ಮಡಿಕೇರಿ ಏ.22 NEWS DESK : ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಸುತ್ತಮುತ್ತ ತೆಂಗಿನ ಚಿಪ್ಪು, ಟೈರು, ಹೂಕುಂದಗಳಲ್ಲಿ ನೀರು ನಿಲ್ಲದಂತೆ ಗಮನಹರಿಸಬೇಕು. ಪರಿಸರ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ `ಜಿಲ್ಲಾ ಆರೋಗ್ಯ ಅಭಿಯಾನ’ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಯ ಸುತ್ತಮುತ್ತ ಪರಿಸರ ಶುಚಿತ್ವವಾಗಿದ್ದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಸೊಳ್ಳೆಗಳು ಹರಡದಂತೆ ಗಮನಹರಿಸುವುದು ಅತ್ಯಗತ್ಯವಾಗಿದೆ. ನಿಂತ ನೀರಿನಿಂದ ಲಾರ್ವ ಕಂಡುಬಂದಲ್ಲಿ ಅದನ್ನು ನಾಶ ಪಡಿಸುವಂತಾಗಬೇಕು. ಆ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಅಗತ್ಯ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು. ಶಿಶು ಮತ್ತು ತಾಯಂದಿರ ಆರೋಗ್ಯ ಕ್ಷೇಮ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಶಿಶು ಆರೋಗ್ಯ…
ಲೇಖಕ: admin
ಮಡಿಕೇರಿ ಏ.22 NEWS DESK : ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರನ್ನು 2023ನೇ ಸಾಲಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ”ಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಪ್ರಶಸ್ತಿಯನ್ನು ಸನ್ಮಾನ್ಯ ಮುಖ್ಯ ಮಂತ್ರಿಗಳು ವಿಧಾನಸೌಧದ ಬ್ಯಾಂಕ್ಟೆಟ್ ಹಾಲ್ ನಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಅನಿತಾ ಭಾಸ್ಕರ್ ಅವರು ಪ್ರವಾಸೋದ್ಯಮ ಕೇಂದ್ರ ಕಚೇರಿಯಲ್ಲಿ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸಿದ ಅವಧಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಾದ “ಸ್ವದೇಶ್ ದರ್ಶನ, ಪ್ರಸಾದ್ ಹಾಗೂ “ಸ್ವದೇಶ್ ದರ್ಶನ 2.0 ಯೋಜನೆಗಳು ಕರ್ನಾಟಕಕ್ಕೆ ದೊರಕುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ. ಕರ್ನಾಟಕ ಕರಾವಳಿ ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗಾಗಿ `ಕೋಸ್ಟರ್ ಮಾಸ್ಟರ್ ಪ್ಲಾನ್’ ಅನುಮೋದನೆ ಹಾಗೂ ಪಡುಬಿದ್ರೆ ಸಮುದ್ರ ತೀರದಲ್ಲಿ (ಉಡುಪಿ ಜಿಲ್ಲೆ) “ಬ್ಲೂ ಪ್ಲಾಗ್ ಬೀಚ್” ಯೋಜನೆ ಅನುಷ್ಠಾನಗೊಳಿಸಿ ಅತ್ಯುತ್ತಮ ಬೀಚ್ ನ್ನು ಅಭಿವೃದ್ಧಿ ಪಡಿಸಿರುತ್ತಾರೆ. ಸೈಂಟ್ ಮೇರಿ ದ್ವೀಪವನ್ನು ಅಭಿವೃದ್ಧಿ, “ಮಲ್ಪೆ ಬೀಚ್ ಸೀ-ವಾಕ್” ಯೋಜನೆಯನ್ನು ಅನುಷ್ಠಾನಗೊಳಿಸುವುದರಲ್ಲಿ ಪ್ರಮುಖ ಪಾತ್ರಧಾರಿಗಳಾಗಿದ್ದಾರೆ. ಉಡುಪಿ ಜಿಲ್ಲೆಯ…
*ಮೈದಾನ 2* ತಾತಂಡ ಮತ್ತು ಪಾಂಡಿರ (ಹೆಬ್ಬೆಟ್ಟಗೇರಿ) ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಪಾಂಡಿರ ತಂಡ ಗೆಲುವು ಸಾಧಿಸಿತು. ಪಾಂಡಿರ ಪರ ಕವಿತಾ ಮಂಜು ಹ್ಯಾಟ್ರಿಕ್ ಗೋಲು ದಾಖಲಿಸಿ, ಗಮನ ಸೆಳೆದರು. ತಾತಂಡ ಅನೂರ ಸೋಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಾಂಡಂಡ ಮತ್ತು ಬೊವ್ವೇರಿಯಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕಾಂಡಂಡ ಜಯ ಸಾಧಿಸಿತು. ಕಾಂಡಂಡ ಪರ ಕೀರ್ತನ 1 ಗೋಲು ದಾಖಲಿಸಿದರು. ಬೊವ್ವೇರಿಯಂಡ ರಿಯಾ ಮುತ್ತಮ್ಮ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೆಪ್ಪುಡಿರ ಮತ್ತು ಪಳೆಯಂಡ ನಡುವಿನ ಪಂದ್ಯದಲ್ಲಿ 4-1 ಗೋಲುಗಳ ಅಂತರದಲ್ಲಿ ಚೆಪ್ಪುಡಿರ ಗೆಲುವು ದಾಖಲಿಸಿತು. ಚೆಪ್ಪುಡಿರ ಪರ ಸಿಂಚಲ್ ಎಲ್ಲಾ 4 ಗೋಲು ಬಾರಿಸಿ ಗಮನ ಸೆಳೆದರು. ಪಳೆಯಂಡ ರೇಖಾ 1 ಗೋಲು ದಾಖಲಿಸಿದರು. ಪಳೆಯಂಡ ರೇಖಾ ದೇಚಮ್ಮ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಾಳೇಟಿರ (ಕೆದಮುಳ್ಳೂರು) ಮತ್ತು ಅಮ್ಮಾಟಂಡ ನಡುವಿನ ಪಂದ್ಯದಲ್ಲಿ ವಾಕ್…
ಮಡಿಕೇರಿ NEWS DESK ಏ.21 : ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕ್ರೈಸ್ತರ ಸೇವಾ ಸಂಘ ತೀವ್ರ ಸಂತಾಪ ಸೂಚಿಸಿದೆ. ಶಾಂತಿಧೂತ, ಜಗದ್ಗುರು ಪೋಪ್ ಅವರ ನಿಧನ ಕ್ರೈಸ್ತ ಜನಾಂಗಕ್ಕೆ ಅಪಾರ ದು:ಖವನ್ನುಂಟುಮಾಡಿದೆ. ಕೊಡಗಿನ ಜನತೆಯ ಪರವಾಗಿ ಕ್ರೈಸ್ತರ ಸೇವಾ ಸಂಘ ಶ್ರದ್ಧಾಂಜಲಿ ಸಮರ್ಪಿಸುತ್ತದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯು ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.
ಮಡಿಕೇರಿ ಏ.21 NEWS DESK : ಬೆಳ್ಳಿಹಬ್ಬದ ಸಂಭ್ರಮದೊಂದಿಗೆ ನಡೆಯುತ್ತಿರುವ ಕೊಡವ ಕೌಟುಂಬಿಕ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಇದೇ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನದ ವಿಡಿಯೋ ರೆಫರಲ್ ಅನ್ನು ಪರಿಚಯಿಸಲಾಗುತ್ತಿದ್ದು, ಬೃಹತ್ ಪರದೆಗಳನ್ನು ಅಳವಡಿಸಲಾಗುವುದು ಎಂದು ಮುದ್ದಂಡ ಹಾಕಿ ಉತ್ಸವದ ಪ್ರಮುಖರು ತಿಳಿಸಿದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುದ್ದಂಡ ಹಾಕಿ ಉತ್ಸವದ ಕ್ರೀಡಾ ಪ್ರವರ್ತಕ ಅಜ್ಜೆಟ್ಟಿರ ವಿಕ್ರಮ್ ಉತ್ತಪ್ಪ ಹಾಗೂ ಲೈವ್ ಸ್ಟ್ರೀಮಿಂಗ್ ಮತ್ತು ರೆಫರಲ್ ಸಲಹೆಗಾರ ಐಚೆಟ್ಟಿರ ತನೀಶ್ ಅಯ್ಯಣ್ಣ, ಮುದ್ದಂಡ ಕುಟುಂಬಸ್ಥರು ಹಾಗೂ ಕೊಡವ ಹಾಕಿ ಅಕಾಡೆಮಿಯ ಸಹಯೋಗದಲ್ಲಿ ಇದೇ ಪ್ರಥಮ ಬಾರಿಗೆ ವಿನೂತನ ಪ್ರಯತ್ನ ಮಾಡಲಾಗಿದ್ದು, ಪಂದ್ಯಾವಳಿಯ ಕ್ವಾಟರ್ ಫೆನಾಲೆಯ ದಿನದಿಂದ ವಿಡಿಯೋ ರೆಫರಲ್ ಗಳನ್ನು ಪರಿಚಯಿಸಲಾಗುತ್ತಿದ್ದು, ಅದಕ್ಕಾಗಿ ಬೃಹತ್ ಗಾತ್ರದ 5 ಎಲ್‍ಇಡಿ ಪರದೆಯನ್ನು ಅಳವಡಿಸಲಾಗುವುದು ಎಂದರು. ಕ್ವಾಟರ್ ಫೆನಾಲೆಯಂದು 8 ತಂಡಗಳ ನಡುವೆ 4 ಪಂದ್ಯಗಳು ನಡೆಯಲಿದ್ದು, 1 ತಂಡಕ್ಕೆ 2 ರೆಫರೆಲ್ ಇರಲಿದೆ.…
*ಮೈದಾನ 1* ಮಡಿಕೇರಿ ಏ.21 : ನಾಳಿಯಂಡ ಮತ್ತು ಕೊಂಗೇಟಿರ ತಂಡಗಳ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ನಿಗಧಿತ ಅವಧಿಯಲ್ಲಿ ಶೂನ್ಯ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಟೈ ಬ್ರೇಕರ್ ನಲ್ಲಿ 4-3 ಗೋಲುಗಳ ಅಂತರದಲ್ಲಿ ನಾಳಿಯಂಡ ತಂಡ ಗೆಲುವು ಸಾಧಿಸಿತು. ಕೊಂಗೇಟಿರ ರೋಹನ್ ತಿಮ್ಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೋಟೇರ ಮತ್ತು ಪುದಿಯೊಕ್ಕಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಪುದಿಯೊಕ್ಕಡ ತಂಡ ಜಯ ಸಾಧಿಸಿತು. ಪುದಿಯೊಕ್ಕಡ ಪರ ಪ್ರಧಾನ್ ಸೋಮಣ್ಣ ಹಾಗೂ ಮಿಥನ್ ಪೊನ್ನಪ್ಪ ತಲಾ ಒಂದು ಗೋಲು ದಾಖಲಿಸಿದರು. ಕೋಟೇರ ಪರ ಲೋಕೇಶ್ ಒಂದು ಗೋಲು ಬಾರಿಸಿದರು. ಕೋಟೇರ ಕೌಶಿಕ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೆಪ್ಪುಡಿರ ಮತ್ತು ಅಟ್ರಂಗಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಚೆಪ್ಪುಡಿರ ತಂಡ ಗೆಲುವು ದಾಖಲಿಸಿತು. ಚೆಪ್ಪುಡಿರ ಪರ ಚೇತನ್ ಚಿಣ್ಣಪ್ಪ 2, ನರೇನ್ ಕಾರ್ಯಪ್ಪ, ಗಗನ್ ತಿಮ್ಮಯ್ಯ ಹಾಗೂ ಸಿ.ಕೆ.ಸೋಮಣ್ಣ ತಲಾ ಒಂದು…
ಮಡಿಕೇರಿ ಏ.21 NEWS DESK : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯ ಪೈಪೋಟಿ ಆರಂಭಗೊಂಡಿದೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಮಹಿಳೆಯರ 5ಎ ಸೈಡ್ ಹಾಕಿ ಪಂದ್ಯಾವಳಿಗೆ ಅರ್ಜುನ ಪ್ರಶಸ್ತಿ ವಿಜೇತ, ಮಾಜಿ ಒಲಂಪಿಯನ್ ಎಂ.ಎಂ.ಸೋಮಯ್ಯ ಅವರು ಚಾಲನೆ ನೀಡಿದರು. ಪದ್ಮಶ್ರೀ ಪ್ರಶಸ್ತಿ ವಿಜೇತ ಹಿರಿಯ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಹಾಗೂ ರಾಷ್ಟ್ರೀಯ ಬಾಸ್ಕೆಟ್‍ಬಾಲ್ ಆಟಗಾರ್ತಿ ಮಂಡೇಪಂಡ ಪುಷ್ಪ ಕುಟ್ಟಣ್ಣ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಐಮುಡಿಯಂಡ ರಾಣಿ ಮಾಚಯ್ಯ ಅವರು ಮಾತನಾಡಿ, ಜಿಲ್ಲೆಯಲ್ಲಿ ನಡೆಯುತ್ತಿರುವ ಈ ರೀತಿಯ ಕ್ರೀಡಾಕೂಟಗಳು ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಹಾಕಿ ಒಲಂಪಿಯನ್‍ಗಳನ್ನು ಕೊಡುಗೆಯಾಗಿ ನೀಡಿದ ಹೆಗ್ಗಳಿಕ್ಕೆ ಕೊಡಗಿಗೆ ಇದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳಾ ಕ್ರೀಡಾಪಟಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಲಿ ಎಂದು ಶುಭಹಾರೈಸಿದರು. ಮುದ್ದಂಡ ಕಪ್…
ಮಡಿಕೇರಿ ಏ.21 NEWS DESK : ಭಾರತೀಯ ಜನತಾ ಪಾರ್ಟಿಯ ಎಸ್.ಸಿ ಮೋರ್ಚಾದ ವತಿಯಿಂದ ಇತ್ತೀಚೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರಿಡಾಂಗಣದಲ್ಲಿ “ಸಾಮರಸ್ಯ ಸಂಗಮ” ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಲಾಗಿದ್ದ 4 ವಿಭಾಗಗಳ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳ ಹೆಸರುಗಳನ್ನು ಎಸ್.ಸಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ಪಿ.ಎಂ.ರವಿ ಪ್ರಕಟಿಸಿದ್ದಾರೆ. 5 ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಪ್ರಬಂಧ ಬರೆಯುವ ಸ್ಪರ್ಧೆಯಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯ ಭೂಮಿಕ ಪಿ.ಪಿ ಪ್ರಥಮ ಹಾಗೂ ಸುಂಟಿಕೊಪ್ಪದ ಸೈಂಟ್ ಮೇರಿ ಇಂಗ್ಲೀμï ಸ್ಕೂಲ್ ನ ಇಜ್ನಾ ಪೆಬಿನ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಕುರಿತು ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಧನುಶ್ರೀ ವಿ. ಪ್ರಥಮ ಹಾಗೂ ಮಡಿಕೇರಿಯ ಸಂತ ಮೈಕಲರ ಶಾಲೆಯ ಅಪೂರ್ವ ಕೆ. ದ್ವಿತೀಯ ಸ್ಥಾನ ಪಡೆದಿದ್ದಾರೆ. ಪಿಯುಸಿ…
ಮಡಿಕೇರಿ ಏ.21 NEWS DESK : ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ ಖಂಡನೀಯ ಮತ್ತು ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ಕೃತ್ಯವಾಗಿದೆ ಎಂದು ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್ ಮಠ ಮಂದಿರ ಪ್ರಮುಖ್ ಡಾ.ಮಹಾಬಲೇಶ್ವರ ಭಟ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸುವ ಮೂಲಕ ಇಡೀ ಬ್ರಾಹ್ಮಣ ಸಮಾಜಕ್ಕೆ ಅವಮಾನ ಮಾಡಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ರಾಜ್ಯ ಸರ್ಕಾರ ಜಾತ್ಯಾತೀತತೆಯ ಹೆಸರಿನಲ್ಲಿ ಬಹುಸಂಖ್ಯಾತ ಹಿಂದುಗಳ ಭಾವನೆ ಕೆರಳಿಸುವ ಕೆಲಸ ಮಾಡಿದೆ. ಬ್ರಾಹ್ಮಣರ ಮನೋಬಲ ಕುಗ್ಗಿಸುವ ಪ್ರಯತ್ನ ಇದರಲ್ಲಿ ಅಡಗಿದೆ ಎಂದು ಆರೋಪಿಸಿದ್ದಾರೆ. ಬ್ರಾಹ್ಮಣರಿಗೆ ಗುರುಗಳ ಮೂಲಕ ಜನಿವಾರವನ್ನು ಹಾಕಲಾಗುತ್ತದೆ, ಇದನ್ನು ದೇವರ ಆತ್ಮಸೂತ್ರ ಎಂಬ ಭಾವನೆಯಿಂದ ನೋಡಲಾಗುತ್ತದೆ. ಈ ಜನಿವಾರವನ್ನು ವ್ಯಕ್ತಿ ಸತ್ತಾಗ ಅಥವಾ ಸನ್ಯಾಸ ದೀಕ್ಷೆ ಪಡೆಯುವಾಗ ಮಾತ್ರ…
ಮಡಿಕೇರಿ ಏ.21 NEWS DESK : ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೂತನ ಕಟ್ಟಡ ಹಾಗೂ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸುಮಾರು 5 ಕೋಟಿ ವೆಚ್ಚದ ಹೆಚ್ಚುವರಿ ಕೊಠಡಿಯ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಕಾಲೇಜ್ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸುವುದು ತಮ್ಮ ಹಾಗೂ ಸರಕಾರದ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ನೂತನ ಕಟ್ಟಡ ಹಾಗೂ ಅದಕ್ಕೆ ಬೇಕಾದ ಹೆಚ್ಚುವರಿ ಕೊಠಡಿಗೆ ಅನುದಾನವನ್ನು ಒದಗಿಸಲು ತಾನು ಸಂತೋಷ ಪಡುವುದಾಗಿ ಹೇಳಿದರು. ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಗಮನ ನೀಡಿ, ತಮ್ಮ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಉತ್ತಮವಾಗಿ ವ್ಯಾಸಂಗ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಪುರಸಭೆ ಸದಸ್ಯರು…






