ಮಡಿಕೇರಿ ಜೂ.15 NEWS DESK : ಈಜುಕೊಳಕ್ಕೆ ಇಳಿದ ಸಂದರ್ಭ ಉಸಿರಾಟ ಸಮಸ್ಯೆಯಿಂದ ಪ್ರವಾಸಿಗ ಮೃತಪಟ್ಟ ಘಟನೆ ವಿರಾಜಪೇಟೆ ಹೊರ ವಲಯದ ಪ್ರತಿಷ್ಟಿತ ರೆಸಾಟ್೯ನಲ್ಲಿ ನಡೆದಿದೆ. ಗೋವಾದ ಪಣಜಿಯಿಂದ ವಿರಾಜಪೇಟೆ ಸಮೀಪದ ರೆಸಾರ್ಟ್ ಗೆ ಆಗಮಿಸಿದ್ದ ಮನೋಜ್ ಆನಂದ್(57) ಎಂಬವರೇ ಮೃತ ದುರ್ದೈವಿ. ಸೋಮವಾರ ಮಧ್ಯಾಹ್ನ 2 ಗಂಟೆಗೆ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ರೆಸಾಟ್೯ ಆಗಮಿಸಿದ್ದರು. 2.30ರ ಸಮಯದಲ್ಲಿ ಮನೋಜ್ ಆನಂದ್ ಈಜುಕೊಳ ಕ್ಕೆ ಇಳಿದಿದ್ದ ಸಂದರ್ಭ ಉಸಿರಾಟದ ತೊಂದರೆ ಉಂಟಾಗಿದ್ದು, ನೀರಿನಲ್ಲಿ ಮುಳುಗಿದ್ದರು ಎನ್ನಲಾಗಿದೆ. ಬಳಿಕ ರೆಸಾಟ್೯ ಸಿಬ್ಬಂದಿಗಳು ಅವರನ್ನು ನೀರಿನಿಂದ ಹೊರ ತೆಗೆದು ವಿರಾಜಪೇಟೆ ಸರಕಾರಿ ಆಸ್ಪತ್ರೆಗೆ ಕರೆದೊಯ್ದ ಸಂದರ್ಭ ಪರೀಕ್ಷಿಸಿದ ವೈದ್ಯರು ಮನೋಜ್ ಆನಂದ್ ಮೃತಪಟ್ಟಿರುವುದಾಗಿ ದೃಡಪಡಿಸಿದ್ದಾರೆ. ಘಟನೆಯ ಮಾಹಿತಿ ಅರಿತು ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣಾಧಿಕಾರಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ನೀರಿಗೆ ಇಳಿದ ಸಂದರ್ಭ ಹೃದಯಾಘಾತ ಆಗಿರುವ…
ಲೇಖಕ: admin
ಮಡಿಕೇರಿ ಜೂ.15 NEWS DESK : ಮಡಿಕೇರಿ ನಗರದ ಭಾರತೀಯ ವಿದ್ಯಾಭವನದಲ್ಲಿ 2001 ರಲ್ಲಿ ಆರಂಭಗೊಂಡ “ಯೋಗ ಭಾರತಿ” ಯೋಗ ತರಬೇತಿ ಕೇಂದ್ರದ ರಜತ ಮಹೋತ್ಸವ ಸಮಾರಂಭ ಜೂ.17 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ “ಯೋಗ ಭಾರತಿ”ಯ ಸಂಸ್ಥಾಪಕ ಹಾಗೂ ಯೋಗ ಗುರು ಕೆ.ಕೆ.ಮಹೇಶ್ ಕುಮಾರ್ ಅವರು ಬುಧವಾರ ನಗರದ ರೆಡ್‍ಬ್ರಿಕ್ಸ್‍ನ ಸತ್ಕಾರ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ನಡೆಯುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಅಪರ ಜಿಲ್ಲಾಧಿಕಾರಿ ಡಾ.ಸಹನ ಎಸ್.ಹಾದಿಮನಿ, ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದ ಅಧ್ಯಕ್ಷ ಕೆ.ಎಸ್.ದೇವಯ್ಯ, ಯೋಗ ಭಾರತಿಯ ಪೋಷಕ ಡಾ.ಮನೋಹರ್ ಜಿ.ಪಾಟ್ಕರ್, ಶಕ್ತಿ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್ ಹಾಗೂ ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ ಜಿ. ಅವರುಗಳು ಪಾಲ್ಗೊಳ್ಳಲಿದ್ದಾರೆ. ಯೋಗದ ಮಹತ್ವದ ಕುರಿತು ಆಯುಷ್ ಇಲಾಖೆಯ ಡಾ.ಅರುಣ ಮಾಹಿತಿ ನೀಡಲಿದ್ದು, ಯೋಗ ಭಾರತಿ ಮತ್ತು ಯೋಗ ಸಂಧ್ಯಾ ತರಗತಿಯ ಯೋಗ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಲಿದೆ…
ಮಡಿಕೇರಿ ಜೂ.15 NEWS DESK : ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್‍ಐಆರ್) ಪ್ರಕ್ರಿಯೆಯು ಆದಿವಾಸಿಗಳು, ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಟರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರದಂತೆ ಕಂಡು ಬಂದಿದ್ದು, ಜನಸಾಮಾನ್ಯರು ಜಾಗೃತರಾಗಬೇಕೆಂದು ಪ್ರಗತಿಪರ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟ ಕರೆ ನೀಡಿದೆ. ಒಕ್ಕೂಟದ ವತಿಯಿಂದ ಜೂ.20 ರಂದು “ಎಸ್‍ಐಆರ್ ವಿರೋಧಿ ಸಮಾವೇಶ” ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆಯಲಿದೆ. ಇದಕ್ಕೆ ಪೂರಕವಾಗಿ ರಾಜ್ಯದ ವಿವಿಧೆಡೆ ಆಯೋಜಿಸಲಾಗಿರುವ “ಎದ್ದೇಳು ಕರ್ನಾಟಕ” ಆಂದೋಲನದ ಭಾಗವಾಗಿ ಜನಜಾಗೃತಿ ಅಭಿಯಾನ ಮಡಿಕೇರಿಗೆ ಆಗಮಿಸಿತು. ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ ಮಾತನಾಡಿದ ಒಕ್ಕೂಟದ ಪ್ರಮುಖರು ಹಾಗೂ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡಲಾಗಿದೆ. ಆದರೆ ಈ ಹಕ್ಕನ್ನು ಪರಿಶಿಷ್ಟರು, ಅಲ್ಪಸಂಖ್ಯಾತರು ಹಾಗೂ ಆದಿವಾಸಿಗಳಿಂದ ಕಸಿದುಕೊಳ್ಳುವ ಪ್ರಯತ್ನವಾಗಿ ಎಸ್‍ಐಆರ್ ಜಾರಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಚುನಾವಣೆಗೂ ಪೂರ್ವದಲ್ಲೆ…
ಮಡಿಕೇರಿ NEWS DESK ಜೂ.15 : ಕೊಡಗು ಜಿಲ್ಲೆಯ ಬಹುತೇಕ ರಸ್ತೆಗಳು ಹೊಂಡಗುoಡಿಗಳಿoದ ಕೂಡಿದ್ದು, ಸುಗಮ ಸಂಚಾರ ಅಸಾಧ್ಯವಾಗಿದೆ. ರಸ್ತೆಗಳ ಅವ್ಯವಸ್ಥೆಗೆ ಇಬ್ಬರು ಶಾಸಕರುಗಳ ನಿರ್ಲಕ್ಷ್ಯವೇ ಕಾರಣವೆಂದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಳೆದ ಮೂರು ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳಿಗಾಗಿ ಕಾದು ಜನ ಬೇಸತ್ತು ಹೋಗಿದ್ದಾರೆ. ಕನಿಷ್ಠ ರಸ್ತೆಗಳ ದುರಸ್ತಿ ಕಾರ್ಯವನ್ನು ಕೂಡ ಮಾಡಲಾಗದ ಪರಿಸ್ಥಿತಿಯಲ್ಲಿ ಶಾಸಕರುಗಳು ಇದ್ದಾರೆ. ಆರಂಭದ ಶೂರತನವೆಂಬoತೆ ಆರಂಭದಲ್ಲಿ ಡಾಂಬರೀಕರಣಗೊಳಿಸಿದ ರಸ್ತೆಗಳು ಕಳೆದ ಒಂದು ವಾರದ ಮಳೆಗೆ ನೀರುಪಾಲಾಗಿದ್ದು, ಹೊಂಡಗುoಡಿಗಳು ಮತ್ತೆ ಅಪಾಯವನ್ನು ಆಹ್ವಾನಿಸುತ್ತಿವೆ ಎಂದು ಟೀಕಿಸಿದ್ದಾರೆ. ರಸ್ತೆಗಳ ಅಭಿವೃದ್ಧಿಗಾಗಿ ಕೋಟಿ ಕೋಟಿ ಅನುದಾನ ಬಂದಿದೆ ಎಂದು ಪ್ರಚಾರವನ್ನಷ್ಟೇ ಮಾಡಲಾಗುತ್ತಿದೆ. ಜನರ ಕಣ್ಣೊರೆಸುವ ಉದ್ದೇಶದಿಂದ ರಸ್ತೆ ಕಾಮಗಾರಿಗೆ ವಿವಿಧೆಡೆ ಭೂಮಿಪೂಜೆ ನೆರವೇರಿಸಲಾಗಿದೆ. ಆದರೆ ಇಲ್ಲಿಯವರೆಗೆ ಎಲ್ಲೂ ಕಾಮಗಾರಿ ಆರಂಭಗೊoಡಿಲ್ಲ, ಆರಂಭಗೊoಡಿರುವ ಕಾಮಗಾರಿ ಪೂರ್ಣಗೊಂಡಿಲ್ಲ. ಮಳೆಗಾಲ ಸಮೀಪಿಸುವ ಹಂತದಲ್ಲಿ ಕಾಮಗಾರಿ ಆರಂಭಿಸುವ ನಾಟಕ ಮಾಡಲಾಗಿದೆ. ಮಳೆಯ ಕಾರಣ ನೀಡಿ ಕಾಮಗಾರಿ ನಡೆಸದೆ…
ಬೆಂಗಳೂರು, ಜೂ.15 NEWS DESK : ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ‘ಕರ್ತವ್ಯ’ (KAAMS – Karnataka Advanced Attendance Management System) ಎಂಬ ನೂತನ ಮುಂದುವರಿದ ಹಾಜರಾತಿ ನಿರ್ವಹಣಾ ತಂತ್ರಜ್ಞಾನವನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಇಲಾಖಾ ಕಾರ್ಯದರ್ಶಿಗಳೊಂದಿಗೆ ನಡೆಸಿದ ಮೊದಲ ಸಭೆಯಲ್ಲೇ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಕಚೇರಿ ವೇಳೆಯಲ್ಲಿ ಕಡ್ಡಾಯವಾಗಿ 100% ಹಾಜರಿರಬೇಕು ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದರು. ಈ ಹಿಂದೆ ಜಾರಿಯಲ್ಲಿದ್ದ ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಉದ್ಯೋಗಿಗಳು ಕೇವಲ ಡಿಜಿಟಲ್ ಸಹಿ ಮಾಡಿ ಕಚೇರಿಯಿಂದ ಗೈರಾಗುವ ಸಾಧ್ಯತೆಗಳಿದ್ದವು. ಈ ದೋಷವನ್ನು ನಿವಾರಿಸಲು, ಉದ್ಯೋಗಿಗಳ ಭೌತಿಕ ಉಪಸ್ಥಿತಿ ಮತ್ತು ಕಚೇರಿಯ ಭೌಗೋಳಿಕ ಸ್ಥಳವನ್ನು (Geographical Location) ನಿಖರವಾಗಿ ಪತ್ತೆಹಚ್ಚುವ ಈ ಹೊಸ ವ್ಯವಸ್ಥೆಯನ್ನು ರೂಪಿಸಲಾಗಿದೆ. :: ಸಂಪೂರ್ಣ “ಮೇಡ್-ಇನ್-ಕರ್ನಾಟಕ” ಆವಿಷ್ಕಾರ :: ಯಾವುದೇ ಬಾಹ್ಯ ಖಾಸಗಿ ತಂತ್ರಜ್ಞಾನ ಸಂಸ್ಥೆಗಳ ನೆರವಿಲ್ಲದೆ,…
ಮಡಿಕೇರಿ ಜೂ.15 NEWS DESK : ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 0.72 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 41.95 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 259.90 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 865.04 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.08 ಮಿ.ಮೀ. ಕಳೆದ ವರ್ಷ ಇದೇ ದಿನ 70.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 419.66 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1302.52 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 54 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 315.24 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 905.10 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ…
ಮಡಿಕೇರಿ ಜೂ.15 NEWS DESK : ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ನಿರ್ದೇಶನ ಮೇರೆಗೆ ಕಾಲೂರು- ಮಾಂದಲಪಟ್ಟಿ ರಸ್ತೆ ದುರಸ್ತಿ ಕಾರ್ಯ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದೆ. ವಾರದ ಹಿಂದೆ ಕಾಲೂರು ಗ್ರಾಮಸ್ಥರು ರಸ್ತೆ ಹಾಳಾಗಿರುವುದರಿಂದ ಬಸ್ ಸಂಚಾರವಿಲ್ಲದೆ ವಿಧ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂದು ಡಾ.ಮಂತರ್ ಗೌಡ ರವರಲ್ಲಿ ಮನವಿ ಮಾಡಿಕೊಂಡಿದ್ದರು. ಮಳೆ ಆರಂಭಗೊಂಡಿರುವುದರಿಂದ ಪೂರ್ಣ ಪ್ರಮಾಣದಲ್ಲಿ ರಸ್ತೆ ನಿರ್ಮಾಣ ಅಸಾಧ್ಯವಾಗಿದ್ದು ಸದ್ಯಕ್ಕೆ ತಾತ್ಕಾಲಿಕ ದುರಸ್ತಿ ಮಾಡಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡುವುದಾಗಿ ಶಾಸಕರು ಭರವಸೆ ನೀಡಿದ್ದರು. ಶಾಸಕರು ಭರವಸೆ ನೀಡಿದಂತೆ ಈಗ ತಾತ್ಕಾಲಿಕ ದುರಸ್ತಿ ಆಗುತ್ತಿದೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಿರೀಶ್ ರವರು ಸ್ಥಳದಲ್ಲಿಯೇ ಇದ್ದು ಕಾಮಗಾರಿ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ತಮ್ಮ ಕೋರಿಕೆಗೆ ತಕ್ಷಣವೇ ಸ್ಪಂದನೆ ನೀಡಿದ ಡಾ ಮಂತರ್ ಗೌಡ ರವರ ನಡೆಯ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಜೂ.14 NEWS DESK : ಸಹಾರ ಫ್ರೆಂಡ್ಸ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿರಾಜಪೇಟೆಯಲ್ಲಿ ಬೃಹತ್ ರಕ್ತದಾನ ಶಿಬಿರದ ನಡೆಯಿತು. ಶಿಬಿರವನ್ನು ಉದ್ಘಾಟಿಸಿ, ಮಾತನಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು, ರಕ್ತದಾನವೇ ಶ್ರೇಷ್ಠದಾನ ವಾಗಿದ್ದು, ಇನ್ನೊಬ್ಬರ ಜೀವ ಉಳಿಸುವ ಈ ಕಾರ್ಯ ಎಲ್ಲರಿಗೂ ಮಾದರಿಯಾಗಬೇಕು. ರಕ್ತದಾನ ಮಹಾದಾನವಾಗಿದ್ದು ಇದರಿಂದ ಸಮಾಜದ ಸ್ವಾಸ್ಥ್ಯ ಹಾಗೂ ಬಡ ಜನತೆಯ ಅವಶ್ಯಕತೆಗಳು ಪೂರೈಕೆಯಾಗಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಾಜಿ ಪುರಸಭೆ ಅಧ್ಯಕ್ಷರು ದೇಚಮ್ಮ ಕಾಳಪ್ಪ, ಡಾ. ಕರುಂಬಯ್ಯ ,ಸಹಾರ ಫ್ರೆಂಡ್ಸ್ ಸದಸ್ಯರು ಅಬ್ದುಲ್ ರೌಫ್, ಮೊಹಸಿನ್, ಮಹಮ್ಮದ್ ಖಾಜಾ, ಸಮಿಉಲ, ಇರ್ಷಾದ್, ಆರ್ಚಿಪ್, ಪ್ರಮುಖರಾದ ಸೂರಜ್ ಹೊಸುರು, ಮಹಾದೇವ, ಮಹಮ್ಮದ್ ನಯಾಜ್, ಶಶಿ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ವಿರಾಜಪೇಟೆ ಜೂ.14 NEWS DESK : ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಮತ್ತು ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘ ಮತ್ತು ಡಿವೈಎಫ್‍ಐ ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆಯ ಗಡಿಯಾರ ಕಂಬ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಪಿ.ಆರ್. ಭರತ್, ಕೇಂದ್ರ ಸರಕಾರ ನಿರಂತರವಾಗಿ ಹೆಚ್ಚಿಸುತ್ತಿರುವ ಅಡುಗೆ ಅನಿಲ ಹಾಗೂ ಪೆಟ್ರೋಲ್ ಡಿಸೇಲ್ ಬೆಲೆ ಗಗನಕ್ಕೆ ಏರಿದ್ದು, ಜನ ಸಾಮಾನ್ಯರು ತೊಂದರೆಗೆ ಒಳಗಾಗಿದ್ದರೆ, ಅಸ್ಸಾಂ, ತಮಿಳುನಾಡು ಕೇರಳದಲ್ಲಿ ಚುನಾವಣೆ ಸಂಧರ್ಭದಲ್ಲಿ ತೈಲ ಬೆಲೆ ಏರಿಕೆ ಮಾಡದೇ ಚುನಾವಣೆ ನಂತರ ಬೆಲೆ ಏರಿಕೆ ಮಾಡಿದ್ದಾರೆ, ಅಡುಗೆ ಅನಿಲ 1000 ಹಾಗೂ ವಾಣಿಜ್ಯ ಅಡುಗೆ ಅನಿಲ ಬೆಲೆ 3000 ಆಗಿದ್ದು ಹೆಚ್ಚಳ ಹಿನ್ನೆಲೆ ನಗರದಲ್ಲಿ ಹಲವು ಹೊಟೇಲ್‍ಗಳು ಬಂದ್ ಆಗಿದೆ, 40 ರೂಪಾಯಿ ಇದ್ದ ದೋಸೆ 80 ಆಗಿದೆ, 50 ಇದ್ದ ಊಟಕ್ಕೆ 100 ರೂಪಾಯಿ ಆಗಿದೆ, ಈ ರೀತಿ…
ಮೂರ್ನಾಡು ಜೂ.14 NEWS DESK : ಮೂರ್ನಾಡು ಪ್ರೌಢಶಾಲೆಯ 1993-1995ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ಪ್ರಕೃತಿರಶ್ಮಿ ವಿದ್ಯಾರ್ಥಿ ಬಳಗದ ವತಿಯಿಂದ ಮೂರ್ನಾಡು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣಾಕಾರ್ಯಕ್ರಮ ನಡೆಯಿತು. ಮೂರ್ನಾಡು ವಿದ್ಯಾಸಂಸ್ಥೆಯಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್.ಡಿ. ಪ್ರಶಾಂತ್‍ಅವರು ಮಾತನಾಡಿ ಸಮಾನ ಮನಸ್ಕ ವ್ಯಕ್ತಿಗಳಿಂದ ರೂಪುಗೊಳ್ಳುವ ಸಂಘಟನೆಗಳು ಸದೃಢತೆಯಿಂದಕೂಡಿರುತ್ತದೆ. ಇಲ್ಲಿಜಾತಿ, ಧರ್ಮ, ಬಡವ, ಬಲ್ಲಿದ ಅನ್ನೋತಾರತಮ್ಯ ಇರುವುದಿಲ್ಲ. ಸಂಘಟನೆಗಳು ಸೇವಾ ಮನೋಭಾವನೆಯಿಂದ ಸಮಾಜಕ್ಕೆ ಸದುಪಯೋಗವಾಗುವಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಆಗ ಸಮಾಜದಲ್ಲಿ ಉತ್ತಮ ಸಂಘಟನೆಯಿದು ಎಂದು ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ. ಸಂಘದಲ್ಲಿ ಕ್ರೂಢೀಕರಣವಾಗುವ ಹಣದಲ್ಲಿ ಶೇ.30 ರಷ್ಟು ಸೇವೆಗೆ ವಿನಿಯೋಗಿಸಿದಷ್ಟರೆ ಸಾಕು. ಉಳಿದ ಹಣದಲ್ಲಿ ಸದಸ್ಯರ ಕ್ಷೇಮಾಭಿವೃದ್ದಿ ಹಾಗೂ ಮನರಂಜನೆಯ ನಿಮಿತ್ತ ಮೀಸಲಿಡಬಹುದು. ವಿದ್ಯಾರ್ಥಿಗಳ ವಿದ್ಯಾಭ್ಯಾಸವಧಿಯಲ್ಲಿ ಹಲವಾರು ತಪ್ಪುಗಳು ಘಟಿಸುತ್ತದೆ. ಆದರೆ ಅವುಗಳನ್ನು ತಿದ್ದಿಕೊಳ್ಳುವುದರ ಮೂಲಕ ಯಶಸ್ಸನ್ನು ಕಾಣಬೇಕು ಮತ್ತು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬೇಕು ಎಂದು…






