೆನೂರು ಗ್ರಾ.ಪಂ ವ್ಯಾಪ್ತಿಯ ದೊಡ್ಡ ಅಳುವಾರ ಗ್ರಾಮದ ಗ್ರಾಮದೇವತೆ ದೊಡ್ಡಮ್ಮ ಹಾಗೂ ಚಿಕ್ಕಮ್ಮ ದೇವರ ವಾರ್ಷಿಕ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಮುಂಜಾನೆ ದೇವರಿಗೆ ವಿವಿಧ ಅಭಿಷೇಕ, ಹೋಮ ಹವನಗಳು ನಡೆದವು.  ದೇವಾಲಯದ ಗರ್ಭಗುಡಿಯಲ್ಲಿನ ದೇವತಾ ಮೂರ್ತಿಗಳನ್ನು ಬಗೆ ಬಗೆಯ ಪುಷ್ಪಗಳಿಂದ ಅಲಂಕರಿಸಿ ಮಹಾಪೂಜೆ ನೆರವೇರಿಸಿದರು. ನಂತರ ಭಕ್ತಾಧಿಗಳಿಗೆ ಮಧ್ಯಾಹ್ನದ ಅನ್ನ ಪ್ರಸಾದ ನೆರವೇರಿಸಲಾಯಿತು. ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಧರ್ಮ ಶ್ರದ್ಧಾ ಕೇಂದ್ರಗಳು ಮನುಷ್ಯನನ್ನು ನೈತಿಕವಾಗಿ ಗಟ್ಟಿಮಾಡಬೇಕು. ಮನಸ್ಸನ್ನು ಪ್ರಶಾಂತವಾಗಿ ಇಡಬೇಕು. ನಿರುಮ್ಮಳವಾದ ಮನಸ್ಥಿತಿ ಹೊಂದುವ ಮೂಲಕ ಆರೋಗ್ಯದಿಂದ ಇರಲು ಸಲಹೆ ನೀಡಿದರು. ದೇವಾಲಯ ಸಮಿತಿ ಅಧ್ಯಕ್ಷ ಎ.ಆರ್.ಮಹದೇವ್, ತೊರೆನೂರು ಗ್ರಾಪಂ ಅಧ್ಯಕ್ಷೆ ಶೋಭಾ ಪ್ರಕಾಶ್, ಅಳುವಾರದಮ್ಮ ದೇವಾಲಯ ಸಮಿತಿ ಅಧ್ಯಕ್ಷ ಎ.ಎನ್.ರಮೇಶ್, ಗ್ರಾಪಂ ಸದಸ್ಯ ಕೆ.ಬಿ.ದೇವರಾಜು, ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಸಂಜೀವಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಅಳುವಾರ ಕಿಶೋರ್,…

Read More

ವಿರಾಜಪೇಟೆ ಏ.25 NEWS DESK : ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ.ಎನ್.ಲಾವಣ್ಯ ಬೋರ್ಕರ್ ಗೆ  ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಸದ್ಭಾವನಾ ರಾಷ್ಟ್ರ ಮಟ್ಟದ ಪ್ರಶಸ್ತಿ ಲಭಿಸಿದೆ. ಬಿ.ಎನ್.ಲಾವಣ್ಯ ಭರತನಾಟ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ (ರಿ )ಸಂಸ್ಥೆಯ ವತಿಯಿಂದ ಮೈಸೂರಿನ ಸಾಹಸಸಿಂಹ ಸಭಾಂಗಣ ಡಾ.ವಿಷ್ಣು ವರ್ಧನ್ ಸ್ಮಾರಕ ಭವನದಲ್ಲಿ ನಡೆದ ವಿವಿಧ ಸಾಧಕರುಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ಉದ್ಯಮಿಗಳಾದ ಮೊಯಿದ್ದೀನ್, ಸಾಧಿಕ್, ಲೇಖಕ ಕೆಂಚನೂರ ಶಂಕರ, ನವೀನ್ ಹೆಗಡೆ ಮೊದಲಾದವರು ಉಪಸ್ಥಿತರಿದ್ದರು. ಲಾವಣ್ಯ ಬೋರ್ಕರ್ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ನ ಗುರುಗಳಾದ ವಿದೂಷಿ ಪ್ರೇಮಾಂಜಲಿ ಆಚಾರ್ಯ ಅವರ ಶಿಷ್ಯೆ ಹಾಗೂ ಬೇಟೋಳಿ ರಾಮನಗರದ ನಾಟಿ ವೈದ್ಯರು ಹಾಗೂ ಕಾಫಿ ಬೆಳೆಗಾರರಾದ ಬಿ.ಜಿ.ನಟರಾಜ್ ಬೋರ್ಕರ್ ಹಾಗೂ ಸುನಂದ ದಂಪತಿಗಳ ಪುತ್ರಿ. ಲಾವಣ್ಯ ಪ್ರಸ್ತುತ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಅಂತಿಮ ಬಿಬಿಎ ತರಗತಿಯಲ್ಲಿ…

Read More

ಮಡಿಕೇರಿ ಏ.25 NEWS DESK : ಅಖಿಲ ಭಾರತ ಸೈನಿಕ ಶಾಲೆಗಳ ಫುಟ್ಬಾಲ್ ಕ್ರೀಡಾಕೂಟದಲ್ಲಿ ಕೊಡಗು ಸೈನಿಕ ಶಾಲೆಯ ತಂಡ ಮೂರು ವಿಭಾಗಗಳಲ್ಲೂ ಪ್ರಥಮ ಸ್ಥಾನ ಪಡೆಯುವ ಮೂಲಕ ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ಕೊಡಗು ಸೈನಿಕ ಶಾಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆದ ಅಖಿಲ ಭಾರತ ಸೈನಿಕ ಶಾಲೆಗಳ ಪುಟ್ಬಾಲ್ ಕ್ರೀಡಾಕೂಟದಲ್ಲಿ ಕೇರಳದ ಕಝಕೊಟ್ಟಂ ಸೈನಿಕ ಶಾಲೆ, ತಮಿಳುನಾಡಿನ ಅಮರಾವತಿ ಸೈನಿಕ ಶಾಲೆ, ಆಂಧ್ರಪ್ರದೇಶದ ಕಲಿಕಿರಿ ಸೈನಿಕ ಶಾಲೆ ಹಾಗೂ ಅತಿಥೇಯ ಕೊಡಗು ಸೈನಿಕ ಶಾಲೆಗಳು ಭಾಗವಹಿಸಿದ್ದವು. ಬಾಲಕರ ಜೂನಿಯರ್, ಬಾಲಕರ ಸಬ್ ಜೂನಿಯರ್ ಹಾಗೂ ಬಾಲಕಿಯರ ಜೂನಿಯರ್ ಎಂಬ ಮೂರು ವಿಭಾಗಗಳಲ್ಲಿ ನಡೆದ ಪಂದ್ಯಾವಳಿಯಲ್ಲಿ ಅತಿಥೇಯ ಸೈನಿಕ ಶಾಲೆ ಕೊಡಗು ತಂಡ ಎಲ್ಲಾ ಮೂರು ವಿಭಾಗಗಳಲ್ಲಿಯೂ ಪ್ರಥಮ ಸ್ಥಾನವನ್ನುಗಳಿಸಿ ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ಬಾಲಕರ ಜೂನಿಯರ್ ವಿಭಾಗದಲ್ಲಿ ಸೈನಿಕ ಶಾಲೆ ಕಝಕೊಟಂ, ಬಾಲಕರ ಸಬ್ ಜೂನಿಯರ್ ವಿಭಾಗದಲ್ಲಿ ಸೈನಿಕ ಶಾಲೆ ಕಲಿಕಿರಿ ಹಾಗೂ ಬಾಲಕಿಯರ ಜೂನಿಯರ್ ವಿಭಾಗದಲ್ಲಿ ಕಲಿಕಿರಿ ತಂಡವು…

Read More

ಮಡಿಕೇರಿ NEWS DESK ಏ.25 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ನಡೆಸಿದ ದಾಳಿ ಅಮಾನವೀಯ ಕೃತ್ಯವಾಗಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಮಾಯಕ ಪ್ರವಾಸಿಗರ ಮೇಲೆ ನಡೆದಿರುವ ದಾಳಿ ದು:ಖದ ವಿಚಾರವಾಗಿದೆ. ಕೇಂದ್ರ ಸರ್ಕಾರ ವಿಳಂಬ ಮಾಡದೆ ದೇಶದ್ರೋಹಿಗಳನ್ನು ಮಟ್ಟ ಹಾಕಬೇಕು ಎಂದು ಒತ್ತಾಯಿಸಿದ್ದಾರೆ. ತಮ್ಮ ಅಧಿಕಾರದ ಅವಧಿಯಲ್ಲಿ ಭಯೋತ್ಪಾದಕರ ದಾಳಿ ನಿಯಂತ್ರಣದಲ್ಲಿದೆ ಎಂದು ಎನ್‌ಡಿಎ ನೇತೃತ್ವದ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ಪಹಲ್ಗಾಮ್ ನಂತಹ ಭೀಕರ ದಾಳಿ ಮರುಕಳಿಸುತ್ತಲೇ ಇದೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಜಮ್ಮು ಕಾಶ್ಮೀರದಲ್ಲಿ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ, ಅಲ್ಲದೆ ಗುಪ್ತಚರ ಇಲಾಖೆ ಕೂಡ ತನ್ನ ಕಾರ್ಯದಕ್ಷತೆಯಲ್ಲಿ ಎಡವಿದಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಕೇವಲ ಜನರನ್ನು ಮೆಚ್ಚಿಸಲು ಘೋಷಣೆ ಮತ್ತು ಭರವಸೆಗಳನ್ನು ನೀಡುವ ಬದಲು ಇನ್ನು ಮುಂದಾದರು ಎಚ್ಚೆತ್ತುಕೊಂಡು ದೇಶದ ಪ್ರಜೆಗಳ…

Read More

ಪುತ್ತೂರು ಏ.25 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಉಡುಪಿ ಬಂಟಕಲ್ಲಿನ ಎಸ್‍ಎಂವಿಐಟಿಎಂ ನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ತಂಡವು ಉತ್ತಮ ಸಾಧನೆಯೊಂದಿಗೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದೆ. ಮಂಗಳೂರು ವಿಭಾಗ ಮಟ್ಟದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು. ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಸುಜನ್.ಪಿ, ದ್ವಿತೀಯ ಕಂಪ್ಯೂಟರ್ ಸೈನ್ಸ್ ವೀಭಾಗದ ಅಖಿಲೇಶ್, ತೃತೀಯ ಮೆಕ್ಯಾನಿಕಲ್ ವಿಭಾಗದ ಪವಿತ್, ಅಂತಿಮ ಡಾಟಾ ಸೈನ್ಸ್ ವಿಭಾಗದ ಪ್ರಣಾಮ್, ತೃತೀಯ ಸಿವಿಲ್ ವಿಭಾಗದ ರಕ್ಷಿತ್‍ರಾಜ್, ದ್ವಿತೀಯ ಎಲೆಕ್ಟ್ರಾನಿಕ್ಸ್ ವಿಭಾಗದ ಜೀವನ್, ಅಂತಿಮ ವರ್ಷದ ಮೆಕ್ಯಾನಿಕಲ್ ವಿಭಾಗದ ಭವಿಶ್ಯತ್, ದ್ವಿತೀಯ ಡಾಟಾ ಸೈನ್ಸ್ ವಿಭಾಗದ ಭುವನ್ ಕುಮಾರ್.ಎ.ಸಿ, ತೃತೀಯ ಸಿವಿಲ್ ವಿಭಾಗದ ಸಂದೀಪ್, ದ್ವಿತೀಯ ಮೆಕ್ಯಾನಿಕಲ್ ವಿಭಾಗದ ಯಶಸ್ ಹಾಗೂ ಗೌರವ್.ಎಸ್.ಜಿ…

Read More

ಸುಂಟಿಕೊಪ್ಪ ಏ.25 NEWS DESK : ಕೊಡಗರಹಳ್ಳಿಯ ಕುಂದೂರುಮೊಟ್ಟೆ ಶ್ರೀ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ 47ನೇ ವಾರ್ಷಿಕ ಮಹೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಸಂಪನ್ನಗೊಂಡಿತು. ಮೂರು ದಿನಗಳ ಕಾಲ ನಡೆದ ವಾರ್ಷಿಕೋತ್ಸವಕ್ಕೆ ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಚಾಲನೆ ನೀಡಲಾಯಿತು. ದೀಪರಾಧನೆ, ಏಳು ಸುತ್ತಿನ ಪ್ರದಕ್ಷಣೆ ಹಾಗೂ ಶ್ರೀ ಚಾಮುಂಡಿ ತಂಡದಿಂದ ಚಂಡೆ ಮೇಳ ಜರುಗಿತ್ತು. ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ ಪೂಜೆ ನಡೆಯಿತು. ನಂತರ ಅಜ್ಜಪ್ಪ ಕೋಲ, ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಸೇರಿದಂತೆ ವಿವಿಧ ದೈವಗಳ ಕೋಲ ನಡೆಯಿತು. ರಾತ್ರಿ ಶ್ರೀದೇವಿ ನೇವೈದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿತು. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ತಳಿರು ತೋರಣ, ವಿದ್ಯುತ್ ದೀಪಾಂಲಕಾರಗಳಿಂದ ಸಿಂಗಾರಿಸಲಾಗಿತ್ತು. ಸುತ್ತ ಮುತ್ತಲ್ಲ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More