ಸುಂಟಿಕೊಪ್ಪ ಮಾ.25 NEWS DESK : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀ ಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಶನಿವಾರ ಮುಂಜಾನೆ ಧ್ವಜಾರೋಹಣದೊಂದಿಗೆ ಆರಂಭಗೊಂಡ ತೆರೆ ಮಹೋತ್ಸವವು ಸೋಮವಾರ ಮಧ್ಯಾಹ್ನದ ವರೆಗೂ ವಿವಿಧ ಕೋಲಗಳು ಸೇರಿದಂತೆ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯಿತು. ಗಣಪತಿ ಹವನ, ಶುದ್ಧಿ ಪುಣ್ಯಾಹ, ಶ್ರೀಮುತ್ತಪ್ಪ ವೆಳ್ಳಾಟಂ, ಶ್ರೀಶಾಸ್ತಪ್ಪನ ವೆಳ್ಳಾಟಂ, ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ರಕ್ತ ಚಾಮುಂಡಿ ವೆಳ್ಳಾಟಂ, ವಿಷ್ಣುಮೂರ್ತಿ ವೆಳ್ಳಾಟಂ, ಕಳಿಗ ಪಾಟ್ ಅಂದಿವೇಳ ಕಳಸಂ, ಕಳಿಗ ಪಾಟ್ ಅಂದಿವೇಳ ಕಳಸಂ ಸ್ವೀಕರಿಸುವುದು, ವೆಳ್ಳಕಟ್ಟ್, ಗುಳಿಗನ ಕೋಲ, ಶಾಸ್ತಪ್ಪನ ಕೋಲ, ಶ್ರೀಮುತ್ತಪ್ಪ ಮತ್ತು ಶ್ರೀ ತಿರುವಪ್ಪನ ಕೋಲ, ಶ್ರೀ ರಕ್ತ ಚಾಮುಂಡಿಕೋಲ, ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪ ದೇವರ ಪಳ್ಳಿವೇಟ, ಶ್ರೀ ವಿಷ್ಣುಮೂರ್ತಿಕೋಲ, ಶ್ರೀ ಚಾಮುಂಡೇಶ್ವರಿ ಕೋಲ, ವಸೂರಿ ಮಾಲೆ ಕೋಲ ನಡೆಯಿತು. ನಂತರ ಗುರುಶ್ರೀ ದರ್ಪಣ, ಬಾವುಟವನ್ನು ಇಳಿಸುವುದರೊಂದಿಗೆ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ…
ಲೇಖಕ: admin
ನಾಪೋಕ್ಲು ಮಾ.25 NEWS DESK : ವೆಸ್ಟ್ ಕೊಳಕೇರಿ ಗ್ರಾಮದ ಶ್ರೀ ಭಗವತಿ ದೇವರ ವಾರ್ಷಿಕ ಉತ್ಸವವು ಸಾಂಪ್ರದಾಯಿಕವಾಗಿ ನಡೆಯಿತು. ಉತ್ಸವದ ಅಂಗವಾಗಿ ದೇವತಕ್ಕರಾದ ಕಾಂಡಂಡ ಮನೆಯಿಂದ ದೇವರ ಭಂಡಾರವನ್ನು ದೇವಾಲಯಕ್ಕೆ ತರಲಾಯಿತು. ಭಾನುವಾರ ಪಟ್ಟಣಿ ಹಬ್ಬದ ಅಂಗವಾಗಿ ವಿಶೇಷ ಪೂಜಾ ಕಾರ್ಯಗಳು ಜರುಗಿದವು. ಬೆಳಿಗ್ಗೆ ದೇವರ ದರ್ಶನ, ಬಳಿಕ ಎತ್ತುಪೋರಾಟ ವಿಶೇಷ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಜರುಗಿತು. ಮಧ್ಯಾಹ್ನದ ಬಳಿಕ ಗ್ರಾಮಸ್ಥರಿಂದ ಬೊಳಕಾಟ್ ಪ್ರದರ್ಶನ ದೇವರ ಪ್ರದರ್ಶನ ನೃತ್ಯ ಮಹೋತ್ಸವವನ್ನು ಬಳಿಕ ನೆರೆದಿದ್ದ ಭಕ್ತರಿಗೆ ಲಘು ಉಪಹಾರ ಸಂತರ್ಪಣೆ ನಡೆಯಿತು. ಸೋಮವಾರ ಆಟ್, ಪಾಟ್ ತೆಂಗಿನಕಾಯಿಗೆ ಗುಂಡು ಹೊಡೆಯುವುದು, ದೇವರ ಅವಭೃತ ಸ್ನಾನ, ಪ್ರದರ್ಶನ ನೃತ್ಯ ಜರುಗಿತು. ಶುದ್ಧ ಕಲಶ ಹಾಗೂ ಬೇಟೆಗಾರ ದೇವರ ಉತ್ಸವ ಜರುಗಲಿದೆ. ದೇವರ ಪೂಜಾ ವಿಧಿ ವಿಧಾನವನ್ನು ದೇವಾಲಯದ ಮುಖ್ಯ ಅರ್ಚಕ ಸೀತಾರಾಮ್ ಭಟ್, ತಂತ್ರಿಗಳಾಗಿ ಜಗದೀಶ್, ರಾಘವೇಂದ್ರ ಭಟ್ ಹಾಗೂ ಸತ್ಯಮೂರ್ತಿ ಸರಳಾಯ ನೆರವೇರಿಸಿ ಕೊಟ್ಟರು. ಉತ್ಸವದಲ್ಲಿ ದೇವಾಲಯದ ಆಡಳಿತ ಮಂಡಳಿ…
ಕುಶಾಲನಗರ ಮಾ.25 NEWS DESK : ಮಾದಕವಸ್ತುಗಳು ಯುವಜನರಿಗೆ ಮಾರಕವಾಗಿ ಪರಿಣಮಿಸಿದ್ದು, ದುಶ್ಚಟದಿಂದ ದೂರವಾದರೆ ಮಾತ್ರ ಸದೃಢ ಸಮಾಜ ನಿರ್ಮಿಸಲು ಸಾಧ್ಯ ಎಂದು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ( ಎ.ಎಸ್.ಐ.) ಎನ್.ಕುಮಾರಿ ಹೇಳಿದರು. ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್ ) ಯ ವತಿಯಿಂದ ತಾಲ್ಲೂಕಿನ ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 2024-25 ನೇ ಸಾಲಿನ ಎನ್‍ಎಸ್‍ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಕಾನೂನು ಅರಿವು ಕುರಿತು ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ನೀಡಿದರು. ಮಾದಕವಸ್ತುಗಳ ಬಳಕೆಯಿಂದ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮಗಳಾಗುತ್ತವೆ . ಈ ಬಗ್ಗೆ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಸಮಾಜದ ಸ್ವಾಸ್ಥ್ಯ ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿರುತ್ತದೆ. ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಲು…
ವಿರಾಜಪೇಟೆ ಮಾ.25 NEWS DESK : ಕೆದಮುಳ್ಳೂರು ಗ್ರಾಮದ ಶ್ರೀ ಭಗವತಿ (ಪೊವದಿ) ದೇವಿಯ ಹದಿನಾಲ್ಕನೇ ವಾರ್ಷಿಕ ಉತ್ಸವವು ಮಾ.26 ರಂದು ನಡೆಯಲಿದೆ. ಕೇರಳದ ಬೈತೂರಿನ ತಂತ್ರಿಗಳಾದ ಶ್ರೀ ರಾಜನ್ ನಂಬೂದರಿಪಾಡ್ ಉತ್ಸವದ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಿದ್ದಾರೆ. ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, 9 ಗಂಟೆಗೆ ದುರ್ಗಾ ಪೂಜೆ, 10 ಗಂಟೆಗೆ ಕಲಶ ಪೂಜೆ, 11 ಗಂಟೆಗೆ ಕಲಾಶಾಭಿಶೇಕ, 12 ಗಂಟೆಗೆ ಮಹಾಪೂಜೆ, ಅಪರಾಹ್ನ 3 ಗಂಟೆಗೆ ಬೆಲಿಕಲ್ಲು ಪೂಜೆ-ದೇವರ ನೃತ್ಯಬಲಿ ನಡೆಯಲಿದೆ. ಇದೇ ಸಂದರ್ಭ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.
ಮಡಿಕೇರಿ ಮಾ.25 NEWS DESK : ವಿದ್ಯಾರ್ಥಿಗಳಲ್ಲಿ ಕ್ರೀಡಾ ಕೌಶಲ್ಯವನ್ನು ಹೆಚ್ಚಿಸುತ್ತಾ, ಸದಾ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುತ್ತಿರುವ ಅಂತರರಾಷ್ಟ್ರೀಯ ಮಾಜಿ ರಗ್ಬಿ ಆಟಗಾರ ಹಾಗೂ ಪ್ರಗತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮಾದಂಡ ತಿಮ್ಮಯ್ಯ ಅವರ ಸಾರಥ್ಯದಲ್ಲಿ ನಡೆಯುತ್ತಿರುವ ವಿರಾಜಪೇಟೆ ಪ್ರಗತಿ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಏ.1 ರಿಂದ 30ರವರೆಗೆ ಕ್ರಿಕೆಟ್ ಮತ್ತು ಶಟಲ್ ಬ್ಯಾಡ್ಮಿಂಟನ್ ಬೇಸಿಗೆ ಶಿಬಿರ ನಡೆಯಲಿದೆ. ಏ.1 ರಿಂದ ಮೇ 1 ರವರೆಗೆ ವಿರಾಜಪೇಟೆ ಪ್ರಗತಿ ಶಾಲೆಯಲ್ಲಿ ಲೆದರ್ ಬಾಲ್ ಕ್ರಿಕೆಟ್ ತರಬೇತಿ ನಡೆಯಲಿದೆ. ಮೊದಲ ತಂಡಕ್ಕೆ ಬೆಳಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ (ಫುಲ್ ಡೇ ಬ್ಯಾಚ್), ಎರಡನೇ ಬ್ಯಾಚ್ ಸಂಜೆ ನಾಲ್ಕು ಗಂಟೆಯಿಂದ ಆರು ಗಂಟೆಯವರೆಗೆ ನಡೆಯಲಿದೆ. ಪ್ರಗತಿ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಲೆದರ್ ಬಾಲ್ ಕ್ರಿಕೆಟ್ ತರಬೇತಿ ಪಡೆದಿದ್ದ ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಲಾಗಿದ್ದ ಅಂಡರ್ 14 ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ…
ಮಡಿಕೇರಿ ಮಾ.25 NEWS DESK : ಕೊಡವ ಹಾಕಿ ಹಬ್ಬದ ಜನಕರಾದ ಕರಡ ಗ್ರಾಮದ ಪಾಂಡಂಡ ಕುಟುಂಬದ ಐನ್ ಮನೆಯಲ್ಲಿ ‘ಮುದ್ದಂಡ ಕಪ್ ಹಾಕಿ ಉತ್ಸವ’ದ ಕ್ರೀಡಾಜ್ಯೋತಿ ಉದ್ಘಾಟಿಸಲಾಯಿತು. ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿ ಮತ್ತು ಕೊಡವ ಹಾಕಿ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಕೊಡವ ಹಾಕಿ ಹಬ್ಬದ ಜನಕ ದಿ.ಪಾಂಡಂಡ ಕುಟ್ಟಪ್ಪ ಅವರ ಪತ್ನಿ ಲೀಲ ಕುಟ್ಟಪ್ಪ ಕ್ರೀಡಾಜ್ಯೋತಿಯನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಪ್ರತಿಷ್ಠಿತ ಮುದ್ದಂಡ ಹಾಕಿ ಉತ್ಸವ-2025 ತನ್ನ ಬೆಳ್ಳಿ ಮಹೋತ್ಸವ ಆಚರಣೆ ಸಂದರ್ಭದಲ್ಲಿ ಉದ್ಘಾಟನೆಯ ಸೌಭಾಗ್ಯ ತನಗೆ ಒದಗಿರುವುದು ಅತ್ಯಂತ ಸಂತಸ ತಂದಿದೆ ಎಂದು ಹೇಳಿದರು. ಕೊಡಗಿನ ಜನತೆಯ ಪ್ರಮುಖ ಕಾರ್ಯಚಟುವಟಿಕೆಗಳಲ್ಲಿ ಕ್ರೀಡೆಯೂ ಒಂದಾಗಿದೆ. ಇಂತಹ ಕ್ರೀಡಾಕೂಟದಲ್ಲಿ ಒಂದು ವಿಭಿನ್ನ ರೀತಿಯ ಪ್ರಯೋಗವನ್ನು ಮಾಡುತ್ತಿರುವ ಮುದ್ದಂಡ ಹಾಕಿ ಉತ್ಸವದ ಆಯೋಜಕರ ಪ್ರಯತ್ನಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಹಾಕಿ ಉತ್ಸವ…
ಮಡಿಕೇರಿ ಮಾ.25 NEWS DESK : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಮಾರ್ಚ್, 27 ರಂದು ಸ್ವಚ್ಛತಾ ಕಾರ್ಯದ ಪ್ರಯುಕ್ತ ಮಧ್ಯಾಹ್ನ 2 ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.
ಮಡಿಕೇರಿ ಮಾ.25 NEWS DESK : ಮಡಿಕೇರಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕ ಎಂ.ಎಂ.ಮೆಹಬೂಬ್ ಅಲಿ ತಿಳಿಸಿದ್ದಾರೆ. ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯರಾತ್ರಿ 2.30 ಗಂಟೆಗೆ ಹೊರಟು ಮಡಿಕೇರಿಗೆ ಬೆಳಗ್ಗೆ 7.30 ಗಂಟೆಗೆ ತಲುಪಲಿದೆ. ನಂತರ ಬೆಳಗ್ಗೆ 11.30 ಗಂಟೆಗೆ ಮಡಿಕೇರಿಯಿಂದ ಹೊರಟು ಸಂಜೆ 6 ಗಂಟೆಗೆ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದೆ. ಕೆಎಸ್‍ಆರ್‍ಟಿಸಿ ಬೆಂಗಳೂರು ಕೇಂದ್ರ ವಿಭಾಗದ ನಾಲ್ಕನೇ ಘಟಕದಿಂದ ಪ್ಲೈ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮೆಹಬೂಬ್ ಅಲಿ ತಿಳಿಸಿದ್ದಾರೆ.
ಮಡಿಕೇರಿ ಮಾ.25 NEWS DESK : ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಮಿತಿ ನೂತನ ಸದಸ್ಯರಾದ ಜೆ.ಎಲ್.ಜನಾರ್ಧನ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ವಾಸಿಸುವ ಪ್ರದೇಶದಲ್ಲಿ ಅಗತ್ಯ ಮೂಲಸೌಲಭ್ಯ ಕಲ್ಪಿಸುವಂತಾಗಬೇಕು. ಪಡಿತರ ಚೀಟಿಯನ್ನು ಆದ್ಯತೆ ಮೇಲೆ ವಿತರಿಸುವಂತಾಗಬೇಕು ಎಂದು ಕೋರಿದರು. ಪರಿಶಿಷ್ಟರ ಕಾಲೋನಿಗಳಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್, ವಸತಿ ಸೌಲಭ್ಯ ಹೀಗೆ ಹಲವು ಮೂಲ ಸೌಲಭ್ಯ ಒದಗಿಸಬೇಕು. ಜೊತೆಗೆ ಹಕ್ಕುಪತ್ರವನ್ನು ವಿತರಿಸುವಂತಾಗಬೇಕು ಎಂದು ಮನವಿ ಮಾಡಿದರು. ಮತ್ತೊಬ್ಬ ಸದಸ್ಯರಾದ ಜಾಯ್ಸ್ ಮೆನೇಜಸ್ ಅವರು ಮಾತನಾಡಿ ಮಹಿಳಾ ಎಸ್‍ಸಿಎಸ್‍ಟಿ ಗುಂಪುಗಳನ್ನು ಆರ್ಥಿಕವಾಗಿ ಬಲಪಡಿಸಲು ಮುಂದಾಗಬೇಕು. ಬಾಳೆಗುಂಡಿ, ಬಜೆಗುಂಡಿ, ವಾಲ್ನೂರು ಮತ್ತಿತರ ಕಾಲೋನಿಗಳಲ್ಲಿ ವಾಸಿಸುವ ಪರಿಶಿಷ್ಟ ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿ ನೀಡುವಂತಾಗಬೇಕು ಎಂದು ಕೋರಿದರು. ಈ ಸಂದರ್ಭ ಮಾತನಾಡಿದ…
ಮಡಿಕೇರಿ NEWS DESK ಮಾ.24 : ಮುಂದಿನ ದಿನಗಳಲ್ಲಿ ಒಂದೇ ವೇದಿಕೆಯಡಿಯಲ್ಲಿ ಭೂ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳ ಅಧಿಕಾರಿಗಳನ್ನು ಒಳಗೊಂಡ 3 ಸೇನೆಗಳಿಗೆ ಸಂಬಂಧಿಸಿದ ನಿವೃತ್ತ ಯೋಧರ ಕುಂದು ಕೊರತೆಗಳನ್ನು ಆಲಿಸಲು ಶಿಬಿರ ನಡೆಸಲಾಗುತ್ತದೆ ಎಂದು ಭಾರತೀಯ ಭೂ ಸೇನಾ ದಕ್ಷಿಣ ವಲಯದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಧೀರಜ್ ಸೇತ್ ಪಿವಿಎಸ್‌ಎಂ, ಎವಿಎಸ್‌ಎಂ ಭರವಸೆ ನೀಡಿದ್ದಾರೆ. ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ನಡೆದ ನಿವೃತ್ತ ಸೈನಿಕರ ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸುವ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಕುರಿತು ಸೇನೆಗಳ ಕಮಾಂಡರ್ ಮಟ್ಟದಲ್ಲಿ ನಡೆಯುವ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಯೋಜನೆ ರೂಪಿಸಲಾಗುತ್ತದೆ, ಅದು ನಮ್ಮ ಗುರಿಯೂ ಆಗಿದೆ ಎಂದರು. ಕೊಡಗು ಕೇವಲ ಭೌಗೋಳಿಕ ಭೂಮಿಯಲ್ಲ. ಇಲ್ಲಿನ ಪೂರ್ವಿಕರ ವೀರ ಶೌರ್ಯ ಪರಂಪರೆಯಿಂದ ಜನ್ಮ ಪಡೆದ ನಾಡು ಎಂದು ಬಣ್ಣಿಸಿದರು. ದೇಶದ ಬರ‍್ಯಾವ ಪ್ರದೇಶಗಳು ನೀಡದಂತಹ ಕೊಡುಗೆಯನ್ನು ಕೊಡಗು ಜಿಲ್ಲೆ ಭಾರತೀಯ ಸೇನೆಗೆ ನೀಡಿದೆ. ಫೀಲ್ಡ್ ಮಾರ್ಷಲ್ ಕಾರ್ಯಪ್ಪ,…






