ಮಡಿಕೇರಿ ಮಾ.5 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಸದಸ್ಯತ್ವ ಹೆಚ್ಚಿಸಲು ಅಭಿಯಾನಕ್ಕೆ ತೀರ್ಮಾನಿಸಿದ್ದು, ಹಳೇ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆಯ ನೀಡಿರುವ ಅವರು, ಇತ್ತೀಚೆಗೆ ನಡೆದ ಸಭೆಯಲ್ಲಿ ಸಂಘದ ಸದಸ್ಯತ್ವವನ್ನು ಹೆಚ್ಚಿಸುವ ಸಲುವಾಗಿ ಅಭಿಯಾನವನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿತ್ತು. ಅಂತಯೇ ಅಭಿಯಾನವನ್ನು ಆರಂಭಿಸಲಾಗಿದ್ದು, ಹಳೆ ವಿದ್ಯಾರ್ಥಿ ಸಂಘದ ಬ್ಯಾಂಕ್ ಖಾತೆಯ ಕ್ಯೂ ಆರ್ ಕೋಡ್ ಅನ್ನು ಪಡೆದುಕೊಳ್ಳಲಾಗಿದೆ. ಕ್ಯೂ ಆರ್ ಕೋಡ್ ಅಥವಾ ಬ್ಯಾಂಕ್ ಖಾತೆಗೆ ನೇರ ಹಣವನ್ನು ಜಮಾ ಮಾಡಿ ಅದರ ರಶೀದಿ ಅಥವಾ ಸ್ಕ್ರೀನ್ ಶಾಟ್ ಅನ್ನು ಸಂಘದ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಅವರ ಮೊಬೈಲ್ ಸಂಖ್ಯೆ 8762632314 ಅಥವಾ ಕಾಲೇಜಿನ ಸಿಬ್ಬಂದಿ ಹೇಮಾ 7829776447 ಇವರ ವಾಟ್ಸ್ ಆ್ಯಪ್ ಸಂಖ್ಯೆಗೆ ಕಳುಹಿಸುವುದರ ಮುಖಾಂತರ ಸದಸ್ಯತ್ವ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ. 1949ರಲ್ಲಿ ಪ್ರಾರಂಭವಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ…
ಲೇಖಕ: admin
ಸಿದ್ದಾಪುರ ಮಾ.5 NEWS DESK : ಗುಹ್ಯ ಗ್ರಾಮದ ತೋಟವೊಂದರ ಲೈನ್ ಮನೆಯಲ್ಲಿದ್ದ ನಾಗರಹಾವನ್ನು ಉರಗ ರಕ್ಷಕ ಸುರೇಶ್ ಪೂಜಾರಿ ರಕ್ಷಿಸಿದ್ದಾರೆ. ತೋಟದ ರೈಟರ್ ದೇವಯ್ಯ ಹಾವು ಇರುವ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಉರಗ ರಕ್ಷಕ ಸುರೇಶ್ ಪೂಜಾರಿ ಐದು ಅಡಿ ಉದ್ದದ ನಾಗರಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಮಾಲ್ದಾರೆ ಅರಣ್ಯಕ್ಕೆ ಬಿಟ್ಟರು. ಯಾರು ಕೂಡ ಹಾವುಗಳನ್ನು ಕೊಲ್ಲಬೇಡಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ನೀರು ಅರಸಿ ಮನೆಯ ಹತ್ತಿರ ಹಾವುಗಳು ಬರುತ್ತವೆ ಹಾವು ಕಂಡುಬಂದಲ್ಲಿ ತಕ್ಷಣವೇ ಉರಗ ರಕ್ಷಕರಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.
ಮಡಿಕೇರಿ ಮಾ.5 NEWS DESK : ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿರುವ ಸುಂಟಿಕೊಪ್ಪ ಕಂಬಿಬಾಣೆಯ ಯುವಕನ ಶಸ್ತ್ರಚಿಕಿತ್ಸೆಗೆ ಸುಮಾರು 60 ಲಕ್ಷಕ್ಕೂ ಅಧಿಕ ಹಣ ಖರ್ಚಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೊಡಗು ಜಿಲ್ಲಾ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎಂ.ಎ.ಉಸ್ಮಾನ್ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಂಟಿಕೊಪ್ಪ ಕಂಬಿಬಾಣೆಯ ನಿವಾಸಿ ಯು.ಎಂ.ಆಸಿಂ ಹಾಗೂ ಕೆ.ಎಂ.ಆರಿಫ್ ದಂಪತಿಯ ದ್ವಿತೀಯ ಪುತ್ರ ಎಂ.ಎ.ಆಬಿದ್ (23) ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ಶ್ವಾಸಕೋಶದ ಬದಲಾವಣೆ (ಶ್ವಾಸಕೋಶದ ಕಸಿ) ಮಾಡಬೇಕೆಂದು ಚೆನ್ನೈನ ಎಂಜಿಎಂ ಆಸ್ಪತ್ರೆಯ ವೈದ್ಯಾಧಿಕಾರಿ ಸೂಚಿಸಿದ್ದಾರೆ. ಈ ಶಸ್ತ್ರ ಚಿಕಿತ್ಸೆಗೆ ಸುಮಾರು 60 ಲಕ್ಷಕ್ಕೂ ಅಧಿಕ ರೂ. ಖರ್ಚಾಗಲಿದ್ದು, ದೊಡ್ಡ ಮೊತ್ತದ ಹಣವನ್ನು ಭರಿಸಲು ಕುಟುಂಬಕ್ಕೆ ಸಾಧ್ಯವಾಗದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಉಸ್ಮಾನ್ ಕೋರಿದರು. ಕಳೆದ 13 ವರ್ಷಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಆಬಿದ್, ಮಂಗಳೂರಿನಲ್ಲಿ ಧಾರ್ಮಿಕ ಶಿಕ್ಷಣ ಪಡೆಯುತ್ತಿದ್ದ ಸಂದರ್ಭ ಅನಾರೋಗ್ಯದಿಂದ ಮನೆಗೆ ಹಿಂತಿರುಗಿ ಬಂದಿದ್ದು, ಜನವರಿಯಲ್ಲಿ ಶ್ವಾಸಕೋಶದ ಸಮಸ್ಯೆ ತೀವ್ರಗೊಂಡಿದೆ. ಚಿಕಿತ್ಸೆ ಪಡೆದು…
ಮಡಿಕೇರಿ ಮಾ.5 NEWS DESK : ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯವಿದ್ದು, ಈ ನಿಯಮವನ್ನು ಪಾಲಿಸಬೇಕು ಎಂದು ಗೋಣಿಕೊಪ್ಪ ಪೊಲೀಸರು ಸೂಚಿಸಿದ್ದಾರೆ. ಗೋಣಿಕೊಪ್ಪ ಠಾಣೆಯ ವತಿಯಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ವಾಹನ ಚಲಾಯಿಸುವಾಗ ಅನುಸರಿಸಬೇಕಾದ ಸುರಕ್ಷಿತ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು. ವಾಹನ ಚಾಲನೆಯ ಸಮಯದಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ತಿಳಿಸಿದ ಅಧಿಕಾರಿಗಳು ಮಕ್ಕಳಿಗೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಸಲಹೆ ನೀಡಿದರು.
ಮಡಿಕೇರಿ ಮಾ.5 NEWS DESK : ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಮತ್ತು ಪಕ್ಷದಲ್ಲಿ ಭದ್ರನೆಲೆ ಕಂಡುಕೊಳ್ಳಲು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದರ ವಿರುದ್ಧ ಜಿಲ್ಲಾ ಕಾಂಗ್ರೆಸ್ ವಕ್ತಾರರೊಬ್ಬರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು, ಇವರ ವಿರುದ್ಧ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೈಸೂರು- ಕೊಡಗು ಕ್ಷೇತ್ರದ ಜನತೆಯ ಆಶೀರ್ವಾದದಿಂದ ಸಂಸದರಾಗಿ ಆಯ್ಕೆಯಾಗಿರುವ ಯದುವೀರ್ ಒಡೆಯರ್ ಅವರ ಕಾರ್ಯವೈಖರಿಯ ಕುರಿತು ವಿಶ್ಲೇಶಿಸುವ ನೈತಿಕತೆ ಕಾಂಗ್ರೆಸ್ ವಕ್ತಾರರಿಗೆ ಇಲ್ಲ. ಕಾಂಗ್ರೆಸ್ ನಾಯಕರನ್ನು ಮೆಚ್ಚಿಸುವುದಕ್ಕೋಸ್ಕರ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಜನರಿಗೆ ತಪ್ಪು ಸಂದೇಶ ರವಾನಿಸಲಾಗುತ್ತಿದೆ. ಅಲ್ಲದೆ ಅತ್ಯಂತ ಗೌರವಯುತ ಸ್ಥಾನದಲ್ಲಿರುವ ಸಂಸದರ ಕುರಿತು ಅಪಪ್ರಚಾರ ಮಾಡಲಾಗುತ್ತಿದ್ದು, ಕಾಂಗ್ರೆಸ್ ವಕ್ತಾರನೆಂದು ಹೇಳಿಕೊಳ್ಳುತ್ತಿರುವ ಈ ವ್ಯಕ್ತಿಯ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಜಿಲ್ಲೆ ಮಾತ್ರವಲ್ಲದೆ ರಾಜ್ಯದ ಇತರೆಡೆಯೂ ಕಾನೂನು ಸುವ್ಯವಸ್ಥೆ…
ಮಡಿಕೇರಿ ಮಾ.5 NEWS DESK : ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರು ರಚಿಸಿರುವ “ಕಡಲಾಚೆಯ ರಮ್ಯ ನೋಟ ದುಬಾಯಿ” ಪುಸ್ತಕ ಮಂಗಳೂರಿನಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಪತ್ರಿಕಾ ಭವನದಲ್ಲಿ ಡಾ.ಮಾಲತಿ ಶೆಟ್ಟಿ ಮಾಣೂರ್ ಸಾರಥ್ಯದ ಸಾಹಿತ್ಯಪರವಾದ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ನಡೆದ 42ನೇ ಸರಣಿ ಕೃತಿ ಲೋಕಾರ್ಪಣೆಯ ಸರಳ ಕಾರ್ಯಕ್ರಮದಲ್ಲಿ “ಕಡಲಾಚೆಯ ರಮ್ಯ ನೋಟ ದುಬಾಯಿ” ಪುಸ್ತಕವನ್ನು ಯು.ಎ.ಇ. ಬಂಟ್ಸ್ ಸಂಘದ ಅಧ್ಯಕ್ಷ ವಕ್ವಾಡಿ ಪ್ರವೀಣ್ ಶೆಟ್ಟಿ ಅವರು ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು “ಕಡಲಾಚೆಯ ರಮ್ಯ ನೋಟ ದುಬಾಯಿ” ಪುಸ್ತಕ ಅತ್ಯಂತ ವಿಶಿಷ್ಟ ಶೈಲಿಯಲ್ಲಿ ರಚನೆಗೊಂಡಿದ್ದು, ದುಬಾಯಿಯಲ್ಲಿರುವ ವಾಸ್ತು ಶಿಲ್ಪಗಳ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಅತ್ಯಾಕರ್ಷಕ ವರ್ಣ ಚಿತ್ರದೊಂದಿಗೆ ಓದುಗರ ಮನಮುಟ್ಟುವಲ್ಲಿ ಕೃತಿ ಯಶಸ್ವಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಡಲಾಚೆಯ ರಮ್ಯ ನೋಟ ದುಬಾಯಿ ಕೃತಿಗೆ ಮುನ್ನುಡಿಯನ್ನು ಬರೆದಿರುವ ಡಾ.ಅರುಣ ನಾಗರಾಜ್ ಮಾತನಾಡಿ ಪುಸ್ತಕದಲ್ಲಿರುವ ಲೇಖನಗಳು ಸಂಪೂರ್ಣ ಮಾಹಿತಿಯೊಂದಿಗೆ ಓದುಗರ ಮನ ಗೆಲ್ಲುತ್ತಿದೆ. ಕೈಯಲ್ಲಿ ಈ…
ಸಿದ್ದಾಪುರ ಮಾ.5 NEWS DESK : ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (NABARD) -ಬೆಂಗಳೂರು ಹಾಗೂ ಓ.ಡಿ.ಪಿ. ಸಂಸ್ಥೆ ಮೈಸೂರು ಸಹಭಾಗಿತ್ವದಲ್ಲಿ ಬಾಳೆಗುಂಡಿ ಹಾಡಿಯಲ್ಲಿ ಬುಡಕಟ್ಟು ಸಮುದಾಯದ ಅಭಿವೃದ್ಧಿ ಕಾರ್ಯಕ್ರಮದಡಿ ಸೋಲಾರ್ ದೀಪಗಳು, ತೋಟಗಾರಿಕೆ ಗಿಡಗಳು ಹಾಗೂ ಬಿತ್ತನೆ ಬೀಜಗಳ ವಿತರಣಾ ಕಾರ್ಯಕ್ರಮ ನಡೆಯಿತು. ಬಾಳೆಗುಂಡಿ, ವಾಲ್ನೂರು-ತ್ಯಾಗತ್ತೂರು ವ್ಯಾಪ್ತಿಯ 50 ಜನ ಫಲಾನುಭವಿಗಳಿಗೆ, ಸೋಲಾರ್ ಮನೆದೀಪಾ, ಹಣ್ಣಿನ ಗಿಡ, ಅಡಕೆಗಿಡ, ತೆಂಗಿನ ಸಸಿಗಳು, ಮೆಣಸು ಬಳ್ಳಿ, ಹಾಗೂ ತರಕಾರಿ ಬಿತ್ತನೆ ಬೀಜಗಳನ್ನು ವಿತರಿಸಲಾಯಿತು. ಸಾವಯವ ಕೃಷಿ, ಮಣ್ಣು ಮತ್ತು ನೀರು ಪರೀಕ್ಷೆ, ಜಾಲಬಂಧ, ಸರ್ಕಾರಿ ಸೌಲಭ್ಯಗಳ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮೈಸೂರು ಓ.ಡಿಪಿ ಸಂಸ್ಥೆಯ ನಿರ್ದೇಶಕರಾದ ಫಾದರ್ ಅಲೆಕ್ಸ್ ಪ್ರಶಾಂತ್ ಸಿಕ್ವೇರಾ ಮಾತನಾಡಿ ವಾಲ್ನೂರು, ಬಾಳೆಗುಂಡಿ, ತ್ಯಾಗತ್ತೂರು ಹಾಡಿಗಳಲ್ಲಿ ನಬಾರ್ಡ್ ಬೆಂಗಳೂರು ಹಾಗೂ ಓ.ಡಿ.ಪಿ ಸಂಸ್ಥೆಯ ಸಹಕಾರದಿಂದ ಬುಡಕಟ್ಟು ಜನರ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಯಾವುದೇ ಕಾರ್ಯಕ್ರಮ ಯಶಸ್ವಿಯಾಗಲೂ ಜನರ ಸಹಕಾರ ಮುಖ್ಯವಾಗಿದೆ. ಇಲ್ಲಿಯ…
ವಿರಾಜಪೇಟೆ ಮಾ.5 NEWS DESK : ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡುವ ನಿಶ್ವಾರ್ಥ ಸೇವೆಯು ಸಮಾಜದಲ್ಲಿ, ಜನಮಾನಸದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಜಿ.ಪಂ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಸಂತ ಅನ್ನಮ್ಮ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಬೇಟೋಳಿ ಗ್ರಾಮದ ಹೆಗ್ಗಳ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ 2024-25ನೇ ಸಾಲಿನ ವಾರ್ಷಿಕ ಶಿಬಿರದವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಸಮಾಜಕ್ಕೆ ಮೌಲ್ಯಾಧರಿತ ಸೇವೆಗಳ ಅವಶ್ಯಕತೆಯಿದೆ. ರೈತನು ಹೊಲದಲ್ಲಿ ದುಡಿದು. ಜನಸಾಮಾನ್ಯರ ಹಸಿವು ನೀಗಿಸುತ್ತಾನೆ. ಸೈನಿಕ ದೇಶದ ಗಡಿ ಕಾಯುತ್ತಾ ದೇಶವನ್ನು ಕಪಾಡುತ್ತಾನೆ. ಸಮಾಜದಲ್ಲಿ ಗುರುತಿಸಿಕೊಳ್ಳಲು ಉತ್ತಮ ನಾಯಕತ್ವ ಗುಣಗಳು, ಸೇವೆಗೆ ಮುಡಿಪಾಗಿಟ್ಟ ವ್ಯಕ್ತಿತ್ವದಿಂದ ಮಾತ್ರ ಸಾಧ್ಯ. ಆದ್ದರಿಂದ ವಿದ್ಯಾರ್ಥಿ ಜೀವನದಿಂದಲೇ ಸೇವಾ ಮನೋಭಾವ ಬೆಳಸಿಕೊಳ್ಳುವಂತೆ ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು. ಸಂತ ಅನ್ನಮ್ಮ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮುದಲೈ ಮುತ್ತು ಶಿಬಿರಾರ್ಥಿಗಳಿಗೆ ಪ್ರಮಾಣ ವಚನ ಭೋದಿಸಿ ಮಾತನಾಡಿ, ಯಾಂತ್ರಿಕೃತ ಸಮಾಜದಲ್ಲಿ ಕೃತಕ ಬುದ್ದಿಮತ್ತೆ…
ಗುಂಡ್ಲುಪೇಟೆ NEWS DESK ಮಾ.5 : ಕಾಡಾನೆ ದಾಳಿಗೆ ಸಿಲುಕಿದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬಂಡೀಪುರದ ಕುಂದಕೆರೆ ವಲಯ ವ್ಯಾಪ್ತಿಯ ಹಾಡಿನ ಕಣಿವೆ-ಮಂಗಲ ರಸ್ತೆಯಲ್ಲಿ ನಡೆದಿದೆ. ತಮಿಳುನಾಡು ರಾಜ್ಯದ ಮಸಣಿಗುಡಿ ಮೂಲದ ಕರಿಯ(48) ಎಂಬುವವರೇ ಮೃತ ದುರ್ದೈವಿ. ಕರಿಯ ಸೇರಿದಂತೆ ಮೂವರು ಮಂಗಲ ಗ್ರಾಮದ ಕಾಲು ದಾರಿಯಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಿಢೀರ್ ದಾಳಿ ಮಾಡಿದೆ. ಈ ಸಂದರ್ಭ ಕಾಡಾನೆಗೆ ಸಿಲುಕಿಕೊಂಡ ಕರಿಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಯಲ್ಲಿದ್ದವರು ಓಡಿ ಜೀವ ಉಳಿಸಿಕೊಂಡಿದ್ದಾರೆ. ಬಂಡೀಪುರ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಿರಾಜಪೇಟೆ ಮಾ.5 NEWS DESK : ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಕೆ.ಪಿ.ದಿಥ್ಯಗೆ ಕನ್ನಡ ಮಾಣಿಕ್ಯ ಪ್ರಶಸ್ತಿ ಲಭಿಸಿದೆ. ಧಾರವಾಡದ ಚೇತನ ಫೌಂಡೇಶನ್ ಕರ್ನಾಟಕದ ಆಶ್ರಯದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಮೈಸೂರಿನ ವಿಜಯನಗರದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದ ಸಭಾಂಗಣದಲ್ಲಿ ನಡೆದ ‘ಮೈಸೂರು ನುಡಿ ಸಡಗರ’ ಕಾರ್ಯಕ್ರಮದಲ್ಲಿ ಕೆ.ಪಿ.ದಿಥ್ಯಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿರಾಜಪೇಟೆಯ ಚಿಕ್ಕಪೇಟೆಯ ನಿವಾಸಿ ಕೆ.ಪಿ. ಪ್ರಥ್ವಿಕುಮಾರ್ ಹಾಗೂ ಭವ್ಯ ದಂಪತಿಗಳ ಪುತ್ರಿಕೊಂಪುಳೀರ ಪಳಂಗಪ್ಪ ಹಾಗೂ ತಾರಾಮಣಿಯವರ ಮೊಮ್ಮಗಳಾಗಿರುವ ದಿಥ್ಯ, ವಿರಾಜಪೇಟೆಯ ವಿನಾಯಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ನಾಟ್ಯಾಂಜಲಿ ನೃತ್ಯ ಶಾಲೆಯಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾಳೆ.






