ಲೇಖಕ: admin

ವಿರಾಜಪೇಟೆ ಮಾ.5 NEWS DESK : ವಿರಾಜಪೇಟೆ ತಾಲ್ಲೂಕು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಸ್ವಸಾಯ ಸಂಘಗಳ ಒಕ್ಕೂಟಗಳು ಸಂಯುಕ್ತಾಶ್ರಯದಲ್ಲಿ ಕೃಷಿ ಕಾರ್ಯಕ್ರಮದಡಿಯಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಗೋಣಿಕೊಪ್ಪ ವಲಯದ ದೇವರಪುರ ಕಾರ್ಯಕ್ಷೇತ್ರದ ಶಿವಣ್ಣ ಅವರ ಕೃಷಿ ತಾಕುವಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ಶೇಖರ್ ಮಾತನಾಡಿ, ಅಣಬೆ ಕೃಷಿ ಮನೆಯಲ್ಲಿಯೇ ಬೆಳೆಯಿರಿ, ಹೆಚ್ಚು ಆದಾಯಗಳಿಸಬಹುದು, ಅಣಬೆ ಕೃಷಿಯು ಒಂದು ಲಾಭದಾಯಕ ಕೃಷಿ ಉದ್ಯಮವಾಗಿದೆ. ಮಹಿಳೆಯರಿಗೆ ಉದ್ಯೋಗವನ್ನು ಕಲ್ಪಿಸುತ್ತದೆ. ಕೋಳಿ ಸಾಕಾಣಿಕೆ ಹೇಗೆ ಮಾಡುವುದು ಮತ್ತು ವಾಣಿಜ್ಯ ನರ್ಸರಿ ಬಗ್ಗೆ ಮಾಹಿತಿ ನೀಡಿದರು. ಪ್ರಗತಿಪರ ಕೃಷಿಕರಾದ ಶಿವಣ್ಣ ಮಾತನಾಡಿ, ಬಾಳೆ ಕೃಷಿಯ ವಿವಿಧ ತಳಿಗಳ ಬಗ್ಗೆ ಮತ್ತು ಏಲಕ್ಕಿ ಬೆಳೆಗಳ ಬಗ್ಗೆ ಮಾಹಿತಿ ನೀಡಿದರು. ಕೃಷಿ ಮೇಲ್ವಿಚಾರಕರಾದ ವಸಂತ್, ಒಕ್ಕೂಟದ ಅಧ್ಯಕ್ಷರಾದ ನವೀನ್, ಸೇವಾ ಪ್ರತಿನಿಧಿ ಸರೋಜಾ, ಸಿಎಸ್‍ಸಿ ಸೇವಾದಾರರು ಸೌಜನ್ಯ, ಸಂಘದ ಸದಸ್ಯರು, ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ವಿರಾಜಪೇಟೆ ಮಾ.5 NEWS DESK : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿಯ ಆದೇಶದ ಮೇರೆಗೆ ವಿರಾಜಪೇಟೆ ಹಾಗೂ ಪೊನ್ನಂಪೇಟೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲೆ ನಡೆಯುವ ದೌರ್ಜನ್ಯ ನಿಯಂತ್ರಣದ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ಸಮಿತಿಯ ಪದಾಧಿಕಾರಿಗಳು ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಸರಕಾರಿ ಶಾಲೆಗಳು ಮತ್ತು ಸರಕಾರಿ ಹಾಸ್ಟೆಲ್‍ಗಳು ಮತ್ತು ಸಾರ್ವಜನಿಕರ ಸ್ಥಳಗಳಲ್ಲಿ ಹಾಡಿನ ಮೂಲಕ ಅರಿವು ಮೂಡಿಸಿದರು. ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಮಂಜುನಾಥ್ ಅಣ್ಣಯ್ಯ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಂಚಾಲಕ ಹೆಚ್.ಜಿ.ಗೋಪಾಲ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಮಾ.5 NEWS DESK : ನಿಟ್ಟೂರು ಗ್ರಾ.ಪಂ ನೂತನ ಉಪಾಧ್ಯಕ್ಷರಾಗಿ ಕಾಟಿಮಾಡ ಶರೀನ್ ಮುತ್ತಣ್ಣ ಅವಿರೋಧ ಆಯ್ಕೆಯಾಗಿದ್ದಾರೆ.ನಿಟ್ಟೂರು ಗ್ರಾ.ಪ0 ಉಪಾಧ್ಯಕ್ಷರಾಗಿದ್ದ ಚಕ್ಕೇರ ಸೂರ್ಯ ಅಯ್ಯಪ್ಪ ಅಂತರಿಕ ಒಳ ಒಪ್ಪಂದಂತೆ ಕಾಟಿಮಾಡ ಶರೀನ್ ಮುತ್ತಣ್ಣನವರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಉಪಾಧ್ಯಕ್ಷರ  ಸ್ಥಾನಕ್ಕೆ ರಾಜಿನಾಮೆಯನ್ನು ನೀಡಿದ್ದರು. ಇಂದು ಚುನಾವಣಾ ಅಧಿಕಾರಿಗಳಾದ ತಾಲ್ಲೂಕು ಮೀನುಗಾರಿಗೆ ಇಲಾಖೆಯ ಸಹಾಯ ನಿರ್ದೇಶಕ ಸಚಿನ್ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರೀಯೆಯಲ್ಲಿ ಕಾಟಿಮಾಡ ಶರೀನ್ ಮುತ್ತಣ್ಣ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಯಾದರು. ನಂತರ ನಡೆದ ಸರಳ ಸಮಾರಂಭದಲ್ಲಿ ನಿಕಟಪೂರ್ವ ಉಪಾಧ್ಯಕ್ಷ ಚಕ್ಕೇರ ಅಯ್ಯಪ್ಪ ಅವರ ಅಧಿಕಾರ ಅವಧಿಯಲ್ಲಿ ಮಾಡಿದ ಕೆಲಸ ಕಾರ್ಯಗಳನ್ನು ಶ್ಲಾಘಿಸಿ ನೂತನ ಉಪಾಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ ಅವರನ್ನು ಅಭಿನಂದಿಸಿದರು. ಗ್ರಾ.ಪಂ ಅದ್ಯಕ್ಷ ಅಮ್ಮಣಿ ಬೆಂಡೆಕುತ್ತಿ, ಸದಸ್ಯರುಗಳಾದ ಪಡಿಞರಂಡ ಕವಿತಾಪ್ರಭು, ರಾಜು, ಅಮ್ಮಯ್ಯ, ಸುಮತಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುರೇಶ್, ಪ್ರಮುಖರಾದ ಕೊಟ್ಟಂಗಡ ಮಂಜುನಾಥ್, ಮಾಚಂಗಡ ವಿಕಾಸ್, ಪೊನ್ನಿಮಾಡ ಸಂತೋಷ್, ಅಳಮೇಂಡ ಸೋಮಯ್ಯ, ಚಕ್ಕೇರ…

Read More

ಮಡಿಕೇರಿ ಮಾ.4 NEWS DESK : ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ ಮೈಸೂರು ವಿಭಾಗಿಯ ಕಚೇರಿ ವತಿಯಿಂದ ಕೊಡಗು ಜಿಲ್ಲಾಧಿಕಾರಿಯವರ ಕಚೇರಿ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕ ದಾಖಲೆಗಳ ಅಧಿನಿಯಮ-2010 ಮತ್ತು ನಿಯಮಗಳು-2013 ಹಾಗೂ ದಾಖಲೆಗಳ ನಿರ್ವಹಣೆ ಕುರಿತು ಕಾರ್ಯಾಗಾರ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಕಾಲ, ಆರ್‍ಟಿಐ, ಸೇವಾಸಿಂಧು ಯೋಜನೆಗಳಿಂದ ಸಾರ್ವಜನಿಕರಿಗೆ ಸರ್ಕಾರಿ ಇಲಾಖೆಗಳ ಕಡತ/ ದಾಖಲೆಗಳನ್ನು ಸುಲಭವಾಗಿ ಪಡೆಯಲು ಮುಕ್ತ ಅವಕಾಶವಿದೆ. ಇಂತಹ ಸಂದರ್ಭದಲ್ಲಿ ದೈನಂದಿನ ಕಚೇರಿ ಕಡತಗಳ ನಿರ್ವಹಣೆ ಅಗತ್ಯವಾಗಿದೆ. ಸರ್ಕಾರಿ ಕಡತಗಳನ್ನು ಸಾರ್ವಜನಿಕ ಉದ್ದೇಶದಿಂದ ಸಂರಕ್ಷಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದರು. ರಾಜ್ಯ ಪತ್ರಾಗಾರ ಇಲಾಖೆಯ ನಿರ್ದೇಶಕರಾದ ಡಾ.ಗವಿಸಿದ್ದಯ್ಯ ಮಾತನಾಡಿ, ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ ನಾಡು ನುಡಿಗೆ ಸಂಬಂಧಿಸಿದ ಐತಿಹಾಸಿಕ ಮಹತ್ವದ ದಾಖಲೆ ಸಂಗ್ರಹಿಸಿ ಸಂರಕ್ಷಣೆ ಮಾಡುತ್ತ ಬರುತ್ತಿದೆ. ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಎಲ್ಲಾ ಇಲಾಖೆಯ ಕಚೇರಿಗಳ ಕಡತಗಳ ನಿರ್ವಹಣೆ ಮತ್ತು ಸಂರಕ್ಷಣೆಯಲ್ಲಿ ಪಾರದರ್ಶಕತೆ ತರುವ…

Read More

ವಿರಾಜಪೇಟೆ ಮಾ.4 NEWS DESK : ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಹಾಗೂ ಅಲ್ಪಸಂಖ್ಯಾತರ ಸಮಿತಿ ವತಿಯಿಂದ ‘ಅಲ್ಪಸಂಖ್ಯಾತರ ಕಲ್ಯಾಣವನ್ನು ಉತ್ತೇಜಿಸುವುದು’ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೊಡಗು ಜಿಲ್ಲೆ ಅಲ್ಪಸಂಖ್ಯಾತರ ಸಮಿತಿಯ ಅಧ್ಯಕ್ಷ ಹನೀಫ್ ಮಾತನಾಡಿ, ವಿದ್ಯಾರ್ಥಿಗಳು ಅಲ್ಪಸಂಖ್ಯಾತರಿಗಿರುವ ವಿಶೇಷ ಪ್ರೋತ್ಸಾಹ ಧನವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು ತಮ್ಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಸಿ.ದಯಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಸಮಿತಿಯ ಸಂಚಾಲಕ ಸುಮಯ ತಬಸುಮ್ ಹಾಗೂ ಐಕ್ಯೂಎಸಿ ಸಹ ಚಂಚಾಲಕ ಡಾ.ಕೆ.ಬಸವರಾಜು, ಕಾರ್ಯಕ್ರಮ ನಿರ್ವಹಿಸಿದ ವಿದ್ಯಾರ್ಥಿಗಳಾದ ಸುಹೈರ, ನಿಶಾನ್ ಜೋಸೆಫ್, ಸಾದಿಯ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಾದ ಕೆ.ಎಸ್. ಕಾರ್ಯಪ್ಪ, ಕೆ.ಜಿ.ಧನ್ಯ ಹಾಗೂ ಉಪನ್ಯಾಸಕರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಮಾ.4 NEWS DESK : ಗೋಣಿಕೊಪ್ಪ ಮತ್ತು ಪೊನ್ನಂಪೇಟೆ ಕಾವೇರಿ ಪದವಿ ಪೂರ್ವ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಶಿಕ್ಷಣ ಸಚಿವರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿ  ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದ ಶಾಸಕ ಎ.ಎಸ್.ಪೊನ್ನಣ್ಣ,  1968ರಲ್ಲಿ ಪ್ರಾರಂಭವಾಗಿ ಸುಮಾರು 55 ವರ್ಷಗಳಿಂದ ಕಾವೇರಿ ಪದವಿ ಪೂರ್ವ ಕಾಲೇಜು, ಗೋಣಿಕೊಪ್ಪ ಕಾವೇರಿ ಪದವಿಪೂರ್ವ ಕಾಲೇಜು ವಿರಾಜಪೇಟೆಯಲ್ಲಿ ಎರಡು ಸಂಸ್ಥೆಗಳು ಉತ್ತಮ ಫಲಿತಾಂಶ, ಗುಣಮಟ್ಟದ ಶಿಕ್ಷಣ ಸಾಧನೆ ಮೂಲ ಸೌಕರ್ಯ ಸೇರಿದಂತೆ ಜಿಲ್ಲೆಯಲ್ಲಿ ಒಳ್ಳೆಯ ಸ್ಥಾನ ಗುರುತಿಸಿಕೊಂಡಿದೆ. 20 ವರ್ಷಗಳ ಹಿಂದೆ ಸರ್ಕಾರದ ಆದೇಶದಂತೆ ಪ್ರಥಮ ದರ್ಜೆ ಹಾಗೂ ಪಿಯು ಕಾಲೇಜುಗಳನ್ನು ಬೇರ್ಪಡಿಸಿದಾಗ ಪಿಯು ಕಾಲೇಜು ಸಿಬ್ಬಂದಿಗಳು ಪೂರ್ಣಪ್ರಮಾಣದಲ್ಲಿ ಅನುದಾನಕ್ಕೆ ಒಳಪಡಬೇಕಾಗಿತ್ತು. ಆದರೆ ಆಗಲಿಲ್ಲ ಹಾಗಾಗಿ ಈ ಎರಡು ಕಾಲೇಜುಗಳನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಆರ್ಥಿಕ ಇಲಾಖೆಗೆ ಮರು ಪ್ರಸ್ತಾವನೆ ಸಲ್ಲಿಸಿ ಸರ್ಕಾರದ ಅನುದಾನಕ್ಕೆ ಒಳಪಡಿಸಲುಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ…

Read More

ಮಡಿಕೇರಿ ಮಾ.4 NEWS DESK : ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ 78 ವಿದ್ಯಾರ್ಥಿಗಳಿಗೆ ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಉಚಿತ ಸ್ವೆಟರ್ ವಿತರಿಸಿದರು. ನಂತರ ಮಾತನಾಡಿದ ಅವರು, ಕೊಡಗು ಜಿಲ್ಲೆಯಾದ್ಯಂತ 90,000 ಮಕ್ಕಳಿಗೆ ಸ್ವೆಟರ್ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಂದಿನ ಮಳೆಗಾಲ ಮತ್ತು ಚಳಿಗಾಲದಲ್ಲಿ ಶಾಲೆಯ ಮಕ್ಕಳಿಗೆ ಅನುಕೂಲವಾಗಲಿದೆ. ಸರ್ಕಾರಿ ಶಾಲೆಯ ಮಕ್ಕಳು ಬಡ ಕುಟುಂಬದಿಂದ ಬಂದವರಾಗಿದ್ದು, ಎಲ್ಲರೂ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಇವರನ್ನು ಸಬಲರನ್ನಾಗಿ ಮಾಡುವ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.  ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪ್ರದೀಪ್, ಗ್ರಾ.ಪಂ ಅಧ್ಯಕ್ಷ ಅರುಣ ಕುಮಾರಿ, ಸದಸ್ಯ ಚಂದ್ರಶೇಖರ ಜೋಗಿ, ತೊರೆನೂರು ಗ್ರಾ.ಪಂ ಅಧ್ಯಕ್ಷೆ ಶೋಭಾ ತೊರೆನೂರು ಪಂಚಾಯತಿಯ ಮಾಜಿ ಅಧ್ಯಕ್ಷ ದೇವರಾಜು, ರೂಪ ಮಹೇಶ್, ಉಪಾಧ್ಯಕ್ಷರಾದ ಬೇಬಿ ಹೆಬ್ಬಾಲೆ, ಶಾಲಾ ಮುಖ್ಯ ಶಿಕ್ಷಕರಾದ ಎಚ್.ಎಂ.ವೆಂಕಟೇಶ, ಸಹ ಶಿಕ್ಷಕಿ ಜಾನಕಿ, ಬಬಿತ, ವಂಜಮ್ಮ, ರಮ್ಯಾ, ಶಿವಾನಂದ ಸೇರಿದಂತೆ ಗ್ರಾಮಸ್ಥರು, ಶಾಲಾ ಮಕ್ಕಳು ಹಾಜರಿದ್ದರು.…

Read More

ಮಡಿಕೇರಿ ಮಾ.4 NEWS DESK : ಗಣಕ ವಿಜ್ಞಾನದ ಹೊಸ ಆವಿಷ್ಕಾರವಾಗಿರುವ ಕೃತಕ ಬುದ್ಧಿಮತ್ತೆ (ಎ. ಐ.) ಇದೀಗ ವೇಗವಾಗಿ ಬೆಳೆಯುತ್ತಿದೆ. ಇದರಿಂದ ಕೃತಕತೆಯ ಹೊಸ ಪ್ರಪಂಚವೇ ಸೃಷ್ಟಿಯಾಗತೊಡಗಿದೆ. ಈ ಕೃತಕ ಬುದ್ಧಿಮತ್ತೆಯ ಲೋಕದಲ್ಲಿ ಪತ್ರಿಕೋದ್ಯಮವನ್ನು ಮುಂದುವರಿಸುವುದು ಬಹುದೊಡ್ಡ ಸವಾಲಿನ ಕೆಲಸ ಎಂದು ಹಿರಿಯ ಪತ್ರಕರ್ತ ಹಾಗೂ ಕೊಡಗು ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಜಿ.ಅನಂತಶಯನ ಅಭಿಪ್ರಾಯಪಟ್ಟಿದ್ದಾರೆ.  ಮಡಿಕೇರಿಯ ಸತ್ಕಾರ ಸಭಾಂಗಣದಲ್ಲಿ ನಡೆದ ಪತ್ರಕರ್ತ ಯಜಾಸ್ ದುದ್ದಿಯಂಡ ಸಂಪಾದಕತ್ವದಲ್ಲಿ ನೂತನವಾಗಿ ಆರಂಭಗೊಂಡಿರುವ ಕೂರ್ಗ್ ಬಝ್ ಎಂಬ ಸುದ್ದಿಜಾಲದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಎ.ಐ.ಮೂಲಕ ಸುಳ್ಳನ್ನೇ ಸತ್ಯವಾಗಿಸುವ ವಾತಾವರಣ ಸೃಷ್ಟಿಯಾಗಿದೆ. ಮನುಷ್ಯನ ಬುದ್ಧಿಮತ್ತೆಯ ಎಲ್ಲಾ ಸಾಮರ್ಥ್ಯಗಳನ್ನು ಮರು ರಚಿಸಲು ಎ.ಐ. ಗೆ ಸಾಧ್ಯವಾಗುತ್ತಿದೆ. ಇದು ಪತ್ರಿಕೋದ್ಯಮಕ್ಕೆ ಬಹುದೊಡ್ಡ ಸವಾಲೊಡ್ಡುತ್ತದೆ. ಈ ಸವಾಲನ್ನು ಸಮರ್ಥವಾಗಿ ಎದುರಿಸಿ ತನ್ನ ಮೂಲ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಬೇಕಾಗಿರುವುದು ಪತ್ರಿಕೋದ್ಯಮದ ಇಂದಿನ ಅನಿವಾರ್ಯತೆಯಾಗಿದೆ ಎಂದು  ಹೇಳಿದರು.  ‘ಕಿತ್ತಳೆನಾಡು’ ಕನ್ನಡ ವಾರಪತ್ರಿಕೆಯ ಪ್ರಧಾನ ಸಂಪಾದಕ ಕುವೇಂಡ ವೈ.ಹಂಝತುಲ್ಲಾ ಮಾತನಾಡಿ,…

Read More

ವಿರಾಜಪೇಟೆ ಮಾ.4 NEWS DESK : ಭಾರತ ದೇಶ ಹಬ್ಬಗಳ ನಾಡು, ಅದರಲ್ಲಿಯೂ ಶಿವರಾತ್ರಿ ಹಬ್ಬ ಬಹಳ ಶ್ರೇಷ್ಠ, ವಿಶಿಷ್ಠವಾದ ಹಬ್ಬವಾಗಿದೆ ಎಂದು ವಿರಾಜಪೇಟೆ ಬ್ರಹ್ಮಾಕುಮಾರಿ ಸೇವಾ ಕೇಂದ್ರದ ಸಂಚಾಲಕರಾದ ಕೋಮಲ ಅಭಿಪ್ರಾಯಪಟ್ಟರು. ಶಿವರಾತ್ರಿ ಹಬ್ಬದ ಪ್ರಯುಕ್ತ ವಿರಾಜಪೇಟೆ ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿರುವ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ನಡೆದ 89ನೇ ತ್ರಿಮೂರ್ತಿ ಶಿವಜಯಂತಿ ಮಹೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿದ  ಅವರು, ಆದ್ಯಾತ್ಮಿಕದ ಬಗ್ಗೆ ಮಾತನಾಡಿರು. ಮನುಷ್ಯನಿಗೆ ಜೀವನದಲ್ಲಿ ಪರಮಾತ್ಮನ ದ್ಯಾನದ ಅಗತ್ಯವಿದೆ. ಭಾರತದಲ್ಲಿ ಶಿವನ ಅವತಾರಣೆ ಕಾರಣ ಭಾರತ ಭಾಗ್ಯವಿಧಾತ ಎಂದು ಹಾಡುವುದಾಗಿದೆ. ಭಾರತ ದೇಶದಲ್ಲಿಯೇ ಶಿವರಾತ್ರಿಯನ್ನು ಆಚರಿಸುತ್ತಾರೆ. ಜ್ಞಾನ ಸಾಗರ ಪರಮಾತ್ಮನು ಮನುಷ್ಯನಿಗೆ ಜ್ಞಾನದ ಅವಶ್ಯಕತೆ ಇರುವುದನ್ನು ನೀಡಿದ್ದಾನೆ. ಕಲಿಯುಗದಲ್ಲಿ ವಿನಾಶ ಎಂದರೆ ಪ್ರಕೃತಿ ವಿಕೋಪಗಳು, 33ಕೋಟಿ ದೇವತೆಗಳು ಆದರು, ಶ್ರೀ ಪರಮಾತ್ಮ ಒಬ್ಬನೆ, ಮನುಷ್ಯರುಗಳು ಕಾಮ, ಕ್ರೋಧ, ಲೋಭ, ಮೋಹಗಳಿಂದ ಕರ್ಮವನ್ನು ಮಾಡುತ್ತಾರೆ. ನಂತರ ಪಾಪದ ಶರೀರವನ್ನು ತೊಳೆಯಲು ಅನೇಕ ನದಿಗಳಿಗೆ ತೀರ್ಥಸ್ಥಾನಕ್ಕೆಂದು ಹೋಗುತ್ತಾರೆ, ಆತ್ಮವನ್ನು…

Read More

ಮಡಿಕೇರಿ ಮಾ.4 NEWS DESK : ಕೊಡಗು ವಿಶ್ವ ವಿದ್ಯಾನಿಲಯವನ್ನು ರದ್ದುಗೊಳಿಸಬಾರದು, ಸಿ ಮತ್ತು ಡಿ ಭೂಮಿಯ ಗೊಂದಲ ನಿವಾರಿಸಬೇಕು, ಪರಿಶಿಷ್ಟರ ಅನುದಾನವನ್ನು ಉಚಿತ ಭಾಗ್ಯಗಳಿಗೆ ಬಳಸಬಾರದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮಾ.6ರ ಬೆಳಿಗ್ಗೆ 10 ಗಂಟೆಯಿಂದ ಮಾ.7ರ ಮಧ್ಯಾಹ್ನ 2 ಗಂಟೆಯವರೆಗೆ ಅಹೋ ರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ಕೊಡಗು ಜಿಲ್ಲಾ ಬಿಜೆಪಿ ನಿರ್ಧರಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮೂರು ಪ್ರಮುಖ ಬೇಡಿಕೆಗಳು ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ನಡೆಸುವ ಧರಣಿ ಸತ್ಯಾಗ್ರಹಕ್ಕೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದಲ್ಲಿ ಮಾ.11 ರಂದು ಸ್ವಯಂ ಪ್ರೇರಿತ ‘ಕೊಡಗು ಬಂದ್’ ಗೆ ಕರೆ ನೀಡುವುದಾಗಿ ತಿಳಿಸಿದರು. ಕೊಡಗಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಬಿಜೆಪಿ ನಡೆಸುವ ಹೋರಾಟಕ್ಕೆ ರಾಜ್ಯ ಸರ್ಕಾರ ತನ್ನ ಬಜೆಟ್ ಅಧಿವೇಶನದಲ್ಲೇ ಸ್ಪಂದಿಸಬೇಕು. ತಪ್ಪಿದಲ್ಲಿ ಬಂದ್ ಗೆ ಕರೆ ಕೊಡುವುದು ಅನಿವಾರ್ಯವಾಗುತ್ತದೆ ಎಂದರು. ಹಿಂದಿನ ಬಿಜೆಪಿ ಸರ್ಕಾರದ…

Read More